Hoysala Movie: ಡಾಲಿ ಧನಂಜಯ್‌ ಅಭಿನಯದ ʻಸಲ ಸಲ ಹೊಯ್ಸಳʼ ಸಾಂಗ್‌ ಔಟ್‌! - Vistara News

ಸಿನಿಮಾ

Hoysala Movie: ಡಾಲಿ ಧನಂಜಯ್‌ ಅಭಿನಯದ ʻಸಲ ಸಲ ಹೊಯ್ಸಳʼ ಸಾಂಗ್‌ ಔಟ್‌!

ಡಾಲಿ ಧನಂಜಯ್‌ (Hoysala Movie) ಅವರ 25ನೇ ಸಿನಿಮಾ ಇದಾಗಿದ್ದು, ಮಾರ್ಚ್‌ 30ರಿಂದ ಹಿರಿತೆರೆಗೆ ಅಪ್ಪಳಿಸಲಿದೆ. ಹೊಂಬಾಳೆ ಸಂಸ್ಥೆಯ ವಿಜಯ್‌ ಕಿರಗಂದೂರ್‌ ಅರ್ಪಿಸುವ, ಕೆ.ಆರ್‌.ಜಿ. ಸ್ಟುಡಿಯೋಸ್‌ ನಿರ್ಮಾಣ ಸಂಸ್ಥೆಯ ಬ್ಯಾನರ್‌ ಅಡಿಯಲ್ಲಿ ಕಾರ್ತಿಕ್‌ ಹಾಗೂ ಯೋಗಿ ಜಿ. ರಾಜ್‌ ಅವರು ಚಿತ್ರ ನಿರ್ಮಿಸಿದ್ದಾರೆ.

VISTARANEWS.COM


on

Hoysala Movie Song Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಾಲಿ ಧನಂಜಯ್‌ ಅಭಿನಯದ ಬಹು ನಿರೀಕ್ಷಿತ ಹೊಯ್ಸಳ ಸಿನಿಮಾದ (Hoysala Movie) ಮೊದಲ ಹಾಡು ಫೆ.25ರಂದು ಬಿಡುಗಡೆಗೊಂಡಿದೆ. ‘ಸಲ ಸಲ ಹೊಯ್ಸಳʼ ಹಾಡು ನಾಯಕನ ವ್ಯಕ್ತಿತ್ವದ ಪರಿಚಯವನ್ನು ಮಾಡಿಕೊಟ್ಟಿದೆ. ಆನಂದ್‌ ಯುಟ್ಯೂಬ್‌ ಚಾನೆಲ್‌ನಲ್ಲಿ ಹಾಡು ಬಿಡುಗಡೆಗೊಂಡಿದ್ದು, ಬಿಡುಗಡೆಯಾದ ಮೊದಲ ದಿನವೇ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಹಿಂದೆ ಟೀಸರ್‌ (Hoysala Movie Teaser) ಬಿಡುಗಡೆಯಾಗಿದ್ದು, ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ನಿಷ್ಠ ಹಾಗೂ ಖಡಕ್‌ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಡಾಲಿ ಧನಂಜಯ್‌ ಅವರು ನಟಿಸಿದ್ದು, ಟೀಸರ್‌ ರಿಲೀಸ್‌ ಆದ ಕೆಲವೇ ಗಂಟೆಯಲ್ಲಿ 14 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ. ಮೊದಲ ಹಾಡಿಗೆ ಸಂಗೀತ ನೀಡಿರುವುದು ಅಜನೀಶ್ ಲೋಕನಾಥ್. ಹಾಡನ್ನು ಹಾಡಿರುವುದು ನಕಾಶ್‌ ಅಜೀಜ್.

ಡಾಲಿ ಧನಂಜಯ್‌ ಅವರ 25ನೇ ಸಿನಿಮಾ ಇದಾಗಿದ್ದು, ಮಾರ್ಚ್‌ 30ರಿಂದ ಹಿರಿತೆರೆಗೆ ಅಪ್ಪಳಿಸಲಿದೆ. ಹೊಂಬಾಳೆ ಸಂಸ್ಥೆಯ ವಿಜಯ್‌ ಕಿರಗಂದೂರ್‌ ಅರ್ಪಿಸುವ, ಕೆ.ಆರ್‌.ಜಿ. ಸ್ಟುಡಿಯೋಸ್‌ ನಿರ್ಮಾಣ ಸಂಸ್ಥೆಯ ಬ್ಯಾನರ್‌ ಅಡಿಯಲ್ಲಿ ಕಾರ್ತಿಕ್‌ ಹಾಗೂ ಯೋಗಿ ಜಿ. ರಾಜ್‌ ಅವರು ಚಿತ್ರ ನಿರ್ಮಿಸಿದ್ದಾರೆ. ಕಾರ್ತಿಕ್‌ ಎಸ್‌. ಚಿತ್ರದ ಛಾಯಾಗ್ರಾಹಕರಾದರೆ, ಅಜನೀಶ್‌ ಲೋಕನಾಥ್‌ ಸಂಗೀತ ನಿರ್ದೇಶನವಿದೆ.

