Astrology Tips : ಮದುವೆಗೆ ಕಂಕಣ ಬಲ ಕೂಡಿ ಬರುತ್ತಿಲ್ಲವೇ?; ಜ್ಯೋತಿಷ್ಯ ಶಾಸ್ತ್ರದಲ್ಲಿದೆ ಪರಿಹಾರ - Vistara News

ಪ್ರಮುಖ ಸುದ್ದಿ

Astrology Tips : ಮದುವೆಗೆ ಕಂಕಣ ಬಲ ಕೂಡಿ ಬರುತ್ತಿಲ್ಲವೇ?; ಜ್ಯೋತಿಷ್ಯ ಶಾಸ್ತ್ರದಲ್ಲಿದೆ ಪರಿಹಾರ

ಮದುವೆಗೆ ಕಂಕಣ ಬಲ ಕೂಡಿ ಬರಬೇಕು ಎಂದು ಹೇಳುವುದನ್ನು ಕೇಳಿರುತ್ತೇವೆ. ಗುರುಬಲ ಇದ್ದರೆ ಮಾತ್ರ ಸಂಬಂಧಗಳು ಏರ್ಪಡುತ್ತವೆ. ಇದಕ್ಕೆ ಏನು ಮಾಡಬೇಕು? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು (Astrology Tips) ಎಂಬುದನ್ನು ನೋಡೋಣ

VISTARANEWS.COM


on

Astrology tips to get marriage in time
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿವಾಹವು ಜೀವನದ ಒಂದು ಪ್ರಮುಖ ಘಟ್ಟ. ಹುಡುಗನಿಗಾಗಲಿ ಅಥವಾ ಹುಡುಗಿಗಾಗಲಿ ಸರಿಯಾದ ವಯಸ್ಸಿಗೆ ಮದುವೆ ಆಗಲಿಲ್ಲ, ಮದುವೆಗೆ ಸಂಬಂಧ ಕೂಡಿ ಬರಲಿಲ್ಲ ಎಂದು ಕೂಡಲೇ ಒಂದು ರೀತಿಯ ಆತಂಕ ಆರಂಭವಾಗುತ್ತದೆ. ಮದುವೆ ಆಗುವುದು ಎಷ್ಟು ಮುಖ್ಯವೋ ಸರಿಯಾದ ಸಮಯಕ್ಕೆ ಆಗುವುದು ಸಹ ಅಷ್ಟೇ ಮುಖ್ಯ ಎನ್ನುತ್ತಾರೆ (Astrology Tips) ಬಲ್ಲವರು.

ಹೀಗಾಗಿಯೇ ನಮ್ಮ ಹಿರಿಯರು ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲು ಅನೇಕ ಉಪಾಯಗಳನ್ನು ಮಾಡುತ್ತಿದ್ದರು. ಜ್ಯೋತಿಷ್ಯ ಶಾಸ್ತ್ರದಲ್ಲೂ ಮದುವೆ ಫಿಕ್ಸ್‌ ಆಗಲು ಅನೇಕ ಉಪಾಯಗಳನ್ನು ಹೇಳಲಾಗಿದೆ. ಮದುವೆಯ ವಯಸ್ಸಿಗೆ ಬಂದರೂ ಯಾವುದೇ ಜಾತಕ ಹೊಂದಾಣಿಕೆಯಾಗುತ್ತಿಲ್ಲ ಅಥವಾ ಮದುವೆ ವರೆಗೂ ಬಂದ ಸಂಬಂಧಗಳು ಮುರಿದು ಬೀಳುತ್ತಿವೆ ಎಂಬುದು ಅನೇಕರ ಸಾಮಾನ್ಯ ಸಮಸ್ಯೆಯಾಗಿದೆ. ಇವೆಲ್ಲದಕ್ಕೆ ಜಾತಕದಲ್ಲಿರುವ ಗ್ರಹ, ನಕ್ಷತ್ರಗಳು ಕಾರಣವಾಗಿರುತ್ತವೆ ಎನ್ನುತ್ತದೆ ಈ ಶಾಸ್ತ್ರ.

