International Women’s Day 2023: ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ - Vistara News

ಕರ್ನಾಟಕ

International Women’s Day 2023: ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ

International Women’s Day 2023: ಮಾರ್ಚ್‌ 8ರ ಮಹಿಳಾ ದಿನಾಚರಣೆ ಪ್ರಯುಕ್ತ ಬಿಎಂಟಿಸಿ ವಿಶೇಷವಾಗಿ ಆಚರಿಸುತ್ತಿದೆ. ತನ್ನ ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ.

VISTARANEWS.COM


on

bmtc
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಮಾರ್ಚ್‌ 8ರಂದು ಬಿಎಂಟಿಸಿಯಲ್ಲಿ (International Women’s Day 2023) ಉಚಿತ ಪ್ರಯಾಣಕ್ಕೆ (Free Ride) ಅನುವು ಮಾಡಿಕೊಳ್ಳಲಾಗಿದೆ. ಮಹಿಳಾ ದಿನಾಚರಣೆಯಂದು ಬಿಎಂಟಿಸಿ ಬಸ್‌ನಲ್ಲಿ (Bmtc bus) ಮಹಿಳೆಯರು ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಮಾರ್ಚ್ 8ರಂದು ಮಾತ್ರ ಈ ವಿಶೇಷ ಸೇವೆ ಇರಲಿದ್ದು, ಮಹಿಳೆಯರು ಬೆಂಗಳೂರು ರೌಂಡ್‌ ಹೋಗಬಹುದು. ಬಿಎಂಟಿಸಿ ತನ್ನ ಮಹಿಳಾ ಪ್ರಯಾಣಿಕರನ್ನು ಆಕರ್ಷಿಸುವುದರ ಜತೆಗೆ ಬಸ್‌ನಲ್ಲಿ ಪ್ರಯಾಣಿಸುವಂತೆ ಉತ್ತೇಜಿಸಲು ಬಿಎಂಟಿಸಿ ಮಾಸ್ಟರ್ ಪ್ಲಾನ್‌ ಮಾಡಿದೆ. ಸಾಮಾನ್ಯ ಬಸ್‌ಗಳಲ್ಲಿ ಮಾತ್ರ ಈ ವಿಶೇಷ ಸೇವೆಯೇ ಇರಲಿದ್ಯಾ ಅಥವಾ ವಜ್ರ, ವಾಯು ವಜ್ರದಲ್ಲೂ ಓಡಾಟಕ್ಕೆ ಅವಕಾಶ ಇದೆಯಾ ಎಂಬುದು ಆದೇಶದ ಬಳಿಕ ತಿಳಿದು ಬರಲಿದೆ.

ಇದನ್ನೂ ಓದಿ: International Women’s Day: ಏರ್‌ಬಿಎನ್‌ಬಿಯಲ್ಲಿ ಹೋಸ್ಟಿಂಗ್ ಮಾಡಿ 100 ಕೋಟಿ ರೂ. ಸಂಪಾದಿಸಿದ ಭಾರತೀಯ ಮಹಿಳೆಯರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

Renuka Swamy Murder Case: ಚಿತ್ರದುರ್ಗದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಮೌನ ಪ್ರತಿಭಟನಾ ಮೆರವಣಿಗೆ ನಡೆಯಿತು. ದರ್ಶನ್‌ ಸೇರಿ ಇತರ 13 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

VISTARANEWS.COM


on

Renukaswamy murder case
Koo

ಚಿತ್ರದುರ್ಗ: ರೇಣುಕಾ ಸ್ವಾಮಿ ಹತ್ಯೆ ಖಂಡಿಸಿ (Renuka Swamy Murder Case) ನಗರದಲ್ಲಿ ಬುಧವಾರ 10ಕ್ಕೂ ಹೆಚ್ಚು ಸಂಘಟನೆಗಳಿಂದ ಮೌನ ಪ್ರತಿಭಟನೆ ನಡೆಸಲಾಯಿತು. ಬಜರಂಗದಳ, ವಿಶ್ವ ಹಿಂದು ಪರಿಷತ್, ಕನ್ನಡಪರ ಸಂಘಟನೆ, ರೈತ ಸಂಘಟನೆಗಳ 200ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು. ನಟ ದರ್ಶನ್‌ ಸೇರಿ ಇತರ 13 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ನಗರದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಮೌನ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್.ಕೆ.ಬಸವರಾಜನ್, ನಗರಸಭಾ ಅಧ್ಯಕ್ಷರು, ಸದಸ್ಯರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಪ್ರತಿಭಟನೆಗೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದೆ.

