IPL 2023: ಐಪಿಎಲ್​ ಆರಂಭಕ್ಕೂ ಮುನ್ನ ಧೋನಿ ಬಳಗಕ್ಕೆ ಹಿನ್ನಡೆ; ಟೂರ್ನಿಯಿಂದ ಹೊರಬಿದ್ದ ಕಿವೀಸ್​ ವೇಗಿ! - Vistara News

ಕ್ರಿಕೆಟ್

IPL 2023: ಐಪಿಎಲ್​ ಆರಂಭಕ್ಕೂ ಮುನ್ನ ಧೋನಿ ಬಳಗಕ್ಕೆ ಹಿನ್ನಡೆ; ಟೂರ್ನಿಯಿಂದ ಹೊರಬಿದ್ದ ಕಿವೀಸ್​ ವೇಗಿ!

ಪಾದದ ನೋವಿನಿಂದ ಬಳಲುತ್ತಿರುವ ನ್ಯೂಜಿಲ್ಯಾಂಡ್​ ವೇಗಿ ಕೈಲ್ ಜಾಮೀಸನ್(kyle jamieson)​ ಈ ಬಾರಿಯ ಐಪಿಎಲ್​ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

IPL 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: 16ನೇ ಆವೃತ್ತಿಯ ಐಪಿಎಲ್(IPL 2023) ಟೂರ್ನಿ​ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್​ ಕಿಂಗ್ಸ್(CSK)​ ತಂಡಕ್ಕೆ ಆಘಾತವೊಂದು ಎದುರಾಗಿದೆ. ತಂಡದ ಸ್ಟಾರ್​ ಬೌಲರ್​, ನ್ಯೂಜಿಲ್ಯಾಂಡ್​ನ ಕೈಲ್ ಜಾಮೀಸನ್(kyle jamieson)​ ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಕಳೆದ ಬಾರಿ ಆರ್​ಸಿಬಿ ಪರ ಆಡಿದ್ದ ಕೈಲ್​ ಜಾಮೀಸನ್​ ಅವರನ್ನು ಈ ಬಾರಿ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ಬರೋಬ್ಬರಿ 1 ಕೋಟಿ ರೂ. ನೀಡಿ ಖರೀದಿಸಿತು. ಇದೀಗ ಅವರು ಗಾಯಗೊಂಡಿರುವ ಕಾರಣ ತಂಡಕ್ಕೆ ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಗಂಭೀರವಾಗಿ ಗಾಯಗೊಂಡಿರುವ ಜಾಮೀಸನ್​ ತಂಡದಿಂದ ಹೊರಗುಳಿದಿದ್ದಾರೆ. ಇದೇ ಕಾರಣದಿಂದಾಗಿ ಅವರು ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ಜೂನ್​ ತಿಂಗಳಲ್ಲಿ ಗಾಯಗೊಂಡಿದ್ದ ಜಾಮೀಸನ್​ ಇತ್ತೀಚೆಗಷ್ಟೇ ತಂಡಕ್ಕೆ ಮರಳಿದ್ದರು.

ಇದನ್ನೂ ಓದಿ IPL 2023 | ಮತ್ತೆ ಕನ್ನಡಿಗನಿಗೇ ಕೋಚಿಂಗ್​ ಪಟ್ಟ ಕಟ್ಟಿದ ಐಪಿಎಲ್​ನ ಪಂಜಾಬ್​ ಕಿಂಗ್ಸ್​ ತಂಡ!

ಇದೀಗ ಮತ್ತೆ ಪಾದ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ವೇಳೆ ಪಾದದ ಮೂಳೆಯು ಮುರಿತಕ್ಕೊಳಗಾಗಿರುವುದು ಕಂಡು ಬಂದಿದೆ. ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಜತೆಗೆ ಐಪಿಎಲ್​ಗೂ ಅನುಮಾನ ಎಂದು ತಿಳಿದು ಬಂದಿದ್ದು, ಸದ್ಯದಲ್ಲೇ ಅವರ ಬದಲಿಗೆ ಬೇರೆ ಆಟಗಾರನನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

SRH vs RR Qualifier 2: ಕ್ವಾಲಿಫೈಯರ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ಬಲಾಬಲ ಹೇಗಿದೆ?