ಜಾತಕದಲ್ಲಿ ಗ್ರಹಗಳು ಸರಿಯಾದ ಸ್ಥಾನ ಮತ್ತು ಸ್ಥಿತಿಯಲ್ಲಿದ್ದರೆ ಅಂಥ ಸಂದರ್ಭದಲ್ಲಿ ಯಾವುದೇ ತಾಪತ್ರಯವಿಲ್ಲದೇ ಮದುವೆ ಸಂಬಂಧ ಕೂಡಿ ಬರುತ್ತದೆಯಂಥೆ. ಅದೇ ಜಾತಕದಲ್ಲಿ ಗ್ರಹಗಳ ಸ್ಥಿತಿ ಚೆನ್ನಾಗಿಲ್ಲವೆಂದಾದರೆ ವಿವಾಹಕ್ಕೆ ತೊಂದರೆ ಉಂಟಾಗುತ್ತದೆ. ಅಂಥ ಸಂದರ್ಭಗಳಲ್ಲಿ ಜ್ಯೋತಿಷ್ಯದಲ್ಲಿ ಹೇಳಿರುವ ಕೆಲವು ಪರಿಹಾರಗಳನ್ನು ಮಾಡಿದರೆ ಎಲ್ಲವೂ ಸರಿಹೋಗುತ್ತದೆ ಎನ್ನುತ್ತಾರೆ ಜ್ಯೋತಿಷ್ಯ ತಜ್ಞರು.

ಜ್ಯೋತಿಷ್ಯ ಶಾಸ್ತ್ರದ ಅನುಸಾರ ಜಾತಕದಲ್ಲಿ ಮುಖ್ಯವಾಗಿ ಸಪ್ತಮ, ನವಮ ಮತ್ತು ಪಂಚಮ ಸ್ಥಾನಗಳ ಅಧಿಪತಿ ಗ್ರಹವು ಉತ್ತಮ ಸ್ಥಿತಿಯಲ್ಲಿದ್ದರೆ ಅಂಥವರ ವಿವಾಹ ಸಮಯಕ್ಕೆ ಸರಿಯಾಗಿ ಆಗುತ್ತದೆ. ಚಂದ್ರ, ಶುಕ್ರ ಮತ್ತು ಗುರು ಗ್ರಹಗಳ ಸ್ಥಿತಿ ಉತ್ತಮವಾಗಿದ್ದರೆ ಕೂಡ ಮದುವೆಯು ಅತ್ಯಂತ ಸುಲಭವಾಗಿ ಆಗಿ ಹೋಗುತ್ತದೆ. ಗುರು ಬಲ ಚೆನ್ನಾಗಿದ್ದರೆ ಮದುವೆ ಸರಿಯಾದ ಸಮಯಕ್ಕೆ ಆಗುತ್ತದೆ. ಇಲ್ಲದಿದ್ದರೆ ಗುರು ಬಲ ಬರುವವರೆಗೂ ಕಾಯಬೇಕಾಗುತ್ತದೆ.

ಒಂದು ವೇಳೆ ನಿಮ್ಮ ಜಾತಕದಲ್ಲಿ ಗುರು ಗ್ರಹದ ಸ್ಥಿತಿ ಉತ್ತಮವಾಗಿದೇ ಇದ್ದರೂ, ಕಂಕಣ ಬಲ ಕೂಡಿ ಬರಲು ಪ್ರಾತಃಕಾಲದಲ್ಲಿ ಅಥವಾ ಸಂಧ್ಯಾಕಾಲದಲ್ಲಿ ಹಳದಿ ವಸ್ತ್ರವನ್ನು ಧರಿಸಿ ಬೃಹಸ್ಪತಿಗೆ ಅಂದರೆ ಗುರು ಗ್ರಹಕ್ಕೆ ಕೆಂಪು ಮತ್ತು ಹಳದಿ ಹೂವುಗಳಿಂದ ಪೂಜೆ ಮಾಡಬೇಕು. ಬೃಹಸ್ಪತಿ ಮಂತ್ರವನ್ನು ಜಪಿಸಬೇಕು. ನಂತರದಲ್ಲಿ ಸಿಹಿಯನ್ನು ನೈವೇದ್ಯ ಮಾಡಬೇಕು. ಬೃಹಸ್ಪತಿ ದೇವರಲ್ಲಿ ಬೇಗ ವಿವಾಹವಾಗುವಂತೆ ಕೇಳಿಕೊಳ್ಳಬೇಕು. ಜೊತೆಗೆ ಅರಿಶಿಣ ಮಿಶ್ರಿತ ನೀರನ್ನು ಬಾಳೆ ಮರಕ್ಕೆ ಹಾಕಬೇಕು. ಇದೇ ರೀತಿ ಮೂರು ಗುರುವಾರಗಳ ಕಾಲ ಮಾಡಿದರೆ ಗುರು ಗ್ರಹದ ಕೃಪೆ ಪ್ರಾಪ್ತವಾಗುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.