ಇದನ್ನೂ ಓದಿ | Actor Darshan : ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

ಈ ವೇಳೆ ಮಾಜಿ ಶಾಸಕ ಎಸ್.ಬಸವರಾಜನ್ ಮಾತನಾಡಿ, ಈ ಪ್ರಕರಣದಲ್ಲಿ ರಾಜಕಾರಣಿಗಳು ಪ್ರಭಾವ ಬೀರುವ ಸಾಧ್ಯತೆ ಇದೆ. ಸರ್ಕಾರ ಅವರ ಪರವಾಗಿ ಇರಬಹದು ಎನಿಸುತ್ತದೆ. ಕಾಂಗ್ರೆಸ್ ಪರ ದರ್ಶನ್ ಪ್ರಚಾರ ಮಾಡಿದರು, ಅದಕ್ಕಾಗಿ ಸರ್ಕಾರ ಅಥವಾ ರಾಜಕಾರಣಿಗಳು ಅವರ ಪರ ನಿಲ್ಲಬಹುದು. ಅದಕ್ಕಾಗಿ ಈ ಪ್ರಕರಣವನ್ನು ಸಿಬಿಐಗೆ ನೀಡುವುದು ಸೂಕ್ತ ಎಂದು ಹೇಳಿದರು.

ದರ್ಶನ್‌ಗೆ ಇರುವುದು ಅಂಧ ಅಭಿಮಾನಿಗಳು. ಇಂತ ಕೃತ್ಯ ಮಾಡಿದರೂ ಬೆಂಬಲ ಕೊಡುತ್ತಾರೆ ಎಂದರೆ ಏನರ್ಥ? ಅಭಿಮಾನಿಗಳು ನಟನ ತಪ್ಪು ತಿದ್ದಬೇಕು. ತಪ್ಪನ್ನೇ ಸರಿ ಎಂದು ಹುಬ್ಬೇರಿಸಬೇಡಿ. ಅಭಿಮಾನಿಗಳು ಹುಬ್ಬೇರಿಸಿದ್ದಕ್ಕೆ ಹೀಗೆ ಕೊಲೆ ಆಗಿದೆ. ಸೆಲೆಬ್ರಿಟಿ ತಪ್ಪಿಸಿಕೊಳ್ಳಲು ಪೊಲೀಸರು ಬಿಡಬಹುದಿತ್ತು. ಆದರೆ ಪೊಲೀಸರು ಹಾಗೆ ಮಾಡದೆ ಅರೆಸ್ಟ್ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿಗಳಿಂದ ಪ್ರಕರಣ ದಾರಿ ತಪ್ಪಿಸುವ ಕೆಲಸ ಮಾಡಬಹುದು. ಅದಕ್ಕೆ ಅವಕಾಶ ಕೊಡದೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Actor Darshan: ಪವಿತ್ರಾಗೆ ಮರ್ಮಾಂಗದ ಫೋಟೊ ಕಳುಹಿಸಿದ್ರಾ ರೇಣುಕಾಸ್ವಾಮಿ? ದರ್ಶನ್​ಗೆ ತಿಳಿದಿದ್ದು ಹೇಗೆ?

