JDS Politics: ಲಕ್ಷ್ಮೀನರಸಿಂಹ ಸ್ವಾಮಿ‌ ದೇವಾಲಯದ ಸಂಪೂರ್ಣ ಉಸ್ತುವಾರಿ ಹೊತ್ತ ಪ್ರಜ್ವಲ್‌ ರೇವಣ್ಣ; ಮುಂದುವರಿದ ಕೈ-ದಳ ಜಟಾಪಟಿ - Vistara News

ಕರ್ನಾಟಕ

JDS Politics: ಲಕ್ಷ್ಮೀನರಸಿಂಹ ಸ್ವಾಮಿ‌ ದೇವಾಲಯದ ಸಂಪೂರ್ಣ ಉಸ್ತುವಾರಿ ಹೊತ್ತ ಪ್ರಜ್ವಲ್‌ ರೇವಣ್ಣ; ಮುಂದುವರಿದ ಕೈ-ದಳ ಜಟಾಪಟಿ

JDS Politics: ಲಕ್ಷ್ಮೀನರಸಿಂಹ ಸ್ವಾಮಿ‌ ದೇವಾಲಯದಲ್ಲಿ ಪ್ರಸಾದ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ತಗಾದೆ ತಗೆದಿದ್ದರು. ಹಲವಾರು ವರ್ಷಗಳಿಂದ ರೇವಣ್ಣ ಕುಟುಂಬದವರೇ ಪ್ರಸಾದ ವಿತರಣೆಯನ್ನು ಮಾಡುತ್ತಿದ್ದು, ತಮಗೂ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದರು. ಬಳಿಕ ಯಾರಿಗೂ ಅವಕಾಶ ಇಲ್ಲ ಎಂದು ತಹಸೀಲ್ದಾರ್‌ ಸ್ಪಷ್ಟನೆ ನೀಡಿದ್ದರು. ಮಂಗಳವಾರ ಪ್ರಜ್ವಲ್‌ ರೇವಣ್ಣ ಅವರು ದೇವಸ್ಥಾನದ ಸಂಪೂರ್ಣ ಉಸ್ತುವಾರಿ ವಹಿಸಿಕೊಂಡಿದ್ದು, ಜಟಾಪಟಿ ಮುಂದುವರಿದಿದೆ.

VISTARANEWS.COM


on

JDS Politics: Prajwal Revanna takes full charge of Lakshminarasimha Swamy Temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಹೊಳೆನರಸೀಪುರದ ಇತಿಹಾಸ ಪ್ರಸಿದ್ಧ ಲಕ್ಷ್ಮೀನರಸಿಂಹ ಸ್ವಾಮಿ‌ ದೇವಾಲಯದಲ್ಲಿ ಸೋಮವಾರ ಪ್ರಸಾದ ವಿನಿಯೋಗ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್‌ ಕಾರ್ಯಕರ್ತರ (JDS Politics) ನಡುವೆ ನಡೆದಿದ್ದ ಜಟಾಪಟಿ ಮಂಗಳವಾರವೂ ಮುಂದುವರಿದಿದೆ. ಇದನ್ನು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಕುಟುಂಬ ಈಗ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಇದರ ಪರಿಣಾಮ ಸಂಸದ ಪ್ರಜ್ವಲ್ ರೇವಣ್ಣ ಅವರು ದೇವಾಲಯದ ಸಂಪೂರ್ಣ ಉಸ್ತುವಾರಿಯನ್ನೇ ವಹಿಸಿಕೊಂಡಿದ್ದಾರೆ.

