Viral News : ಈ ವ್ಯಕ್ತಿಯ ಪಿಎಚ್ಡಿ ಪದವಿಗೆ ತಗುಲಿದ್ದು ಬರೋಬ್ಬರಿ 50 ವರ್ಷ! - Vistara News

ವೈರಲ್ ನ್ಯೂಸ್

Viral News : ಈ ವ್ಯಕ್ತಿಯ ಪಿಎಚ್ಡಿ ಪದವಿಗೆ ತಗುಲಿದ್ದು ಬರೋಬ್ಬರಿ 50 ವರ್ಷ!

ಬ್ರಿಟನ್ ದೇಶದ ನಿಕ್ ಹೆಸರಿನ ವ್ಯಕ್ತಿ ತಮ್ಮ 76ನೇ ವಯಸ್ಸಿನಲ್ಲಿ ಪಿಎಚ್ಡಿ ಪದವಿ ಸ್ವೀಕರಿಸಿದ್ದಾರೆ. ಅವರು 50 ವರ್ಷಗಳ ಹಿಂದೆಯೇ ಪಿಎಚ್ಡಿಗೆ ನೋಂದಣಿ (Viral News ) ಮಾಡಿಕೊಂಡಿದ್ದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್: ಕೆಲವರು ಓದುವುದೆಂದರೆ ಹೆಚ್ಚು ಇಷ್ಟ ಪಡುತ್ತಾರೆ. ಅಂಥವರ ಸಾಲಿಗೆ ಸೇರಿದವರು ಬ್ರಿಟನ್ ದೇಶದ ನಿಕ್ ಅಕ್ಸ್ಟೆನ್. ಈ ವ್ಯಕ್ತಿಗೆ ಓದು ಅದೆಷ್ಟು ಇಷ್ಟವೆಂದರೆ 50 ವರ್ಷಗಳ ಕಾಲ ಪ್ರಯತ್ನಿಸಿ ಪಿಎಚ್ಡಿಯನ್ನೇ (Viral News) ಪಡೆದುಕೊಳ್ಳುವಷ್ಟು.

ಹೌದು. ನಿಕ್ ಅವರು 1970ರಲ್ಲಿ ಅಮೆರಿಕದ ಪಿಟ್ಸ್ಬರ್ಗ್ ವಿಶ್ವವಿದ್ಯಾಲಯದಲ್ಲಿ ಗಣಿತದ ಸಮಾಜಶಾಸ್ತ್ರ ವಿಷಯದಲ್ಲಿ ಪಿಎಚ್ಡಿ ಮಾಡುವುದಕ್ಕೆ ನೋಂದಣಿ ಮಾಡಿಕೊಂಡಿದ್ದರು. ಅದಕ್ಕೆಂದು ಅವರಿಗೆ ವಿದ್ಯಾರ್ಥಿ ವೇತನ ಕೂಡ ಸಿಗುತ್ತಿತ್ತು. ಆದರೆ ಐದು ವರ್ಷಗಳಲ್ಲಿ ಅವರು ಬ್ರಿಟನ್ ದೇಶಕ್ಕೆ ವಾಪಸಾಗಬೇಕಾದ ಹಿನ್ನೆಲೆ ಅವರ ಪಿಎಚ್ಡಿ ಕನಸು ಅರ್ಧಕ್ಕೆ ನಿಂತಿತು.

ಇದನ್ನೂ ಓದಿ: Viral Video: ಹಳ್ಳಿ ಹುಡುಗಿಯ ಬ್ಯಾಟಿಂಗ್​ ಸ್ಕಿಲ್​ಗೆ ಫಿದಾ ಆದ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​

