SSC MTS Recruitment 2023 : ಎಸ್‌ಎಸ್‌ಎಲ್‌ಸಿ ಆದವರಿಗೆ ಎಂಟಿಎಸ್‌ ಹುದ್ದೆ; ಅರ್ಜಿ ಸಲ್ಲಿಸಲು ಇಂದು ಕೊನೆ ದಿನ - Vistara News

ಉದ್ಯೋಗ

SSC MTS Recruitment 2023 : ಎಸ್‌ಎಸ್‌ಎಲ್‌ಸಿ ಆದವರಿಗೆ ಎಂಟಿಎಸ್‌ ಹುದ್ದೆ; ಅರ್ಜಿ ಸಲ್ಲಿಸಲು ಇಂದು ಕೊನೆ ದಿನ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 11 ಸಾವಿರ ಎಂಟಿಎಸ್‌ ಮತ್ತು ಹವಲ್ದಾರ್‌ಗಳ ನೇಮಕಕ್ಕೆ ಪರೀಕ್ಷೆ (SSC MTS Recruitment 2023) ನಡೆಸುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

VISTARANEWS.COM


on

SSC MTS 2022 registration last date extended till February 24
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಕೇಂದ್ರದ ವಿವಿಧ ಸಚಿವಾಲಯ, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಗ್ರೂಪ್‌ ʻಸಿʼಯ ʻಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ʼ (ಎಂಟಿಎಸ್‌) (SSC MTS Recruitment 2023) ಮತ್ತು ಹವಾಲ್ದಾರ್ ಹುದ್ದೆಗಳ (CBIC & CBN) ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು (ಫೆ.24) ಕೊನೆಯ ದಿನವಾಗಿದೆ.

ಇನ್ನೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಇಂದು ರಾತ್ರಿ 11 ಗಂಟೆಯ ಒಳಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿಯೇ ಅರ್ಜಿ ಶುಲ್ಕ ಪಾವತಿಸಲು ಫೆಬ್ರವರಿ 26ರವರೆಗೆ ಕಾಲಾವಕಾಶ ನೀಡಲಾಗಿದೆ. ಆಫ್‌ ಲೈನ್‌ನಲ್ಲಿ ಫೆ. 27ರವರೆಗೆ ಅರ್ಜಿ ಶುಲ್ಕ ಪಾವತಿಸಬಹುದಾಗಿದೆ. ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಈಗ ದಿನಾಂಕ 24-02-2023 ಕ್ಕೆ ಪರಿಗಣಿಸಲಾಗುತ್ತದೆ.

ಈ ನೇಮಕಾತಿಯಲ್ಲಿ ನಡೆಸಲಾಗುವ ಕಂಪ್ಯೂಟರ್‌ ಆಧಾರಿತ ಪರೀಕ್ಷೆಯನ್ನು (Computer Based Examination) ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುತ್ತಿದೆ. ರಾಜ್ಯದ ಅಭ್ಯರ್ಥಿಗಳು ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಲು 08 ಕೋಡ್‌ ಬಳಸಬಹುದು.

ವಿವಿಧ ಇಲಾಖೆಗಳಲ್ಲಿನ ಒಟ್ಟು 10,880 ಎಂಟಿಎಸ್‌ ಹುದ್ದೆಗಳಿಗೆ ಹಾಗೂ ಸುಂಕ ಮತ್ತು ಪರೋಕ್ಷ ತೆರಿಗೆಯ ಕೇಂದ್ರೀಯ ಮಂಡಳಿ (CBIC) ಮತ್ತು ನರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ (CBN) ನಲ್ಲಿನ 529 ಹವಾಲ್ದಾರ್ ಹುದ್ದೆಗಳಿಗೆ ಈ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ನಿರೀಕ್ಷೆ ಇದ್ದು, ಈ ಕುರಿತು ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗುವುದು ಎಂದು ಎಸ್‌ಎಸ್‌ಸಿಯು ತಿಳಿಸಿದೆ.

ಯಾವ ರಾಜ್ಯದಲ್ಲಿ ಎಷ್ಟು ಹುದ್ದೆಗಳಿವೆ ನೋಡಲು ಇಲ್ಲಿ ಕ್ಲಿಕ್‌ (click here) ಮಾಡಿ

ರಾಜ್ಯದಲ್ಲಿ 483 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ 18-25 ವರ್ಷ ವಯೋಮಿತಿಯ ಹುದ್ದೆಗಳು 375 ಹಾಗೂ 18-27 ವಯೋಮಿತಿಯ ಹುದ್ದೆಗಳು 108. ಬೆಂಗಳೂರಿನಲ್ಲಿರುವ ಎಸ್‌ಎಸ್‌ಸಿಯ ಪ್ರಾದೇಶಿಕ ಕಚೇರಿಯ ಮೂಲಕ ಈ ನೇಮಕ ಪ್ರಕ್ರಿಯೆ ನಡೆಯಲಿದೆ.

ವಿದ್ಯಾರ್ಹತೆ ಏನು?

ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದಾಖಲೆ ಪರಿಶೀಲನೆಯ ಸಂದರ್ಭದಲ್ಲಿ 17-02-2023 ಗೂ ಮುನ್ನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದಕ್ಕೆ ದಾಖಲೆಗಳನ್ನು ಹಾಜರು ಪಡಿಸಬೇಕಿರುತ್ತದೆ.

ಹವಾಲ್ದಾರ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಪುರಷ ಅಭ್ಯರ್ಥಿಗಳು 157.5 ಸೆಂ.ಮೀ. ಎತ್ತರವಿರಬೇಕು. ಎದೆಯ ಸುತ್ತಳತೆಯು 81 ಸೆಂ.ಮೀ. ಇರಬೇಕು. ಮಹಿಳಾ ಅಭ್ಯರ್ಥಿಗಳು 152 ಸೆಂ.ಮೀ. ಎತ್ತರವಿರಬೇಕು. 48 ಕೆಜಿ ತೂಕವಿರಬೇಕು.

ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ವಿಳಾಸ : https://ssc.nic.in/Portal/Apply

ವಯೋಮಿತಿ ಎಷ್ಟು?

ಕೆಲವು ಹುದ್ದೆಗಳಿಗೆ 18-25 ಮತ್ತೆ ಕೆಲವು ಹುದ್ದೆಳಿಗೆ 18-27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿಯಲ್ಲಿ ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ ಎಷ್ಟು ಕಟ್ಟಬೇಕು?

ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಮಹಿಳಾ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿರುತ್ತದೆ. ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿರುತ್ತದೆ. ಆನ್‌ಲೈನ್‌ನಲ್ಲಿ ಸಾಧ್ಯವಾಗದೇ ಇರುವವರು ಎಸ್‌ಬಿಐ ಬ್ಯಾಂಕ್‌ನಲ್ಲಿ ಚಲನ್‌ ಮೂಲಕ ಪಾವತಿಸಲು ಅವಕಾಶ ನೀಡಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ನೇಮಕ ಹೇಗೆ?

