ಡಾ. ಗುರುಲಿಂಗ ಕಾಪಸೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ - Vistara News

ಕಲೆ/ಸಾಹಿತ್ಯ

ಡಾ. ಗುರುಲಿಂಗ ಕಾಪಸೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ

ಡಾ.ಗುರುಲಿಂಗ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ ದೊರೆತಿದೆ. ಖಾಂಡೇರ್‌ ಅವರ ಆತ್ಮಕತೆಯ ಅನುವಾದಕ್ಕಾಗಿ ಈ ಪುರಸ್ಕಾರ ದೊರೆತಿದೆ.

VISTARANEWS.COM


on

gurulinga kapse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು ನೀಡುವ ಅನುವಾದ ಪುಸ್ತಕ ಪ್ರಶಸ್ತಿ ಹಿರಿಯ ಲೇಖಕರಾದ ಡಾ. ಗುರುಲಿಂಗ ಕಾಪಸೆ ಅವರಿಗೆ ದೊರೆತಿದೆ.

ಡಾ. ಕಾಪಸೆ ಅವರು ಮರಾಠಿಯಿಂದ ಕನ್ನಡಕ್ಕೆ ಅನುವಾದಿಸಿದ ವಿ. ಸ. ಖಾಂಡೇಕರ್ ಅವರ ʼಒಂದು ಪುಟದ ಕಥೆ’ಯು ಈ ಸಲದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಆಯ್ಕೆಯಾಗಿದೆ. ʼಒಂದು ಪುಟದ ಕಥೆ’ (ಮೂಲ- ʼಏಕಾ ಪಾನಾಚಿ ಗೋಷ್ಠʼ) ಖಾಂಡೇಕರ್ ಅವರ ಆತ್ಮಕಥೆ. ಖಾಂಡೇಕರ್ ಅವರು ಮರಾಠಿಯ ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದ ಲೇಖಕರು. ಅವರ ʼಯಯಾತಿ’ ಕೃತಿಗೆ ಜ್ಞಾನಪೀಠ ಪ್ರಶಸ್ತಿ ಬಂದಿತ್ತು.

ಕಾಪಸೆಯವರು ಅನುವಾದಿಸಿದ ಖಾಂಡೇಕರ್ ಅವರ ಆತ್ಮಕಥೆಯು ಕಳೆದ ಶತಮಾನದ ಭಾರತದ ಅದರಲ್ಲಿಯೂ ಮಹಾರಾಷ್ಟದ ಕೊಂಕಣ ಭಾಗದ ಸಾಮಾಜಿಕ, ಆರ್ಥಿಕ, ರಾಜಕೀಯ ಸ್ಥಿತಿಗತಿಗಳ ಸಮಗ್ರವಾದ ವಿವರಣೆ ನೀಡುತ್ತದೆ. ಖಾಂಡೇಕರ್ ಅವರು ಕರ್ನಾಟಕದ ಬೆಳಗಾವಿ ಜಿಲ್ಲೆಯ ಅಳಿಯ. ಖಾನಾಪುರ ತಾಲೂಕಿನ ಅಸೋಗಾ ಗ್ರಾಮದ ಮಣೇರಿಕರ್ ಕುಟುಂಬದ ಉಷಾ ಅವರು ಖಾಂಡೇಕರ್‌ ಅವರ ಹೆಂಡತಿ. ಮದುವೆಗಾಗಿ ಅವರು ಮಹಾರಾಷ್ಟ್ರದ ರತ್ನಾಗಿರಿಯಿಂದ ಅಸೋಗಾ ಗ್ರಾಮದ ವರೆಗೆ ಚಕ್ಕಡಿ ಕಟ್ಟಿಕೊಂಡು ಬಂದ ವಿವರಗಳನ್ನು ಕೃತಿಯಲ್ಲಿ ನೀಡಿದ್ದಾರೆ.

ಇದನ್ನೂ ಓದಿ: ಕವಿ ಎಚ್ಚೆಸ್ವಿ ಜನ್ಮದಿನ: ತೂಗುಮಂಚದ ಕವಿಯ ಓದಬೇಕಾದ 7 ಕವನಗಳು

ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕ ಡಾ. ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆದ ಅನುವಾದ ಸಾಹಿತ್ಯ ಪ್ರಶಸ್ತಿ ಆಯ್ಕೆ ಸಮಿತಿಯು ಕಾಪಸೆಯವರು ಅನುವಾದಿಸಿದ ಈ ಕೃತಿಯನ್ನು ಪ್ರಶಸ್ತಿಗೆ ಆಯ್ಕೆಮಾಡಿತು. ಆಯ್ಕೆ ಸಮಿತಿಯ ಜ್ಯೂರಿಗಳಾಗಿ ಹಿರಿಯ ಲೇಖಕರಾದ ಡಾ. ಬಸವರಾಜ ಕಲ್ಗುಡಿ, ಕವಿಗಳಾದ ಬಿ. ಆರ್. ಲಕ್ಷ್ಮಣರಾವ್, ಡಾ. ಸುಬ್ಬು ಹೊಲೆಯಾರ್ ಇದ್ದರು. ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್‌ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ದಿಲ್ಲಿಯಲ್ಲಿ ನೆರವೇರಲಿದೆ. ಪ್ರಶಸ್ತಿಯು 50,000 ರೂಪಾಯಿ ನಗದು, ಸ್ಮೃತಿ ಫಲಕ, ಶಾಲು ಸನ್ಮಾನ ಒಳಗೊಂಡಿರುತ್ತದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿಗೆ ಭಾಜನರಾದ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.

