Pulse of Karnataka: ಹಳೆ ಮೈಸೂರು: ವಿಸ್ತಾರ-ಅಖಾಡಾ ಸಮೀಕ್ಷೆ: ಮೂವರು ಸಿಎಂ ಅಭ್ಯರ್ಥಿಗಳ ತವರು ಜನರ ಮನದಲ್ಲೇನಿದೆ? - Vistara News

ಕರ್ನಾಟಕ

Pulse of Karnataka: ಹಳೆ ಮೈಸೂರು: ವಿಸ್ತಾರ-ಅಖಾಡಾ ಸಮೀಕ್ಷೆ: ಮೂವರು ಸಿಎಂ ಅಭ್ಯರ್ಥಿಗಳ ತವರು ಜನರ ಮನದಲ್ಲೇನಿದೆ?

ಹಳೆ ಮೈಸೂರು ಪ್ರಾಂತ್ಯ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಈ ಭಾಗದಲ್ಲಿ ಒಟ್ಟು 44 ವಿಧಾನಸಭಾ ಕ್ಷೇತ್ರಗಳಿವೆ. 2018ರಲ್ಲಿ ಜಿಜೆಪಿ – 05, ಕಾಂಗ್ರೆಸ್ -15, ಜೆಡಿಎಸ್ -22, ಇತರೆ -2 ಸ್ಥಾನ ಗೆಲ್ಲಲಾಗಿತ್ತು. ನಂತರ ಉಪಚುನಾವಣೆಯಲ್ಲಿ ಬಿಜೆಪಿ ಸಂಖ್ಯೆ ಹೆಚ್ಚಳವಾಗಿತ್ತು.

VISTARANEWS.COM


on

pulse-of-karnataka-vistara akhada survey Old Mysuru Region of Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರುನಾಡಿನಲ್ಲಿ ಇದೀಗ ಎಲೆಕ್ಷನ್ ಫೀವರ್. 2023ರ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಜನ ಯಾವ ಪಕ್ಷದ ಕಡೆಗೆ ಒಲುವು ತೋರುತ್ತಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ..? ವಲಯವಾರು ಯಾವ ರಿಸಲ್ಟ್ ಬರಬಹುದು..? ಹೀಗೆ ಒಟ್ಟು 13 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತವನ್ನ ಅರಿಯುವ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜೊತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ.

ಪಲ್ಸ್ ಆಫ್ ಕರ್ನಾಟಕ ಹಿಂದೆಂದೂ ಕರ್ನಾಟಕದಲ್ಲಿ ನಡೆದಿರದಂತಹ ಅತಿದೊಡ್ಡ ಸರ್ವೇ. ರಾಜ್ಯದ ಮೂಲೆಮೂಲೆಯಲ್ಲಿ ನಮ್ಮ 300ಕ್ಕೂ ಹೆಚ್ಚು ಸಿಬ್ಬಂದಿಯ ಜೊತೆಗೆ ಅಖಾಡದ ಅತಿದೊಡ್ಡ ತಂಡ ಮನೆಮನೆ ಬಾಗಿಲಿಗೆ ತೆರಳಿ ಸಂಗ್ರಹಿಸಿರೋ ಮಾಹಿತಿ ಇದು. ಕರುನಾಡಿನ ಜನರ ನಾಡಿಮಿಡಿತ ಅರಿಯಲು ಉದ್ಯಮಿಗಳು, ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಗಳ ಸಿಬ್ಬಂದಿ, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಹಿಂದುಳಿದ ವರ್ಗದ ಜನ, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಎಲ್ಲಾ ವರ್ಗ, ಸಮುದಾಯವನ್ನು ಪ್ರತಿನಿಧಿಸಿ ಈ ಸಮೀಕ್ಷೆ ನಡೆಸಲಾಗಿದೆ. ಇದರಲ್ಲಿ ಸ್ಥಳೀಯ, ಜಿಲ್ಲಾವಾರು, ರಾಜ್ಯ ಮತ್ತು ಕೇಂದ್ರ ನಾಯಕರು ಹೀಗೆ ಎಲ್ಲಾ ವಲಯ, ವಿಚಾರ, ನಾಯಕರಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ಹುಡುಕುವ ಪ್ರಯತ್ನ ಮಾಡಲಾಗಿದ್ದು, ನೂರಕ್ಕೆ ನೂರರಷ್ಟು ಯಶ ಪಡೆಯಲಾಗಿದೆ.

ಈ ಸರ್ವೇಯಲ್ಲಿ ಕರ್ನಾಟಕವನ್ನ ಭೌಗೋಳಿಕವಾಗಿ ಆರು ಭಾಗಗಳಾಗಿ ಗುರುತಿಸಲಾಗಿದೆ. ಅದರಲ್ಲಿ ಹಳೆ ಮೈಸೂರು, ಮಧ್ಯ ಕರ್ನಾಟಕ, ಕರಾವಳಿ & ಮಲೆನಾಡು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ವಲಯಗಳಾಗಿ ಗುರುತಿಸಿ ಅದರಡಿ ಬರೋ ವಿಧಾನಸಭಾ ಕ್ಷೇತ್ರಗಳ ಮತದಾರರ ಪಲ್ಸ್ ಅರಿತು ಆ ಸರ್ವೇ ರಿರ್ಪೋಟ್​​ ಅನ್ನು ನಾವು ನಿಮ್ಮ ಮುಂದಿಡುತ್ತಿದ್ದೇವೆ.

ಹಳೆ ಮೈಸೂರು ಭಾಗದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನ ತೆಗೆದುಕೊಳ್ಳಲಾಗಿದೆ.

ಪ್ರಶ್ನೆ 1 – ಈಗ ಚುನಾವಣೆ ನಡೆದರೆ ಯಾವ ಪಕ್ಷಕ್ಕೆ ಬಹುಮತ ನೀಡುತ್ತೀರಿ.?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಚುನಾವಣೆಗೆ ಇನ್ನೂ 2 ತಿಂಗಳು ಬಾಕಿ ಇರುವಾಗ ಜನರ ಮೂಡ್​ ಏನಿದೆ ಅನ್ನೋದು ಸರ್ವೇನಲ್ಲಿ ಬಹಿರಂಗವಾಗಿದೆ. ಇನ್ನೂ ಅಭ್ಯರ್ಥಿಗಳ ಘೋಷಣೆಗೂ ಮುನ್ನ ಮತದಾರರ ಮನದಲ್ಲಿರುವ ಭಾವನೆ ಇದು. ಇಲ್ಲಿ ಪಕ್ಷವೇ ಮುಖ್ಯವಾದಾಗ ಸಿಗಬಹುದಾದ ರಿಜಲ್ಟ್​ ಇದಾಗಿದೆ. ಅಭ್ಯರ್ಥಿ ಘೋಷಣೆ ನಂತರ ಈ ಫಲಿತಾಂಶ ಬದಲಾವಣೆ ಸಾಧ್ಯತೆ ಹೆಚ್ಚಿರುತ್ತದೆ. ಇದು ಕೇವಲ ಪಕ್ಷಗಳಿಗೆ ದಿಕ್ಸೂಚಿಯಂತಿದ್ದು, ಇದರ ಆಧಾರದ ಚುನಾವಣಾ ತಂತ್ರಗಾರಿಕೆ ಮಾಡಿಕೊಳ್ಳಬಹುದು. ಹಳೆ ಮೈಸೂರು ಭಾಗ ಬೆಂಗಳೂರಿಗೆ ಸಮೀಪವಿದ್ರೂ ಎಎಪಿ ಗೆ ಜನ ಒಲವು ತೋರಿದಂತೆ ಕಾಣ್ತಿಲ್ಲ.

