Heart Attack: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಕುಸಿದು ಬಿದ್ದು ಶಿಕ್ಷಕ ಸಾವು - Vistara News

ಕರ್ನಾಟಕ

Heart Attack: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಕುಸಿದು ಬಿದ್ದು ಶಿಕ್ಷಕ ಸಾವು

Heart Attack: ಹರಿಹರ ತಾಲೂಕಿನ ಭಾನುವಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಾರ್ಥನೆ ಮುಗಿಸಿದ ನಂತರ ತರಗತಿಯಲ್ಲಿ ಶಿಕ್ಷಕನಿಗೆ ಹೃದಯಾಘಾತವಾಗಿದೆ.

VISTARANEWS.COM


on

Teacher Dies of Heart Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗ ಹೃದಯಾಘಾತವಾಗಿ ಶಿಕ್ಷಕ ಮೃತಪಟ್ಟಿರುವ ಘಟನೆ (Heart Attack) ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ನಡೆದಿದೆ. ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಪ್ರಾರ್ಥನೆ ಮುಗಿಸಿ ತರಗತಿ ಮಾಡುವಾಗ ಶಿಕ್ಷಕನಿಗೆ ಹೃದಯಾಘಾತವಾಗಿದೆ.

ಮೂಲತಃ ದಾವಣಗೆರೆ ತಾಲೂಕು ಮಹಾದೇವಿಪುರದ ನಿವಾಸಿ ಇಂಗ್ಲಿಷ್ ಶಿಕ್ಷಕ ವಿಜಯ್ ಕುಮಾರ್ (54) ಮೃತರು. ಶಾಲೆಯಲ್ಲಿ ತರಗತಿ ಮಾಡುತ್ತಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ಕೊನೆಯುಸಿರೆಳೆದಿದ್ದಾರೆ. ಶಿಕ್ಷಕ ವಿಜಯ್‌ ಕುಮಾರ್‌ಗೆ ಇಬ್ಬರು ಮಕ್ಕಳಿದ್ದಾರೆ.

ಶಿಕ್ಷಕನ ನಿಧನಕ್ಕೆ ಶಾಲೆ ಸಹ ಶಿಕ್ಷಕರು ಹಾಗೂ ಗ್ರಾಮಸ್ಥರು ಸಂತಾಪ ಸೂಚಿಸಿದರು. ಶಾಲಾ ಮಕ್ಕಳು ಶಿಕ್ಷಕನ ಮೃತದೇಹದ ಬಳಿ ಗೋಳಾಡಿದ ದೃಶ್ಯ ಮನಕಲಕುವಂತಿತ್ತು.

ಇದನ್ನೂ ಓದಿ | ತೆಂಗಿನ ಮರ ಏರಿದವನಿಗೆ ತಪ್ಪಿತು ಪ್ರಜ್ಞೆ; ಮರದಲ್ಲೇ ನೇತಾಡುತ್ತಿದ್ದವನ ರಕ್ಷಿಸಿದ ಸಿವಿಲ್‌ ಡಿಫೆನ್ಸ್‌ ಟೀಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Lokayukta Raid : ಲಂಚಕ್ಕೆ ಕೈವೊಡ್ಡಿದ ಕೆಆರ್‌ ಆಸ್ಪತ್ರೆ ವೈದ್ಯನಿಗೆ 4 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

Lokayukta Raid: ಮೈಸೂರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯನಿಗೆ ನಾಲ್ಕು ವರ್ಷ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ. ಉಡುಪಿಯಲ್ಲಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

VISTARANEWS.COM


on

By

Lokayukta Raid
Koo

ಮೈಸೂರು/ಉಡುಪಿ: ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಲಂಚಕ್ಕೆ ಬೇಡಿಕೆ (Lokayukta Raid) ಇಟ್ಟಿದ್ದರು. ಇದೀಗ ಲಂಚಕ್ಕೆ ಕೈವೊಡ್ಡಿದ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ. 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಕೆ.ಆರ್. ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಡಾ.ಪುಟ್ಟಸ್ವಾಮಿ ಶಿಕ್ಷೆಗೊಳಗಾದ ವೈದ್ಯರಾಗಿದ್ದಾರೆ. ಕಳೆದ 2017ರ ಏಪ್ರಿಲ್ 12ರಂದು ದೇವರಾಜು ಎಂಬುವವರು ದೂರು ನೀಡಿದ್ದರು. ಪುಟ್ಟಸ್ವಾಮಿ 26 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸಲಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು.

