Border Gavaskar Trophy: ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯ ಇತಿಹಾಸ, ರೋಚಕ ಸಂಗತಿಗಳ ಮಾಹಿತಿ - Vistara News

ಕ್ರಿಕೆಟ್

Border Gavaskar Trophy: ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯ ಇತಿಹಾಸ, ರೋಚಕ ಸಂಗತಿಗಳ ಮಾಹಿತಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯ ಮೊದಲ ಪಂದ್ಯ ಫೆ.9(ಗುರುವಾರ) ರಂದು ಆರಂಭಗೊಳ್ಳಲಿದೆ.

VISTARANEWS.COM


on

border gavaskar trophy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ(IND VS AUS) ವಿರುದ್ಧದ ಬಾರ್ಡರ್-ಗವಾಸ್ಕರ್(Border Gavaskar Trophy) ಟ್ರೋಫಿ ಟೆಸ್ಟ್ ಕ್ರಿಕೆಟ್​ನಲ್ಲಿ ಶ್ರೀಮಂತ ಸರಣಿಗಳಲ್ಲಿ ಇದೂ ಒಂದಾಗಿದೆ. ಇಂಗ್ಲೆಂಡ್​ ಮತ್ತು ಆಸ್ಟ್ರೇಲಿಯಾ ನಡುವಿನ ಆ್ಯಷಸ್ ಸರಣಿ ಹೊರತುಪಡಿಸಿದರೆ ಅತ್ಯಂತ ಜಿದ್ದಾಜಿದ್ದಿನ ಟೆಸ್ಟ್ ಸರಣಿ ಎಂಬ ಹಿರಿಮೆಗೆ ಬಾರ್ಡರ್-ಗವಾಸ್ಕರ್ ಟ್ರೋಫಿ ಪ್ರಸಿದ್ಧಿಹೊಂದಿದೆ. ಈ ಸರಣಿಯಲ್ಲಿ ಉಭಯ ತಂಡಗಳ ಸಾಧನೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತ- ಆಸ್ಟ್ರೇಲಿಯಾ ತಂಡಗಳು 1947ರಿಂದಲೂ ಟೆಸ್ಟ್ ಕ್ರಿಕೆಟ್ ನಲ್ಲಿ ಮುಖಾಮುಖಿಯಾಗುತ್ತಿದೆ. 1947ರಿಂದ 1996ರವರೆಗೆ ಸುಮಾರು 50 ಟೆಸ್ಟ್ ಪಂದ್ಯಗಳಲ್ಲಿ ಇತ್ತಂಡಗಳು ಮುಖಾಮುಖಿಯಾಗಿದೆ. 1996ರಲ್ಲಿ ಈ ಸರಣಿಗೆ ಇಂಡೋ-ಆಸೀಸ್ ದಿಗ್ಗಜರಾದ ಅಲನ್ ಬಾರ್ಡರ್ ಮತ್ತು ಸುನೀಲ್ ಗವಾಸ್ಕರ್ ಹೆಸರಿಡಲಾಯಿತು. ಅಂದಿನಿಂದ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ಬಾರ್ಡರ್- ಗವಾಸ್ಕರ್ ಟ್ರೋಫಿ ಎಂದು ಕರೆಯಲ್ಪಡುತ್ತದೆ.

ಮೊದಲ ಪಂದ್ಯ ನಡೆದಿದ್ದು 1996 ಅಕ್ಟೋಬರ್ ನಲ್ಲಿ. ದಿಲ್ಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ. ಆ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. 1997-98ರಲ್ಲಿ ಆಸ್ಟ್ರೇಲಿಯಾ ಮತ್ತೆ ಭಾರತ ಪ್ರವಾಸ ಮಾಡಿತ್ತು. ಆ ಸರಣಿಯನ್ನು ಭಾರತ 2-1 ಅಂತರದಿಂದ ಗೆಲುವು ಸಾಧಿಸಿತ್ತು. ಶೇನ್ ವಾರ್ನ್ ಎಸೆತಗಳನ್ನು ಸಚಿನ್ ತೆಂಡೂಲ್ಕರ್ ಪುಡಿಗಟ್ಟಿದ್ದರು.

