Delhi Karnataka Sangha: 75ರ ಸಂಭ್ರಮದಲ್ಲಿ ದಿಲ್ಲಿ ಕರ್ನಾಟಕ ಸಂಘ, ಫೆ.25, 26ರಂದು ಅಮೃತ ಮಹೋತ್ಸವ, ಮೋದಿ ಉದ್ಘಾಟನೆ - Vistara News

ಕರ್ನಾಟಕ

Delhi Karnataka Sangha: 75ರ ಸಂಭ್ರಮದಲ್ಲಿ ದಿಲ್ಲಿ ಕರ್ನಾಟಕ ಸಂಘ, ಫೆ.25, 26ರಂದು ಅಮೃತ ಮಹೋತ್ಸವ, ಮೋದಿ ಉದ್ಘಾಟನೆ

Delhi Karnataka Sangha: ದಿಲ್ಲಿ ಕರ್ನಾಟಕ ಸಂಘವು 75 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಫೆ.25ರಿಂದ ಅಮೃತ ಮಹೋತ್ಸವ ಸಮಾರಂಭವು ನಡೆಯಲಿದೆ. ಆದರೆ, ಮೂವರು ಮಾಜಿ ಅಧ್ಯಕ್ಷರು ಈ ಸಮಾರಂಭವನ್ನು ಬಹಿಷ್ಕರಿಸಿದ್ದಾರೆ.

VISTARANEWS.COM


on

75 years of Delhi Karnataka Sangh, Amrita Mahotsava ceremony on 25th and 26th February
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೆಹಲಿ ಕರ್ನಾಟಕ ಸಂಘ 75 ವರ್ಷಗಳನ್ನು (Delhi Karnataka Sangha) ಪೂರೈಸಿದ್ದು, ಫೆಬ್ರವರಿ 25 ಮತ್ತು 26ರಂದು ಅಮೃತ್ ಮಹೋತ್ಸವ ಕ್ರಾಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವು ನಡೆಯಲಿದೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ ಎಂ ನಾಗರಾಜ್ ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಹಲವು ರಾಜಕೀಯ ಸಾಮಾಜಿಕ ಗಣ್ಯರು ಆಗಮಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ದಿಲ್ಲಿಯಲ್ಲಿರುವ ಸುಮಾರು 10ರಿಂದ 12 ಸಾವಿರ ಕನ್ನಡಿಗರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಸಂಘದ ಅಭಿವೃದ್ಧಿಗೆ ದುಡಿದ ಕನ್ನಡಿಗರನ್ನು, ಮಹನೀಯರನ್ನು ಗೌರವಿಸುವ ಕೆಲಸವನ್ನು ಮಾಡಲಿದ್ದೇವೆ. ಒಟ್ಟಾರೆ 75 ಗಣ್ಯರಿಗೆ ಸನ್ಮಾನ ಮಾಡಲಾಗುತ್ತಿದೆ ಎಂದು ನಾಗರಾಜ್ ಅವರು ತಿಳಿಸಿದ್ದಾರೆ.

ಮಾಜಿ ಅಧ್ಯಕ್ಷರಿಂದ ಸಮಾರಂಭಕ್ಕೆ ಬಾಯ್ಕಾಟ್

ಫೆಬ್ರವರಿ 25 ಮತ್ತು 26ರಂದು ನಡೆಯಲಿರುವ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವಕ್ಕೆ ಅಪಸ್ವರ ಕೇಳಿ ಬಂದಿದೆ. ಸಂಘದ ಮಾಜಿ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ, ಡಾ. ವೆಂಕಟಾಚಲ ಹೆಗಡೆ ಹಾಗೂ ವಸಂತ ಶೆಟ್ಟಿ ಬೆಳ್ಳಾರೆ ಅವರು ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಅವರು ನೀಡಿದ್ದಾರೆ.

