ಪ್ರಧಾನಿ ನರೇಂದ್ರ ಮೋದಿ ಸಲಹೆ ಮೇರೆಗೆ 22ಕೆಜಿ ತೂಕ ಇಳಿಸಿಕೊಂಡ ಕೇಂದ್ರ ಸಚಿವ; ಆಯುರ್ವೇದ ಪದ್ಧತಿ ಅನುಸರಿಸಿ ಡಯೆಟ್​ - Vistara News

ದೇಶ

ಪ್ರಧಾನಿ ನರೇಂದ್ರ ಮೋದಿ ಸಲಹೆ ಮೇರೆಗೆ 22ಕೆಜಿ ತೂಕ ಇಳಿಸಿಕೊಂಡ ಕೇಂದ್ರ ಸಚಿವ; ಆಯುರ್ವೇದ ಪದ್ಧತಿ ಅನುಸರಿಸಿ ಡಯೆಟ್​

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆ ರಾಜ್ಯ ಸಚಿವ ಕೌಶಲ್ ಕಿಶೋರ್​ ತಾವು 2021ರಲ್ಲಿ 96 ಕೆಜಿ ತೂಕ ಇದ್ದೆ, ಮತ್ತೀಗ 74 ಕೆಜಿ ಗೆ ಇಳಿದಿದ್ದೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

VISTARANEWS.COM


on

Union Minister Kaushal Kishore announce a 22-kg weight loss Share his Photo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆ ರಾಜ್ಯ ಸಚಿವ ಕೌಶಲ್ ಕಿಶೋರ್​ (Kaushal Kishore) ಅವರು, ತಾವು 22 ಕೆಜಿ ತೂಕ ಇಳಿಸಿಕೊಂಡಿದ್ದಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಆರೋಗ್ಯಕರ ಡಯೆಟ್​ ಮೂಲಕ ತೂಕ ಇಳಿಸಿಕೊಂಡಿದ್ದೇನೆ, ಈಗ ಮೊದಲಿಗಿಂತಲೂ ಫಿಟ್​ ಆಗಿ, ಆರೋಗ್ಯವಾಗಿ ಇದ್ದೇನೆ ಎಂದು ಅವರು ಹೇಳಿದ್ದಾರೆ. ಹಾಗೇ, ಮೊದಲು 96 ಕೆಜಿ ಇದ್ದಾಗಿನ ಮತ್ತು ಈಗ 74 ಕೆಜಿ ಆದಾಗಿನ ಫೋಟೋಗಳನ್ನು ಕೊಲ್ಯಾಜ್ ಮಾಡಿ ಹಂಚಿಕೊಂಡು, ‘2021ರಲ್ಲಿ ನಾನು 96 ಕೆಜಿ ತೂಕ ಇದ್ದೆ. ತೂಕ ಇಳಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದರು. ಹಾಗೇ, ಅವರ ಶಿಫಾರಸ್ಸಿನ ಮೇಲೆ ದೆಹಲಿಯ ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್​ ಆಫ್ ಆಯುರ್ವೇದ ಆಸ್ಪತ್ರಗೆ ದಾಖಲಾದೆ. ಅಲ್ಲಿನ ವೈದ್ಯರು ನನಗೆ ಕೆಲ ಚಿಕಿತ್ಸೆಗಳನ್ನು ನೀಡಿ, ನಿಯಮಿತ ಆಹಾರಕ್ರಮ ಸೂಚಿಸಿದರು. ಅದನ್ನು ಪಾಲಿಸುತ್ತ ಬಂದೆ, 22 ಕೆಜಿ ತೂಕ ನಷ್ಟವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಕಳೆದ ವರ್ಷ ಬಿಜೆಪಿ ಸಂಸದ ಅನಿಲ್ ಫಿರೋಜಿಯಾ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಸವಾಲು ಸ್ವೀಕರಿಸಿ 32 ಕೆಜಿ ತೂಕ ಕಳೆದುಕೊಂಡಿದ್ದರು. ಅನಿಲ್ ಫಿರೋಜಿಯಾ ಒಟ್ಟಾರೆ 127 ಕೆಜಿ ಇದ್ದರು. 2022ರ ಫೆಬ್ರವರಿಯಲ್ಲಿ ಒಮ್ಮೆ ನಿತಿನ್​ ಗಡ್ಕರಿಯವರನ್ನು ಭೇಟಿಯಾಗಿದ್ದಾಗ, ಅನಿಲ್ ತೂಕದ ಬಗ್ಗೆ ಗಡ್ಕರಿ ಮಾತನಾಡಿದ್ದರು. ‘ನಿಮ್ಮ ತೂಕ ತುಂಬ ಹೆಚ್ಚಾಯಿತು. ನೀವು ತೂಕ ಇಳಿಸಿಕೊಳ್ಳಿ. ನೀವು ಇಳಿಸುವ ಪ್ರತಿ ಕೆಜಿಗೆ ನಮ್ಮ ಸಚಿವಾಲಯದಿಂದ 1000 ಕೋಟಿ ರೂಪಾಯಿ ಕೊಡುತ್ತೇನೆ. ಒಟ್ಟಾರೆ ಎಷ್ಟು ಕೆಜಿ ಇಳಿಸುತ್ತೀರೋ, ಅಷ್ಟು ಸಾವಿರ ಕೋಟಿ ರೂಪಾಯಿಯನ್ನು ನಿಮ್ಮ ಲೋಕಸಭಾ ಕ್ಷೇತ್ರಕ್ಕೆ ನಮ್ಮ ಸಚಿವಾಲಯದಿಂದ ಬಿಡುಗಡೆ ಮಾಡುತ್ತೇವೆ. ಇದರಿಂದ ನಿಮ್ಮ ಕ್ಷೇತ್ರದಲ್ಲೂ ರಸ್ತೆ-ಹೆದ್ದಾರಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಕೊಳ್ಳಬಹುದು’ ಎಂದು ಹೇಳಿದ್ದರು. ಅವರೂ ಕೂಡ ಆಯುರ್ವೇದ ಪದ್ಧತಿ, ವ್ಯಾಯಾಮದ ಮೂಲಕ ತೂಕ ಇಳಿಸಿಕೊಂಡಿದ್ದಾರೆ. ಹಾಗೇ, ನಿತಿನ್ ಗಡ್ಕರಿ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Jayadev Memorial Rashtrotthana Hospital: ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಉದ್ಘಾಟಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