ಇದನ್ನೂ ಓದಿ: Hoysala Movie | ಡಾಲಿ ಧನಂಜಯ ಅಭಿನಯದ ಹೊಯ್ಸಳ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಇದನ್ನೂ ಓದಿ: Hoysala Movie Teaser: ಡಾಲಿ ಅಭಿನಯದ ‘ಹೊಯ್ಸಳ’ ಟೀಸರ್‌ ಔಟ್‌, ಖಡಕ್‌ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಧನಂಜಯ್‌

ಧನಂಜಯ್‌ ಅವರು ಗುರುದೇವ್‌ ಪಾತ್ರಧಾರಿಯಾದರೆ, ಗಂಗಾ ಆಗಿ ಅಮೃತಾ ಅಯ್ಯಂಗಾರ್‌ ಬಣ್ಣ ಹಚ್ಚಿದ್ದಾರೆ. ಇನ್ನು ನವೀನ್‌ ಶಂಕರ್‌, ಅವಿನಾಶ್‌ ಸೇರಿ ಹಲವು ನಟರು ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾ ಟೀಸರ್‌ ನೋಡಿದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಕಾರಣ ಸಿನಿಮಾ ತಂಡದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; ಐದನೇ ಆರೋಪಿಯ ಬಂಧನ

Salman Khan: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಕ್ರೈಂ ಬ್ರ್ಯಾಂಚ್‌ ಐದನೇ ಆರೋಪಿಯನ್ನು ಬಂಧಿಸಿದ್ದಾರೆ. ʼʼರಾಜಸ್ತಾನದ ಮೊಹಮ್ಮದ್‌ ಚೌಧರಿಯನ್ನು ಬಂಧಿಸಲಾಗಿದ್ದು, ಈತ ಇಬ್ಬರು ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಅವರಿಗೆ ಹಣ ನೀಡಿದ್ದ ಮಾತ್ರವಲ್ಲ ಅವರು ಸ್ಥಳದಿಂದ ಪರಾರಿಯಾಗಲು ನರೆವಾಗಿದ್ದʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊಹಮ್ಮದ್‌ ಚೌಧರಿಯನ್ನು ಇಂದು (ಮಂಗಳವಾರ) ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ವಿಚಾರಣೆಗಾಗಿ ಆತನನ್ನು ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಮುಂಬೈ ಕ್ರೈಂ ಬ್ರ್ಯಾಂಚ್‌ ತಿಳಿಸಿದೆ.

VISTARANEWS.COM


on

Salman Khan
Koo

ಮುಂಬೈ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಕ್ರೈಂ ಬ್ರ್ಯಾಂಚ್‌ ಐದನೇ ಆರೋಪಿಯನ್ನು ಬಂಧಿಸಿದ್ದಾರೆ. ʼʼರಾಜಸ್ತಾನದ ಮೊಹಮ್ಮದ್‌ ಚೌಧರಿಯನ್ನು ಬಂಧಿಸಲಾಗಿದ್ದು, ಈತ ಇಬ್ಬರು ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಅವರಿಗೆ ಹಣ ನೀಡಿದ್ದ ಮಾತ್ರವಲ್ಲ ಅವರು ಸ್ಥಳದಿಂದ ಪರಾರಿಯಾಗಲು ನರೆವಾಗಿದ್ದʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಹಮ್ಮದ್‌ ಚೌಧರಿಯನ್ನು ಇಂದು (ಮಂಗಳವಾರ) ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ವಿಚಾರಣೆಗಾಗಿ ಆತನನ್ನು ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಮುಂಬೈ ಕ್ರೈಂ ಬ್ರ್ಯಾಂಚ್‌ ತಿಳಿಸಿದೆ.