ಇದನ್ನೂ ಓದಿ: ವಿದ್ವಾಂಸ ಮಲ್ಲೇಪುರಂ ಜಿ.ವೆಂಕಟೇಶ್‌ಗೆ ಸೇಡಿಯಾಪು ಪ್ರಶಸ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Yakshagana Dance : ಯಕ್ಷಗಾನ ಕಲೆ ಪುರುಷರಿಗಷ್ಟೇ ಸೀಮಿತವಲ್ಲ: ಡಾ. ಧರಣೀದೇವಿ ಮಾಲಗತ್ತಿ

Yakshagana Dance : ಸ್ವತಃ “ಶರಸೇತು ಬಂಧ” ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್ಶನಗಳು ಇವೆ ಎಂದು ಹೇಳಿದರು.

VISTARANEWS.COM


on

Yakshagana Dance
Koo

ಬೆಂಗಳೂರು: ಯಕ್ಷಗಾನ (Yakshagana Dance) ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ (Dharanidevi Malagatti) ಅಭಿಪ್ರಾಯಪಟ್ಟಿದ್ದಾರೆ.

ಅವರು ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ಶನಿವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಏರ್ಪಡಿಸಿದ್ದ ಯಕ್ಷಗಾನ ಉತ್ಸವ-೨೦೨೪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸ್ವತಃ “ಶರಸೇತು ಬಂಧ” ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್ಶನಗಳು ಇವೆ ಎಂದು ಹೇಳಿದರು.

ಯಕ್ಷಗಾನದ ಬೇರು ಆಳವಾಗಿದೆ ಹಾಗೂ ಎಂದಿಗೂ ಅದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲಿದೆ. ಹಾಗಾಗಿ ಯಕ್ಷಗಾನವನ್ನು ಉಳಿಸಿಕೊಳ್ಳಬೇಕು, ಯಕ್ಷಗಾನ ಅವನತಿಯತ್ತ ಸಾಗುತ್ತಿದೆ ಎಂಬಂತಹ ಮಾತುಗಳಿಗೆ ಆಸ್ಪದವಿಲ್ಲ. ಯಕ್ಷಗಾನ ವಿಶ್ವದೆಲ್ಲೆಡೆ ಪಸರಿಸಿದ್ದು, ಈ ಕಲೆ ಯಾವ ಕಾಲಕ್ಕೂ ಪ್ರಸ್ತುತ ಎಂದು ಧರಣೀದೇವಿ ವಿಶ್ಲೇಷಿಸಿದರು.
ಶರಸೇತು ಬಂಧ ತಾಳಮದ್ದಲೆಯಲ್ಲಿ ಭಾಗವಹಿಸಿದ ಅವರು, ಹನುಮಂತನ ತನ್ನ ಪಾತ್ರ ಪರಿಚಯ ಮಾಡುತ್ತಾ, ವಾಯುಪುತ್ರ, ರಾಮಭಕ್ತ ಎಂಬ ಹೆಸರುಗಳಿವೆ. ಆದರೆ ತಾನು ತನ್ನ ತಾಯಿಯ ಹೆಸರಿನಿಂದಲೂ ಗುರುತಿಸಿಕೊಂಡು ಅಂಜನಾ ಸುತ ಅಥವಾ ಆಂಜನೇಯ ಎಂದೂ ಹೆಸರಿದೆ ಎಂದು ಹೇಳುವ ಮೂಲಕ ತನ್ನ ಕರಾವಳಿಯ ತಾಯಿಯ ಕುಟುಂಬದ ಆಧಾರಿತ ಅಳಿಯಕಟ್ಟು ಸಂಪ್ರದಾಯವನ್ನು ಪರೋಕ್ಷವಾಗಿ ನೆನಪಿಸಿದರು.

ಇದನ್ನೂ ಓದಿ: Actor Darshan: ಹೋಮ-ಹವನ ಮಾಡ್ತಿರೋದು ದರ್ಶನ್‌ ಬಿಡುಗಡೆಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್

ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯ ನಿರ್ದೇಶಕಿ ಗೌರಿ ಕೆ. ಅವರು ಮಾತನಾಡಿ, ಸಂಸ್ಥೆ 26 ವರ್ಷಗಳಿಂದ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ತರಬೇತಿ ನೀಡುತ್ತಾ ಬೆಳೆಯುತ್ತಿದೆ. ಈಗ ವಿದ್ಯಾರ್ಥಿವೇತನ ಮೂಲಕ ೧೨ ಮಹಿಳೆಯರಿಗೆ ಯಕ್ಷಗಾನ ತರಬೇತಿ ನೀಡುವ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದರು.