SRH vs RR Qualifier 2: ಆಸ್ಟ್ರೇಲಿಯಾದ ಎಡಗೈ ಬ್ಯಾಟರ್​ ಟ್ರಾವಿಸ್​ ಹೆಡ್ ಕಳೆದ ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ ವಿಕೆಟ್​ ಕಳೆದುಕೊಂಡಿದ್ದರು. ಅದು ಕ್ಲೀನ್​ ಬೌಲ್ಡ್​ ಆಗುವ ಮೂಲಕ. ಇದೀಗ ಮಹತ್ವದ ಪಂದ್ಯದಲ್ಲಿ ಅವರು ಆಡದೇ ಹೋದರೆ ಹೈದರಾಬಾದ್​ಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಲಿದೆ. ಹೀಗಾಗಿ ಅವರು ಬ್ಯಾಟಿಂಗ್​ ಫಾರ್ಮ್​ಗೆ ಮರಳಬೇಕಾದ ಅನಿವಾರ್ಯವಿದೆ

VISTARANEWS.COM


on

SRH vs RR Qualifier 2
Koo

ಚೆನ್ನೈ: 17ನೇ ಆವೃತ್ತಿಯ ಐಪಿಎಲ್​ನ(IPL 2024) ದ್ವಿತೀಯ ಕ್ವಾಲಿಫೈಯರ್(SRH vs RR Qualifier 2)​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ರಾಜಸ್ಥಾನ್(Rajasthan Royals)​ ಮತ್ತು ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡಗಳು ಈ ಪಂದ್ಯದಲ್ಲಿ ಕಾದಾಟ ನಡೆಸಲಿದೆ. ಇತ್ತಂಡಗಳ ಈ ಮುಖಾಮುಖಿಗೆ ಚೆನ್ನೈಯ ಎಂ.ಎ ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ. ಪಂದ್ಯಕ್ಕೆ ಯಾವುದೇ ಮಳೆ ಭೀತಿ ಇಲ್ಲದ ಕಾರಣ ಪಂದ್ಯವನ್ನು ಅಭಿಮಾನಿಗಳು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು.

ಸಿಡಿಯಬೇಕಿದೆ ಹೆಡ್​


ಲೀಗ್​ ಹಂತದ ಆರಂಭದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಮೂರು ಬಾರಿ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಆಸ್ಟ್ರೇಲಿಯಾದ ಎಡಗೈ ಬ್ಯಾಟರ್​ ಟ್ರಾವಿಸ್​ ಹೆಡ್ ಕಳೆದ ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ ವಿಕೆಟ್​ ಕಳೆದುಕೊಂಡಿದ್ದರು. ಅದು ಕ್ಲೀನ್​ ಬೌಲ್ಡ್​ ಆಗುವ ಮೂಲಕ. ಇದೀಗ ಮಹತ್ವದ ಪಂದ್ಯದಲ್ಲಿ ಅವರು ಆಡದೇ ಹೋದರೆ ಹೈದರಾಬಾದ್​ಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಲಿದೆ. ಹೀಗಾಗಿ ಅವರು ಬ್ಯಾಟಿಂಗ್​ ಫಾರ್ಮ್​ಗೆ ಮರಳಬೇಕಾದ ಅನಿವಾರ್ಯವಿದೆ. ​25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ ಬ್ಯಾಟಿಂಗ್​ ಮೇಲು ತಂಡ ಹೆಚ್ಚಿನ ನಂಬಿಕೆ ಇರಿಸಿದೆ. ಅಭಿಷೇಕ್​ ಶರ್ಮ ಈ ಬಾರಿಯ ಕೂಟದಲ್ಲಿ 41 ಸಿಕ್ಸರ್​ ಬಾರಿಸಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಬೌಲಿಂಗ್​ನಲ್ಲಿ ನಾಯಕ ಪ್ಯಾಟ್​ ಕಮಿನ್ಸ್​, ಭುವನೇಶ್ವರ್​ ಕುಮಾರ್​, ಟಿ. ನಟರಾಜನ್​ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

