Aero India 2023 : ಏರೋ ಇಂಡಿಯಾದಲ್ಲಿ ಅಮೆರಿಕದ ಅತಿ ದೊಡ್ಡ ತಂಡ, ನೂತನ F-35 ಯುದ್ಧ ವಿಮಾನ ಪ್ರದರ್ಶನ - Vistara News

Aero India

Aero India 2023 : ಏರೋ ಇಂಡಿಯಾದಲ್ಲಿ ಅಮೆರಿಕದ ಅತಿ ದೊಡ್ಡ ತಂಡ, ನೂತನ F-35 ಯುದ್ಧ ವಿಮಾನ ಪ್ರದರ್ಶನ

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾದಲ್ಲಿ ಅಮೆರಿಕದ ಅತ್ಯಾಧುನಿಕ F-35 ಯುದ್ಧ (Aero India 2023) ವಿಮಾನಗಳು ಭಾಗವಹಿಸಿವೆ. ಜತೆಗೆ ಅಮೆರಿಕದ (Aero India 2023) ಅತಿ ದೊಡ್ಡ ತಂಡ ಬಂದಿಳಿದಿದೆ. ಇದು ಗಮನಾರ್ಹ.

VISTARANEWS.COM


on

F-35 Fighter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉಕ್ರೇನ್-ರಷ್ಯಾ ಸಮರ, ಗಡಿಯಲ್ಲಿ ಭಾರತದ ಜತೆಗೆ ಚೀನಾದ ಸಂಘರ್ಷ ಹಾಗೂ ಪಾಕಿಸ್ತಾನದಲ್ಲಿ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ( Aero India 2023) ಅಮೆರಿಕವು ಭಾರತದ ಜತೆಗೆ ತನ್ನ ಮೈತ್ರಿಯನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಏರೋ ಇಂಡಿಯಾದಲ್ಲಿ ಅಮೆರಿಕದ ಅತಿ ದೊಡ್ಡ ತಂಡ ಭಾಗವಹಿಸಿದ್ದು, 5ನೇ ಜನರೇಶನ್‌ನ F-35 ಯುದ್ಧ ವಿಮಾನವನ್ನೂ ಪ್ರದರ್ಶಿಸಿದೆ. ಇದು ಉಭಯ ರಾಷ್ಟ್ರಗಳ ರಕ್ಷಣಾ ಸಹಕಾರ ಕೂಡ ವೃದ್ಧಿಸುತ್ತಿರುವುದನ್ನು ಬಿಂಬಿಸಿದೆ. ರಷ್ಯಾ ಕೂಡ ಭಾರತಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ಷಣಾ ಸಾಧನಗಳನ್ನು ಪೂರೈಕೆ ಮಾಡುತ್ತಿದ್ದರೂ, ಇತ್ತೀಚಿನ ವರ್ಷಗಳಲ್ಲಿ ರಷ್ಯಾದಿಂದ ಶಸ್ತ್ರಾಸ್ತ್ರ ಆಮದು ತಗ್ಗಿದೆ ಎಂದು SIPRI ವರದಿ ತಿಳಿಸಿದೆ.

ಎಸ್‌ಐಪಿಆರ್‌ಐ ವರದಿಯ ಪ್ರಕಾರ 2012-16 ಮತ್ತು 2017-21ರ ಅವಧಿಯಲ್ಲಿ ರಷ್ಯಾದಿಂದ ಭಾರತದ ಶಸ್ತ್ರಾಸ್ತ್ರ ಆಮದಿನಲ್ಲಿ 47% ಇಳಿದಿತ್ತು. ಜಾಗತಿಕ ಶಸ್ತ್ರಾಸ್ತ್ರ ರಫ್ತು ಕೂಡ 24%ರಿಂದ 19%ಕ್ಕೆ ಕುಸಿದಿತ್ತು. ಇದೇ ಅವಧಿಯಲ್ಲಿ ಅಮೆರಿಕದಿಂದ ಭಾರತಕ್ಕೆ ಶಸ್ತ್ರಾಸ್ತ್ರಗಳ ರಫ್ತು 14% ಏರಿಕೆಯಾಗಿತ್ತು ಎಂದು ವರದಿ ತಿಳಿಸಿದೆ.