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಗುಂಡಿನ ದಾಳಿಗೆ ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಹೊರಗೆ ಗುಂಡಿನ ದಾಳಿ; ಶಂಕಿತರ ಫೋಟೊ ಬಿಡುಗಡೆ ಮಾಡಿದ ಪೊಲೀಸರು

ʼʼಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲʼʼ ಎಂದು ಲಾರೆನ್ಸ್ ಬಿಷ್ಣೋಯ್ ಹೇಳಿದ್ದ.

Continue Reading

ಸಿನಿಮಾ

Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

Ramana Avatara Movie: ಸ್ಯಾಂಡಲ್‌ವುಡ್‌ನ ಭರವಸೆಯ ನಾಯಕ ರಿಷಿ ಮತ್ತು ಬಹುಭಾಷಾ ನಡಿ ಪ್ರಣೀತಾ ಸುಭಾಷ್‌ ಮೊದಲ ಬಾರಿ ತೆರೆ ಹಂಚಿಕೊಳ್ಳುತ್ತಿರುವ ಚಿತ್ರ ʼರಾಮನ ಅವತಾರʼ. ಈಗಾಗಲೇ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆದಿದೆ. ಮೇ 10ರಂದು ಸಿನಿಮಾ ತೆರೆ ಕಾಣಲಿದೆ. ಇದೀ ಚಿತ್ರತಂಡ ಸಿನಿಮಾದ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಸಿಂಗಲ್ ಸ್ಕ್ರೀನ್ ಜತೆಗೆ ಮಲ್ಟಿಫ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ತಗ್ಗಿಸಲಾಗಿದ್ದು, ಕೇವಲ 99 ರೂ.ಗೆ ʼರಾಮನ ಅವತಾರʼ ಸಿನಿಮಾವನ್ನು ನೀವು ಕಣ್ತುಂಬಿಕೊಳ್ಳಬಹುದು.

VISTARANEWS.COM


on

Ramana Avatara Movie
Koo

ಬೆಂಗಳೂರು: ‘ಕವಲುದಾರಿ’ಯಂತಹ ಗಂಭೀರ ಸಿನಿಮಾ, ‘ನೋಡಿ ಸ್ವಾಮಿ ಇವನು ಇರೋದು ಹೀಗೆ’, ‘ಆಪರೇಷನ್ ಅಲಮೇಲಮ್ಮ’ ದಂತಹ ಕಾಮಿಡಿ ಚಿತ್ರಗಳಲ್ಲಿಯೂ ನಟಿಸಿ ಗಮನ ಸೆಳೆದಿರುವ ನಟ ರಿಷಿ (Rishi) ಇದೀಗ ‘ರಾಮನ ಅವತಾರ’ (Ramana Avatara Movie) ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಪ್ರಚಾರ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ವಿಭಿನ್ನ ಪ್ರಮೋಷನ್ ವಿಡಿಯೊ ಮೂಲಕ ʼರಾಮನ ಅವತಾರʼ ಬಳಗವೀಗ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈಗ ಚಿತ್ರತಂಡದ ಕಡೆಯಿಂದ ಮೆಗಾ ಆಫರ್‌ ಸಿಕ್ಕಿದೆ. ʼರಾಮನ ಅವತಾರʼ ಸಿನಿಮಾದ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಸಿಂಗಲ್ ಸ್ಕ್ರೀನ್ ಜತೆಗೆ ಮಲ್ಟಿಫ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ತಗ್ಗಿಸಲಾಗಿದ್ದು, ಕೇವಲ 99 ರೂ.ಗೆ ʼರಾಮನ ಅವತಾರʼ ಸಿನಿಮಾವನ್ನು ನೀವು ಕಣ್ತುಂಬಿಕೊಳ್ಳಬಹುದು.

ಮೇ 9ಕ್ಕೆ ಪ್ರೀಮಿಯರ; ಮೇ 10ಕ್ಕೆ ಚಿತ್ರ ರಿಲೀಸ್

ʼರಾಮನ ಅವತಾರʼ ಚಿತ್ರ ಮೇ 10ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮೇ 10ಕ್ಕೂ ಮುನ್ನ ಒಂದು ದಿನ ಮೊದಲು ಅಂದರೆ ಮೇ 9ರಂದು ಪೇಯ್ಡ್ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್ ದರ ಕೂಡ 99 ರೂ. ನಿಗದಿ ಮಾಡಲಾಗಿದೆ. ಜತೆಗೆ ಚಿತ್ರ ಬಿಡುಗಡೆ ದಿನ ಅಂದರೆ ಮೇ 10ಕ್ಕೂ ಕೂಡ ಟಿಕೆಟ್ ಬೆಲೆ 99 ರೂ. ಇರಲಿದೆ. ಒಟ್ಟಿನಲ್ಲಿ ಮೇ 9 ಹಾಗೂ ಮೇ 10ರಂದು ನೀವು ʼರಾಮನ ಅವತಾರʼ ಸಿನಿಮಾವನ್ನು 99 ರೂ.ಗೆ ವೀಕ್ಷಿಬಹುದು.