ಯಕ್ಷಗಾನ ಉತ್ಸವ 2024

ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು ಸಂಸ್ಥೆಯ ವತಿಯಿಂದ ‘ಯಕ್ಷಗಾನ ಉತ್ಸವ-2024’ ಗುರುಗಳಾದ ಶ್ರೀನಿವಾಸ ಸಾಸ್ತಾನ ಮತ್ತು ಕೆ. ಗೌರಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ನಡೆದ ಯಕ್ಷಗಾನ ವೇಷಭೂಷಣ ಹಾಗೂ ಮುಖವರ್ಣಿಕೆ ಕಮ್ಮಟ ಕಾರ್ಯಕ್ರಮವನ್ನು ತುಳುವರೆಂಕುಲು ಕಾರ್ಯದರ್ಶಿಗಳು, ಮಟ್ಟಿ ರಾಮಚಂದ್ರ ರಾವ್ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಅತಿಥಿಗಳಾಗಿ ಖ್ಯಾತ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ, ಸಂಪನ್ಮೂಲ ವ್ಯಕ್ತಿಗಳಾಗಿ ರಾಜೇಶ್ ಆಚಾರ್, ಶಂಕರ್ ಹೊಸೂರು, ಉಮೇಶ್ ರಾಜ್, ಸಂಸ್ಥೆಯ ಯಕ್ಷಗಾನ ಗುರು ಮತ್ತು ನಿರ್ದೇಶಕರು ಕೆ. ಗೌರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ಸಂಸ್ಥೆಯ ಕಲಾವಿದೆಯರಿಂದ ಯಕ್ಷಗಾನದ ಕಥಾಭಾಗದ ಮೊದಲು ನಡೆಯುವ ರಂಗಕ್ರಿಯೆಯಾದ ಯಕ್ಷಗಾನ ಪೂರ್ವರಂಗ ಪ್ರದರ್ಶನ, ಕುಶಲವ ಕಾಳಗ, ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರಸಂಗ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸುಬ್ರಹ್ಮಣ್ಯ ನಾವುಡ, ವಿಶ್ವನಾಥ ಶೆಟ್ಟಿ, ವಿನಯ್ ರಾಜೀವ್ ಶೆಟ್ಟಿ, ನರಸಿಂಹ ಆಚಾರ್, ಸಂಪತ್ ಆಚಾರ್ಯ, ಸುಬ್ರಹ್ಮಣ್ಯ ಗಾಣಿಗ ಐರೋಡಿ, ಕಾರ್ತಿಕ್ ಧಾರೇಶ್ವರ್. ಮುಮ್ಮೇಳದಲ್ಲಿ ಕಲಾವಿದೆಯರಾಗಿ ಕೆ ಗೌರಿ, ಆಶಾ ರಾಘವೇಂದ್ರ, ಅನ್ನಪೂರ್ಣೇಶ್ವರಿ ಕಟೀಲು, ಶ್ವೇತಾ ನವೀನ್, ಲಕ್ಷ್ಮೀ ರಾವ್, ಶಶಿಕಲಾ, ಸುಮಾ ಅನಿಲ್ ಕುಮಾರ್, ಮನಸ್ವಿ, ಚೈತ್ರ ಕೋಟ, ಚೈತ್ರ ಭಟ್, ದೀಕ್ಷಾ ಭಟ್, ಸೌಜನ್ಯ ನಾವುಡ, ರಕ್ಷಾ ಅನಂತ್, ಸಹನಾ ಅನಿಲ್ ಕುಮಾರ್, ಧೃತಿ ಅಮ್ಮೆಂಬಳ, ಸಹನ್ಯ ಚಿನ್ಮಯಿ, ಕೃತಿ ಅಮ್ಮೆಂಬಳ, ಗಗನ ಅನಿಲ್ ಕುಮಾರ್, ಯಾದ್ವಿಯುತಿ, ಸಾನ್ವಿ, ಸಹನಾ, ಶ್ರೀನಿಧಿ, ಮಹಾಲಕ್ಷ್ಮಿ ವಿವಿಧ ಪಾತ್ರಗಳಲ್ಲಿ ಮಿಂಚಿದರು.

ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣೀ ದೇವಿ ಮಾಲಗಿತ್ತಿ, ಅಶ್ವಿನಿ ಆಚಾರ್, ಸಾವಿತ್ರಿ ಶಾಸ್ತ್ರಿ ಇವರ ಅರ್ಥಗಾರಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ- ಶರಸೇತು ಬಂಧ ನಡೆಯಿತು. ತಾಳಮದ್ದಳೆಯಲ್ಲಿ ಹಿಮ್ಮೇಳ ಕಲಾವಿದರಾಗಿ ಕುಮಾರಿ ಅನರ್ಘ್ಯ ಟಿ.ಪಿ, ಪೃಥ್ವಿ ಬಡೆಕ್ಕಿಲ, ಶಿಖಿನ್ ಶರ್ಮ ಭಾಗವಹಿಸಿದರು.