75 ವರ್ಷಗಳಲ್ಲಿ ಕನ್ನಡದ ಹಲವು ಮೇರು ವ್ಯಕ್ತಿತ್ವಗಳು ಈ ಸಂಸ್ಥೆಗೆ ಮಾರ್ಗದರ್ಶನ ಮಾಡಿ ಕನ್ನಡದ ಅಸ್ಮಿತೆ ಉಳಿಸಿದ್ದಾರೆ. ಆದರೆ ಕರ್ನಾಟಕ ಸಂಘವು ಫೆಬ್ರವರಿ 25 ಮತ್ತು 26 ರಂದು ಆಚರಿಸುತ್ತಿರುವ ಕಾರ್ಯಕ್ರಮ ಸಂಘದ ಮೂಲ ಉದ್ದೇಶದಿಂದ ಬಹಳ ದೂರ ಸರಿದಿದೆ. ಕನ್ನಡ ಭಾಷೆ , ಸಾಹಿತ್ಯ ಮತ್ತು ಸಂಸ್ಕೃತಿಯ ಸಮಾವೇಶವಾಗಬೇಕಾಗಿದ್ದ ಸುವರ್ಣ‌ಸಂಭ್ರಮವು ದೆಹಲಿ ಕನ್ನಡಿಗರನ್ನು ಕೇಂದ್ರದಲ್ಲಿರಿಸಿಕೊಂಡು ನಡೆಯುತ್ತಿಲ್ಲ.

ಇದನ್ನೂ ಓದಿ: Karnataka Tableau | ಮೊದಲಿಗೆ ತಿರಸ್ಕರಿಸಿ, ಕೊನೆ ಗಳಿಗೆಯಲ್ಲಿ ಕರ್ನಾಟಕ ಟ್ಯಾಬ್ಲೋಗೆ ಓಕೆ ಎಂದಿದ್ದೇಕೆ?

ಕನ್ನಡ ನಾಡು ನುಡಿಗೆ ಸೇವೆಸಲ್ಲಿಸಿದ ಲೇಖಕ, ಕಲಾವಿದರು ದೊಡ್ಡ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಕಾಣುತ್ತಿಲ್ಲ. ಕಾರ್ಯಕ್ರಮದ ಒಟ್ಟು ಆಯೋಜನೆಯಲ್ಲಿ ಸಂಘದ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬರುವ ವಿಚಾರವಾಗಿದೆ. ಕಾರ್ಯಕಾರಿ ಸಮಿತಿಯ ಸಮಿತಿಯ ಕೆಲವು ಸದಸ್ಯರಿಗೂ ವಿಷಯ ಸ್ಪಷ್ಟತೆಯಿಲ್ಲ.‌ ಹಣಕಾಸಿನ ವಿಷಯದಲ್ಲಿ‌ ಪಾರದರ್ಶಕತೆಯನ್ನು ಕಾಪಾಡಿಕೊಂಡಿಲ್ಲ. ಇಂಥ ಹಲವು ಕಾರಣಗಳಿಂದಾಗಿ ನಾವು ಸಂಘದ‌ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದು ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Prajwal Revanna Case: ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Prajwal Revanna Case: ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರೇವಣ್ಣ ಅವರಿಗೆ ಜೈಲಾಗುತ್ತದೆಯೋ? ಅಥವಾ ಜಾಮೀನು ಸಿಗುತ್ತದೆಯೋ ಎಂಬ ಪ್ರಶ್ನೆ ಎದುರಾಗಿದೆ.

VISTARANEWS.COM


on

Prajwal Revanna Case HD Revanna bail plea to be heard tomorrow Jail or Bela
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ಇಂದು (ಮೇ 8) ವಿಚಾರಣೆಗೆ ಬರಲಿದೆ.

ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ.