ಹೈದರಾಬಾದ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2013ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2016ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಚಾಂಪಿಯನ್‌

2017ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2018ರಲ್ಲಿ ಮೊದಲ ಸ್ಥಾನ. ರನ್ನರ್ ಅಪ್‌

2019ರಲ್ಲಿ 4ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2020ರಲ್ಲಿ 3ನೇ ಸ್ಥಾನ. ಕ್ವಾಲಿಫೈಯರ್‌-2ನಲ್ಲಿ ಸೋಲು

ಇದನ್ನೂ ಓದಿ RR vs SRH: ಹೈದರಾಬಾದ್-ರಾಜಸ್ಥಾನ್ ನಡುವಣ ಇಂದಿನ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇದೆಯೇ?

ರಾಜಸ್ಥಾನ್​ ಬೌಲಿಂಗ್​ ಬಲಿಷ್ಠ


ರಾಜಸ್ಥಾನ್​ ತಂಡದ ಬ್ಯಾಟಿಂಗ್​ ಅಷ್ಟಾಗಿ ಬಲಿಷ್ಠವಿಲ್ಲದಿದ್ದರೂ ಕೂಡ ಸಂಘಟಿತ ಪ್ರದರ್ಶನದಿಂದಾಗಿ ಪಂದ್ಯ ಗೆಲ್ಲುತ್ತಿದೆ. ಬೌಲಿಂಗ್ ವಿಭಾಗ ಅತ್ಯಂತ ಬಲಿಷ್ಠವಾಗಿದೆ. ಯಜುವೇಂದ್ರ ಚಹಲ್​, ಆರ್​ ಅಶ್ವಿನ್​, ಟ್ರೆಂಟ್​ ಬೌಲ್ಟ್​ ಘಾತಕ ಬೌಲಿಂಗ್​ ದಾಳಿಗೆ ಹೆಸರುವಾಸಿ. ಯಾವುದೇ ಕ್ಷಣದಲ್ಲಿಯೂ ಸತತವಾಗಿ ವಿಕೆಟ್​ ಕಿತ್ತು. ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಇವರಿಗಿದೆ.

ರಾಜಸ್ಥಾನ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2008ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಚಾಂಪಿಯನ್​

2013ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2015ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2018ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2022ರಲ್ಲಿ ಲೀಗ್​ನಲ್ಲಿ 2ನೇ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

ಉಭಯ ತಂಡಗಳು ಇದುವರೆಗಿನ ಐಪಿಎಲ್ ಪಂದ್ಯದಲ್ಲಿ ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಹೈದರಾಬಾದ್​ 10, ರಾಜಸ್ಥಾನ್​ 9 ಪಂದ್ಯಗಳನ್ನು ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹೈದರಾಬಾದ್​ ಬಲಿಷ್ಠವಾಗಿದೆ. ಜತೆಗೆ ಈ ಬಾರಿ ತಂಡ ಬಲಿಷ್ಠವಾಗಿಯೂ ಗೋಚರಿಸಿದೆ.

Continue Reading

ಕ್ರೀಡೆ

India Head Coach: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ ಎಂದ ಆರ್​ಸಿಬಿ ಕೋಚ್​

India Head Coach: ಆರ್​ಸಿಬಿ ತಂಡದ ಮುಖ್ಯ ಕೋಚ್​, ಜಿಂಬಾಬ್ವೆಯ ಮಾಜಿ ನಾಯಕ ಆ್ಯಂಡಿ ಫ್ಲವರ್‌(Andy Flower) ಅವರು ಭಾರತ ಕ್ರಿಕೆಟ್​ ತಂಡದ ಮುಖ್ಯ ಕೋಚ್​ ಹುದ್ದೆಗೆ(India Head Coach) ಅರ್ಜಿ ಸಲ್ಲಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