ಮೊದಲಿಗೆ ಕಂಪ್ಯೂಟರ್‌ ಆಧಾರಿತ ಎರಡು ಹಂತದ ಪರೀಕ್ಷೆ (2 ಸೆಷನ್‌ನಲ್ಲಿ ನಡೆಯಲಿದೆ) ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ, ಅಗತ್ಯ ಇದ್ದರೆ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ. ಅಗತ್ಯ ವಿಲ್ಲದ ಹುದ್ದೆಗಳಿಗೆ ನೇರವಾಗಿ ದಾಖಲೆ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಪರೀಕ್ಷೆಗಳು ಹೇಗಿರುತ್ತವೆ, ಯಾವೆಲ್ಲಾ ವಿಷಯಗಳನ್ನು ಒಳಗೊಂಡಿರುತ್ತದೆ ಎಂಬ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ ನಡೆಯುತ್ತದೆ?

ರಾಜ್ಯದ ಒಟ್ಟು ಎಂಟು ಜಿಲ್ಲಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತೆ. ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಪರೀಕ್ಷಾ ಕೇಂದ್ರ ಇರಲಿದೆ.

ನೇಮಕದ ಕುರಿತ ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌: https://ssc.nic.in
ಬೆಂಗಳೂರು ಎಸ್‌ಎಸ್‌ಸಿ ಸಹಾಯವಾಣಿ ಸಂಖ್ಯೆ: 080-25502520, 09483862020

ಇದನ್ನೂ ಓದಿ : BOB Recruitment 2023 : ಬ್ಯಾಂಕ್‌ ಆಫ್‌ ಬರೋಡಾದಲ್ಲಿ 500 ಸ್ವಾಧೀನಾಧಿಕಾರಿ‌ ಹುದ್ದೆಗಳಿಗೆ ನೇಮಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

Job Recruitment ಉದ್ಯೋಗ ಎಲ್ಲರಿಗೂ ಅಗತ್ಯವಾಗಿರುತ್ತದೆ.ಇಂದಿನ ಕಾಲದಲ್ಲಿ ಕೆಲಸ ಸಿಗುವುದೇ ಒಂದು ದೊಡ್ಡ ಸವಾಲಾಗಿದೆ. ಅದರಲ್ಲೂ ಬ್ಯಾಂಕ್ ಕೆಲಸಗಳಿಗಾಗಿ ಹೆಚ್ಚಿನವರು ಕಾಯುತ್ತಿರುತ್ತಾರೆ. ಕೆಲವರ ಕನಸಿನ ಉದ್ಯೋಗವಾಗಿರುತ್ತದೆ ಇದು. ಬ್ಯಾಂಕ್ ಆಫ್ ಬರೋಡಾ ಒಂದಷ್ಟು ಹುದ್ದೆಗಳಿಗಾಗಿ ನೇಮಕಾತಿ ಮಾಡಿಕೊಳ್ಳಲಿದೆ. ಆಸಕ್ತರು ಇದಕ್ಕೆ ಪ್ರಯತ್ನಿಸಬಹುದು. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ bankofbaroda.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 2, 2024 ಕೊನೆಯ ದಿನವಾಗಿದೆ.

VISTARANEWS.COM


on

Job Recruitment
Koo

ಬೆಂಗಳೂರು: ಬ್ಯಾಂಕ್ ಆಫ್ ಬರೋಡಾ 2024ಕ್ಕೆ 627 ನಿರ್ವಹಣೆ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಯನ್ನು (Job Recruitment )ಘೋಷಿಸಿದೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ bankofbaroda.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 2, 2024 ಕೊನೆಯ ದಿನವಾಗಿದೆ.

ಹುದ್ದೆಯ ವಿವರಗಳು:

  • ಡೆಪ್ಯುಟಿ ಉಪಾಧ್ಯಕ್ಷ – ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಎಂಜಿನಿಯರ್ : 4 ಹುದ್ದೆಗಳು
  • ಸಹಾಯಕ ಉಪಾಧ್ಯಕ್ಷ- ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಎಂಜಿನಿಯರ್ : 9 ಹುದ್ದೆಗಳು
  • ಆರ್ಕಿಟೆಕ್ಟ್ : 8 ಹುದ್ದೆಗಳು
  • ಝೋನಲ್ ಸೇಲ್ಸ್ ಮ್ಯಾನೇಜರ್ : 3 ಹುದ್ದೆಗಳು
  • ಸಹಾಯಕ ಉಪಾಧ್ಯಕ್ಷ : 20 ಹುದ್ದೆಗಳು
  • ಸೀನಿಯರ್ ಮ್ಯಾನೇಜರ್ : 22 ಹುದ್ದೆಗಳು
  • ಮ್ಯಾನೇಜರ್ : 11 ಹುದ್ದೆಗಳು
  • ರೇಡಿಯನ್ಸ್ ಪ್ರೈವೇಟ್ ಸೇಲ್ಸ್ ಹೆಡ್ : 1 ಹುದ್ದೆ
  • ಗ್ರೂಪ್ ಹೆಡ್ : 4 ಹುದ್ದೆಗಳು
  • ಟೆರಿಟರಿ ಮುಖ್ಯಸ್ಥ : 8 ಹುದ್ದೆಗಳು
  • ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ : 234 ಹುದ್ದೆಗಳು
  • ಇ-ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್ : 26 ಹುದ್ದೆಗಳು
  • ಪ್ರೈವೇಟ್ ಬ್ಯಾಂಕರ್- ರೇಡಿಯನ್ಸ್ ಪ್ರೈವೇಟ್: 12 ಹುದ್ದೆಗಳು
  • ಗ್ರೂಪ್ ಸೇಲ್ಸ್ ಹೆಡ್(ವರ್ಚುವಲ್ ಆರ್ ಎಂ ಸೇಲ್ಸ್ ಹೆಡ್):1 ಹುದ್ದೆ
  • ವೆಲ್ತ್ ಸ್ಟ್ರಾಟಜಿಸ್ಟ್(ಹೂಡಿಕೆ ಮತ್ತು ವಿಮೆ)/ಪ್ರೊಡಕ್ಟ್ ಹೆಡ್ : 10 ಹುದ್ದೆಗಳು
  • ಪೋರ್ಟ್‌ಪೊಲಿಯೊ ರಿಸರ್ಚ್ ಆ್ಯನಲಿಸ್ಟ್ :1 ಹುದ್ದೆ
  • ಎವಿಪಿ- ಸ್ವಾಧೀನ ಮತ್ತು ಸಂಬಂಧ ನಿರ್ವಾಹಕ: 19 ಹುದ್ದೆಗಳು
  • ವಿದೇಶಿ ವಿನಿಮಯ ಮತ್ತು ಸಂಬಂಧ ವ್ಯವಸ್ಥಾಪಕ : 15 ಹುದ್ದೆಗಳು
  • ಕ್ರೆಡಿಟ್ ಆ್ಯನಲಿಸ್ಟ್ : 80 ಹುದ್ದೆಗಳು
  • ರಿಲೇಶನ್ ಶಿಪ್ ಮ್ಯಾನೇಜರ್ : 66 ಹುದ್ದೆಗಳು
  • ಸೀನಿಯರ್ ಮ್ಯಾನೇಜರ್ –ಬಿಸಿನೆಸ್ ಫೈನಾನ್ಸ್ : 4 ಹುದ್ದೆಗಳು
  • ಮುಖ್ಯ ವ್ಯವಸ್ಥಾಪಕ- ಇಂಟರ್ ನಲ್ ಕಂಟ್ರೋಲ್ಸ್ : 3 ಹುದ್ದೆಗಳು

ಅರ್ಹತೆ ಏನು?