ಪ್ರಶ್ನೆ 2 – ನೀವು ಈ ಬಾರಿ ಮತ ಚಲಾಯಿಸಲು ಇವುಗಳಲ್ಲಿ ಅತಿಹೆಚ್ಚು ಪ್ರಾಮುಖ್ಯತೆ ನೀಡುವ ವಿಚಾರ ಯಾವುದು.?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಇಲ್ಲಿ ನಮಗೆ ಜನ ಕ್ಷೇತ್ರದ ಅಭ್ಯರ್ಥಿ ಯಾರು ಅನ್ನೋದಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡ್ತಿರೋದು ಕಾಣುತ್ತಿದೆ. ಪ್ರತಿನಿತ್ಯ ಜನಸಾಮಾನ್ಯರ ಸಮಸ್ಯೆಗಳನ್ನ ಕೇಳುವ ಸ್ಥಳೀಯ ನಾಯಕನೇ ಮುಖ್ಯ ಎನ್ನುತ್ತಿದ್ದಾರೆ. ಅಭ್ಯರ್ಥಿಯ ನಂತರವೇ ಪಕ್ಷವನ್ನ ಪರಿಗಣಿಸ್ತಿದ್ದಾರೆ. ರಾಜಕೀಯ ಪಕ್ಷಗಳು ಅಭ್ಯರ್ಥಿಯ ಆಯ್ಕೆ ವೇಳೆ ಈ ಅಂಶವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಇಲ್ಲಿನ ಜನರಿಗೆ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋದಕ್ಕಿಂತ ಸ್ಥಳೀಯ ನಾಯಕರೇ ಮುಖ್ಯ. ಈ ಭಾಗದಿಂದಲೇ ಸಿದ್ದರಾಮಯ್ಯ ಮತ್ತು ಡಿಕೆಶಿ ಮುಖ್ಯಮಂತ್ರಿ ಅಭ್ಯರ್ಥಿಯಾಗಲು ಸೆಣಸಾಡುತ್ತಿದ್ದಾರೆ. ಆದ್ರೆ ಸರ್ವೇಯಲ್ಲಿ ಜನರಿಗೆ ಮುಖ್ಯಮಂತ್ರಿ ಅಭ್ಯರ್ಥಿಗಿಂತ ಕ್ಷೇತ್ರದ ಅಭ್ಯರ್ಥಿಯೇ ಮತ ಹಾಕಲು ನಿರ್ಣಾಯಕ.

ಪ್ರಶ್ನೆ 3 – ಈ ಚುನಾವಣೆಯಲ್ಲಿ ಯಾರಿಗೆ ಮತ ನೀಡಬೇಕು ಎಂಬುದನ್ನು ಇವುಗಳಲ್ಲಿ ಯಾವುದರ ಆಧಾರದಲ್ಲಿ ನಿರ್ಧಾರ ಮಾಡುತ್ತೀರಿ?

pulse-of-karnataka-vistara akhada survey Old Mysuru Region of Karnataka

ಹಳೆ ಮೈಸೂರು ಭಾಗದಲ್ಲಿ ಅತಿ ಹೆಚ್ಚು ಜನ ತಮಗೆ ಅಭಿವೃದ್ಧಿಯೇ ಮುಖ್ಯ ಎಂದಿದ್ದಾರೆ. ಧಾರ್ಮಿಕ ಮತ್ತು ಜಾತಿ ಆಧಾರಿತ ವಿಷಯಗಳ ಮೇಲೆ ಚುನಾವಣೆ ಮಾಡುವವರು ಇದನ್ನ ಗಮನಿಸಬೇಕು. ಅಭಿವೃದ್ಧಿ ಮಾಡುವವರಿಗೆ ಮಾತ್ರ ತಮ್ಮ ಮತ ಎನ್ನುತ್ತಿದ್ದಾರೆ ಈ ಭಾಗದ ಮತದಾರರು. ನಂತರದ ಸ್ಥಾನದಲ್ಲಿ ನಾಯಕತ್ವವನ್ನ ಪರಿಗಣಿಸಲಾಗುತ್ತಿದೆ. ಅಭಿವೃದ್ಧಿ ಮತ್ತು ನಾಯಕತ್ವ ಎರಡೂ ಕಾಂಬಿನೇಶನ್​ ಹೊಂದಿದ ಪಕ್ಷಕ್ಕೆ ಗೆಲುವಿನ ಸಾಧ್ಯತೆ ಹೆಚ್ಚು.

ಪ್ರಶ್ನೆ 4 – ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ಕುರಿತು ನಿಮ್ಮ ಅಭಿಪ್ರಾಯ

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಹಾಲಿ ಬಿಜೆಪಿ ಸರ್ಕಾರದ ಬಗ್ಗೆ ಈ ಭಾಗದ ಜನ ಅಸಮಧಾನ ಹೊಂದಿದ್ದಾರೆ ಎನ್ನೋದು ಸ್ಪಷ್ಟವಾಗಿ ಕಾಣ್ತಿದೆ. ಅರ್ಧದಷ್ಟು ಜನ ಇದನ್ನ ಇದೊಂದು ಕಳಪೆ ಸರ್ಕಾರ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಮಾರು 25 ಪರ್ಸೆಂಟ್​ ನಷ್ಟು ಜನ ಇದೊಂದು ಸಾಮಾನ್ಯ ಆಡಳಿತ ಎಂದಿದ್ದಾರೆ. ಉತ್ತಮ, ಅತ್ಯುತ್ತಮ ಅನ್ನೋವ್ರ ಸಂಖ್ಯೆಗಿಂತ ಸಾಮಾನ್ಯ, ಕಳಪೆ ಅನ್ನೋವ್ರೇ ಹೆಚ್ಚಾಗಿದ್ದಾರೆ. ಹಳೆ ಮೈಸೂರು ಮೊದಲಿನಿಂದಲೂ ಕಾಂಗ್ರೆಸ್​ ಮತ್ತು ಜೆಡಿಎಸ್ ಪ್ರಾಬಲ್ಯ ಇರೋ ಪ್ರಾಂತ್ಯ.. ಇದು ಕೂಡ ಈ ಅಭಿಪ್ರಾಯಕ್ಕೆ ಮೂಡಲು ಕಾರಣ ಆಗಿರಬಹುದು. ಕಳೆದ ಮೂರೂವರೆ ವರ್ಷದಲ್ಲಿ ಈ ಭಾಗದ ಜನರ ಮನ ಗೆಲ್ಲುವಲ್ಲಿ ಸರ್ಕಾರ ನಿರೀಕ್ಷಿತ ಯಶಸ್ಸು ಗಳಿಸಿಲ್ಲ.

