Road Accident: ಕಾರು-ಕ್ರೂಸರ್ ನಡುವೆ ಅಪಘಾತ; ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ಪಲ್ಟಿ, ವಿದ್ಯಾರ್ಥಿಗಳಿಗೆ ಗಾಯ - Vistara News

ಕರ್ನಾಟಕ

Road Accident: ಕಾರು-ಕ್ರೂಸರ್ ನಡುವೆ ಅಪಘಾತ; ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ಪಲ್ಟಿ, ವಿದ್ಯಾರ್ಥಿಗಳಿಗೆ ಗಾಯ

Road Accident: ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿ ವಾಪಸ್‌ ಆಗುವಾಗ ಕ್ರೂಸರ್‌ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

VISTARANEWS.COM


on

Accident between car and cruiser; School students injured as cruiser overturns
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ಕಾರು ಹಾಗೂ ಕ್ರೂಸರ್ ನಡುವೆ ಡಿಕ್ಕಿಯಾಗಿದ್ದು, ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ವಾಹನ ಪಲ್ಟಿ ಆಗಿದೆ. ಅಪಘಾತದಿಂದಾಗಿ 10 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಲಬುರುಗಿ ಜಿಲ್ಲೆಯ ಅಫಜಲ್ಪುರದಿಂದ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಪ್ರವಾಸ ಮುಗಿಸಿ ತಡರಾತ್ರಿ ಅಫಜಲ್ಪುರಕ್ಕೆ ತೆರಳುವಾಗ ಕಾರು ಹಾಗೂ ಕ್ರೂಸರ್‌ ವಾಹನದ ನಡುವೆ ಅಪಘಾತವಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಸಲಹೆ ಮೇರೆಗೆ 22ಕೆಜಿ ತೂಕ ಇಳಿಸಿಕೊಂಡ ಕೇಂದ್ರ ಸಚಿವ; ಆಯುರ್ವೇದ ಪದ್ಧತಿ ಅನುಸರಿಸಿ ಡಯೆಟ್​

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು, ಶಿಕ್ಷಕರನ್ನು ಕೂಡಲೇ ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಈಗಾಗಲೇ ರೇವಣ್ಣ ಎಸ್‌ಐಟಿ ವಶದದಲ್ಲಿದ್ದಾರೆ. ಪ್ರಜ್ವಲ್‌ ಬಂಧನಕ್ಕೆ ಅಧಿಕಾರಿಗಳು ಹೊಂಚು ಹಾಕಿದ್ದಾರೆ. ಇತ್ತ ರೇವಣ್ಣ ಅವರ ಪತ್ನಿ ಭವಾನಿ ಅವರಿಗೂ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ(Hassan Pen Drive Case)ದಲ್ಲಿ ದಿನಕ್ಕೊಂಡು ಬೆಳವಣಿಗೆ ನಡೆಯುತ್ತದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್‌ ತಂದೆ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆಯನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ.

ಎರಡು ಕೇಸ್‌ನಲ್ಲಿ ಸಂತ್ರಸ್ತೆಯರು ಭವಾನಿ ರೇವಣ್ಣ ಅವರ ಹೆಸರು ಉಲ್ಲೇಖಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಮತ್ತು ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿದೆ. ಅದರಲ್ಲಿಯೂ ಅಪಹರಣ ಕೇಸ್‌ನಲ್ಲಿ ನೇರವಾಗಿ ಭವಾನಿ ರೇವಣ್ಣ ಅವರ ವಿರುದ್ಧ ಆರೋಪ ಮಾಡಲಾಗಿದೆ. ಭವಾನಿ ರೇವಣ್ಣ ಕರೆದರು ಎಂದು ಹೇಳಿಯೇ ಅಪಹರಣ ಮಾಡಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಕಿಡ್ನಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣ ಅವರಿಗೆ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ.

ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸುತ್ತಿರುವ ಎಸ್‌ಐಟಿ ಈಗಾಗಲೇ ಭವಾನಿ ರೇವಣ್ಣ ಅವರಿಗೆ ನೋಟಿಸ್‌ ನೀಡಿ ಮಾಹಿತಿ ಪಡೆದಿದೆ. ತನಿಖೆ ವೇಳೆ ಅವರ ವಿರುದ್ಧ ಸಾಕ್ಷಿ ಕಂಡು ಬಂದರೆ ಅವರೂ ಕಾನೂನಿನ ಕೈಗೆ ಸಿಲುಕಿಕೊಳ್ಳಲಿದ್ದಾರೆ. ಸದ್ಯ ಭವಾನಿ ರೇವಣ್ಣ ಅವರ ಪಾತ್ರದ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್ ರೇವಣ್ಣಗಾಗಿ ತೀವ್ರ ಹುಡುಕಾಟ

ಇತ್ತ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ ಅವರಿಗಾಗಿ ಎಸ್‌ಐಟಿ ತೀವ್ರ ಹುಡುಕಾಟ ನಡೆಸುತ್ತಿದೆ. ಬ್ಲೂ ಕಾರ್ನರ್ ನೋಟಿಸ್ ಜತೆಗೆ ರೆಡ್ ಕಾರ್ನರ್ ನೋಟಿಸ್‌ ಹೊರಡಿಸಲು ಸಿಬಿಐಗೆ ಎಸ್‌ಐಟಿ ಮನವಿ ಸಲ್ಲಿಸಿದೆ. ಪ್ರಜ್ವಲ್ ರೇವಣ್ಣ ಬಳಿ ಇರುವ ರಾಜತಾಂತ್ರಿಕ ಪಾಸ್‌ಪೋರ್ಟ್ ಸಹ ವಜಾಗೊಳಿಸಲು ಆಗ್ರಹಿಸಿದೆ. ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ನಿಂದ ಕೊನೆಯ ಬಾರಿ ಯಾವ ದೇಶಕ್ಕೆ ಟಿಕೇಟ್ ಬುಕ್ ಅಗಿದೆ ಎಂಬ ಮಾಹಿತಿಯನ್ನೂ ಎಸ್‌ಐಟಿ ಕಲೆ ಹಾಕುತ್ತಿದೆ. ಕೊನೆಯ ಬಾರಿ ಯಾವ ಏರ್‌ಪೋರ್ಟ್‌ ತಲುಪಿದ್ದಾರೆ ಎನ್ನುವ ಮಾಹಿತಿ ನೀಡಲು ರೆಡ್ ಕಾರ್ನರ್ ನೊಟೀಸ್ ನೀಡಿ ಮನವಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿಲು ಎಲ್ಲ ರೀತಿಯಿಂದಲೂ ಎಸ್‌ಐಟಿ ಪ್ರಯತ್ನ ಪಡುತ್ತಿದೆ. ಪ್ರಜ್ವಲ್ ರೇವಣ್ಣ ಅವರು ಆಪ್ತರ ಜತೆ ಸಂಪರ್ಕದಲ್ಲಿರುವ ಹಿನ್ನೆಲೆಯಲ್ಲಿ ಆಪ್ತರು ಹಾಗೂ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ. ರಾಜ್ಯದಲ್ಲಿ ಎರಡನೇ ಹಂತ ಮುಗಿದ ನಂತರ ಪ್ರಜ್ವಲ್‌ ಎಸ್‌ಐಟಿ ಮುಂದೆ ಶರಣಾಗುತ್ತಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ. ಅದಾಗ್ಯೂ ದೇಶದ ಪ್ರಮುಖ ಏರ್‌ಪೋರ್ಟ್‌ಗಳಲ್ಲಿ ಎಸ್‌ಐಟಿ ಅಧಿಕಾರಿಗಳು ಮೇಲೆ ನಿಗಾ ವಹಿಸಿದ್ದಾರೆ. ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ.

Continue Reading

ಕರ್ನಾಟಕ

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ಎಸ್‌ಐಟಿ ತೀವ್ರಗೊಳಿಸಿದೆ. ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಆದರೆ ಬೇಲ್‌ ಸಿಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ಎಸ್‌ಐಟಿ ತೀವ್ರಗೊಳಿಸಿದೆ. ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.

ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯು ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನೆಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Continue Reading

ಕರ್ನಾಟಕ

Dr.Nagareddy Patil: ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ (79) ನಿಧನ ಹೊಂದಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು.

VISTARANEWS.COM


on

Dr.Nagareddy Patil
Koo

ಕಲಬುರಗಿ: ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ (79) ನಿಧನ ಹೊಂದಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ (Dr.Nagareddy Patil) ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು.