ಬ್ಯಾಂಕ್ ಆಫ್ ಬರೋಡಾ ಆಸಕ್ತ ಅರ್ಜಿದಾರರಿಗೆ ಲಿಖಿತ ಪರೀಕ್ಷೆಗಳು ಮತ್ತು ಸಂದರ್ಸನಗಳನ್ನು ಒಳಗೊಂಡ ಆಯ್ಕೆ ಪ್ರಕ್ರಿಯೆ ಇರುತ್ತದೆ. ಅಧಿಸೂಚನೆಯಲ್ಲಿ ವಿವರಿಸಿರುವ ಮಾರ್ಗಸೂಚಿಗಳನ್ನು ಎಚ್ಚರಿಕೆಯಿಂದ ಅನುಸರಿಸುವ ಮೂಲಕ ಅಭ್ಯರ್ಥಿಗಳು ಅಗತ್ಯವಿರುವ ಎಲ್ಲಾ ಅರ್ಹತೆಗಳನ್ನು ಹೊಂದಿರುತ್ತಾರೆ ಮತ್ತು ನೇಮಕಾತಿ ಪ್ರಕ್ರಿಯೆಗೆ ಸಿದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಬಹುದು. ಹೆಚ್ಚವರಿಯಾಗಿ ಬ್ಯಾಂಕ್ ಆಫ್ ಬರೋಡಾ ಪ್ರತಿ ಉದ್ಯೋಗಕ್ಕೆ ಸಂಬಂಧಿಸಿದ ಜವಾಬ್ದಾರಿಗಳು ಮತ್ತು ನಿರೀಕ್ಷೆಗಳ ಬಗ್ಗೆ ಮೌಲ್ಯಯುತವಾದ ವಿವರಗಳನ್ನು ನೀಡುತ್ತದೆ ಮತ್ತು ಅಭ್ಯರ್ಥಿಗಳು ಸಂಸ್ಥೆಯೊಳಗೆ ತಮ್ಮ ವೃತ್ತಿ ಜೀವನದ ಭವಿಷ್ಯದ ಬಗ್ಗೆ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.

ನೇಮಕಾತಿ ಪಾರದರ್ಶಕವಾಗಿದ್ದು, ಅಭ್ಯರ್ಥಿಗಳ ಪ್ರತಿಭೆಯನ್ನು ಗಮನಿಸಿ ಬ್ಯಾಂಕ್ ಆಫ್ ಬರೋಡಾ ಉನ್ನತ ಅರ್ಹ ವ್ಯಕ್ತಿಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಹಾಗಾಗಿ ಅಭ್ಯರ್ಥಿಗಳು ಅಪ್ಲಿಕೇಶನ್ ಪ್ರಕ್ರಿಯೆ ಸಮಯದಲ್ಲಿ ತಮ್ಮ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಪರಿಣಾಮಕಾರಿಯಾಗಿ ಸಮರ್ಥಿಸಬಹುದು.

ಆಯ್ಕೆ ಪ್ರಕ್ರಿಯೆ

ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲು ಬಂದ ಅರ್ಹ ಅಭ್ಯರ್ಥಿಗಳ ರೆಸ್ಯೂಮ್ ಗಳು ಮತ್ತು ಅಪ್ಲಿಕೇಶನ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುವುದು. ಇಂಟರ್ ವೀವ್ ನಲ್ಲಿ ಅಭ್ಯರ್ಥಿಯ ಕೌಶಲ, ಅನುಭವ ಮತ್ತು ಸ್ಥಾನಕ್ಕೆ ಸರಿಹೊಂದುವಂತಹ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಕೌಶಲ್ಯ ಪರೀಕ್ಷೆ, ಗ್ರೂಪ್ ಇಂಟರ್ ವೀವ್ ನಂತಹ ಇತರ ವಿಧಾನಗಳಿಂದ ಅಭ್ಯರ್ಥಿಗಳ ಸಾಮರ್ಥ್ಯವನ್ನು ಗಮನಿಸಲಾಗುತ್ತದೆ. ಅದರಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ EWS ಮತ್ತು OBC ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂ. ಜೊತೆಗೆ GST ಮತ್ತು ವಹಿವಾಟು ಶುಲ್ಕಗಳನ್ನು ನೀಡಬೇಕಾಗುತ್ತದೆ. SC, ST, PWD ಮತ್ತು ಮಹಿಳಾ ಅಭ್ಯರ್ಥಿಗಳು 100 ರೂ. ಜೊತೆಗೆ GST ಮತ್ತು ವಹಿವಾಟು ಶುಲ್ಕಗಳನ್ನು ನೀಡಬೇಕಾಗುತ್ತದೆ. ಹಾಗೇ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮತ್ತು ಇಂಟರ್ ನೆಟ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಳಸಿ ಶುಲ್ಕ ಪಾವತಿಸಬಹುದು.

ಇದನ್ನೂ ಓದಿ: Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

ಹೆಚ್ಚಿನ ಮಾಹಿತಿಗಳನ್ನು ಪಡೆಯಲು ಮತ್ತು ಅರ್ಜಿ ಸಲ್ಲಿಸಲು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.

Continue Reading

ಉದ್ಯೋಗ

HPCL Job Interview: ಎಚ್ ಪಿ ಸಿ ಎಲ್ ಸಿಎಂಡಿ ಹುದ್ದೆ ಸಂದರ್ಶನ; ಘಟಾನುಘಟಿ 8 ಅಭ್ಯರ್ಥಿಗಳು ಫೇಲ್!

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ಸಿಎಂಡಿ ಹುದ್ದೆಗೆ ಸಂದರ್ಶನ ನೀಡಿದ (HPCL Job Interview) ಎಲ್ಲ ಎಂಟು ಅಭ್ಯರ್ಥಿಗಳನ್ನು ಸರ್ಕಾರದ ಪಬ್ಲಿಕ್ ಎಂಟರ್‌ಪ್ರೈಸಸ್ ಸೆಲೆಕ್ಷನ್ ಬೋರ್ಡ್ (ಪಿಇಎಸ್‌ಬಿ) ತಿರಸ್ಕರಿಸಿದೆ. ಜೂನ್ 14ರಂದು ಪಿಇಎಸ್‌ಬಿ ಎಚ್‌ಪಿಸಿಎಲ್ ಮಂಡಳಿಯ ನಿರ್ದೇಶಕರು ಮತ್ತು ಇಂದ್ರಪ್ರಸ್ಥ ಗ್ಯಾಸ್‌ನ ಎಂಡಿ ಸೇರಿ ಎಂಟು ಅಭ್ಯರ್ಥಿಗಳ ಸಂದರ್ಶನ ನಡೆಸಲಾಗಿತ್ತು.