ಪ್ರಶ್ನೆ 5 – ಈ 5 ವರ್ಷಗಳಲ್ಲಿ ನಿಮ್ಮ ಕ್ಷೇತ್ರದ ಶಾಸಕರ ಕಾರ್ಯ ನಿರ್ವಹಣೆ ತೃಪ್ತಿ ನೀಡಿದೆಯೇ?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಹಳೆ ಮೈಸೂರು ಭಾಗದ 7 ಜಿಲ್ಲೆಗಳಲ್ಲಿ ಶಾಸಕರ ಕಾರ್ಯ ತೃಪ್ತಿಕರ ಎನ್ನುತ್ತಿದ್ದಾರೆ ಮತದಾರರು. ಈ ಭಾಗದಲ್ಲಿ ಹಾಲಿ ಜಿಜೆಪಿಯ 05, ಕಾಂಗ್ರೆಸ್​ನ 15, ಜೆಡಿಎಸ್​​ ನ 22 ಹಾಗೂ ಇಬ್ಬರು ಪಕ್ಷೇತರರಿದ್ದಾರೆ. ಜೆಡಿಎಸ್​ ಮತ್ತು ಕಾಂಗ್ರೆಸ್​ ಶಾಸಕರೇ ಹೆಚ್ಚಿರುವ ಈ ಭಾಗದಲ್ಲಿ ಅವರ ಕಾರ್ಯನಿರ್ವಹಣೆ ತೃಪ್ತಿ ಅನ್ನೋವ್ರ ಸಂಖ್ಯೆ ಶೇ.39.7 ರಷ್ಟಿರೋದು ಸಮಾಧಾನಕರ ಸಂಗತಿ.

ಪ್ರಶ್ನೆ 6 – ಮುಂದಿನ ಚುನಾವಣೆ ಬಳಿಕ ಯಾರು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತೀರಿ?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಈ ಸಮೀಕ್ಷೆಯಲ್ಲಿ ಮೊದಲ ಮೂರು ಸ್ಥಾನದಲ್ಲಿರುವವರು ಇದೇ ಭಾಗದ ನಾಯಕರು ಅನ್ನೋದು ಪ್ರಮುಖಾಂಶ. ಈ ಭಾಗದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ಮೊದಲ ಸ್ಥಾನದಲ್ಲಿದ್ದಾರೆ. ಕಾಂಗ್ರೆಸ್​​ನಿಂದ ಈ ಭಾಗದಲ್ಲಿ ಇಬ್ಬರು ನಾಯಕರಿದ್ದು ಶೇ.49.1 ರಷ್ಟು ಪಾಲು ಹೊಂದಿದ್ದಾರೆ. ಇದು ಕಾಂಗ್ರೆಸ್​ ಈ ಭಾಗದಲ್ಲಿ ಪ್ಲಸ್​ ಪಾಯಿಂಟ್​ ಆಗುವ ಸಾಧ್ಯತೆಯನ್ನ ತೋರಿಸುತ್ತಿದೆ. ಈ ಭಾಗದಲ್ಲಿ ಹಾಲಿ ಸಿಎಂ ಗೆ ಮತದಾರರು ಹೆಚ್ಚಿನ ಪ್ರಾಶಸ್ತ್ಯ ನೀಡಿಲ್ಲ. ಬೊಮ್ಮಾಯಿ ಅವರಿಗಿಂತ ಬಿ.ವೈ.ವಿಜಯೇಂದ್ರ ಅವರಿಗೆ ಹೆಚ್ಚಿನ ಒಲವು ಕಾಣಿಸುತ್ತಿದೆ.

ಪ್ರಶ್ನೆ 7- ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಬಲ್ಲ ಕೇಂದ್ರದ ನಾಯಕ ಯಾರು?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಹಳೆ ಮೈಸೂರು ಭಾಗದಲ್ಲಿ ಮೋದಿ ಅಲೆ ಇರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಬಿಜೆಪಿಯ ನಿರೀಕ್ಷೆಯಂತೆ ಮೋದಿ ಪ್ರಭಾವ ಹೆಚ್ಚಾಗಿದ್ದು, ಪಕ್ಷಕ್ಕೆ ಅನುಕೂಲವಾಗುವ ಸಾಧ್ಯತೆಯಿದೆ. ಭಾರತ್​ ಜೋಡೋ ಈ ಭಾಗದಲ್ಲೇ ಆರಂಭಿಸಿದ ಕಾರಣ ರಾಹುಲ್​ ಗಾಂಧಿಗೆ ಉತ್ತಮ ಸ್ಪಂದನೆ ಸಿಕ್ಕಂತೆ ಕಾಣುತ್ತಿದೆ. ದಲಿತ ಮತಗಳನ್ನ ಸೆಳೆಯುವಲ್ಲಿ ಖರ್ಗೆ ಸಹ ಪಾತ್ರ ವಹಿಸುವ ಸಾಧ್ಯತೆಯನ್ನ ಈ ರಿಪೋರ್ಟ್ ತೋರುತ್ತಿದೆ. ಎಎಪಿ ಗೆ ಜನ ಒಲವು ತೋರದಿದ್ರೂ, ಅರವಿಂದ್ ಕೇಜ್ರಿವಾಲ್​ ಬಗ್ಗೆ ಒಂದಿಷ್ಟು ಒಲವು ತೋರುತ್ತಿರೋದು ಅಚ್ಚರಿ ಅಂಶ.

ಪ್ರಶ್ನೆ 8 – ರಾಜ್ಯದಲ್ಲಿ ಸ್ಪಷ್ಟ ಬಹುಮತ ಬರದಿದ್ದರೆ ಯಾವ ಮೈತ್ರಿಕೂಟ ನಿಮಗಿಷ್ಟ?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಈಗಾಗಲೇ ಎರಡು ಬಾರಿ ಕಾಂಗ್ರೆಸ್​ – ಜೆಡಿಎಸ್​ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಒಂದು ಬಾರಿ ಜೆಡಿಎಸ್​- ಬಿಜೆಪಿ ಮೈತ್ರಿಕೂಟವೂ ಅಧಿಕಾರಕ್ಕೇರಿತ್ತು. ಈ ಬಾರಿ ಅತಂತ್ರ ಸ್ಥಿತಿ ನಿರ್ಮಾಣವಾದ್ರೆ ಜನ ಕಾಂಗ್ರೆಸ್​ – ಜೆಡಿಎಸ್​ ಮೈತ್ರಿಗೆ ಹೆಚ್ಚಿನ ಒಲವು ತೋರಿದಂತೆ ಕಾಣ್ತಿದೆ. ಇದು ಆಯಾ ಪಕ್ಷಗಳಲ್ಲಿರುವ ನಾಯಕರ ಕಾರಣಕ್ಕೂ ಇರಬಹುದಾಗಿದೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಎಚ್​.ಡಿ.ಕುಮಾರಸ್ವಾಮಿ ಈ ಮೂವರಲ್ಲಿ ಒಬ್ಬರು ಸಿಎಂ ಆಗ್ತಾರೆ ಅನ್ನೋ ಕಾರಣವೂ ಇರಬಹುದು. ಬಿಜೆಪಿ – ಜೆಡಿಎಸ್​ ನಡುವಿನ ಮೈತ್ರಿಯಲ್ಲಿ ಈ ಹಿಂದೆ ಆದ ಕಹಿ ಘಟನೆ ಸಹ ಈ ಮೈತ್ರಿಗೆ ಕಡಿಮೆ ಜನ ಒಲವು ತೋರಲು ಕಾರಣವಾಗಿರಬಹುದು.

