BS Yediyurappa : ಯಡಿಯೂರಪ್ಪರನ್ನು ಹಸುವಿನ ಥರ ಹಾಲು ಹಿಂಡಿ ಮನೆಗೆ ಕಳುಹಿಸುತ್ತಾರೆ ಎಂದ ಬಿ.ಕೆ. ಹರಿಪ್ರಸಾದ್‌ - Vistara News

ಕರ್ನಾಟಕ

BS Yediyurappa : ಯಡಿಯೂರಪ್ಪರನ್ನು ಹಸುವಿನ ಥರ ಹಾಲು ಹಿಂಡಿ ಮನೆಗೆ ಕಳುಹಿಸುತ್ತಾರೆ ಎಂದ ಬಿ.ಕೆ. ಹರಿಪ್ರಸಾದ್‌

ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರ ಹಿಂದೆ ಲಿಂಗಾಯತರಿದ್ದಾರೆ ಎಂಬ ಒಂದೇ ಕಾರಣಕ್ಕೆ ಅವರನ್ನು ಇಷ್ಟು ಕಾಲ ಉಳಿಸಿಕೊಂಡಿದ್ದಾರೆ. ಮುಂದಿನ ಎಲೆಕ್ಷನ್‌ ನಲ್ಲಿ ಅವರನ್ನು ಬಳಸಿಕೊಂಡು ಎಸೆಯುತ್ತಾರೆ ಎಂದಿದ್ದಾರೆ. ಬಿ.ಕೆ. ಹರಿಪ್ರಸಾದ್‌.

VISTARANEWS.COM


on

BSY BK Hariprasad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚುನಾವಣೆಯಲ್ಲಿ ಲಿಂಗಾಯತ ಮತಗಳಿಗಾಗಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರನ್ನು ಈಗ ಚೆನ್ನಾಗಿ ಬಳಸಿಕೊಳ್ಳುತ್ತಾರೆ. ಇನ್ನು ಕಾಮಧೇನು ರೀತಿಯಲ್ಲಿ ಎಲ್ಲಾ ರೀತಿಯಾಗಿ ಹಿಂಡಿ ಮನೆಗೆ ಕಳುಹಿಸುತ್ತಾರೆ ಎಂದು ಮೇಲ್ಮನೆ ವಿಪಕ್ಷ ನಾಯಕ, ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಹೇಳಿದ್ದಾರೆ.

ಯಡಿಯೂರಪ್ಪ ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಅವರ ಮುಂದಿನ ರಾಜಕೀಯದ ಬಗ್ಗೆ ಬಿ.ಕೆ. ಹರಿಪ್ರಸಾದ್‌ ಭವಿಷ್ಯ ನುಡಿದಿದ್ದಾರೆ.

ಎಲ್.ಕೆ‌ ಆಡ್ವಾಣಿ, ಮುರಳಿ ಮನೋಹರ ಜೋಶಿ, ಅರುಣ ಶೌರಿ ಅವರಿಗೆ ವಯಸ್ಸು ಆಗಿದೆ ಎಂದು ಮಾರ್ಗದರ್ಶಕ ಮಂಡಳಿಗೆ ಕಳಿಸಿದರು. ಯಡಿಯೂರಪ್ಪ ಅವರು ಲಿಂಗಾಯತರ ಮಹಾನಾಯಕ ಎಂಬ ಕಾರಣಕ್ಕಾಗಿ ಸ್ವಲ್ಪ ಮಟ್ಟಿಗೆ ಜತೆಯಲ್ಲಿ ಇಟ್ಟುಕೊಂಡಿದ್ದಾರೆ. ಅವರನ್ನು ಇಟ್ಟುಕೊಳ್ಳಬೇಕೋ ಬೇಡವೋ ಎಂಬ ಅಡಕತ್ತರಿಯಲ್ಲಿ ಬಿಜೆಪಿ ಬಿದ್ದಿದೆ. ಇನ್ನು ಕೆಲವೇ ಸಮಯದಲ್ಲಿ ಯಡಿಯೂರಪ್ಪ ಅವರನ್ನು ಕೂಡಾ ಮಾರ್ಗದರ್ಶಕ ಮಂಡಳಿಗೆ ಕಳುಹಿಸುವುದರಲ್ಲಿ ಸಂಶಯವಿಲ್ಲ ಎಂದಿದ್ದಾರೆ ಬಿ.ಕೆ. ಹರಿಪ್ರಸಾದ್‌.