Continue Reading

ಉತ್ತರ ಕನ್ನಡ

Karnataka Nataka Akademi Award: ಉ.ಕ ಜಿಲ್ಲೆಯ ಮೂವರು ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Karnataka Nataka Akademi Award: ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಯಲ್ಲಾಪುರ ತಾಲೂಕಿನ ಇಬ್ಬರು ಸೇರಿದಂತೆ ಜಿಲ್ಲೆಯ ಒಟ್ಟು ಮೂವರು ಕಲಾವಿದರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಗಿರಿಜಾ ಸಿದ್ದಿ, ಬಾಚನಳ್ಳಿ ಗ್ರಾಮದ ಸುರೇಶ ರಾಮಚಂದ್ರ ಸಿದ್ದಿ ಹಾಗೂ ನಿವೃತ್ತ ಶಿಕ್ಷಕ ಮಂಜುನಾಥ ತಿಮ್ಮಣ್ಣ ಭಟ್ಟ ಅವರ ಕಲಾ ಸೇವೆಯನ್ನು ಗಮನಿಸಿ, ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

VISTARANEWS.COM


on

Karnataka Nataka Akademi Award
Koo

ಯಲ್ಲಾಪುರ: ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು ತಾಲೂಕಿನ ಇಬ್ಬರು ಸೇರಿದಂತೆ ಜಿಲ್ಲೆಯ ಒಟ್ಟು ಮೂವರು ಕಲಾವಿದರು ಪ್ರಶಸ್ತಿಗೆ (Karnataka Nataka Akademi Award) ಭಾಜನರಾಗಿದ್ದಾರೆ.

ತಾಲೂಕಿನ ಮಂಚಿಕೇರಿಯ ಗಿರಿಜಾ ಸಿದ್ದಿ, ಬಾಚನಳ್ಳಿ ಗ್ರಾಮದ ಸುರೇಶ ರಾಮಚಂದ್ರ ಸಿದ್ದಿ ಹಾಗೂ ನಿವೃತ್ತ ಶಿಕ್ಷಕ ಮಂಜುನಾಥ ತಿಮ್ಮಣ್ಣ ಭಟ್ಟ ಅವರ ಕಲಾ ಸೇವೆಯನ್ನು ಗಮನಿಸಿ, ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

ಗಿರಿಜಾ ಸಿದ್ದಿ

ಮಂಚಿಕೇರಿಯ ಅಣಲೇಸರ ಗ್ರಾಮದ ಗಿರಿಜಾ ಸಿದ್ದಿ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪರಶುರಾಮ ಗಿರಗೋಲಿ ಸಿದ್ದಿ ಹಾಗೂ ಲಕ್ಷ್ಮಿ ಸಿದ್ದಿಯವರ ಪುತ್ರಿಯಾಗಿದ್ದಾರೆ. ನೀನಾಸಮ್ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪಡೆದ ಸಿದ್ದಿ ಸಮುದಾಯದ ಪ್ರಥಮ ಮಹಿಳೆಯಾಗಿ ಹೊರಹೊಮ್ಮಿದರು. ಎರಡು ವರ್ಷಗಳ ಕಾಲ ನೀನಾಸಮ್ ತಿರುಗಾಟದ ನಟಿಯಾಗಿ, ವಸ್ತ್ರ ವಿನ್ಯಾಸಕಿಯಾಗಿ ಹಿನ್ನಲೆ ಗಾಯಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ರಂಗಭೂಮಿಯ ಹಲವು ವಿಭಾಗಗಳಾದ ವಸ್ತ್ರ ವಿನ್ಯಾಸ, ರಂಗ ಸಜ್ಜಿಕೆ, ಪ್ರಸಾಧನ, ಮುಂತಾದವುಗಳಲ್ಲಿ ಹಲವು ವರ್ಷಗಳಿಂದ ಕನ್ನಡ ರಂಗಭೂಮಿಯಲ್ಲಿ ದುಡಿಯುತ್ತಿದ್ದಾರೆ.

ಕನ್ನಡ ಸಿನಿಮಾ ಲೋಕದಲ್ಲಿಯೂ ಸಹ ತಮ್ಮನ್ನು ತಾವು ತಮ್ಮ ಗಾಯನದೊಂದಿಗೆ ಗುರುತಿಸಿಕೊಂಡಿದ್ದಾರೆ. ದುನಿಯಾ ವಿಜಯ ನಿರ್ದೇಶನದ ‘ಸಲಗ’, ಪ್ರಿಯಾಂಕ ಉಪೇಂದ್ರ ನಟನೆಯ “ಉಗ್ರಾವತಾರ’ ಇತ್ತೀಚೆಗೆ ಬಿಡುಗಡೆಯಾದ “ಬ್ಲಿಂಕ್” ಸಿನಿಮಾಗಳಲ್ಲಿ ಹಿನ್ನಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಸಲಗ ಸಿನಿಮಾದ ‘ಟಿಣಿಂಗ್ ಮಿಣಿಂಗ್ ಟಿಶ್ಯ’ ಮತ್ತು ಉಗ್ರಾವತಾರ ಸಿನಿಮಾದ ‘ಬರ್ತಾಳ್ ಬರ್ತಾಳ್’ ಹಾಡಿಗೆ ಚಂದನವನ ಉತ್ತಮ ಗಾಯಕಿ ಪ್ರಶಸ್ತಿಗಳು ದೊರೆತಿವೆ.

