ವಿಕ್ರಮ್ ಸಕ್ಸಸ್‌‌, ಕಮಲ್‌ ಹಾಸನ್‌ಗೆ ಮೆಗಾಸ್ಟಾರ್ ಚಿರಂಜೀವಿ ಸನ್ಮಾನ - Vistara News

ಕಾಲಿವುಡ್

ವಿಕ್ರಮ್ ಸಕ್ಸಸ್‌‌, ಕಮಲ್‌ ಹಾಸನ್‌ಗೆ ಮೆಗಾಸ್ಟಾರ್ ಚಿರಂಜೀವಿ ಸನ್ಮಾನ

ಆತ್ಮೀಯ ಗೆಳೆಯ ಕಮಲ್‌ ಹಾಸನ್‌ ಅವರ ಯಶಸ್ಸನ್ನು ಕಂಡು ಖುಷಿಯಿಂದ ಸನ್ಮಾನಿಸಿ, ಶುಭ ಕೋರಿದ ಮೆಗಾಸ್ಟಾರ್‌ ಚಿರಂಜೀವಿ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕಮಲ್‌ ಹಾಸನ್‌ ಅಭಿನಯದ ‘ವಿಕ್ರಮ್’ ಚಿತ್ರವು ಇಂಗ್ಲೆಂಡ್‌ನಲ್ಲಿ ಸಾರ್ವಕಾಲಿಕ ಅತಿ ಹೆಚ್ಚಿನ ಗಳಿಕೆ ಕಂಡ ತಮಿಳು ಚಿತ್ರವಾಗಿ ಹೊರಹೊಮ್ಮಿದೆ. ಸಿನಿಮಾದ ಬಿಗ್ ಸಕ್ಸಸ್‌ಗೆ ಮೆಗಾ ಸ್ಟಾರ್ ಚಿರಂಜೀವಿ ಶುಭ ಕೋರಿ, ಕಮಲ್‌ ಹಾಸನ್‌ ಅವರನ್ನು ಸನ್ಮಾನಿಸಿದ್ದಾರೆ.

ಥ್ರಿಲ್ಲಿಂಗ್‌ ಸಿನಿಮಾ ʼವಿಕ್ರಮ್‌ʼ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ. ಬಹುತಾರೆಯರ ಅದ್ಧೂರಿ ಸಿನಿಮಾ ಜನರ ಮೆಚ್ಚುಗೆ ಪಡೆದು ಯಶಸ್ಸನ್ನು ಕಂಡಿದೆ. ಇಡೀ ಚಿತ್ರತಂಡ ಇದರ ಸಂಭ್ರಮದಲ್ಲಿದೆ. ಇದೇ ವೇಳೆ ಮೆಗಾಸ್ಟಾರ್‌ ಚಿರಂಜೀವಿ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಮ್ಮುಖದಲ್ಲಿ ಕಮಲ್ ಹಾಸನ್ ಅವರನ್ನು ಮೆಗಾಸ್ಟಾರ್ ಸನ್ಮಾನಿಸಿದ್ದಾರೆ.

‌ಈ ಬಗ್ಗೆ ಟ್ವೀಟರ್‌ನಲ್ಲಿ ಫೋಟೊ ಹಂಚಿಕೊಂಡು ಚಿರಂಜೀವಿ ಖುಷಿಪಟ್ಟಿದ್ದಾರೆ. ʼವಿಕ್ರಮ್‌ನ ಅದ್ಭುತ ಸಕ್ಸಸ್‌ಗೆ ಸಲ್ಲುಭಾಯಿ ಅವರೊಂದಿಗೆ ನನ್ನ ಆತ್ಮೀಯ ಮಿತ್ರ ಕಮಲ್ ಹಾಸನ್ ಅವರನ್ನು ಸನ್ಮಾನಿಸಿದ್ದು, ಖುಷಿ ತಂದಿದೆ. ಎಂಥ ಥ್ರಿಲ್ಲಿಂಗ್ ಸಿನಿಮಾ ವಿಕ್ರಮ್ ಗೊತ್ತಾ? ಕುಡೋಸ್ ಮೈ ಫ್ರೆಂಡ್, ವಿಕ್ರಮ್ ನಿನಗೆ ಹೆಚ್ಚಿನ ಬಲ ತಂದಿದೆʼ ಎಂದು ಚಿರಂಜೀವಿ ಟ್ವೀಟ್‌ ಮಾಡಿದ್ದಾರೆ.