ಪ್ರಶ್ನೆ 9 – ಬಿಜೆಪಿಯವರು ಮತಕ್ಕಾಗಿ ಇವುಗಳಲ್ಲಿ ಯಾವ ಅಂಶವನ್ನು ನೆಚ್ಚಿಕೊಂಡಿದ್ದಾರೆ?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಬಿಜೆಪಿ ನೆಚ್ಚಿಕೊಂಡಿರುವ ಹಿಂದುತ್ವ ಅಜೆಂಡಾ ವನ್ನ ಜನ ಗುರುತಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಸಹ ಬಿಜೆಪಿ ಪ್ಲಸ್​ ಆಗಬಹುದು ಎನ್ನುತ್ತಿದೆ ಸಮೀಕ್ಷೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ಅಭಿವೃದ್ಧಿಗಿಂತ ಹಿಂದುತ್ವ, ಮೋದಿ ಮುಖ್ಯ ಅನ್ನೋದು ಜನರ ಅಭಿಪ್ರಾಯ. ಬಿಜೆಪಿ ಮಾಡುತ್ತಿರುವ ಅಭಿವೃದ್ಧಿ ಜಪ ಮತದಾರರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾದಂತೆ ಕಾಣುತ್ತಿಲ್ಲ. ಪ್ರತಿಪಕ್ಷಗಳ ಆರೋಪವಾದ ರಾಜ್ಯ ನಾಯಕತ್ವ ಕಡೆಗಣನೆ ವಿಚಾರಕ್ಕೆ ಜನ ಸಮ್ಮತಿ ಸೂಚಿಸಿದಂತೆ ಕಾಣುತ್ತಿದೆ.

ಪ್ರಶ್ನೆ 10 – 40% ಕಮಿಷನ್ ಅಥವಾ ಭ್ರಷ್ಟಾಚಾರ ಆರೋಪ ಬಿಜೆಪಿಗೆ ಹಿನ್ನಡೆ ತರುತ್ತಾ?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಭ್ರಷ್ಟಾಚಾರ ವಿಚಾರವನ್ನ ಮತದಾರರು ಅತ್ಯಂತ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ. ಶೇ. 40 ಪರ್ಸೆಂಟ್ ಕಮೀಷನ್​ ವಿಚಾರವನ್ನು ಜನರಿಗೆ ತಲುಪಿಸುವಲ್ಲಿ ಪ್ರತಿಪಕ್ಷಗಳು ಯಶಸ್ವಿಯಾದಂತೆ ಕಾಣ್ತಿದೆ. ಭ್ರಷ್ಟಾಚಾರ ನಡೆದಿಲ್ಲ ಅನ್ನೋ ವಾದಕ್ಕೆ ಜನರು ನಿರೀಕ್ಷಿತ ಬೆಂಬಲ ತೋರಿದಂತಿಲ್ಲ.

ಪ್ರಶ್ನೆ 11 – ಕಾಂಗ್ರೆಸ್ ಒಳಜಗಳ ಚುನಾವಣೆಯ ವೇಳೆ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಾ?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಹಳೆ ಮೈಸೂರು ಭಾಗದ ಇಬ್ಬರು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಅಭ್ಯರ್ಥಿ ರೇಸ್​ನಲ್ಲಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಎರಡು ಬಣಗಳಾಗಿ ಚುನಾವಣೆಗೆ ಎದುರಿಸಿದ್ರೆ ಪಕ್ಷಕ್ಕೆ ಡ್ಯಾಮೇಜ್​ ಖಂಡಿತ ಎನ್ನುತ್ತಿದೆ ರಿಪೋರ್ಟ್​. ಆಂತರಿಕ ಭಿನ್ನಾಭಿಪ್ರಾಯ ಪಕ್ಷಕ್ಕೆ ಡ್ಯಾಮೇಜ್​ ಮಾಡೋದಿಲ್ಲ ಅನ್ನೋವ್ರು ಸಹ ಹೆಚ್ಚಾಗೇ ಕಾಣಿಸ್ತಿದ್ದಾರೆ. ಆದ್ರೆ ಆಗಬಹುದು, ಗೊತ್ತಿಲ್ಲ ಅನ್ನೋವ್ರ ಸಂಖ್ಯೆಯೂ ಮೂರನೇ ಒಂದು ಭಾಗದಷ್ಟಿರೋದು ಅಚ್ಚರಿಯ ಸಂಗತಿ. ಒಟ್ಟಾರೆ ಆಂತರಿಕ ಕಲಹ ಮತದಾರರ ಕುತೂಹಲದ ವಿಷಯವಾಗಿ ಕಂಡುಬರ್ತಿದೆ.

ಪ್ರಶ್ನೆ 12 – ರಾಜಕೀಯ ಪಕ್ಷಗಳು ನೀಡುವ ಉಚಿತ ಕೊಡುಗೆಗಳಿಂದ ಮತ ಸೆಳೆಯಲು ಸಾಧ್ಯವೇ?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ಹಿಂದಿನ ಚುನಾವಣೆಗಳಿಗೆ ಹೋಲಿಸಿದ್ರೆ ಈ ಬಾರಿ ಉಚಿತ ಕೊಡುಗೆಗಳ ಮಹಾಪೂರವೇ ಹರಿದುಬರೋ ಸಾಧ್ಯತೆ. ಮತದಾರರ ಅಭಿಪ್ರಾಯದಲ್ಲಿ ಉಚಿತ ಕೊಡುಗೆಗಳು ಪರಿಣಾಮ ಬೀರೋದು ಖಂಡಿತ ಎನ್ನುವಂತೆ ಕಾಣುತ್ತಿದೆ. ಕೇವಲ ಮೂರನೇ ಒಂದರಷ್ಟು ಜನ ಮಾತ ಇದು ಯಾವುದೇ ಪರಿಣಾಮ ಬೀರಲ್ಲ ಎನ್ನುತ್ತಿದ್ದಾರೆ. ರಾಜಕೀಯ ಪಕ್ಷಗಳ ಉಚಿತ ಕೊಡುಗೆಗಳು, ಹಣ ಹಂಚಿಕೆ ಎಲ್ಲವೂ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಎನ್ನುತ್ತಿದೆ ಈ ರಿಪೋರ್ಟ್​

ಪ್ರಶ್ನೆ 13 – ಕುಟುಂಬ ರಾಜಕಾರಣ ಈ ಬಾರಿಯ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ?

pulse-of-karnataka-vistara akhada survey Old Mysuru Region of Karnataka
pulse-of-karnataka-vistara akhada survey Old Mysuru Region of Karnataka