ಅಮೆರಿಕದಿಂದ ಬಂದಿಳಿದ ಅತ್ಯಾಧುನಿಕ ಯುದ್ಧ ವಿಮಾನಗಳು ಯಾವುವು?

ಅಮೆರಿಕ ಸೇನಾಪಡೆಯ ಅತ್ಯಾಧುನಿಕ ಯುದ್ಧ ವಿಮಾನಗಳಾದ ಮಲ್ಟಿರೋಲ್‌ ಎಫ್-‌35ಎ ಲೈಟ್ನಿಂಗ್‌ II ( Multirole F -35 A Lightning II) ಮತ್ತು ಎಫ್-‌35 ಎ ಜಾಯಿಂಟ್‌ ಸ್ಟ್ರೈಕ್‌ ಫೈಟರ್‌ (F-35 A Joint Strike Fighter) ಯುದ್ಧ ವಿಮಾನವು ಏರೋ ಇಂಡಿಯಾ ಶೋದಲ್ಲಿ ಭಾಗವಹಿಸಿವೆ. ಈ ಯುದ್ಧ ವಿಮಾನಗಳು ಅಮೆರಿಕದ ಫೈಟರ್‌ ಟೆಕ್ನಾಲಜಿಯ ಆಧುನಿಕತೆಯನ್ನು ಬಿಂಬಿಸುತ್ತವೆ. ಅಮೆರಿಕದ ಈ ಯುದ್ಧ ವಿಮಾನಗಳನ್ನು ಪ್ರದರ್ಶಿಸಲು ಏರೋ ಇಂಡಿಯಾ ಸೂಕ್ತ ವೇದಿಕೆಯಾಗಿದೆ ಎಂದು ಅಮೆರಿಕ ಸೇನಾಪಡೆಯ ಮೇಜರ್‌ ಜನರಲ್‌ ಜ್ಯೂಲಿಯಾನ್‌ ಸಿ ಚೀಟರ್‌ ತಿಳಿಸಿದ್ದಾರೆ.

ಏರೋ ಇಂಡಿಯಾದಲ್ಲಿ ಅಮೆರಿಕದ ಅತಿ ದೊಡ್ಡ ನಿಯೋಗ ಭಾಗವಹಿಸುತ್ತಿರುವುದಕ್ಕೆ ಹೆಮ್ಮೆ ಎನ್ನಿಸುತ್ತಿದೆ. ಇದು ಗೌರವಾರ್ಹ ಸಂಗತಿಯಾಗಿದೆ ಎಂದು ಅಮೆರಿಕ ದೂತಾವಾಸ ಕಚೇರಿಯ ಉಸ್ತುವಾರಿ ವಹಿಸಿರುವ ಎಲಿಜಬೆತ್‌ ಜಾನ್ಸ್‌ ಹೇಳಿದ್ದರು. ಭಾರತವು ತನ್ನ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸುತ್ತಿರುವ ಹೊತ್ತಿನಲ್ಲಿ ನಾವು ಅದರ ಆಯ್ಕೆಯ ಪಾಲುದಾರರಾಗಲು ಬಯಸುತ್ತೇವೆ ಎಂದು ಅವರು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Aero India

Aero india 2023 : ರಕ್ಷಣಾ ಇಲಾಖೆಯಿಂದ 32 ಕಂಪನಿಗಳ ಜತೆ ಒಪ್ಪಂದ

ಏರೋ ಇಂಡಿಯಾದಲ್ಲಿ (Aero india 2023) ರಕ್ಷಣಾ ವಲಯಕ್ಕೆ ಅಗತ್ಯಕ್ಕೆ ತಕ್ಕ ಹಾಗೆ ಒಂಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ.

