Road Accident : ಸ್ಕೂಟಿಯಲ್ಲಿದ್ದ ಅಜ್ಜ ಮೊಮ್ಮಗನನ್ನು ಎರಡು ಕಿ.ಮೀ. ಎಳೆದೊಯ್ದ ಲಾರಿ! ಇಬ್ಬರೂ ಸಾವು - Vistara News

ಕ್ರೈಂ

Road Accident : ಸ್ಕೂಟಿಯಲ್ಲಿದ್ದ ಅಜ್ಜ ಮೊಮ್ಮಗನನ್ನು ಎರಡು ಕಿ.ಮೀ. ಎಳೆದೊಯ್ದ ಲಾರಿ! ಇಬ್ಬರೂ ಸಾವು

ಸ್ಕೂಟಿಯಲ್ಲಿ ತೆರಳುತ್ತಿದ್ದ ಅಜ್ಜ ಮೊಮ್ಮಗನಿಗೆ ಲಾರಿ ಡಿಕ್ಕಿ ಹೊಡೆದು ಎರಡು ಕಿ.ಮೀ.ನಷ್ಟು ದೂರ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ (Road Accident) ನಡೆದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಕೆಲ ವಾರಗಳ ಹಿಂದೆ ದೆಹಲಿಯಲ್ಲಿ ಯುವತಿಯೊಬ್ಬಳನ್ನು ಕಾರೊಂದು ಅಪಘಾತ ಮಾಡಿ ಎಳೆದೊಯ್ದಿದ್ದ ಘಟನೆ ನಡೆದಿತ್ತು. ಇದೀಗ ಅದೇ ರೀತಿಯಲ್ಲಿ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಆರು ವರ್ಷದ ಮೊಮ್ಮಗ ಮತ್ತು ಅಜ್ಜನನ್ನು ಎರಡು ಕಿ.ಮೀ.ವರೆಗೆ ರಸ್ತೆಯಲ್ಲೇ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ (Road Accident ) ನಡೆದಿದೆ.

ಇದನ್ನೂ ಓದಿ: Viral Video: ಮನೆಗೆ ಬಿಡು ಎಂದು ಆಟೋ ಹತ್ತಲು ಬಂದ ಘೇಂಡಾಮೃಗ! ಮುಂದೇನಾಯ್ತು ನೋಡಿ
ಮಹೋಬಾದಲ್ಲಿನ ಕಾನ್ಪುರ-ಸಾಗರ್ ಹೆದ್ದಾರಿ NH86 ನಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಉದಿತ್ ನಾರಾಯಣ ಚಾನ್ಸೋರಿಯಾ (67) ಮತ್ತು ಅವರ ಮೊಮ್ಮಗ ಸಾತ್ವಿಕ್(6) ಸ್ಕೂಟಿಯಲ್ಲಿ ಮಾರುಕಟ್ಟೆಗೆ ಹೋಗುತ್ತಿದ್ದರು. ಆಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಅಲ್ಲೇ ಬಿದ್ದ ಸ್ಕೂಟಿ ಹಾಗೂ ಅವರಿಬ್ಬರನ್ನು ಲಾರಿ ಸುಮಾರು ಎರಡು ಕಿ.ಮೀ.ನಷ್ಟು ದೂರ ಎಳೆದೊಯ್ದಿದೆ. ಈ ದೃಶ್ಯ ಸ್ಥಳೀಯರ ಕ್ಯಾಮೆರಾಗಳಲ್ಲಿಯೂ ಸೆರೆಯಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಲಾರಿಯ ಬಳಿ ಹಲವಾರು ಬೈಕ್‌ಗಳು ಚಾಲಕನನ್ನು ಎಚ್ಚರಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಎಷ್ಟೇ ಎಚ್ಚರಿಕೆ ಕೊಟ್ಟರೂ ನಿಲ್ಲಿಸದೆ ಚಾಲಕ ಲಾರಿ ಓಡಿಸಿದ್ದು, ಕೊನೆಗೆ ಪಕ್ಕದಲ್ಲಿದ್ದವರು ಕಲ್ಲು, ಬಂಡೆಗಳನ್ನು ರಸ್ತೆಗೆ ಹಾಕಿದ ನಂತರ ಲಾರಿ ನಿಲ್ಲಿಸಲಾಗಿದೆ. ಲಾರಿ ಚಾಲಕನಿಗೆ ಸ್ಥಳೀಯರು ಥಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕ ಮತ್ತು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