ಸುರೇಶ ರಾಮಚಂದ್ರ ಸಿದ್ದಿ

ಸುರೇಶ ರಾಮಚಂದ್ರ ಸಿದ್ದಿ ಅವರು ಮಂಚಿಕೇರಿಯ ಬಾಚನಳ್ಳಿ ಗ್ರಾಮದ ಇವರ ತಂದೆ ರಾಮಚಂದ್ರ ಪುಟ್ಟಾ ಸಿದ್ದಿ ಸಣ್ಣಾಟದ ಕಲಾವಿದರಾಗಿದ್ದರಿಂದ ಅವರಿಂದ ಬಳುವಳಿಯಾಗಿ ಕುಣಿತ, ಸಂಗೀತ, ವಾದ್ಯ ನುಡಿಸುವಿಕೆಯನ್ನು ಕಲಿತರು. ಕೌಟುಂಬಿಕ ಮತ್ತು ಆರ್ಥಿಕ ಸಮಸ್ಯೆಯಿಂದ ಶಾಲೆಯ ಮೆಟ್ಟಿಲನ್ನೇ ಹತ್ತದ ಇವರು ತಮ್ಮ ಚಿಕ್ಕ ವಯಸ್ಸಿನಿಂದ ಕೃಷಿಯೊಂದಿಗೆ ಸಂಗ್ಯಾ-ಬಾಳ್ಯಾದ ನಟರಾಗಿ ಮತ್ತು ಹಿಮ್ಮೇಳದ ಭಾಗವತರಾಗಿದ್ದಾರೆ.

ಕರ್ನಾಟಕದ ಪ್ರಮುಖ ನಿರ್ದೇಶಕರ ನಾಟಕಗಳಲ್ಲಿ ನಟರಾಗಿ, ವಾದಕರಾಗಿ ಕೆಲಸ ಮಾಡಿದ್ದಾರೆ. ಸಿದ್ದಿ ಡಮಾಮಿ ವಾದಕರಾಗಿ ಕರ್ನಾಟಕದ ಹಲವಾರು ಕಡೆ ತಮ್ಮ ತಂಡದ ಮೂಲಕ ಪ್ರದರ್ಶನ ನೀಡಿದ್ದಾರೆ. ಅವರು ಕಾಕನಕೋಟೆ, ಅಗ್ನಿವರ್ಣ, ಸತ್ತವರ ಕಥೆ ಅಲ್ಲ, ಮಿಸ್ಟರ್ ಪುಂಟಿಲಾ, ಕೋಟೆಮನೆ ಪೊಲೀಸ್ ಸ್ಟೇಷನ್, ಚೋರಚರಣದಾಸ, ತ್ರಿಪೆನ್ನಿ ಓಪೇರಾ, ಕಂತು, ಬೆಟ್ಟದ ಅರಸು, ಸೂರ್ಯಶಿಕಾರಿ ಮುಂತಾದ ಪ್ರಮುಖ ನಾಟಕಗಳಲ್ಲಿ ನಟರಾಗಿ ಹಾಗೂ ವಾದಕರಾಗಿ ಕೆಲಸ ಮಾಡಿದ್ದಾರೆ. ಹವ್ಯಾಸಿ ರಂಗಭೂಮಿಯಲ್ಲಿ ನಟರಾಗಿಯೂ, ವಾದಕರಾಗಿಯೂ ಕಾರ್ಯ ನಿರ್ವಹಿಸುತ್ತಾ, ತಮ್ಮ ಕುಟುಂಬದೊಂದಿಗೆ ಕೃಷಿ ಕಾಯಕ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ.

ಮಂಜುನಾಥ ತಿಮ್ಮಣ್ಣ ಭಟ್ಟ

1944 ರಲ್ಲಿ ಜನಿಸಿದ ಮಂಜುನಾಥ ತಿಮ್ಮಣ್ಣ ಭಟ್ಟ ಅವರು, 33 ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 5ನೇ ತರಗತಿಯಲ್ಲಿದ್ದಾಗ ರಂಗಭೂಮಿಗೆ ಪ್ರವೇಶಿಸಿ 20ಕ್ಕೂ ಅಧಿಕ ಏಕಾಂಕ ನಾಟಕಗಳಲ್ಲಿ ಅಭಿನಯ ಮಾಡಿರುತ್ತಾರೆ. ಹೊನ್ನಾವರದ ನವಿಲಗೋಣ ಗ್ರಾಮದ ಪ್ರಸಿದ್ಧ ನಾಟಕಕಾರರಾದ ರಾಮಚಂದ್ರ ಗಣೇಶ ಭಟ್ಟರಮಕ್ಕಿ ಇವರ ಶಿಷ್ಯರಾಗಿ ಅನೇಕ ವರ್ಷಗಳ ಕಾಲ ಕೆಲಸ ಮಾಡಿದ್ದಾರೆ.

ರಂಗ ನಟ, ನಿರ್ದೇಶಕರಲ್ಲದೇ ‘ಸ್ತ್ರೀ’ ವೇಷದಲ್ಲಿ ಕೂಡ ತಾಯಿ ಪಾತ್ರವನ್ನು ಹಲವಾರು ನಾಟಕಗಳಲ್ಲಿ ನಿರ್ವಹಿಸಿದ್ದಾರೆ. ಕಥಾನಾಯಕ, ಖಳನಾಯಕ, ಹಾಸ್ಯಪಾತ್ರ, ಪೋಷಕ ಪಾತ್ರ ಹೀಗೆ ಹಲವಾರು ವಿಭಿನ್ನ ಪಾತ್ರಗಳಲ್ಲಿ ಮತ್ತು ವಿಭಾಗಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.