VISTARANEWS.COM


on

By

HPCL Job Interview
Koo

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (HPCL) ಸಿಎಂಡಿ (CMD) ಹುದ್ದೆಗೆ ಸರ್ಕಾರದ ಪಬ್ಲಿಕ್ ಎಂಟರ್‌ಪ್ರೈಸಸ್ ಸೆಲೆಕ್ಷನ್ ಬೋರ್ಡ್ (PESB) ಸಂದರ್ಶನ (HPCL Job Interview) ನಡೆಸಿದ್ದು, ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸಿದೆ. ಜೂನ್ 14 ರಂದು ಪಿಇಎಸ್‌ಬಿ ಎಚ್‌ಪಿಸಿಎಲ್ ಮಂಡಳಿಯ ನಿರ್ದೇಶಕರು ಮತ್ತು ಇಂದ್ರಪ್ರಸ್ಥ ಗ್ಯಾಸ್‌ನ ಎಂಡಿ ಸೇರಿ ಎಂಟು ಅಭ್ಯರ್ಥಿಗಳ ಸಂದರ್ಶನ ನಡೆಸಿದ್ದರು. ಆದರೆ ಅವರೆಲ್ಲರನ್ನೂ ತಿರಸ್ಕರಿಸಲಾಗಿದೆ.

ಎಚ್‌ಪಿಸಿಎಲ್ ನ ಸಿಎಂಡಿ ಹುದ್ದೆಗೆ ಇದು ಮೂರನೇ ಸಂದರ್ಶನವಾಗಿದ್ದು, ಈವರೆಗೆ ರಾಜ್ಯ ತೈಲ ಸಂಸ್ಥೆಯಲ್ಲಿನ ಈ ಹುದ್ದೆಗೆ ಯಾವುದೇ ಸೂಕ್ತ ಅಭ್ಯರ್ಥಿಯನ್ನು ಮಂಡಳಿಗೆ ಆಯ್ಕೆ ಮಾಡುವುದು ಸಾಧ್ಯವಾಗಲಿಲ್ಲ.

ಎಚ್‌ಪಿಸಿಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ (ಸಿಎಮ್‌ಡಿ) ಹುದ್ದೆಗೆ ಯಾವುದೇ ಅಭ್ಯರ್ಥಿಯನ್ನು ಮಂಡಳಿಯು ಶಿಫಾರಸು ಮಾಡಿಲ್ಲ ಮತ್ತು ಸರ್ಚ್-ಕಮ್-ಸೆಲೆಕ್ಷನ್ ಕಮಿಟಿ (ಎಸ್‌ಸಿಎಸ್‌ಸಿ) ಸೇರಿದಂತೆ ಆಯ್ಕೆಗಾಗಿ ಮುಂದಿನ ಕ್ರಮದ ಸೂಕ್ತ ಕೋರ್ಸ್ ಅನ್ನು ಆಯ್ಕೆ ಮಾಡಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ಸಲಹೆ ನೀಡಿದೆ ಎಂದು ಪಿಇಎಸ್ ಬಿ ಸಮಿತಿಯು ಅಧಿಸೂಚನೆಯಲ್ಲಿ ತಿಳಿಸಿದೆ.

ಎಚ್‌ಪಿಸಿಎಲ್ ನ ಸಿಎಂಡಿ ಹುದ್ದೆಯು 2024ರ ಸೆಪ್ಟೆಂಬರ್ 1ರಂದು ಖಾಲಿಯಾಗಲಿದೆ. ಪ್ರಸ್ತುತ ಪುಷ್ಪ್ ಕುಮಾರ್ ಜೋಶಿ ಅವರು ಈ ಹುದ್ದೆಯಲ್ಲಿದ್ದು, ಅವರು 60 ವರ್ಷಗಳನ್ನು ತಲುಪಿದಾಗ ನಿವೃತ್ತರಾಗಲಿದ್ದಾರೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಮತ್ತು ಆಯಿಲ್ ಆಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ಒಎನ್‌ಜಿಸಿ) ನಲ್ಲಿ ಉನ್ನತ ಹುದ್ದೆಗೆ ಸೂಕ್ತವಾದ ಯಾರನ್ನೂ ಪಿಇಎಸ್‌ಬಿ ಈ ಹಿಂದೆಯೂ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಇದು ಐಒಸಿಯಲ್ಲಿ ಅಧಿಕಾರ ವಹಿಸಿಕೊಂಡವರು ನಿವೃತ್ತಿ ವಯಸ್ಸನ್ನು ತಲುಪಿದ ಅನಂತರವೂ ಹೆಚ್ಚುವರಿ ವರ್ಷ ಅಧಿಕಾರದಲ್ಲಿ ಇರಲು ಸಾಧ್ಯವಾಯಿತು ಮತ್ತು ನಿವೃತ್ತ ಕಾರ್ಯನಿರ್ವಾಹಕರಿಗೆ ಒಎನ್ ಜಿಸಿ ಯಲ್ಲಿ ಪ್ರಭಾರ ಅಧಿಕಾರವನ್ನು ನೀಡಲಾಯಿತು.

ಪಿಇಎಸ್‌ಬಿ 2021ರ ಜೂನ್ 3ರಂದು ಭಾರತದ ಅತಿದೊಡ್ಡ ತೈಲ ಮತ್ತು ಅನಿಲ ಉತ್ಪಾದಕ ಒಎನ್ ಜಿಸಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಐಎಎಸ್ ಅಧಿಕಾರಿಗಳು ಸೇರಿದಂತೆ ಒಂಬತ್ತು ಅಭ್ಯರ್ಥಿಗಳನ್ನು ಸಂದರ್ಶಿಸಿತು. ಹಿರಿಯ ಅಧಿಕಾರಿಗಳಾದ ಅವಿನಾಶ್ ಜೋಶಿ, ನೀರಜ್ ವರ್ಮಾ, ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಹಣಕಾಸು ನಿರ್ದೇಶಕಿ ಪೊಮಿಲಾ ಜಸ್ಪಾಲ್ ಮತ್ತು ತಂತ್ರಜ್ಞಾನ ಮತ್ತು ಕ್ಷೇತ್ರ ಸೇವೆಗಳ ಒಎನ್‌ಜಿಸಿ ನಿರ್ದೇಶಕ ಓಂ ಪ್ರಕಾಶ್ ಸಿಂಗ್ ಅವರನ್ನು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಅನಂತರ ಸಚಿವಾಲಯವು ಆಯ್ಕೆ ಸಮಿತಿಯನ್ನು ರಚಿಸಿತು. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ನಿಂದ 60 ವರ್ಷ ವಯಸ್ಸಿನ ಅನಂತರ ನಿವೃತ್ತರಾದ ಅರುಣ್ ಕುಮಾರ್ ಸಿಂಗ್ ಅವರನ್ನು ಒಎನ್ ಜಿಸಿ ಮುಖ್ಯಸ್ಥರನ್ನಾಗಿ ಹೆಸರಿಸಿತು. ಸಿಂಗ್ ಅವರು ಮೊದಲ ಸ್ಥಾನದಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರಲಿಲ್ಲ. ಆದರೆ 60 ವರ್ಷ ವಯಸ್ಸಿನ ವ್ಯಕ್ತಿಗಳನ್ನು ಪರಿಗಣಿಸಲು ಅರ್ಹತಾ ನಿಯಮವನ್ನು ಬದಲಾಯಿಸಲಾಯಿತು. ಅವರಿಗೆ ಮೂರು ವರ್ಷಗಳ ಅವಧಿಯನ್ನು ನೀಡಲಾಗಿದ್ದು ಅದು ಡಿಸೆಂಬರ್ 2025ರಲ್ಲಿ ಕೊನೆಗೊಳ್ಳಲಿದೆ.