ಆವತ್ತು ಬಿ.ಎಸ್.‌ ಯಡಿಯೂರಪ್ಪ ಅವರ ಮೇಲೆ ಇ.ಡಿ ರೇಡ್ ಮಾಡಿಸಿದರು, ಸಿಎಂ ಸ್ಥಾನದಿಂದ ಯಾಕೆ ಇಳಿಸಿದರು ಎಂದು ನರೇಂದ್ರ ಮೋದಿ, ಅಮಿತ್ ಶಾ ಹೇಳಬೇಕು ಎಂದು ಹೇಳಿದರು.

ʻರಾಜಕಾರಣದಲ್ಲಿ ಸೋಲು ಗೆಲುವು ಸಹಜ. ಹಲವಾರು ಕಾರಣದಿಂದ ಕೋಲಾರಕ್ಕೆ ಸಿದ್ದರಾಮಯ್ಯ ಬಂದಿದ್ದಾರೆʼʼ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ʻʻಮುಸ್ಲಿಮರಿಗೆ ಮತ ಹಾಕಬೇಡಿʼʼ ಎಂಬ ಯತ್ನಾಳ ಹೇಳಿಕೆ ವಿಚಾರದ ಬಗ್ಗೆ ಕೇಳಿದಾಗ, ಅವರು ಸಂವಿಧಾನದ ವಿರುದ್ಧ ಮಾತನಾಡಿದ್ದಾರೆ. ನರಸತ್ತ ಎಲೆಕ್ಷನ್ ಕಮಿಷನ್ ಇಂಥವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದರು. ಧರ್ಮಾಧಾರಿತ, ಭಾಷೆ ಆಧಾರಿತ ಎಲೆಕ್ಷನ್ ಮಾಡಲು ಆಗಲ್ಲ ಎಂದು ಹೇಳಿದರು.

ಇದನ್ನೂ ಓದಿ : Karnataka Election 2023: ಮಠಾಧೀಶರು ಮುಖ್ಯಮಂತ್ರಿ ಆಗುವುದಾದರೆ ಸ್ವಾಗತ: ಸುಬುಧೇಂದ್ರ ತೀರ್ಥ ಸ್ವಾಮೀಜಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Prajwal Revanna Case: ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿದೆ.‌ ಎಲ್ಲಿಂದ, ಯಾವಾಗ ಸಂಸದ ಆಗಮಿಸಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Prajwal Revanna Case
Koo
VISTARA-EXCLUSIVE

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಯಾವಾಗ ವಿದೇಶದಿಂದ ಭಾರತಕ್ಕೆ ಬರಲಿದ್ದಾರೆ ಎಂದು ತನಿಖಾಧಿಕಾರಿಗಳು ಕಾಯುತ್ತಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಯಾವಾಗ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ (Vistara Exclusive) ಲಭ್ಯವಾಗಿದೆ.‌ ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು. ಇದೀಗ ಅವರು ನಾಳೆಯೇ ದೇಶಕ್ಕೆ ಆಗಮಿಸುವ ಮಾಹಿತಿ ಲಭ್ಯವಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎನ್ನಲಾಗಿದೆ.

ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released first reaction after release will be acquitted of all charges

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇದನ್ನೂ ಓದಿ | HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Continue Reading

ಉತ್ತರ ಕನ್ನಡ

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Uttara Kannada News: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ ಭಾವ ರಾಮಾಯಣ- ರಾಮಾವತರಣ ಸರ್ಟಿಫಿಕೆಟ್ ಕೋರ್ಸ್ ಮತ್ತು ಅಲ್ಪಾವಧಿ ಕೋರ್ಸ್‍ಗಳ ತರಗತಿಗಳು ಮಂಗಳವಾರ ಆರಂಭವಾದವು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರು 40 ನಿಮಿಷಗಳ ಕಾಲ ಭಾವರಾಮಾಯಣ ತರಗತಿ ನಡೆಸಿಕೊಟ್ಟರು.

VISTARANEWS.COM


on

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
Koo

ಗೋಕರ್ಣ: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಭಾವ ರಾಮಾಯಣ-ರಾಮಾವತರಣ ಸರ್ಟಿಫಿಕೆಟ್ ಕೋರ್ಸ್ ಮತ್ತು ಅಲ್ಪಾವಧಿ ಕೋರ್ಸ್‍ಗಳ ತರಗತಿಗಳು ಮಂಗಳವಾರ (Uttara Kannada News) ಆರಂಭವಾದವು.

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ‌ ಸ್ವಾಮೀಜಿ ಅವರು 40 ನಿಮಿಷಗಳ ಕಾಲ ಭಾವರಾಮಾಯಣ ತರಗತಿ ನಡೆಸಿಕೊಟ್ಟರು.

ರಾಮಾಯಣದ ಅನುಸಂಧಾನ ಅನಿರ್ವಚನೀಯ ಆನಂದವನ್ನು ಕೊಡುವಂಥದ್ದು. ಬದುಕಿಗೆ ಯಾವುದು ಹಿತ ಯಾವುದು ಅಹಿತ ಎನ್ನುವುದನ್ನು ರಾಮಾಯಣ ತಿಳಿಸಿಕೊಡುತ್ತದೆ. ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ ಎಂದು ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ವಿಶ್ಲೇಷಿಸಿದರು.

ಇದನ್ನೂ ಓದಿ: Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

ರಾಮಾಯಣವನ್ನು ವಾಲ್ಮೀಕಿ ಸೀತಾಚರಿತೆ ಎಂದೂ ಕರೆದಿದ್ದಾರೆ. ರಾಮಾವತರಣದ ಕೊನೆಯಲ್ಲಿ ಬ್ರಹ್ಮ ಹೇಳುವಂತೆ ರಾಮ ಸಾಕ್ಷಾತ್ ವಿಷ್ಣುವಿನ ಅವತಾರ, ಸೀತೆ ಲಕ್ಷ್ಮಿಯ ಅವತಾರ. ರಾವಣ ಸಂಹಾರಕ್ಕಾಗಿ ವಿಷ್ಣು ಮನುಷ್ಯ ರೂಪದಲ್ಲಿ ಭುವಿಗೆ ಅವತರಿಸುತ್ತಾನೆ ಎಂದು ಶ್ರೀಗಳು ತಿಳಿಸಿದರು. ಬದುಕಿನಲ್ಲಿ ನಮಗೆ ಬೇಕಾದ ಎಲ್ಲವನ್ನೂ ಕೊಡುವಂಥದ್ದು ರಾಮಾಯಣ. ಇದರ ಅನುಸಂಧಾನದ ಮೂಲಕ ಬದುಕು ಸಾರ್ಥಕಪಡಿಸಿಕೊಳ್ಳೋಣ ಎಂದು ಶ್ರೀಗಳು ಕರೆ ನೀಡಿದರು.

ಝೂಮ್ ಮಾಧ್ಯಮದ ಮೂಲಕ ಶ್ರೀಗಳು ತರಗತಿ ನಡೆಸಿಕೊಟ್ಟರು. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಕೂಡಾ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

ಕಾರ್ಯಕ್ರಮದಲ್ಲಿ ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಪ್ರೊ.ಕೆ.ಎಸ್.ಕಣ್ಣನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಕೃತ ವಿವಿ ಕುಲಸಚಿವ ಡಾ.ರಾಮಕೃಷ್ಣ ಭಟ್ ಕೂಟೇಲು ನಿರೂಪಿಸಿದರು.