ಈ ಮೂವರ ಸಾಧನೆಗೆ ಮಂಚಿಕೇರಿ ರಂಗಸಮೂಹದ ಅಧ್ಯಕ್ಷ ರಾಮಕೃಷ್ಣ ಭಟ್ಟ ದುಂಡಿ, ಕಲಾವಿದ ಎಂ.ಕೆ. ಭಟ್ ಯಡಳ್ಳಿ ಹಾಗೂ ರಂಗ ಸಮೂಹದ ಎಲ್ಲ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

Book Release: ಬೆಂಗಳೂರಿನಲ್ಲಿ ಆ.10ರಂದು “ಆ ಮಧುರ ಕ್ಷಣಗಳು” ಪುಸ್ತಕ ಲೋಕಾರ್ಪಣೆ

Book Release: ಸ್ನೇಹ ಬುಕ್ ಹೌಸ್ ಪ್ರಕಟಿಸಿರುವ ಲೇಖಕಿ ರಮಾ ಶರ್ಮ ಅವರ ಚೊಚ್ಚಲ ಕೃತಿ “ಆ ಮಧುರ ಕ್ಷಣಗಳು” (ಒಂದು ಮಧುರಾನುಭವ) ಎಂಬ ಪುಸ್ತಕ ಲೋಕಾರ್ಪಣೆ ಸಮಾರಂಭವು ಬೆಂಗಳೂರು ನಗರದ ಕುಮಾರ ಕೃಪ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್‌ನಲ್ಲಿ ಆ.10 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

VISTARANEWS.COM


on

Book Release
Koo

ಬೆಂಗಳೂರು: ಸ್ನೇಹ ಬುಕ್ ಹೌಸ್ ಪ್ರಕಟಿಸಿರುವ ಲೇಖಕಿ ರಮಾ ಶರ್ಮ ಅವರ ಚೊಚ್ಚಲ ಕೃತಿ “ಆ ಮಧುರ ಕ್ಷಣಗಳು” (ಒಂದು ಮಧುರಾನುಭವ) ಎಂಬ ಪುಸ್ತಕ ಲೋಕಾರ್ಪಣೆ (Book Release) ಸಮಾರಂಭವು ಬೆಂಗಳೂರು ನಗರದ ಕುಮಾರ ಕೃಪ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್‌ನಲ್ಲಿ ಆ.10 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಜರುಗಲಿದೆ.

ಇದನ್ನೂ ಓದಿ: Toyota: ಗ್ರಾಮೀಣ ಯುವ ಜನತೆಗೆ ಟೊಯೊಟಾದಿಂದ ಉತ್ತಮ ತರಬೇತಿ, ಶಿಕ್ಷಣ; ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ಲಾಘನೆ

ಕಾರ್ಯಕ್ರಮದಲ್ಲಿ ಸಾಹಿತಿ ಡಾ. ಜಯಂತಿ ಮನೋಹರ್ ಪುಸ್ತಕ ಲೋಕಾರ್ಪಣೆ ಮಾಡುವರು. ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಬಿ.ಎಲ್. ಶಂಕರ್ ಅಧ್ಯಕ್ಷತೆ ವಹಿಸುವರು. ಲೇಖಕಿ ಗಿರೀಜಾ ರೈಕ್ವಾ ಪುಸ್ತಕ ಪರಿಚಯ ಮಾಡುವರು.

ಇದನ್ನೂ ಓದಿ: Train services: ಎಡಕುಮೇರಿಯಲ್ಲಿ ದುರಸ್ಥಿ ಪೂರ್ಣ; ರೈಲುಗಳ ಪುನರ್‌ ಆರಂಭವಾದರೂ ವೇಗದ ಮಿತಿಗೆ ನಿರ್ಬಂಧ

ಸಮಾರಂಭದಲ್ಲಿ ಚಿತ್ರಕಲಾ ಪರಿಷತ್ತಿನ ಕಾರ್ಯದರ್ಶಿ ಶಶಿಧರ್ ರಾವ್ ಹಾಗೂ ಲೇಖಕಿ ರಮಾ ಶರ್ಮ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಾಶಕರಾದ ಕೆ.ಬಿ. ಪರಶಿವಪ್ಪ ಪ್ರಕಣಣೆಯಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Utthana Essay Competition 2024: ಉತ್ಥಾನ ಪ್ರಬಂಧ ಸ್ಪರ್ಧೆಗೆ ಬರಹ ಕಳುಹಿಸಿ; 10,000 ರೂ. ಬಹುಮಾನ ಪಡೆಯಿರಿ!