ಐಒಸಿ, ಪಿಇಎಸ್‌ಬಿ ಪ್ರಕರಣದಲ್ಲಿ ಕಳೆದ ವರ್ಷ ಮೇನಲ್ಲಿ ಶ್ರೀಕಾಂತ್ ಮಾಧವ್ ವೈದ್ಯ ಅವರ ಬದಲಿಗಾಗಿ ಯಾವುದೇ ಶಿಫಾರಸು ಮಾಡಲಿಲ್ಲ. ಅವರು ಆಗಸ್ಟ್ 2023 ರಲ್ಲಿ 60 ವರ್ಷ ವಯಸ್ಸಿನ ಅನಂತರ ನಿವೃತ್ತಿ ಹೊಂದಿದ್ದರು. ಸಮಿತಿಯು ಚೆನ್ನೈ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನ (CPCL) ವ್ಯವಸ್ಥಾಪಕ ನಿರ್ದೇಶಕ ಅರವಿಂದ್ ಕುಮಾರ್ ಸೇರಿ 10 ಅಭ್ಯರ್ಥಿಗಳನ್ನು ಸಂದರ್ಶಿಸಿತು.

2020ರ ಜುಲೈ 1ರಂದು ಭಾರತದ ಅತಿದೊಡ್ಡ ತೈಲ ಕಂಪೆನಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವೈದ್ಯ ಅವರು ಗುತ್ತಿಗೆ ಆಧಾರದ ಮೇಲೆ ಮರು-ಉದ್ಯೋಗ ದಲ್ಲಿ ತಮ್ಮ ನಿವೃತ್ತಿಯ ದಿನಾಂಕದ ಅನಂತರ 2023ರ ಸೆಪ್ಟೆಂಬರ್ 1ರಿಂದ 202೪ರ ಆಗಸ್ಟ್ ವರೆಗೆ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಂಡರು.

ಈ ತಿಂಗಳು, ತೈಲ ಸಚಿವಾಲಯವು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ನ ಹೊಸ ಅಧ್ಯಕ್ಷರ ಅರ್ಜಿಗಳನ್ನು ಆಹ್ವಾನಿಸಿದೆ. ಪಿಇಎಸ್‌ಬಿ ಅಧ್ಯಕ್ಷರ ನೇತೃತ್ವದ ಮೂವರು ಸದಸ್ಯರ ಹುಡುಕಾಟ-ಕಮ್-ಆಯ್ಕೆ ಸಮಿತಿಯು ಈ ಆಯ್ಕೆಯನ್ನು ಮಾಡುತ್ತದೆ. ಈ ಸಮಿತಿಯು ತೈಲ ಕಾರ್ಯದರ್ಶಿ ಮತ್ತು ಮಾಜಿ ಎಚ್‌ಪಿಸಿಎಲ್ ಅಧ್ಯಕ್ಷ ಎಂ.ಕೆ. ಸುರಾನಾ ಅವರನ್ನು ಸದಸ್ಯರನ್ನಾಗಿ ಒಳಗೊಂಡಿದೆ.

ಜುಲೈ 3ರೊಳಗೆ ನಾಯಕತ್ವದಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರುವ ಪ್ರಮುಖ ಸಂಸ್ಥೆಗಳಿಂದ ಸ್ನಾತಕೋತ್ತರ ನಿರ್ವಹಣಾ ಪದವಿಗಳನ್ನು ಹೊಂದಿರುವ ಎಂಜಿನಿಯರ್‌ಗಳು, ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ವೆಚ್ಚ ಲೆಕ್ಕಪರಿಶೋಧಕರಿಂದ ಅರ್ಜಿಗಳನ್ನು ಕೋರಲಾಗಿದೆ. ವಯಸ್ಸಿನ ಅರ್ಹತೆಯ ಕಟ್-ಆಫ್ ಅನ್ನು ಆಂತರಿಕರಿಗೆ 58 ವರ್ಷಗಳಿಗಿಂತ ಹೆಚ್ಚಿಲ್ಲ ಎಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಮತ್ತು ಹೊರಗಿನವರಿಗೆ 57 ವರ್ಷಗಳು, ಜಾಹೀರಾತಿನ ಪ್ರಕಾರ ನಿವೃತ್ತಿ ವಯಸ್ಸು 60 ವರ್ಷಗಳು.

ಸಚಿವಾಲಯವು ಆರಂಭದಲ್ಲಿ 61 ವರ್ಷ ವಯಸ್ಸನ್ನು ತಲುಪದ ಯಾರನ್ನಾದರೂ ಕೆಲಸಕ್ಕೆ ಪರಿಗಣಿಸಲು ಅವಕಾಶ ನೀಡಿತು. ಇದರಿಂದ ವೈದ್ಯ ಅವರು ಕೆಲಸಕ್ಕೆ ಅರ್ಹರಾದರು.


ಪಿಎಸ್‌ಯುಗಳಲ್ಲಿ ಬೋರ್ಡ್ ಮಟ್ಟದ ಹುದ್ದೆಗಳನ್ನು ನೇಮಿಸಿಕೊಳ್ಳಲು ಅಸ್ತಿತ್ವದಲ್ಲಿರುವ ನಿಯಮಗಳು ನಿವೃತ್ತಿಯ ಮೊದಲು ಕನಿಷ್ಠ ಎರಡು ವರ್ಷಗಳ ಸೇವೆಯನ್ನು ಹೊಂದಿರುವ ಆಂತರಿಕ ವ್ಯಕ್ತಿಯ ಉಮೇದುವಾರಿಕೆಯನ್ನು ಪರಿಗಣಿಸಲು ಮತ್ತು ಹೊರಗಿನ ಅಭ್ಯರ್ಥಿಗಳ ಸಂದರ್ಭದಲ್ಲಿ ಮೂರು ವರ್ಷಗಳನ್ನು ಅನುಮತಿಸುತ್ತದೆ.

ಇದನ್ನೂ ಓದಿ: Amazon India: ನೀರು ಕುಡಿಯುವಂತಿಲ್ಲ, ವಾಶ್ ರೂಮ್ ಗೆ ಹೋಗುವಂತಿಲ್ಲ; ಸಿಬ್ಬಂದಿಗೆ ಅಮೆಜಾನ್ ಕಂಪನಿ ತಾಕೀತು!