IT Raid:ರೇಡ್‌ ವೇಳೆ 40ಕೋಟಿ ರೂ. ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಅಕ್ರಮ ಹಣದ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇವಲ 500ರೂ. ಮುಖಬೆಲೆಯ ನೋಟುಗಳಾಗಿದ್ದು, ಅಧಿಕಾರಿಗಳು ನೋಟು ಎಣಿಕೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೂ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

IT Raid
Koo

ಉತ್ತರಪ್ರದೇಶ: ಶೂ ತಯಾರಿಕಾ ಉದ್ಯಮಿಗಳ ಮೇಲೆ ಆದಾಯ ತೆರಿಗೆ(IT Raid) ಅಧಿಕಾರಿಗಳು ದಾಳಿ ನಡೆಸಿ, ಬರೊಬ್ಬರಿ 40 ಕೋಟಿ ರೂ.ನಗದನ್ನು ವಶಕ್ಕೆ ಪಡೆದಿರುವ ಘಟನೆ ಉತ್ತರಪ್ರದೇಶ(Uttar Pradesh)ದ ಆಗ್ರಾದಲ್ಲಿ ನಡೆದಿದೆ. ಶನಿವಾರ ಆಗ್ರಾದ ಮೂರು ಶೂ ವ್ಯಾಪಾರಿ(Shoe Business)ಗಳ ನಿವಾಸ ಮತ್ತು ಕಚೇರಿ ಮೇಲೆ ರೇಡ್‌ ಮಾಡಿರುವ ಐಟಿ, ಭಾರೀ ಶೋಧ ಕಾರ್ಯಾಚರಣೆ ನಡೆಸಿದೆ.

ರೇಡ್‌ ವೇಳೆ 40ಕೋಟಿ ರೂ. ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಅಕ್ರಮ ಹಣದ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇವಲ 500ರೂ. ಮುಖಬೆಲೆಯ ನೋಟುಗಳಾಗಿದ್ದು, ಅಧಿಕಾರಿಗಳು ನೋಟು ಎಣಿಕೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೂ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ವ್ಯಾಪಾರಿಗಳ ವಿವರ ಇನ್ನೂ ಬಹಿರಂಗಪಡಿಸಿಲ್ಲ. ಇನ್ನು ಮಂಚದ ಮೇಲೆ ಕಂತೆ ಕಂತೆ ನೋಟುಗಳನ್ನು ಅಧಿಕಾರಿಗಳು ಜೋಡಿಸಿಟ್ಟಿರುವ ಫೋಟೋ ಎಲ್ಲೆಡೆ ವೈರಲ್‌ ಆಗುತ್ತಿದೆ.