Road Accident: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕುಣಿಗಲ್ ಪೊಲೀಸ್ ಠಾಣೆಯ ಎಎಸ್‌ಐ ವೆಂಕಟೇಶ್ (50) ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾರೆ. ಕರ್ತವ್ಯ ನಿಮಿತ್ತ ಬುಧವಾರ ಸಂಜೆ ಯಡಿಯೂರಿಗೆ ಹೋಗಿ ಬೈಕ್‌ನಲ್ಲಿ ಕುಣಿಗಲ್‌ಗೆ ವಾಪಸ್ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ. ರಸ್ತೆ ಆಲಪ್ಪನಗುಡ್ಡೆ ಸಮೀಪ ಯಡಿಯೂರು ಕಡೆಯಿಂದ ಬಂದ ಅಪರಿಚಿತ ವಾಹನ ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಎಎಸ್‌ಐ ವೆಂಕಟೇಶ್ ಬೈಕ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಳ್ಳೂರು ಕ್ರಾಸ್‌ನ ಅಂದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

VISTARANEWS.COM


on

ASI who was injured in a road accident died in kunigal
Koo

ಕುಣಿಗಲ್: ರಸ್ತೆ ಅಪಘಾತದಲ್ಲಿ (Road Accident) ತೀವ್ರವಾಗಿ ಗಾಯಗೊಂಡಿದ್ದ ಕುಣಿಗಲ್ ಪೊಲೀಸ್ ಠಾಣೆಯ ಎಎಸ್‌ಐ ವೆಂಕಟೇಶ್ (50) ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾರೆ.

ಕುಣಿಗಲ್ ಪೊಲೀಸ್ ಠಾಣೆಯ ಎಎಸ್‌ಐ ವೆಂಕಟೇಶ್ ಕರ್ತವ್ಯ ನಿಮಿತ್ತ ಬುಧವಾರ ಸಂಜೆ ಯಡಿಯೂರಿಗೆ ಹೋಗಿ ಬೈಕ್‌ನಲ್ಲಿ ಕುಣಿಗಲ್‌ಗೆ ವಾಪಸ್ ಬರುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ. ರಸ್ತೆ ಆಲಪ್ಪನಗುಡ್ಡೆ ಸಮೀಪ ಯಡಿಯೂರು ಕಡೆಯಿಂದ ಬಂದ ಅಪರಿಚಿತ ವಾಹನ ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಎಎಸ್‌ಐ ವೆಂಕಟೇಶ್ ಬೈಕ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಳ್ಳೂರು ಕ್ರಾಸ್‌ನ ಅಂದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

ಶಿರಾ ತಾಲೂಕಿನ ಎಮ್ಮೆರಹಳ್ಳಿತಾಂಡ ನಿವಾಸಿಯಾದ ವೆಂಕಟೇಶ್, ಕಳೆದ ಇಪ್ಪತ್ತು ವರ್ಷಗಳಿಂದ ತಾಲೂಕಿನ ಹುಲಿಯೂರುದುರ್ಗ,ಅಮೃತೂರು ಹಾಗೂ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚೆಗಷ್ಟೆ ಎಎಸ್‌ಐ ಆಗಿ ಬಡ್ತಿ ಹೊಂದಿ ಕುಣಿಗಲ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Belagavi News: ರೈಲಲ್ಲಿ ಟಿಕೆಟ್‌ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ನಾಲ್ವರಿಗೆ ಚಾಕು ಇರಿದ ಮುಸುಕುಧಾರಿ; ಒಬ್ಬ ಸಾವು, ನಾಲ್ವರು ಗಂಭೀರ