ಮಹಿಳೆಯರು ಏನು ಮಾಡಬೇಕು?

ಹುಡುಗಿಯರ ವಿವಾಹಕ್ಕಂತೂ ಗುರು ಬಲ ಚೆನ್ನಾಗಿರಲೇಬೇಕು. ಗುರು ಬಲವಿಲ್ಲದೇ ಮದುವೆ ಆದದ್ದೇ ಆದರೆ ವೈವಾಹಿಕ ಜೀವನದಲ್ಲಿ ತೊಂದರೆಗಳು ಎದುರಾಗುತ್ತವೆ. ಜಾತಕದಲ್ಲಿ ಗುರು ಗ್ರಹವು ನೀಚ ಸ್ಥಿತಿಯಲ್ಲಿದ್ದರೆ ವಿವಾಹ ವಿಳಂಬವಾಗುತ್ತದೆ. ಗುರು ಗ್ರಹದ ಸ್ಥಿತಿ ಸ್ವಲ್ಪ ಮಟ್ಟಿಗೆ ಉತ್ತಮವಾಗಿದ್ದರೂ ಸಹ ವಿವಾಹಕ್ಕೆ ಯಾವುದೇ ತೊಂದರೆಗಳು ಆಗುವುದಿಲ್ಲ. ಹಾಗಾಗಿ ಹುಡುಗಿಯರ ವಿವಾಹಕ್ಕೆ ಗುರು ಗ್ರಹದ ಪಾತ್ರ ಅತ್ಯಂತ ಮುಖ್ಯವಾಗಿರುತ್ತದೆ.
ಗುರು ಬಲ ಚೆನ್ನಾಗಿರದೇ ಇದ್ದಾಗ ಈ ರೀತಿ ಮಾಡಿ;

  • ನಿತ್ಯವೂ ಅರಿಶಿಣ ಮಿಶ್ರಿತ ನೀರನ್ನು ಸೂರ್ಯನಿಗೆ ಅರ್ಪಿಸಿ.
  • ನಿತ್ಯವೂ ತುಪ್ಪದ ದೀಪ ಹಚ್ಚಿ ಪಾರ್ವತಿ ದೇವಿಯನ್ನು ಆರಾಧಿಸಬೇಕು. 21 ಸೋಮವಾರ ವ್ರತವನ್ನು ಕೈಗೊಂಡರೆ ಬೇಗ ಕಂಕಣ ಬಲ ಕೂಡಿ ಬರುತ್ತದೆ.
  • ಪ್ರತಿನಿತ್ಯ ವಿಷ್ಣು ಸಹಸ್ರನಾಮ ಪಠಿಸಬೇಕು. ಜೊತೆಗೆ ಸಾತ್ವಿಕ ಆಹಾರವನ್ನು ಸೇವಿಸಬೇಕು. ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡುತ್ತಿರಬೇಕು.

ಪುರುಷರು ಏನು ಮಾಡಬೇಕು?

ಪುರುಷರಿಗೆ ವಿವಾಹ ಯೋಗ ಕೂಡಿ ಬರಲು ಜಾತಕದಲ್ಲಿ ಶುಕ್ರ ಗ್ರಹದ ಸ್ಥಿತಿ ಚೆನ್ನಾಗಿರಬೇಕು. ಆದರೆ ಪತ್ನಿಯಾಗುವವಳ ಯೋಗವನ್ನು ಪರಿಶೀಲಿಸುವಾಗ ಪುರುಷನ ಜಾತಕದಲ್ಲಿ ಗುರು ಗ್ರಹ ಸ್ಥಿತಿಯನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ.

ಪತ್ನಿಯಾಗುವವಳ ರೂಪ, ಸ್ವಭಾವ, ಗುಣ, ಬಣ್ಣ ಮತ್ತು ಹೊಂದಾಣಿಕೆಗೆ ಸಂಬಂಧಿಸಿದ ವಿಚಾರಗಳನ್ನು ಪುರುಷನ ಜಾತಕದಲ್ಲಿ ಗುರು ಗ್ರಹದ ಸ್ಥಿತಿಯ ಆಧಾರದ ಮೇಲೆ ತಿಳಿದುಕೊಳ್ಳಬಹುದಾಗಿರುತ್ತದೆ. ವಿವಾಹ ಯೋಗ ಕೂಡಿ ಬರಲು ಪುರುಷರು ಮಾಡಬೇಕಾದ ಜ್ಯೋತಿಷ್ಯ ಪರಿಹಾರಗಳು ಹೀಗಿವೆ;