ಹೆಚ್ ಪಿಸಿಎಲ್ ಉನ್ನತ ಹುದ್ದೆಗೆ ಜೂನ್ 14 ರ ಅಧಿಸೂಚನೆಯಲ್ಲಿ ಪಿಇಎಸ್ ಬಿ , ಹೆಚ್ ಪಿಸಿಎಲ್ ಸಂಸ್ಕರಣಾಗಾರಗಳ ನಿರ್ದೇಶಕ ಶುಣ್ಮುಗವೇಲ್ ಭರತನ್, ಕಂಪೆನಿಯ ನಾಲ್ವರು ಕಾರ್ಯನಿರ್ವಾಹಕ ನಿರ್ದೇಶಕರಾದ ಅನುಜ್ ಕುಮಾರ್ ಜೈನ್, ಸುಬೋಧ್ ಬಾತ್ರಾ, ಕೆ. ವಿನೋದ್, ಸಂದೀಪ್ ಮಹೇಶ್ವರಿ ಹಾಗೂ ಐಒಸಿ, ಗೇಲ್ ಮತ್ತು ಐಜಿಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಮಲ್ ಕಿಶೋರ್ ಚಾಟಿವಾಲ್ ಅವರನ್ನು ಸಂದರ್ಶನ ನಡೆಸಿತ್ತು. ಆದರೆ ಹೆಚ್ ಪಿಸಿಎಲ್ ನ ಉನ್ನತ ಹುದ್ದೆಗೆ ಇವರು ಯಾರೂ ಸೂಕ್ತವಾಗಿಲ್ಲ ಎಂದು ಮಂಡಳಿ ಹೇಳಿದೆ.

Continue Reading

ಉದ್ಯೋಗ

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಿವಿಧ ವಿಷಯಗಳಲ್ಲಿನ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆ ಇದಾಗಿದೆ. ಒಟ್ಟು 164 ಹುದ್ದೆ ಖಾಲಿ ಇದೆ. ಬಿಇ, ಬಿಎಸ್‌ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2. ದೇಶದ ಎಲ್ಲಿಯಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅರ್ಜಿ ಸಲ್ಲಿಸಿ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (National Fertilizers Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಿವಿಧ ವಿಷಯಗಳಲ್ಲಿನ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆ ಇದಾಗಿದೆ. ಒಟ್ಟು 164 ಹುದ್ದೆ ಖಾಲಿ ಇದೆ (NFL Recruitment 2024). ಬಿಇ, ಬಿಎಸ್‌ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2 (Job Alert).

ಹುದ್ದೆಗಳ ವಿವರ

ಮ್ಯಾನೇಜ್‌ಮೆಂಟ್‌ ಟ್ರೈನಿ (ಕೆಮಿಕಲ್)- 56
ಮ್ಯಾನೇಜ್‌ಮೆಂಟ್‌ ಟ್ರೈನಿ (ಮೆಕ್ಯಾನಿಕಲ್)- 18
ಮ್ಯಾನೇಜ್‌ಮೆಂಟ್‌ ಟ್ರೈನಿ (ಎಲೆಕ್ಟ್ರಿಕಲ್)- 21
ಮ್ಯಾನೇಜ್‌ಮೆಂಟ್‌ ಟ್ರೈನಿ (ಇನ್ಸ್ಟ್ರುಮೆಂಟೇಶನ್)- 17
ಮ್ಯಾನೇಜ್‌ಮೆಂಟ್‌ ಟ್ರೈನಿ (ಕೆಮಿಕಲ್ ಲ್ಯಾಬ್)- 12
ಮ್ಯಾನೇಜ್‌ಮೆಂಟ್‌ ಟ್ರೈನಿ (ಸಿವಿಲ್)- 3
ಮ್ಯಾನೇಜ್‌ಮೆಂಟ್‌ ಟ್ರೈನಿ (ಫೈರ್ & ಸೇಫ್ಟಿ)- 5
ಮ್ಯಾನೇಜ್‌ಮೆಂಟ್‌ ಟ್ರೈನಿ (ಮಾಹಿತಿ ತಂತ್ರಜ್ಞಾನ)- 5
ಮ್ಯಾನೇಜ್‌ಮೆಂಟ್‌ ಟ್ರೈನಿ (ಮೆಟೀರಿಯಲ್ಸ್) -11
ಮ್ಯಾನೇಜ್‌ಮೆಂಟ್‌ ಟ್ರೈನಿ (ಎಚ್ಆರ್)- 16

ವಿದ್ಯಾರ್ಹತೆ ಮತ್ತು ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಬಿಇ / ಬಿ.ಟೆಕ್ / ಬಿಎಸ್‌ಸಿ / ಎಂಬಿಎ / ಎಂಎಸ್‌ಸಿ / ಪಿಜಿ ಡಿಪ್ಲೋಮಾ / ಪಿಜಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 700 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಆಯ್ಕೆಯಾದವರಿಗೆ 1 ವರ್ಷ ತರಬೇತಿ ನೀಡಲಾಗುತ್ತದೆ. ಬಳಿಕ 3 ವರ್ಷಗಳ ಒಪ್ಪಂದದ ಮೇರೆಗೆ ನೇಮ ಮಾಡಿಕೊಳ್ಳಲಾಗುತ್ತದೆ. ದೇಶದ ಎಲ್ಲಿಯಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಮಾತ್ರ ಅರ್ಜಿ ಸಲ್ಲಿಸಿ. ಆಯ್ಕೆಯಾದವರಿಗೆ 40,000 ರೂ.-1,40,000 ರೂ. ಮಾಸಿಕ ವೇತನ ಲಭಿಸಲಿದೆ.

NFL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/).

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/).
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಬಳಿಕ ಲಾಗಿನ್‌ ಆಗಿ ಸೂಕ್ತ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ +91-8660511568 ನಂಬರ್‌ಗೆ ಕರೆ ಮಾಡಿ.

ಇದನ್ನೂ ಓದಿ: Job Alert: ಕಾಟನ್‌ ಕಾರ್ಪೋರೇಷನ್‌ನಲ್ಲಿದೆ 214 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading

ದೇಶ

Amazon India: ನೀರು ಕುಡಿಯುವಂತಿಲ್ಲ, ವಾಶ್ ರೂಮ್ ಗೆ ಹೋಗುವಂತಿಲ್ಲ; ಸಿಬ್ಬಂದಿಗೆ ಅಮೆಜಾನ್ ಕಂಪನಿ ತಾಕೀತು!