VISTARANEWS.COM


on

Aero India
Koo

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ (Aero india 2023) 35 ಕಂಪನಿಗಳ ಜತೆ ರಕ್ಷಣಾ ಇಲಾಖೆಯು ಒಪ್ಪಂದ ಮಾಡಿಕೊಂಡಿದೆ. ಬಂಧನ್ ಕಾರ್ಯಕ್ರಮದಡಿಯಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. 2,930.98 ಕೋಟಿ ರೂಪಾಯಿ ಮೊತ್ತದ ಒಪ್ಪಂದ ನಡೆದಿದೆ. ಕಾರ್ಯಕ್ರಮದಲ್ಲಿ ಒಟ್ಟು 266 ಕಂಪನಿಗಳು ಪಾಲ್ಗೊಂಡಿದ್ದವು.

ಒಪ್ಪಂದಗಳಿಗೆ ಸಹಿ ಹಾಕಿದ ಕಂಪನಿಗಳು

ಬೆಲಾಟೆಕ್ಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್-630 ಕೋಟಿ, ಏಡಿನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್-500 ಕೋಟಿ, ಫಿಕ್ಸಲ್ ಸ್ಪೇಸ್ ಇಂಡಿಯಾ ಪ್ರೈ.ಲಿ-300 ಕೋಟಿ, ಡೈನಾಮೆಟಿಕ್ ಟೆಕ್ನಾಲಜೀಸ್-250 ಕೋಟಿ, ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ &ಏರೋಸ್ಪೇಸ್ ಟೆಕ್ನಾಲಜೀಸ್ , TESCOM-100 ಕೋಟಿ, ಡೆಲ್ಪ್ಟ್ (ಜೆ.ಕೆ.ಪೇಪರ್ ಲಿ.)-100 ಕೋಟಿ, ನೆಕ್ಸ್ಟ್ ಬಿಗ್ ಇನೋವೇಷನ್ ಲ್ಯಾಬ್ಸ್ ಲಿ.-100 ಕೋಟಿ, SASMOS HET ಟೆಕ್ನಾಲಜಿಸ್ ಲಿ.-75 ಕೋಟಿ, MS ವೇವ್ಸ್ ಮಷಿನ್-50 ಕೋಟಿ, ಭೂಮಿ ಎನ್ ಟೆಕ್ ಇಕ್ವಿಪ್ ಮೆಂಟ್ಸ್ ಪ್ರೈ.ಲಿ-50 ಕೋಟಿ, ಏರೋ ಪ್ಲಾಟಿನ್ ಟೆಕ್ನಾಲಜಿಸ್ ಪ್ರೈ.ಲಿ-30 ಕೋಟಿ, ಕಾಸ್ಟ್ ಕ್ರಾಪ್ಟ್-30 ಕೋಟಿ, ಡಕಂ ಏರೋಸ್ಪೇಸ್ ಟೆಕ್ನಾಲಜೀಸ್ ಪ್ರೈ.ಲಿ-25 ಕೋಟಿ, ಎಲ್ಡಾಸ್ ಟೆಕ್ನಾಲಜಿ-23 ಕೋಟಿ, ಟೆಕ್ಸಲ್ ಎಂಜಿನಿಯರ್ಸ್-20 ಕೋಟಿ.

ಇದನ್ನೂ ಓದಿ : Aero India 2023 : ಏರೋ ಇಂಡಿಯಾದಲ್ಲಿ ಅಮೆರಿಕದ ಅತಿ ದೊಡ್ಡ ತಂಡ, ನೂತನ F-35 ಯುದ್ಧ ವಿಮಾನ ಪ್ರದರ್ಶನ