India Head Coach
Koo

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ತಂಡಗಳಿಗೆ ಕೋಚಿಂಗ್‌ ಮಾಡಿದ ಅನುಭವ ಹೊಂದಿರುವ, ಐಪಿಎಲ್​ನಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿದ್ದ, ಪ್ರಸ್ತುತ ಆರ್​ಸಿಬಿ ತಂಡದ ಮುಖ್ಯ ಕೋಚ್​, ಜಿಂಬಾಬ್ವೆಯ ಮಾಜಿ ನಾಯಕ ಆ್ಯಂಡಿ ಫ್ಲವರ್‌(Andy Flower) ಅವರು ಭಾರತ ಕ್ರಿಕೆಟ್​ ತಂಡದ ಮುಖ್ಯ ಕೋಚ್​ ಹುದ್ದೆಗೆ(India Head Coach) ಅರ್ಜಿ ಸಲ್ಲಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧ ಐಪಿಎಲ್​ ಎಲಿಮಿನೇಟರ್‌ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಂಡಿತ್ತು. ಸೋಲಿನ ಬಳಿಕ ಮಾತನಾಡಿದ ಫ್ಲವರ್​, ನಾನು ಭಾರತ ತಂಡದ ಕೋಚ್​ ಹುದ್ದಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಕೆಲವರು ನನ್ನಲ್ಲಿ ಪ್ರಶ್ನೆ ಮಾಡಿದ್ದಾರೆ. ಆದರೆ ನಾನು ಯಾವುದೇ ಅರ್ಜಿ ಸಲ್ಲಿಸಿಲ್ಲ. ಸದ್ಯ ನಾನು ಫ್ರಾಂಚೈಸಿ ಕ್ರಿಕೆಟ್​ನಲ್ಲಿಯೇ ಮುಂದುವರಿಯಲು ಬಯಸಿದ್ದೇನೆ ಎಂದು ಹೇಳಿದರು. ಈ ಮೂಲಕ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಅನುಮಾನಕ್ಕೆ ತೆರೆ ಎಳೆದರು.

“ನಾನು ಫ್ರಾಂಚೈಸ್ ಲೀಗ್‌ನಲ್ಲಿ ಪಾಲ್ಗೊಳ್ಳುವಿಕೆಯಿಂದ ಸಂತೋಷವಾಗಿದ್ದೇನೆ. ನಾನು ಅದನ್ನು ನಿಜವಾಗಿಯೂ ಆನಂದಿಸುತ್ತಿದ್ದೇನೆ. ಇದು ಆಕರ್ಷಕ ವಿಷಯವಾಗಿದೆ ಮತ್ತು ನಾನು ಕೆಲವು ಅದ್ಭುತ ಸಂಸ್ಥೆಗಳೊಂದಿಗೆ ಕೆಲಸ ಮಾಡಿದ್ದೇನೆ ಮತ್ತು ಈ ಸಮಯದಲ್ಲಿ ನಾನು ಸಂತೋಷವಾಗಿದ್ದೇನೆ” ಎಂದು ಹೇಳಿದರು.

ಗುರುವಾರವಷ್ಟೇ ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್​ ಕೂಡ ತಾನು ಭಾರತ ತಂಡದ ಕೋಚ್​ ಆಗಲು ಆಸಕ್ತಿ ಹೊಂದಿಲ್ಲ. ಕೋಚ್​ ಹುದ್ದಗೆ ಅರ್ಜಿಯೂ ಸಲ್ಲಿಸಲ್ಲ ಎಂದು ಹೇಳಿದ್ದರು. ಇದೀಗ ಫ್ಲವರ್​ ಕೂಡ ಪಾಂಟಿಂಗ್​ ನಿಲುವನ್ನೇ ಹೊಂದಿದ್ದಾರೆ. ವಿವಿಎಸ್​ ಲಕ್ಷ್ಮಣ್​ ಕೂಡ ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಕೂಡ ಭಾರತ ತಂಡದ ಕೋಚಿಂಗ್​ ಬಗ್ಗೆ ಆಸಕ್ತರಾಗಿದ್ದಾರೆ. ಐಪಿಎಲ್​ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದರು.