ಅಷ್ಟಕ್ಕೆ ಸುಮ್ಮನಾಗದ ಅವರು ತಮ್ಮ 69ನೇ ವಯಸ್ಸಿನಲ್ಲಿ ಫಿಲಾಸಫಿ ವಿಷಯದಲ್ಲಿ ಎಂಎ ಪದವಿ ಪಡೆದುಕೊಂಡಿದ್ದಾರೆ. ಬ್ರಿಟನ್ ದೇಶದ ಬ್ರಿಸ್ಟಲ್ ವಿಶ್ವವಿದ್ಯಾಲಯದಿಂದ ಈ ಪದವಿ ಪಡೆದಿದ್ದಾರೆ. ನಂತರ ಅಲ್ಲಿಯೇ ಪಿಎಚ್ಡಿಗೆ ನೋಂದಣಿ ಮಾಡಿಕೊಂಡಿದ್ದು, 2022ರಲ್ಲಿ ಅದನ್ನು ಸಂಪೂರ್ಣಗೊಳಿಸಿದ್ದಾರೆ. ಇದೀಗ 76 ವರ್ಷದವರಾಗಿರುವ ನಿಕ್ ಅವರಿಗೆ ಇತ್ತೀಚೆಗೆ ಬ್ರಿಸ್ಟಲ್ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಪ್ರದಾನಿಸಿದೆ. ಪತ್ನಿ ಮತ್ತು ಮೊಮ್ಮಗಳ ಸಮ್ಮುಖದಲ್ಲಿ ಅವರು ಪದವಿ ಸ್ವೀಕರಿಸಿದ್ದಾರೆ. “ವಿಶ್ವವಿದ್ಯಾಲಯದಲ್ಲಿ 23-25 ವರ್ಷದ ವಿದ್ಯಾರ್ಥಿಗಳಿದ್ದರು. ಅವರ್ಯಾರೂ ನನ್ನನ್ನು ವಯಸ್ಸಾದವನಂತೆ ಕಾಣದಂತೆ ಸ್ನೇಹಿತನಂತೆ ಕಂಡು, ಪದವಿ ಪಡೆಯಲು ಸಹಕರಿಸಿದ್ದಾರೆ” ಎಂದು ಹೇಳಿದ್ದಾರೆ ನಿಕ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

Viral Video: ರತ್ಲಮ್‌ನಲ್ಲಿರುವ ಡಾಲ್ಫಿನ್‌ ಈಜುಕೊಳದಲ್ಲಿ ಈ ಘಟನೆ ನಡೆದಿದ್ದು, ಅನೇಕ ಯುವಕರು ಸ್ವಿಮ್ಮಿಂಗ್‌ ಮಾಡುತ್ತಿರುತ್ತಾರೆ. ಇನ್ನೇ ಒಬ್ಬ ಯುವಕ ಮೇಲೆ ಹತ್ತಲು ಮುದಾಗುತ್ತಿದ್ದಾಗ ಮತ್ತೊರ್ವ ಯುವಕ ಸ್ವಿಮ್ಮಿಂಗ್‌ಪೂಲ್‌ಗೆ ಸ್ಟಂಟ್‌ ಮಾಡಿ ಜಂಪ್‌ ಹೊಡೆಯುತ್ತಾನೆ. ಆಗ ಇದ್ದ ಮೇಲೆ ಹತ್ತುತ್ತಿದ್ದ ಯುವಕನ ತಲೆಗೆ ಅವನ ಕಾಲಿನಿಂದ ಗಂಭೀರವಾಗಿ ಏಟಾಗುತ್ತದೆ. ಇದ್ದಕ್ಕಿದ್ದಂತೆ ಆ ಯುವಕ ಸ್ವಿಮ್ಮಿಂಗ್‌ಪೂಲ್‌ ಒಳಗೆ ಬೀಳುತ್ತಾನೆ. ತಕ್ಷಣ ಪ್ರಜ್ಞೆ ತಪ್ಪುತ್ತಾನೆ.

VISTARANEWS.COM


on

Viral Video
Koo

ಮಧ್ಯಪ್ರದೇಶ: ಕೆಲವೊಮ್ಮೆ ಅತಿಯಾದ ಮೋಜು ಪ್ರಾಣಕ್ಕೆ ಸಂಚು ತಂದು ಬಿಡುತ್ತದೆ. ಮೋಜಿಗೆಂದು ಮಾಡಿದ ಕಾರ್ಯದಿಂದ ಎದುರಿಗಿರುವವರ ಪ್ರಾಣವನ್ನೇ ಬಲಿ ಪಡೆದಂತಹ ಘಟನೆಗಳು ಆಗಾಗ ಕಣ್ಣ ಮುಂದೆ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಮಧ್ಯಪ್ರದೇಶ(Madya Pradesh)ದ ರತ್ಲಮ್‌ನಲ್ಲಿ ನಡೆದಿದೆ. ಈಜುಕೊಳ(Swimming pool) ದಲ್ಲಿ ಯುವಕನೊರ್ವ ಸ್ಟಂಟ್‌ ಮಾಡಲು ಹೋಗಿ ಮತ್ತೊರ್ವ ಯುವಕನ ಪ್ರಾಣಕ್ಕೆ ಕುತ್ತು ತಂದಿದ್ದಾನೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video)ಆಗಿದೆ.