ವೆಂಕಟೇಶ್ ಅವರ ಮೃತದೇಹವನ್ನು ಗುರುವಾರ ಮಧ್ಯಾಹ್ನ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು ಈ ವೇಳೆ ಕುಣಿಗಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಪಟ್ಟಣದ ನಾಗರೀಕರು ಅಂತಿಮ ನಮನ ಸಲ್ಲಿಸಿದರು ಬಳಿಕ ಮೃತ ದೇಹವನ್ನು ಕುಟುಂಬಸ್ಥರು ಸ್ವ ಗ್ರಾಮಕ್ಕೆ ಕೊಂಡೊಯ್ದರು.

Continue Reading

ಕ್ರೈಂ

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Prajwal Revanna Case: ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಮೇಲೆ ಬಂಧಿತನಾಗಿರುವ 2ನೇ ಆರೋಪಿ ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಇನ್ನೊಬ್ಬ A6 ಆರೋಪಿ ಕೀರ್ತಿಯನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈ ಪ್ರಕರಣದ ಮೊದಲ ಆರೋಪಿ ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.

VISTARANEWS.COM


on

Prajwal Revanna Case KR Nagar victim kidnapping case Satish sent to judicial custody
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಮೇಲೆ ಬಂಧಿತನಾಗಿರುವ 2ನೇ ಆರೋಪಿ ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಇನ್ನೊಬ್ಬ A6 ಆರೋಪಿ ಕೀರ್ತಿಯನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

42ನೇ ಎಸಿಎಂಎಂ ಕೋರ್ಟ್‌ನಲ್ಲಿ ಗುರುವಾರ ಮಧ್ಯಾಹ್ನ ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಜಾಮೀನು (Bail) ವಿಚಾರಣೆ ನಡೆಯುತ್ತಿದ್ದ ವೇಳೆಯೇ ಇಬ್ಬರು ಆರೋಪಿಗಳನ್ನು ಕೋರ್ಟ್‌ ಎದುರು ಹಾಜರುಪಡಿಸಲಾಗಿತ್ತು.

ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯವು A2 ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿದರೆ, ಮತ್ತೊಬ್ಬ ಆರೋಪಿ ಹೊಸೂರು ಕೀರ್ತಿಯನ್ನು 3 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ವಹಿಸಿದೆ.

ಏನಿದು ಕೇಸ್‌?

ಪ್ರಜ್ವಲ್‌ ರೇವಣ್ಣ ಅವರು ಅತ್ಯಾಚಾರ ನಡೆಸಿದ್ದಾರೆನ್ನಲಾದ ಮಹಿಳೆ ಮೈಸೂರಿನ ಕೆ.ಆರ್.‌ ನಗರ ನಿವಾಸಿಯಾಗಿದ್ದಾರೆ. ಆದರೆ, ಇವರನ್ನು ಸಾಕ್ಷಿ ನಾಶಕ್ಕಾಗಿ ಎಚ್‌.ಡಿ. ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬು ಅಪಹರಣ ಮಾಡಿದ್ದಾರೆ ಎಂದು ಕೆ.ಆರ್. ನಗರದಲ್ಲಿ ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಇದರ ಬೆನ್ನಲ್ಲೇ ಸಂತ್ರಸ್ತೆಯ ವಿಡಿಯೊ ರಿಲೀಸ್‌ ಆಗಿದೆ. ಇದರಲ್ಲಿ ಮಹಿಳೆಯು ಅಪಹರಣ ಪ್ರಕರಣಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಮುಗಿದಿಲ್ಲ ಟೆನ್ಶನ್‌!

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಮಧ್ಯಂತರ ಜಾಮೀನು (Bail) ನೀಡಲಾಗಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ. ಹೀಗಾಗಿ ರೇವಣ್ಣ ಅವರು ಇನ್ನೂ ನಿಟ್ಟುಸಿರು ಬಿಡುವಂತೆ ಇಲ್ಲ. ನಾಳೆ ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

ಎಚ್‌.ಡಿ. ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ಈಗ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ.