ಕೆಲವು ದಿನಗಳ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದರು. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರು ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

Continue Reading

ದೇಶ

Air India: ಏರ್‌ ಇಂಡಿಯಾ ವಿಮಾನದಲ್ಲಿ ಮತ್ತೆ ಅವಘಡ; ತಪ್ಪಿದ ಭಾರೀ ದುರಂತ; ತುರ್ತು ಭೂ ಸ್ಪರ್ಶ

Air India:AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಬೆಂಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ.

VISTARANEWS.COM


on

Air india
Koo

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ(Emergency Landing) ಮಾಡಿದೆ. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ತುರ್ತು ಭೂ ಸ್ಪರ್ಶ ಮಾಡಲಾಗಿದ್ದು, ಭಾರೀ ಅವಘಡವೊಂದು ತಪ್ಪಿದೆ.

AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಬೆಂಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್‌ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

ಮೇ 16ರಂದು ಕೂಡ ಇಂತಹದ್ದೇ ಒಂದು ಘಟನೆ ಪುಣೆಯಲ್ಲಿ ನಡೆದಿತ್ತು,. 180 ಪ್ರಯಾಣಿಕರೊಂದಿಗೆ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನವು ಪುಣೆ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಗುರುವಾರ (ಮೇ 16) ಟಗ್‌ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯಿಂದಾಗಿ ವಿಮಾನಕ್ಕೆ ಹಾನಿಯಾಗಿದ್ದರೂ ಅದೃಷ್ಟವಶಾತ್‌ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.

ಅಪಘಾತದ ನಂತರ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು. ಬಳಿಕ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ತನಿಖೆಯನ್ನು ಪ್ರಾರಂಭಿಸಿದೆ. ಟಗ್ ಟ್ರಕ್ ಟ್ಯಾಕ್ಸಿಂಗ್ ಪ್ರಕ್ರಿಯೆಯ ಸಮಯದಲ್ಲಿ ವಿಮಾನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಅದಾಗ್ಯೂ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆದವು. ಬಾಧಿತ ವಿಮಾನವನ್ನು ತಪಾಸಣೆಗೆ ಒಳಪಡಿಸಲಾಯಿತು. ದುರಸ್ತಿಗೆ ಒಳಗಾದ ವಿಮಾನ ಸದ್ಯ ಕಾರ್ಯಾಚರಣೆಗೆ ಸಿದ್ಧವಾಗಿದೆ.

ಇದನ್ನೂ ಓದಿ:Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

ಇದಕ್ಕೂ ಮುನ್ನ ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್‌ ಕರೆಯೊಂದು ಬಂದು ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು. ದಿಲ್ಲಿಯಿಂದ ವಡೋದರಾಕ್ಕೆ ಪ್ರಯಾಣ ಬೆಳೆಸಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಎಂದು ಬರೆದಿರುವ ಟಿಶ್ಯೂ ಪೇಪರ್‌ ಪತ್ತೆಯಾಗಿತ್ತು. ಶೌಚಾಲಯದಲ್ಲಿ ಈ ಟಿಶ್ಯೂ ಪೇಪರ್‌ ಪತ್ತೆಯಾಗಿ ಪ್ರಯಾಣಿಕರಲ್ಲಿ ಭಾರೀ ಆತಂಕ ಉಂಟು ಮಾಡಿತ್ತು. ಬೆಳಿಗ್ಗೆ 7.30ರ ವೇಳೆಗೆ ವಿಮಾನ ಇನ್ನೇನು ಟೇಕ್‌ ಆಫ್‌ ಆಗಬೇಕಿತ್ತು. ಈ ವೇಳೆ ವಿಮಾನ ಸಿಬ್ಬಂದಿಗೆ ಈ ಟಿಶ್ಯೂ ಸಿಕ್ಕಿತ್ತು ಎನ್ನಲಾಗಿದೆ.