ಇನ್ನು ಜಾಮೀನು ಅರ್ಜಿ ವಿಚಾರಣೆ ಸಂಬಂಧ ನ್ಯಾಯಾಲಯ ಸಹ ಒಂದು ಪ್ರಶ್ನೆ ಎತ್ತಿದೆ. ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಮಂಗಳವಾರ ನಡೆದ ವಿಚಾರಣೆ ವೇಳೆ ಪ್ರಶ್ನೆ ಮಾಡಿದೆ. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈ ವೇಳೆ ರೇವಣ್ಣ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಜಾಮೀನು ಸಿಕ್ಕಿಲ್ಲವಾದರೆ, ಪುನಃ ಕಸ್ಟಡಿಗೆ ನೀಡಲಾಗುತ್ತದೆಯೋ? ಅಥವಾ ನ್ಯಾಯಾಂಗ ಬಂಧನಕ್ಕೊಳಪಟ್ಟು ಪರಪ್ಪನ ಅಗ್ರಹಾರ ಸೇರಲಿದ್ದಾರೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌

ಬೆಂಗಳೂರು: ಲೈಂಗಿಕ ಹಗರಣದ (Pen Drive Case) ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna case) ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್‌ (Blue Corner Notice) ಜಾರಿ ಮಾಡಲು ಎಸ್ಐಟಿ (SIT) ಅಧಿಕಾರಿಗಳು ಮಾಡಿದ್ದ ಮನವಿಗೆ ಸ್ಪಂದಿಸಿರುವ ಸಿಬಿಐ (CBI), ಈ ಕುರಿತು ಇಂಟರ್‌ಪೋಲ್‌ನಿಂದ (Interpol) ಮೂಲಕ 196 ದೇಶಗಳಿಗೆ ಮೆಸೇಜ್‌ ರವಾನೆ ಮಾಡಲಾಗಿದೆ. ಹೀಗಾಗಿ ಪ್ರಜ್ವಲ್‌ ಎಲ್ಲಿಯೇ ಕಂಡರೂ, ಯಾವ ದೇಶದಿಂದ ಯಾವ ದೇಶಕ್ಕೆ ಹೋದರೂ ಎಸ್‌ಐಟಿಗೆ ಮಾಹಿತಿ ಸಿಗಲಿದೆ.

ಈ ಸಂಬಂಧ ಎಸ್‌ಐಟಿ ಅಧಿಕಾರಿಗಳಿಗೆ ಇಂಟರ್‌ಪೋಲ್‌ನಿಂದ ಮಾಹಿತಿ ಬಂದಿದೆ. ಹೀಗಾಗಿ ಇನ್ನು ಮುಂದೆ ಎಸ್‌ಐಟಿ ಸಹ ಪ್ರಜ್ವಲ್‌ ವಿರುದ್ಧ ಕಾನೂನು ಸಮರ ಸಾರಲು ಹೆಚ್ಚಿನ ಅನುಕೂಲವಾದಂತೆ ಆಗಲಿದೆ. ಅಲ್ಲದೆ, ಅವರ ಪ್ರತಿ ಚಲನವಲನಗಳು, ಸಂಚಾರದ ಮಾಹಿತಿಗಳು ಲಭ್ಯವಾಗಲಿವೆ.

ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟಿಸ್‌ ಅನ್ನು ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೋಟಿಸ್ ಪಡೆಯಲಿದೆ.

ಸದ್ಯ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿಯ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಯಾವ ದೇಶದಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ. ಈ ಬಗ್ಗೆ ಸಿಬಿಐಗೆ ಈಗಾಗಲೇ ಮನವಿ ಮಾಡಲಾಗಿದೆ. ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗಿದೆ. ನಿನ್ನೆಯವರೆಗೂ ಪ್ರಜ್ವಲ್‌ ಜರ್ಮನಿಯಲ್ಲಿ ಇದ್ದರು ಎಂಬ ಮಾಹಿತಿ ಇತ್ತು. ನಿನ್ನೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್‌ ತಮ್ಮಲ್ಲಿರುವ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಬಳಸಿ ವಿದೇಶಯಾನ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

ಬ್ಲೂ ಕಾರ್ನರ್ ನೊಟೀಸ್ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತದೆ. ಯಾವ ದೇಶದಲ್ಲಿ ಇದ್ದಾರೆ, ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಸುಳಿವು ಪಡೆಯಲು ಈ ನೋಟಿಸ್‌ ಮುಖ್ಯವಾಗಿದೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Continue Reading

