Astro Tips : ಯಾವ ದಿಕ್ಕಿಗೆ ತಲೆಹಾಕಿ ಮಲಗಿದರೆ ಒಳ್ಳೆಯದು? ವಾಸ್ತು ಶಾಸ್ತ್ರ ಹೇಳುವುದೇನು? - Vistara News

ಭವಿಷ್ಯ

Astro Tips : ಯಾವ ದಿಕ್ಕಿಗೆ ತಲೆಹಾಕಿ ಮಲಗಿದರೆ ಒಳ್ಳೆಯದು? ವಾಸ್ತು ಶಾಸ್ತ್ರ ಹೇಳುವುದೇನು?

Astro Tips : ನಿದ್ರಿಸುವ ದಿಕ್ಕು ಸರಿಯಾಗಿದ್ದರೆ ನಿದ್ರೆಯೂ ಚೆನ್ನಾಗಿ ಬರುತ್ತದೆ. ಶಾರೀರಿಕ ಮತ್ತು ಮಾನಸಿಕ ನೆಮ್ಮದಿಗೆ ಯಾವ ದಿಕ್ಕಿನಲ್ಲಿ ಮಲಗಿದರೆ ಅತ್ಯಂತ ಸೂಕ್ತ ಎಂಬುದನ್ನು ನೋಡೋಣ.

VISTARANEWS.COM


on

Astro Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಒಳ್ಳೆ ನಿದ್ರೆಗಿಂತ ಉತ್ತಮ ಔಷಧ ಇನ್ನೊಂದಿಲ್ಲ ಎಂಬ ಮಾತಿದೆ. ವ್ಯಕ್ತಿಯ ಮನಸ್ಸು ಮತ್ತು ದೇಹ ಹೊಸ ಚೈತನ್ಯವನ್ನು ಪಡೆಯಬೇಕೆಂದರೆ ಉತ್ತಮ ನಿದ್ರೆ ಅವಶ್ಯಕವಾಗಿರುತ್ತದೆ. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ ಮಲಗಿ ನಿದ್ರೆ ಮಾಡುವಾಗ ಇಂಥದ್ದೇ ದಿಕ್ಕಿಗೆ ತಲೆ ಇಟ್ಟು ನಿದ್ರಿಸಬೇಕೆಂಬ ನಿಯಮವಿದೆ. ಪ್ರತಿ ದಿಕ್ಕಿಕೂ ಅದರದ್ದೇ ಆದ ಫಲಗಳಿವೆ ಎಂದೂ ಹೇಳಲಾಗಿದೆ.

ಹಾಗಾಗಿ ಮಲಗುವಾಗ ದಿಕ್ಕಿನ ಬಗ್ಗೆ ಹೆಚ್ಚಿನ ಗಮನಹರಿಸಿದರೆ ಆರೋಗ್ಯ ಮತ್ತು ನೆಮ್ಮದಿಯ ದೃಷ್ಟಿಯಿಂದ ಉತ್ತಮ. ಅಷ್ಟೇ ಅಲ್ಲದೆ ನಿದ್ದೆಯಿಂದ ಮಾನಸಿಕ ಮತ್ತು ಶಾರೀರಿಕ ಒತ್ತಡ ಕಡಿಮೆಯಾಗುತ್ತದೆ. ಹಾಗಾಗಿ ಮಲಗುವ ರೀತಿ ಮತ್ತು ದಿಕ್ಕಿನ ಬಗ್ಗೆ ತಿಳಿಯೋಣ.