ವಲಯವಾರು ಕೇಳಲಾದ ಈ ಪ್ರಶ್ನೆಗೆ ಅತಿ ಹೆಚ್ಚು ಮತದಾರರು ಕುಟುಂಬ ರಾಜಕಾರಣ ಪರಿಣಾಮ ಬೀರೋದಿಲ್ಲ ಎನ್ನುತ್ತಿದ್ದಾರೆ. ಬಿಜೆಪಿ ಪದೇಪದೇ ಕುಟುಂಬ ರಾಜಕಾರಣ ವಿಚಾರ ಪ್ರಸ್ತಾಪಿಸಿದ್ರೂ, ಅದು ಈ ಭಾಗದ ಜನಕ್ಕೆ ಅಷ್ಟೊಂದು ಪ್ರಾಮುಖ್ಯತೆ ಎನ್ನಿಸಿದಂತೆ ಕಾಣ್ತಿಲ್ಲ. ಕ್ಷೇತ್ರದ ಅಭಿವೃದ್ಧಿ, ಸ್ಥಳೀಯ ಅಭ್ಯರ್ಥಿಯೇ ಮುಖ್ಯ ಹೊರತು ಕುಟುಂಬ ರಾಜಕಾರಣದ ಬಗ್ಗೆ ಗಂಭೀರವಾಗಿ ಪರಿಗಣಿಸಿದಂತಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೊಡಗು

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Kodagu News : ಈ ಬಾರಿ ಮುದ್ದಂಡ ಕುಟುಂಬಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಜವಬ್ದಾರಿ ಹೆಗಲೇರಿದ್ದು ಪಂದ್ಯಾವಳಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವ ಗುರಿ ಹೊಂದಿದ್ದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 25ನೇ ವರ್ಷದ ಪಂದ್ಯಾವಳಿ ಅಯೋಜಿಸಲಾಗಿದೆ.

VISTARANEWS.COM


on

By

Kodava Family Hockey Tournament Website Launched
Koo

ಕೊಡಗು: 25ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೆಬ್ ಸೈಟ್ ಲೋಕಾರ್ಪಣೆ ಕಾರ್ಯಕ್ರಮ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ ನಲ್ಲಿ (Kodagu News ) ನಡೆಯಿತು. ಪ್ರತಿ ವರ್ಷ ಕೂಡ ಒಂದೊಂದು ಕುಟುಂಬಗಳು ಪಂದ್ಯಾಟ ಆಯೋಜಿಸುವ ಜವಬ್ದಾರಿ ಹೊತ್ತುಕೊಳ್ಳುತ್ತೆ. ಈ ಬಾರಿ ಮುದ್ದಂಡ ಕುಟುಂಬಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಜವಬ್ದಾರಿ ಹೆಗಲೇರಿದ್ದು ಪಂದ್ಯಾವಳಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವ ಗುರಿ ಹೊಂದಿದ್ದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 25ನೇ ವರ್ಷದ ಪಂದ್ಯಾವಳಿ ಅಯೋಜಿಸಲಾಗಿದೆ.

ಮೊದಲಿಗೆ ದೀಪ ಬೆಳಗುವ ಮೂಲಕ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ‌ 2025 ನೇ ಮುದಂಡ ಕ್ರಿಕೇಟ್ ಪಂದ್ಯಾವಳಿಯ ವೆಬ್ ಸೈಟ್ ಲಾಂಚ್ ಮಾಡಿದ್ದು ಎಲ್ಲಾ ರೀತಿಯ ಮಾಹಿತಿಯನ್ನ ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದೆ.

ಹಾಕಿ ಪಂದ್ಯಾವಳಿಯ ಗೌರವ ಅಧ್ಯಕ್ಷರಾದ ಎಂಬಿ ದೇವಯ್ಯ ಮಾತನಾಡಿ ಮುದ್ದಂಡ ಕುಟುಂಬದ ಹಿರಿಯರು ಹಾಕಿ ಅಕಾಡೆಮಿ ಸಹಕಾರದಲ್ಲಿ ಈ ಬಾರಿ ಹಾಕಿ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ನಿರ್ಧರಿಸಿದ್ದೇವೆ. ಈಗಾಗಲೇ ಸಮಿತಿಯನ್ನು ರಚನೆ ಮಾಡಿದ್ದೇವೆ. ಕೆಲಸಗಳನ್ನು ಆರಂಭಿಸಿದ್ದು, ಎಲ್ಲರು ಸಹಕಾರ ನೀಡುವಂತೆ ಮನವಿ ಮಾಡಿದರು. 25ನೇ ವರ್ಷದ ಕಾರ್ಯಕ್ರಮ ಆಯೋಜನೆಗೆ ನಮಗೆ ಸಿಕ್ಕಿರೋದು ಬಹಳ ಸಂತೋಷವಿದ್ದು ಎಲ್ಲವನ್ನು ಅಚ್ಚುಕಟ್ಟಾಗಿ ಮಾಡುವ ಗುರಿ ಹೊಂದಿದೆ.

Kodava Family Hockey Tournament Website Launched
Kodava Family Hockey Tournament Website Launched

ಕಾರ್ಯಕ್ರಮದಲ್ಲಿ ಕೊಡಗು ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ, ಸ್ಥಳೀಯ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ,ಉಳ್ಳಿಯಡ ಪೂವಯ್ಯ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ,ಮುದ್ದಂಡ ಸ್ಪೋರ್ಟ್ಸ್ ಅ್ಯಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುದ್ದಂಡ ರಶಿತ್ ಸುಬ್ಬಯ್ಯ,
ಅತಿಥಿಗಳಾಗಿ ಕುಟುಂಬದ ಪಟ್ಟೆದಾರ ಡಾಲಿ ತಿಮ್ಮಯ್ಯ, ಡೀನ್ ಬೋಪಣ್ಣ, ಉಪಾಧ್ಯಕ್ಷ ಅಶೋಕ್, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ,ಆದ್ಯ ಪೊನ್ನಣ್ಣ ,ರಂಜಿತ್ ಪೊನ್ನಪ್ಪ, ಚಂಗಪ್ಪ, ದಿವ್ಯ ಪ್ರಮುಖರು ಇದ್ದರು

Continue Reading

ಬೆಂಗಳೂರು

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Bengaluru News : 21 ನೇ ವಯಸ್ಸಿನಲ್ಲಿ, “ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ” ಗಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ.

VISTARANEWS.COM


on

By

Bengaluru News
Koo

ಬೆಂಗಳೂರು: ಬಹುನಿರೀಕ್ಷಿತ ಸೌಂದರ್ಯ ಸ್ಪರ್ಧೆ, ಮಿಸ್ಟರ್ ಅಂಡ್ ಮಿಸ್ ಐಡಲ್ ಆಫ್ ಇಂಡಿಯಾ 2024 ಕಳೆದ ಅಕ್ಟೋಬರ್ 27 ರಂದು ತರಳು ಎಸ್ಟೇಟ್‌ನ ವಿಂಟೇಜ್ ಫಾರ್ಮ್ಸ್ನಲ್ಲಿ (Bengaluru News) ನಡೆಯಿತು. ಈ ಕಾರ್ಯಕ್ರಮವನ್ನು ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ ಕೌಶಿಕ್ ಆರ್ ಅವರು ಕೌಶಲ್ಯದಿಂದ ನಿರ್ದೇಶಿಸಿದರು. ಅವರು ಕೇವಲ 21 ನೇ ವಯಸ್ಸಿನಲ್ಲಿ, “ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ” ಗಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಅಜಯ್ ಪ್ರಸಾದ್, ರಾವುಲ್, ಶರತ್, ಕಾತಿ೯ಕ್ ಮತ್ತು ಕೆಎಸ್‌ಎಚ್‌ ಗ್ರೂಪ್ಸ್‌ ( Ksh Groups) ಸಹಕಾರ ನೀಡಿದರು.