ಕ್ರೈಂ

Murder Case: ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

Murder Case: 5 ದಿನದ ಹಿಂದೆ ಸುಂಕದಕಟ್ಟೆಯ ಸೊಲ್ಲಾಪುರಂ ಲೇ ಔಟ್‌ನಲ್ಲಿ ದಿವ್ಯಾ ಬಾಡಿಗೆ ಮನೆ ಮಾಡಿದ್ದರು. ಈಕೆ ಮನೆ ಮಾಡಿದ್ದ ಬಗ್ಗೆ ತಿಳಿದುಕೊಂಡಿದ್ದ ಶಾಂತಕುಮಾರ್ ರಾತ್ರಿ 9:30ರ ಸುಮಾರಿಗೆ ಬಾಡಿಗೆ ಮನೆ ಸಮೀಪ ಬಂದಿದ್ದ. ಅನಂತರ ಚಾಕುವಿನ ಮೂಲಕ ದಿವ್ಯಳ ಎದೆ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾನೆ.

VISTARANEWS.COM


on

woman murder case divya
Koo

ಬೆಂಗಳೂರು: ರಾಜಧಾನಿಯ (Bangalore news) ಸುಂಕದಕಟ್ಟೆಯ ಬಳಿ ಮಹಿಳೆಯೊಬ್ಬರು ಮಾಜಿ ಪ್ರಿಯಕರನಿಂದ (Woman Murder Case) ಕೊಲೆಯಾಗಿದ್ದಾರೆ. ನಿನ್ನೆ ರಾತ್ರಿ 9:40ರ ಸುಮಾರಿಗೆ ಈ ಹತ್ಯೆ ನಡೆದಿದೆ. ದಿವ್ಯಾ (30) ಕೊಲೆಯಾದ ಮಹಿಳೆ.

ತನ್ನ ಜೊತೆಗಿದ್ದ ಪ್ರಿಯಕರ ಶಾಂತಕುಮಾರ್ ಎಂಬಾತನಿಂದ ದಿವ್ಯಾ ಕೊಲೆಯಾಗಿದ್ದಾರೆ. ನಾಲ್ಕು ವರ್ಷದ ಹಿಂದೆ ಶಾಂತಕುಮಾರ್ ಜೊತೆ ಬಂದಿದ್ದ ದಿವ್ಯಾ ಈ ಮೊದಲು ಕಾಮಾಕ್ಷಿಪಾಳ್ಯದಲ್ಲಿ ಮನೆ ಮಾಡಿದ್ದರು. ಅನಂತರ ಇಬ್ಬರ ಮಧ್ಯೆ ಜಗಳವಾಗಿದ್ದು, ಇದರಿಂದ ಶಾಂತಕುಮಾರ್‌ನನ್ನು ದಿವ್ಯಾ ಬಿಟ್ಟುಬಿಟ್ಟಿದ್ದರು. ಇಬ್ಬರೂ ಮದುವೆಯಾಗಿದ್ದರೇ ಇಲ್ಲವೇ ಎಂಬ ಬಗ್ಗೆ ಅನುಮಾನವಿದೆ.

5 ದಿನದ ಹಿಂದೆ ಸುಂಕದಕಟ್ಟೆಯ ಸೊಲ್ಲಾಪುರಂ ಲೇ ಔಟ್‌ನಲ್ಲಿ ದಿವ್ಯಾ ಬಾಡಿಗೆ ಮನೆ ಮಾಡಿದ್ದರು. ಈಕೆ ಮನೆ ಮಾಡಿದ್ದ ಬಗ್ಗೆ ತಿಳಿದುಕೊಂಡಿದ್ದ ಶಾಂತಕುಮಾರ್ ರಾತ್ರಿ 9:30ರ ಸುಮಾರಿಗೆ ಬಾಡಿಗೆ ಮನೆ ಸಮೀಪ ಬಂದಿದ್ದ. ಅನಂತರ ಚಾಕುವಿನ ಮೂಲಕ ದಿವ್ಯಳ ಎದೆ ಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದಾನೆ. ಇಬ್ಬರೂ ಮೂಲತಃ ಬಿಡದಿಯವರು.