ನಾಗರೆಡ್ಡಿ ಅವರ ಪುತ್ರ ಶಿವಶರಣರೆಡ್ಡಿ ಪಾಟೀಲ್‌ ಸದ್ಯ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ನಾಗರೆಡ್ಡಿ ಅವರು ಸಹೋದರ ಮತ್ತು ಸಹೋದರಿಯರು, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಇಂದು (ಮೇ 6) ಅಪರಾಹ್ನ 3.30ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

1983-85ರ ಅವಧಿಯಲ್ಲಿ ಬಿಜೆಪಿ ಶಾಸಕರಾಗಿದ್ದ ಡಾ.ನಾಗರೆಡ್ಡಿ ಬಳಿಕ ಜನತಾದಳ ಸೇಪರ್ಡೆಯಾಗಿದ್ದರು. ಬಳಿಕ ಕಾಂಗ್ರೆಸ್‌ ಸೇರಿದ್ದ ಅವರು ಸುಮಾರು ಎರಡು ದಶಕಗಳಿಂದ ಕಾಂಗ್ರೆಸನಲ್ಲೇ ಇದ್ದರು.

ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ವಾರದ ಹಿಂದೆ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದರು.

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು. 

ಇದನ್ನೂ ಓದಿ: A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ಹೆಲ್ಪ್‌ಲೈನ್‌ ತೆರೆದಿದೆ. ಸಂತ್ರಸ್ತೆಯರಿಗೆ ಕಾನೂನು ನೆರವು ಮತ್ತು ರಕ್ಷಣೆ ನೀಡಲು ಈ ಕ್ರಮ ಕೈಗೊಳ್ಳಲಾಗಿದ್ದು, ಹಲವು ಕರೆಗಳು ಬರುತ್ತಿವೆ ಎಂದು ಅದಿಕಾರಿಗಳು ತಿಳಿಸಿದ್ದಾರೆ. ಇದೀಗ ಹೆಲ್ಪ್‌ಲೈನ್‌ ನಂಬರ್‌ಗೆ ಕೆಲವು ಸಂತ್ರಸ್ತೆಯರು ನೇರ ಕರೆ ಮಾಡಿದರೆ, ಇನ್ನು ಕೆಲವರು ಸಂತ್ರಸ್ತೆಯರ ಪರವಾಗಿ ಮಾತನಾಡುತ್ತಿದ್ದಾರೆ. ಬರುತ್ತಿರುವ ಎಲ್ಲ ಕರೆಗಳನ್ನು ಸ್ವೀಕರಿಸಿ ಎಸ್‌ಐಟಿ ಅಧಿಕಾರಿಗಳ ತಂಡ ವಿವರಗಳನ್ನು ಕಲೆ ಹಾಕುತ್ತಿದೆ. ಸಂತ್ರಸ್ತೆಯರ ವಿಳಾಸ ಸಂಗ್ರಹಿಸಲಾಗುತ್ತದೆ. ಬಳಿಕ ಎಸ್‌ಐಟಿ ತಂಡ ಅವರನ್ನು ನೇರವಾಗಿ ಭೇಟಿಯಾಗಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದಲ್ಲಿ ಈಗಾಗಲೇ ಶಾಸಕ, ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಬಂಧನವಾಗಿದೆ. ಪ್ರಕರಣದಲ್ಲಿ ಇನ್ನೂ ಹಲವು ಸಂತ್ರಸ್ತೆಯರು ಇರುವುದರಿಂದ ಅವರಿಗೆ ಕಾನೂನು ನೆರವು ಮತ್ತು ರಕ್ಷಣೆ ನೀಡಲು ಎಸ್‌ಐಟಿ (ವಿಶೇಷ ತನಿಖಾ ತಂಡ) ಹೆಲ್ಪ್‌ಲೈನ್‌ (Help Line) ತೆರೆದಿದೆ. ಇದೀಗ ಈ ಹೆಲ್ಪ್‌ಲೈನ್‌ ನಂಬರ್‌ಗೆ ಹಲವು ಕರೆಗಳು ಬರುತ್ತಿವೆ ಎಂದು ಮೂಲಗಳು ತಿಳಿಸಿವೆ.