ʼರಾಮನ ಅವತಾರʼ ಸಿನಿಮಾದಲ್ಲಿ ರಿಷಿಗೆ ಜೋಡಿಯಾಗಿ ಪ್ರಣೀತಾ ಸುಭಾಷ್  ಹಾಗೂ ಶುಭ್ರ ಅಯ್ಯಪ್ಪ ಸಾಥ್ ಕೊಟ್ಟಿದ್ದಾರೆ. ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಕಾಸ್ ಪಂಪಾಪತಿ ಸಾರಥ್ಯದಲ್ಲಿ ಚಿತ್ರ ಮೂಡಿ ಬಂದಿದ್ದು, ನಿರ್ದೇಶಕರಾಗಿ ಇವರಿಗೆ ಇದು ಮೊದಲ ಸಾಹಸ. ʼರಾಮನ ಅವತಾರʼ ಸಿನಿಮಾದ ಮೂಲಕ ವಿಕಾಸ್ ಮಾರ್ಡನ್ ರಾಮನ ಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ. ಟ್ರೈಲರ್‌ ನೋಡುತ್ತಿದ್ದರೆ ರಾಮಾಯಣ ನೆನಪಿಸುವ ಒಂದಷ್ಟು ದೃಶ್ಯಗಳು ಕಾಣುತ್ತವೆ. ರಾಮ ಹೆಗೆ ಜೆಂಟಲ್ ಮ್ಯಾನ್ ಆಗ್ತಾನೆ? ರಾವಣನ ರೀತಿ ಸಮಸ್ಯೆಗಳನ್ನು ಹೇಗೆ ಎದುರಿಸ್ತಾನೆ ಎನ್ನುವುದನ್ನು ಕಟ್ಟಿ ಕೊಡಲಾಗದೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ದೇಶಕ ವಿಕಾಸ್ ಪಂಪಾಪತಿ, ʻʻಈ ಸಿನಿಮಾ ಕ್ಯಾರೆಕ್ಟರ್ ಜರ್ನಿ ಹೇಳುತ್ತಿದ್ದೇವೆ. ರಾಮ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಾ ಇರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅವನ ಜೀವನದಲ್ಲಿ ನಡೆದ ಘಟನೆಗಳು ಅವನನ್ನು ಹೇಗೆ ಬದಲಾಯಿಸುತ್ತದೆ? ರಾಮನ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಎನ್ನುವುದನ್ನು ಎಂಟರ್ಟೈನಮೆಂಟ್ ಆಗಿ ಹೇಳಿದ್ದೇವೆ. ರಾಮನ ಅವತಾರ ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಲೈಫ್ ನಲ್ಲಿಯೂ ಒಂದಲ್ಲ ಒಂದು ರಾಮಾಯಣ ನಡೆಯುತ್ತದೆ. ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ. ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆʼʼ ಎಂದು ತಿಳಿಸಿದ್ದರು.

ಇದನ್ನೂ ಓದಿ: Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Continue Reading

ಕರ್ನಾಟಕ

Ramana Avatara Movie: ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ; ‘ರಾಮನ ಅವತಾರ’ ಚಿತ್ರ ನಿಷೇಧಿಸಲು ಆಗ್ರಹ!

Ramana Avatara Movie: ʼರಾಮನ ಅವತಾರ’ ಕನ್ನಡ ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಕರ್ನಾಟಕ ಚಲನಚಿತ್ರ ಮಂಡಳಿಗೆ ಹಿಂದು ಜನಜಾಗೃತಿ ಸಮಿತಿ ಮನವಿ ಮಾಡಿದೆ. ಚಿತ್ರದ ವಿರುದ್ಧ ಹಿಂದುಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ.