ಘಟನೆ ವಿವರ:

ರತ್ಲಮ್‌ನಲ್ಲಿರುವ ಡಾಲ್ಫಿನ್‌ ಈಜುಕೊಳದಲ್ಲಿ ಈ ಘಟನೆ ನಡೆದಿದ್ದು, ಅನೇಕ ಯುವಕರು ಸ್ವಿಮ್ಮಿಂಗ್‌ ಮಾಡುತ್ತಿರುತ್ತಾರೆ. ಇನ್ನೇ ಒಬ್ಬ ಯುವಕ ಮೇಲೆ ಹತ್ತಲು ಮುದಾಗುತ್ತಿದ್ದಾಗ ಮತ್ತೊರ್ವ ಯುವಕ ಸ್ವಿಮ್ಮಿಂಗ್‌ಪೂಲ್‌ಗೆ ಸ್ಟಂಟ್‌ ಮಾಡಿ ಜಂಪ್‌ ಹೊಡೆಯುತ್ತಾನೆ. ಆಗ ಇದ್ದ ಮೇಲೆ ಹತ್ತುತ್ತಿದ್ದ ಯುವಕನ ತಲೆಗೆ ಅವನ ಕಾಲಿನಿಂದ ಗಂಭೀರವಾಗಿ ಏಟಾಗುತ್ತದೆ. ಇದ್ದಕ್ಕಿದ್ದಂತೆ ಆ ಯುವಕ ಸ್ವಿಮ್ಮಿಂಗ್‌ಪೂಲ್‌ ಒಳಗೆ ಬೀಳುತ್ತಾನೆ. ತಕ್ಷಣ ಪ್ರಜ್ಞೆ ತಪ್ಪುತ್ತಾನೆ. ಅನೇಕರು ಅಲ್ಲೇ ಇದ್ದರೂ ತಕ್ಷಣ ಅವರ ಸಹಾಯಕ್ಕೆ ಯಾದೂ ಧಾವಿಸಲಿಲ್ಲ. ಅದಾದ ಬಳಿಕ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಿ ಆತ ಕೊನೆಯುಸಿರೆಳೆದಿದ್ದ.

ಮೃತ ಯುವಕನನ್ನು ಅನಿಕೇತ್‌ ಎಂದು ಗುರುತಿಸಲಾಗಿದೆ. ಇಂತಹದ್ದೇ ಒಂದು ಘಟನೆ ಈ ಹಿಂದೆಯೂ ನಡೆದಿತ್ತು. ಇದಾದ ಬಳಿಕ ಸ್ವಿಮ್ಮಿಂಗ್‌ ಪೂಲ್‌ ನಿರ್ವಾಹಕರಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೆ ಇದೀಗ ಮತ್ತೆ ಇಂತಹದ್ದೇ ಮತ್ತೊಂದು ಘಟನೆ ನಡೆದಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಈಜುಕೊಳವನ್ನು ಸೀಲ್‌ಡೌನ್‌ ಮಾಡಲಾಗಿದೆ.

ಕಳೆದ ವರ್ಷ ಬೆಂಗಳೂರಿನಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಜೆಪಿ ನಗರ 7 ನೇ ಹಂತದಲ್ಲಿರುವ ಖಾಸಗಿ ಈಜುಕೊಳದಲ್ಲಿ 13 ವರ್ಷದ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದರು. ಮೃತ ವಿದ್ಯಾರ್ಥಿಗಳನ್ನು ಜರಗನಹಳ್ಳಿ ನಿವಾಸಿಗಳಾದ ಮೋಹನ್ ಮತ್ತು ಜಯಂತ್ ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರು ತಮ್ಮ ಶಾಲೆಯಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿತ್ತು. ಬಳಿಕ ಇಬ್ಬರ ಮೃತದೇಹಗಳು ಈಜುಕೊಳದಲ್ಲಿ ಕಂಡುಬಂದಿದ್ದವು.

ಇದನ್ನೂ ಓದಿ:ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

ಈಜುಕೊಳದ ತರಬೇತುದಾರ ಬಾಲಕರನ್ನು ಈಜುಕೊಳಕ್ಕೆ ಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ., ಆದರೆ ದುರಂತ ನಡೆದ ಸಮಯದಲ್ಲಿ ಅವರು ಇರಲಿಲ್ಲ ಎಂಬುದು ಆನಂತರ ಬಯಲಾಗಿತ್ತು. ಪೊಲೀಸರ ಪ್ರಕಾರ, ಇಬ್ಬರು ಬಾಲಕರು ತರಗತಿಗಳನ್ನು ಬಿಟ್ಟು ಜೆಪಿ ನಗರದಲ್ಲಿರುವ ಎಂಎನ್‌ಸಿ ಸ್ಪೋರ್ಟ್ಸ್ ಅಕಾಡೆಮಿಗೆ ಭೇಟಿ ನೀಡಿ, ಈಜುಕೊಳದಲ್ಲಿ ಆಟವಾಡಿದ್ದಾರೆ. ಈಜುಕೊಳದ ಸರಿಯಾದ ಬಳಕೆಯ ಬಗ್ಗೆ ಬಾಲಕರಿಗೆ ಸೂಚನೆಗಳು ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೀಡೆ

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

MS Dhoni Bike Riding: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಬಳಿಕ ವಿಶ್ರಾಂತ ಜೀವನವನ್ನು ಎಂಜಾಯ್​ ಮಾಡುತ್ತಿರುವ ಧೋನಿ ಅವರು ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು

VISTARANEWS.COM


on

MS Dhoni Bike Riding
Koo

ರಾಂಚಿ: ಆರ್​ಸಿಬಿ ವಿರುದ್ಧ ಸೋಲುವ ಮೂಲಕ ಚೆನ್ನೈ ಸೂಪರ್​ ಕಿಂಗ್ಸ್​(CSK) ತಂಡ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿತ್ತು. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ 27 ರನ್​ಗಳ ಅಂತರದಿಂದ ಸೋಲು ಕಂಡಿತ್ತು. ಈ ಸೋಲಿನ ಮರು ದಿನವೇ ಧೋನಿ(MS Dhoni) ತಮ್ಮ ತವರಾದ ರಾಂಚಿಗೆ ಮರಳಿದ್ದರು. ಇದೀಗ ತವರಿನಲ್ಲಿ ಬೈಕ್​ ರೈಡಿಂಗ್​ ಮಾಡಿದ್ದಾರೆ. ಅವರು ಬೈಕ್​ನಲ್ಲಿ ಸುತ್ತಾಡಿಕೊಂಡು ವಾಪಸ್​ ಮನೆಗೆ ಬರುತ್ತಿರುವ ವಿಡಿಯೊ ವೈರಲ್​ ಆಗಿದೆ. ಸದ್ಯ ಧೋನಿ ಅವರು ಬೈಕ್​ ಓಡಿಸಿದ(MS Dhoni Bike Riding) ವಿಡಿಯೊ ವೈರಲ್(Viral Video)​ ಆಗಿದ್ದು, ಅವರ ಅಭಿಮಾನಿಗಳು ಹಲವು ಕಮೆಂಟ್​ಗಳನ್ನು ಮಾಡಿದ್ದಾರೆ.

ಧೋನಿ ಬಳಿ ಇದೆ ದೊಡ್ಡ ಬೈಕ್​ ಗ್ಯಾರೇಜ್​


ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಬಳಿಕ ವಿಶ್ರಾಂತ ಜೀವನವನ್ನು ಎಂಜಾಯ್​ ಮಾಡುತ್ತಿರುವ ಧೋನಿ ಅವರು ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು. ಇದನ್ನು ಕಂಡ ಅನೇಕರು ಅಬ್ಬಾ… ಎಂದು ಆಶ್ಚರ್ಯವಾಗಿದ್ದರು. ಈ ಫಾರ್ಮ್​ಹೌಸ್​ನ ವಿಡಿಯೊ ವೈರಲ್​ ಆಗುತ್ತು.

ಇದನ್ನೂ ಓದಿ MS Dhoni Retirement: ಧೋನಿ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಚೆನ್ನೈ ಫ್ರಾಂಚೈಸಿ

ಎಂಎಸ್ ಧೋನಿ ಬೈಕ್ ಕಲೆಕ್ಷನ್

ಯಮಹಾ, ಡುಕಾಟಿ, ಕವಾಸಕಿ ಮುಂತಾದ ಪ್ರಸಿದ್ಧ ಬ್ರಾಂಡ್ ಗಳು ಧೋನಿ ಅವರ ಆಕರ್ಷಕ ಬೈಕ್ ಗಳ ಸಂಗ್ರಹದಲ್ಲಿವೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಹೆಚ್ಚುವರಿಯಾಗಿ, ಕಾನ್ಫೆಡರೇಟ್ ಎಕ್ಸ್ 132 ಹೆಲ್ ಕ್ಯಾಟ್, ವಿಂಟೇಜ್ ನಾರ್ಟನ್ ಜುಬಿಲಿ 250 ಮತ್ತು ಹಲವಾರು ಗಮನಾರ್ಹ ಬೈಕುಗಳಂತಹ ವಿಶಿಷ್ಟ ಮತ್ತು ಅಪರೂಪದ ಮಾದರಿಗಳನ್ನು ಹೊಂದಿದ್ದಾರೆ. ಇತ್ತೀಚೆಗೆ, ಧೋನಿ ಹೊಸದಾಗಿ ಕಸ್ಟಮೈಸ್ ಮಾಡಿದ ಜಾವಾ 42 ಬಾಬ್ಬರ್ ಅನ್ನು ತಮ್ಮ ಬೆಳೆಯುತ್ತಿರುವ ಬೈಕುಗಳ ಸಂಗ್ರಹಕ್ಕೆ ಸೇರಿಸಿದ್ದಾರೆ.