ಪ್ರಸಾದ ವಿತರಣೆಗೆ ಸಂಬಂಧಪಟ್ಟಂತೆ ಸೋಮವಾರ ಜೆಡಿಎಸ್‌ – ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟಗಳು ನಡೆದಿದ್ದವು. ಪ್ರತಿ ವರ್ಷವೂ ರೇವಣ್ಣ ಕುಟುಂಬದವರೇ ಪ್ರಸಾದ ವಿತರಣೆಯನ್ನು ಮಾಡುತ್ತಾರೆ. ಹೀಗಾಗಿ ಈ ಭಾರಿ ತಮಗೂ ಪ್ರಸಾದ ವಿನಿಮಯಕ್ಕೆ ಅವಕಾಶ ಕೊಡಬೇಕು ಎಂಬುದು ಕಾಂಗ್ರೆಸ್ಸಿಗರ ವಾದವಾಗಿತ್ತು. ಈ ಸಂಬಂಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು.

JDS Politics: Prajwal Revanna takes full charge of Lakshminarasimha Swamy Temple
ಲಕ್ಷ್ಮೀನರಸಿಂಹ ಸ್ವಾಮಿ‌ ದೇವಾಲಯ

ಕೊನೆಗೆ ತಹಸೀಲ್ದಾರ್‌ ಮಧ್ಯಪ್ರವೇಶ ಮಾಡಿ, ಈ ಹಿಂದಿನಿಂದಲೂ ಯಾವುದೇ ಪಕ್ಷದ ಹೆಸರಿನಲ್ಲಿ ಪ್ರಸಾದ ವಿನಿಯೋಗ ನಡೆದಿಲ್ಲ. ಈ ವರ್ಷ ಕೂಡ ಯಾರ ವೈಯಕ್ತಿಕ ಹೆಸರು ಅಥವಾ ಪಕ್ಷದ ಹೆಸರಿನಲ್ಲಿ ಅನ್ನ ಸಂತರ್ಪಣೆ ಆಗುವುದಿಲ್ಲ. ಆದರೆ, ಮುಜರಾಯಿ ಇಲಾಖೆಗೆ ಯಾರು ಬೇಕಾದರೂ ದಾನ ಕೊಡಬಹುದು. ದಾನಿಗಳು ದಿನಸಿ ಕೊಟ್ಟರೆ ಅದನ್ನು ಅನ್ನ ಸಂತರ್ಪಣೆಗೆ ಬಳಸಲಾಗುತ್ತದೆ. ದೇವಾಲಯದ ಆವರಣದಲ್ಲಿ ಯಾರಿಗೂ ಪ್ರಸಾದ ವಿನಿಯೋಗಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಬಳಿಕ ಪರಿಸ್ಥಿತಿ ಶಾಂತವಾಗಿತ್ತು. ಆದರೆ, ಈಗ ಮಂಗಳವಾರ ಬೆಳಗ್ಗೆಯೇ ಭೇಟಿ ನೀಡಿರುವ ಸಂಸದ ಪ್ರಜ್ವಲ್‌ ರೇವಣ್ಣ, ದೇವಸ್ಥಾನದ ಸಂಪೂರ್ಣ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

ಪ್ರಸಾದ ವಿತರಣೆ, ಭಕ್ತರಿಗೆ ನೀರು ವಿತರಣೆ ಸೇರಿದಂತೆ ಎಲ್ಲವನ್ನೂ ಮಾರ್ಗದರ್ಶನ ಮಾಡುತ್ತಿರುವ ಪ್ರಜ್ವಲ್‌ ರೇವಣ್ಣ, ಸರತಿ ಸಾಲಿನ ಬಗ್ಗೆ ಸೂಚನೆ ನೀಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಮತ್ತು ತಾಲೂಕು ಆಡಳಿತಕ್ಕೆ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ. ಖುದ್ದು ಸ್ಥಳದಲ್ಲಿ ನಿಂತು ಟೇಬಲ್ ಹಾಕಿಸಿ ವ್ಯವಸ್ಥೆ ಮಾಡಿಸಿದ್ದಾರೆ. ಈಗ ಪೊಲೀಸ್‌ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ದೇವರ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: JDS Politics: 4ನೇ ಹಂತದ ಪಂಚರತ್ನ ವೇಳಾಪಟ್ಟಿ ಘೋಷಣೆ: ಹಾಸನ ವಿಧಾನಸಭಾ ಕ್ಷೇತ್ರ ಮಿಸ್ಸಿಂಗ್‌!