Continue Reading

ಕ್ರೀಡೆ

Hardik Pandya & Natasa Stankovic: ಹಾರ್ದಿಕ್​ ಪಾಂಡ್ಯಗೆ ಕೈ ಕೊಟ್ಟರೇ ಪತ್ನಿ ನತಾಶಾ!

Hardik Pandya & Natasa Stankovic: ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು.

VISTARANEWS.COM


on

Hardik Pandya & Natasa Stankovic
Koo

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿಗೆ ಸಜ್ಜಾಗುತ್ತಿರುವಾಗಲೇ ಟೀಮ್​ ಇಂಡಿಯಾದ ಉಪನಾಯಕ, ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರ ಖಾಸಗಿ ಬದುಕಿನಲ್ಲಿ ಬಿರುಕೊಂದು ಮೂಡಿದಂತಿದೆ. ಹೌದು, ಅವರ ಪತ್ನಿ ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರು ಪಾಂಡ್ಯ(Hardik Pandya & Natasa Stankovic) ಅವರಿಂದ ದೂರವಾಗಲು ಬಯಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.


ಅಂದು ಗೌನ್‌ ರೀತಿಯ ಬಿಳಿ ಉಡುಗೆಯನ್ನುಟ್ಟ ನತಾಶಾ ಮತ್ತು ಕಪ್ಪು ಸೂಟ್‌ನಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯಾ ವಿವಾಹ ವೇದಿಕೆಯ ಕಡೆ ಡ್ಯಾನ್ಸ್‌ ಮಾಡಿಕೊಂಡು ಬರುವ ವಿಡಿಯೋವೊಂದು ಭರ್ಜರಿ ಸದ್ದು ಮಾಡಿತ್ತು. ಇದೀಗ ಜೋಡಿ ಬೇರೆಯಾಗುತ್ತಿದ್ದಾರೆ ಎನ್ನಲಾಗಿದೆ. ಈ ಅನುಮಾನ ಹುಟ್ಟಿಕೊಳ್ಳಲು ಕಾರಣವೂ ಇದೆ.


ಇದನ್ನೂ ಓದಿ Hardik Pandya : ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್​​ನಲ್ಲಿ ಮತ್ತೆ ವಿಫಲ; ಬೆಂಡೆತ್ತಿದ ಅಭಿಮಾನಿಗಳು

ಹಾರ್ದಿಕ್​ ಪಾಂಡ್ಯ ಕಳೆದ 2 ಆವೃತ್ತಿಯಲ್ಲಿ ಗುಜರಾತ್​ ಟೈಟಾನ್ಸ್​ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಪ್ರತಿ ಪಂದ್ಯದಲ್ಲಿಯೂ ನತಾಶಾ ಸ್ಟೇಡಿಯಂಗೆ ಬಂದು ಗಂಡನಿಗೆ ಬೆಂಬಲ ಸೂಚಿಸಿದ್ದರು. ಆದರೆ ಈ ಬಾರಿ ಮುಂಬೈ ತಂಡವನ್ನು ಮುನ್ನಡೆಸಿ ವೇಳೆ ಒಮ್ಮೆಯೂ ಕೂಡ ನತಾಶಾ ಪಂದ್ಯ ನೋಡಲು ಸ್ಟೇಡಿಯಂಗೆ ಬಂದಿರಲಿಲ್ಲ. ಇದೀಗ ನತಾಶಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಮ್ಮ ಹೆಸರನ್ನು ಕೂಡ ಬದಲಿಸಿದ್ದಾರೆ ಹೀಗಾಗಿ ಈ ಜೋಡಿ ಬೇರ್ಪಡಲಿದ್ದಾರೆ ಎನ್ನಲಾಗಿದೆ.