ಮಹೇಂದ್ರ ಸಿಂಗ್​ ಧೋನಿ(MS Dhoni Retirement) ಅವರ ನಿವೃತ್ತಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೀಗ ಧೋನಿ ನಿವೃತ್ತಿ ವಿಚಾರವಾಗಿ ಸಿಎಸ್​ಕೆ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಹತ್ವದ ಹೇಳಿಕೆ ನೀಡಿದ್ದಾರೆ.

“ಧೋನಿ ಅವರು ಸಿಎಸ್‌ಕೆ ಜತೆ ಯಾರೊಂದಿಗೂ ತಮ್ಮ ನಿವೃತ್ತಿ ಬಗ್ಗೆ ಇದುವರೆಗೂ ಮಾತನಾಡಿಲ್ಲ. ಕೆಲವು ಸಕ್ರಿಯ ಕ್ರಿಕೆಟಿಗರಿಂದ ಹೆಚ್ಚು ಟೀಕೆಗೆ ಒಳಗಾಗಿರುವ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಧೋನಿಯ ನಿವೃತ್ತಿಯ ವಿಚಾರದಲ್ಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆಯಿದೆ. ನಿಯಮವು ಮುಂದುವರಿದರೆ, ತಂಡದೊಂದಿಗೆ ನಿರ್ದಿಷ್ಟ ಕೆಲಸವನ್ನು ಪೂರೈಸಲು ಇದು ಅವರಿಗೆ ಸ್ವಾತಂತ್ರ್ಯವನ್ನು ನೀಡುತ್ತದೆ. ನಿಯಮವನ್ನು ರದ್ದುಗೊಳಿಸಿದರೆ, ಧೋನಿ ಆಡುವುದು ಕಷ್ಟ” ಎಂದು ಹೇಳಿದ್ದಾರೆ.

ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಾಗಿತ್ತು. ಇದೀಗ ಚೆನ್ನೈ ಸೋತು ಟೂರ್ನಿಯಿಂದ ಹೊರಬಿದ್ದರೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

Continue Reading

ಕ್ರೀಡೆ

IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

IPL 2024: ರಾಜಸ್ಥಾನ್​(RCB vs RR) ವಿರುದ್ಧ ಬುಧವಾರ ನಡೆಯುವ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ಆಟಗಾರರು ಫುಟ್ಬಾಲ್​ ಆಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ ಟೂರ್ನಿ(IPL 2024) ಆರಂಭಕ್ಕೂ ಮುನ್ನ ವಿರಾಟ್​ ಕೊಹ್ಲಿ(virat kohli) ಇದು ಆರ್​ಸಿಬಿಯ ಹೊಸ ಅಧ್ಯಾಯ ಎಂದು ಹೇಳುವು ಮೂಲಕ ಆರ್‌ಸಿಬಿ ಹವಾ ಸೃಷ್ಟಿಸಿತ್ತು. ಈ ಮಾತಿಗೆ ತಕ್ಕಂತೆ ಮೊದಲ ಹಂತದಲ್ಲಿ ಆರ್​ಸಿಬಿ(RCB players) ಪ್ರದರ್ಶನ ನೀಡಲು ವಿಫಲವಾಗಿತ್ತು. 7 ಸೋಲು ಕಂಡು ಇನ್ನೇನು ಟೂರ್ನಿಯಿಂದ ಹೊರಬೀಳುವ ಸ್ಥಿತಿಯಲ್ಲಿತ್ತು. ಆರ್​ಸಿಬಿ ಅಭಿಮಾನಿಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಇದು ಮುಗಿದು ಹೋದ ಅಧ್ಯಾಯ ಎಂದು ಬೇಸರ ಹೊರಹಾಕಿದ್ದರು. ಆದರೆ ಆ ಬಳಿಕ ನಡೆದದ್ದೇ ಬೇರೆ. ಪವಾಡ ಸಂಭವಿಸಿದೆ ಆರ್​ಸಿಬಿ ಸತತವಾಗಿ 6 ಪಂದ್ಯಗಳನ್ನು ಒಟ್ಟು 7 ಪಂದ್ಯಗಳಲ್ಲಿ ಜಯ ಸಾಧಿಸಿ ಕೊನೆಯ ಸ್ಥಾನದಿಂದ ಮೇಲೆದ್ದು ಅಚ್ಚರಿ ಎಂಬಂತೆ ಪ್ಲೇ ಆಫ್​ ಪ್ರವೇಶಿಸಿತ್ತು. ಇದೀಗ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ರಾಜಸ್ಥಾನ್​(RCB vs RR) ವಿರುದ್ಧ ಆಡಲಿದೆ.