ನಮ್ಮ ಹಿರಿಯರು ಊಟ ಮಾಡಿದ ತಕ್ಷಣ ಮಲಗಬಾರದೆಂದು ಹೇಳುತ್ತಿದ್ದರು.
ಉಂಡು ನೂರಡಿ ಎಣಸಿ | ಕೆಂಡಕ್ಕೆ ಕೈ ಕಾಸಿ |
ಗಂಡು ಮೇಲಾಗಿ ಮಲಗಿದನು ವೈದ್ಯನಾ |
ಮಿಂಡ ಕಾಣಯ್ಯ ಸರ್ವಜ್ಞ ||

ಎಂಬ ಸರ್ವಜ್ಞನ ವಚನದಂತೆ ಊಟ ಮಾಡಿದ ನಂತರ ಮಲಗುವುದಕ್ಕೂ ಒಂದು ರೀತಿ ಇದೆ.
ಶ್ವಾಸಾನ್ ಅಷ್ಟೌ ಸಮುತ್ತಾನಃ ತಾನ್ ದ್ವಿಫ್ ಪಾರ್ಶ್ವೇತು ದಕ್ಷಿಣೆ |
ತಥಃ ತದ್ಯ ಗುಣಾನ್ ವಾಮೇ ಪಶ್ಚಾತ್ ಸ್ವಪ್ಯ ತಥಾ ಸುಖಮ್ ||

ಮಲಗುವ ಸಂದರ್ಭದಲ್ಲಿ ಮೊದಲು ಅಂಗಾತ ಮಲಗಿ ಎಂಟು ಬಾರಿ ಉಸಿರಾಟವನ್ನು ಮಾಡಬೇಕು. ನಂತರ ಬಲ ಮಗ್ಗುಲಾಗಿ ಹದಿನಾರು ಬಾರಿ ಉಸಿರಾಟ ಮಾಡಬೇಕು. ಕೊನೆಗೆ ಎಡ ಮಗ್ಗುಲಾಗಿ ಮಲಗಿ ಮೂವತ್ತೆರಡು ಬಾರಿ ಉಸಿರಾಟ ಮಾಡಿ, ಮಲಗಿದರೆ ಉತ್ತಮ ನಿದ್ರೆ ಬರುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಹಾಗಾಗಿ ಎಡ ಮಗ್ಗುಲಲ್ಲಿ ಮಗುವುದು ಉತ್ತಮವೆಂದು ಶಾಸ್ತ್ರ ಹೇಳುತ್ತದೆ. ಇದನ್ನೇ ಪಾಲಿಸಿದರೆ ವೈದ್ಯರ ಬಳಿ ಹೋಗುವ ಸಂಭವ ಕಡಿಮೆಯಾಗುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ.

ಹಾಗಾದರೆ ಆರೋಗ್ಯಯುತ ಮತ್ತು ನೆಮ್ಮದಿಯ ನಿದ್ರೆಗೆ ವಾಸ್ತು ಶಾಸ್ತ್ರದ ಪ್ರಕಾರ ಮಲಗಲು ಯಾವ ದಿಕ್ಕು ಶುಭ ಎಂದು ನೋಡೋಣ.

ವಿಷ್ಣು ಪುರಾಣದ ಪ್ರಕಾರ ದಕ್ಷಿಣ ಮತ್ತು ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗುವುದು ಶುಭ ಹಾಗು ಪಶ್ಚಿಮ ಮತ್ತು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗುವುದು ನಿಷಿದ್ಧವೆಂದು ಹೇಳಲಾಗಿದೆ. ಇದರಿಂದ ರೋಗಗಳು ಬಾಧಿಸುತ್ತವೆ.

ಪ್ರಾಕ್ಷರಶ್ಶಯನೇ ವಿದ್ಯಾತ್ ಧನಂ, ಆಯುಷ್ಚ ದಕ್ಷಿಣೆ |
ಪಶ್ಚಿಮೇ ಪ್ರಬಲ ಚಿಂತಾ, ಉತ್ತರೇ ಮೃತ್ಯುರತೋತ್ತರೇ||

ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಸಂಪತ್ತು ಬರುತ್ತದೆ. ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಆಯಸ್ಸು ವೃದ್ಧಿಸುತ್ತದೆ. ಹಾಗೇ ಪಶ್ಚಿಮಕ್ಕೆ ತಲೆ ಹಾಕಿ ಮಲಗಿದರೆ ಚಿಂತೆ, ಮನಸ್ಸು ದುರ್ಬಲವಾಗುತ್ತದೆ, ಉತ್ತರಕ್ಕೆ ತಲೆ ಹಾಕಿ ಮಲಗಿದರೆ ಮೃತ್ಯುವಿಗೆ ಹತ್ತಿರವಾಗುತ್ತಾ ಹೋದಂತೆ ಅಂದರೆ ಆಯಸ್ಸು ಹಾನಿಯಾಗುತ್ತದೆ.