Continue Reading

ದೇಶ

Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Arvind Kejriwal: ನಿನ್ನೆ ರಾತ್ರಿ ವಿಡಿಯೋ ಸಂದೇಶವೊಂದನ್ನು ಹರಿಬಿಟ್ಟಿರುವ ಕೇಜ್ರಿವಾಲ್‌, ನಾಳೆ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಹೇಳಿದ್ದು, ಸಾಧ್ಯವಾದರೆ ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಸವಾಲೆಸೆದಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಅರೆಸ್ಟ್‌ ಆಗಿ, ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಮರ ಸಾರಿದ್ದಾರೆ. ತಮ್ಮ ಪಕ್ಷದ ನಾಯಕರನ್ನು ಒಬ್ಬರಾದ ಮೇಲೊಬ್ಬರಂತೆ ಜೈಲಿಗೆ ತಳ್ಳಿ ಆಪ್‌ ಪಕ್ಷದ ಧ್ವನಿ ಅಡಗಿಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಅವರು, ಇಂದು ದೆಹಲಿಯ ಬಿಜೆಪಿ ಕಚೇರಿ ಎದುರು ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ನಿನ್ನೆ ರಾತ್ರಿ ವಿಡಿಯೋ ಸಂದೇಶವೊಂದನ್ನು ಹರಿಬಿಟ್ಟಿರುವ ಕೇಜ್ರಿವಾಲ್‌, ನಾಳೆ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಹೇಳಿದ್ದು, ಸಾಧ್ಯವಾದರೆ ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಸವಾಲೆಸೆದಿದ್ದಾರೆ. ಒಬ್ಬರ ನಂತರ ಒಬ್ಬರನ್ನು ನೀವು ಜೈಲಿಗೆ ತಳ್ಳುತ್ತಿದ್ದೀರಿ. ಮಾನ್ಯ ಪ್ರಧಾನಮಂತ್ರಿಗಳೇ, ನೀವು ಆಪ್‌ ನಾಯಕರನ್ನು ಅರೆಸ್ಟ್‌ ಮಾಡಿಸುವ ಆಟ ಆಡುತ್ತಿದ್ದೀರಿ. ನಾಳೆ ಮಧ್ಯಾಹ್ನ ನಾನು ಪಕ್ಷದ ಎಲ್ಲಾ ಮುಖಂಡರು, ಶಾಸಕರು, ಸಂಸದರ ಜೊತೆಗೆ ಬಿಜೆಪಿ ಪ್ರಧಾನ ಕಚೇರಿಎ ಹೋಗುತ್ತಿದ್ದೇನೆ. ನಿಮಗೆ ಯಾರನ್ನು ಅರೆಸ್ಟ್‌ ಮಾಡಬೇಕು ಅಂತಾ ಅನಿಸುತ್ತದೆಯೋ ಅವರನ್ನು ಅರೆಸ್ಟ್‌ ಮಾಡಿ. ಇಲ್ಲ ಎಲ್ಲರನ್ನೂ ಅರೆಸ್ಟ್‌ ಮಾಡೋವುದಾದರೆ ಮಾಡಿ ಎಂದು ಹೇಳಿದ್ದಾರೆ.

ಆಪ್‌ ಪಕ್ಷದ ಹಿರಿಯ ನಾಯಕರಾದ ಸತ್ಯೇಂದ್ರ ಜೈನ್‌, ಮನೀಷ್‌ ಸಿಸೋಡಿಯಾ, ಅದಾದ ಬಳಿಕ ನನ್ನನ್ನು ಬಿಜೆಪಿ ಟಾರ್ಗೆಟ್‌ ಮಾಡಿ ಜೈಲಿಗೆ ಕಳುಹಿಸಿದೆ. ಇದೀಗ ಇತರ ನಾಯಕರೂ ಅವರ ಪಟ್ಟಿಯಲ್ಲಿದ್ದಾರೆ. ಬಿಜೆಪಿ ಹೀಗೆಲ್ಲಾ ಮಾಡಲು ಕಾರಣವೇನು? ಕಾರಣ ಇಷ್ಟೇ ನಾವು ದಿಲ್ಲಿಯಲ್ಲಿ ಜನರಿಗೆ ಉತ್ತಮ ಶಿಕ್ಷಣ, ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ಅದು ಅವರಿಂದ ಸಾಧ್ಯವಾಗಿರಲಿಲ್ಲ. ಹೀಗಾಗಿ ನಮ್ಮನ್ನು ಈ ರೀತಿಯಾಗಿ ಹತ್ತಿಕ್ಕುತ್ತಿದೆ ಎಂದು ಅವರು ಕಿಡಿ ಕಾಡಿದ್ದಾರೆ.