ದರ್ಶನ್ ನಿಜ ಜೀವನದಲ್ಲಿ ಹೀರೋ ಅಲ್ಲವೇ ಅಲ್ಲ

ಬಿಜೆಪಿ ಮಾಜಿ ಶಾಸಕ ತಿಪ್ಪಾರೆಡ್ಡಿ ಮಾತನಾಡಿ, ನಟ ದರ್ಶನ್ ತೆರೆ ಮೇಲೆ ಸ್ಟಾರ್ ಆಗಿದ್ದಾರೆ, ಆದರೆ ನಿಜ ಜೀವನದಲ್ಲಿ ಅವರು ಹೀರೋ ಅಲ್ಲವೇ ಅಲ್ಲ. ರೇಣುಕಾ ಸ್ವಾಮಿ ತಂದೆ-ತಾಯಿ ಗೋಳು ನೋಡೋಕೆ ಆಗಲ್ಲ. ಈ ಸರ್ಕಾರ ಬಂದಾಗಿನಿಂದ ಇಂತ ಘಟನೆಗಳು ನಡೆಯುತ್ತಿವೆ. A1 ಆಗಿದ್ದ ದರ್ಶನ್‌ನ A2 ಮಾಡಿದ್ದೇಕೆ? ಪ್ರಕರಣದಿಂದ ತಪ್ಪಿಸಲು ಹೀಗೆ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮಾತ್ರ ಏನೂ ಆಗಿಲ್ಲ ಎನ್ನೋ ತರ ಮಾತಾಡುತ್ತಾರೆ. ಸರ್ಕಾರ ಇಂತ ಪ್ರಕರಣಗಳನ್ನು ಕೇರ್ ಲೆಸ್ ಮಾಡಬಹುದು. ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು. ಆರೋಪಿಗಳು ರಿಲೀಸ್ ಆಗಬಾರದು, ಬಿಡುಗಡೆಯಾದರೆ ನಾವು ದೊಡ್ಡ ಮಟ್ಟದ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Continue Reading

ಪ್ರಮುಖ ಸುದ್ದಿ

Belagavi News : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲೆ ಪಾಕ್​ ಪರ ಘೋಷಣೆ ಕೂಗಿದ ಆರೋಪಿ

Belagavi News ::

VISTARANEWS.COM


on

Belagvi Police
Koo

ಬೆಳಗಾವಿ : ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲೇ ನಟೋರಿಯಸ್​ ಕ್ರಿಮಿನಲ್ ಒಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಆತನ ಕುಕೃತ್ಯದಿಂದ ಕೋಪಗೊಂಡ ಸ್ಥಳದಲ್ಲಿದ್ದವರು ಧರ್ಮದೇಟು ಕೊಟ್ಟಿದ್ದಾರೆ. ಪೊಲೀಸರ ಆತನನ್ನು ರಕ್ಷಿಸಿ ಮತ್ತೆ ಜೈಲಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ಆರೋಪಿಯನ್ನು ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್​ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಆತ ಪಾಕಿಸ್ತಾನ ಜಿಂದಾಬಾದ್​ ಎಂದು ಕೂಗುವ ಮೂಲಕ ಸ್ಥಳದಲ್ಲಿದ್ದವರನ್ನು ಕೆರಳಿಸಿದ್ದ.

ನಟೋರಿಯಸ್ ಪಾತಕಿ ಜಯೇಶ್ ಪೂಜಾರಿಯಿಂದ ಪಾಕಿಸ್ತಾನ ಪರ ಘೋಷಣೆ ಕೂಗಿ ಧರ್ಮದೇಟು ತಿಂದವು. ಆತ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರಿಂದ ಪೆಟ್ಟು ಬಿದ್ದಿದೆ. ಕೋರ್ಟ್ ಒಳ ಭಾಗದಲ್ಲೇ ಆತನಿಗೆ ಪೆಟ್ಟಿ ಬಿದ್ದಿದೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಹೊರ ಕರೆದುಕೊಂಡು ಬಂದ ಪೊಲೀಸರು. ಅಲ್ಲಿಂದ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಜಯೇಶ್ ಪೂಜಾರ್​​ ಈ ಹಿಂದೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಜೈಲಿನಿಂದ ಜೀವ ಬೆದರಿಕೆ ಹಾಕಿದ್ದ. ಹಿಂಡಲಗಾ ಜೈಲಿನಲ್ಲಿದ್ದುಕೊಂಡು ಜೀವ ಬೆದರಿಕೆ ಹಾಕಿದ್ದ. ಈ ಕೇಸ್ ಹಿನ್ನೆಲೆಯಲ್ಲಿ ಕೋರ್ಟ್ ಗೆ ಕರೆ ತರಲಾಗಿತ್ತು. ಆರೋಪಿ ಜಯೇಶ್​ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೂ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಕೋರ್ಟ್ ನಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಅಂತಾ ಪಾಕ್ ಪರ ಘೋಷಣೆ ಕೂಗಿರುವುದಾಗಿ ಆತ ಹೇಳಿದ್ದಾನೆ.