  • ಸೂರ್ಯನಿಗೆ ಪ್ರತಿನಿತ್ಯ ಅರ್ಘ್ಯವನ್ನು ಅರ್ಪಿಸುವುದರ ಜೊತೆಗೆ ಸೂರ್ಯನಿಗೆ ನಮಿಸಿ ಪ್ರಾರ್ಥಿಸಿಕೊಳ್ಳಬೇಕು. ಹೆಚ್ಚು ಹಳದಿ ವಸ್ತ್ರವನ್ನು ಧರಿಸಬೇಕು.
  • ಪ್ರತಿನಿತ್ಯ ‘ಓಂ ನಮಃ ಶಿವಾಯ’ ಜಪವನ್ನು 108 ಬಾರಿ ಪಠಿಸಬೇಕು.

ಇದನ್ನೂ ಓದಿ : Vastu Tips : ಆರ್ಥಿಕ ಲಾಭ ಪಡೆಯಲು ಮನೆಯ ಉತ್ತರ ದಿಕ್ಕಿನಲ್ಲಿ ಹೀಗೆ ಮಾಡಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್‌ ಕೇಜ್ರಿವಾಲ್‌ ಅವರು ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೆ ಅವರು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ ಎಂದು ಆರೋಪಿಸಿದರು.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ (Delhi Excise Policy Case) ಜೈಲು ಪಾಲಾಗಿ, ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದರು. “ಒಂದು ದೇಶ, ಒಬ್ಬ ನಾಯಕ ಎಂಬುದು ನರೇಂದ್ರ ಮೋದಿ ಅವರ ಮಿಷನ್‌ ಆಗಿದೆ. ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಬದಲಿಸಲಿದ್ದಾರೆ” ಎಂದು ಜೈಲಿನಿಂದ ಬಿಡುಗಡೆಯಾದ ಬಳಿಕ ನಡೆಸಿದ ಮೊದಲ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

“ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

“ನಾನು ಮಾತ್ರವಲ್ಲ ಪ್ರತಿಪಕ್ಷಗಳ ಇನ್ನೂ ಹಲವು ನಾಯಕರನ್ನು ಅವರು ಜೈಲಿಗೆ ಕಳುಹಿಸಲಿದ್ದಾರೆ. ಆ ಮೂಲಕ ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಲಿದ್ದಾರೆ. ಈಗಾಗಲೇ ನಮ್ಮ ಪಕ್ಷದ ಸಚಿವರು, ಜಾರ್ಖಂಡ್‌ ಮುಖ್ಯಮಂತ್ರಿಯಾಗಿದ್ದ ಹೇಮಂತ್‌ ಸೊರೇನ್‌, ಟಿಎಂಸಿ ಸಚಿವರನ್ನು ಜೈಲಿಗೆ ಕಳುಹಿಸಲಾಗಿದೆ. ಹಾಗೇನಾದರೂ ಬಿಜೆಪಿಯೇ ಮತ್ತೆ ಗೆದ್ದರೆ, ಮಮತಾ ಬ್ಯಾನರ್ಜಿ, ಎಂ.ಕೆ.ಸ್ಟಾಲಿನ್‌, ಆರ್‌ಜೆಡಿಯ ತೇಜಸ್ವಿ ಯಾದವ್‌, ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೇರಿ ಇನ್ನೂ ಹಲವರು ಜೈಲು ಸೇರಲಿದ್ದಾರೆ. ಕೆಲವರ ರಾಜಕೀಯ ಜೀವನ ಅಂತ್ಯಗೊಳಿಸಲು ತಮ್ಮದೇ ಪಕ್ಷದ ನಾಯಕರನ್ನು ಕೂಡ ಜೈಲಿಗೆ ಕಳುಹಿಸಲಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Continue Reading

ಕ್ರೀಡೆ

Rishabh Pant : 2024ರ ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

Rishabh Pant : ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ನಿಧಾನಗತಿಯ ಓವರ್ ರೇಟ್​ಗಾಗಿ ರಿಷಭ್ ಪಂತ್​ಗೆ ದಂಡ ವಿಧಿಸುತ್ತಿರುವುದು ಇದು ಮೂರನೇ ಬಾರಿ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ನಂತರ ಕೀಪರ್-ಬ್ಯಾಟರ್​​ಗ ​ಮೊದಲು 12 ಲಕ್ಷ ರೂ.ಗಳ ದಂಡ ವಿಧಿಸಲಾಯಿತು ಮತ್ತು ನಂತರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಸಮಯದಲ್ಲಿ 24 ಲಕ್ಷ ರೂ.ಗಳ ದಂಡ ವಿಧಿಸಲಾಯಿತು.