ಆರ್​ಸಿಬಿ ತಂಡದ ಆಟಗಾರರು ರಾಜಸ್ಥಾನ್​ ವಿರುದ್ಧ ಎಲಿಮಿನೇಟರ್​ ಪಂದ್ಯವನ್ನಾಡಲು ಈಗಾಗಲೇ ಅಹಮದಾಬಾದ್​ಗೆ ತಲುಪಿದ್ದಾರೆ. ಸೋಮವಾರ ಆಟಗಾರರು ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡುವ(RCB players played football) ಮೂಲಕ ತಮ್ಮ ಫಿಟ್​ನೆಸ್​ ತರಬೇತಿ ಮುಗಿಸಿದ್ದಾರೆ. ಆಟಗಾರರು 2 ತಂಡಗಳಾಗಿ ಫುಟ್ಬಾಲ್​ ಆಡಿದ ವಿಡಿಯೊವನ್ನು ಆರ್​ಸಿಬಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕಳೆದ 5 ವರ್ಷದಲ್ಲಿ ಆರ್‌ಸಿಬಿ 4 ಬಾರಿ ಪ್ಲೇ ಆಫ್ ಪ್ರವೇಶಿಸಿದ ಸಾಧನೆ ಮಾಡಿದೆ. ಈ ಮೂಲಕ ಆರ್‌ಸಿಬಿ ನಿರಂತವಾಗಿ ತನ್ನ ಸಾಮರ್ಥ್ಯ ಪ್ರದರ್ಶಿಸಿದೆ. 3 ಬಾರಿ ಫೈನಲ್​ ಪ್ರವೇಶೀಸಿದರೂ ಕಪ್​ ಗೆಲ್ಲಲು ಸಾಧ್ಯವಾಗಿರಲಿಲ್ಲ. 2009, 2011 ಮತ್ತು 2016ರಲ್ಲಿ ಆರ್​ಸಿಬಿ ಫೈನಲ್​ಗೆ ಲಗ್ಗೆಯಿಟ್ಟಿತ್ತು.

ಎಲಿಮಿನೇಟರ್(IPL 2024 Eliminator)​ ಪಂದ್ಯಕ್ಕೂ ಮುನ್ನವೇ ಆರ್​ಸಿಬಿಗೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ರಾಷ್ಟ್ರೀಯ ತಂಡದಿಂದ ಕರೆ ಬಂದರೆ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಬೇಕಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಬೇಕಾಗಬಹುದು. ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಎಲಿಮಿನೇಟರ್​ ಮತ್ತು ಕ್ವಾಲಿಫೈಯರ್​ ಪಂದ್ಯದಲ್ಲಿ ಆಡಿದರೂ ಕೂಡ ಫೈನಲ್​ ತನಕ ಭಾರತದಲ್ಲಿ ನಿಲ್ಲುವುದು ಅನುಮಾನ ಎನ್ನಲಾಗಿದೆ.

Continue Reading

ವೈರಲ್ ನ್ಯೂಸ್

Yamuna Bridge: ಯಮುನಾ ಸೇತುವೆಯ ಅದ್ಭುತ ಚಿತ್ರ ಹಂಚಿಕೊಂಡ ಭಾರತೀಯ ರೈಲ್ವೆ: ವಾವ್‌ ತಾಜ್‌ ಎಂದ ನೆಟ್ಟಿಗರು; ನೀವೂ ನೋಡಿ

Yamuna Bridge: ರೈಲ್ವೆ ಸಚಿವಾಲಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಆಗ್ರಾದಲ್ಲಿನ ಯಮುನಾ ರೈಲ್ವೆ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿದೆ. ರೈಲ್ವೆ ಹಂಚಿಕೊಂಡಿರುವ, ಡ್ರೋನ್‌ ಸೆರೆಹಿಡಿರುವ ಈ ಚಿತ್ರದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಐತಿಹಾಸಿಕ ಸೇತುವೆಯ ಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದ್ದು, ನೆಟ್ಟಿಗರು ಮನ ಸೋತಿದ್ದಾರೆ. ಫೋಟೊ ಹಂಚಿಕೊಂಡ ಕೆಲವೇ ಹೊತ್ತಿನಲ್ಲಿ ಇದು ವೈರಲ್‌ ಆಗಿದೆ. ಈಗಾಗಲೇ 28 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 490ಕ್ಕೂ ಹೆಚ್ಚು ಮಂದಿ ಲೈಕ್‌ ಬಟನ್‌ ಒತ್ತಿದ್ದಾರೆ. 200ಕ್ಕೂ ಹೆಚ್ಚು ಶೇರ್‌ ಆಗಿದೆ. ಯಮುನೆಯ ಸೌಂದರ್ಯಕ್ಕೆ ನೆಟ್ಟಿಗರು ಮನ ಸೋತಿದ್ದಾರೆ.