ಹೌದು, ನತಾಶಾ ಸ್ಟಾಂಕೋವಿಕ್ ಪಾಂಡ್ಯ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಹೆಸರನ್ನು ಹೊಂದಿದ್ದರು. ಆದರೆ, ಇದೀಗ ಪಾಂಡ್ಯ ಅವರ ಹೆಸರನ್ನು ತೆಗೆದುಹಾಕಿದ್ದಾರೆ. ಮಾರ್ಚ್ 4 ರಂದು ನತಾಶಾ ಅವರ ಹುಟ್ಟುಹಬ್ಬವಿತ್ತು ಮತ್ತು ಆ ದಿನ ಹಾರ್ದಿಕ್ ಕೂಡ ಯಾವುದೇ ಪೋಸ್ಟ್ ಹಾಕಿಲ್ಲ. ನತಾಶಾ ಅವರು ಅಗಸ್ತ್ಯನೊಂದಿಗೆ ಇರುವ ಪೋಸ್ಟ್ ಹೊರತುಪಡಿಸಿ ತನ್ನ ಮತ್ತು ಹಾರ್ದಿಕ್ ಜತೆಗಿರುವ ಇತ್ತೀಚಿನ ಎಲ್ಲ ಪೋಸ್ಟ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಹಾರ್ದಿಕ್ ಮತ್ತು ನತಾಶಾ ನಡುವೆ ಬಿರುಕು ಮೂಡಿರುವುದು ನಿಜ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.


ರೋಹಿತ್ ಶರ್ಮಾರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಿ ತಾವೇ ತಂಡ ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಅಭಿಮಾನಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಜತೆಗೆ ಪಾಂಡ್ಯ ಕೆಟ್ಟ ನಾಯಕತ್ವದಿಂದ ಮುಂಬೈ ಹಿಂದೆದು ಕಾಣದ ಘೋರ ವೈಫಲ್ಯ ಕಂಡಿತ್ತು ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಈ ಬಾರಿ ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಿಯಾಯಿತು.

Continue Reading

ಕ್ರೀಡೆ

RR vs SRH: ಹೈದರಾಬಾದ್-ರಾಜಸ್ಥಾನ್ ನಡುವಣ ಇಂದಿನ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇದೆಯೇ?

RR vs SRH: ಈ ಬಾರಿಯ ಲೀಗ್​ನಲ್ಲಿ ಇತ್ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಅತ್ಯಂತ ರೋಚವಾಗಿ ಸಾಗಿದ ಈ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಭುವನೇಶ್ವರ್​ ಕುಮಾರ್​ ಅಂತಿಮ ಎಸೆತದಲ್ಲಿ ರೋಮ್ಮನ್​ ಪೋವೆಲ್​ ಅವರನ್ನು ಎಲ್​ಬಿಡ್ಲ್ಯು ಮಾಡುವ ಮೂಲಕ ಈ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು

VISTARANEWS.COM


on

RR vs SRH
Koo

ಚೆನ್ನೈ: ಕೆಕೆಆರ್​ ವಿರುದ್ಧದ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಸೋಲು ಕಂಡ ಸನ್​ರೈಸರ್ಸ್​ ಹೈದರಾಬಾದ್(RR vs SRH)​ ಮತ್ತು ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಗೆಲುವು ಕಂಡ ರಾಜಸ್ಥಾನ್​ ರಾಯಲ್ಸ್​ ತಂಡಗಳು ಇಂದು ನಡೆಯುವ ದ್ವಿತೀಯ ಕ್ವಾಲಿಫೈಯರ್(SRH Vs RR Qualifier 2)​ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಯಾರೇ ಗೆದ್ದರೂ ಕೂಡ ಇದೇ ಮೈದಾನದಲ್ಲಿ ಭಾನುವಾರ ನಡೆಯುವ ಫೈನಲ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿದೆ. ಈ ತಂಡ ಯಾವುದು ಎನ್ನುವುದು ಇಂದಿನ ಪಂದ್ಯದ ಕುತೂಹಲ.