VISTARANEWS.COM


on

Ramana Avatara Movie
Koo

ಬೆಂಗಳೂರು: ಕೋಟ್ಯಂತರ ಹಿಂದುಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಿರುವ ʼರಾಮನ ಅವತಾರ’ (Ramana Avatara Movie) ಕನ್ನಡ ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಹಿಂದು ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಅವರಿಗೆ ಹಿಂದು ಜನಜಾಗೃತಿ ಸಮಿತಿಯ ಶರತ್ ಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ ಎಂಬ ಕನ್ನಡ ಚಲನಚಿತ್ರ ಮೇ 10 ಕ್ಕೆ ಬಿಡುಗಡೆಗೊಳ್ಳಲಿದ್ದು, ಅದರ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲಿ ಕೋಟ್ಯಂತರ ಹಿಂದುಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಲಾಗಿದೆ. ಆದ್ದರಿಂದ ಸಿನಿಮಾದ ಹೆಸರನ್ನು ಬದಲಾಯಿಸಬೇಕು ಮತ್ತು ಅದರಲ್ಲಿನ ರಾಮಾಯಣದ ಅಪಮಾನಾತ್ಮಕ ಸನ್ನಿವೇಶಗಳನ್ನು ತೆಗೆದುಹಾಕಬೇಕೆಂದು ಹಿಂದು ಜನಜಾಗೃತಿ ಸಮಿತಿ ಆಗ್ರಹಿಸಿದೆ.

ರಾಮನ ಅವತಾರ ಚಿತ್ರದಲ್ಲಿ ರಾಮನ ವೇಷದಲ್ಲಿ ನಟ ರಿಷಿ.

ಚಿತ್ರದ ಟ್ರೈಲರ್‌ನಲ್ಲಿ ‘ರಾಮ’ ಹೆಸರಿನ ಚಿತ್ರದ ನಾಯಕ ‘ಯಾವ ಊರಿನ ಜನ ನನ್ನನ್ನು ಊರಿಂದ ಹೊರಗೆ ತಳ್ಳಿದರೋ ಅದೇ ಜನ ನನಗೆ ಗೌರವ ಕೊಡುವ ತನಕ ನಾನು ಇಲ್ಲೇ ಎಲ್ಲದರೂ ರಸ್ತೆಯಲ್ಲಿ ಕಾಲ ಕಳೆಯುತ್ತೇನೆ’ ಎನ್ನುತ್ತಾನೆ, ಇದು ರಾಮಾಯಣ ಧರ್ಮಗ್ರಂಥಕ್ಕೆ ಮಾಡಿದ ಘೋರ ಅಪಮಾನವಾಗಿದೆ. ಚಿತ್ರನಟ ‘ರಾಮನ’ ಹೆಸರಿನಲ್ಲಿ ಚುನಾವಣೆಗೆ ನಿಂತಿರುತ್ತಾನೆ, ಅಲ್ಲಿ ‘ಯಾರ ಮನೆ ಮುಂದೆ ಕಸ ಇದ್ದರೆ ರಾಮನಿಗೆ ಕಾಲ್ ಮಾಡಿ’ ಎಂದು ಕರೆ ನೀಡಲಾಗುತ್ತದೆ. ಇನ್ನು ಚಿತ್ರ ನಾಯಕಿ ರಾಮಾಯಣದಂತೆ ರಾಮನನನ್ನು ಜಿಂಕೆಯ ಚಿತ್ರವಿರುವ ಕಾರಿನ ಹಿಂದೆ ಓಡಿಸಿ ನಂತರ ಅವಳನ್ನು ಕಿಡ್ನ್ಯಾಪ್ ಮಾಡುತ್ತಿರುವಂತೆ ತೋರಿಸಲಾಗಿದೆ. ಅಷ್ಟೇ ಅಲ್ಲದೆ ರಾಮನ ವೇಷದಲ್ಲಿ ಚಿತ್ರದ ನಾಯಕ ಖಳನಾಯಕರೊಂದಿಗೆ ಫೈಟಿಂಗ್ ಮಾಡುತ್ತಿರುವಂತೆ ತೋರಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ | Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರುದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