ವಾಟರ್​ ಮ್ಯಾನ್​ ಮೇಲೆ ಠಾಣೆಯಲ್ಲಿ ಹಲ್ಲೆ ; ಡಿವೈಎಸ್​ಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಎಫ್​ಐಆರ್​​

ತುಮಕೂರು: ಗ್ರಾಮ ಪಂಚಾಯತ್​ ವಾಟರ್ ಮ್ಯಾನ್ ಒಬ್ಬರನ್ನು ಎಳೆದೊಯ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ಡಿವೈಎಸ್​ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕುಣಿಗಲ್​ ಪೊಲೀಸ್ ಠಾಣೆಯಲ್ಲಿ (Tumkur News) ದೂರು ದಾಖಲಾಗಿದೆ. ಎಫ್​ಐಆರ್​ ದಾಖಲಿಸುವಂತೆ ನ್ಯಾಯಾಲಯ ಆದೇಶದ ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ:Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ

ಕುಣಿಗಲ್ ಡಿವೈಎಸ್​​ಪಿ, ಓಂ ಪ್ರಕಾಶ್, ಸರ್ಕಲ್ ಇನ್ ಸ್ಪೆಕ್ಟರ್ ಮಾಧವ ನಾಯಕ್, ಅಮೃತ್ತೂರು ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಶಮಂತ್ ಗೌಡ, ಎಸ್​​ಎಚ್​ಒ ದಯಾನಂದ್ ವಿರುದ್ಧ ಎಫ್ ಐಆರ್ ದಾಖಲು ಮಾಡಲು ಕೋರ್ಟ್ ಆದೇಶಿದೆ.

ಮಾರ್ಚ್ 23ರಂದು ವಾಟರ್ ಮ್ಯಾನ್ ಗಂಗಾಧರ್ ಅವರನ್ನು ವಿಚಾರಣೆ ನೆಪದಲ್ಲಿ ಕುಣಿಗಲ್​ ಠಾಣೆಗೆ ಕರೆದೊಯ್ಯಲಾಗಿತ್ತು. ಅಮೃತ್ತೂರು ಹೋಬಳಿಯ ಕೆ.ಹೆಚ್ ಹಳ್ಳಿ ಗ್ರಾ.ಪಂನ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿರೋ ಗಂಗಾಧರ್ ಅವರನ್ನು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡದೇ ಕರೆದುಕೊರಮಡು ಹೋಗಲಾಗಿತ್ತು. ಅಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Tumkur News : ವಾಟರ್​ ಮ್ಯಾನ್​ ಮೇಲೆ ಠಾಣೆಯಲ್ಲಿ ಹಲ್ಲೆ ; ಡಿವೈಎಸ್​ಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಎಫ್​ಐಆರ್​​

Tumkur News :ಕುಣಿಗಲ್ ಡಿವೈಎಸ್​​ಪಿ, ಓಂ ಪ್ರಕಾಶ್, ಸರ್ಕಲ್ ಇನ್ ಸ್ಪೆಕ್ಟರ್ ಮಾಧವ ನಾಯಕ್, ಅಮೃತ್ತೂರು ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಶಮಂತ್ ಗೌಡ, ಎಸ್​​ಎಚ್​ಒ ದಯಾನಂದ್ ವಿರುದ್ಧ ಎಫ್ ಐಆರ್ ದಾಖಲು ಮಾಡಲು ಕೋರ್ಟ್ ಆದೇಶಿದೆ.