ರೇವಣ್ಣ ದಂಪತಿಯಿಂದ ಮುಂಜಾನೆಯೇ ಪೂಜೆ

ಲಕ್ಷ್ಮೀನರಸಿಂಹ ಸ್ವಾಮಿ ರಥೋತ್ಸವ ಹಿನ್ನೆಲೆಯಲ್ಲಿ ಮಾಜಿ ಸಚಿವ ರೇವಣ್ಣ ಮತ್ತವರ ಪತ್ನಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ರಥೋತ್ಸವಕ್ಕೂ ಮುನ್ನವೇ ಪೂಜೆ ನೆರವೇರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Rain News : ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 8 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮೇ 22ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ (rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರ ಕೂಡಿದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 29 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

8 ಜಿಲ್ಲೆಗಳಲ್ಲಿ ಮಳೆ ರುದ್ರ ನರ್ತನ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದಷ್ಟು ಈ ಭಾಗದ ಜನರು ಮರದಡಿ ನಿಲ್ಲುವುದು, ಮಳೆ ಸಮಯದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

Rameshwaram Cafe Blast: ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ಸಹೋದರರನ್ನುಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆ ನಡೆಸಲು ಇಬ್ಬರು ಆರೋಪಿಗಳನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ.

VISTARANEWS.COM


on

Rameshwaram Cafe Blast
Koo

ಹುಬ್ಬಳ್ಳಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ (Rameshwaram Cafe Blast) ಸಂಬಂಧ ನಗರದಲ್ಲಿ ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ವಿಚಾರಣೆಗೆ ಗುರಿಪಡಿಸಿದ ನಂತರ ಇಬ್ಬರು ಸಹೋದರರನ್ನು ವಶಕ್ಕೆ ಪಡೆಯಲಾಗಿದೆ.

ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶೋಯಬ್ ಮಿರ್ಜಾ ಹಾಗೂ ಈತನ ಸಹೋದರ ಅಜೀಜ್ ಅಹಮದ್ ಮಿರ್ಜಾ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ | Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ (Rameshwaram Cafe Blast) ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆ ಚುರುಕುಗೊಳಿಸಿದ್ದು, ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Continue Reading

ಬೆಂಗಳೂರು

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

Hajj Pilgrimage: ಬೆಂಗಳೂರಿನ ಹೆಗಡೆ ನಗರದ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಜ್ ಯಾತ್ರೆಗೆ ತೆರಳುತ್ತಿರುವವರಿಗೆ ಬೀಳ್ಕೊಡುಗೆ ನೀಡಿ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

VISTARANEWS.COM


on

Hajj pilgrimage
Koo

ಬೆಂಗಳೂರು: ರಾಜ್ಯದಿಂದ ಹಜ್‌ ಯಾತ್ರೆಗೆ (Hajj Pilgrimage) ತೆರಳುತ್ತಿದ್ದ ಯಾತ್ರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ನಗರದಲ್ಲಿ ಮಂಗಳವಾರ ಬೀಳ್ಕೊಟ್ಟರು. ಹೆಗಡೆ ನಗರದ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಜ್ ಯಾತ್ರೆಗೆ ತೆರಳುತ್ತಿರುವವರಿಗೆ ಬೀಳ್ಕೊಡುಗೆ ನೀಡಿ ಸಿಎಂ ಶುಭ ಹಾರೈಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 10,168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದಂತೆ ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಭೌದ್ಧ, ಸಿಖ್ ಧರ್ಮದವರೆಲ್ಲಾ ಒಂದು ತಾಯಿಯ ಮಕ್ಕಳಂತೆ ಇರಬೇಕು. ಅಂಥ ವಾತಾವರಣ ನಿರ್ಮಾಣವಾಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಬಂದು ಎಲ್ಲರೂ ಸಬಲರಾಗಬೇಕು. ಅದಕ್ಕೆ ಹಜ್ ಯಾತ್ರಿಗಳು ಪ್ರಾರ್ಥಿಸಲಿ ಎಂದರು ಹೇಳಿದರು.