ಹಿಂದು ಜನಜಾಗೃತಿ ಸಮಿತಿಯ ಶರತ್ ಕುಮಾರ್ ಮಾತನಾಡಿ, ಭಾರತ ಸೇರಿ ವಿಶ್ವಾದ್ಯಂತ ಪ್ರಭು ಶ್ರೀರಾಮನನ್ನು ಪೂಜಿಸಲಾಗುತ್ತಿದೆ. ರಾಮನಿಗಾಗಿ ಸಾವಿರಾರು ಹಿಂದುಗಳು ತಮ್ಮ ಪ್ರಾಣತ್ಯಾಗ ಮಾಡಿ ಭವ್ಯ ರಾಮಮಂದಿರ ಕಟ್ಟಿದ್ದಾರೆ. ಹೀಗಿರುವಾಗ ಈ ಚಿತ್ರದಲ್ಲಿ ಶ್ರೀರಾಮನ ವೇಷವನ್ನು ನಾಯಕನಿಗೆ ತೊಡಿಸಿ, ಪೊಲೀಸರು ಶ್ರೀರಾಮನನ್ನು ಅಟ್ಟಾಡಿಸುವಂತೆ ತೋರಿಸಲಾಗಿದೆ. ಕಾಮಿಡಿ ಚಿತ್ರ ಮಾಡುವ ಗೀಳಿನಲ್ಲಿ ಪವಿತ್ರ ರಾಮಾಯಣ ಮತ್ತು ಪ್ರಭು ಶ್ರೀರಾಮನ ಘೋರ ಅಪಮಾನ ಮಾಡಿರುವುದು ಕಂಡುಬರುತ್ತದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಇದೇ ಕಾರಣಕ್ಕೆ ಈ ಚಲನಚಿತ್ರ ಬಿಡುಗಡೆಯಾಗಲು ವಿರೋಧ ವ್ಯಕ್ತವಾಗಿತ್ತು, ಆದರೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಿರುವಂತೆ ಕಂಡರೂ ಚಿತ್ರದ ಹೆಸರು ಮತ್ತು ಅದರಲ್ಲಿನ ತುಣುಕುಗಳಲ್ಲಿ ಇನ್ನೂ ರಾಮನ ಅಪಮಾನ ಎದ್ದು ಕಾಣಿಸುತ್ತಿದೆ. ಕಾಮಿಡಿ ಚಿತ್ರ ರಚಿಸುವ ಉದ್ದೇಶವಿದ್ದಿದ್ದರೆ ‘ರಾಮನ ಅವತಾರ’ವೆಂದೇ ಏಕೆ ಹೆಸರಿಡಬೇಕಿತ್ತು ? ಇತರ ಪಂಥೀಯರ ಶ್ರದ್ಧಾಸ್ಥಾನಗಳ ಮೇಲೆ ಈ ರೀತಿಯ ಕಾಮಿಡಿ ಚಿತ್ರ ರಚಿಸುವ ಧೈರ್ಯ ತೋರುವರೆ? ಕೀಳುಮಟ್ಟದ ಸಿನಿಮಾ ಪ್ರಚಾರಕ್ಕಾಗಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದು ಭಾರತೀಯ ದಂಡ ಸಂಹಿತೆ 295, 298 ಮತ್ತು 295 A ಪ್ರಕಾರ ಗಂಭೀರ ಅಪರಾಧವಾಗಿದೆ. ಅದಲ್ಲದೇ ಸಿನಿಮಾಟೋಗ್ರಾಫ್ ಆಕ್ಟ್ 1952 ನ ಕಲಂ 5 B ಪ್ರಕಾರ ಇದು ಸೆನ್ಸಾರ್ ಮಂಡಳಿ ನಿಯಮದ ಉಲ್ಲಂಘನೆಯಾಗಿದೆ. ದೇಶದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಸಿನಿಮಾ ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವುದು ನೀತಿ ಸಂಹಿತೆ ಉಲ್ಲಂಘನೆ ಆಗಿದೆ. ಈ ಚಿತ್ರದ ಸೆನ್ಸಾರ್ ಪ್ರಮಾಣ ಪತ್ರ ರದ್ದುಗೊಳಿಸದಿದ್ದರೆ ರಾಜ್ಯಾದ್ಯಂತ ಆಂದೋಲನ ನಡೆಸಲಾಗುವುದು ಎಂದಿದ್ದಾರೆ.

ಈ ಮನವಿಯಲ್ಲಿ ಪ್ರಭು ಶ್ರೀರಾಮನ ಹೆಸರಿನ ಮತ್ತು ರಾಮಾಯಣದ ಸನ್ನಿವೇಶಗಳಿರುವ ಹಿಂದುಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ದೃಶ್ಯಗಳನ್ನು ಚಿತ್ರದಿಂದ ತೆಗೆಯಬೇಕು ಮತ್ತು ‘ರಾಮನ ಅವತಾರ’ ಎಂದರೆ ಜನರಿಗೆ ಇದು ತ್ರೇತಾಯುಗದ ಪ್ರಭು ಶ್ರೀರಾಮನದ್ದೇ ಕಥೆಯೆಂದೆನಿಸುತ್ತದೆ, ಆದರೆ ವಾಸ್ತವದಲ್ಲಿ ಇದು ಕಾಮಿಡಿ ಚಲನಚಿತ್ರವಾಗಿರುವುದರಿಂದ ಚಿತ್ರದ ಹೆಸರು ಬದಲಿಸಬೇಕು ಎಂದು ಆಗ್ರಹಿಸಲಾಗಿದೆ.