VISTARANEWS.COM


on

Rishabh Pant
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ (IPL 2024) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಗೆ ದೊಡ್ಡ ಹೊಡೆತ ಬಿದ್ದಿದೆ. ಟೀಂ ಇಂಡಿಯಾ ನಾಯಕ ರಿಷಭ್ ಪಂತ್ (Rishabh Pant) ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಪಂದ್ಯ ನಿಷೇಧ ಹೇರಿದೆ. ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್​​ಗಾಗಿ ರಿಷಭ್ ಪಂತ್​ಗೆ ದಂಡ ವಿಧಿಸಲಾಗಿದೆ. ಕೀಪರ್-ಬ್ಯಾಟರ್​​ ಒಂದು ಪಂದ್ಯದಿಂದ ಅಮಾನತು ಶಿಕ್ಷೆ ವಿಧಿಸಲಾಗಿದೆ. ಇದಲ್ಲದೆ, ಈ ಅಪರಾಧಕ್ಕಾಗಿ ಅವರಿಗೆ 30 ಲಕ್ಷ ರೂ.ಗಳ ದಂಡವನ್ನೂ ವಿಧಿಸಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ನಿಧಾನಗತಿಯ ಓವರ್ ರೇಟ್​ಗಾಗಿ ರಿಷಭ್ ಪಂತ್​ಗೆ ದಂಡ ವಿಧಿಸುತ್ತಿರುವುದು ಇದು ಮೂರನೇ ಬಾರಿ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ನಂತರ ಕೀಪರ್-ಬ್ಯಾಟರ್​​ಗ ​ಮೊದಲು 12 ಲಕ್ಷ ರೂ.ಗಳ ದಂಡ ವಿಧಿಸಲಾಯಿತು ಮತ್ತು ನಂತರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಸಮಯದಲ್ಲಿ 24 ಲಕ್ಷ ರೂ.ಗಳ ದಂಡ ವಿಧಿಸಲಾಯಿತು.

ಎಲ್ಲ ಆಟಗಾರರಿಗೆ ದಂಡ

ರಿಷಭ್ ಪಂತ್ ಮಾತ್ರವಲ್ಲ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ಭಾಗವಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್​​ನ ಎಲ್ಲಾ ಆಟಗಾರರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದಂಡ ವಿಧಿಸಿದೆ. ನಿಧಾನಗತಿಯ ಓವರ್ ರೇಟ್​​ಗೆ ಆಟಗಾರರಿಗೆ 12 ಲಕ್ಷ ರೂಪಾಯಿ ಅಥವಾ ಆಯಾ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

ಮ್ಯಾಚ್ ರೆಫರಿ ನಿರ್ಧಾರವನ್ನು ಪ್ರಶ್ನಿಸಿದ ರಿಷಭ್ ಪಂತ್ ಗೆ ಪ್ರಯೋಜನ ಸಿಗಲಿಲ್ಲ. ಕ್ಯಾಪಿಟಲ್ಸ್ ನಾಯಕ ಅಧಿಕೃತ ಮೇಲ್ಮನವಿ ಸಲ್ಲಿಸಿದ್ದರು. ನಂತರ ಅದನ್ನು ಪರಿಶೀಲನೆಗಾಗಿ ಬಿಸಿಸಿಐ ಒಂಬುಡ್ಸ್​​ಮನ್​ಗೆ ಕಳುಹಿಸಲಾಗಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿದಿರುವುದು ಡೆಲ್ಲಿ ಕ್ಯಾಪಿಟಲ್ಸ್​ಗೆ ದೊಡ್ಡ ಹೊಡೆತವಾಗಿದೆ. ಫ್ರಾಂಚೈಸಿ ಪಾಯಿಂಟ್ಸ್ ಟೇಬಲ್​​ನಲ್ಲಿ 5 ನೇ ಸ್ಥಾನದಲ್ಲಿದೆ ಮತ್ತು ಪ್ಲೇಆಫ್​ಗೆ ತಮ್ಮ ಸ್ಥಾನ ಬಲಪಡಿಸಲು ಎರಡು ಗೆಲುವುಗಳ ಅಗತ್ಯವಿದೆ.