ಕೇಸ್‌ ಸಂಬಂಧ ಈಗಾಗಲೇ ಎಸ್‌ಐಟಿ ಸಂತ್ರಸ್ತೆಯನ್ನು ಸಂಪರ್ಕಿಸಲು ಮುಂದಾಗಿದೆ. ಒಂಭತ್ತು ಮಂದಿ ಸಂತ್ರಸ್ತೆಯರನ್ನ ಸಂಪರ್ಕಿಸಿ ಮಾಹಿತಿ ಕಲೆ ಹಾಕಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಹೆಲ್ಪ್‌ಲೈನ್‌ ಅನ್ನೂ ತೆರೆಯಲಾಗಿದೆ. ಇದೀಗ ಹೆಲ್ಪ್‌ಲೈನ್‌ ನಂಬರ್‌ಗೆ ಕೆಲವು ಸಂತ್ರಸ್ತೆಯರು ನೇರ ಕರೆ ಮಾಡಿದರೆ, ಇನ್ನು ಕೆಲವರು ಸಂತ್ರಸ್ತೆಯರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬರುತ್ತಿರುವ ಎಲ್ಲ ಕರೆಗಳನ್ನು ಸ್ವೀಕರಿಸಿ ಎಸ್‌ಐಟಿ ಅಧಿಕಾರಿಗಳ ತಂಡ ವಿವರಗಳನ್ನು ಕಲೆ ಹಾಕುತ್ತಿದೆ. ಸಂತ್ರಸ್ತೆಯರ ವಿಳಾಸ ಸಂಗ್ರಹಿಸಲಾಗುತ್ತದೆ. ಬಳಿಕ ಎಸ್‌ಐಟಿ ತಂಡ ಅವರನ್ನು ನೇರವಾಗಿ ಭೇಟಿಯಾಗಲಿದೆ. ಬರುತ್ತಿರುವ ಕಾಲ್‌ಗಳ ಪೈಕಿ ಯಾವುದು ಹುಸಿ ಕರೆ, ಯಾವುದು ನಿಜವಾದ ಕರೆ ಎನ್ನುವುದನ್ನು ಪರಿಶೀಲಿಸಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅದಿಕಾರಿಗಳು ವಿವರಿಸಿದ್ದಾರೆ.

ಹೆಲ್ಪ್‌ಲೈನ್‌ ನಂಬರ್‌ ಇದು

ತನಿಖೆ ವೇಳೆ ಘಟನೆಗೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರಿರುವುದು ಗೊತ್ತಾಗಿದ್ದು, ಯಾರೇ ಸಂತ್ರಸ್ತರು ಅಥವಾ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನಿನ ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾದಲ್ಲಿ ಹೆಲ್ಪ್‌ಲೈನ್‌ ನಂ. 6360938947ಕ್ಕೆ ಕರೆ ಮಾಡಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ಎಸ್‌ಐಟಿ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿತ್ತು.

ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ

ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆ್ಯಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ವಿಡಿಯೋ ಹಂಚಿಕೆ ಸಂತ್ರಸ್ತ ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದೆ.

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿ ನಾಚಿಕೆ, ಹಿಂಜರಿಕೆ, ಅವಮಾನ ಪಡಬೇಕೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು. ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರ್‌, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂದು ಸಿಐಡಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

Continue Reading
Advertisement
ED Raid
ದೇಶ3 mins ago

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

Mahanati Show Gagana Comedy About Rishi actor
ಕಿರುತೆರೆ13 mins ago

Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

amethi unrest
ದೇಶ28 mins ago

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Paris Olympics
ಕ್ರೀಡೆ1 hour ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Prajwal Revanna Case
ಕರ್ನಾಟಕ1 hour ago

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Boat Capsize
ವೈರಲ್ ನ್ಯೂಸ್1 hour ago

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

Megha Dhade bigg boss marathi winner crptic post about rahul gandhi
ಸಿನಿಮಾ2 hours ago

Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

Prajwal Revanna Case
ಕರ್ನಾಟಕ2 hours ago

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Sunil Narine
ಕ್ರೀಡೆ2 hours ago

Sunil Narine: ಅತ್ಯಧಿಕ ಸಿಕ್ಸರ್​ ಸಾಧಕರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನೀಲ್​ ನರೈನ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ15 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ17 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ17 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