Utthana Essay Competition 2024: ಸದಭಿರುಚಿಯ ಮಾಸಪತ್ರಿಕೆ ʼಉತ್ಥಾನʼ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ “ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ಜಗತ್ತು” ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ʼಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2024ʼರ ಪೋಸ್ಟರ್ ಅನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ ಮತ್ತೂರು ಹಾಗೂ ಬೆಂಗಳೂರಿನ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್‌ನ ಪ್ರಾದೇಶಿಕ ನಿರ್ದೇಶಕ ಡಿ. ಮಹೇಂದ್ರ ಅವರು ಬಿಡುಗಡೆ ಮಾಡಿದರು. ಉತ್ಥಾನ ಮಾಸಪತ್ರಿಕೆಯ ಸಂಪಾದಕ ಅನಿಲ್‌ಕುಮಾರ್ ಮೊಳಹಳ್ಳಿ ಉಪಸ್ಥಿತರಿದ್ದರು.

VISTARANEWS.COM


on

Utthana Essay Competition 2024
Koo

ಬೆಂಗಳೂರು: ಸದಭಿರುಚಿಯ ಮಾಸಪತ್ರಿಕೆ ʼಉತ್ಥಾನʼ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ “ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ಜಗತ್ತು” ಎಂಬ ವಿಷಯದ ಕುರಿತು ರಾಜ್ಯಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು (Utthana Essay Competition 2024) ಆಯೋಜಿಸಲಾಗಿದೆ.

ʼಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2024ʼ ರ ಪೋಸ್ಟರ್ ಅನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ ಮತ್ತೂರು ಹಾಗೂ ಬೆಂಗಳೂರಿನ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್‌ನ ಪ್ರಾದೇಶಿಕ ನಿರ್ದೇಶಕ ಡಿ. ಮಹೇಂದ್ರ ಅವರು ಬಿಡುಗಡೆ ಮಾಡಿದರು. ಉತ್ಥಾನ ಮಾಸಪತ್ರಿಕೆಯ ಸಂಪಾದಕ ಅನಿಲ್‌ಕುಮಾರ್ ಮೊಳಹಳ್ಳಿ ಉಪಸ್ಥಿತರಿದ್ದರು.

ಇದನ್ನೂ ಓದಿ: Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಉತ್ಥಾನ ಮಾಸಪತ್ರಿಕೆಯು ಕಳೆದ ಹಲವು ವರ್ಷಗಳಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದ್ದು, ಈ ಬಾರಿಯ 2024ನೇ ಸಾಲಿನಲ್ಲಿ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಗೆ ಪ್ರಬಂಧಗಳನ್ನು ಆಹ್ವಾನಿಸಲಾಗಿದೆ.

ಸ್ಪರ್ಧೆಯ ನಿಯಮಗಳು

ಸ್ಪರ್ಧೆಯಲ್ಲಿ ಪದವಿ, ಯಾ ತತ್ಸಮಾನ ಮತ್ತು ಸ್ನಾತಕೋತ್ತರ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದು. ಪ್ರಬಂಧವು ಕನ್ನಡ ಭಾಷೆಯಲ್ಲಿರಬೇಕು. ಪ್ರಬಂಧವು 1500 ಪದಗಳು ಮೀರದಂತೆ ಇರಲಿ. ಪ್ರಬಂಧವನ್ನು ಪೋಸ್ಟ್ ಮೂಲಕ ಅಥವಾ ಇಮೇಲ್ ಮೂಲಕ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸುವ ಪ್ರಬಂಧ ವಿದ್ಯಾರ್ಥಿಯ ಸ್ವಂತ ರಚನೆಯಾಗಿರಬೇಕು. ಈವರೆಗೆ ಎಲ್ಲಿಯೂ ಯಾವ ರೀತಿಯಲ್ಲೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು. ಕಳುಹಿಸುವ ಪ್ರಬಂಧವನ್ನು ಕಾಲೇಜು/ವಿಭಾಗ ಮುಖ್ಯಸ್ಥರಿಂದ ದೃಢೀಕರಿಸಬೇಕು. ಪ್ರಬಂಧವನ್ನು ಹಾಳೆಯ ಒಂದೆ ಮಗ್ಗುಲಲ್ಲಿ ಸ್ಫುಟವಾಗಿ ಬರೆದಿರಬೇಕು. ಹಾಳೆಗಳನ್ನು ಚಿತ್ರಗಳಿಂದ, ಬಣ್ಣಗಳಿಂದ ಅಲಂಕರಿಸುವುದು ಬೇಡ. ಸ್ಪರ್ಧಿಗಳು ತಮ್ಮ ಹೆಸರು, ಪರಿಚಯ, ಮೊಬೈಲ್ ನಂಬರ್, ಕಾಲೇಜಿನ ಹೆಸರು, ವಿಳಾಸ ಇತ್ಯಾದಿಗಳನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದು ಲಗತ್ತಿಸಬೇಕು. ಜತೆಗೆ ಭಾವಚಿತ್ರವೂ ಇರಬೇಕು.