VISTARANEWS.COM


on

Yamuna Bridge
Koo

ಹೊಸದಿಲ್ಲಿ: ಭಾರತೀಯ ರೈಲ್ವೆ ಇಲಾಖೆ (Railways Ministry) ಆಗಾಗ ತನ್ನ ಕಾಮಗಾರಿಗಳ ವಿವರಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತದೆ. ಸ್ವೇಷನ್‌, ಸೇತುವೆ ನಿರ್ಮಾಣ ಕಾಮಗಾರಿ, ಹೊಸ ಯೋಜನೆಗಳ ಮಾಹಿತಿಯನ್ನು ನೀಡುತ್ತಿರುತ್ತದೆ. ಇದೀಗ ರೈಲ್ವೆ ಸಚಿವಾಲಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಆಗ್ರಾದಲ್ಲಿನ ಯಮುನಾ ರೈಲ್ವೆ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿದೆ. ರೈಲ್ವೆ ಹಂಚಿಕೊಂಡಿರುವ, ಡ್ರೋನ್‌ ಸೆರೆಹಿಡಿರುವ ಈ ಚಿತ್ರದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಐತಿಹಾಸಿಕ ಸೇತುವೆಯ ಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದ್ದು, ನೆಟ್ಟಿಗರು ಮನ ಸೋತಿದ್ದಾರೆ (Viral News).

“ಆಗ್ರಾದಲ್ಲಿನ ಯಮುನಾ ಸೇತುವೆಯ ಪಕ್ಷಿ ನೋಟ. ಸೇತುವೆಯ ಹಿನ್ನೆಲೆಯಲ್ಲಿ ಭವ್ಯವಾದ ತಾಜ್ ಮಹಲ್ ಅನ್ನೂ ಕಾಣಬಹುದುʼʼ ಎಂದು ಫೋಟೊಕ್ಕೆ ಕ್ಯಾಪ್ಶನ್‌ ನೀಡಲಾಗಿದೆ. ಫೋಟೊ ಹಂಚಿಕೊಂಡ ಕೆಲವೇ ಹೊತ್ತಿನಲ್ಲಿ ಇದು ವೈರಲ್‌ ಆಗಿದೆ. ಈಗಾಗಲೇ 28 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 490ಕ್ಕೂ ಹೆಚ್ಚು ಮಂದಿ ಲೈಕ್‌ ಬಟನ್‌ ಒತ್ತಿದ್ದಾರೆ. 200ಕ್ಕೂ ಹೆಚ್ಚು ಶೇರ್‌ ಆಗಿದೆ. ಯಮುನೆಯ ಸೌಂದರ್ಯಕ್ಕೆ ನೆಟ್ಟಿಗರು ಮನ ಸೋತಿದ್ದಾರೆ.

ನೆಟ್ಟಿಗರು ಏನಂದ್ರು?

ʼʼವಾವ್‌ ತಾಜ್‌ʼʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದೆʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಜೈ ಭಾರತ್‌, ಜೈ ಭಾರತಿʼʼ ಎಂದು ಮತ್ತೊಬ್ಬರು ಹೇಳಿದ್ದಾರೆ. ʼʼವಿಹಂಗಮ ದೃಶ್ಯʼʼ ಎಂದು ಮಗದೊಬ್ಬರು ಉದ್ಘರಿಸಿದ್ದಾರೆ. ʼʼನಿಜವಾಗಿಯೂ ಈ ಫೋಟೊ ಮನಮೋಹಕವಾಗಿದೆʼʼ ಎಂದು ನೆಟ್ಟಿಗರೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ. ಒಟ್ಟಿನಲ್ಲಿ ಯಮುನೆಯ ಒನಪು, ಸೇತುವೆಯ ಗಾಂಭೀರ್ಯ, ತಾಜ್‌ ಮಹಲ್‌ನ ಸೌಂದರ್ಯ ಹಲವರ ಗಮನ ಸೆಳೆದಿದ್ದು ಸುಳ್ಳಲ್ಲ.