ವೈಭವ್ ಎಂಟರ್ ಪ್ರೈಸಸ್-20 ಕೋಟಿ, ಹಿಮಾನ್ಸಿ ಥರ್ಮಲ್ ಸೊಲ್ಯೂಷನ್ಸ್-16.28 ಕೋಟಿ, ಎವಿಟಮ್ ಟೆಕ್ನಾಲಜೀಸ್ -16 ಕೋಟಿ, ಆರವ ಏರೋಸ್ಪೇಸ್-16 ಕೋಟಿ, SST ಕಟಿಂಗ್ ಟೂಲ್ಸ್-15 ಕೋಟಿ, ಆಲ್ಟೀಸ್ ಏರೋಸ್ಪೇಸ್ ಪ್ರೈ.ಲಿ-15 ಕೋಟಿ, ಉದಯ್ ಎಂಟರ್ ಪ್ರೈಸಸ್-15 ಕೋಟಿ, ಸೋಮಾ ಆಟೋಮೇಶನ್-12 ಕೋಟಿ, IIGP ವಾಲ್ವ್ ಟೆಕ್ನಾಲಜೀಸ್ ಪ್ರೈ.ಲಿ-12 ಕೋಟಿ, ಲವೀರಾ ಟೆಕ್ನಾಲಜಿ ಪ್ರೈ.ಲಿ-11 ಕೋಟಿ, ಗರುಡ ಏರೋಟೆಕ್-10 ಕೋಟಿ, G S ಗಿಯರ್ಸ್ ಪ್ರೈ.ಲಿ-8 ಕೋಟಿ, ಇನ್ಫಿನಿಟಿ ಏರೋಟೆಕ್-7 ಕೋಟಿ, ಡಟಾಕ್ಯೂ ಸರ್ವೀಸಸ್ ಪ್ರೈ.ಲಿ-2.70 ಕೋಟಿ, ಬುರ್ಜಿ ಏರೋಸ್ಪೇಸ್-2 ಕೋಟಿ, ಜನರಸ್ ಏರೋಸ್ಪೇಸ್ & ಇನ್ಪಾರ್ಮೇಶನ್ ಟೆಕ್ನಾಲಜಿ ಪ್ರೈ.ಲಿ-320 ಕೋಟಿ, ಏಸೋನಾಟೆಕ್ ಮ್ಯಾನಿಫ್ಯಾಕ್ಚರಿಂಗ್ ಪ್ರೈ.ಲಿ-150 ಕೋಟಿ.

Continue Reading

Aero India

Aero India 2023: ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

Aero India 2023: ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ದೇಶೀಯ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

Approval for release of funds for various infrastructure projects in state cabinet meeting
Koo

ಬೆಂಗಳೂರು: ರಕ್ಷಣಾ ವಲಯದಲ್ಲಿ (Aero India 2023) ಬಂಧನ್‌ ಎನ್ನುವುದು ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮಧ್ಯೆ ಇರುವ ದೀರ್ಘಕಾಲದ ಸಂಬಂಧವಾಗಿದ್ದು, ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65 ರಷ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಏರೋ ಇಂಡಿಯಾ 2023ರ ಬಂಧನ್ – ಒಪ್ಪಂದಗಳಿಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.

ರಕ್ಷಣೆ ಮತ್ತು ಏರೋಸ್ಪೇಸ್ ವಲಯವು ಸ್ಥಾಪಿತ ಕ್ಷೇತ್ರವಾಗಿದ್ದು, ಇದರಲ್ಲಿ ಅತ್ಯಂತ ಪರಿಣಿತರು ಮಾತ್ರ ಕೆಲಸವನ್ನು ಸಂಪೂರ್ಣಗೊಳಿಸಬಲ್ಲರು. ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದೊಂದಿಗೆ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ರಕ್ಷಣಾ ವಲಯವು ತೆರೆದುಕೊಂಡಿದೆ. ನಮ್ಮ ದೇಶದ ರಕ್ಷಣಾ ವ್ಯವಸ್ಥೆ ಬೇಡಿಕೆಯ ಶೇ.80 ರಷ್ಟನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದ ಕಾಲವೊಂದಿತ್ತು. ಆದರೆ, ಈಗ ಪ್ರಧಾನಿಗಳ ಮೇಕ್ ಇನ್ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ದೇಶದಲ್ಲಿಯೇ ತಯಾರಿಕೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ | Karnataka Budget: ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಬೇಕು ಪ್ರತ್ಯೇಕ ಅನುದಾನ: ಸಿಎಂಗೆ ಪ್ರೊ. ಎಂ.ಆರ್.‌ ದೊರೆಸ್ವಾಮಿ ಪತ್ರ