ಪ್ರಬಂಧವನ್ನು ನುಡಿ/ಯೂನಿಕೋಡ್ ತಂತ್ರಾಶದಲ್ಲಿ ಸಿದ್ಧಪಡಿಸಿ (ಪಿಡಿಎಫ್‌ ಮತ್ತು ವರ್ಡ್‌ ಫೈಲ್‌ ಎರಡನ್ನೂ) utthanacompetition@gmail.com ಈ ವಿಳಾಸಕ್ಕೆ ಇ-ಮೇಲ್ ಮೂಲಕವೂ ಕಳುಹಿಸಬಹುದು. ಜೆರಾಕ್ಸ್‌ /ಫೋಟೋ ಪಿಡಿಎಫ್‌ ಪ್ರತಿಗಳನ್ನು ಪರಿಶೀಲಿಸಲಾಗುವುದಿಲ್ಲ. ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ. ಪ್ರಬಂಧ ತಲುಪಲು ಅಕ್ಟೋಬರ್ 10 ಕೊನೆಯ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬಹುಮಾನಗಳ ವಿವರ

ಮೊದಲ ಬಹುಮಾನ: ರೂ. 10,000/-
ಎರಡನೆಯ ಬಹುಮಾನ: ರೂ. 7,000 /-
ಮೂರನೆಯ ಬಹುಮಾನ: ರೂ. 5,000/-
ಹತ್ತು ಮೆಚ್ಚುಗೆಯ ಬಹುಮಾನಗಳು: ತಲಾ ರೂ. 2,000/-

ಇದನ್ನೂ ಓದಿ: Kannada New Movie: ʼಆಪರೇಷನ್ ಕೊಂಬುಡಿಕ್ಕಿʼ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಅನುಪ್ ಹನುಮಂತೇಗೌಡ

ಪ್ರಬಂಧವನ್ನು ಕಳುಹಿಸಬೇಕಾದ ವಿಳಾಸ

ಸಂಪಾದಕರು, ‘ಉತ್ಥಾನ’ ವಾರ್ಷಿಕ ಪ್ರಬಂಧ ಸ್ಪರ್ಧೆ – 2024
‘ಕೇಶವ ಶಿಲ್ಪ’, ಕೆಂಪೇಗೌಡ ನಗರ ಬೆಂಗಳೂರು –04, ಇ-ಮೇಲ್: utthanacompetition@gmail.com ದೂರವಾಣಿ: 77954 41894

Continue Reading
Advertisement
ಪ್ರಮುಖ ಸುದ್ದಿ5 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ಗೆ ತೆರೆ; ಅದ್ಧೂರಿ ಸಮಾರೋಪದಲ್ಲಿ ಮನು ಭಾಕರ್​, ಶ್ರೀಜೇಶ್​ ಭಾಗಿ

Paris Olympics 2024
ಕ್ರೀಡೆ1 hour ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ ಮುಕ್ತಾಯ; ಅಮೆರಿಕಕ್ಕೆ ಅಗ್ರಸ್ಥಾನ; ಚೀನಾಕ್ಕೆ ಎರಡನೇ ಸ್ಥಾನ

Farooq Abdullah
ಪ್ರಮುಖ ಸುದ್ದಿ2 hours ago

Farooq Abdullah : ಗಡಿಯಲ್ಲಿನ ಭಯೋತ್ಪಾದನಾ ಕೃತ್ಯಗಳಲ್ಲಿ ಉಗ್ರರು, ಸೇನೆ ಶಾಮೀಲು; ವಿವಾದದ ಕಿಡಿ ಹೊತ್ತಿಸಿದ ಫಾರೂಕ್ ಅಬ್ದುಲ್ಲಾ

Hindenburg Report
ದೇಶ2 hours ago

Hindenburg Report : ಮೋದಿ ಹೆದರುತ್ತಿದ್ದಾರೆ; ಹಿಂಡೆನ್​ಬರ್ಗ್​ ವರದಿ ಉಲ್ಲೇಖಿಸಿ ಸೆಬಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

Hindenburg report
ಪ್ರಮುಖ ಸುದ್ದಿ3 hours ago

Hindenburg Report : ಹುರುಳಿಲ್ಲದ ಆರೋಪ; ಹಿಂಡೆನ್​ಬರ್ಗ್​ ವರದಿ ಬಗ್ಗೆ ಸೆಬಿ ಸ್ಪಷ್ಟನೆ

Paris Olympics 2024
ಕ್ರೀಡೆ4 hours ago

Paris Olympics 2024 : ಸಮಾರೋಪ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಐಫೆಲ್​ ಟವರ್​ ಏರಿ ಕುಳಿತ ಆಗಂತುಕ!

Self Harming
ಕರ್ನಾಟಕ4 hours ago

Self Harming: ಡೆತ್‌ ನೋಟ್‌ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

PR Sreejesh
ಕ್ರೀಡೆ4 hours ago

PR Sreejesh : ಮಲ್ಲು ಸ್ಟೈಲಲ್ಲಿ ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಫೋಟೋ ತೆಗಿಸಿಕೊಂಡ ಪಿ.ಆರ್​ ಶ್ರೀಜೇಶ್​​

Vinesh Phogat
ಕ್ರೀಡೆ5 hours ago

Vinesh Phogat : ವಿನೇಶ್​ಗೆ ಬೆಳ್ಳಿಯ ಪದಕ ನೀಡಬೇಕು; ಸೌರವ್​ ಗಂಗೂಲಿ ಆಗ್ರಹ

Tungabhadra Dam
ಕರ್ನಾಟಕ5 hours ago

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