“ರಾತ್ರಿ 9:30 ಸುಮಾರಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ನಡೆದಿದೆ. ಕೊಲೆಯಾದ ಮಹಿಳೆ ದಿವ್ಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು. 35 ವರ್ಷದ ಶಾಂತಕುಮಾರ್ ಎಂಬಾತನಿಂದ ಕೊಲೆಯಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ” ಎಂದು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಅಟ್ಟಾಡಿಸಿ ಕೊಚ್ಚಿ ರೌಡಿಶೀಟರ್‌ ಕೊಲೆ

Murder Case

ಬೆಂಗಳೂರು: ನಡು ರಸ್ತೆಯಲ್ಲೇ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಭೀಕರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಪ್ರಾಣ ಬಿಟ್ಟಿದ್ದು, ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರ್ತಿಗೇಯನ್ (40) ಕೊಲೆಯಾದವ. ಮೃತ ವ್ಯಕ್ತಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ | Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Theft Case In Bengaluru

ಬೆಂಗಳೂರು: ಈಗೀನ ಕಾಲದಲ್ಲಿ ಯಾರನ್ನಾ ನಂಬೋದು ಬಿಡೋದು? ಅಕ್ಕನ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ತಂಗಿಯ (Theft Case) ಬಂಧನವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮಾ ಬಂಧಿತ ಆರೋಪಿಯಾಗಿದ್ದಾಳೆ. ಬಂಧಿಯಾಗಿರುವ ಉಮಾಳಿಂದ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ‌ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.

ಇನ್ನೂ ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಅವರು ಕೊಟ್ಟಿರಲಿಲ್ಲ ಎನ್ನಲಾಗಿದೆ.

ಇದೇ ಕಾರಣಕ್ಕೆ ಅಕ್ಕ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಳು. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್‌ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Continue Reading

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಆಹಾರ ಸುರಕ್ಷತೆಗಾಗಿ ನಿಷೇಧ ಆದೇಶ ಹೊರಡಿಸಿದರೆ ಸಾಕೆ?

1999ರಿಂದ 2016ರವರೆಗೆ ಪ್ಲಾಸ್ಟಿಕ್ ನಿಷೇಧ ಕುರಿತು ಹಲವು ಕಾನೂನುಗಳು ಬಂದಿವೆ. ಆದರೆ, ಸಂಪೂರ್ಣವಾಗಿ ಬಳಕೆ ನಿಲ್ಲಿಸಲು ಸಾಧ್ಯವಾಗಿಲ್ಲ. 2022ರ ಜುಲೈ 1ರಿಂದ ದೇಶದಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದು ಆರೋಗ್ಯದ ಮೇಲೆ ಮಾಡುವ ದುಷ್ಪರಿಣಾಮದ ಜೊತೆಗೆ ಪರಿಸರದ ಮೇಲೆ ಮಾಡುವ ದಾಳಿಯೂ ಇದಕ್ಕೆ ಕಾರಣ. ಆದರೆ ಅದು ಕಟ್ಟುನಿಟ್ಟಾಗಿ ಜಾರಿಯಾಗಿಲ್ಲ. ಉಳಿದ ನಿಷೇಧಗಳ ಕತೆಯೂ ಇದೇ ಆಗಿದೆ.