ವಾದ – ಪ್ರತಿವಾದ

ಗುರುವಾರ (ಮೇ 16) ಬೆಳಗ್ಗೆ 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಎಚ್.ಡಿ. ರೇವಣ್ಣ ಪರ ವಕೀಲರ ವಾದವನ್ನು ಆಲಿಸಿದರು. ಬಳಿಕ ಎಸ್ಐಟಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು‌ ಸೂಚಿಸಿದ ನ್ಯಾಯಾಧೀಶೆ ಪ್ರೀತ್ ಜೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಿದ್ದರು.

ಜಾಮೀನು ನೀಡದಂತೆ ಜಯ್ನಾ ಕೊಠಾರಿ ಮನವಿ

ಈ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ, ಈ ಕೇಸ್‌ನಲ್ಲಿ ನಾನ್ ಬೇಲಬಲ್‌ ಸೆಕ್ಷನ್ ಇಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಆಗ ಮಧ್ಯಪ್ರವೇಶ ಮಾಡಿದ ಜಡ್ಜ್‌, ಎಸ್ಐಟಿ ವಾದಕ್ಕೂ ಅವಕಾಶ ನೀಡೋಣ ಎಂದು ಹೇಳಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು.

ಮಧ್ಯಾಹ್ನದ ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ, ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಆರಂಭಿಸಿದರು. ಈ ವೇಲೆ ಎಚ್.ಡಿ. ರೇವಣ್ಣ ಪರ ವಕೀಲರು ಮಧ್ಯ ಪ್ರವೇಶ ಮಾಡಿ, ಸೀನಿಯರ್ ವಕೀಲರು ಬರ್ತಾರೆ. ಹೀಗಾಗಿ ನಾಳೆಯವರೆಗೂ (ಮೇ 17) ಸಮಯ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಿ, ಹೊಳೆನರಸೀಪುರ ಕೇಸಲ್ಲಿ ವಿಚಾರಣೆಗೆ ಬರುವುದಾಗಿ ಹೇಳಿದ್ದಾರೆ. ಇನ್ನೂ ವಿಚಾರಣೆಗೆ ಬಂದಿಲ್ಲ. ಈಗಲೇ ವಿಚಾರಣೆ ನಡೆಯಲಿ. ಅಥವಾ ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಯ್ನಾ ಕೋಠಾರಿ, ಆರೋಪಿಯು ಪೊಲೀಸರ ಮುಂದೆ ಶರಣಾಗಲಿ ಅಥವಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿ. ಆರೋಪಿ ತುಂಬಾ ಪ್ರಭಾವಿ ಆಗಿದ್ದಾರೆ. ಹೀಗಾಗಿ ಆರೋಪಿಯೇ ಸ್ವ – ಇಚ್ಛೆಯಿಂದ ಬಂದು ಶರಣಾಗಲಿ ಎಂದು ವಾದಿಸಿದರು.

ಆಗ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್‌, ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಇನ್ನು ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

ರೇವಣ್ಣ ಹಾಜರಾಗಲು ಜಡ್ಜ್‌ ಸೂಚನೆ

ಪುನಃ ವಾದ ಮಂಡಿಸಿದ ಜಯ್ನಾ ಕೊಠಾರಿ, ಆರೋಪಿ ಬೆಳಗ್ಗೆ ಶರಣಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈಗ ಕೋರ್ಟ್‌ಗೆ ಶರಣಾಗಲು ಸಿದ್ಧರಿಲ್ಲ. ಸದ್ಯ ಇಲ್ಲೇ ಎಲ್ಲಿಯೋ ಕಾರಿನಲ್ಲಿ ಕುಳಿತಿರಬಹುದು ಎಂದು ಹೇಳಿದರು. ಈ ವೇಳೆ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ ಎಚ್‌.ಡಿ. ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರೇವಣ್ಣ ಟೆಂಪಲ್‌ ರನ್‌ ಹೀಗಿತ್ತು

