NH17 : ಗೋವಾ- ಕರ್ನಾಟಕ ಹೆದ್ದಾರಿ ಸೊಬಗಿಗೆ ಮನಸೋತ ಕೇಂದ್ರ ಸಚಿವ ಗಡ್ಕರಿ - Vistara News

ದೇಶ

NH17 : ಗೋವಾ- ಕರ್ನಾಟಕ ಹೆದ್ದಾರಿ ಸೊಬಗಿಗೆ ಮನಸೋತ ಕೇಂದ್ರ ಸಚಿವ ಗಡ್ಕರಿ

ಪಶ್ಚಿಮ ಕರಾವಳಿಯ ಮೂಲಕ ಹಾದು ಹೋಗುವ NH17 ಹೆದ್ದಾರಿಯ ಗೋವಾ ಮತ್ತು ಕರ್ನಾಟಕ ನಡುವಿನ ಹೆದ್ದಾರಿಯ ಸೊಬಗಿಗೆ ಕೇಂದ್ರ ಸಾರಿಗೆ ಸಚಿವ ಮನಸೋತಿದ್ದು, ರಸ್ತೆಯ ಚಿತ್ರಗಳನ್ನು ಟ್ವೀಟ್‌ ಮಾಡಿದ್ದಾರೆ.

VISTARANEWS.COM


on

NH17
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ NH17 ರ ಕರ್ನಾಟಕ ಹಾಗೂ ಗೋವಾ ಗಡಿ ಪ್ರದೇಶದ ಪ್ರಾಕೃತಿಕ ಸೌಂದರ್ಯಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಮನಸಾರೆ ಮಾರುಹೋಗಿದ್ದಾರೆ. ಈ ಪ್ರದೇಶದಲ್ಲಿ ಪೂರ್ಣಗೊಂಡಿರುವ ಬಹುಪಥ ಹೆದ್ದಾರಿಯ ಚಿತ್ರಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿ ಅದರ ಸೊಬಗನ್ನು ಬಣ್ಣಿಸಿದ್ದಾರೆ.

ಕುಂದಾಪುರದಿಂದ ಆರಂಭಗೊಂಡು ಗೋವಾದ ತನಕದ ಈ ರಸ್ತೆಯ ಒಂದು ಕಡೆ ಅರಬ್ಬಿ ಸಮುದ್ರವಿದ್ದರೆ ಮತ್ತೊಂದು ಮಗ್ಗುಲಲ್ಲಿ ಹಸಿರು ಹೊದಿಕೆಯನ್ನು ಹೊದ್ದುಕೊಂಡಿರುವ ಪಶ್ಚಿಮ ಘಟ್ಟವಿದೆ. ಇವೆರಡು ಪ್ರಾಕೃತಿಕ ಸೌಂದರ್ಯಗಳ ನಡುವೆ ಸಾಗುವ ರಸ್ತೆ, ಪ್ರಯಾಣಿಕರನ್ನು ಹೊಸ ಲೋಕಕ್ಕೆ ಕೊಂಡೊಯ್ಯುತ್ತದೆ ಎಂಬುದೇ ಗಡ್ಕರಿಯವರ ವಿವರಣೆ.

ವಿಶ್ವ ಮಟ್ಟದ ಮೂಲಸೌಕರ್ಯವಿದು. ಇದು ನವ ಭಾರತದ ಅಡಿಪಾಯ. ಕರ್ನಾಟಕ ಹಾಗೂ ಗೋವಾ ರಾಜ್ಯಗಳ ಗಡಿಯಲ್ಲಿ ಹಾದು ಹೋಗುವ ಎನ್‌ಎಚ್‌೧೭ ಹೆದ್ದಾರಿ, ಕಾಮಗಾರಿ ಪೂರ್ಣಗೊಂಡಿರುವ ಕರ್ನಾಟಕ ಭಾಗದಲ್ಲಿ ಈ ರೀತಿ ಕಾಣುತ್ತದೆ ಎಂದು ಟ್ವಿಟರ್‌ನಲ್ಲಿ ಗಡ್ಕರಿಯವರು ಬರೆದುಕೊಂಡಿದ್ದಾರೆ.