VISTARANEWS.COM


on

Tumkur News
Koo

ತುಮಕೂರು: ಗ್ರಾಮ ಪಂಚಾಯತ್​ ವಾಟರ್ ಮ್ಯಾನ್ ಒಬ್ಬರನ್ನು ಎಳೆದೊಯ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ಡಿವೈಎಸ್​ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕುಣಿಗಲ್​ ಪೊಲೀಸ್ ಠಾಣೆಯಲ್ಲಿ (Tumkur News) ದೂರು ದಾಖಲಾಗಿದೆ. ಎಫ್​ಐಆರ್​ ದಾಖಲಿಸುವಂತೆ ನ್ಯಾಯಾಲಯ ಆದೇಶದ ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಕುಣಿಗಲ್ ಡಿವೈಎಸ್​​ಪಿ, ಓಂ ಪ್ರಕಾಶ್, ಸರ್ಕಲ್ ಇನ್ ಸ್ಪೆಕ್ಟರ್ ಮಾಧವ ನಾಯಕ್, ಅಮೃತ್ತೂರು ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಶಮಂತ್ ಗೌಡ, ಎಸ್​​ಎಚ್​ಒ ದಯಾನಂದ್ ವಿರುದ್ಧ ಎಫ್ ಐಆರ್ ದಾಖಲು ಮಾಡಲು ಕೋರ್ಟ್ ಆದೇಶಿದೆ.

ಮಾರ್ಚ್ 23ರಂದು ವಾಟರ್ ಮ್ಯಾನ್ ಗಂಗಾಧರ್ ಅವರನ್ನು ವಿಚಾರಣೆ ನೆಪದಲ್ಲಿ ಕುಣಿಗಲ್​ ಠಾಣೆಗೆ ಕರೆದೊಯ್ಯಲಾಗಿತ್ತು. ಅಮೃತ್ತೂರು ಹೋಬಳಿಯ ಕೆ.ಹೆಚ್ ಹಳ್ಳಿ ಗ್ರಾ.ಪಂನ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿರೋ ಗಂಗಾಧರ್ ಅವರನ್ನು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡದೇ ಕರೆದುಕೊರಮಡು ಹೋಗಲಾಗಿತ್ತು. ಅಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ

ಗಂಗಾಧರ್ ಅವರನ್ನು ಕರೆದುಕೊಂಡು ಹೋದ ಪೊಲೀಸರು ಸಂಜೆ ವೇಳೆ ಬಿಟ್ಟಿದ್ದರು. ಈ ನಡುವೆ ಅವರಿಗೆ ಬಾಸುಂಡೆ ಬರುವಂತೆ ಬಾರಿಸಿದ್ದರು ಎಂದು ಹೇಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ತಮಗಾಗಿರುವ ಅನ್ಯಾಯವನ್ನು ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಿದ್ದರು. ಇದೀಗ ನ್ಯಾಯಾಲಯ ಪೊಲೀಸ್​ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಿಸಲು ಆದೇಶಿಸಿದೆ.

ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ


ಖಾಸಗಿ ಕ್ಷಣಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಾಕಿ ಮರ್ಯಾದೆ ಕಳೆಯುವುದಾಗಿ ಬೆದರಿಕೆ ಹಾಕಿದ್ದ ಪ್ರಿಯಕರನ್ನು ವಿವಾಹಿತ ಮಹಿಳೆಯೊಬ್ಬಳು ಸಹೋದರನ ಜತೆ ಸೇರಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ (Murder News) ಎಚ್​​​ಡಿ ಕೋಟೆ ತಾಲೂಕಿನ ಸಿದ್ದಯ್ಯನ ಹುಂಡಿ ಬಳಿ ನಡೆದಿದೆ. ಪ್ರೇಮಾ ಹಾಗೂ ಆಕೆಯ ಸಹೋದರ ಶಿವು ಕೊಲೆ ಆರೋಪಿಗಳು. 32 ವರ್ಷದ ರಾಜೇಶ್​ ಕೊಲೆಯಾದ ವ್ಯಕ್ತಿ.