ಸಂಪತ್ತಿಗೆ ಪೂರ್ವ ದಿಕ್ಕು

ವಾಸ್ತು ಶಾಸ್ತ್ರದಲ್ಲಿ ಪೂರ್ವದಿಕ್ಕಿಗೆ ವಿಶೇಷ ಮಹತ್ವವಿದೆ. ಸಂಪತ್ತು ಮತ್ತು ಧನಾಗಮನಕ್ಕೆ ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗುವುದು ಸೂಕ್ತವೆಂದು ಹೇಳಲಾಗುತ್ತದೆ. ಜೊತೆಗೆ ಪೂರ್ವ ದಿಕ್ಕಿಗೆ ತಲೆಹಾಕಿ ಮಲಗುವುದರಿಂದ ದೇವತೆಗಳ ಆಶೀರ್ವಾದ ಸಿಗುತ್ತದೆ. ಹಾಗೇಯೇ ಸೂರ್ಯನು ಉದಯಿಸುವ ದಿಕ್ಕಾಗಿರುವ ಕಾರಣ ಈ ದಿಕ್ಕಿನಲ್ಲಿ ಸಕಾರಾತ್ಮಕತೆ ಹೆಚ್ಚಿರುತ್ತದೆ. ನೆನಪಿನ ಶಕ್ತಿ ಹೆಚ್ಚುತ್ತದೆ ಮತ್ತು ದೇಹಕ್ಕೆ ಹೊಸ ಚೈತನ್ಯ ನೀಡುತ್ತದೆ.

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ಆಯುಷ್ಯ ವೃದ್ಧಿಗೆ ದಕ್ಷಿಣ ದಿಕ್ಕು

ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಲಗಲು ಅತ್ಯುತ್ತಮವಾದದ್ದು ದಕ್ಷಿಣ ದಿಕ್ಕು. ಈ ದಿಕ್ಕಿಗೆ ತಲೆ ಇಟ್ಟು ಮಲಗಿದರೆ. ಆಯುಷ್ಯ ವೃದ್ಧಿಸುವುದಲ್ಲದೇ, ಉತ್ತಮ ಆರೋಗ್ಯ ಲಭಿಸುತ್ತದೆ. ಮಾನಸಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ದಕ್ಷಿಣ ದಿಕ್ಕಿಗೆ ಮಲಗುವುದು ಉತ್ತಮವೆಂದು ಶಾಸ್ತ್ರಗಳಲ್ಲಿ ಉಲ್ಲೇಖಿಸಿದ್ದಾರೆ.

ಪಶ್ಚಿಮ ದಿಕ್ಕು ಒಳ್ಳೆಯದಲ್ಲ

ಪಶ್ಚಿಮ ದಿಕ್ಕಿಗೆ ತಲೆ ಹಾಕಿ ಮಲಗುವು ಒಳ್ಳೆಯದು ಎಂದು ಕೆಲವು ಕಡೆ ಹೇಳಿದರೆ ಮತ್ತೆ ಕೆಲವು ಕಡೆ ಪಶ್ಚಿಮಕ್ಕೆ ತಲೆ ಹಾಕಿ ಮಲಗುವುದರಿಂದ ಚಿಂತೆ ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ಮಾನಸಿಕ ಸ್ವಾಸ್ಥ್ಯ ಹದಗೆಡುತ್ತದೆ ಎಂದು ಸಹ ಹೇಳಲಾಗುತ್ತದೆ.