ಆರೋಪಿ ಪುಟ್ಟಸ್ವಾಮಿ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಾ ಪುಟ್ಟಸ್ವಾಮಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ಹಾಕಲಾಗಿದೆ.

Lokayukta Raid

ಉಡುಪಿಯಲ್ಲಿ ಲೋಕಾಯುಕ್ತ ದಾಳಿ; ಬಲೆಗೆ ಬಿದ್ದ ಅಧಿಕಾರಿಗಳು

ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಉಪ್ಪೂರು ಪಿಡಿಓ ಇನಾಯತ್ ಉಲ್ಲಾ ಬೇಗ್ ಹಾಗೂ ಪಂಚಾಯತ್ ಬಿಲ್ ಕಲೆಕ್ಟರ್ ಸಂಜಯ್ ಕೂಡ ಸಿಕ್ಕಿಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಸಿಲುಕಿದ್ದಾರೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರಿಬ್ಬರಿಗೂ ಜೂನ್ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Illegal Bangla Immigrants: ಸಿಸಿಬಿ ದಾಳಿ, ಬೆಂಗಳೂರಿನಲ್ಲಿ ನೂರಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Illegal Bangla Immigrants: ಬೆಂಗಳೂರಿನ ನಾಲ್ಕು ಡಿವಿಷನ್‌ಗಳಲ್ಲಿರುವ ಅಕ್ರಮ ನಿವಾಸಿಗಳ ಮನೆ ಮೇಲೆ ದಾಳಿ ನಡೆದಿದೆ. ಬಾಂಗ್ಲಾ ಗಡಿಭಾಗದಲ್ಲಿ ನುಸುಳಿ ಅಕ್ರಮವಾಗಿ ಬೆಂಗಳೂರಿಗೆ ಬಂದಿರುವ ಪ್ರಜೆಗಳು ಇವರಾಗಿದ್ದು, ದೇಶದಲ್ಲಿ ನೆಲೆಸುವುದಕ್ಕೆ ಯಾವುದೇ ಸೂಕ್ತ ದಾಖಲೆ ಇವರ ಬಳಿ ಇಲ್ಲ.

VISTARANEWS.COM


on

Illegal Bangla Immigrants
Koo

ಬೆಂಗಳೂರು: ಸೆಂಟ್ರಲ್‌ ಕ್ರೈಂ ಬ್ರಾಂಚ್‌ ಪೊಲೀಸರು (CCB police) ನಿನ್ನೆ ಮಧ್ಯರಾತ್ರಿ ಬೆಂಗಳೂರು (bangalore) ನಗರದ ಹಲವು ಕಡೆಗಳಲ್ಲಿ ದಾಳಿ (raid) ನಡೆಸಿದ್ದು, ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ನೂರಕ್ಕೂ ಅಧಿಕ ಬಾಂಗ್ಲಾದೇಶಿ (Illegal Bangla Immigrants) ವಲಸಿಗರನ್ನು ಬಂಧಿಸಿದ್ದಾರೆ.

ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ಮನೆ ಮೇಲೆ ಸಿಸಿಬಿ ಪೊಲೀಸರ ಮಿಡ್ ನೈಟ್ ಅಪರೇಷನ್ ನಡೆದಿದೆ. ಬೆಂಗಳೂರಿನ ನಾಲ್ಕು ಡಿವಿಷನ್‌ಗಳಲ್ಲಿರುವ ಅಕ್ರಮ ನಿವಾಸಿಗಳ ಮನೆ ಮೇಲೆ ದಾಳಿ ನಡೆದಿದೆ. ಬಾಂಗ್ಲಾ ಗಡಿಭಾಗದಲ್ಲಿ ನುಸುಳಿ ಅಕ್ರಮವಾಗಿ ಬೆಂಗಳೂರಿಗೆ ಬಂದಿರುವ ಪ್ರಜೆಗಳು ಇವರಾಗಿದ್ದು, ದೇಶದಲ್ಲಿ ನೆಲೆಸುವುದಕ್ಕೆ ಯಾವುದೇ ಸೂಕ್ತ ದಾಖಲೆ ಇವರ ಬಳಿ ಇಲ್ಲ.