ಆರೋಪಿ ಪ್ರೇಮಾ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದಾರೆ. ಅವರು 15 ವರ್ಷದ ಹಿಂದೆ ನಂಜನಗೂಡಿನ ಶ್ರೀರಾಂಪುರಕ್ಕೆ ಮದುವೆ ಆಗಿ ಬಂದಿದ್ದರು. ಒಂದು ತಿಂಗಳ ಹಿಂದೆ ಪ್ರೇಮಾಳ ಪತಿ ಆತ್ಮಹತ್ಯೆ. ಮಾಡಿಕೊಂಡಿದ್ದರು. ಆ ಬಳಿಕ ಪ್ರೇಮಾ ಪತಿಯ ಸ್ನೇಹಿತ ರಾಜೇಶ್​ ಜತೆ ಪ್ರೀತಿಯಲ್ಲಿ ಬಿದ್ದಿದ್ದಳು. ಅವರಿಬ್ಬರು ಖಾಸಗಿ ಕ್ಷಣಗಳನ್ನೂ ಕಳೆದಿದ್ದರು. ಇದನ್ನೇ ದುರ್ಬಳಕೆ ಮಾಡಿಕೊಂಡಿದ್ದ ರಾಜೇಶ್​​, ಆ ಕ್ಷಣದ ಫೋಟೋಗಳನ್ನು ತೆಗೆದಿಟ್ಟುಕೊಂಡು ಬೆದರಿಕೆ ಹಾಕಲು ಆರಂಭಿಸಿದ್ದ. ಬೆದರಿದ ಪ್ರೇಮಾ ಆತನ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದಾಳೆ. ಅಂತೆಯೇ ಆತನನ್ನು ತನ್ನ ಬಳಿಗೆ ಕರೆಸಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ.

Continue Reading

ಪ್ರಮುಖ ಸುದ್ದಿ

Lok Sabha Election : ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ ವಿಧಾನಸಭೆ ಚುನಾವಣೆಯಲ್ಲಿ 142 ಸ್ಥಾನ!

Lok Sabha Election: ರಾಜ್ಯ ಸರ್ಕಾರದ 18 ಮಂತ್ರಿಗಳು ತಮ್ಮ ಸ್ವಂತ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮುನ್ನಡೆ ಕೊಡಿಸಲು ವಿಫಲರಾಗಿದ್ದರು. ಇದು ಕಾಂಗ್ರೆಸ್​ ಪಾಲಿಗೆ ಕಟು ಸತ್ಯವಾಗಿದೆ. ಉದಾಹರಣೆಗೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಬಿಟಿಎಂ ಲೇಔಟ್ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಅವರಿಗೆ 9,000 ಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿತ್ತು.

VISTARANEWS.COM


on

Lok Sabha Election
Koo

ಬೆಂಗಳೂರು: ಈ ಕ್ಷಣದಲ್ಲೇ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದರೆ ಮತ್ತು ಲೋಕಸಭಾ ಚುನಾವಣೆಯಂತೆಯೇ (Lok Sabha Election ) ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ 142 ಸ್ಥಾನಗಳನ್ನು ಗೆಲ್ಲಲಿದೆ. ಈ ಮೂಲಕ ಇದು ರಾಜ್ಯದಲ್ಲಿ ಕಾಂಗ್ರೆಸ್ 2023ರಲ್ಲಿ ಪಡೆದ ಭಾರಿ ಜನಾದೇಶ ಬುಡಮೇಲಾಗಲಿದೆ. ಡೆಕ್ಕಲ್​ ಹೆರಾಲ್ಡ್​ ಪತ್ರಿಕೆಯು ಈ ಬಗ್ಗೆ ವರದಿಯೊಂದನ್ನು ಮಾಡಿದ್ದು ಜೆಡಿಎಸ್​, ಬಿಜೆಪಿ ಮೈತ್ರಿಯಿಂದಾಗಿ ಕಾಂಗ್ರೆಸ್​ಗೆ ನಷ್ಟವಾಗಲಿದೆ ಎಂದು ವರದಿ ಮಾಡಿದೆ.

ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ವಿಭಿನ್ನವಾಗಿ ಮತ ಚಲಾಯಿಸುವ ಸುದೀರ್ಘ ಇತಿಹಾಸವನ್ನು ಕರ್ನಾಟಕದ ಮತದಾರರು ಹೊಂದಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು 28 ಸ್ಥಾನಗಳ ಪೈಕಿ ಬಿಜೆಪಿಗೆ 17 ಸೀಟ್ ಕೊಟ್ಟಿದ್ದಾರೆ. ಜೆಡಿಎಸ್ ಸ್ಪರ್ಧಿಸಿರುವ 3ರಲ್ಲಿ 2 ಮತ್ತು ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದುಕೊಂಡಿದೆ. 2019ರಲ್ಲಿ ಕೇವಲ ಒಂದು ಸ್ಥಾನ ಗೆದ್ದಿದ್ದ ಕಾಂಗ್ರೆಸ್ 14ರಿಂ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ, ಅದು ಕೆಲಸ ಮಾಡಿಲ್ಲ.