ಪ್ರಸ್ತುತ ಆರ್ಥಿಕ ವರ್ಷದಲ್ಲಿ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆ ಬರಲಿ, ನಾಡು ಸಮೃದ್ಧವಾಗಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ಯಾತ್ರಾರ್ಥಿಗಳಲ್ಲಿ ಮನವಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ

ಮಂಗಳೂರು ಮತ್ತು ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ. ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದೇ ಪ್ರತಿ ದಿನ ಹಜ್‌ಗೆ ತೆರಳುವವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸಚಿವ ಜಮೀರ್ ಅಹಮ್ಮದ್ ಅವರನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಇದನ್ನೂ ಓದಿ | CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಈ ವೇಳೆ ಸಚಿವರಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಶಾಸಕರು, ಮುಖಂಡರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

Meta: ಮೆಟಾ ಸಂಸ್ಥೆಯಿಂದ ಮಂಗಳವಾರ ಬೆಂಗಳೂರು ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’(ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮ ಜರುಗಿತು. ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು.

VISTARANEWS.COM


on

Talking Digital Safety for Teens programme by Meta in Bengaluru
Koo

ಬೆಂಗಳೂರು: ಯುವಜನರ ಯೋಗಕ್ಷೇಮದ ಕುರಿತು ಮೆಟಾ (Meta) ಸಂಸ್ಥೆಯಿಂದ ಮಂಗಳವಾರ ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’ (ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು. ಮೆಟಾದ ಪ್ಲಾಟ್ ಫಾರ್ಮ್‌ಗಳನ್ನು ಒಳಗೊಂಡಂತೆ ಹದಿಹರೆಯದ ಮಕ್ಕಳ ಸ್ಮಾರ್ಟ್‌ಫೋನ್‌ ಮತ್ತು ಸಾಧನಗಳ ಬಳಕೆಯನ್ನು ಆತ್ಮವಿಶ್ವಾಸದಿಂದ ನಿರ್ವಹಣೆ ಮಾಡಲು ಸಾಧ್ಯವಾಗುವಂತೆ ಪೋಷಕರನ್ನು ಸಜ್ಜುಗೊಳಿಸುವ ಅನೇಕ ವಿಧಾನಗಳನ್ನು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಕಾರ್ಯಕ್ರಮದಲ್ಲಿ ಹದಿಹರೆಯದ ಮಕ್ಕಳ ಸಾಮಾಜಿಕ ಮಾಧ್ಯಮಗಳ ಬಳಕೆ ಮತ್ತು ಇತರ ಆನ್‌ಲೈನ್ ಟ್ರೆಂಡ್‌ಗಳ ಬಳಕೆ ಕುರಿತು ಪೋಷಕರು ಮತ್ತು ಶಿಕ್ಷಕರ ಒಳನೋಟಗಳನ್ನು ಈ ವೇಳೆ ಸಂಗ್ರಹಿಸಲಾಯಿತು. ಡಿಜಿಟಲ್ ಸುರಕ್ಷತಾ ಉಪಕ್ರಮಗಳ ಕುರಿತು ಹೆಚ್ಚು ತಿಳಿದುಕೊಳ್ಳಲು ಮತ್ತು ಅವರ ಹದಿಹರೆಯದ ಮಕ್ಕಳ ಸಾಮಾಜಿಕ ಜಾಲತಾಣಗಳ ಪ್ರಯಾಣದ ಅನುಭವಗಳ ಕುರಿತು ಚರ್ಚಿಸಲು ನಗರದ ಆಯ್ದ 10-15 ಶಾಲೆಗಳ ಆಯ್ದ ಶಿಕ್ಷಕರು ಮತ್ತು ಪೋಷಕರು ಪಾಲ್ಗೊಂಡಿದ್ದರು.