ಗುಪ್ತಚರ ಮಾಹಿತಿ ಆಧರಿಸಿ ದಾಳಿ ಮಾಡಿರುವ ಸಿಸಿಬಿ ತಂಡ ಮಧ್ಯರಾತ್ರಿ 1 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆವರೆಗೂ ಆಪರೇಷನ್ ನಡೆಸಿದೆ. ನೂರಕ್ಕೂ ಹೆಚ್ಚ ಅಕ್ರಮ ನಿವಾಸಿಗಳನ್ನು ಪತ್ತೆ ಹಚ್ಚಲಾಗಿದೆ. ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಇವರಲ್ಲಿ ಹಲವರು ವೋಟರ್‌ ಐಡಿ ಕೂಡ ಮಾಡಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಇವರೊಂದಿಗೆ, ಸೂಕ್ತ ದಾಖಲೆಗಳ ಪರಿಶೀಲನೆ ಮಾಡದೆ ಇವರಿಗೆ ಬಾಡಿಗೆ ಮನೆಗಳನ್ನು ಹಾಗೂ ಕೊಠಡಿಗಳನ್ನು ನೀಡಿದವರನ್ನು ಕೂಡ ಪ್ರಶ್ನಿಸಲಾಗುತ್ತಿದೆ. ಇವರಲ್ಲಿ ಹೆಚ್ಚಿನವರು ಫ್ಯಾಕ್ಟರಿ, ಕೂಲಿ, ಹೋಟೆಲ್‌ಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ. ಹಲವರು ಕೆಲವು ವರ್ಷಗಳಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ಗೊತ್ತಾಗಿದೆ.

ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ಸಿಎಎ (CAA) ಅಡಿಯಲ್ಲಿ ಪೌರತ್ವ ಕಲ್ಪಿಸಿರುವ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು 14 ಜನರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ.

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಸಿಎಎ ನಿಯಮಗಳ ಜಾರಿಗೆ ಕೇಂದ್ರ ಸರ್ಕಾರವು ಕಳೆದ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಆ ಮೂಲಕ ದೇಶದಲ್ಲಿ ಸಿಎಎ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, 14 ಜನರಿಗೆ ಪ್ರಮಾಣಪತ್ರಗಳನ್ನು ನೀಡಿದೆ.

ಇದನ್ನೂ ಓದಿ: ಹನಿ ಟ್ರ್ಯಾಪ್‌ ಮಾಡಿ ಕೋಲ್ಕತಾಗೆ ಕರೆಸಿಕೊಂಡು ಬಾಂಗ್ಲಾದೇಶ ಸಂಸದನ ಕೊಲೆ; ಚರ್ಮ ಸುಲಿದು, ದೇಹ ಪೀಸ್‌ ಪೀಸ್‌

Continue Reading

ಬೆಂಗಳೂರು ಗ್ರಾಮಾಂತರ

Elephant Attack : ಆನೇಕಲ್‌ನಲ್ಲಿ ರೈತನ ಬೆನ್ನು ಮೂಳೆ ಮುರಿದ ಕಾಡಾನೆ; ವೃದ್ಧನ ಸ್ಥಿತಿ ಗಂಭೀರ

Elephant Attack : ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ದಾಳಿ ಮಾಡಿರುವ ಕಾಡಾನೆಯು ಬೆನ್ನು ಮೂಳೆ ಮುರಿಯುವಂತೆ ಮಾಡಿದೆ. ಗಂಭೀರ ಗಾಯಗೊಂಡಿರುವ ರೈತ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮತ್ತೊಂದು ಕಡೆ ಕಾಡಾನೆಯೊಂದು ವಿದ್ಯುತ್‌ ತಂತಿ ತಗುಲಿ ಮೃತಪಟ್ಟಿದೆ.