ಐಪಿಎಲ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ ಅತ್ಯುತ್ತಮ ಬ್ಯಾಟರ್​​ ಆಗಿದ್ದಾರೆ. ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಅವರು ಆಡಿದ 12 ಪಂದ್ಯಗಳಲ್ಲಿ 413 ರನ್ ಗಳಿಸಿದ್ದಾರೆ. ಹೆಚ್ಚಿನ ಡಿಸಿ ಬ್ಯಾಟರ್​ಗಳು ಬ್ಯಾಟ್​ನೊಂದಿಗೆ ಮುಂದುವರಿಯಲು ಹೆಣಗಾಡುತ್ತಿರುವುದರಿಂದ ಪಂತ್ ಅಲಭ್ಯತೆ ಸಮಸ್ಯೆ ಮಾಡಲಿದೆ.

ರಿಷಭ್ ಪಂತ್ ಬಗ್ಗೆ ಐಪಿಎಲ್ ಅಧಿಕೃತ ಹೇಳಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ ರಿಷಭ್ ಪಂತ್ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ/ ನಿಧಾನಗತಿಯ ಓವರ್ ರೇಟ್ನ ಮಿತಿಯನ್ನು ಮೀರಿದ್ದಕ್ಕಾಗಿ ಕೀಪರ್-ಬ್ಯಾಟರ್​ಗೆ ನಿಷೇಧಿಸಲಾಗಿದೆ ಎಂದು ಬಹಿರಂಗಪಡಿಸಿದೆ.

“ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೇ 07, 2024 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ 56 ನೇ ಪಂದ್ಯದ ಸಮಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ನಂತರ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಅವರಿಗೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸಲಾಗಿದೆ ಮತ್ತು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದ ಐಪಿಎಲ್​​ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ 3ನೇ ಅಪರಾಧವಾಗಿದೆ. ರಿಷಭ್ ಪಂತ್​ಗೆ 30 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ. ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ ಇಲೆವೆನ್ ನ ಉಳಿದ ಸದಸ್ಯರಿಗೆ ತಲಾ 12 ಲಕ್ಷ ರೂಪಾಯಿ ಅಥವಾ ಆಯಾ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ದಂಡ ವಿಧಿಸಲಾಗಿದೆ.

Continue Reading

ಕರ್ನಾಟಕ

ಮಗ ಜೈಲಿಗೆ, ಮೊಮ್ಮಗ ನಾಪತ್ತೆ; ದೇವೇಗೌಡರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಠಾಧೀಶರು

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆಳಿದ ಮಠಾಧೀಶರು, ಅವರಿಗೆ ಸಾಂತ್ವನ ಹೇಳುವ ಜತೆಗೆ ಆಶೀರ್ವಾದ ಮಾಡಿದರು. ಛಲವಾದಿ ಗುರುಪೀಠದ ಬಸವನಾಗಿದೇವ ಶ್ರೀ, ಬಂಜಾರ ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರು ಭೇಟಿಯಾಗಿ ದೇವೇಗೌಡರಿಗೆ ಸಾಂತ್ವನ ಹೇಳಿದರು.

VISTARANEWS.COM


on

HD Deve Gowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು (HD Deve Gowda) ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮಗ ಎಚ್‌.ಡಿ.ರೇವಣ್ಣ (HD Revanna) ಜೈಲು ಸೇರಿದ್ದಾನೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮೊಮ್ಮಗ ಪ್ರಜ್ವಲ್‌ ರೇವಣ್ಣ (Prajwal Revanna) ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. 90ನೇ ವಯಸ್ಸಿನಲ್ಲಿ ಇದನ್ನೆಲ್ಲ ನೋಡಬೇಕಾಯಿತಲ್ಲ ಎಂದು ದೇವೇಗೌಡರು ಕುಗ್ಗಿಹೋಗಿದ್ದಾರೆ. ಹಾಗಾಗಿ, ಹಲವು ಮಠಾಧೀಶರು ದೇವೇಗೌಡರ ನಿವಾಸಕ್ಕೆ ತೆರಳಿ ಅವರಿಗೆ ಸಾಂತ್ವನ ಹೇಳಿದ್ದಾರೆ.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆಳಿದ ಮಠಾಧೀಶರು, ಅವರಿಗೆ ಸಾಂತ್ವನ ಹೇಳುವ ಜತೆಗೆ ಆಶೀರ್ವಾದ ಮಾಡಿದರು. ಛಲವಾದಿ ಗುರುಪೀಠದ ಬಸವನಾಗಿದೇವ ಶ್ರೀ, ಬಂಜಾರ ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರು ಭೇಟಿಯಾಗಿ ದೇವೇಗೌಡರಿಗೆ ಸಾಂತ್ವನ ಹೇಳಿದರು. ಇನ್ನು ಕಲಬುರಗಿಯ ಪುಣ್ಯಕೋಟಿ ಆಶ್ರಮದ ವರಲಿಂಗ ಸ್ವಾಮೀಜಿ ಅವರು ದೇವೇಗೌಡರ ನಿವಾಸಕ್ಕೆ ತೆರಳಿದ್ದರು. ಆದರೆ, ಭೇಟಿಗೆ ಸಿಗದೆ ಅವರು ವಾಪಸಾದರು.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡು ಇರುವ ಕಾರಣ ಈಗಾಗಲೇ ಬ್ಲ್ಯೂ ಕಾರ್ನರ್‌ ನೋಟಿಸ್ ನೀಡಲಾಗಿತ್ತು. ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿರುವ ಎಸ್‌ಐಟಿ ಈಗ ವಿದೇಶದಿಂದ ಪ್ರಜ್ವಲ್ ಅವರನ್ನು ಕರೆತರಲು ವಿಶೇಷ ತಂಡವನ್ನು ರಚಿಸಿದೆ.