ಇದನ್ನೂ ಓದಿ:Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್‌ ಸಿಕ್ಕಿದೆ.

Continue Reading

ದೇಶ

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

Swati Maliwal case: ಬಿಭವ್‌ 2015ರಿಂದಲೂ ಕೇಜ್ರಿವಾಲ್‌ ಅವರ ಜೊತೆ ಕಾರ್ಯನಿರ್ವಹಿಸುತ್ತಿದ್ದಾನೆ. ನಾವು ಅವನ ಫೋನ್‌ನ ಪಾಸ್‌ವರ್ಡ್‌ ಕೇಳಿದಾಗ ಅದನ್ನು ಕೊಡಲು ಆತ ನಿರಾಕರಿಸಿದ್ದಾನೆ. ಅಲ್ಲದೇ ತನ್ನ ಪ್ರಭಾವ ಬಳಸಿ ಸಾಕ್ಷ್ಯ ನಾಶವನ್ನೂ ಮಾಡಿದ್ದಾನೆ. ಇವೆಲ್ಲಾ ವಿಚಾರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಆತನನ್ನು ಪೊಲೀಸ್‌ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು.

VISTARANEWS.COM


on

Swati Maliwal Case
Koo

ನವದೆಹಲಿ: ಆಮ್‌ ಆದ್ಮಿ ಪಕ್ಷದ (Aam Admi Party) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal case) ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ (Bibhav Kumar) ಅನ್ನು ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಕೋರ್ಟ್‌ ವಿಚಾರಣೆ ನಡೆಸಿತ್ತು. ಈ ವೇಳೆ ಬಿಭವ್‌ ಕುಮಾರ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.

ನಿನ್ನೆ ಬಿಭವ್‌ ಕುಮಾರ್‌ನನ್ನು ಅರೆಸ್ಟ್‌ ಮಾಡಿದ ಬಳಿಕ ಆತನನ್ನು ದಿಲ್ಲಿಯ ಹಜಾರಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಮುಖ್ಯಮಂತ್ರಿ ನಿವಾಸದಲ್ಲೇ ಸ್ವಾತಿ ಮೇಲೆ ಬಿಭವ್‌ ಕುಮಾರ್‌ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಮಾತ್ರವಲ್ಲದೇ ಆಕೆ ಧರಿಸಿದ್ದ ಬಟ್ಟೆಯನ್ನು ಎಳೆದಾಡಿ ಕ್ರೌರ್ಯ ಮೆರೆದಿದ್ದಾನೆ. ನಮಗೆ ಮುಖ್ಯಮಂತ್ರಿ ನಿವಾಸದ ಸಿಸಿಟಿವಿಯಿಂದ ಕೆಲವೊಂದು ಫೂಟೇಜ್‌ ಸಿಕ್ಕಿದೆ. ಬಿಭವ್‌ 2015ರಿಂದಲೂ ಕೇಜ್ರಿವಾಲ್‌ ಅವರ ಜೊತೆ ಕಾರ್ಯನಿರ್ವಹಿಸುತ್ತಿದ್ದಾನೆ. ನಾವು ಅವನ ಫೋನ್‌ನ ಪಾಸ್‌ವರ್ಡ್‌ ಕೇಳಿದಾಗ ಅದನ್ನು ಕೊಡಲು ಆತ ನಿರಾಕರಿಸಿದ್ದಾನೆ. ಅಲ್ಲದೇ ತನ್ನ ಪ್ರಭಾವ ಬಳಸಿ ಸಾಕ್ಷ್ಯ ನಾಶವನ್ನೂ ಮಾಡಿದ್ದಾನೆ. ಇವೆಲ್ಲಾ ವಿಚಾರಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಆತನನ್ನು ಪೊಲೀಸ್‌ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು.