ನಿತಿನ್‌ ಗಡ್ಕರಿಯವರ ಟ್ವೀಟ್‌

೧೮೭ ಕಿಲೋಮೀಟರ್‌ನಷ್ಟು ಚಾಚಿಕೊಂಡಿರುವ ಈ ರಸ್ತೆಯು, ಅರಬ್ಬಿ ಸಮುದ್ರ ಹಾಗೂ ಪಶ್ಚಿಮ ಘಟ್ಟಗಳ ನಡುವೆ ಸಾಗುತ್ತದೆ. ರಮಣೀಯವಾಗಿರುವ ಈ ರಸ್ತೆಯು ಪಶ್ಚಿಮ ಹಾಗೂ ದಕ್ಷಿಣ ಭಾರತದ ನಡುವಿನ ಪ್ರಮುಖ ಸಂಪರ್ಕ ಕೊಂಡಿ ಎಂದೂ ಗಡ್ಕರಿಯವರು ಬರೆದುಕೊಂಡಿದ್ದಾರೆ.

“ಹೆದ್ದಾರಿಯ ಶೇಕಡ ೫೦ ಭಾಗ ಪಶ್ಚಿಮ ಘಟ್ಟದ ನಡುವೆ ಹಾದು ಹೋಗುತ್ತದೆ. ಅದರಲ್ಲಿ ೪೫ ಕಿಲೋ ಮೀಟರ್‌ ರಸ್ತೆ ತಿರುವುಗಳನ್ನೊಳಗೊಂಡಿರುವ ಬೆಟ್ಟಗಳಲ್ಲಿ ಹಾದು ಹೋದರೆ, ೨೪ ಕಿಲೋ ಮೀಟರ್‌ ಹಾದಿ ಶಿಖರಗಳ ನಡುವೆ ಹಾದು ಹೋಗುತ್ತದೆ. ಈ ಹೆದ್ದಾರಿಯ ೧೭೩ ಕಿಲೋ ಮೀಟರ್‌ನಲ್ಲಿ ಶೇಕಡ ೯೨.೪೨ ಕಾಮಗಾರಿ ಮುಕ್ತಾಯಗೊಂಡಿದ್ದು, ವಾಹಗಳ ಸಂಚಾರ ಆರಂಭಗೊಂಡಿವೆ. ಡಿಸೆಂಬರ್‌ನಲ್ಲಿ ಉಳಿದ ಕಾಮಗಾರಿಯೂ ಮುಗಿಯಲಿದೆ,ʼʼ ಎಂದು ಗಡ್ಕರಿಯವರು ಬರೆದುಕೊಂಡಿದ್ದಾರೆ.

ಪ್ರಯಾಣಿಕರಿಗೆ ವಿಶ್ವ ದರ್ಜೆಯ ರಸ್ತೆ ಸಂಪರ್ಕ ಕಲ್ಪಿಸುವುದೇ ಈ ಯೋಜನೆಯ ಉದ್ದೇಶವಾಗಿದೆ. ಅಂತೆಯೇ ಪನ್ವೇಲ್‌, ಚಿಪ್ಲುನ್‌, ರತ್ನಗಿರಿ, ಪಣಜಿ, ಮಡಂಗಾವ್‌, ಕಾರವಾರ, ಉಡುಪಿ, ಸುರತ್ಕಲ್‌, ಮಂಗಳೂರು, ಕೋಯಿಕ್ಕೋಡ್‌, ಕೊಚ್ಚಿ, ತಿರುವನಂತಪುರಂ ಹಾಗೂ ಕನ್ಯಾಕುಮಾರಿಗೆ ಸುಲಭ ಸಂಪರ್ಕವಾಗಿದೆ ಎಂದು ಗಡ್ಕರಿ ಬರೆದುಕೊಂಡಿದ್ದಾರೆ.

ಉದ್ಯೋಗವಕಾಶ

ಈ ರಸ್ತೆಯಿಂದಾಗಿ ಈ ಪ್ರದೇಶಗಳ ಆರ್ಥಿಕ ಬೆಳವಣಿಗೆಗೆ ಕಾರಣವಾಗಲಿದೆ. ವಾಣಿಜ್ಯ ವಹಿವಾಟುಗಳನ್ನು ಹೆಚ್ಚಿಸುವ ಜತೆಗೆ ಕೈಗಾರಿಕೆಗಳ ಅಭಿವೃದ್ಧಿಗೂ ಕಾರಣವಾಗಲಿದೆ. ಇದರಿಂದ ಈ ಪ್ರದೇಶದ ಜನರಿಗೆ ಉದ್ಯೋಗವಕಾಶ ದೊರೆಯಲಿದೆ ಎಂಬುದಾಗಿಯೂ ಗಡ್ಕರಿ ಬರೆದುಕೊಂಡಿದ್ದಾರೆ.

ಇದೇ ವೇಳೆ ಅವರು, ಯೋಜನೆಗಳೆಲ್ಲವೂ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಭಾರತದ ಫಲಶ್ರುತಿ ಎಂದಿದ್ದಾರೆ.