ಚಿರಂಜೀವಿ ಅವರ ಮನೆಯಲ್ಲಿ ನಡೆದ ಈ ಸಮಾರಂಭದಲ್ಲಿ ನಿರ್ದೇಶಕ ಲೋಕೇಶ್ ಮತ್ತು ಅವರ ತಂಡ ಪಾಲ್ಗೊಂಡಿತ್ತು.

ಇದನ್ನೂ ಓದಿ: Movie Review: Vikram | ತೆರೆಯ ಮೇಲೆ ಘಟಾನುಘಟಿಗಳ ತ್ರಿವಿಕ್ರಮ, ಕ್ಷಣ ಕ್ಷಣವೂ ರೋಚಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಾಲಿವುಡ್

Actress Nayanthara: ನಯನತಾರಾ ಅವಳಿ ಮಕ್ಕಳ ಭರ್ಜರಿ ಆಟೋ ಸವಾರಿ!

Actress Nayanthara: ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ ನಯನತಾರಾ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು. ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

VISTARANEWS.COM


on

Actress Nayanthara twin sons on auto ride
Koo

ಬೆಂಗಳೂರು: ನಯನತಾರಾ (Actress Nayanthara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗ್ ಅವರನ್ನು ಚೆನ್ನೈನಲ್ಲಿ ಆಟೋ ಸವಾರಿ ಮಾಡಿಸಿದ್ದಾರೆ. ಮೇ 20ರಂದು ‘ನಯನತಾರಾ’ ವೀಡಿಯೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು.

ಕೆಲವು ದಿನಗಳ ಹಿಂದೆ ಚೆನ್ನೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದ ನಟಿ ನಯನತಾರಾ ಈ ಅವಳಿ ಮಕ್ಕಳ ಪೂರ್ಣ ಹೆಸರನ್ನು ಬಹಿರಂಗಪಡಿಸಿದ್ದರು. ಈವೆಂಟ್‌ನಲ್ಲಿ ʻʻನನ್ನ ಮೊದಲ ಮಗ ಉಯಿರ್ ರುದ್ರೋನಿಲ್ ಎನ್ ಶಿವನ್ ಮತ್ತು ನನ್ನ ಎರಡನೇ ಮಗ ಉಳಗ್ ದೈವಿಗ್ ಎನ್ ಶಿವನ್ʼʼ ಎಂದು ಹೇಳಿಕೊಂಡಿದ್ದರು. ನಯನತಾರಾ ಮಕ್ಕಳ ಆರೈಕೆಗಾಗಿ ನಟನೆಯಿಂದ ದೂರ ಸರಿಯಲಿದ್ದಾರೆ ಎನ್ನುವ ಮಾತುಗಳು ಕೂಡ ಹರಿದಾಡಿದ್ದವು. ನಟನೆ ಹಾಗೂ ಮಕ್ಕಳ ಜವಾಬ್ದಾರಿ ಎರಡನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯಲು ಕೆಲ ಕಾಲ ನಟಿ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಮಾತು ಕಾಲಿವುಡ್ ಅಂಗಳದಲ್ಲಿ ಕೇಳಿ ಹರಿದಾಡಿತ್ತು. ಆದರೆ ನಟಿ ʻಜವಾನ್‌ʼ ಸಿನಿಮಾ ಮೂಲಕ ಮತ್ತೆ ಕಮ್‌ ಬ್ಯಾಕ್‌ ಆದರು.

ಇದನ್ನೂ ಓದಿ: Actress Nayanthara: ನಿವಿನ್ ಪೌಲ್‌-ನಯನತಾರಾ ಹೊಸ ಸಿನಿಮಾ ಅನೌನ್ಸ್‌!