ರಾಜ್ಯ ಸರ್ಕಾರದ 18 ಮಂತ್ರಿಗಳು ತಮ್ಮ ಸ್ವಂತ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮುನ್ನಡೆ ಕೊಡಿಸಲು ವಿಫಲರಾಗಿದ್ದರು. ಇದು ಕಾಂಗ್ರೆಸ್​ ಪಾಲಿಗೆ ಕಟು ಸತ್ಯವಾಗಿದೆ. ಉದಾಹರಣೆಗೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಬಿಟಿಎಂ ಲೇಔಟ್ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಅವರಿಗೆ 9,000 ಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿತ್ತು. ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅವರ ಪುತ್ರ ಮೃಣಾಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ ಅಲ್ಲಿ ಬಿಜೆಪಿ 50,000 ಮತಗಳ ಮುನ್ನಡೆ ಸಾಧಿಸಿದೆ.

ಮೈತ್ರಿ ಯಶಸ್ಸು

ಚುನಾವಣಾ ಬಳಿಕದ ಅಂಕಿ ಅಂಶಗಳ ಪ್ರಕಾರ, ಬಿಜೆಪಿ-ಜೆಡಿಎಸ್ ಮೈತ್ರಿ ಕೆಲಸ ಮಾಡಿದೆ. ಏಕೆಂದರೆ ಎರಡೂ ಪಕ್ಷಗಳು ಪರಸ್ಪರ ತಮ್ಮ ಮತಗಳನ್ನು ಹಂಚಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ಇದು ಸಂಭವಿಸುವುದಿಲ್ಲ ಎಂದು ಕಾಂಗ್ರೆಸ್ ಭಾವಿಸಿತ್ತು. ಅವರ ನಿರೀಕ್ಷೆ ಸುಳ್ಳಾಗಿದೆ. ತುಮಕೂರು ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿಲ್ಲ ಎಂಬುದೇ ಇದಕ್ಕೆ ಸಾಕ್ಷಿ. ಅದೇ ರೀತಿ ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೊಂಚವೂ ಮುನ್ನಡೆ ಸಿಕ್ಕಿಲ್ಲ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

ವ್ಯತರಿಕ್ತ ಫಲಿತಾಂಶ

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು. ಬೀದರ್, ರಾಯಚೂರು ಮತ್ತು ಬಳ್ಳಾರಿಯಲ್ಲಿ ಇದು ಬಹುತೇಕ ಮೇಲುಗೈ ಸಾಧಿಸಿದೆ.
ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವ್ ಮತ್ತು ಫೈರ್ ಬ್ರಾಂಡ್ ಹಿಂದುತ್ವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಜಾಪುರ ನಗರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ವಿಶೇಷ.

ಒಂದು ವಿಧಾನಸಭಾ ಕ್ಷೇತ್ರದಲ್ಲಿ ಸಿಗುವ ಗಣನೀಯ ಮುನ್ನಡೆ ಇಡೀ ಫಲಿತಾಂಶವನ್ನು ಹೇಗೆ ತಿರುಗಿಸುತ್ತದೆ ಎಂಬುದಕ್ಕೂ ಉದಾಹರಣೆಯಿದೆ. ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್ ಅವರು ಮಹದೇವಪುರ ಕ್ಷೇತ್ರ ಒಂದರಲ್ಲಿಯೇ 1.14 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದರು. ಇದು ಫಲಿತಾಂಶವನ್ನೇ ಬದಲಾಯಿಸಿ ಗೆಲುವು ತಂದುಕೊಟ್ಟಿತು. ಮಹದೇವಪುರದ ಮತದಾರರ ಸಂಖ್ಯೆ 3 ವಿಧಾನಸಭಾ ಕ್ಷೇತ್ರಗಳಿಗೆ ಸಮನಾಗಿದೆ. ರಾಜಾಜಿನಗರ ಮತ್ತು ಇತರ ಸ್ಥಳಗಳಲ್ಲಿ ನನಗೆ ದೊರೆತ ಮುನ್ನಡೆ ಇಲ್ಲದಿದ್ದರೆ, ಮಹದೇವಪುರ ಮಾತ್ರ ಸಾಕಾಗುತ್ತಿರಲಿಲ್ಲ ಎಂದು ಮೋಹನ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯನ್ನು ಪಕ್ಷ ರಾಜಕೀಯಗೊಳಿಸದಿದ್ದರೆ ಬಿಜೆಪಿಗೆ ಇಷ್ಟೊಂದು ಸೀಟು ಸಿಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದರು. ಯಾಕೆಂದರೆ 2019ಕ್ಕೆ ಹೋಲಿಸಿದರೆ ಕಾಂಗ್ರೆಸ್ ಮತ ಹಂಚಿಕೆ ಶೇ.13ರಷ್ಟು ಹೆಚ್ಚಾಗಿದೆ ಎಂದು ಅಂಕಿ ಅಂಶಗಳ ಮೂಲ ಗೊತ್ತಾಗಿದೆ.