VISTARANEWS.COM


on

By

Elephant attack
Koo

ಆನೇಕಲ್: ರೈತರೊಬ್ಬರ ಮೇಲೆ ಕಾಡಾನೆ ದಾಳಿ (Elephant Attack) ಮಾಡಿದ್ದರಿಂದ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರವಾಗಿ ಗಾಯಗೊಂಡ ರೈತ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿ ಬಳಿ ಘಟನೆ ನಡೆದಿದೆ. ಚಿನ್ನಬರಿಯಪ್ಪ (70) ಆನೆ ದಾಳಿಗೊಳಗಾದ ರೈತ.

ಜಮೀನಿನ ಕಡೆ ಹೋಗುತ್ತಿದ್ದಾಗ ಏಕಾಏಕಿ ನುಗ್ಗಿದ ಕಾಡಾನೆ ಅಟ್ಟಾಡಿಸಿ ದಾಳಿ ಮಾಡಿದೆ. ಪರಿಣಾಮ ಕೈ ಹಾಗೂ ಸೊಂಟದ ಭಾಗದ ಮೂಳೆಗಳು ಮುರಿದು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡು ನರಳಾಡುತ್ತಿದ್ದ ಚಿನ್ನಬರಿಯಪ್ಪರನ್ನು ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಗಾಯಾಳು ರೈತನನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

elephant attack in Anekal

ಆನೇಕಲ್‌ನಲ್ಲಿ ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಪಲತೊಟ್ಟನಪಲ್ಲಿ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿದೆ. ಗ್ರಾಮದ ಸಮೀಪ ಹಾದು ಹೋಗಿದ್ದ ವಿದ್ಯುತ್ ತಂತಿಯನ್ನು ಗಂಡಾನೆ ತುಳಿದಿದೆ.

ಕಳೆದ ರಾತ್ರಿ ಗ್ರಾಮಕ್ಕೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟಿದ್ದವು. ಇಳಿಜಾರು ಪ್ರದೇಶದಲ್ಲಿ ಹೋಗುತ್ತಿದ್ದದ್ದಾಗ ಒಂದು ಕಾಡಾನೆಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದೆ. ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಆನೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಉಡುಪಿಯಲ್ಲಿ ಚಿರತೆ ಓಡಾಟ

ಹಾಡುಹಗಲಿನಲ್ಲೇ ಚಿರತೆ ಕಾಣಿಸಿಕೊಂಡು ಜನರಲ್ಲಿ ಭಯವನ್ನು ಹುಟ್ಟಿಸುತ್ತಿದೆ. ಉಡುಪಿಯ ಕಾರ್ಕಳ ತಾಲೂಕು ಹಾಳೆಕಟ್ಟೆ ಕಲ್ಯಾ ಮಲಯ್ಯಬೆಟ್ಟು ಎಂಬಲ್ಲಿ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಅಡ್ಡಾದಿಡ್ಡಿಯಾಗಿ ಯಾವುದೇ ಭಯವಿಲ್ಲದೆ ಚಿರತೆ ಓಡಾಡುತ್ತಿದೆ. ಆದಷ್ಟು ಶೀಘ್ರದಲ್ಲಿ ಚಿರತೆಯನ್ನು ಹಿಡಿದು ರಕ್ಷಣೆ ನೀಡುವಂತೆ ಜನರು ಒತ್ತಾಯಿಸಿದ್ದಾರೆ. ಚಿರತೆ ಸಂಚಾರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಹೇಗಿರುತ್ತೆ ಇಂದು ಪ್ರಜ್ವಲ್‌ ರೇವಣ್ಣಗೆ ಎಸ್‌ಐಟಿ ʼಸ್ವಾಗತʼ?