ಇದನ್ನೂ ಓದಿ: ಭಾರತ್‌ NCAP ಮೂಲಕ ಕಾರುಗಳಿಗೆ ಸುರಕ್ಷತಾ ರೇಟಿಂಗ್‌ : ನಿತಿನ್‌ ಗಡ್ಕರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

CAA: ಸಿಎಎ ಅನ್ವಯ 14 ಜನಕ್ಕೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

CAA: ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ. ಅಷ್ಟಕ್ಕೂ ಸಿಎಎ ಎಂದರೇನು? ಕೇಂದ್ರದ ಪ್ರಮಾಣಪತ್ರಗಳಲ್ಲಿ ಏನಿರುತ್ತದೆ? ಇಲ್ಲಿದೆ ಮಾಹಿತಿ.

VISTARANEWS.COM


on

CAA
Koo

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ ಎಂದು ತಿಳಿದುಬಂದಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಯಾವ ದಾಖಲೆ ಕೊಡುವುದು ಕಡ್ಡಾಯ?

ಸಿಎಎ ಅಡಿಯಲ್ಲಿ ಭಾರತದ ಪೌರತ್ವ ಪಡೆಯಲು ವಲಸಿಗರು ಕೇಂದ್ರ ಸರ್ಕಾರಕ್ಕೆ ಹಲವು ದಾಖಲೆಗಳನ್ನು ನೀಡಬೇಕಾಗುತ್ತದೆ. ಜನನ ಪ್ರಮಾಣಪತ್ರ, ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಅದರ ದಾಖಲೆ, ಗುರುತಿನ ಚೀಟಿ ಅಥವಾ ದಾಖಲೆ, ವಾಹನ ಚಾಲನಾ ಪರವಾನಗಿ ಸೇರಿ ಯಾವುದೇ ಪರವಾನಗಿ, ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡುವುದು ಕಡ್ಡಾಯವಾಗಿದೆ. ಇವುಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರವು ಭಾರತದ ಪೌರತ್ವ ಪಡೆಯಲಿದ್ದಾರೆ.

ಭಾರತದ ಮುಸ್ಲಿಮರಿಗೆ ತೊಂದರೆ ಇಲ್ಲ

ಸಿಎಎ ಜಾರಿಯು ಭಾರತದ ಮುಸ್ಲಿಮರ ಪೌರತ್ವದ ಮೇಲೆ ಪರಿಣಾಮ ಬೀರಲು ಯಾವುದೇ ನಿಬಂಧನೆಗಳನ್ನು ಮಾಡಿಲ್ಲ. ಕಾನೂನಿಗೆ ಭಾರತದಲ್ಲಿರುವ 18 ಕೋಟಿ ಭಾರತೀಯ ಮುಸ್ಲಿಮರೊಂದಿಗೆ ಯಾವುದೇ ಸಂಬಂಧವಿಲ್ಲ. ಅವರು ತಮ್ಮ ಹಿಂದೂ ಸಹವರ್ತಿಗಳಂತೆ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕೂ ಮೊದಲು, ಸಿಎಎ ಎಂದರೆ, ಭಾರತದಲ್ಲಿರುವ ಮುಸ್ಲಿಮರ ಪೌರತ್ವವನ್ನು ರದ್ದುಗೊಳಿಸುವುದು ಎಂಬ ವದಂತಿ ಹಬ್ಬಿಸಲಾಗಿತ್ತು.

ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿಯ ಪ್ರಕಾರ ಏಪ್ರಿಲ್ 1, 2021ರಿಂದ ಡಿಸೆಂಬರ್ 31, 2021 ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಈ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಒಟ್ಟು 1,414 ವಿದೇಶಿಯರಿಗೆ ಪೌರತ್ವ ಕಾಯ್ದೆ, 1955 ರ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ.

ಇದನ್ನೂ ಓದಿ: CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

Continue Reading

ದೇಶ

CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಈಗ ಸಿಎಎ ನಿಯಮಗಳ ಅಡಿಯಲ್ಲಿ 14 ಜನರಿಗೆ ಕೇಂದ್ರ ಸರ್ಕಾರ ಪ್ರಮಾಣಪತ್ರ ನೀಡಿದೆ.

VISTARANEWS.COM


on

CAA
Koo

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ಸಿಎಎ (CAA) ಅಡಿಯಲ್ಲಿ ಪೌರತ್ವ ಕಲ್ಪಿಸಿರುವ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು 14 ಜನರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ.