A 21-year-old man is trying to set a Guinness World Record as the director of a junior beauty pageant
A 21-year-old man is trying to set a Guinness World Record as the director of a junior beauty pageant

ಈ ಸ್ಪರ್ಧೆಯು ಭಾರತದಾದ್ಯಂತದ ಪ್ರತಿಭಾವಂತ ಸ್ಪರ್ಧಿಗಳನ್ನು ಒಟ್ಟುಗೂಡಿಸಿ ಅವರ ಸೌಂದರ್ಯ, ಪ್ರತಿಭೆ ಮತ್ತು ವರ್ಚಸ್ಸನ್ನು ಪ್ರದರ್ಶಿಸಿತು. ಮಹತ್ವಾಕಾಂಕ್ಷಿ ಮಾದರಿಗಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಮತ್ತು ಮನರಂಜನಾ ಉದ್ಯಮದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ವೇದಿಕೆಯನ್ನು ಒದಗಿಸುವುದು ಈ ಕಾರ್ಯಕ್ರಮದ ಪ್ರಾಥಮಿಕ ಉದ್ದೇಶವಾಗಿತ್ತು.

A 21-year-old man is trying to set a Guinness World Record as the director of a junior beauty pageant
A 21-year-old man is trying to set a Guinness World Record as the director of a junior beauty pageant

ರ‍್ಯಾಂಪ್ ವಾಕ್, ನೃತ್ಯ ಮತ್ತು ಪ್ರಶ್ನೆ-ಉತ್ತರಗಳಂತಹ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ಸ್ಪರ್ಧಿಗಳು ಕಠಿಣ ತರಬೇತಿ ಮತ್ತು ಅಂದಗೊಳಿಸುವ ಸೆಷನ್ಗಳಿಗೆ ಒಳಗಾದರು. ಪ್ರಸಿದ್ಧ ಉದ್ಯಮ ತಜ್ಞರನ್ನು ಒಳಗೊಂಡ ತೀರ್ಪುಗಾರರ ಸಮಿತಿಯು ಸ್ಪರ್ಧಿಗಳ ಪ್ರದರ್ಶನವನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿತು.

ಆರ್. ಸಿ. ರೋಹಿತ್ ಮಿಸ್ಟರ್ ಐಡಲ್ ಆಫ್ ಇಂಡಿಯಾ 2024 ಕಿರೀಟವನ್ನು ಪಡೆದರೆ, ವರ್ಷಿತಾ ಮಿಸ್ ಐಡಲ್ ಆಫ್ ಇಂಡಿಯಾ 2024 ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ವಿಜೇತರಿಗೆ ಪ್ರತಿಷ್ಠಿತ ಬಹುಮಾನಗಳು ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶಗಳನ್ನು ನೀಡಲಾಯಿತು. ಕೌಶಿಕ್ ಅವರ ಗಮನಾರ್ಹ ಸಾಧನೆಯು ಅವರ ಸಮರ್ಪಣೆ, ಕಠಿಣ ಪರಿಶ್ರಮ ಮತ್ತು ಈವೆಂಟ್ ನಿರ್ವಹಣೆಯ ನವೀನ ವಿಧಾನಕ್ಕೆ ಸಾಕ್ಷಿಯಾಗಿದೆ.

21 ವರ್ಷ ವಯಸ್ಸಿನಲ್ಲಿ ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯನ್ನು ನಿರ್ದೇಶಿಸುವ ಮೂಲಕ, ಅವರು ಯುವ ಉದ್ಯಮಿಗಳು ಮತ್ತು ಈವೆಂಟ್ ವೃತ್ತಿಪರರಿಗೆ ಹೊಸ ಮಾನದಂಡವನ್ನು ಸ್ಥಾಪಿಸಿದ್ದಾರೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ನಿರ್ದೇಶಿಸುವ ಮತ್ತು ಇತಿಹಾಸ ನಿರ್ಮಿಸುವ ಅವಕಾಶ ದೊರೆತಿರುವುದಕ್ಕೆ ನಾನು ರೋಮಾಂಚನಗೊಂಡಿದ್ದೇನೆ ಎಂದು ಕೌಶಿಕ್ ಆರ್ ಹೇಳಿದರು.

Continue Reading

ಗದಗ

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Family Dispute : ಕೌಟುಂಬಿಕ ಕಲಹಕ್ಕೆ ತಂದೆಯೊಬ್ಬ ತನ್ನ ಮೂವರು ಮಕ್ಕಳುನ್ನು ನದಿಗೆ ಎಸೆದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗದಗದಲ್ಲಿ (Gadag News) ನಡೆದಿದೆ

VISTARANEWS.COM


on

By

Gadag News Father commits suicide by throwing three children into river
ಸಾಂದರ್ಭಿಕ ಚಿತ್ರ
Koo

ಗದಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು, ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಹೃದಯ‌ ವಿದ್ರಾವಕ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಯಲ್ಲಿ (Gadag News) ನಡೆದಿದೆ.‌

ಮುಂಡರಗಿ ತಾಲೂಕಿನ ಮುಕ್ತುಂಪುರ‌ ಗ್ರಾಮದ ನಿವಾಸಿ, ಮಂಜುನಾಥ ಅರಕೇರಿ ಹಾಗೂ ಮೂವರು ‌ಮಕ್ಕಳು‌ ನದಿ ಪಾಲಾಗಿದ್ದಾರೆ. ಪುಟ್ಟ ಮಕ್ಕಳಾದ ವೇದಾಂತ (3), ಪವನ (4), ಹಾಗೂ ಧನ್ಯಾ (6) ಮೃತ ದುರ್ದೈವಿಗಳು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳನ್ನು ಸೇತುವೆ ಮೇಲಿಂದ‌ ನದಿಗೆ ಎಸೆದು ಬಳಿಕ ಮಂಜುನಾಥ್ ತಾನೂ ಸಹ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರ ದೌಡಾಯಿಸಿದ್ದು, ಶೋಧ‌ ಕಾರ್ಯ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Continue Reading

ಬೆಂಗಳೂರು

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣಗೊಂಡಿದೆ.

VISTARANEWS.COM


on

By

Bengaluru airport
Koo

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ಟರ್ಮಿನಲ್‌ 2 ನಲ್ಲಿ ‘ಟೈಗರ್ ವಿಂಗ್ಸ್’ ಶೀರ್ಷಿಕೆಯ “ವರ್ಟಿಕಲ್‌ ಗಾರ್ಡನ್‌”ನನ್ನು ಅನಾವರಣಗೊಳಿಸಲಾಗಿದೆ. ಫ್ರೆಂಚ್ ದೇಶದ ರಾಷ್ಟ್ರೀಯ ವೈಜ್ಞಾನಿಕ ಸಂಶೋಧನಾ ಕೇಂದ್ರದೊಂದಿಗೆ ಗುರುತಿಸಿಕೊಂಡಿರುವ ವಿಶ್ವದರ್ಜೆಯ ಸಸ್ಯಶಾಸ್ತ್ರಜ್ಞ ಪ್ಯಾಟ್ರಿಕ್ ಬ್ಲಾಂಕ್ ಅವರ ಸಹಯೋಗದೊಂದಿಗೆ ಈ ವರ್ಟಿಕಲ್‌ ಗಾರ್ಡನ್‌ನನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದೆ.