ಓರ್ವ ಎಸ್‌ಪಿ, ಮೂವರು ಇನ್ಸ್‌ಪೆಕ್ಟರ್ ಹಾಗೂ ಮೂವರು ಜನ ಸಬ್ ಇನ್ಸ್‌ಪೆಕ್ಟರ್ ಒಳಗೊಂಡ ತಂಡವನ್ನು ರಚಿಸಲಾಗಿದೆ. ಯೂರೋಪ್ ಬಳಿ ಇರುವ ಹಂಗೇರಿ ತಲುಪಲಿರುವ ಕರ್ನಾಟಕ ಪೊಲೀಸರು ಅಲ್ಲಿ ಹುಡುಕಾಟ ನಡೆಸಲಿದ್ದಾರೆ. ಈಗಾಗಲೇ ಭಾರತ ಹಾಗೂ ಜರ್ಮನಿ ಬಳಿ ಮ್ಯೂಚುಯಲ್ ಲೀಗಲ್ ಅಸಿಸ್ಟೆಂಟ್ ಟ್ರೀಟಿ (MLAT) ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಸಿಬಿಐ ಸಹಾಯದಿಂದ ಇಂಟರ್ ಪೋಲ್ ಅಧಿಕಾರಿಗಳ ಜತೆ ಸಹ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Continue Reading

ಕರ್ನಾಟಕ

ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

ರಾಜ್ಯದಲ್ಲಿ ಇನ್ನೇನು ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಶಾಲೆಗಳಲ್ಲಿ ಅಡ್ಮಿಷನ್‌ ಪ್ರಕ್ರಿಯೆ ಕೂಡ ಆರಂಭವಾಗಲಿದೆ. ಇದಕ್ಕಾಗಿ ಮಕ್ಕಳು ಮಾತ್ರವಲ್ಲ ಪೋಷಕರು ಕೂಡ ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ, ಶಾಲಾ ಶುಲ್ಕ ಪಡೆಯುವಾಗ ಎಚ್ಚರದಿಂದ ಇರಿ ಎಂದು ಖಾಸಗಿ ಶಾಲೆಗಳಿಗೆ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Madhu Bangarappa
Koo

ಶಿವಮೊಗ್ಗ: ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಫಲಿತಾಂಶ ಪ್ರಕಟವಾಗಿದೆ. ಇನ್ನೇನು ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಈಗಾಗಲೇ ಪೋಷಕರು ಮಕ್ಕಳನ್ನು ಯಾವ ಶಾಲೆಗೆ ಸೇರಿಸಿದರೆ ಒಳ್ಳೆಯದು? ಎಲ್ಲಿ ಎಷ್ಟು ಫೀ ಇದೆ? ಯಾವ ಶಾಲೆಗೆ ಸೇರಿಸಬೇಕು ಎಂದರೆ ಎಷ್ಟು ಡೊನೇಷನ್‌ ಕೊಡಬೇಕು ಎಂಬುದು ಸೇರಿ ಹಲವು ರೀತಿಯಲ್ಲಿ ಯೋಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಪ್ರಾಥಮಿಕ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಖಾಸಗಿ ಶಾಲೆಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

“ಖಾಸಗಿ ಶಾಲೆಗಳಿಗೆ ಒಂದು ಸಲಹೆ ಕೊಡುತ್ತೇನೆ. ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಫೀಸ್‌ ತೆಗೆದುಕೊಳ್ಳಬೇಕು. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅಕ್ರಮವಾಗಿ ಫೀಸ್‌ ತೆಗೆದುಕೊಂಡರೆ, ಹೆಚ್ಚಿನ ಶುಲ್ಕವನ್ನು ಪೋಷಕರಿಂದ ವಸೂಲಿ ಮಾಡಿದರೆ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂಬುದಾಗಿ ಅವರು ಶಿವಮೊಗ್ಗದಲ್ಲಿ ಎಚ್ಚರಿಕೆ ನೀಡಿದರು.