ಈ ವೇಳೆ ಇನ್‌ಸ್ಟಾಗ್ರಾಮ್‌ನ ಭಾರತದ ಸಾರ್ವಜನಿಕ ನೀತಿಯ ನಿರ್ದೇಶಕಿ ನತಾಶಾ ಜೋಗ್ ಮಾತನಾಡಿ, ನಮ್ಮ ಯುವ ಬಳಕೆದಾರರು ಆನ್‌ಲೈನ್‌ನಲ್ಲಿ ಅರ್ಥಪೂರ್ಣವಾಗಿ ಸಮಯವನ್ನು ಕಳೆಯುವುದರ ಜತೆಗೆ ವಿಶೇಷವಾಗಿ ಅವರು ಇಷ್ಟಪಡುವ ಎಲ್ಲಾ ಕೆಲಸಗಳನ್ನು ಮಾಡುತ್ತಲೇ ಸುರಕ್ಷಿತವಾಗಿರುವ ಅಗತ್ಯವನ್ನು ನಾವು ಗಮನಿಸಿದ್ದೇವೆ.

ಭಾರತದಾದ್ಯಂತ ಈ ಚರ್ಚಾ ಸರಣಿಯ ಮೂಲಕ ನಾವು ಶಿಕ್ಷಕರೊಂದಿಗೆ ಸಂವಹನ ನಡೆಸುತ್ತಲೇ, ಕುಟುಂಬದ ಆನ್‌ಲೈನ್ ಅಭ್ಯಾಸಗಳನ್ನು ನಿರ್ವಹಿಸಲು ಪೋಷಕರನ್ನು ಸಜ್ಜುಗೊಳಿಸುವ ದಾರಿಗಳನ್ನು ಹುಡುಕುತ್ತಿದ್ದೇವೆ. ಆ ಮೂಲಕ ಅವರ ಪಾಲಿಗೆ ಉತ್ತಮ ಎನಿಸುವ ರಕ್ಷಣಾ ವಿಧಾನ ಒದಗಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಬಳಕೆದಾರರ ಸುರಕ್ಷತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಮೆಟಾ ಕಳೆದ ವರ್ಷ ‘ಡಿಜಿಟಲ್ ಸುರಕ್ಷಾ ಶೃಂಗಸಭೆ’ ಅನ್ನು ನಡೆಸಿತ್ತು. ಆ ಮೂಲಕ ಯುವಜನತೆ ಮತ್ತು ಮಹಿಳೆಯರಿಗೆ ಸುರಕ್ಷಿತ ಮತ್ತು ಸಮತೋಲಿತ ಆನ್‌ಲೈನ್ ಅನುಭವವನ್ನು ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಇದರ ಜತೆಗೆ ಮೆಟಾ, ಆನ್‌ಲೈನ್ ಸುರಕ್ಷತೆ ಮತ್ತು ಡಿಜಿಟಲ್ ಪೌರತ್ವ ಕುರಿತು ಮಾಹಿತಿ, ಜ್ಞಾನ ಮತ್ತು ಶಿಕ್ಷಣದ ಬಗ್ಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸಬಲೀಕರಣಗೊಳಿಸಲು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ (ಐಟಿಬಿಟಿ) ಇಲಾಖೆಯೊಂದಿಗೆ ಎರಡು ವರ್ಷಗಳ ಪಾಲುದಾರಿಕೆಯನ್ನು ಪ್ರಕಟಿಸಿದೆ.