ನಮ್ಮ ಉತ್ಪಾದನೆ ಸಾಮರ್ಥ್ಯ ಅಂದುಕೊಂಡದ್ದಕ್ಕಿಂತ ಹೆಚ್ಚಿದೆ

ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ನಮ್ಮ ದೇಶದ ಉತ್ಪಾದನಾ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿವೆ. ಎಂಎಸ್ಎಂಇ ಕೂಡ ಇದನ್ನು ಉತ್ಪಾದನೆ ಮಾಡಬಲ್ಲುದಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ರಕ್ಷಣಾ ವಸ್ತುಗಳ ಉತ್ಪಾದನಾ ಸಂಸ್ಥೆಗಳು ಅತ್ಯುನ್ನತ ತಂತ್ರಜ್ಞಾನವನ್ನು ಹೊಂದಿದ್ದು, ಅತ್ಯಂತ ದಕ್ಷವಾಗಿ ಕಾರ್ಯನಿರ್ವಹಿಸಬಲ್ಲುದಾಗಿದೆ ಎಂದು ಹೇಳಿದರು.

ರಕ್ಷಣಾ ಕ್ಷೇತ್ರದಲ್ಲಿ ವಿಫುಲ ಅವಕಾಶ

ಉತ್ಪಾದನಾ ವಲಯದಲ್ಲಿ ಡೊಮೈನ್ ಬದಲಾವಣೆಯಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಿವೆ. ಆದ್ದರಿಂದ ನಾವು ಮಹತ್ವಾಕಾಂಕ್ಷೆಯಿಂದ ವೈಜ್ಞಾನಿಕವಾಗಿ ಯೋಚನೆ ಮಾಡಬೇಕಿದೆ. ಈ ಎಲ್ಲ ವಿಷಯಗಳನ್ನು ಬಂಧನ್ ಹೆಸರಲ್ಲಿ ನಾವು ಒಟ್ಟಿಗೆ ತಂದಿದ್ದೇವೆ. ಇಂದು ಸಹಿ ಆಗಿರುವ ಎಲ್ಲ ಒಪ್ಪಂದಗಳು ಭವಿಷ್ಯದ ಅಗತ್ಯ, ಬೆಳವಣಿಗೆ ಮತ್ತು ಸಾಮರ್ಥ್ಯ ವೃದ್ಧಿಗೆ ಸಾಕ್ಷಿಯಾಗಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ | Payment aggregator : ರಿಲಯನ್ಸ್‌, ಜೊಮ್ಯಾಟೊ ಸೇರಿ 32 ಕಂಪನಿಗಳಿಗೆ ಪೇಮೆಂಟ್‌ ಅಗ್ರಿಗೇಟರ್‌ ಲೈಸೆನ್ಸ್ ವಿತರಣೆ

32 ಒಪ್ಪಂದಗಳಿಗೆ ರಾಜ್ಯ ಸಹಿ

ಬೆಂಗಳೂರಿನಲ್ಲಿ ಏರೋ ಸ್ಪೇಸ್ ಪಾರ್ಕ್ ಸ್ಥಾಪನೆ ಮತ್ತು ಅದರ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಅಧಿಕಾರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರದ ಒಟ್ಟು ರಕ್ಷಣಾ ಉತ್ಪಾದನೆಯಲ್ಲಿ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗಿ ಸಂಸ್ಥೆಗಳು ಶೇ.65 ಪಾಲನ್ನು ಪೂರೈಸುತ್ತಿದೆ. 2900 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹೂಡಿಕೆಯ 32 ಒಪ್ಪಂದಗಳಿಗೆ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಸಹಿ ಹಾಕಿವೆ. ಈ ಏರೋ ಇಂಡಿಯಾ ಪ್ರದರ್ಶನ “ಟಾಕ್ ಆಫ್ ದಿ ಟೌನ್” ಆಗಿದೆ ಎಂದು ಸಿಎಂ ಹೇಳಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸರ್ಕಾರದ ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮಾನೆ, ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.