1999-2000 ರಲ್ಲಿ ಸಚಿನ್ ತೆಂಡೂಲ್ಕರ್ ನೇತೃತ್ವದ ಭಾರತ ತಂಡ ಆಸೀಸ್​ಗೆ ತೆರಳಿತ್ತು. ಇದು ಆಸೀಸ್ ನೆಲದಲ್ಲಿ ನಡೆದ ಮೊದಲ ಬಾರ್ಡರ್-ಗವಾಸ್ಕರ್ ಸರಣಿ. ಆದರೆ ಸರಣಿಯಲ್ಲಿ ಕಾಂಗರೂಗಳು ಭಾರತದ ಮೇಲೆ ಸವಾರಿ ನಡೆಸಿದ್ದರು. ಸರಣಿಯ ಮೂರು ಪಂದ್ಯಗಳಲ್ಲಿ ಆಸೀಸ್ ಗೆದ್ದು ಬೀಗಿತ್ತು. ಈ ಸರಣಿಯಲ್ಲಿ ಮತ್ತೊಂದು ನೆನಪಿನಲ್ಲಿ ಉಳಿಯುವ ವಿಚಾರವೆಂದರೆ ಸಚಿನ್ ತೆಂಡೂಲ್ಕರ್​ ಅವರ ಭುಜಕ್ಕೆ ತಾಗಿದ ಎಸೆತಕ್ಕೆ ಎಲ್ ಬಿಡಬ್ಲ್ಯೂ ಔಟ್ ನೀಡಿದ್ದು ಎಲ್ಲಡೆ ಸುದ್ದಿಯಾಗಿತ್ತು.

2001ರಲ್ಲಿ ಭಾರತ ಪ್ರವಾಸಕ್ಕೆ ಆಗಮಿಸಿದ ಆಸೀಸ್​ಗೆ ಗಂಗೂಲಿ ಪಡೆ ಸೋಲಿನ ರುಚಿ ತೋರಿಸಿತ್ತು. ಹರ್ಭಜನ್ ಸಿಂಗ್ ಹ್ಯಾಟ್ರಿಕ್, ವಿವಿಎಸ್ ಲಕ್ಷ್ಮಣ್ 281 ರನ್, ದ್ರಾವಿಡ್-ಲಕ್ಷ್ಮಣ್ ದಾಖಲೆಯ ಜತೆಯಾಟದ ಐತಿಹಾಸಿಕ ಕೋಲ್ಕತ್ತಾ ಟೆಸ್ಟ್ ಪಂದ್ಯ ನಡೆದಿದ್ದು ಇದೇ ಸರಣಿಯಲ್ಲಿ. ಭಾರತ 2-1ರ ಅಂತರದಿಂದ ಸರಣಿ ಜಯಿಸಿತ್ತು.

ಮಂಕಿಗೇಟ್ ಪ್ರಕರಣ

2004ರಲ್ಲಿ ಭಾರತಕ್ಕೆ ಆಗಮಿಸಿದ ಆಸೀಸ್ ಬಳಗ 1969-70ರ ಬಳಿಕ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಜಯಿಸಿತ್ತು. 2007-08ರಲ್ಲಿ ಆಸೀಸ್ ನೆಲದಲ್ಲಿ ನಡೆದ ಸರಣಿ ಕಾಂಗರೂಗಳ ಕೆಟ್ಟ ಮುಖವನ್ನು ಜಗತ್ತಿಗೆ ಪರಿಚಯಿಸಿತ್ತು. ಕೆಟ್ಟ ಅಂಪಾಯರಿಂಗ್ ನಿರ್ಧಾರಗಳು, ಸೈಮಂಡ್ಸ್- ಹರ್ಭಜನ್ ನಡುವಿನ ಮಂಕಿಗೇಟ್ ಪ್ರಕರಣಗಳು ಆ ಕಾಲದಲ್ಲಿ ಕ್ರಿಕೆಟ್​ಗಿಂತ ಹೆಚ್ಚಾಗಿ ಸದ್ದು ಮಾಡಿದ್ದವು. ಪ್ರವಾಸಿಗರನ್ನು ಮಾನಸಿಕವಾಗಿಯೂ ಕುಗ್ಗಿಸಿದ್ದ ಆಸೀಸ್ ಆಟಗಾರರು ಸರಣಿ ಜಯಿಸಿದ್ದರು.

2010ರಲ್ಲಿ ಎರಡು ಪಂದ್ಯಗಳ ಸರಣಿಗಾಗಿ ಆಸೀಸ್ ಭಾರತಕ್ಕೆ ಆಗಮಿಸಿತ್ತು. ಮೊದಲ ಪಂದ್ಯದಲ್ಲಿ ವಿವಿಎಸ್ ಲಕ್ಷ್ಮಣ್ ಕೊನೆಯ ಎರಡು ವಿಕೆಟ್ ಗೆ ಇಶಾಂತ್ ಮತ್ತು ಓಝಾ ಜೊತೆಯಾಟವಾಡಿ ಗೆಲುವು ತಂದಿತ್ತರು. ಎರಡನೇ ಪಂದ್ಯದಲ್ಲೂ ಜಯಿಸಿದ ಧೋನಿ ಪಡೆ 2-0 ಅಂತರದ ಜಯ ಸಾಧಿಸಿತ್ತು.