VISTARANEWS.COM


on

Food Safety
Koo

ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ (Liquid Nitrogen) ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಇತ್ತೀಚೆಗಂತೂ ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಹೆಚ್ಚಾಗುತ್ತಿದೆ. ಜನರು ತಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಪಾಯದ ಬಾಗಿಲು ತಟ್ಟುತ್ತಿದ್ದಾರೆ. ಲಿಕ್ವಿಡ್ ನೈಟ್ರೋಜನ್ ಮೂಲಕ ಸ್ಮೋಕ್‌ ಐಸ್‌ಕ್ರೀಂ, ಸ್ಮೋಕ್‌ ಬಿಸ್ಕತ್ತು, ಬಿಯರ್‌ನಲ್ಲಿ ಬಳಸಲಾಗುತ್ತಿದ್ದು, ಇದು ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ. ಸ್ಮೋಕಿಂಗ್ ಲಿಕ್ವಿಡ್ ನೈಟ್ರೋಜನ್ ಸೇವನೆ ಅಂಗಾಂಗಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಮುಖ್ಯವಾಗಿ ಲಿಕ್ವಿಡ್‌ ನೈಟ್ರೋಜನ್‌ ಸೇವನೆಯಿಂದ ಕರಳು, ಗಂಟಲುಗಳಲ್ಲಿ ಹುಣ್ಣಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿರ್ಬಂಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ. ಇದು ಸ್ವಾಗತಾರ್ಹ ನಿರ್ಧಾರ.

ಕಲರ್ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿಗೆ ಬಳಸುವ ಬಣ್ಣಗಳನ್ನು ಇತ್ತೀಚೆಗೆ ರಾಜ್ಯದಲ್ಲಿ ನಿಷೇಧಿಸಲಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ. ಗೋಬಿ ಮಂಚೂರಿಯಲ್ಲಿ ಟಾರ್ಟ್ರಾಸೈನ್ ಎಂಬ ಕೃತಕ ಬಣ್ಣಕಾರಕವನ್ನು ಬಳಸಲಾಗುತ್ತದೆ. ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಕಲಬೆರಕೆ ಕಲರ್ ಬಳಕೆ ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ. ಇಂಥ ಆಹಾರ ಈಗ ನಿಷೇಧಿತ. ಇದನ್ನು ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ.

ರೆಸ್ಟೋರಂಟ್‌ಗಳಲ್ಲಿ , ಬೀದಿ ಬದಿಯ ಸ್ಟಾಲ್‌ಗಳಲ್ಲಿ ಫುಡ್‌ ಪ್ರಿಯರನ್ನು ಆಕರ್ಷಿಸಲೆಂದೇ ಈ ಥರದ ಬಣ್ಣಗಳನ್ನು ಬಳಸುವುದು ರೂಢಿಯಾಗಿಬಿಟ್ಟಿದೆ. ಜನರೂ ಇದರ ಅಪಾಯದ ಅರಿವಿಲ್ಲದೆ ಬಳಸುತ್ತಲೇ ಇರುತ್ತಾರೆ. ಈ ನಡುವೆ ಚಿಕನ್‌ ಕಬಾಬ್‌ನಲ್ಲೂ ಕೆಲವರು ಬಣ್ಣಕಾರಕಗಳನ್ನು ಬಳಸುತ್ತಾರೆ. ಇದು ಕೂಡಾ ಅಪಾಯಕಾರಿ. ಆಹಾರ ಇಲಾಖೆಯ ಕಣ್ಣು ಇದರ ಮೇಲೂ ಬಿದ್ದಿದೆ. ಕಬಾಬ್ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

ಕಾನೂನುಗಳನ್ನೇನೋ ಮಾಡಬಹುದು. ಆದರೆ ಅನುಷ್ಠಾನದ ಕತೆಯೇನು? ನೋಟೀಸ್ ನೀಡಿ ಬಿಟ್ಟುಬಿಟ್ಟರೆ ಜನ ಬಣ್ಣದ ಬಳಕೆ ಬಿಡುತ್ತಾರೆಯೇ? ಬೀದಿ ಬೀದಿಗಳಲ್ಲಿ ಕಲರ್‌ಫುಲ್ ಕಾಟನ್ ಕ್ಯಾಂಡಿಗಳು ಹಾಗೂ ಗೋಬಿ ಮಂಚೂರಿ ಬಳಕೆ ನಡೆದೇ ಇದೆ. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ನಿಗಾ ವ್ಯವಸ್ಥೆ ಬೇಡವೇ?