ಉತ್ತರ ದಿಕ್ಕು ಅಶುಭ

ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗುವುದು ಅಶುಭವೆಂದು ಹೇಳಲಾಗುತ್ತದೆ. ಉತ್ತರ ದಿಕ್ಕಿಗೆ ತಲೆಹಾಕಿ ಮಲಗಿದರೆ ಮೃತ್ಯುವಿಗೆ ಹತ್ತಿರವಾಗುತ್ತಾ ಹೋದಂತೆ ಎಂಬ ಮಾತಿದೆ. ಹಾಗಾಗಿ ಮಲಗಲು ಉತ್ತರ ದಿಕ್ಕು ಸಹ ಶುಭವಲ್ಲ. ಈ ದಿಕ್ಕಿನಲ್ಲಿ ಮಲಗುವುದರಿಂದ ಅನಾರೋಗ್ಯ ಹೆಚ್ಚುತ್ತದೆ. ಗಣಪತಿಯ ಮುಂಡ ಸೇರಿದ ಆನೆಯು ಉತ್ತರ ದಿಕ್ಕಿಗೇ ತಲೆ ಹಾಕಿ ಮಲಗಿತ್ತೆಂಬ ಪುರಾಣಕತೆಗಳಿಂದಾಗಿ ಈ ದಿಕ್ಕಿಗೆ ತಲೆ ಹಾಕಿ ಮಲಗುವುದು ಅಶುಭವೆಂದೇ ಹೇಳಲಾಗುತ್ತದೆ.

ಇದನ್ನೂ ಓದಿ : Astro Tips : ಎಂದು ಉಗುರು ಕತ್ತರಿಸಿದರೆ ಶುಭ? ಯಾವಾಗ ಕತ್ತರಿಸಿದರೆ ಧನ ಲಾಭ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dina Bhavishya: 12 ರಾಶಿಗಳ ಇಂದಿನ ಭವಿಷ್ಯ ಏನು? ಯಾರಿಗೆ ಪ್ಲಸ್‌? ಯಾರಿಗೆ ಮೈನಸ್!?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಅಮಾವಾಸ್ಯೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for May 09 2024
Koo

ಚಂದ್ರನು ಗುರುವಾರವೂ ಮಿಥುನ ರಾಶಿಯಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರಿಗೆ ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಉಂಟಾಗಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕನ್ಯಾ ರಾಶಿಯವರು ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆ ಆಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (09-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 06:20 / ಬಿದಿಗೆ 28:17 ವಾರ: ಗುರುವಾರ
ನಕ್ಷತ್ರ: ಕೃತ್ತಿಕಾ 11:54 ಯೋಗ: ಶೋಭನ 14:39
ಕರಣ: ಭವ 06:20 ಅಮೃತಕಾಲ: ಬೆಳಗ್ಗೆ 09:41 ರಿಂದ 11:11
ದಿನದ ವಿಶೇಷ: ಬಿದಿಗೆ ಚಂದ್ರದರ್ಶನ, ಬೌದ್ಧ ಹೊಸ ವರ್ಷ