Prajwal Revanna Case: ಪ್ರಜ್ವಲ್ ರೇವಣ್ಣ ಬೋರ್ಡಿಂಗ್ ಖಚಿತ ನಂತರ ಎಸ್ಐಟಿಗೆ ಅಲರ್ಟ್ ಬರಲಿದೆ. ಇಮಿಗ್ರೇಶನ್ ತಂಡದೊಂದಿಗೆ ಎಸ್ಐಟಿ ಸಜ್ಜಾಗಲಿದೆ. ಟರ್ಮಿನಲ್ 2ಗೆ ಪ್ರಜ್ವಲ್ ಪ್ರಯಾಣಿಸುತ್ತಿರುವ ವಿಮಾನ ಬಂದ ಕೂಡಲೇ ವಿಮಾನದ ಬಳಿ ತೆರಳಲಿರುವ ಎಸ್ಐಟಿ ಹಾಗೂ ಸಿಐಎಸ್ಎಫ್ ಅಧಿಕಾರಿಗಳು, ಮೊದಲು ವಿಮಾನದಿಂದ ಪ್ರಜ್ವಲ್‌ನನ್ನು ಮಾತ್ರ ಡಿಬೋರ್ಡಿಂಗ್ ಮಾಡಿಸಲಿದ್ದಾರೆ.

VISTARANEWS.COM


on

prajwal revanna case airport
Koo

ಬೆಂಗಳೂರು: ಇಂದು ಮಧ್ಯರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda international Airport) ಅಶ್ಲೀಲ ವಿಡಿಯೋ (Obscene video) ಹಗರಣದ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ, ಅವರನ್ನು ʼಸ್ವಾಗತಿಸಲುʼ ಎಸ್‌ಐಟಿ (SIT) ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.

ಇಮಿಗ್ರೇಶನ್ ಡೆಸ್ಕ್‌ನಲ್ಲಿ (Immigration desk) ಸಿಐಎಸ್ಎಫ್ (CISF) ಹಾಗೂ ಎಸ್ಐಟಿ ತಂಡದ ತಲಾ ಓರ್ವ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ವಿಮಾನ ಆಗಮಿಸುವ ಮೂರು ಗಂಟೆ ಮುಂಚಿತವಾಗಿ ಇಮಿಗ್ರೇಶನ್ ಡೆಸ್ಕ್‌ಗೆ ಪ್ರಯಾಣಿಕರ ಪಟ್ಟಿ ಬರಲಿದೆ. Lufthansa ವಿಮಾನ ಕಂಪನಿಗೆ ಸೂಚನೆ ನೀಡಲಾಗಿದ್ದು, ಪ್ರಜ್ವಲ್ ರೇವಣ್ಣ ಮ್ಯೂನಿಚ್‌ನಲ್ಲಿ ಬೋರ್ಡಿಂಗ್ ಆಗುವ ಮಾಹಿತಿ ನೀಡಲು ಸೂಚನೆ ಕೊಡಲಾಗಿದೆ.

ಪ್ರಜ್ವಲ್ ರೇವಣ್ಣ ಬೋರ್ಡಿಂಗ್ ಖಚಿತ ನಂತರ ಎಸ್ಐಟಿಗೆ ಅಲರ್ಟ್ ಬರಲಿದೆ. ಇಮಿಗ್ರೇಶನ್ ತಂಡದೊಂದಿಗೆ ಎಸ್ಐಟಿ ಸಜ್ಜಾಗಲಿದೆ. ಟರ್ಮಿನಲ್ 2ಗೆ ಪ್ರಜ್ವಲ್ ಪ್ರಯಾಣಿಸುತ್ತಿರುವ ವಿಮಾನ ಬಂದ ಕೂಡಲೇ ವಿಮಾನದ ಬಳಿ ತೆರಳಲಿರುವ ಎಸ್ಐಟಿ ಹಾಗೂ ಸಿಐಎಸ್ಎಫ್ ಅಧಿಕಾರಿಗಳು, ಮೊದಲು ವಿಮಾನದಿಂದ ಪ್ರಜ್ವಲ್‌ನನ್ನು ಮಾತ್ರ ಡಿಬೋರ್ಡಿಂಗ್ ಮಾಡಿಸಲಿದ್ದಾರೆ.