ಟರ್ಮಿನಲ್ 2 (T2) ನಲ್ಲಿ ನಿರ್ಮಿಸಿರುವ ಈ ವರ್ಟಿಕಲ್‌ ಗಾರ್ಡನ್‌ 30 ಅಡಿ ಎತ್ತರ ಹಾಗೂ 160 ಅಡಿ ಅಗಲ (2 ಗೋಡೆಗಳಿದ್ದು, ಪ್ರತಿ ಗೊಡೆ 80 ಅಡಿ ಅಗಲವಿದೆ)ದಲ್ಲಿ ವಿಸ್ತೃತವಾಗಿ ಬೆಳೆಸಲಾಗಿದೆ. ಪ್ಯಾಟ್ರಿಕ್‌ ಬ್ಲಾಂಕ್‌ ಅವರು ಭಾರತದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ವರ್ಟಿಕಲ್‌ ಗಾರ್ಡನ್‌ ನಿರ್ಮಿಸಿದ್ದು ಇದೇ ಮೊದಲು, ಮೂಲಭೂತ ಸೌಕರ್ಯಗಳೊಂದಿಗೆ ಪ್ರಕೃತಿಯನ್ನು ಸೆರೆ ಹಿಡಿದಂತ ಸುಂದರ ದೃಶ್ಯಾವಳಿಂದ ಈ ಗೋಡೆ ಉದ್ಯಾನ ಕಂಗೊಳಿಸಲಿದೆ. ಈ ಮೂಲಕ ಟಿ2 ನ ಅಡಿಪಾಯದ ಮೂಲತತ್ವವನ್ನು ಉದಾರಿಸಿದೆ. ‘ಟೈಗರ್ ವಿಂಗ್ಸ್’ ನ ಈ ವರ್ಟಿಕಲ್‌ ಗಾರ್ಡನ್‌ 153 ವಿವಿಧ ಜಾತಿಗಳ 15,000 ಕ್ಕೂ ಹೆಚ್ಚು ಸಸ್ಯಗಳಿಂದ ನಿರ್ಮಿಸಲಾಗಿದೆ. ಪ್ಯಾಟ್ರಿಕ್‌ ಬ್ಲಾಂಕ್‌ ಅವರು ಕರ್ನಾಟಕ ಸೇರಿದಂತೆ ಸುತ್ತಮುತ್ತಲಿನ ಪಶ್ಚಿಮ ಘಟ್ಟಗಳ ಕಾಡುಗಳಿಗೆ ತೆರಳಿ, ಅಪರೂಪದ ಆಯ್ದ ಸಸ್ಯ ಪ್ರಭೇದಗಳನ್ನು ಸಂಗ್ರಹಿಸಿ, ಈ ಗೋಡೆ ಉದ್ಯಾನವನ್ನು ನಿರ್ಮಿಸಿದ್ದಾರೆ.

The largest vertical garden has been unveiled at Terminal 2 of the Kempegowda International Airport
The largest vertical garden has been unveiled at Terminal 2 of the Kempegowda International Airport

ಈ ಗೋಡೆ ಉದ್ಯಾನವನ್ನು ಮಣ್ಣು ರಹಿತವಾಗಿ ನಿರ್ಮಿಸಲಾಗಿದ್ದು, ಈ ಟೆಕ್ನಾಲಜಿಯನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಲಾಗಿದೆ. ಮತ್ತೊಂದು ವಿಶೇಷವೆಂದರೆ, ನಮ್ಮ ರಾಷ್ಟ್ರೀಯ ಪ್ರಾಣಿ ಹುಲಿಯ ಶಕ್ತಿ ಮತ್ತು ಅದರ ಗಾಂಭೀರ್ಯತೆಯನ್ನು ಪ್ರತಿಬಿಂಬಿಸುವಂತೆ ಈ ಗೋಡೆ ಉದ್ಯಾನ ನಿರ್ಮಾಣಗೊಂಡಿದೆ. ಅದಕ್ಕಾಗಿಯೇ ಈ ವರ್ಟಿಕಲ್‌ ಗಾರ್ಡನ್‌ಗೆ ‘ಟೈಗರ್ ವಿಂಗ್ಸ್’ ಎಂದು ಹೆಸರಿಡಲಾಗಿದೆ. ಶತಾವರಿ ಸಸ್ಯಗಳು ವಿಮಾನದ ರೆಕ್ಕೆಗಳ ಸಿಲೂಯೆಟ್ ಅನ್ನು ಗುರುತಿಸುತ್ತದೆ. ಇನ್ನು, ಕೆಂಪು, ಕಿತ್ತಳೆ, ಹಳದಿ ಮತ್ತು ಬಿಳಿ ಇಕ್ಸೋರಾ ಹೂವುಗಳು ಹುಲಿ ಬಣ್ಣಗಳನ್ನು ಪ್ರತಿನಿಧಿಸುತ್ತವೆ.

ಟೈಗರ್ ವಿಂಗ್ಸ್‌

  • ಭಾರತದಲ್ಲಿ ಪ್ಯಾಟ್ರಿಕ್ ಬ್ಲಾಂಕ್‌ ಅವರ ಅತಿದೊಡ್ಡ ಗೋಡೆ ಉದ್ಯಾನ ಇದೇ ಮೊದಲು
  • 4000 ಚದರ ಅಡಿಗಳಲ್ಲಿ ನಿರ್ಮಿಸಲಾಗಿದೆ.
  • 15000 ಗಿಡಗಳನ್ನು ಒಳಗೊಂಡಿದೆ
  • 150ಕ್ಕೂ ಹೆಚ್ಚು ಜಾತಿಯ ಸಸ್ಯಗಳು ಇವೆ.
  • ಮಣ್ಣುರಹಿತ ತಂತ್ರಜ್ಞಾನವನ್ನು ಬಳಸಲಾಗಿದೆ.


ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್ ಮಾತನಾಡಿ, “ಬೆಂಗಳೂರಿನಲ್ಲಿ ಸುಸ್ಥಿರತೆ, ಕಲಾತ್ಮಕತೆ ಮತ್ತು ತಾಂತ್ರಿಕ ಪ್ರಗತಿಯಲ್ಲಿ ಹೊಸ ದೃಷ್ಟಿಕೋನವನ್ನು ತರಲು ಬಯಸಿದ್ದೇವೆ. ಬಿಎಲ್‌ಆರ್‌ ವಿಮಾನ ನಿಲ್ದಾಣದಲ್ಲಿ ಪ್ಯಾಟ್ರಿಕ್‌ನ ಅವರ ಹೊಸ ವಿಧಾನದಿಂದ ಪ್ರಕೃತಿಯ ಮಡಿಲಿನಲ್ಲಿ ಸಸ್ಯಗಳನ್ನು ಬೆಳೆಯುವಂತೆಯೇ ಬೆಳೆಯಲು ಅನುವು ಮಾಡಿಕೊಟ್ಟಿದೆ. ಟರ್ಮಿನಲ್ 2 ನಾಲ್ಕು ಮೂಲ ತತ್ವಗಳಿಂದ ನಿರ್ಮಿಸಲ್ಪಟ್ಟಿದೆ, ಉದ್ಯಾನವದಲ್ಲಿ ಟರ್ಮಿನಲ್, ತಂತ್ರಜ್ಞಾನ, ಕಲೆ ಮತ್ತು ಸುಸ್ಥಿರತೆ ಈ ನಾಲ್ಕು ತತ್ವಗಳ ಮೂಲಕ ಬೆಂಗಳೂರಿನ ನೈಜ ಸೌಂದರ್ಯವನ್ನು ಪ್ರತಿಬಿಂಬಿಸುತ್ತದೆ ಎಂದರು.