ಹರಿಯಾಣದ ಅಮೆಜಾನ್ ನ (Amazon India) ಗೋದಾಮುಗಳಲ್ಲಿ ಕೆಲಸ ಮಾಡುವವರಿಗೆ ಶಿಫ್ಟ್ ಸಮಯದಲ್ಲಿ ನೀರು ಕುಡಿಯುವುದಿಲ್ಲ, ವಾಶ್ ರೂಮ್ ಗೆ ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡಲು ಒತ್ತಾಯಿಸಲಾಗಿದೆ. ವಿಶ್ರಾಂತಿ ಕೊಠಡಿ ಇದ್ದರೂ ಹತ್ತು ನಿಮಿಷಕ್ಕಿಂತ ಹೆಚ್ಚು ಹೊತ್ತು ಕಳೆಯುವಂತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಈ ಸಂಗತಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

By

Amazon India
Koo

ಅಮೆಜಾನ್ ನ (Amazon India) ಗೋದಾಮುಗಳಲ್ಲಿ (warehouse) ಕೆಲಸ ಮಾಡುವವರು ನೀರು ಕುಡಿಯಬಾರದು, ವಾಶ್ ರೂಮ್ ಗೆ ಹೋಗಬಾರದು (no toilet, water breaks) ಎಂದು ಒತ್ತಾಯಿಸಿರುವುದು ಬೆಳಕಿಗೆ ಬಂದಿದೆ. ಹರಿಯಾಣದ (Haryana) ಮಾನೇಸರ್‌ನಲ್ಲಿರುವ (Manesar) ಅಮೆಜಾನ್‌ನ ಐದು ಗೋದಾಮುಗಳ ಕೆಲಸ ಮಾಡುವವರಿಗೆ ಈ ಕಠಿಣ ಪ್ರತಿಜ್ಞೆ ಮಾಡಲು ಒತ್ತಾಯಿಸಲಾಗಿದೆ.

ಆರು ಟ್ರಕ್‌ಗಳಿಂದ ಪ್ಯಾಕೇಜ್‌ಗಳನ್ನು ಇಳಿಸುವ ಕಾರ್ಯ ಪೂರ್ಣಗೊಳ್ಳುವವರೆಗೆ ನೀರು ಕುಡಿಯುವುದಿಲ್ಲ, ವಾಶ್ ರೂಮ್ ಗೆ ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ಒತ್ತಾಯಿಸಲಾಯಿತು.

ಶಿಫ್ಟ್ ಸಮಯದಲ್ಲಿ ಕಾರ್ಮಿಕರು ಸಮಯ ವ್ಯರ್ಥ ಮಾಡುತ್ತಿಲ್ಲವೇ ಎಂದು ಪರಿಶೀಲಿಸಲು ಹಿರಿಯರು ವಾಶ್‌ರೂಮ್‌ಗಳನ್ನು ಪರಿಶೀಲಿಸುತ್ತಾರೆ. ಹರಿಯಾಣದ ಮನೇಸರ್‌ನಲ್ಲಿರುವ ಅಮೆಜಾನ್ ಇಂಡಿಯಾದ ಐದು ಗೋದಾಮುಗಳಲ್ಲಿ ತಿಂಗಳಿಗೆ 10,088 ರೂ ಆದಾಯ ಪಡೆಯುವ 24 ವರ್ಷ ವಯಸ್ಸಿನವರು ವಾರದಲ್ಲಿ ಐದು ದಿನಗಳಲ್ಲಿ ದಿನಕ್ಕೆ ಹತ್ತು ಗಂಟೆ ಕೆಲಸ ಮಾಡುತ್ತಾರೆ.

ತಲಾ 30 ನಿಮಿಷಗಳ ಊಟ ಮತ್ತು ಚಹಾ ವಿರಾಮಗಳು ಸೇರಿ ಉಳಿದ ಯಾವುದೇ ವಿರಾಮವಿಲ್ಲದೆ ಕೆಲಸ ಮಾಡುತ್ತಿದ್ದರೂ ದಿನಕ್ಕೆ ನಾಲ್ಕು ಟ್ರಕ್‌ಗಳಿಗಿಂತ ಹೆಚ್ಚು ಇಳಿಸಲು ಸಾಧ್ಯವಿಲ್ಲ. ಎರಡು ದಿನಗಳ ಹಿಂದೆ, ಕಾರ್ಯಕ್ಷಮತೆಯನ್ನು ಸುಧಾರಿಸಲು ಮತ್ತು ಗುರಿಯನ್ನು ಸಾಧಿಸಲು ನಾವು ನೀರು ಮತ್ತು ವಾಶ್‌ರೂಮ್ ವಿರಾಮಗಳನ್ನು ತ್ಯಜಿಸುವುದಾಗಿ ಪ್ರತಿಜ್ಞೆ ಮಾಡಿಸಿದ್ದಾರೆ ಎಂದು ಕಾರ್ಮಿಕರು ದೂರಿದ್ದಾರೆ.


ಹರಿಯಾಣದ ಕೈಗಾರಿಕಾ ಕೇಂದ್ರವಾದ ಮನೇಸರ್‌ನಲ್ಲಿರುವ ಗೋದಾಮುಗಳಲ್ಲಿ ಕಾರ್ಮಿಕರಿಂದ ಆರೋಪ ಕೇಳಿ ಬಂದ ಬಳಿಕ ಅಮೆಜಾನ್ ಇಂಡಿಯಾದ ವಕ್ತಾರರು ಪರಿಶೀಲನೆ ನಡೆಸಿದರು.

ಕಾರ್ಮಿಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅಮೆಜಾನ್ ಇಂಡಿಯಾದ ವಕ್ತಾರರು, ನಾವು ಈ ಬಗ್ಗೆ ತನಿಖೆ ನಡೆಸಿದ್ದೇವೆ. ಸ್ಪಷ್ಟವಾಗಿ ಹೇಳಬೇಕೆಂದರೆ ನಾವು ನಮ್ಮ ಉದ್ಯೋಗಿಗಳ ಮೇಲೆ ಈ ರೀತಿಯ ವಿನಂತಿಗಳನ್ನು ಎಂದಿಗೂ ಮಾಡುವುದಿಲ್ಲ. ಇಂತಹ ಘಟನೆ ಕಂಡುಬಂದರೆ ತಕ್ಷಣವೇ ಅದನ್ನು ನಿಲ್ಲಿಸುತ್ತೇವೆ. ತಂಡದ ಬೆಂಬಲ, ಆರೋಗ್ಯ ಮತ್ತು ಸುರಕ್ಷತೆಯ ಕುರಿತು ನಮ್ಮ ನಿರೀಕ್ಷೆಗಳು ಒಳಗೊಂಡಿರುತ್ತವೆ ಎಂದು ಹೇಳಿದ್ದಾರೆ.