ವೈಟ್ ವಾಷ್ ಅವಮಾನ

2011-12ರ ಸರಣಿಯಲ್ಲಿ ಆಸೀಸ್ ನಾಯಕ ಮೈಕಲ್ ಕ್ಲಾರ್ಕ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆಸೀಸ್ 4-0 ಅಂತರದಿಂದ ಸರಣಿ ಜಯಿಸಿತು, ಧೋನಿ ಪಡೆ ವೈಟ್ ವಾಷ್ ಅವಮಾನ ಅನುಭವಿಸಿತು. ಆದರೆ 2013ರ ಸರಣಿಯಲ್ಲಿ ಸೇಡು ತೀರಿಸಿಕೊಂಡ ಭಾರತ ತಂಡ 4-0 ಅಂತರದಲ್ಲಿ ಸರಣಿ ಗೆಲುವು ಸಾಧಿಸಿತು. ಈ ಸರಣಿಯಲ್ಲಿ ಎಂ.ಎಸ್.ಧೋನಿ ತನ್ನ ಜೀವನಶ್ರೇಷ್ಠ ಟೆಸ್ಟ್ ಸ್ಕೋರ್ 224 ರನ್ ಗಳಿಸಿದ್ದರು.

ಟೆಸ್ಟ್​ ನಾಯಕತ್ವಕ್ಕೆ ಧೋನಿ ಗುಡ್ ಬೈ

2014ರಲ್ಲಿ ಭಾರತ ತಂಡವೂ ಆಸೀಸ್ ಪ್ರವಾಸ ಕೈಗೊಂಡಿತ್ತು. ಭಾರತ 2-0 ಅಂತರದ ಸೋಲನುಭವಿಸಿತು. ಇದೇ ಸರಣಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದರು. ವಿರಾಟ್ ಕೊಹ್ಲಿ ಭಾರತದ ಹೊಸ ನಾಯಕನಾಗಿ ಆಯ್ಕೆಯಾದರು.

ಆಸೀಸ್​ನಲ್ಲಿ ಗೆದ್ದ ಭಾರತ

2018-19ರಲ್ಲಿ ಸ್ಯಾಂಡ್ ಪೇಪರ್ ಗೇಟ್ ವಿವಾದಿಂದ ಆಸೀಸ್ ತಂಡ ಸ್ಟೀವ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ಸೇವೆಯನ್ನು ಕಳೆದುಕೊಂಡಿತ್ತು. ಈ ಸಮಯವನ್ನು ಸದುಪಯೋಗ ಮಾಡಿಕೊಂಡ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ಜಯಿಸಿತ್ತು. ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಭಾರತ ಟೆಸ್ಟ್ ಸರಣಿ ಜಯಿಸಿತ್ತು. ಚೇತೇಶ್ವರ ಪೂಜಾರ ಸರಣಿಶ್ರೇಷ್ಠ ಪ್ರಶಸ್ತಿ ಪಡೆದರು.

36ಕ್ಕೆ ಕುಸಿದರೂ ಇತಿಹಾಸ ನಿರ್ಮಿಸಿದ ಭಾರತ

ವಿರಾಟ್​ ಕೊಹ್ಲಿ ನಾಯಕತ್ವದ ಟೀಮ್​ ಇಂಡಿಯಾ 2020-21ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿತ್ತು. ಈ ಸರಣಿಯಲ್ಲಿ ಸ್ಯಾಂಡ್ ಪೇಪರ್ ಗೇಟ್ ವಿವಾದಿಂದ ಮುಕ್ತರಾಗಿ ಸ್ಟೀವನ್​ ಸ್ಮಿತ್ ಮತ್ತು ಡೇವಿಡ್ ವಾರ್ನರ್ ಆಸೀಸ್​ ತಂಡ ಸೇರಿದ್ದರು. ಇದೇ ವೇಳೆ ಆಸೀಸ್​ ಭಾರತಕ್ಕೆ ಸವಾಲು ಹಾಕಿತ್ತು. ಈ ಬಾರಿ ನಮ್ಮ ಸಮರ್ಥ ತಂಡದ ವಿರುದ್ಧ ನೀವು ಗೆಲ್ಲುವುದು ಅಸಾಧ್ಯ ಎಂದು ಹೇಳಿತ್ತು. ಅದರಂತೆ ಮೊದಲ ಪಂದ್ಯ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯವಾಗಿತ್ತು. ಇಲ್ಲಿ ಭಾರತ ಕೇವಲ 36 ರನ್​ಗೆ ಕುಸಿದು ಹೀನಾಯ ಸೋಲು ಕಂಡಿತ್ತು. ಈ ಸೋಲಿನ ಬಳಿಕ ಭಾರತಕ್ಕೆ ಎಲ್ಲ ಕ್ರಿಕೆಟ್​ ಪಂಡಿತರು ಅವಮಾನ ಮಾಡಿದ್ದರು. ಇದೇ ವೇಳೆ ವಿರಾಟ್​ ಕೊಹ್ಲಿ ಅವರು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಭಾರತಕ್ಕೆ ಬಂದಿದ್ದರು.