ಹವಾಮಾನ ವರದಿ


ಚೆನ್ನೈನಲ್ಲಿ(MA Chidambaram Stadium Weather Report) ಇಂದು ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್​​ ಮತ್ತು ರಾತ್ರಿಯಲ್ಲಿ ಕನಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿದೆ. ಸಮುದ್ರ ಭಾಗದಲ್ಲಿ ಈ ಸ್ಟೇಡಿಯಂ ಇರುವ ಕಾರಣ ರಾತ್ರಿ ಇಲ್ಲಿ ಮಂಜು ಕೂಡ ಬೀಳಲಿದೆ. ಪಂದ್ಯಕ್ಕೆ ಯಾವುದೇ ಮಳೆಯ ಭೀತಿ ಇಲ್ಲ. ಸಂಪೂರ್ಣವಾಗಿ ಪಂದ್ಯ ಸಾಗಲಿದೆ.


ಒಂದೊಮ್ಮೆ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾದರೆ 120 ನಿಮಿಷಗಳ (2 ಗಂಟೆ) ಅವಧಿಗೆ ಪಂದ್ಯವನ್ನು ವಿಸ್ತರಿಸಬಹುದಾಗಿದೆ. ಆಗ 9.40ಕ್ಕೆ ಪಂದ್ಯ ಆರಂಭವಾಗುವುದಿದ್ದರೂ ಓವರ್‌ಗಳಲ್ಲಿ ಯಾವುದೇ ಕಡಿತ ಇರುವುದಿಲ್ಲ. ಸ್ಪಷ್ಟ ಫ‌ಲಿತಾಂಶಕ್ಕೆ ತಲಾ 5 ಓವರ್‌ಗಳ ಆಟ ನಡೆಯಬೇಕಿದೆ. ಹೆಚ್ಚುವರಿ ಅವಧಿಯಲ್ಲೂ ಇದು ಸಾಧ್ಯವಾಗದೇ ಹೋದರೆ ಲೀಗ್‌ ಹಂತದ ಅಂಕಪಟ್ಟಿಯಲ್ಲಿ ಮೇಲಿದ್ದ ತಂಡವನ್ನು ಜಯಶಾಲಿ ಎಂದು ಘೋಷಿಸಲಾಗುತ್ತದೆ. ಇದರ ಲಾಭ ಸನ್​ರೈಸರ್ಸ್​ ಹೈದರಾಬಾದ್​ ತಂಡಕ್ಕೆ ಸಿಗಲಿದೆ. ಹೈದರಾಬಾದ್​ ತಂಡ ಲೀಗ್​ ಹಂತದಲ್ಲಿ ದ್ವಿತೀಯ ಸ್ಥಾನಿಯಾಗಿತ್ತು.

ಇದನ್ನೂ ಓದಿ IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

ಬಲಾಬಲ


ಉಭಯ ತಂಡಗಳು ಇದುವರೆಗಿನ ಐಪಿಎಲ್ ಪಂದ್ಯದಲ್ಲಿ ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಹೈದರಾಬಾದ್​ 10, ರಾಜಸ್ಥಾನ್​ 9 ಪಂದ್ಯಗಳನ್ನು ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹೈದರಾಬಾದ್​ ಬಲಿಷ್ಠವಾಗಿದೆ. ಜತೆಗೆ ಈ ಬಾರಿ ತಂಡ ಬಲಿಷ್ಠವಾಗಿಯೂ ಗೋಚರಿಸಿದೆ.

ಲೀಗ್​ನಲ್ಲಿ 1 ರನ್​ ಗೆಲುವು


ಈ ಬಾರಿಯ ಲೀಗ್​ನಲ್ಲಿ ಇತ್ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಅತ್ಯಂತ ರೋಚವಾಗಿ ಸಾಗಿದ ಈ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಭುವನೇಶ್ವರ್​ ಕುಮಾರ್​ ಅಂತಿಮ ಎಸೆತದಲ್ಲಿ ರೋಮ್ಮನ್​ ಪೋವೆಲ್​ ಅವರನ್ನು ಎಲ್​ಬಿಡ್ಲ್ಯು ಮಾಡುವ ಮೂಲಕ ಈ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಈ ಸೋಲಿಗೆ ರಾಜಸ್ಥಾನ್​ ಕ್ವಾಲಿಫೈಯರ್​ ಪಂದ್ಯದಲ್ಲಿ ಸೇಡು ತೀರಿಸಲು ಪಣ ತೊಟ್ಟಿದೆ.