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading

ಚಿತ್ರದುರ್ಗ

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿ ಅವರು, ʼಕನಕದಾಸರ ಸಾಹಿತ್ಯ ಮತ್ತು ತಳಸಮುದಾಯಗಳು-ಪುನರ್‌ ಚಿಂತನೆʼ ಎಂಬ ವಿಷಯ ಕುರಿತು ಮಂಡಿಸಿದ್ದ ಸಂಶೋಧನಾ ಪ್ರಬಂಧಕ್ಕೆ ಕುವೆಂಪು ವಿವಿ ಪಿಎಚ್‌ಡಿ ಪದವಿ ನೀಡಿದೆ.

VISTARANEWS.COM


on

Manjappa Magodi
Koo

ಶಿವಮೊಗ್ಗ: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿ (Manjappa Magodi) ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್‌ (Honorary Doctorate) ನೀಡಿ ಗೌರವಿಸಿದೆ. ಮೂಲತಃ ಉಪನ್ಯಾಸಕರಾಗಿ ಹಾಗೂ ಶಿಕ್ಷಣಾಧಿಕಾರಿಯಾಗಿದ್ದ ಮಂಜಪ್ಪ ಮಾಗೊದಿ ಅವರು, ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರು ಮತ್ತು ನಿರ್ದೇಶಕರಾದ ಪ್ರೊ.ಶಿವಾನಂದ ಕೆಳಗಿನಮನಿ ಅವರ ಮಾರ್ಗದರ್ಶನದಲ್ಲಿ ಕನಕದಾಸರ ಸಾಹಿತ್ಯ ಮತ್ತು ತಳಸಮುದಾಯಗಳು-ಪುನರ್‌ ಚಿಂತನೆ ಎಂಬ ವಿಷಯ ಕುರಿತು ಮಂಡಿಸಿದ್ದ ಸಂಶೋಧನಾ ಪ್ರಬಂಧಕ್ಕೆ ಕುವೆಂಪು ವಿವಿ ಪಿಎಚ್‌ಡಿ ಪದವಿ ನೀಡಿದೆ. ಮಂಜಪ್ಪ ಮಾಗೊದಿ ಅವರು ಪ್ರಗತಿಪರ ಚಿಂತಕರು, ಸೃಜನಶೀಲ ಬರಹಗಾರರು ಹಾಗು ಉತ್ತಮ ಕವಿಗಳಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿಯೂ ಇವರು ಸಾಹಿತ್ಯ ಮತ್ತು ಸಂಭಾಷಣೆಕಾರರಾಗಿ ಕಾರ್ಯನಿವರ್ಹಿಸಿದ್ದಾರೆ.