ಇಂದು ಮುಂಜಾನೆ ತಾವು ಉಳಿದುಕೊಂಡಿದ್ದ ದೇವೇಗೌಡರ ಮನೆಯಿಂದ ಹೊರಟ ರೇವಣ್ಣ ಅವರು ವೈದ್ಯ ಸಿಎನ್ ಮಂಜುನಾಥ್ ಅವರ ನಿವಾಸಕ್ಕೆ ಬಂದು, ಅಲ್ಲಿಂದ ಟೆಂಪಲ್ ರನ್ ಶುರು ಮಾಡಿದರು. ಬೆಳಗ್ಗೆ 8:26ಕ್ಕೆ ಜಯನಗರ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ, 8:50ಕ್ಕೆ ಗವಿಗಂಗಾಧರೇಶ್ವರ ದೇವಸ್ಥಾನ, 9:10ಕ್ಕೆ ಶ್ರೀ ಶೃಂಗೇರಿ ಶಂಕರ ಮಠ, 10:31ಕ್ಕೆ ಬಸವನಗುಡಿಯ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿ ನಂತರ ಕೋರ್ಟ್‌ಗೆ ಹಾಜರಾದರು.

Continue Reading

ಕ್ರೈಂ

Belagavi News: ರೈಲಲ್ಲಿ ಟಿಕೆಟ್‌ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ನಾಲ್ವರಿಗೆ ಚಾಕು ಇರಿದ ಮುಸುಕುಧಾರಿ; ಒಬ್ಬ ಸಾವು, ನಾಲ್ವರು ಗಂಭೀರ

Belagavi News: ಖಾನಾಪುರ ತಾಲೂಕಿನ ಲೋಂಡಾಕ್ಕೆ ರೈಲು ಬರುತ್ತಿದ್ದಂತೆ ಟಿಸಿ ಎಲ್ಲರ ಬಳಿ ಟಿಕೆಟ್‌ ಚೆಕ್‌ ಮಾಡುತ್ತಿದ್ದರು. ಅದರಂತೆ ಈ ದುಷ್ಕರ್ಮಿಯ ಬಳಿಯೂ ಟಿಕೆಟ್‌ ಕೇಳಿದ್ದಾರೆ. ಆದರೆ, ಆತ ಸರಿಯಾಗಿ ಸ್ಪಂದಿಸಲಿಲ್ಲ. ಬಳಿಕ ಜೋರಾಗಿ ಕೇಳಿದಾಗ ಆತ ಚೂರಿಯಿಂದ ಇರಿದು, ಹಲ್ಲೆ ನಡೆಸಲು ಮುಂದಾಗಿದ್ದಾನೆ. ಆಗ ಟಿಸಿ ಜೋರಾಗಿ ಕೂಗಿಕೊಂಡಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ದೇವ ಋಷಿ ವರ್ಮಾ ಹಾಗೂ ಸಹ ಪ್ರಯಾಣಿಕರು ರಕ್ಷಣೆಗೆಂದು ದಾವಿಸಿದ್ದಾರೆ. ಆಗ ಅವರ ಮೇಲೆಯೂ ಮುಸುಕುಧಾರಿ ದುಷ್ಕರ್ಮಿ ದಾಳಿ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ.

VISTARANEWS.COM


on

Belagavi News Masked man stabs TC and four others for asking them to show tickets on train
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಲಬದಿ ಮೃತ ದೇವ ಋಷಿ ವರ್ಮಾ.
Koo