ಕಂಪೆನಿಯು ತನ್ನ ಉದ್ಯೋಗಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಗಂಭೀರವಾಗಿ ಪರಿಗಣಿಸುತ್ತದೆ. ನಮ್ಮ ಎಲ್ಲಾ ಕಟ್ಟಡಗಳು ಶಾಖ ಸೂಚ್ಯಂಕ ಮಾನಿಟರಿಂಗ್ ಸಾಧನಗಳನ್ನು ಹೊಂದಿವೆ. ವಿಶೇಷವಾಗಿ ಬೇಸಿಗೆಯ ತಿಂಗಳುಗಳಲ್ಲಿ ತಾಪಮಾನದಲ್ಲಿನ ಬದಲಾವಣೆಗಳನ್ನು ನಾವು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತೇವೆ. ರೆಸ್ಟ್ ರೂಂ ಅನ್ನು ಬಳಸಲು, ನೀರು ಪಡೆಯಲು ಅಥವಾ ಮ್ಯಾನೇಜರ್ ಅಥವಾ ಹೆಚ್ ಆರ್ ನೊಂದಿಗೆ ಮಾತನಾಡಲು ಉದ್ಯೋಗಿಗಳು ತಮ್ಮ ಪಾಳಿಗಳ ಉದ್ದಕ್ಕೂ ಅನೌಪಚಾರಿಕ ವಿರಾಮಗಳನ್ನು ತೆಗೆದುಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಅಮೆಜಾನ್ ವಿದೇಶದಲ್ಲಿ ಇಂತಹ ಆರೋಪಗಳನ್ನು ಎದುರಿಸಿದೆ. ಯುಎಸ್ ನಲ್ಲಿನ ಔದ್ಯೋಗಿಕ ಸುರಕ್ಷತೆ ಮತ್ತು ಆರೋಗ್ಯ ಆಡಳಿತವು 2022 ಮತ್ತು 2023 ರಲ್ಲಿ ಕಂಪೆನಿಯ ಅಸುರಕ್ಷಿತ ಕೆಲಸದ ಪರಿಸ್ಥಿತಿಗಳು ಮತ್ತು ಆರು ಗೋದಾಮುಗಳಲ್ಲಿ ಕಾರ್ಮಿಕರಿಗೆ ಆದ ಗಾಯಗಳ ಕುರಿತು ಸರಿಯಾದ ವರದಿ ಮಾಡಲು ವಿಫಲವಾಗಿದೆ ಎನ್ನುವ ದೂರು ಕೇಳಿ ಬಂದಿತ್ತು.

ಇದನ್ನೂ ಓದಿ: Windfall Tax: ಕಚ್ಚಾ ತೈಲದ ಲಾಭ ತೆರಿಗೆಯನ್ನು ಪ್ರತಿ ಟನ್‌ಗೆ 3,250 ರೂ.ಗೆ ಇಳಿಸಿದ ಸರ್ಕಾರ

ಟ್ರಕ್‌ಗಳು ಹೊರಗೆ ನಿಲ್ಲಿಸುವುದರಿಂದ ಹೆಚ್ಚು ಬಿಸಿಯಾಗಿರುತ್ತವೆ. ಕಾರ್ಮಿಕರು ಅದರಿಂದ ವಸ್ತುಗಳನ್ನು ಇಳಿಸುವಾಗ ಬಹು ಬೇಗನೆ ದಣಿಯುತ್ತಾರೆ. ಇದು ಮಹಿಳೆಯರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹರಿಯಾಣದ ಗೋದಾಮಿನಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ಹೇಳಿದ್ದಾರೆ.

ಗೋದಾಮಿನಲ್ಲಿ ಕೆಲಸ ಮಾಡುವ ಮಹಿಳೆಯರು ಸಾಕಷ್ಟಿದ್ದಾರೆ. ಆದರೆ ಈ ಆವರಣದಲ್ಲಿ ವಿಶ್ರಾಂತಿ ಕೊಠಡಿ ಇಲ್ಲ. ನಾವು ಅಸ್ವಸ್ಥರಾಗಿದ್ದರೆ ವಾಶ್‌ರೂಮ್ ಅಥವಾ ಲಾಕರ್ ಕೋಣೆಗೆ ಹೋಗುವುದು ಒಂದೇ ಆಯ್ಕೆಯಾಗಿದೆ. ಹಾಸಿಗೆ ಇರುವ ಒಂದು ಕೋಣೆ ಇದೆ. ಆದರೆ ಇಲ್ಲಿ ಕಾರ್ಮಿಕರನ್ನು 10 ನಿಮಿಷಗಳ ಅನಂತರ ಹೊರಡಲು ಕೇಳಲಾಗುತ್ತದೆ. ನಾನು ದಿನಕ್ಕೆ ಒಂಬತ್ತು ಗಂಟೆಗಳ ಕಾಲ ನಿಲ್ಲುತ್ತೇನೆ ಮತ್ತು ಪ್ರತಿ ಗಂಟೆಗೆ 60 ಸಣ್ಣ ಉತ್ಪನ್ನ ಅಥವಾ 40 ಮಧ್ಯಮ ಗಾತ್ರದ ಉತ್ಪನ್ನಗಳನ್ನು ತೆಗೆದುಕೊಂಡು ಹೋಗಬೇಕು ಎಂದು ದೂರಿದ್ದಾರೆ.

Continue Reading
Advertisement
Sex Worker
ಪ್ರಮುಖ ಸುದ್ದಿ24 mins ago

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

NEETPG 2024
ಶಿಕ್ಷಣ44 mins ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

DK Shivakumar
ಪ್ರಮುಖ ಸುದ್ದಿ1 hour ago

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

Viral Video
Latest1 hour ago

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Malaika Vasupal experimented with a halter neck blouse for a traditional saree
ಫ್ಯಾಷನ್1 hour ago

Malaika Vasupal: ಟ್ರೆಡಿಷನಲ್‌ ಸೀರೆಗೆ ಹಾಲ್ಟರ್‌ ನೆಕ್‌ ಬ್ಲೌಸ್‌ ಪ್ರಯೋಗಿಸಿದ ನಟಿ ಮಲೈಕಾ ವಸುಪಾಲ್‌

Air India Food
ದೇಶ1 hour ago

Air India Food:‌ ಪ್ರಯಾಣಿಕರೇ ಎಚ್ಚರ; ವಿಮಾನದ ಊಟದಲ್ಲಿ ಸಿಕ್ತು ಮೆಟಲ್‌ ಬ್ಲೇಡ್!

Viral news
ವೈರಲ್ ನ್ಯೂಸ್2 hours ago

Viral News: ಕಾಯಿಲೆ ಗುರುತು ಹಿಡಿಯಲು ಖ್ಯಾತ ವೈದ್ಯರ ತಿಣುಕಾಟ; ಹತ್ತೇ ಸೆಕೆಂಡ್ ನಲ್ಲಿ ಪತ್ತೆಹಚ್ಚಿದ ಕೆಲಸದ ಮಹಿಳೆ!

T20 World Cup Super 8
ಕ್ರೀಡೆ2 hours ago

T20 World Cup Super 8 Stage: ಸೂಪರ್​-8 ಪಂದ್ಯಕ್ಕೂ ಮಳೆ ಭೀತಿ; ಭಾರತ-ಆಸೀಸ್​ ಪಂದ್ಯ ಅನುಮಾನ!

Rakshit Shetty Ekam web series release date announce
ಸ್ಯಾಂಡಲ್ ವುಡ್2 hours ago

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Dawood Ibrahim
ವಿದೇಶ2 hours ago

Dawood Ibrahim: ವೃದ್ಧ ಡಾನ್‌ ದಾವೂದ್‌ ಇಬ್ರಾಹಿಂ ಈಗ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯ ಕೈಗೊಂಬೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು5 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