Continue Reading

Aero India

Aero India 2023: ಏರೋಸ್ಪೇಸ್ ವಲಯದಲ್ಲಿ ಕರ್ನಾಟಕ ನಂ.1 ಆಗಲು ಅರ್ಹ: ಸಿಎಂ ಬೊಮ್ಮಾಯಿ

ಏರೊ ಇಂಡಿಯಾ-2023ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.

VISTARANEWS.COM


on

CM Basavaraj Bommai says Karnataka deserves to be no.1 in aerospace sector:
Koo

ಬೆಂಗಳೂರು: ಏರೋಸ್ಪೇಸ್ (Aero India 2023) ವಲಯದಲ್ಲಿ ಲಂಡನ್ ಮತ್ತು ಸಿಂಗಾಪುರದ ನಂತರ ಕರ್ನಾಟಕ ರಾಜ್ಯವಿದ್ದು, ಕರ್ನಾಟಕ ನಂ.1 ಸ್ಥಾನಕ್ಕೇರಲು ಎಲ್ಲ ಅರ್ಹತೆ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಏರೊ ಇಂಡಿಯಾ-2023ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮಾತನಾಡಿ, ಬೆಂಗಳೂರು ಸತತ 14 ಬಾರಿ ಏರ್ ಶೋ ಏರ್ಪಡಿಸಿದೆ. ದೇಶದ ಯಾವುದೇ ರಾಜ್ಯ ಇಷ್ಟೊಂದು ಏರ್ ಶೋ ಏರ್ಪಡಿಸಿಲ್ಲ. ಈ ಬಾರಿ ಅತಿ ದೊಡ್ಡ ಶೋ, ಹೆಚ್ಚಿನ ಉದ್ಯಮಿಗಳು ಭಾಗವಹಿಸುತ್ತಿದ್ದು, ಹೆಚ್ಚಿನ ಪ್ರದರ್ಶನಗಳು ನಡೆಯುತ್ತಿದೆ ಎಂದರು.

ಬೆಂಗಳೂರಿನಲ್ಲಿ ಅಪಾರ ಅವಕಾಶಗಳು ಇವೆ. ಎಂಜಿನಿಯರ್‌ಗಳು, ತಂತ್ರಜ್ಞರ ನಿರಂತರ ಶ್ರಮದಿಂದ ಏರ್ ಶೋ ಯಶಸ್ವಿಯಾಗಿ ನಡೆಯುತ್ತಿದೆ. ನಮ್ಮ ಹಿರಿಯರು 1960ರಲ್ಲಿ ಇಲ್ಲಿ ಬಂಡವಾಳ ಹೂಡುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸ ತಂತ್ರಜ್ಞಾನ ಸಾಕಷ್ಟು ಬದಲಾವಣೆ ತಂದಿದೆ. ರಾಜ್ಯದ ಅಧಿಕಾರಿಗಳು ಯಶಸ್ಬಿಯಾಗಿ ಏರ್ ಶೋ ಆಯೋಜನೆ ಮಾಡಿದ್ದಾರೆ ಎಂದು ಅಭಿನಂದಿಸಿದರು.‌