ಬೆಳಗಾವಿ (Belagavi News): ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾಕ್ಕೆ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು (Chalukya Express Train) ಬಂದಿದ್ದ ವೇಳೆ ಟಿಕೆಟ್‌ ತೋರಿಸಿ ಎಂದು ಟಿಸಿ ಕೇಳಿದರು ಎಂಬ ಕಾರಣಕ್ಕಾಗಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಚಾಕುವಿನಿಂದ ಮಾರಣಾಂತಿಕವಾಗಿ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಕಾರ್ಮಿಕರೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಟಿಕೆಟ್ ಕಲೆಕ್ಟರ್‌ ಅಶ್ರಫ್‌ ಅಲಿ ಕಿತ್ತೂರು ಸೇರಿ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. ರೈಲು ಸಂಖ್ಯೆ 11006 ಚಾಲುಕ್ಯ ಎಕ್ಸ್‌ಪ್ರೆಸ್‌ನಲ್ಲಿ ಘಟನೆ ನಡೆಸಿದ್ದು, ಹಲ್ಲೆಗೊಳಗಾಗಿದ್ದ ಉತ್ತರ ಭಾರತ ಮೂಲದ ದೇವ ಋಷಿ ವರ್ಮಾ (23) ಮೃತಪಟ್ಟಿದ್ದಾರೆ. ಇವರು ಟ್ರೈನ್‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು. ಟಿಕೆಟ್‌ ಕಲೆಕ್ಟರ್‌ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ತಡೆಯಲು ಹೋದ ಸಂದರ್ಭದಲ್ಲಿ ದುಷ್ಕರ್ಮಿಯು ಚಾಕುವಿನಿಂದ ಇರಿದಿದ್ದಾನೆ. ಪಾಂಡಿಚೇರಿ – ಮುಂಬೈ ಮಾರ್ಗದ ಚಾಲುಕ್ಯ ಎಕ್ಸ್‌ಪ್ರೆಸ್‌ನ ಎಸ್ 8 ಬೋಗಿಯಲ್ಲಿ ಈ ಘಟನೆ ನಡೆದಿದೆ.

ಆರೋಪಿ ಪರಾರಿ

ಖಾನಾಪುರ ತಾಲೂಕಿನ ಲೋಂಡಾಕ್ಕೆ ರೈಲು ಬರುತ್ತಿದ್ದಂತೆ ಟಿಸಿ ಎಲ್ಲರ ಬಳಿ ಟಿಕೆಟ್‌ ಚೆಕ್‌ ಮಾಡುತ್ತಿದ್ದರು. ಅದರಂತೆ ಈ ದುಷ್ಕರ್ಮಿಯ ಬಳಿಯೂ ಟಿಕೆಟ್‌ ಕೇಳಿದ್ದಾರೆ. ಆದರೆ, ಆತ ಸರಿಯಾಗಿ ಸ್ಪಂದಿಸಲಿಲ್ಲ. ಬಳಿಕ ಜೋರಾಗಿ ಕೇಳಿದಾಗ ಆತ ಚೂರಿಯಿಂದ ಇರಿದು, ಹಲ್ಲೆ ನಡೆಸಲು ಮುಂದಾಗಿದ್ದಾನೆ. ಆಗ ಟಿಸಿ ಜೋರಾಗಿ ಕೂಗಿಕೊಂಡಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ದೇವ ಋಷಿ ವರ್ಮಾ ಹಾಗೂ ಸಹ ಪ್ರಯಾಣಿಕರು ರಕ್ಷಣೆಗೆಂದು ದಾವಿಸಿದ್ದಾರೆ. ಆಗ ಅವರ ಮೇಲೆಯೂ ಮುಸುಕುಧಾರಿ ದುಷ್ಕರ್ಮಿ ದಾಳಿ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ.

ಹಲ್ಲೆಗೊಳಗಾದವರಲ್ಲಿ ದೇವ ಋಷಿ ವರ್ಮಾ ಮೃತಪಟ್ಟರೆ, ಟಿಸಿ ಸೇರಿ ಉಳಿದ ಮೂವರು ಸಹ ಪ್ರಯಾಣಿಕರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ನಾಲ್ವರು ಗಾಯಾಳುಗಳಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಇರಿಸಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಮಧ್ಯಂತರ ಜಾಮೀನು (Bail) ನೀಡಲಾಗಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ. ಹೀಗಾಗಿ ರೇವಣ್ಣ ಅವರು ಇನ್ನೂ ನಿಟ್ಟುಸಿರು ಬಿಡುವಂತೆ ಇಲ್ಲ. ನಾಳೆ ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

ಎಚ್‌.ಡಿ. ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ಈಗ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ.