ಪ್ರಜ್ವಲ್‌ಗೆ ಸಂಬಂಧಿಸಿದ ಲಗೇಜ್ ಹಾಗೂ ಬ್ಯಾಗ್ ನೇರವಾಗಿ ಇಮಿಗ್ರೇಶನ್ ಡೆಸ್ಕ್‌ಗೆ ತರಲು ಸೂಚಿಸಲಾಗುತ್ತದೆ. ಇಮಿಗ್ರೇಶನ್ ಡೆಸ್ಕ್ ಬಳಿ ಪ್ರಜ್ವಲ್ ಡಿಪ್ಲೋಮ್ಯಾಟಿಕ್ ಪಾಸ್‌ಪೋರ್ಟ್‌ಗೆ ಸ್ಟಾಂಪ್ ಹಾಕಿಸಿಕೊಂಡು, ಸ್ಟಾಂಪ್ ಆದ ಕೂಡಲೇ ನೇರವಾಗಿ ಎಸ್ಐಟಿ ವಶಕ್ಕೆ ಪಡೆಯಲಾಗುತ್ತದೆ. ಪಾಸ್‌ಪೋರ್ಟ್‌, ವೀಸಾ ಇತ್ಯಾದಿಗಳನ್ನು ಜಪ್ತಿ ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್ ರೇವಣ್ಣ ಯಾವುದೇ ವಿಮಾನದಲ್ಲಿ ಬಂದರೂ ಇದೇ ಪ್ರಕ್ರಿಯೆ ನಡೆಯಲಿದೆ.

ಫ್ಲೈಟ್ ಟಿಕೆಟ್ ಬುಕ್‌ ಮಾಡಿರುವ ಆಧಾರದಂತೆ ಇಂದು ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯರಾತ್ರಿ 12.35ಕ್ಕೆ ಟರ್ಮಿನಲ್ 2ಗೆ ಆಗಮಿಸಲಿರುವ ಪ್ರಜ್ವಲ್ ಅನ್ನು ʼಸ್ವಾಗತಿಸಲುʼ ಟರ್ಮಿನಲ್ 2ನಲ್ಲಿ ಎಸ್ಐಟಿ ತಂಡ ಬೀಡು ಬಿಟ್ಟಿದೆ. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ವಿಮಾನ ಹತ್ತಿದ್ದಾರೆಯೇ ಇಲ್ಲವೇ ಎಂಬುದು ಖಚಿತವಾಗಲಿದೆ.

ಪ್ರಜ್ವಲ್ ವಿಡಿಯೋ ಮಾಡಿ ಕಳಿಸಿರುವುದು ಎಲ್ಲಿಂದ ಎಂಬುದನ್ನು ನಿನ್ನೆಯೇ ಎಸ್‌ಐಟಿ ಪತ್ತೆ ಹಚ್ಚಿದೆ. ಯುರೋಪ್‌ನ ಹಂಗೇರಿನಿಂದ ಈ ವಿಡಿಯೋ ಬಿಡುಗಡೆಯಾಗಿದೆ. ಅಲ್ಲಿಂದ ಮ್ಯೂನಿಚ್‌ಗೆ ಬಂದು ಪ್ರಜ್ವಲ್‌ ವಿಮಾನ ಹಿಡಿಯಬೇಕಿದೆ. ಹಂಗೇರಿ, ಬುಡಾಪೆಸ್ಟ್‌, ಜರ್ಮನಿ ಎಂದು ಕಳೆದ ಒಂದು ತಿಂಗಳಿನಿಂದ ಪ್ರಜ್ವಲ್‌ ಓಡಾಡುತ್ತಿದ್ದಾರೆ. ಅವರು ಇಲ್ಲೆಲ್ಲಾ ತಮ್ಮ ಗೆಳೆಯರ ಆಶ್ರಯ ಪಡೆದಿದ್ದರೇ, ಎಲ್ಲಿ ತಂಗಿದ್ದರು ಎಂಬ ಮಾಹಿತಿ ದೊರೆಯಬೇಕಿದೆ.