ಸೂರ್ಯೋದಯ : 05:56   ಸೂರ್ಯಾಸ್ತ : 06:36

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ವಹಿಸಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಆರೋಗ್ಯ ಮಧ್ಯಮ ಪ್ರಮಾಣದಲ್ಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕೆಲಸ ಮಾಡಿದಲ್ಲಿ ಖಂಡಿತವಾಗಿಯೂ ಯಶಸ್ಸು ಮತ್ತು ಕೀರ್ತಿ ಸಿಗುತ್ತದೆ. ಹಿರಿಯರ ಬೆಂಬಲ, ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ, ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಉಂಟಾಗಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ನಿಮ್ಮ ಆಕರ್ಷಕ ವ್ಯಕ್ತಿತ್ವವು ಇತರರನ್ನು ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ ಲಭಿಸಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆ ಆಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ . ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ ಇರಲಿದೆ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ‌ ಕಾಣುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ – ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡಲಿದ್ದೀರಿ. ಈ ವೇಳೆ ನಿಮಗೆ ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನೂ ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭಫಲ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರಾಗಬಹುದು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಸನ್ನಿವೇಶದಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿಯಾಗಲಿದೆ. ಅಗತ್ಯ ವಸ್ತುಗಳ ಖರೀದಿ ಸಹಿತ ಖರ್ಚು ಹೆಚ್ಚಾಗಲಿದೆ. ಅಮೂಲ್ಯ ವಸ್ತುಗಳ ಕುರಿತು ಜಾಗ್ರತೆ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ನಿಮ್ಮದಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಷಭ ರಾಶಿಯಿಂದ ಬುಧವಾರ ರಾತ್ರಿ 07:20ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ,ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ.ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಕಟಕ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (08-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಅಮಾವಾಸ್ಯೆ 08:50 ವಾರ: ಬುಧವಾರ
ನಕ್ಷತ್ರ: ಭರಣಿ 13:32 ಯೋಗ: ಸೌಭಾಗ್ಯ 17:39
ಕರಣ: ನಾಗವಾನ್ 08:50 ಅಮೃತಕಾಲ: ಬೆಳಗ್ಗೆ 09:09 ರಿಂದ 10:37
ದಿನದ ವಿಶೇಷ: ಅಕ್ಷ ತದಿಗೆ, ಅಮಾವಾಸ್ಯೆ

ಸೂರ್ಯೋದಯ : 05:56   ಸೂರ್ಯಾಸ್ತ : 06:36

ರಾಹುಕಾಲ :ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ ಇದು ಮನೆಯ ವಾತಾವರಣ ಹಾಳುಗೆಡುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ವೃಷಭ: ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ.ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ.ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಅನಿವಾರ್ಯವಾಗಿ ಖರ್ಚು, ಪ್ರಯಾಣ ಮಾಡುವ ಸಾಧ್ಯತೆ ಇದೆ. ಕುಟುಂಬದಲ್ಲಿ ಯಾವುದೋ ವಿಷಯಕ್ಕೆ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿ. ಅರ್ಹ ನೌಕರರಿಗೆ ಇಂದು ಉದ್ಯೋಗದಲ್ಲಿ ಬಡ್ತಿ ಹೊಂದುವ ಅವಕಾಶ ಕೂಡಿಬರಲಿದೆ. ಆರೋಗ್ಯ ಉತ್ತಮವಾಗಿರಲಿದೆ, ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ. ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ,ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ.ಆರ್ಥಿಕವಾಗಿ ಲಾಭ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಇರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ದೈಹಿಕವಾಗಿ ಹಾಗೂ ಮಾನಸಿಕವಾಗಿ ಒತ್ತಡಕ್ಕೆ ಸಿಲುಕುವಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು.ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹೂಡಿಕೆ ಮಾಡುವಾಗ ಆಲೋಚಿಸಿ ಮುಂದುವರಿಯಿರಿ. ಹೊಸ ಸ್ನೇಹಿತರ ಪರಿಚಯದಿಂದ ಉದ್ಯೋಗದಲ್ಲಿ ಲಾಭವಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಅವಸರದಲ್ಲಿ ಯಾವ ಕೆಲಸವನ್ನು ಮಾಡಬೇಡಿ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಈ ದಿನ ಆರೋಗ್ಯ ಪರಿಪೂರ್ಣವಾಗಿರಲಿದೆ. ಗಾಡಿ ಓಡಿಸುವಾಗ ಎಚ್ಚರಿಕೆ ವಹಿಸಿ. ಮನೆಯಲ್ಲಿ ಶುಭ ಕಾರ್ಯಗಳು ನಡೆಯಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಮಾತೇ ಕಂಟಕ; ಕುಟುಂಬದಲ್ಲಿ ಕಲಹ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ವೃಷಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ಕಟಕ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (07-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಚತುರ್ದಶಿ 11:40 ವಾರ: ಮಂಗಳವಾರ
ನಕ್ಷತ್ರ: ಅಶ್ವಿನಿ 15:31 ಯೋಗ: ಆಯುಸ್ಮಾನ್ 20:57
ಕರಣ: ಶಕುನಿ 11:40 ಅಮೃತಕಾಲ: ಬೆಳಗ್ಗೆ 08:59 ರಿಂದ 10:27