ನಮ್ಮ ರಾಜ್ಯ ಯುವ ಪ್ರತಿಭಾವಂತ ಉದ್ಯಮಿಗಳು, ತಂತ್ರಜ್ಞರು, ಉದ್ಯಮಗಳು ಬೆಳೆಯಲು ಕಾರಣರಾಗಿದ್ದಾರೆ. ಯುವ ಪ್ರತಿಭಾವಂತರು ಇರುವುದರಿಂದ ಏರೊ ಸ್ಪೇಸ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಏರೊಸ್ಪೇಸ್ ನೀತಿ ರಾಜ್ಯದಲ್ಲಿದ್ದು, ಸಣ್ಣ ಕೈಗಾರಿಕೆಗಳು ಹಾಗೂ ಬೃಹತ್ ಉದ್ಯಮಗಳಿಗೆ ಸೂಕ್ತ ಅವಕಾಶಗಳಿವೆ. ನಾವು ಶೇ.65 ರಷ್ಟು ರಕ್ಷಣಾ ಪರಿಕರ ಉತ್ಪಾದನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಶೇ.70 ರಷ್ಟು ಉತ್ಪಾದನೆ ಮಾಡುತ್ತೇವೆ.
ಈಗಾಗಲೇ ಅನೇಕರು ಇಲ್ಲಿ ಬಂಡವಾಳ ಹೂಡಿದ್ದಾರೆ, ಇನ್ನು ಅನೇಕರು ಬಂಡವಾಳ ಹೂಡುವ ಇಚ್ಛೆ ಹೊಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Sevalal Jayanthi: ಸಂತ ಸೇವಾಲಾಲ್‌ ಮಹಾಮಠ ಪ್ರತಿಷ್ಠಾನಕ್ಕೆ ₹10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ

ಯುಎಸ್ ಕಾನ್ಸುಲೇಟ್ ರಾಯಭಾರಿ ಬೆಂಗಳೂರು ಏರೋ ಇಂಡಿಯಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಲ್ಲಿ ಉತ್ತಮ ಪರಿಸರ, ಆರ್ಥಿಕ ಪರಿಸ್ಥಿತಿಯಿದ್ದು, ನಮ್ಮ ಬೆಳವಣಿಗೆಯಲ್ಲಿ ನೀವು ಭಾಗಿದಾರರಾಗಿ ಎಂದು ಕರೆ ನೀಡಿದರು.

ಬೃಹತ್ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣಾ ಹಾಜರಿದ್ದರು.

Continue Reading

Aero India

Aero India 2023: ಭಾರತದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಹೂಡಿಕೆದಾರರಿಗೆ ಸರ್ಕಾರ ಆಹ್ವಾನ

ಭಾರತದಲ್ಲಿ ರಕ್ಷಣಾ ವಲಯದ ಉದ್ದಿಮೆಗೆ ಸರ್ಕಾರ ಉತ್ತೇಜನ ಮುಂದುವರಿಸಲಿದೆ. ಇದು ದೇಶವನ್ನು ಸ್ವಾವಲಂಬಿಯಾಗಿಸುವುದಲ್ಲದೆ, ಉದ್ಯೋಗ ಸೃಷ್ಟಿಗೆ ಕೂಡ ಸಹಕಾರಿ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Aero India 2023) ವಿವರಿಸಿದ್ದಾರೆ.

VISTARANEWS.COM


on

rajanath singh
Koo

ಬೆಂಗಳೂರು: ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ತೆರೆಯುವಂತೆ ಜಾಗತಿಕ ಮಟ್ಟದ ಹೂಡಿಕೆದಾರರು, ಉದ್ಯಮಿಗಳು, ನಾನಾ ಉತ್ಪನ್ನಗಳ ಮೂಲ ಉತ್ಪಾದಕರಿಗೆ (Global original equipment manufactures) ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಹ್ವಾನಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ-ಇಂಡಿಯಾ ಏರ್‌ ಶೋದ (Aero India 2023) ನೇಪಥ್ಯದಲ್ಲಿ ಬಹು ರಾಷ್ಟ್ರೀಯ ಕಂಪನಿಗಳ ಸಿಇಒಗಳನ್ನು ಅವರು ಭೇಟಿಯಾದರು.