ವಾದ – ಪ್ರತಿವಾದ

ಗುರುವಾರ (ಮೇ 16) ಬೆಳಗ್ಗೆ 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಎಚ್.ಡಿ. ರೇವಣ್ಣ ಪರ ವಕೀಲರ ವಾದವನ್ನು ಆಲಿಸಿದರು. ಬಳಿಕ ಎಸ್ಐಟಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು‌ ಸೂಚಿಸಿದ ನ್ಯಾಯಾಧೀಶೆ ಪ್ರೀತ್ ಜೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಿದ್ದರು.

ಜಾಮೀನು ನೀಡದಂತೆ ಜಯ್ನಾ ಕೊಠಾರಿ ಮನವಿ

ಈ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ, ಈ ಕೇಸ್‌ನಲ್ಲಿ ನಾನ್ ಬೇಲಬಲ್‌ ಸೆಕ್ಷನ್ ಇಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಆಗ ಮಧ್ಯಪ್ರವೇಶ ಮಾಡಿದ ಜಡ್ಜ್‌, ಎಸ್ಐಟಿ ವಾದಕ್ಕೂ ಅವಕಾಶ ನೀಡೋಣ ಎಂದು ಹೇಳಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು.

ಮಧ್ಯಾಹ್ನದ ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ, ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಆರಂಭಿಸಿದರು. ಈ ವೇಲೆ ಎಚ್.ಡಿ. ರೇವಣ್ಣ ಪರ ವಕೀಲರು ಮಧ್ಯ ಪ್ರವೇಶ ಮಾಡಿ, ಸೀನಿಯರ್ ವಕೀಲರು ಬರ್ತಾರೆ. ಹೀಗಾಗಿ ನಾಳೆಯವರೆಗೂ (ಮೇ 17) ಸಮಯ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಿ, ಹೊಳೆನರಸೀಪುರ ಕೇಸಲ್ಲಿ ವಿಚಾರಣೆಗೆ ಬರುವುದಾಗಿ ಹೇಳಿದ್ದಾರೆ. ಇನ್ನೂ ವಿಚಾರಣೆಗೆ ಬಂದಿಲ್ಲ. ಈಗಲೇ ವಿಚಾರಣೆ ನಡೆಯಲಿ. ಅಥವಾ ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಯ್ನಾ ಕೋಠಾರಿ, ಆರೋಪಿಯು ಪೊಲೀಸರ ಮುಂದೆ ಶರಣಾಗಲಿ ಅಥವಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿ. ಆರೋಪಿ ತುಂಬಾ ಪ್ರಭಾವಿ ಆಗಿದ್ದಾರೆ. ಹೀಗಾಗಿ ಆರೋಪಿಯೇ ಸ್ವ – ಇಚ್ಛೆಯಿಂದ ಬಂದು ಶರಣಾಗಲಿ ಎಂದು ವಾದಿಸಿದರು.

ಆಗ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್‌, ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಇನ್ನು ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

ರೇವಣ್ಣ ಹಾಜರಾಗಲು ಜಡ್ಜ್‌ ಸೂಚನೆ

ಪುನಃ ವಾದ ಮಂಡಿಸಿದ ಜಯ್ನಾ ಕೊಠಾರಿ, ಆರೋಪಿ ಬೆಳಗ್ಗೆ ಶರಣಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈಗ ಕೋರ್ಟ್‌ಗೆ ಶರಣಾಗಲು ಸಿದ್ಧರಿಲ್ಲ. ಸದ್ಯ ಇಲ್ಲೇ ಎಲ್ಲಿಯೋ ಕಾರಿನಲ್ಲಿ ಕುಳಿತಿರಬಹುದು ಎಂದು ಹೇಳಿದರು. ಈ ವೇಳೆ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ ಎಚ್‌.ಡಿ. ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.

