2nd PU Exam 2023 : ಇಂದಿನಿಂದ 1,109 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ, ಹಿಜಾಬ್‌ಗೆ ಅವಕಾಶ ಇಲ್ಲವೇ ಇಲ್ಲ - Vistara News

ಕರ್ನಾಟಕ

2nd PU Exam 2023 : ಇಂದಿನಿಂದ 1,109 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ, ಹಿಜಾಬ್‌ಗೆ ಅವಕಾಶ ಇಲ್ಲವೇ ಇಲ್ಲ

2022-23ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ (2nd PU Exam 2023) ಮಾರ್ಚ್‌ 9ರಿಂದ 29ರವರೆಗೆ ರಾಜ್ಯದ 1,109 ಕೇಂದ್ರಗಳಲ್ಲಿ ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ.

VISTARANEWS.COM


on

PU Exam
ಪ್ರಾತಿನಿಧಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಇಂದಿನಿಂದ (ಮಾರ್ಚ್‌ 9) ದ್ವಿತೀಯ ಪಿಯುಸಿ ಪರೀಕ್ಷೆ (2nd PU Exam 2023) ಆರಂಭವಾಗಲಿದೆ. ಇದಕ್ಕಾಗಿ ಎಲ್ಲ 1109 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ ಎಂದು ರಾಜ್ಯದ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಪರೀಕ್ಷೆ ಮಾರ್ಚ್‌ 9ರಿಂದ ಮಾರ್ಚ್‌ 29ರವರೆಗೆ ನಡೆಯಲಿದ್ದು, ಈ ಮೊದಲೇ ತಿಳಿಸಿದಂತೆ ಹಿಜಾಬ್‌ ಧರಿಸಿ ಬಂದವರಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯೂ ಸೇರಿದಂತೆ ಎಲ್ಲ ರೀತಿಯ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ದೋಷಮುಕ್ತವಾಗಿ ಪರೀಕ್ಷೆ ನಡೆಯಲಿದೆ. ಯಾವುದೇ ಊಹಾಪೋಹ ವದಂತಿಗಳಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಿವಿಗೊಡಬಾರದು ಎಂದು ಶಿಕ್ಷಣ ಇಲಾಖೆ ಮನವಿ ಮಾಡಿದೆ.

ದ್ವಿತೀಯ ಪಿಯು ಪರೀಕ್ಷೆ: ಪ್ರಮುಖ ಸೂಚನೆಗಳು

726195 ವಿದ್ಯಾರ್ಥಿಗಳಿಗೆ ಪರೀಕ್ಷೆ

ರಾಜ್ಯದ 5,716 ಕಾಲೇಜುಗಳ ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರ ಪೈಕಿ 6,29,760 ಮಂದಿ ರೆಗ್ಯುಲರ್‌ ವಿದ್ಯಾರ್ಥಿಗಳಾಗಿದ್ದರೆ, 25,847 ಮಂದಿ ಖಾಸಗಿ ಅಭ್ಯರ್ಥಿಗಳಾಗಿದ್ದಾರೆ. 70,588 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು. ರೆಗ್ಯುಲರ್‌ ವಿದ್ಯಾರ್ಥಿಗಳ ಪೈಕಿ 3,04,715 ಮಂದಿ ಹುಡುಗರಾದರೆ, 3,25,045 ಮಂದಿ ಹುಡುಗಿಯರು. ಒಟ್ಟು 1,109 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ?

ಪ್ರತಿ ಜಿಲ್ಲೆಯಲ್ಲಿ ಸರಾಸರಿ 25 ಪರೀಕ್ಷಾ ಕೇಂದ್ರಗಳಿವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 156 ಕೇಂದ್ರಗಳಿದ್ದರೆ, ರಾಮನಗರದಲ್ಲಿ ಅತಿ ಕಡಿಮೆ ಅಂದರೆ 13 ಕೇಂದ್ರಗಳಿವೆ. ಬೆಂಗಳೂರಿನಲ್ಲಿ 1.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.

ಕೇಂದ್ರಕ್ಕೆ ಒಬ್ಬರಂತೆ ಸಹಮುಖ್ಯ ಅಧೀಕ್ಷಕರು, ಜಿಲ್ಲಾ ಜಾಗ್ರತ ದಳ – 64, ತಾಲೂಕು ಜಾಗ್ರತ ದಳ‌ – 525, ವಿಶೇಷ ಜಾಗ್ರತ ದಳ – 2373 ಸಿಬ್ಬಂದಿ ಕಾರ್ಯಾಚರಿಸಲಿದ್ದಾರೆ.

ಮಾರ್ಚ್​ 9ರಿಂದ 29ರವರೆಗೆ ಪರೀಕ್ಷೆ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 9, 2023ರಿಂದ ಮಾರ್ಚ್ 29, 2023ರವರೆಗೆ ನಡೆಯಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಮ್ಮ ಹಾಲ್ ಟಿಕೆಟ್‌ಗಳನ್ನು ಕೊಂಡೊಯ್ಯಬೇಕು. ಪಿಯು ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಪರೀಕ್ಷೆಗೆ ಕೈಗೊಂಡಿರುವ ಭದ್ರತಾ ಕ್ರಮಗಳು ಏನೇನು?

-ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
-ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ಬಂದ್
-ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ
-ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ
-ಹಿಂದಿನ ವರ್ಷಗಳಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ
-ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳ ನಿಷೇಧ
-ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗುತ್ತದೆ.
-ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ಸೈಬರ್ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಇನ್ನಿತರ ತಂಡಗಳು ವಿಶೇಷ ನಿಗಾ
-ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಲ್ಲಿ 24/7 ಪೊಲೀಸ್ ಭದ್ರತೆ
-ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧ
-ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಬೇಸಿಕ್ ಮೊಬೈಲ್‌ ಫೋನ್ ಇಟ್ಟುಕೊಳ್ಳಬಹುದು.
– ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್‌ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ.
– ವಿಶೇಷ ಚೇತನ ಮಕ್ಕಳಿಗೆ 15 ನಿಮಿಷ ಮೊದಲು ಬರಲು ಅವಕಾಶ.
– ಸಮಯ ಹೆಚ್ಚು ಬೇಕಿರುವವರು ವೈದ್ಯರ ಸರ್ಟಿಫಿಕೇಟ್ ಕಡ್ಡಾಯವಾಗಿ ಪಡೆದಿರಬೇಕು.

ಇದನ್ನೂ ಓದಿ : SSLC Exam 2023 : ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಬದಲಾವಣೆ; ಈ ಬಾರಿ ರಾಜ್ಯ ಮಟ್ಟದಲ್ಲಿ ಸಿದ್ಧವಾಗಲಿದೆ ಪ್ರಶ್ನೆ ಪತ್ರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading
Advertisement
Latest2 hours ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest1 day ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ1 day ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest1 day ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest1 day ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