ಒಂದೊಡೆ ಸೋಲಿನ ಅವಮಾನ, ಮತ್ತೊಂಡೆದೆ ತಂಡದ ನಾಯಕತ್ವದ ಹೊಣೆ ಈ ಎಲ್ಲ ಸವಾಲನ್ನು ಎದುರಿಸಿದ್ದು ಅಜಿಂಕ್ಯಾ ರಹಾನೆ. ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸಿದ ರಹಾನೆ ದ್ವಿತೀಯ ಟೆಸ್ಟ್​ನಲ್ಲಿ ಶತಕ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ ಸರಣಿ 1-1 ಸಮಬಲ ತಂದರು. ಮೂರನೇ ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿತು. ಅಂತಿಮ ಪಂದ್ಯದಲ್ಲಿ ಭಾರತ ಗೆದ್ದು ಸರಣಿಯನ್ನು ವಶಪಡಿಸಿಕೊಂಡಿತ್ತು. 36ಕ್ಕೆ ಕುಸಿದರೂ ಆತ್ಮವಿಶ್ವಾಸ ಕಳೆದುಕೊಳ್ಳದ ಭಾರತ ಇತಿಹಾಸ ನಿರ್ಮಿಸಿತು. ಭಾರತದ ಈ ಸಾಧನೆಯನ್ನು ಕಂಡು ಇಡೀ ಕ್ರಿಕೆಟ್​ ಜಗತ್ತೇ ಸಲಾಂ ಹೊಡೆದಿತ್ತು.

ಇದನ್ನೂ ಓದಿ IND VS AUS: ಬಾರ್ಡರ್​-ಗವಾಸ್ಕರ್ ಸರಣಿಯಲ್ಲಿ ಭಾರತಕ್ಕೆ ಪಂತ್ ಅವರ​ ಕೊರಗು ಕಾಡಲಿದೆ: ಚಾಪೆಲ್

ಇದೀಗ ಆಸೀಸ್ ತಂಡ ಭಾರತ ಪ್ರವಾಸ ಕೈಗೊಂಡಿದೆ. ಈ ಬಾರಿಯೂ ನಾಲ್ಕು ಪಂದ್ಯಗಳನ್ನು ಆಡಲಿದೆ. ಪ್ರತಿಷ್ಠಿತ ಕದನಕ್ಕಾಗಿ ಕ್ರಿಕೆಟ್ ವಿಶ್ವ ಕಾತರದಿಂದ ಕಾಯುತ್ತಿದೆ. ಸರಣಿಯ ಮೊದಲ ಪಂದ್ಯ ಗುರುವಾರ(ಫೆ.9) ನಾಗ್ಪುರದಲ್ಲಿ ಆರಂಭಗೊಳ್ಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

IPL 2024 Eliminator: ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

IPL 2024 Eliminato
Koo

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡದ ಎಲಿಮಿನೇಟರ್(IPL 2024 Eliminator)​ ಎದುರಾಳಿ ಯಾರೆಂದು ಫಿಕ್ಸ್​ ಆಗಿದೆ. ಇದರ ಬೆನ್ನಲ್ಲೇ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯಾ ತಂಡ ಮೇ 21ರಂದು ಕೆರಿಬಿಯನ್​ ದ್ವೀಪಕ್ಕೆ ಪ್ರಯಾಣ ಬೆಳೆಸಲಿದೆ ಎಂದು ಹೇಳಲಾಗಿದೆ.

ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ


ಇಂದು ರಾತ್ರಿ ನಡೆಯಬೇಕಿದ್ದ ಐಪಿಎಲ್​ನ ಅಂತಿಮ ಲೀಗ್​ ಪಂದ್ಯವಾದ ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ನಡುವಣ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ರಾಜಸ್ಥಾನ್​ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತು. ಹೀಗಾಗಿ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

Continue Reading

ಕ್ರೀಡೆ

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

RR vs KKR: ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು.