Continue Reading

ಬೆಂಗಳೂರು

KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

CET Exam : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ ಮಾಡಿಕೊಂಡಿದ್ದ ಕೆಇಎ (KEA) ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಎತ್ತಂಗಡಿ ಆಗಿದ್ದಾರೆ. ಅವರ ಜಾಗಕ್ಕೆ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಪ್ರಸನ್ನ ಅವರನ್ನು ನೇಮಕ ಮಾಡಲಾಗಿದೆ.

VISTARANEWS.COM


on

By

KEA Department of Technical Education Director Prasanna has been appointed as the Executive Director of KEA
Koo

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ನಡೆದಿದ್ದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಮಹಾ ಎಡವಟ್ಟು ಆಗಿತ್ತು. ನಾಲ್ಕು ವಿಷಯಗಳಿಂದ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಬಂದಿತ್ತು. ಇದರಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಉಪನ್ಯಾಸಕರಿಂದಲ್ಲೂ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟಿಸಿದ್ದವು. ಇದರ ಬೆನ್ನಲ್ಲೇ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ (ಐಎಎಸ್‌) ಅವರನ್ನೇ ತಲೆದಂಡ ಮಾಡಲಾಗಿದೆ.

ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದವನ್ನು ರಮ್ಯಾ ಅವರು ಎಳೆದುಕೊಂಡಿದ್ದರು. ಇದೀಗ ರಾಜ್ಯ ಸರ್ಕಾರವು ರಮ್ಯಾರನ್ನು ಎತ್ತಂಗಡಿ ಮಾಡಿ, ಅವರ ಜಾಗಕ್ಕೆ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

ಸಿಇಟಿ ಪರೀಕ್ಷೆಯಲ್ಲಿ ಏನಿದು ಔಟ್‌ ಆಫ್‌ ಸಿಲಬಸ್‌ ಗೊಂದಲ?

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಬಾರಿಯ ಪರೀಕ್ಷೆಯಲ್ಲಿ 4 ವಿಷಯಗಳಿಂದ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳು ಕೇಳಲಾಗಿತ್ತು. Out of Syllabus ಪ್ರಶ್ನೆಗಳಿಂದ ಪ್ರಾಮಾಣಿಕವಾಗಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳಿಗೆ ಭಾರಿ ಮೋಸವಾಗುತ್ತದೆ. ರಾಜ್ಯದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಎಬಿವಿಪಿ ಸಂಘಟನೆ ಪ್ರತಿಭಟಿಸಿತು. ಈ ಗೊಂದಲದಿಂದ ಶಿಕ್ಷಣ ಇಲಾಖೆಗೂ ಮತ್ತು ಪ್ರಾಧಿಕಾರಕ್ಕೂ ಯಾವುದೇ ತಾಳ-ಮೇಳ ಇಲ್ಲ ಎನ್ನವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕಿಡಿಕಾರಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಭಿ ಮತ್ತು ಹಸ್ತಕ್ಷೇಪ ಶಿಕ್ಷಣ ಇಲಾಖೆ ಮತ್ತು ಪ್ರಾಧಿಕಾರಗಳಲ್ಲಿ ಇರುವುದರಿಂದ ಈ ರೀತಿಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದು ಎವಿಬಿಪಿ ಕಿಡಿಕಾರಿತ್ತು. ಅಲ್ಲದೇ ಸಮಸ್ಯೆಗೆ ಕಾರಣವಾಗಿರುವವರನ್ನು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತ್ತು. ರಾಜ್ಯದಲ್ಲಿ ಮತ್ತೊಮ್ಮೆ ಸಿ.ಇ.ಟಿ – 2024 ಪರೀಕ್ಷೆಗಳನ್ನು ನಡೆಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pakistan
ಸಂಪಾದಕೀಯ5 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ5 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ5 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ5 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ5 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು5 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ5 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

BJP district president N S Hegde pressmeet in Yallapur
ಉತ್ತರ ಕನ್ನಡ5 hours ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ5 hours ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ7 hours ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ15 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು18 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