Continue Reading
Advertisement
Actor Darshan The murder was done by team in the style movie
ಸ್ಯಾಂಡಲ್ ವುಡ್4 mins ago

Actor Darshan: ಲಾರಿಗೆ ತಲೆಯನ್ನು ಬಡಿದು ಸಿನಿಮಾ ಶೈಲಿಯಲ್ಲೇ ರೇಣುಕಾ ಸ್ವಾಮಿ ಕೊಲೆ ಮಾಡಿದ್ದ ದರ್ಶನ್ ಗ್ಯಾಂಗ್​!

Renukaswamy murder case
ಕರ್ನಾಟಕ29 mins ago

Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

Aamir Khan to fly in over 200 relatives and friends for mom Zeenat's grand 90th birthday
ಬಾಲಿವುಡ್30 mins ago

Aamir Khan: 200 ಕ್ಕೂ ಹೆಚ್ಚು ಅತಿಥಿಗಳೊಂದಿಗೆ ತಾಯಿಯ ಜನುಮದಿನ ಸೆಲೆಬ್ರೆಟ್‌ ಮಾಡಲಿದ್ದಾರೆ ಆಮೀರ್‌!

Lok Sabha Election
ಪ್ರಮುಖ ಸುದ್ದಿ33 mins ago

Lok Sabha Election : ಇನ್ನಿಬ್ಬರು ಸದಸ್ಯರು ಕಡಿಮೆಯಾದರೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಗೆ ಪ್ರತಿಪಕ್ಷ ಹುದ್ದೆಯೂ ನಷ್ಟ!

Gold Rate Today
ಚಿನ್ನದ ದರ46 mins ago

Gold Rate Today: ಚಿನ್ನದ ದರ ಮತ್ತೆ ಗಗನಮುಖಿ; ಇಂದಿನ ಬೆಲೆ ಇಷ್ಟಿದೆ

Actor Darshan Cars Seized By Police
ಸ್ಯಾಂಡಲ್ ವುಡ್1 hour ago

Actor Darshan: ಕಾರಿನಲ್ಲಿತ್ತು ಮದ್ಯದ ಬಾಟಲಿ, ವ್ಯಾನಿಟಿ ಬ್ಯಾಗ್; ಶವ ಸಾಗಿಸಿದ್ದು ಯಾವ ಕಾರಲ್ಲಿ?

Fraud case
ಪ್ರಮುಖ ಸುದ್ದಿ1 hour ago

Fraud case: ಡಾಕ್ಟರ್ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳಲು ಹೋಗಿ ಬ್ಯಾಂಕ್ ಖಾತೆಯಿಂದ ಹಣ ಕಳೆದುಕೊಂಡ ನಟ!

Murder case
ಪ್ರಮುಖ ಸುದ್ದಿ1 hour ago

Murder Case: 300 ಕೋಟಿಯ ಆಸ್ತಿಗಾಗಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!

Chandrababu Naidu
ದೇಶ1 hour ago

Chandrababu Naidu: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪದಗ್ರಹಣ

Viral News
ರಾಜಕೀಯ1 hour ago

Viral News: ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕಾಯಿದೆ ಜಾರಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ22 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ23 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