ಇತ್ತೀಚೆಗೆ ಥಿಯೇಟರ್‌ಗಳಲ್ಲಿ ತೆರೆಕಂಡ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ (Actress Nayanthara) ಅಭಿನಯದ ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಿತ್ತು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು. ಇನ್‌ಸ್ಟಾ ಮೂಲಕ ನಟಿ ಕ್ಷಮೆ ಕೂಡ ಕೇಳಿದ್ದರು.

ಏಪ್ರಿಲ್ 14ರಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ನಯನತಾರಾ. ಸಂದೀಪ್ ಕುಮಾರ್ ಮತ್ತು ಜಾರ್ಜ್ ಫಿಲಿಪ್ ಜೋಡಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ. ನಯನತಾರಾ ಮತ್ತು ನಿವಿನ್ ಪೌಲಿ ಅವರು ಚಿತ್ರದಲ್ಲಿ ನಟಿಸಿರುವುದಲ್ಲದೇ ತಮ್ಮ ನಿರ್ಮಾಣ ಸಂಸ್ಥೆಗಳ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.ಈ ಸಿನಿಮಾ ಮೊದಲು ನಯನತಾರಾ ಮತ್ತು ನಿವಿನ್ ಪೌಲ್‌ 2019 ರಲ್ಲಿ ‘ಲವ್ ಆ್ಯಕ್ಷನ್ ಡ್ರಾಮಾ’ ನಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಧ್ಯಾನ್ ಶ್ರೀನಿವಾಸನ್ ನಿರ್ದೇಶನವಿತ್ತು. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ಜೋಡಿ ರೆಡಿಯಾಗಿದೆ.

ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading

ಕಾಲಿವುಡ್

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Actor Rajinikanth: ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ.

VISTARANEWS.COM


on

Actor Rajinikanth attends grandson Ved cricket themed birthday party
Koo

ಚೆನ್ನೈ: ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮೊಮ್ಮಗ ವೇದ್ ಕೃಷ್ಣ ಹುಟ್ಟುಹಬ್ಬದ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Actor Rajinikanth) ಮತ್ತು ಅವರ ಪತ್ನಿ ಲತಾ ಪಾಲ್ಗೊಂಡಿದ್ದರು. ಮೇ 6ರಂದು ವೇದ್‌ ಒಂಬತ್ತನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಕ್ರಿಕೆಟ್‌ ಥೀಮ್‌ನಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ರಜನಿಕಾಂತ್ ಅವರು ಕೇಕ್ ಅನ್ನು ಕತ್ತರಿಸುತ್ತಿರುವಾಗ ವೇದ್ ಅವರ ಹಿಂದೆ ನಿಂತಿರುವುದನ್ನು ನಾವು ನೋಡಬಹುದು. ಇದೀಗ ಈ ಪಾರ್ಟಿಯ ವಿಡಿಯೊಗಳು ವೈರಲ್‌ ಆಗುತ್ತಿವೆ.

ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ. ಸೌಂದರ್ಯಾ ಅಧಿಕೃತವಾಗಿ ವೀಡಿಯೊವನ್ನು ಹಂಚಿಕೊಂಡಿಲ್ಲವಾದರೂ, ಕೆಲವು ಫ್ಯಾನ್‌ ಪೇಜ್‌ಗಳು ಪೋಸ್ಟ್‌ ಮಾಡಿವೆ. ವೇದ್ ಕೃಷ್ಣ ಸೌಂದರ್ಯ ರಜನಿಕಾಂತ್ ಮತ್ತು ಅವರ ಮಾಜಿ ಪತಿ ಅಶ್ವಿನ್ ರಾಮ್‌ಕುಮಾರ್ ಅವರ ಮಗ. 2017 ರಲ್ಲಿ ದಂಪತಿಗಳು ವಿಚ್ಛೇದನ ಪಡೆದರು.

ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

ಅಶ್ವಿನ್‌ ರಾಮ್‌ಕುಮಾರ್‌ ಜತೆ ಸೌಂದರ್ಯ 2010ರಲ್ಲಿ ಸಪ್ತಪದಿ ತುಳಿದಿದ್ದರು. ಈ ಜೋಡಿಗೆ 2015ರಲ್ಲಿ ಮೊದಲ ಮಗು ಜನಿಸಿತ್ತು. ಆ ಮಗುವೇ ವೇದ್‌. 2017ರಲ್ಲಿ ಸೌಂದರ್ಯ ಮತ್ತು ಅಶ್ವಿನ್‌ ವಿಚ್ಛೇದನ ಪಡೆದುಕೊಂಡರು. 2019ರಲ್ಲಿ ವಿಶಾಗನ್‌​ ವನಂಗಮುಡಿ ಜತೆ ಸೌಂದರ್ಯ ಎರಡನೇ ಮದುವೆ ಮಾಡಿಕೊಂಡರು.

ರಜನಿಕಾಂತ್ ಕೊನೆಯ ಬಾರಿಗೆ ಮಗಳು ಐಶ್ವರ್ಯಾ ನಿರ್ದೇಶನದ ʻಲಾಲ್ ಸಲಾಂʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ನಿರ್ದೇಶಕ ಟಿಜೆ ಜ್ಞಾನವೇಲ್ ಅವರೊಂದಿಗೆ ʻವೆಟ್ಟೈಯಾನ್ʼ ಚಿತ್ರೀಕರಣದಲ್ಲಿದ್ದಾರೆ. ಚಿತ್ರದಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಕೂಡ ನಟಿಸಿದ್ದಾರೆ.. ʻತಲೈವರ್ 171ʼ ಸಿನಿಮಾದ ಫಸ್ಟ್ ಲುಕ್‌ ಔಟ್‌ ಆಗಿದೆ. ಇನ್ನೂ ಹೆಸರಿಡದ ʻತಲೈವರ್ 171ʼ (Thalaivar 171) ಹೊಚ್ಚ ಹೊಸ ಪೋಸ್ಟರ್‌ನಲ್ಲಿ, ರಜನಿಕಾಂತ್‌ ಸ್ಟೈಲಿಶ್ ಆಗಿ ಕಂಡಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಏಪ್ರಿಲ್ 22ರಂದು ಬಹಿರಂಗಪಡಿಸಲಾಗುವುದು ಎಂದು ಲೋಕೇಶ್ ಕನಕರಾಜ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Continue Reading

ಕಾಲಿವುಡ್

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

Kamal Haasan: ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

VISTARANEWS.COM


on

Kamal Haasan Indian 2 to release on July 12
Koo

ಬೆಂಗಳೂರು: ಕಮಲ್ ಹಾಸನ್ (Kamal Haasan) ಮತ್ತು ನಿರ್ದೇಶಕ ಶಂಕರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಇಂಡಿಯನ್ 2’ ಜುಲೈ 12 ರಂದು (Indian 2 to release) ಮೂರು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮೇ 19ರಂದು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಇತ್ತೀಚಿನ ಪೋಸ್ಟರ್‌ಗಳ ಪ್ರಕಾರ, ಅನಿರುದ್ಧ್ ರವಿಚಂದರ್ ಸಂಯೋಜಿಸಿದ ಮೊದಲ ಸಿಂಗಲ್ ಮೇ 22 ರಂದು ಬಿಡುಗಡೆಯಾಗಲಿದೆ.

ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ. ವಿಶೇಷ ಎಂದರೆ ಕಮಲ್ ಹಾಸನ್ ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದೆ. ಅನಿರುದ್ಧ್ ರವಿಚಂದರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರ ಛಾಯಾಗ್ರಹಣ ಇದೆ. ಎ.ಶ್ರೀಕರ್ ಪ್ರಸಾದ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ʼಇಂಡಿಯನ್‌ʼ

1996ರಲ್ಲಿ ತೆರೆಕಂಡ ಎಸ್‌.ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಹೊಂದಿದ್ದ ಈ ಸಿನಿಮಾದಲ್ಲಿಯೂ ಕಮಲ್‌ ಹಾಸನ್‌ ದ್ವಿಪಾತ್ರ ನಿಭಾಯಿಸಿದ್ದರು.

ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

ಈ ಮಧ್ಯೆ ಕಮಲ್‌ ಹಾಸನ್‌ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼಯಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಟಾಲಿವುಡ್ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಕೆರಳಿಸಿದೆ. ಭೂತ ಕಾಲ ಮತ್ತು ಭವಿಷ್ಯದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್‌ಗಳ ಪ್ರಕಾರ ಚಿತ್ರವು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

Continue Reading

ಕಾಲಿವುಡ್

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Vijay Sethupathi ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

VISTARANEWS.COM


on

Vijay Sethupathi Starrer Tamil Movie Teaser Released
Koo

ಬೆಂಗಳೂರು: ವಿಜಯ್ ಸೇತುಪತಿ ನಟನೆಯ ‘ಏಸ್’ (Ace) ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ರಿಲೀಸ್ ಆಗಿದೆ. ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ.

ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಕ್ರೈಮ್ ಥ್ರಿಲ್ಲರ್ ಕಾಮಿಡಿ ಕಥಾಹಂದರ ಹೊಂದಿರುವ ಏಸ್ ಸಿನಿಮಾವನ್ನು, 7Cs ಎಂಟರ್‌ಟೈನ್‌ಮೆಂಟ್‌ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ.

ಏಸ್’ ಸಿನಿಮಾದಲ್ಲಿ ತಮಿಳಿನ ಜನಪ್ರಿಯ ಹಾಸ್ಯ ನಟ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ನಟಿಸಿದ್ದು ಅವರ ಜೊತೆಗೆ ದಿವ್ಯಾ ಪಿಳ್ಳೈ, ಪಿಎಸ್ ಅವಿನಾಶ್, ರಾಜಕುಮಾರ್, ಬಬ್ಲು ಮತ್ತು ಇನ್ನೂ ಕೆಲವು ಪ್ರಮುಖ ನಟರು ಸಿನಿಮಾದ ಭಾಗವಾಗಿ ಅಭಿನಯ ಮಾಡಿದ್ದಾರೆ.

ಸಿದ್ದರಾಮಯ್ಯ ಜೀವನಾಧರಿತ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ಈಗೀಗ ಹಲವಾರು ಬಯೋಪಿಕ್‌ ಸಿನಿಮಾಗಳು ಆಗುತ್ತಿವೆ. ಇದೀಗ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧರಿತ (Biopic) ಸಿನಿಮಾ ಆಗುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ತೆರೆಗೆ ಬರುತ್ತಿದೆ. ಇನ್ನು ವಿಶೇಷ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳು ನಟ ವಿಜಯ್ ಸೇತುಪತಿ (Vijay Sethupathi) ನಿಭಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಸಿನಿಮಾಗಾಗಿ ನಟನನ್ನು ಅಪ್ರೋಚ್‌ ಮಾಡಲಾಗಿದೆ ಎಂತಲೂ ವರದಿಯಾಗಿದೆ.

ಸಿದ್ದರಾಮಯ್ಯ ಅವರು ಬಯೋಪಿಕ್‌ ಸಿನಿಮಾಗೆ ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಮಾ.30ರಂದು ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಇದೀಗ ಈ ಪಾತ್ರಕ್ಕೆ ವಿಜಯ್‌ ಸೇತುಪತಿ ಅವರು ವಿಜಯ್ ಕೂಡ ಈ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂತಲೂ ವೈರಲ್‌ ಆಗಿದೆ.

Continue Reading
Advertisement
Naxals
ದೇಶ17 mins ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ29 mins ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ1 hour ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ1 hour ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ1 hour ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ2 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Udupi Tour
ಪ್ರವಾಸ2 hours ago

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

Agee hunnime Thousands of devotees have darshan of Shri Renukamba Devi of Chandragutti
ಶಿವಮೊಗ್ಗ2 hours ago

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

an inscription of Hulagi Katte built during the Vijayanagara kings was discovered
ಕೊಪ್ಪಳ2 hours ago

Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

CM Siddaramaiah inaugurated the website of the inter caste marriage registration website in Mysore
ಕರ್ನಾಟಕ2 hours ago

Mysore News: ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ18 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