ಪಿಚ್​ ರಿಪೋರ್ಟ್​


ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು. ಹೀಗಾಗಿ ಪಿಚ್​ ವರ್ತನೆಯನ್ನು ಸ್ಪಷ್ಟವಾಗಿ ಹೇಳುವುದು ಕೊಂಚ ಕಷ್ಟವಾಗಿದೆ. ಮಂಜಿನ ಕಾಟ ಇರುವ ಕಾರಣ ಟಾಸ್‌ ಗೆಲ್ಲುವ ತಂಡ ಬೌಲಿಂಗ್‌ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.

Continue Reading
Advertisement
Crew on OTT
ಸಿನಿಮಾ2 mins ago

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

Soundarya Jagadish Cheating by soundarya Constructions Business Partners
ಬೆಂಗಳೂರು2 mins ago

Soundarya Jagadish : ಪಾರ್ಟ್ನರ್ಸ್ ದೋಖಾಕ್ಕೆ 60 ಕೋಟಿ ರೂ. ನಷ್ಟ ; ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಬಯಲಾಯ್ತು ಸತ್ಯ

Fashion Show news
ಫ್ಯಾಷನ್2 mins ago

Fashion Show News: ಬಿಎಂಎಸ್‌ ಕಾಲೇಜಿನಲ್ಲಿ ನೋಡುಗರನ್ನು ಸೆಳೆದ ವಿದ್ಯಾರ್ಥಿಗಳ ಫ್ಯಾಷನ್‌ ಶೋ

Teacher
ವಿದೇಶ22 mins ago

17 ವರ್ಷದ ವಿದ್ಯಾರ್ಥಿಯ ಜತೆ 30 ಸಲ ಸೆಕ್ಸ್‌ ಮಾಡಿದ ಶಿಕ್ಷಕಿ; ಮುಂದೇನಾಯ್ತು ಅನ್ನೋದೇ ರೋಚಕ!

Travel Tips
ಪ್ರವಾಸ32 mins ago

Travel Tips: ಪ್ರವಾಸಪ್ರಿಯರೇ, ನಿಮ್ಮ ವಿಮಾನ ಪ್ರಯಾಣ ಆರಾಮದಾಯಕವಾಗಬೇಕಿದ್ದರೆ ಈ ಟಿಪ್ಸ್‌‌ ಪಾಲಿಸಿ!

SRH vs RR Qualifier 2
ಕ್ರೀಡೆ38 mins ago

SRH vs RR Qualifier 2: ಕ್ವಾಲಿಫೈಯರ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ಬಲಾಬಲ ಹೇಗಿದೆ?

Road Accident
ಕರ್ನಾಟಕ47 mins ago

Road Accident: ಮೂಡಿಗೆರೆಯಲ್ಲಿ ಮೆಸ್ಕಾಂ ಲಾರಿ-ಓಮ್ನಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಕ್ರೈಂ48 mins ago

Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Rameshwaram Cafe
ಪ್ರಮುಖ ಸುದ್ದಿ49 mins ago

Rameshwaram Cafe: ನಮ್ಮ ರೆಸ್ಟೋರೆಂಟ್‌ನಲ್ಲಿ ಜಿರಳೆ ಇರಲಿಲ್ಲ, ಕಳಪೆ ಆಹಾರ ಬಳಸಿಲ್ಲ; ರಾಮೇಶ್ವರಂ ಕೆಫೆ ಸ್ಪಷ್ಟನೆ

RBI Dividend
ದೇಶ1 hour ago

RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