ಇದನ್ನೂ ಓದಿ | Rahul Gandhi : ಸುಳ್ಳು ಹರಡಬೇಡಿ, ಸುಮ್ಮನಿರಿ; ರಾಹುಲ್​ ಗಾಂಧಿಗೆ ಬಹಿರಂಗ ಪತ್ರ ಬರೆದು ಕುಟುಕಿದ ಯೂನಿವರ್ಸಿಟಿಗಳ ಕುಲಪತಿಗಳು

ಮನವಿ ಸಲ್ಲಿಕೆ ವೇಳೆ ಹಿಂದು ಜನಜಾಗೃತಿ ಸಮಿತಿಯ ನೀಲೇಶ್ವರ, ನಿರಂಜನ ನಾರಾಯಣಕರ, ಪ್ರಶಾಂತ್ ದಾಸರಹಳ್ಳಿ, ರಾಷ್ಟ್ರೀಯ ಹಿಂದು ಪರಿಷತ್‌ನ ರಾಜ್ಯಾಧ್ಯಕ್ಷ ಸುರೇಶ್ ಗೌಡ, ನಗರ ಜಿಲ್ಲಾಧ್ಯಕ್ಷರಾದ ವಿಕ್ರಂ ಶೆಟ್ಟಿ ಅವರು ಉಪಸ್ಥಿತರಿದ್ದರು.

Continue Reading

ಒಟಿಟಿ

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

The Goat Life ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ.

VISTARANEWS.COM


on

The Goat Life OTT Release Date Fix
Koo

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ಮಲಯಾಳಂ ಚಿತ್ರ ʻಆಡುಜೀವಿತಂʼ (The Goat Life) ಬಿಡುಗಡೆಯಾದ ದಿನವೇ ಒಳ್ಳೆಯ ಗಳಿಕೆ ಕಂಡಿತ್ತು. ಪೃಥ್ವಿರಾಜ್ ಸುಕುಮಾರನ್ ಮುಖ್ಯ ಭೂಮಿಕೆಯಯ ಈ ಸಿನಿಮಾ 150 ಕೋಟಿ ರೂ. ಗಳಿಕೆ ಕಂಡಿತ್ತು. ನೈಜ ಘಟನೆಗಳನ್ನು ಆಧರಿಸಿ ಬರೆದ ಕಾದಂಬರಿಯನ್ನು ತೆರೆಗೆ ತಂದು ಚಿತ್ರತಂಡ ಸಕ್ಸಸ್ ಕಂಡಿತ್ತು. ಸಾಕಷ್ಟು ಜನ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಕಾಯುತ್ತಿದ್ದಾರೆ. ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ಗೆ ಚಿತ್ರದ ಒಟಿಟಿ ರೈಟ್ಸ್ ಮಾರಾಟವಾಗಿದೆ ಎನ್ನುವ ಚರ್ಚೆ ನಡೀತಿದೆ.

ಬ್ಲೆಸ್ಸಿ ನಿರ್ದೇಶನದ ಈ ಚಿತ್ರ ಆರು ದಿನಗಳಲ್ಲಿ ಭಾರತದಲ್ಲಿ ಸುಮಾರು 40.4 ಕೋಟಿ ರೂ. ಸಂಗ್ರಹಿಸಿತ್ತು. ಮೊದಲ ದಿನ, ʻಆಡುಜೀವಿತಂʼ ಭಾರತದಲ್ಲಿ ಒಟ್ಟು ಎಲ್ಲಾ ಭಾಷೆಗಳು ಸೇರಿದಂತೆ 7.6 ಕೋಟಿ ರೂ. ಸಂಗ್ರಹಿಸಿದರೆ, ಎರಡನೇ ದಿನ ದಿನ 6.25 ಕೋಟಿ ರೂ. ಮೂರನೇ ದಿನ 7.75 ಕೋಟಿ ರೂ. ನಾಲ್ಕು ಮತ್ತು ಐದನೇ ದಿನ 8.7 ಕೋಟಿ ರೂ. ಮತ್ತು ಆರನೇ ದಿನ 4. 5 ಕೋಟಿ ರೂ. ವ್ಯವಹಾರ ಮಾಡಿತ್ತು.

ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.

ಆಡು ಜೀವಿತಂʼ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್‌ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಒಟಿಟಿಗೆ ಯಾವಾಗ?

ಮೇ 10ಕ್ಕೆ ಸಿನಿಮಾ ಒಟಿಟಿ ಬರುತ್ತದೆ ಎನ್ನಲಾಗುತ್ತಿದೆ. ಮೇ 26ಕ್ಕೆ ಡಿಸ್ನಿ ಹಾಟ್‌ಸ್ಟರ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಎನ್ನುವ ಚರ್ಚೆ ಕೂಡ ಇದೆ. ಆದರೆ ಯಾವಾಗ ಎನ್ನುವುದು ಶೀಘ್ರದಲ್ಲೇ ರಿವೀಲ್ ಆಗಲಿದೆ.

ಏನಿದೆ ಆಡುಜೀವಿತಂ ಸಿನಿಮಾ ಕಥೆ?

ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್‌ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್‌ GOAT LIFE ಎಂದಿದೆ.

ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ. ಅವನು ಸೆರೆಮನೆ ಸೇರಿ, ಅಲ್ಲಿಂದ ತಪ್ಪಿಸಿಕೊಳ್ಳುವ ಸಾಹಸ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ.

ಈ ಸಿನಿಮಾಕ್ಕಾಗಿ ನಿರ್ದೇಶಕ ಬ್ಲೆಸ್ಸಿ ಅವರು ತುಂಬಾ ಅಧ್ಯಯನ ಮಾಡಿದ್ದಾರೆ. ಈ ಕಥೆ ಅವರನ್ನು ಕಳೆದ 15 ವರ್ಷಗಳಿಂದ ಕೊರೆಯುತ್ತಿತ್ತಂತೆ. ಅಂತೆಯೇ ಅವರ ಕನಸಿನಲ್ಲಿ ಬಂದ ಚಿತ್ರದಂತೆ ತಮ್ಮನ್ನು ಮಾರ್ಪಾಡು ಮಾಡಿಕೊಂಡು ಹೊಸ ವ್ಯಕ್ತಿಯ ರೂಪದಲ್ಲಿ ಹೊಸ ಲುಕ್‌ನಲ್ಲಿ ಬಂದಿದ್ದಾರೆ ನಟ ಪೃಥ್ವಿರಾಜ್ ಸುಕುಮಾರನ್.

Continue Reading
Advertisement
MS Dhoni
ಪ್ರಮುಖ ಸುದ್ದಿ9 mins ago

MS Dhoni : ಮಹೇಂದ್ರ ಸಿಂಗ್​ ಧೋನಿಗೆ ಗಾಯ, ಆಂತರಿಕ ಮಾಹಿತಿ ಬಹಿರಂಗ

Lok sabha Election 2024
Lok Sabha Election 202412 mins ago

Lok Sabha Election 2024: ಮತದಾನಕ್ಕೆ ಬಂದು ಇವಿಎಂಗೆ ಬೆಂಕಿ ಹಾಕಿದ ಯುವಕ; ಸುರಪುರದಲ್ಲಿ ಕಲ್ಲು ತೂರಾಟ

Lok Sabha Election 2024
ಕರ್ನಾಟಕ14 mins ago

Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?

viral news
ಕ್ರೀಡೆ16 mins ago

Viral News: ದೆಹಲಿ To ಗೋವಾ ವಿಮಾನ ಟಿಕೆಟ್​​ ಬೆಲೆಗಿಂತ ದುಬಾರಿ ಟೀಮ್​ ಇಂಡಿಯಾದ ಟಿ20 ವಿಶ್ವಕಪ್​ ಜೆರ್ಸಿ

Met Gala Fashion
ಫ್ಯಾಷನ್16 mins ago

Met Gala Fashion: ಮೆಟ್‌ ಗಾಲಾದಲ್ಲಿ ಹೈಲೈಟಾದ ಭಾರತೀಯ ಫ್ಯಾಷೆನಬಲ್‌ ತಾರೆಯರಿವರು!

Lalu Prasad Yadav
ದೇಶ17 mins ago

ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

IPL 2024
ಕ್ರೀಡೆ31 mins ago

ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

lok sabha Election 2024
Lok Sabha Election 202436 mins ago

Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

West Bengal
ದೇಶ1 hour ago

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 hour ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 hour ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ22 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ23 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ4 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

ಟ್ರೆಂಡಿಂಗ್‌