VISTARANEWS.COM


on

RR vs KKR
Koo

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು.

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

ಆರ್​ಸಿಬಿ-ರಾಜಸ್ಥಾನ್​ ಮಧ್ಯೆ ಎಲಿಮಿನೇಟರ್​ ಪಂದ್ಯ


ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಪಂಜಾಬ್​ ವಿರುದ್ಧ ಗೆದ್ದ ಹೈದರಾಬಾದ್​


ದಿನದ ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

Continue Reading

ಕ್ರೀಡೆ

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

SRH vs PBKS: ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

VISTARANEWS.COM


on

SRH vs PBKS
Koo

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಆವೃತ್ತಿಯಲ್ಲಿ ಮತ್ತು ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದೆ. ಆರ್​ಸಿಬಿ ಈ ಆವೃತ್ತಿಯಲ್ಲಿ ಒಟ್ಟು 157 ಸಿಕ್ಸರ್​ ಬಾರಿಸಿ ಅಗ್ರಸ್ಥಾನ ಪಡೆದಿತ್ತು. ಆದರೆ, ಇದೀಗ ಹೈದರಾಬಾದ್​ 160 ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯನ್ನು ತನ್ನ ಹೆಸರಿಗೆ ಬರೆದಿದೆ.

ಅತಿ ಹೆಚ್ಚು ಸಿಕ್ಸರ್​ ಬಾರಿಸಿದ 5 ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-160
ಸಿಕ್ಸರ್​, 2024

ಆರ್​ಸಿಬಿ-157 ಸಿಕ್ಸರ್​, 2024

ಚೆನ್ನೈ ಸೂಪರ್​ ಕಿಂಗ್ಸ್​-145 ಸಿಕ್ಸರ್​, 2018

ಸರ್ರೆ-144 (ಟಿ20 ಬ್ಲಾಸ್ಟ್​ 2013)

ಕೆಕೆಆರ್​-143 ಸಿಕ್ಸರ್​, 2019

ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್​


ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಹೈದರಾಬಾದ್​ಗೆ 4 ವಿಕೆಟ್​ ಜಯ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading

ಕ್ರೀಡೆ

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

SRH vs PBKS: ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

VISTARANEWS.COM


on

SRH vs PBKS
Koo

ಹೈದರಾಬಾದ್: ವಿರಾಟ್​ ಕೊಹ್ಲಿ(Virat Kohli) ಅವರು ಶನಿವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಆದರೆ ಈ ದಾಖಲೆ ಒಂದು ದಿನ ಕಳೆಯುವ ಮುನ್ನವೇ ಪತನಗೊಂಡಿದೆ. ಸನ್​ರೈಸರ್ಸ್ ಹೈದರಾಬಾದ್(SRH vs PBKS)​ ತಂಡದ ಯುವ ಆಟಗಾರ ಅಭಿಷೇಕ್​ ಶರ್ಮ(Abhishek Sharma) ಈ ದಾಖಲೆಯನ್ನು ಮರಿದಿದ್ದಾರೆ.

ಇಂದು(ಭಾನುವಾರ) ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಇದನ್ನೂ ಓದಿ PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading
Advertisement
Devara Fear Song Jr NTR Unleashes Terror In Sync
ಟಾಲಿವುಡ್6 mins ago

Devara Fear Song: ಜ್ಯೂನಿಯರ್‌ ಎನ್‌ಟಿಆರ್ ಬರ್ತ್‌ಡೇ: ʻದೇವರʼ ಫಿಯರ್ ಸಾಂಗ್ ಔಟ್‌!

Lok sabha Election 2024
ದೇಶ13 mins ago

Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

Healthy Diet
ಆರೋಗ್ಯ19 mins ago

Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

lr Shivarame gowda prajwal revanna case
ಕ್ರೈಂ39 mins ago

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Triple Talaq
ದೇಶ41 mins ago

Triple Talaq: ವಾಟ್ಸ್‌ಆ್ಯಪ್‌ ವಾಯ್ಸ್‌ ಮೆಸೇಜ್‌ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ; ದೂರು ದಾಖಲು

rave party electronic city
ಕ್ರೈಂ1 hour ago

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Lok Sabha Election 2024
ದೇಶ1 hour ago

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Job Alert
ಉದ್ಯೋಗ2 hours ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Lok Sabha Election
ದೇಶ2 hours ago

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Karnataka Weather Forecast
ಮಳೆ2 hours ago

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ18 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ19 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