ಕಳೆದ ಮೂರು ವರ್ಷಗಳಲ್ಲಿ, ಆನ್‌ಲೈನ್ ಸುರಕ್ಷತೆಯನ್ನು ಉತ್ತೇಜಿಸಲು ಮೆಟಾ 50ಕ್ಕೂ ಹೆಚ್ಚು ಸುರಕ್ಷತಾ ಪರಿಕರಗಳು ಮತ್ತು ಫೀಚರ್‌ಗಳನ್ನು ಬಿಡುಗಡೆ ಮಾಡಿದೆ. ಹದಿಹರೆಯದವರ ಸುರಕ್ಷತೆಗಾಗಿ ‘ನೈಟ್ ನಡ್ಜಸ್’ ಎಂಬ ಫೀಚರನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಇದು ತಡರಾತ್ರಿಯಲ್ಲಿ ಇನ್ ಸ್ಟಾಗ್ರಾಮ್ ಆಪ್ ಬಳಸುವಾಗ ಆ ಆಪ್ ಅನ್ನು ಷಟ್‌ಡೌನ್ ಮಾಡಲು ಬಳಕೆದಾರರಿಗೆ ಸೂಚಿಸುತ್ತದೆ. ಜತೆಗೆ ‘ಕ್ವೈಟ್ ಮೋಡ್’ ಫೀಚರ್ ಕೂಡ ಇದ್ದು, ಇದು ಹದಿಹರೆಯದ ಬಳಕೆದಾರರಿಗೆ ತಾವು ಆಪ್‌ನಲ್ಲಿ ಕಳೆಯುವ ಸಮಯದ ಮೇಲೆ ಮತ್ತು ಅವರು ಏನು ನೋಡುತ್ತಾರೆ ಎಂಬುದರ ಮೇಲೆ ಹೆಚ್ಚಿನ ನಿಯಂತ್ರಣವನ್ನು ಹೊಂದಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

ಇದಲ್ಲದೆ, ಇನ್ಸ್ಟಾಗ್ರಾಮ್‌ನ ಪೇರೆಂಟಲ್ ಸೂಪರ್ ವಿಷನ್ ಫೀಚರ್ (ಪೋಷಕರ ಮೇಲ್ವಿಚಾರಣಾ ವೈಶಿಷ್ಟ್ಯ) ಮೂಲಕ ಪೋಷಕರು ತಮ್ಮ ಮಕ್ಕಳು ಫಾಲೋ ಮಾಡುವ ಖಾತೆಗಳು, ಅವರ ಮಕ್ಕಳನ್ನು ಫಾಲೋ ಮಾಡುವ ಖಾತೆಗಳನ್ನು ವೀಕ್ಷಿಸಬಹುದು ಮತ್ತು ಅವರ ಆನ್‌ಲೈನ್ ಬಳಕೆಯಲ್ಲಿ ತಮ್ಮನ್ನೂ ಹೆಚ್ಚು ತೊಡಗಿಸಿಕೊಳ್ಳಬಹುದು. ಮೆಟಾದ ‘ಫ್ಯಾಮಿಲಿ ಸೆಂಟರ್’ ಫೀಚರ್ ಪ್ಲಾಟ್‌ಫಾರ್ಮ್‌ಗಳನ್ನು ಸುರಕ್ಷಿತವಾಗಿ ಬಳಸುವುದು ಹೇಗೆ ಎಂಬ ಮಾಹಿತಿಯನ್ನು ಹುಡುಕಲು ಪೋಷಕರು ಮತ್ತು ಹದಿಹರೆಯದವರಿಗೆ ಸಹ ಮಾಹಿತಿ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
nanna desha nanna dani column ambedkar jinnah
ಅಂಕಣ10 mins ago

ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Health Tips Kannada
ಆರೋಗ್ಯ45 mins ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ45 mins ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ2 hours ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

Mobile
ದೇಶ7 hours ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Rameshwaram Cafe Blast
ಕರ್ನಾಟಕ7 hours ago

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

LPL 2024
ಪ್ರಮುಖ ಸುದ್ದಿ8 hours ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Hajj pilgrimage
ಬೆಂಗಳೂರು8 hours ago

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ45 mins ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ13 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು18 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು20 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