ಸೂರ್ಯೋದಯ : 05:57   ಸೂರ್ಯಾಸ್ತ : 06:36

ರಾಹುಕಾಲ :ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರವಾಗಿ ಚಿಂತಿಸುವಿರಿ. ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ:ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ:ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ ಇದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳು ನಿಧಾನಗತಿಯಾಗಿರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ಮಾಡುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆ ಇರಲಿ, ಅಪಘಾತ ಸಂಭವ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಮೇಷ ರಾಶಿಯಿಂದ ಸೋಮವಾರ ಸಂಜೆ 05:42ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ವೃಷಭ ರಾಶಿಯವರು ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (06-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 14:39 ವಾರ: ಸೋಮವಾರ
ನಕ್ಷತ್ರ: ರೇವತಿ 17:42 ಯೋಗ: ಪ್ರೀತಿ 24:27
ಕರಣ: ವಣಿಜ 14:39 ಅಮೃತಕಾಲ: ಮಧ್ಯಾಹ್ನ 03:32 ರಿಂದ 04:59

ಸೂರ್ಯೋದಯ : 05:57   ಸೂರ್ಯಾಸ್ತ : 06:36

ರಾಹುಕಾಲ : ಬೆಳಗ್ಗೆ 07:32 ರಿಂದ 09:07
ಗುಳಿಕಕಾಲ: ಮಧ್ಯಾಹ್ನ 01:51
ರಿಂದ 03:26
ಯಮಗಂಡಕಾಲ: ಬೆಳಗ್ಗೆ 10:41 ರಿಂದ 12:16

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ:ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ:ಆರೋಗ್ಯ ಪರಿಪೂರ್ಣವಾಗಿರಲಿದೆ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರದಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ:ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸಲಿದ್ದಾರೆ. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ:ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ.ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ ಈ ಮೂಲಕ ಮನಸ್ಸಿನ ಒತ್ತಡ ಹೊರಹಾಕುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಇರಲಿದೆ. ಕಾರ್ಯದಲ್ಲಿ ನಿಧಾನಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕುತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ ಇರಲಿದೆ. ಹೊಸ ಸ್ನೇಹಿತರ ಪರಿಚಯ ಆಗಲಿದೆ.ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಭಾದ್ಯತೆ, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ ಇದೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆಯಿಂದ ತಂದುಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
SSLC Result 2024 SSLC 2nd and 3rd exam aspirants to have special classes
ಕರ್ನಾಟಕ9 mins ago

SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLc Exam 2 time table
ಶಿಕ್ಷಣ14 mins ago

SSLC 2 Exam Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಡೇಟ್‌ ಫಿಕ್ಸ್‌; ವೇಳಾಪಟ್ಟಿ ಹೀಗಿದೆ

Mahender Pratap Singh
ದೇಶ25 mins ago

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

No one has failed in SSLC says Education Department
ಕರ್ನಾಟಕ28 mins ago

SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

SSLC Result 2024 what is the reason for most of the students fail in SSLC
ಕರ್ನಾಟಕ50 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Aavesham Releases On OTT Fahadh Faasil Hit Malayalam Film
ಮಾಲಿವುಡ್59 mins ago

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Sslc exam Result 2024
ಶಿಕ್ಷಣ1 hour ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

Sunita Williams
ವಿದೇಶ1 hour ago

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Ananya Panday Aditya Roy Kapur parties with Sara Ali Khan
ಬಾಲಿವುಡ್1 hour ago

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ50 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 hour ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 hour ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು4 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