ಮಂಜಪ್ಪ ಮಾಗೊದಿ ಅವರ ಪರಿಚಯ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಎಂ.ಜಿ.ದಿಬ್ಬ ಗ್ರಾಮದ ಪಾರ್ವತಮ್ಮ ಮತ್ತು ತಿಮ್ಮಪ್ಪನವರ ಮಗನಾಗಿ ಜನಿಸಿದ ಮಂಜಪ್ಪ ಮಾಗೊದಿ ಅವರು ತೀವ್ರ ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು. ಕಡುಬಡತನದಲ್ಲೇ ವಿದ್ಯಾಭ್ಯಾಸ ನಡೆಸಿದ ಅವರು, ಪ್ರತಿಭಾವಂತರು, ವಾಗ್ಮಿಗಳು. ಮುಂದಾಲೋಚನೆ ಉಳ್ಳವರು. ದೂರದೃಷ್ಟಿ ಇಟ್ಟುಕೊಂಡೇ ಗ್ರಾಮೀಣ ಭಾಗದ ಲಕ್ಷಾಂತರ ಮಕ್ಕಳಿಗೆ ವಿದ್ಯಾಭ್ಯಾಸ ಕುರಿತು ಬೋಧನೆ ಮಾಡಿದವರು. ಮಕ್ಕಳಲ್ಲಿ ಓದುವ ಆಸಕ್ತಿ ಹೆಚ್ಚಿಸುವಲ್ಲಿಯೂ ಕಾರಣರಾದವರು. ಹೊಸದುರ್ಗ ತಾಲೂಕಿನಲ್ಲಿ ಉಪನ್ಯಾಸಕರಾಗಿದ್ದ ಇವರನ್ನು ಇಂದಿಗೂ ಲಕ್ಷಾಂತರ ವಿದ್ಯಾರ್ಥಿಗಳು ಗುರು ಪ್ರೀತಿಯೊಂದಿಗೆ ಹಿಂಬಾಲಿಸುತ್ತಿದ್ದಾರೆ ಎಂಬುದು ವಿಶೇಷ.

ಬಡತನದಲ್ಲೇ ಬೆಳೆದು ಶಿಕ್ಷಣದೊಂದಿಗೆ ಅರಳಿದ ಮಂಜುನಾಥ್‌ ಮಾಗೊದಿ, ಇಂದಿಗೂ ಬಡವಿದ್ಯಾರ್ಥಿಗಳ ಬಗ್ಗೆ ಅಪಾರ ಪ್ರೀತಿ, ಕಾಳಜಿ ಇಟ್ಟುಕೊಂಡ ಮಧ್ಯಕರ್ನಾಟಕದ ಪ್ರತಿಭೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಶಿಕ್ಷಣ ಕೆಲಸ ನಿರ್ವಹಿಸಿದ ಇವರ ಬೆನ್ನ ಹಿಂದೆ ಇದೀಗ ದೊಡ್ಡ ವಿದ್ಯಾರ್ಥಿ ಸಮೂಹವೇ ಇದೆ. ಎಲ್ಲೆಡೆ ಶಿಕ್ಷಣ ಕ್ರಾಂತಿ ಮಾಡಿ ಸೈ ಎನಿಸಿಕೊಂಡ ಮಂಜಪ್ಪ ಮಾಗೊದಿ, ಬೆಂಗಳೂರಿಗೆ ಬಂದು ಸರ್ಕಾರದ ಸಚಿವರ ಜೊತೆಗೆ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ರಾಜಕಾರಣಿಗಳ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡವರು.

ಇನ್ನು, ಶಿಕ್ಷಣದ ಬಗ್ಗೆ ಸಾಕಷ್ಟು ಕಾಳಜಿ ವಹಿಸಿರುವ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಿಕ್ಷಣ ವ್ಯವಸ್ಥೆ ಹೀಗೆ ಇರಬೇಕು ಅಂದುಕೊಂಡು ಆ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಿದವರು. ಮಕ್ಕಳ ಶಿಕ್ಷಣದ ಗುಣಮಟ್ಟ ಹೇಗಿದೆ ಎಂಬುದರ ಬಗ್ಗೆಯೂ ಅಧ್ಯಯನ ನಡೆಸಿದ್ದರು. ಇನ್ನು ಸರ್ಕಾರ ವಿದ್ಯಾರ್ಥಿಗಳ ಪ್ರಶ್ನೆ ಪತ್ರಿಕೆ ತಯಾರಿಕೆ ಸಮಿತಿಗೆ ಇವರನ್ನು ವಿಶೇಷ ಅಧಿಕಾರಿಯನ್ನಾಗಿಸಿದ್ದ ಸಂದರ್ಭದಲ್ಲಿ ಇವರು ಅದನ್ನು ಯಶಸ್ವಿಯಾಗಿ ನಿರ್ವಹಿಸಿ ಮಕ್ಕಳ ಶಿಕ್ಷಣ ಗುಣಮಟ್ಟ ಹೆಚ್ಚಿಸುವಲ್ಲಿ ಕಾರಣರಾಗಿದ್ದರು.