The largest vertical garden has been unveiled at Terminal 2 of the Kempegowda International Airport
The largest vertical garden has been unveiled at Terminal 2 of the Kempegowda International Airport

ಹೆಸರಾಂತ ಸಸ್ಯಶಾಸ್ತ್ರಜ್ಞ ಪ್ಯಾಟ್ರಿಕ್ ಬ್ಲಾಂಕ್ ಮಾತನಾಡಿ, “ಟೈಗರ್ ವಿಂಗ್ಸ್” ಪ್ರಕೃತಿ ಮತ್ತು ವಾಸ್ತುಶಿಲ್ಪದ ನಡುವಿನ ಸಂಬಂಧವನ್ನು ಸಾಕಾರಗೊಳ್ಳುವ ಸ್ವಪ್ನವಾಗಿದೆ. ವಿಶೇಷವಾದ ಭಾವನೆಯನ್ನು ಬಳಸಿಕೊಳ್ಳುವ ಮೂಲಕ, ಪ್ರಕೃತಿಯ ಮಡಿಲಿನಲ್ಲಿ ಸಸ್ಯಗಳು ಬೆಳೆಯುವ ವಾತಾವರಣವನ್ನು ಇಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಯು ಕೇವಲ ವಿಮಾನ ನಿಲ್ದಾಣದ ದೃಶ್ಯವನ್ನು ಇನ್ನಷ್ಟು ವರ್ಧಿಸುತ್ತದೆ. ಅಷ್ಟೇ ಅಲ್ಲದೆ, ಪ್ರಯಾಣಿಕರಿಗೆ ತಮ್ಮ ಪ್ರಯಾಣದ ಅನುಭವವನ್ನು ಇನ್ನಷ್ಟು ಉಲ್ಲಾಸಗೊಳಿಸಲಿದೆ. ನಮ್ಮ ಸುತ್ತಲೂ ಪರಿಸರವೇ ತುಂಬಿರುವ ಸಂತಸ ನೀಡಲಿದೆ.

ಈ ವರ್ಟಿಕಲ್‌ ಉದ್ಯಾನವು ಹೆಚ್ಚು ನೀರಿನ-ಸಮರ್ಥವಾಗಿದೆ, ಎಚ್ಚರಿಕೆಯಿಂದ ವಿನ್ಯಾಸಗೊಳಿಸಿದ ನೀರಾವರಿ ವ್ಯವಸ್ಥೆಯನ್ನು ಬಳಸಲಾಗಿದ್ದು, ಪದರಗಳ ಮೂಲಕ ಸಸ್ಯಗಳಿಗೆ ಸರಿಯಾದ ಪ್ರಮಾಣದ ನೀರನ್ನು ಒದಗಿಸುತ್ತದೆ. ಈ ವಿಧಾನವು ಹೆಚ್ಚು ಸಮರ್ಥನೀಯವಾಗಿದ್ದು, ನೈಸರ್ಗಿಕ ಬಂಡೆ ಅಥವಾ ಕಲ್ಲಿನ ಗೋಡೆಗಳ ಮೇಲೆ ಸಸ್ಯಗಳು ಹೇಗೆ ಬೆಳೆಯುತ್ತವೆ ಎಂಬುದನ್ನು ತೋರಿಸುತ್ತದೆ. ಇಂತಹ ಸ್ಥಳಗಳಲ್ಲಿ ನೀರು ಮತ್ತು ಪೋಷಕಾಂಶಗಳು ಕಡಿಮೆ ಇದ್ದರೂ ಸಸ್ಯಗಳು ಸೊಂಪಾಗಿ ಬೆಳೆಯುತ್ತವೆ. ಬ್ಲಾಂಕ್‌ನ ಅವರ ಹೈಡ್ರೋಪೋನಿಕ್ ವಿಧಾನವು ವೈವಿಧ್ಯಮಯವಾದ ಸಸ್ಯ ಪ್ರಭೇದಗಳನ್ನು ಕಾಂಪ್ಯಾಕ್ಟ್ ಲಂಬ ಜಾಗದಲ್ಲಿ ಸಹಬಾಳ್ವೆ ಮಾಡಲು ಅನುವು ಮಾಡಿಕೊಡುತ್ತದೆ, ಇದು ಗಾಳಿಯ ಗುಣಮಟ್ಟವನ್ನು ಹೆಚ್ಚಿಸಿ, ತಂಪಾದ, ಹೆಚ್ಚು ಆಹ್ಲಾದಕರ ವಾತಾವರಣಕ್ಕೆ ಕೊಡುಗೆ ನೀಡುವ ಅಭಿವೃದ್ಧಿ ಹೊಂದುತ್ತಿರುವ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ.

ಈ ಸಸ್ಯಶಾಸ್ತ್ರೀಯ ಮೇರುಕೃತಿಯು ಭಾರತದ ವನ್ಯಜೀವಿ ಪರಂಪರೆಯನ್ನು ವೈಭವೀಕರಿಸುವುದರಲ್ಲೆ, ಆಧುನಿಕ, ಪರಿಸರ ಸ್ನೇಹಿ ಸ್ಥಳವಾಗಿ BLR ವಿಮಾನ ನಿಲ್ದಾಣದ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ, ಕರ್ನಾಟಕದ ಜೀವವೈವಿಧ್ಯದ ಶ್ರೀಮಂತಿಕೆಯನ್ನು ಬೆಂಗಳೂರಿನ ಪ್ರಮುಖ ಟ್ರಾವೆಲ್ ಹಬ್‌ ಆಗಿ ಪರಿವರ್ತಿಸುತ್ತದೆ.

Continue Reading
Advertisement
Kodava Family Hockey Tournament Website Launched
ಕೊಡಗು2 ವಾರಗಳು ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು2 ವಾರಗಳು ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ2 ವಾರಗಳು ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ2 ವಾರಗಳು ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ2 ವಾರಗಳು ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ2 ವಾರಗಳು ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು2 ವಾರಗಳು ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

Dina Bhavishya
ಭವಿಷ್ಯ2 ವಾರಗಳು ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya
ಭವಿಷ್ಯ2 ವಾರಗಳು ago

Dina Bhavishya : ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುತ್ತಾ ಕಾಲಹರಣ ಮಾಡ್ಬೇಡಿ

dina bhavishya read your daily horoscope predictions for november 4 2024
ಭವಿಷ್ಯ3 ವಾರಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

galipata neetu
ಕಿರುತೆರೆ12 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ1 ವರ್ಷ ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ತಿಂಗಳುಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್3 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