ಕಳೆದ ವಾರ ಸ್ವಾತಿ ಮಲಿವಾಲ್‌ ಮೇಲೆ ಸಿಎಂ ನಿವಾಸದಲ್ಲೇ ಬಿಭವ್‌ ಕುಮಾರ್‌ ಹಲ್ಲೆ ನಡೆಸಿದ್ದ. ಇದಾದ ನಾಲ್ಕು ದಿನಗಲ ಬಳಿಕ ಸ್ವಾತಿ ಪೊಲೀಸರಿಗೆ ದೂರು ನೀಡಿದ್ದರು., ಸ್ವಾತಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ‘ನಾನು ಮುಖ್ಯಮಂತ್ರಿ ಅವರ ಭೇಟಿಗೆ ಹೋಗಿದ್ದಾಗ ಬಿಭವ್‌ ಅಡ್ಡಿಪಡಿಸಿದ್ದರು. ನನ್ನ ಜೊತೆ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದರು. ಪ್ರತಿರೋಧವೊಡ್ಡಿದಾಗ ಮುಖ, ಹೊಟ್ಟೆ, ಎದೆ ಮತ್ತು ದೇಹದ ಸೂಕ್ಷ್ಮ ಭಾಗಗಳ ಮೇಲೆ ಹಲವು ಬಾರಿ ತೀವ್ರ ಹಲ್ಲೆ ನಡೆಸಿದರು. ಈ ವೇಳೆ ಅವರ ಬಳಿ ನಾನು ಗೋಗರೆದು ತಪ್ಪಿಸಿಕೊಂಡು ಬಂದು ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದೆ’ ಎಂದು ಸ್ವಾತಿ ಹೇಳಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಬಿಭವ್‌ ಮೇಲೆ ಮಹಿಳೆಯ ಅತ್ಯಾಚಾರಕ್ಕೆ ಯತ್ನ, ಕ್ರಿಮಿನಲ್‌ ಉದ್ದೇಶ, ಉದ್ದೇಶಪೂರ್ವಕ ಹಲ್ಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

ಸ್ವಾತಿ ತಮ್ಮ ದೂರಿನಲ್ಲಿ ತಾವು ಆ ದಿನ ಅನುಭವಿಸಿದ ನೋವಿನ ಬಗ್ಗೆ ದಾಖಲಿಸಿದ್ದಾರೆ. ಬಿಭವ್‌ ಕುಮಾರ್‌ 7-8ರಿಂದ ಎಂಟು ಬಾರಿ ಕಪಾಳಕ್ಕೆ ಬಾರಿಸಿದ್ದಾನೆ. ನಾನು ನೆಲಕ್ಕೆ ಬಿದ್ದಾಗ ನಿರಂತರವಾಗಿ ನನ್ನ ಹೊಟ್ಟೆ, ಎದೆ, ಬೆನ್ನಿಗೆ ಒದ್ದಿದ್ದಾನೆ. ಅಲ್ಲದೇ ನನ್ನನ್ನು ಕಾಲುಗಳನ್ನು ಹಿಡಿದು ನೆಲದಲ್ಲಿ ಎಳೆದಾಡಿದ್ದು, ಬಟ್ಟೆಯನ್ನ ಎಳೆದಾಡಿದ್ದಾನೆ. ನಾನು ಅವತ್ತು ಋತುಮತಿಯಾಗಿದ್ದೆ. ಹೊಟ್ಟೆ ಬಹಳ ನೋಯುತ್ತಿದೆ ದಯವಿಟ್ಟು ಬಿಟ್ಟು ಬಿಡು ಎಂದರೂ ಕೇಳದೇ ನನ್ನ ಹೊಟ್ಟೆ ಕಾಲುಗಳಿಂದ ಒದ್ದಿದ್ದಾನೆ ಎಂದು ಸ್ವಾತಿ ಹೇಳಿದ್ದಾರೆ.

 

Continue Reading
Advertisement
Electric shock in udupi
ಉಡುಪಿ8 mins ago

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Anjali Murder Case
ಕರ್ನಾಟಕ16 mins ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

IT Raid
ದೇಶ18 mins ago

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

Suspicious Case in Mysuru
ಮೈಸೂರು38 mins ago

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

IPL 2024 The people paid revenge for the controversial post ashwini Puneeth Rajkumar
ಸ್ಯಾಂಡಲ್ ವುಡ್39 mins ago

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

Kattappa To Turn Modi Sathyaraj To Play Biopic On Prime Minister
ಬಾಲಿವುಡ್46 mins ago

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

yelahanka flyover
ಬೆಂಗಳೂರು1 hour ago

Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Bomb Threat
ಕರ್ನಾಟಕ1 hour ago

Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

Gold Rate Today
ಕರ್ನಾಟಕ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

viral video
ವೈರಲ್ ನ್ಯೂಸ್1 hour ago

Viral Video: ಅಬ್ಬಾ..ಹಸುಗಳ ಫೈಟ್‌ಗೆ ಬಾಲಕಿ ಅಪ್ಪಚ್ಚಿ! ಶಾಕಿಂಗ್‌ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