ಜಾಗತಿಕ ಉತ್ಪಾದಕರು ಭಾರತದಲ್ಲಿ ಜಂಟಿಯಾಗಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸಬಹುದು. ಇಲ್ಲಿಂದಲೇ ಜಗತ್ತಿಗೆ ರಫ್ತು ಮಾಡಬಹುದು ಎಂದು ಅವರು ಆಹ್ವಾನಿಸಿದರು. ಜನರಲ್‌ ಆಟೋಮಿಕ್ಸ್‌, ಬೋಯಿಂಗ್‌, ಎಂಬ್ರೇರ್‌, ರಾಫೆಲ್‌ ಅಡ್ವಾನ್ಸ್‌ಡ್‌ ಡಿಫೆನ್ಸ್‌ ಸಿಸ್ಟಮ್ಸ್‌ ಸೇರಿದಂತೆ ಹಲವಾರು ಕಂಪನಿಗಳ ಮುಖ್ಯಸ್ಥರು ಈ ಸಂದರ್ಭ ಸಭೆಯಲ್ಲಿ ಭಾಗವಹಿಸಿದ್ದರು.

ಉದ್ದಿಮೆ ಸ್ಥಾಪಿಸುವವರಿಗೆ ಭೂಮಿ, ಮೂಲಸೌಕರ್ಯಕ್ಕೆ ತಗಲುವ ವೆಚ್ಚ, ಸರ್ಕಾರದ ರೀತಿ-ನೀತಿ, ಉತ್ತೇಜನ, ಮಾನವ ಸಂಪನ್ಮೂಲದ ಲಭ್ಯತೆ, ದೇಶೀಯ ರಕ್ಷಣಾ ವಲಯದ ಮಾರುಕಟ್ಟೆಯ ವಿವರಗಳನ್ನು ಸಚಿವರು ನೀಡಿದರು.

ಭಾರತವು ರಕ್ಷಣಾ ವಲಯದ ಉತ್ಪಾದನೆಯನ್ನು ಉತ್ತೇಜಿಸುತ್ತೆ. ಭಾರತ ಈ ವಲಯದಲ್ಲಿ ಸ್ವಾವಲಂಬಿಯಾಗಲು ಹಾಗೂ ಉದ್ಯೋಗ ಸೃಷ್ಟಿಗೆ ಇದು ಮಹತ್ತರ ಪಾತ್ರ ವಹಿಸಲಿದೆ ಎಂದರು. ರಕ್ಷಣಾ ಉದ್ಯಮ ಕಾರಿಡಾರ್‌ಗಳ ಸ್ಥಾಪನೆಗೆ ಉತ್ತರಪ್ರದೇಶ ಮತ್ತು ತಮಿಳುನಾಡು ಸರ್ಕಾರಗಳು ಘೋಷಿಸಿರುವ ಇನ್ಸೆಂಟಿವ್‌ಗಳನ್ನೂ ಸಚಿವರು ಪ್ರಸ್ತಾಪಿಸಿದರು.

ಸ್ವದೇಶಿ ಎಲ್‌ಸಿಎ ಎಂಜಿನ್‌ ಉತ್ಪಾದನೆಗೆ ಸಿದ್ಧತೆ: ಭಾರತವು ಶೀಘ್ರದಲ್ಲಿಯೇ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ಎಂಜಿನ್‌ಗಳನ್ನು ತಯಾರಿಸಲಿದೆ ಎಂದು (light combat aircraft engine) ಡಿಆರ್‌ ಡಿಒ ಮುಖ್ಯಸ್ಥ ಸಮೀರ್ ಕಾಮತ್‌ ತಿಳಿಸಿದ್ದಾರೆ.

Continue Reading
Advertisement
Ramana Avatara trailer out
ಸಿನಿಮಾ5 seconds ago

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

PM Narendra modi in Bagalakote for Election Campaign and here is Live telecast
Lok Sabha Election 20241 min ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Amith Shah
ಪ್ರಮುಖ ಸುದ್ದಿ16 mins ago

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Mahanati Show complaint against Gagana Contestant and Ramesh
ಕಿರುತೆರೆ26 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ41 mins ago

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

ದೇಶ51 mins ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ1 hour ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ2 hours ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್2 hours ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote for Election Campaign and here is Live telecast
Lok Sabha Election 20241 min ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202421 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202423 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202424 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಟ್ರೆಂಡಿಂಗ್‌