ಇವರು ವರ್ಷಗಳ ಹಿಂದೆ ಬರೆದ ಕವನವೊಂದು ಕುವೆಂಪು ವಿವಿ ಪಠ್ಯಪುಸ್ತಕದಲ್ಲಿ ಪಠ್ಯವಾಗಿದೆ. ಇಂದಿಗೂ ವಿದ್ಯಾರ್ಥಿಗಳು ಆ ಕವನ ಓದುತ್ತಿದ್ದಾರೆ ಎಂಬುದು ವಿಶೇಷ. ಇನ್ನು ಹೊಸದುರ್ಗ ತಾಲೂಕಿನಲ್ಲಿ ಹಲವು ವಿಷಯಗಳ ಮೂಲಕ ಸದ್ದು ಮಾಡಿ ಸಂಚಲನ ಮೂಡಿಸಿದ್ದು ವಿಶೇಷ. ಆ ತಾಲೂಕಿನ ಅಭಿವೃದ್ಧಿ, ಶಿಕ್ಷಣ ವ್ಯವಸ್ಥೆ, ವಿದ್ಯಾರ್ಥಿಗಳ ವಿಕಸನ ಕುರಿತು ಅಧ್ಯಯನ ನಡೆಸಿದ್ದರು. ಅಂದರೆ ಈ ತಾಲೂಕು ಅಭಿವೃದ್ಧಿ ಪಥದಲ್ಲಿ ಹೀಗೆ ಸಾಗಬೇಕು. ಇಲ್ಲಿನ ರಾಜಕಾರಣಿಗಳು ಇಂತಹ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು ಎಂಬ ಕುರಿತಂತೆ ಹಲವು ವಿಷಯಗಳ ಬಗ್ಗೆ ತಿಳಿವಳಿಕೆಯ ಅಧ್ಯಯನ ಮಾಡಿದ್ದರು. ಅದು ದೊಡ್ಡ ಮಟ್ಟದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ | SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

ಮಂಜಪ್ಪ ಮಾಗೊದಿ ಅವರು, ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಕೆಇಎಸ್‌ ಅಧಿಕಾರಿಯಾಗಿ ಯಶಸ್ವಿಯಾಗಿ ಕಾರ್ಯನಿವರ್ಹಿಸಿದವರು. ಕನಕದಾಸರ ಸಾಹಿತ್ಯ ಮತ್ತು ತಳಸಮುದಾಯಗಳು-ಪುನರ್‌ ಚಿಂತನೆ ಎಂಬ ವಿಷಯ ಕುರಿತು ಮಂಡಿಸಿದ್ದ ಸಂಶೋಧನಾ ಪ್ರಬಂಧಕ್ಕೆ ಕುವೆಂಪು ವಿವಿ ಪಿಎಚ್‌ಡಿ ಪದವಿ ನೀಡಿ ಗೌರವಿಸಿರುವುದು ಅವರ ಆಪ್ತ ಬಳಗಕ್ಕೆ ಸಂತಸ ಹೆಚ್ಚಿಸಿದೆ.

Continue Reading
Advertisement
Prajwal Revanna Case
ಕರ್ನಾಟಕ47 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ58 mins ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ1 hour ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ1 hour ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ2 hours ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ2 hours ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ2 hours ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Narendra Modi
ಪ್ರಮುಖ ಸುದ್ದಿ3 hours ago

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Viral Video
ವೈರಲ್ ನ್ಯೂಸ್3 hours ago

Viral Video: 25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಹುಟ್ಟಿಕೊಂಡಿದ್ದು ಹೇಗೆ ಗೊತ್ತೇ?

Chaya Singh
ಕರ್ನಾಟಕ3 hours ago

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ47 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ3 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20249 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ10 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು11 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ17 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