1999ರಿಂದ 2016 ರವರೆಗೆ ಪ್ಲಾಸ್ಟಿಕ್ ನಿಷೇಧ ಕುರಿತು ಹಲವು ಕಾನೂನುಗಳು ಬಂದಿವೆ. ಆದರೆ, ಸಂಪೂರ್ಣವಾಗಿ ಬಳಕೆಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ. 2022ರ ಜುಲೈ 1ರಿಂದ ದೇಶದಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದು ಆರೋಗ್ಯದ ಮೇಲೆ ಮಾಡುವ ದುಷ್ಪರಿಣಾಮದ ಜೊತೆಗೆ ಪರಿಸರದ ಮೇಲೆ ಮಾಡುವ ದಾಳಿಯೂ ಇದಕ್ಕೆ ಕಾರಣ. ಆದರೆ ಅದು ಕಟ್ಟುನಿಟ್ಟಾಗಿ ಜಾರಿಯಾದಂತಿಲ್ಲ. ಏಕಬಳಕೆ ಪ್ಲಾಸ್ಟಿಕ್ ಮುಂದುವರಿದಿರುವುದು ಕಾಣಿಸುತ್ತದೆ.

ಇದೆಲ್ಲದರ ಬಗ್ಗೆ ಕಾನೂನು ಮಾಡಿದರೆ ಸಾಲದು, ದೃಢವಾದ ಜಾರಿ ಮಾಡುವಿಕೆ ಇರಬೇಕು. ಸಾರ್ವಜನಿಕರು ಕೂಡ ಇದನ್ನು ಮನಗಂಡು, ಈ ಹಾನಿಕರ ವಸ್ತುಗಳಿಗೆ ಉತ್ತೇಜನ ನೀಡುವುದು ನಿಲ್ಲಿಸಬೇಕು. ಆಗ ಮಾತ್ರ ತಜ್ಞರ, ಆರೋಗ್ಯ ಇಲಾಖೆಯ ಕಳಕಳಿ ಸಾರ್ಥಕ ಆಗಬಹುದು.

ಇದನ್ನೂ ಓದಿ: Summer Food Tips: ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸುವ ಸರಳ ಆಹಾರಗಳಿವು!

Continue Reading
Advertisement
EVMs damage
ದೇಶ5 mins ago

EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

Manali Tour
ಪ್ರವಾಸ28 mins ago

Manali Tour: ಭೂಲೋಕದ ಸ್ವರ್ಗ ಮನಾಲಿಗೆ ಪ್ರವಾಸ ಮಾಡಲು ಯಾವ ಸಮಯ ಸೂಕ್ತ?

Akshaya Tritiya 2024
ಧಾರ್ಮಿಕ29 mins ago

Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Prajwal Revanna Case HD Revanna bail plea to be heard tomorrow Jail or Bela
ಕ್ರೈಂ39 mins ago

Prajwal Revanna Case: ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

woman murder case divya
ಕ್ರೈಂ50 mins ago

Murder Case: ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

Uttarakhand Wildfire
ದೇಶ55 mins ago

Uttarakhand Wild fire:5 ತಿಂಗಳು.. 910 ಕಾಡ್ಗಿಚ್ಚು ಪ್ರಕರಣ;ಸುಪ್ರೀಂಕೋರ್ಟ್‌ನಲ್ಲಿ ಇಂದು ತುರ್ತು ವಿಚಾರಣೆ

nanna desha nanna dani column
ಅಂಕಣ1 hour ago

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

Ghee Testing Method
ಆಹಾರ/ಅಡುಗೆ2 hours ago

Ghee Testing Method: ನಾವು ತಿನ್ನುವ ತುಪ್ಪ ಶುದ್ಧವಾಗಿದೆಯೇ ಎಂದು ಪರೀಕ್ಷಿಸುವುದು ಹೇಗೆ? ಇಲ್ಲಿದೆ ವಿಧಾನ

karnataka weather Forecast
ಮಳೆ2 hours ago

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Food Safety
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಆಹಾರ ಸುರಕ್ಷತೆಗಾಗಿ ನಿಷೇಧ ಆದೇಶ ಹೊರಡಿಸಿದರೆ ಸಾಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ12 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ15 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ16 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