ನಿಜಕ್ಕೂ ವಾಪಸಾಗ್ತಾರಾ ಪ್ರಜ್ವಲ್?‌

ಪ್ರಜ್ವಲ್ ರೇವಣ್ಣ ಕುಟುಂಬ ಸಲ್ಲಿಸಿದ ಜಾಮೀನು ಅರ್ಜಿಗಳೆಲ್ಲವೂ ಕೂಡ ನ್ಯಾಯಾಲಯದಲ್ಲಿ ಇತ್ಯರ್ಥವಾಗದೆ ಮುಂದೂಡಿಕೆ ಆಗುತ್ತಲೇ ಇವೆ. ಹೀಗಾಗಿ ಪ್ರತಿ ದಿನ ರೇವಣ್ಣ ಕುಟುಂಬ ಟೆನ್ಷನ್‌ನಲ್ಲಿರಬೇಕಾಗಿದೆ. ನಿನ್ನೆ ನಡೆದ ಭವಾನಿ ರೇವಣ್ಣ ಅವರ ಸುದೀರ್ಘ ವಿಚಾರಣೆ ಬಳಿಕವೂ ವಿಚಾರಣೆಯನ್ನು ಮುಂದೂಡಲಾಗಿದೆ. ಈ ಬೆಳವಣಿಗಯಿಂದ ಪ್ರಜ್ವಲ್ ವಾಪಾಸಾಗ್ತಾರಾ ಎಂಬುದೇ ಅನುಮಾನಕ್ಕೀಡು ಮಾಡಿದೆ.‌

ಪ್ರಜ್ವಲ್ ಬರುತ್ತಿದ್ದಂತೆ SIT ಅಧಿಕಾರಿಗಳು ಪ್ರಜ್ವಲ್‌ರನ್ನು ಬಂಧಿಸಲು ಸಿದ್ಧರಾಗಿದ್ದಾರೆ. ಅದಕ್ಕೂ ಮುನ್ನ ಹೈ ಅಲಟ್೯ ಆದ ಪ್ರಜ್ವಲ್ ರೇವಣ್ಣ, ಇದೇ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಅವಕಾಶ ನೀಡದ ನ್ಯಾಯಾಲಯ, ಮೊದಲು ಅವರು ಬರಲಿ ಆಮೇಲೆ ನೋಡೋಣ, ಮೇ 31ಕ್ಕೆ ಅರ್ಜಿ ವಿಚಾರಣೆ ಮಾಡೋಣ ಅಂತ ಹೇಳಿ SIT ಅಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಸದ್ಯ 3 ಪ್ರಕರಣಗಳಲ್ಲೂ ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್‌ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಪೊಲೀಸ್ ಠಾಣೆ, ಸೈಬರ್ ಕ್ರೈಂ ಠಾಣೆ, ಹೊಳೆನರಸೀಪುರ ಠಾಣೆಗಳಲ್ಲಿ ಕೇಸ್‌ ದಾಖಲಾಗಿವೆ.

ಮೈಸೂರಿನ ಕೆ.ಆರ್. ನಗರ ಠಾಣೆಯ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್ ವಿಚಾರದಲ್ಲಿ ಭವಾನಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿದೆ. ಇದೇ ವಿಚಾರಕ್ಕೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, SIT ಕೂಡಾ ಆಕ್ಷೇಪಣಾ ಅರ್ಜಿ ಸಲ್ಲಿಸಿ ಯಾವುದೇ ಕಾರಣಕ್ಕೂ ಭವಾನಿ ರೇವಣ್ಣಗೆ ಜಾಮೀನು ಮಂಜೂರು ಮಾಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ವಿಚಾರದ ಆದೇಶವನ್ನು ಮೇ 31ಕ್ಕೆ ಮುಂದೂಡಿದ್ದಾರೆ.