ಅಂಕಿತಾಗೆ ವೈಯಕ್ತಿಕ ಸಹಾಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೇ ಮೊದಲ ರ‍್ಯಾಂಕ್‌ ಬಂದ ಬಾಗಲಕೋಟೆ ಜಿಲ್ಲೆಯ ಅಂಕಿತಾ ಕೊನ್ನೂರ್‌ಗೆ ವೈಯಕ್ತಿಕವಾಗಿಯೂ ನೆರವು ನೀಡುವುದಾಗಿ ಮಧು ಬಂಗಾರಪ್ಪ ಘೋಷಿಸಿದರು. “ಏನಾದರೂ ಸಹಾಯ ಬೇಕು ಎಂದರೆ ಕೇಳು ಎಂಬುದಾಗಿ ಅಂಕಿತಾಗೆ ಹೇಳಿದ್ದೇನೆ. ಸರ್ಕಾರದಿಂದ ಸಿಗುವ ಸೌಲಭ್ಯಗಳು ಆಕೆಗೆ ಸಿಗುತ್ತವೆ. ಉನ್ನತ ಶಿಕ್ಷಣಕ್ಕೆ ಬೇಕಾದರೆ ಆಕೆಗೆ ವೈಯಕ್ತಿಕವಾಗಿ ಸಹಾಯ ಮಾಡುತ್ತೇನೆ” ಎಂಬುದಾಗಿ ಮಧು ಬಂಗಾರಪ್ಪ ಹೇಳಿದರು.

“ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ನಾನೂ ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುತ್ತೇನೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. ಇದು ಪುಣ್ಯದ ಕೆಲಸವಾಗಿದ್ದು, ಹಂತ ಹಂತವಾಗಿ ಎಲ್ಲ ಕೆಲಸವನ್ನೂ ಮಾಡುತ್ತೇವೆ. ಮಳೆಗಾಲ ಸಮೀಪಿಸುತ್ತಿದ್ದು, ಸರ್ಕಾರಿ ಶಾಲೆಗಳ ದುರಸ್ತಿಗೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು. ಹಾಸನ ಪೆನ್‌ಡ್ರೈ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾನೂನು ಇದೆ, ಅದರ ಅನ್ವಯ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದಷ್ಟೇ ಹೇಳಿದರು.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Continue Reading
Advertisement
Arvind Kejriwal
ದೇಶ5 mins ago

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Hair Color Fashion
ಫೋಟೊ6 mins ago

Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

Akshaya Tritiya
ಬೆಂಗಳೂರು23 mins ago

Akshaya Tritiya: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಬಾಲ ರಾಮನ ಬೆಳ್ಳಿ ವಿಗ್ರಹದ ಪೂಜೆ ಸಂಪನ್ನ

Rishabh Pant
ಕ್ರೀಡೆ23 mins ago

Rishabh Pant : 2024ರ ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

Pooja Hegde
ಸಿನಿಮಾ31 mins ago

Pooja Hegde: ಕಾರ್ಕಳದ ಕಣಜಾರು ದೇಗುಲಕ್ಕೆ ಭೇಟಿ ನೀಡಿದ ನಟಿ ಪೂಜಾ ಹೆಗ್ಡೆ

Road Accident in chikodi maharashtra
ಬೆಳಗಾವಿ43 mins ago

Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

HD Deve Gowda
ಕರ್ನಾಟಕ55 mins ago

ಮಗ ಜೈಲಿಗೆ, ಮೊಮ್ಮಗ ನಾಪತ್ತೆ; ದೇವೇಗೌಡರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಠಾಧೀಶರು

Artificial Intelligence
ದೇಶ1 hour ago

Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

Book Release
ಬೆಂಗಳೂರು1 hour ago

Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

Actor Upendra
ಸಿನಿಮಾ1 hour ago

Actor Upendra: ಉಪೇಂದ್ರ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ರಿ-ರಿಲೀಸ್‌ ಆಗಲಿದೆ ಈ ಕ್ಲಾಸಿಕ್‌ ಸಿನಿಮಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