ಶತಮಾನಗಳ ಇತಿಹಾಸ

ವಿಶೇಷವೆಂದರೆ ಭಾರತೀಯ ರೈಲ್ವೆಯ ಪ್ರಮುಖ ಜೀವನಾಡಿಯಾದ ಈ ಸೇತುವೆ 1875ರಲ್ಲಿ ಸಂಚಾರಕ್ಕೆ ಮುಕ್ತವಾಗಿತ್ತು. ಆಗ್ರಾ ಈಸ್ಟ್ ಬ್ಯಾಂಕ್ ನಿಲ್ದಾಣ ಮತ್ತು ಆಗ್ರಾ ಕೋಟೆ ನಿಲ್ದಾಣವನ್ನು ಇದು ಸಂಪರ್ಕಿಸುತ್ತದೆ. ಶತಮಾನಗಳ ಇತಿಹಾಸ ಹೊಂದಿರುವ ಯಮುನಾ ಸೇತುವೆಯ ಸಮೀಪದ ಆಗ್ರಾ ರೈಲ್ವೆ ನಿಲ್ದಾಣವು ಅತ್ಯಂತ ಜನನಿಬಿಡ ರೈಲ್ವೆ ನಿಲ್ದಾಣಗಳಲ್ಲಿ ಒಂದಾಗಿದೆ. ಇದು ಪ್ರಯಾಣಿಕರು ಮತ್ತು ಸರಕುಗಳೆರಡಕ್ಕೂ ಪ್ರಮುಖ ಸಾರಿಗೆ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಜತೆಗೆ ಆಗ್ರಾವನ್ನು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುತ್ತದೆ.

ಜನರೊಂದಿಗೆ ನಿರಂತರ ಸಂಪರ್ಕ

ರೈಲ್ವೆ ಸಚಿವಾಲಯವು ರೈಲುಗಳು ಮತ್ತು ಅವುಗಳ ಸೇವೆಗಳ ಬಗ್ಗೆ ಆಗಾಗ ಆಸಕ್ತಿದಾಯಕ ಸಂಗತಿಗಳು ಮತ್ತು ಮಾಹಿತಿಯನ್ನು ಹಂಚಿಕೊಂಡು ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತದೆ. ಕೆಲವು ವಾರಗಳ ಹಿಂದೆ ಸಚಿವಾಲಯವು ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗಾಗಿ ನಿರ್ಮಿಸಲಾದ ಗುಜರಾತ್‌ನ ಔರಂಗ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿತ್ತು. ವಲ್ಸಾದ್ ಜಿಲ್ಲೆಯ ಔರಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಕಾಮಗಾರಿ 2023ರ ಆಗಸ್ಟ್‌ನಲ್ಲಿ ಪೂರ್ಣಗೊಂಡಿತ್ತು. ಜತೆಗೆ ಪಶ್ಚಿಮ ಘಟ್ಟದ ಹಸಿರಿನ ನಡುವೆ, ಗುಡ್ಡಗಳ ಮಧ್ಯೆ ಚಲಿಸುವ ರೈಲಿನ ವಿಡಿಯೊವನ್ನು ಇತ್ತೀಚೆಗೆ ಹಂಚಿಕೊಂಡಿತ್ತು. ʼʼಸ್ವರ್ಗ ಸದೃಶ ಪಶ್ಚಿಮ ಘಟ್ಟದ ಸೌಂದರ್ಯವನ್ನು ಭಾರತೀಯ ರೈಲ್ವೆಯೊಂದಿಗೆ ಆನಂದಿಸಿʼʼ ಎನ್ನುವ ಶೀರ್ಷಿಕೆಯಡಿ ಹಂಚಿಕೊಂಡ ಈ ಪೋಸ್ಟ್‌ಗೂ ನೂರಾರು ಲೈಕ್‌ಗಳು ಸಂದಿವೆ.

ಇದನ್ನೂ ಓದಿ: India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

Continue Reading
Advertisement
Prashant Kishor
Lok Sabha Election 20242 mins ago

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Cannes 2024 Sonam Kapoor dubs this outfit the best at Cannes this year
ಬಾಲಿವುಡ್21 mins ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ39 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್45 mins ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್47 mins ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ1 hour ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ1 hour ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Star Kids with Sanskrit Names From Yami Gautam to Priyanka Chopra
ಬಾಲಿವುಡ್1 hour ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Rohit Sharma
ಕ್ರೀಡೆ1 hour ago

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

corona virus wave in singapore
ಪ್ರಮುಖ ಸುದ್ದಿ2 hours ago

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