ತನಿಖೆಗೆ ಸಹಕರಿಸುವುದಾಗಿ ಪ್ರಜ್ವಲ್‌ ಹೇಳಿದ್ದಾರೆ. ಆದರೆ ನಿರೀಕ್ಷಣಾ ಜಾಮೀನು ಸಿಗದ ಹಿನ್ನೆಲೆಯಲ್ಲಿ, ಬಂಧನ ತಪ್ಪಿಸಿಕೊಳ್ಳಲು ಅಲ್ಲೇ ಉಳಿಯುವ ಚಿಂತನೆ ಮಾಡುವ ಸಾಧ್ಯತೆಯೂ ಇದೆ. ಕಳೆದ ಬಾರಿಯೂ SIT ವಿಚಾರಣೆಗೆ ಬರಲು ಪ್ರಜ್ವಲ್‌ ಒಂದು ವಾರ ಕಾಲಾವಕಾಶ ಕೇಳಿದ್ದರು. ಆದರೆ ಒಂದು ತಿಂಗಳ ನಂತರವೂ SIT ವಿಚಾರಣೆಗೆ ಬಂದಿಲ್ಲ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಆಗಮನಕ್ಕೆ ಕೌಂಟ್‌ಡೌನ್‌, ವಿಮಾನ ಏರ್ತಾರಾ ಇಲ್ವಾ?

Continue Reading
Advertisement
T20 World Cup 2007
ಕ್ರಿಕೆಟ್21 mins ago

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

Gold Rate Today
ಚಿನ್ನದ ದರ22 mins ago

Gold Rate Today: ತುಸು ಇಳಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ದರದ ವಿವರ

Munawar Faruqui second wife Mehzabeen Coatwala single mom and makeup artist
ಬಾಲಿವುಡ್22 mins ago

Munawar Faruqui:  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ ಎರಡನೇ ಪತ್ನಿ ಸಿಂಗಲ್‌ ಪೇರೆಂಟ್‌!

Lokayukta Raid
ಕ್ರೈಂ42 mins ago

Lokayukta Raid : ಲಂಚಕ್ಕೆ ಕೈವೊಡ್ಡಿದ ಕೆಆರ್‌ ಆಸ್ಪತ್ರೆ ವೈದ್ಯನಿಗೆ 4 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

Illegal Bangla Immigrants
ಕ್ರೈಂ55 mins ago

Illegal Bangla Immigrants: ಸಿಸಿಬಿ ದಾಳಿ, ಬೆಂಗಳೂರಿನಲ್ಲಿ ನೂರಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Viral News
ವೈರಲ್ ನ್ಯೂಸ್57 mins ago

Viral News: ಸರ ಕದ್ದು ಪರಾರಿಯಾಗಲು ಬೈಕ್‌ ಏರಿದವರಿಗೆ ಕಾದಿತ್ತು ಶಾಕ್‌; ವಿಡಿಯೊ ಇಲ್ಲಿದೆ

PM Narendra Modi
ದೇಶ1 hour ago

PM Narendra Modi: ಮೋದಿ ಧ್ಯಾನ ಮಾಡುವುದು ನೀತಿ ಸಂಹಿತೆ ಉಲ್ಲಂಘನೆಯೆ? ಕಾನೂನು ತಜ್ಞರ ಅಭಿಪ್ರಾಯ ಹೀಗಿದೆ

Saanvi Sudeep New Tattoo Piku meaning
ಸ್ಯಾಂಡಲ್ ವುಡ್1 hour ago

Saanvi Sudeep: ಟ್ಯಾಟೂ ಹಾಕಿಸಿಕೊಂಡ ಕಿಚ್ಚ ಸುದೀಪ್‌ ಮುದ್ದಿನ ಮಗಳು: ʻPIKUʼ ಅರ್ಥ ಏನು?

Nandamuri Balakrishna Pushes Away Actress Anjali
ಟಾಲಿವುಡ್1 hour ago

Nandamuri Balakrishna: ಕುಡಿದು ಬಂದು ವೇದಿಕೆ ಮೇಲೆ ನಟಿ ಅಂಜಲಿಯನ್ನು ತಳ್ಳಿದ್ರಾ ಬಾಲಯ್ಯ?

T20 World Cup 2024
ಕ್ರೀಡೆ1 hour ago

T20 World Cup 2024: ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳು ಯಾರು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