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಸಿಎಎ ನಿಯಮಗಳ ಜಾರಿಗೆ ಕೇಂದ್ರ ಸರ್ಕಾರವು ಕಳೆದ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಆ ಮೂಲಕ ದೇಶದಲ್ಲಿ ಸಿಎಎ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, 14 ಜನರಿಗೆ ಪ್ರಮಾಣಪತ್ರಗಳನ್ನು ನೀಡಿದೆ.

CAA

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಇದನ್ನೂ ಓದಿ: CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Continue Reading

ತಂತ್ರಜ್ಞಾನ

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ಕೃತಕ ಬುದ್ಧಿಮತ್ತೆಯಿಂದ ವೆಬ್ ಸೈಟ್ ಲಿಂಕ್ ಗಳಿಗಾಗಿ ರಚಿಸಲಾದ ಹುಡುಕಾಟ ಎಂಜಿನ್ ಅನ್ನು ಗೂಗಲ್ (Google Update) ಅನಾವರಣಗೊಳಿಸಿದೆ. ಈ ದಿಟ್ಟ ಮತ್ತು ಜವಾಬ್ದಾರಿಯುತ ವಿಧಾನವು ನಮ್ಮ ಧ್ಯೇಯವನ್ನು ಬಳಕೆದಾರರಿಗೆ ತಲುಪಿಸಲು ಮತ್ತು ಎಲ್ಲರಿಗೂ ಎಐ ಅನ್ನು ಹೆಚ್ಚು ಆಪ್ತ ಗೊಳಿಸಲು ಸಹಾಯಕವಾಗಿಸುವುದು ಎಂದು ಗೂಗಲ್ ಕಂಪೆನಿಯ ಸಿಇಒ ಸುಂದರ್ ಪಿಚೈ ತಿಳಿಸಿದ್ದಾರೆ.

VISTARANEWS.COM


on

By

Google Update
Koo

ವೆಬ್ ಸೈಟ್ ಲಿಂಕ್‌ಗಳ (website link) ಮೂಲಕ ಕೃತಕ ಬುದ್ಧಿಮತ್ತೆಯಿಂದ (artificial intelligence) ರಚಿಸಲಾದ, ಆಗಾಗ ಒಲವು ತೋರುವ ಪ್ರತಿಕ್ರಿಯೆಗಳಿಗೆ ಹುಡುಕಾಟ ಎಂಜಿನ್ ಅನ್ನು ಗೂಗಲ್ (Google Update) ಅನಾವರಣಗೊಳಿಸಿರುವುದಾಗಿ ವಾರ್ಷಿಕ ಡೆವಲಪರ್‌ಗಳ ಸಮ್ಮೇಳನದಲ್ಲಿ ಕಂಪೆನಿಯ ಸಿಇಒ (CEO) ಸುಂದರ್ ಪಿಚೈ (Sundar Pichai) ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸುಂದರ್ ಪಿಚೈ, ಈ ದಿಟ್ಟ ಮತ್ತು ಜವಾಬ್ದಾರಿಯುತ ವಿಧಾನವು ನಮ್ಮ ಧ್ಯೇಯವನ್ನು ಬಳಕೆದಾರರಿಗೆ ತಲುಪಿಸಲು ಮತ್ತು ಎಲ್ಲರಿಗೂ ಎಐ ಅನ್ನು ಹೆಚ್ಚು ಸಹಾಯಕವಾಗಿಸಲು ಪ್ರಯತ್ನಿಸಲಾಗುವುದು ಎಂದರು.

ಪ್ರಮುಖ ಪ್ರಕಟಣೆಗಳು ಏನೇನು?:

ಫೈರ್‌ಬೇಸ್ ಜೆನ್‌ಕಿಟ್

ಫೈರ್‌ಬೇಸ್ ಪ್ಲಾಟ್‌ಫಾರ್ಮ್‌ಗೆ ಫೈರ್‌ಬೇಸ್ ಜೆನ್‌ಕಿಟ್ ಎಂಬ ಹೊಸ ಸೇರ್ಪಡೆ ಇದ್ದು, ಇದು ಗೋ ಬೆಂಬಲದೊಂದಿಗೆ ಜಾವಾ ಸ್ಕ್ರಿಪ್ಟ್/ಟೈಪ್‌ಸ್ಕ್ರಿಪ್ಟ್‌ನಲ್ಲಿ ಎಐ-ಚಾಲಿತ ಅಪ್ಲಿಕೇಶನ್‌ಗಳನ್ನು ನಿರ್ಮಿಸಲು ಡೆವಲಪರ್‌ಗಳಿಗೆ ಸುಲಭವಾಗುತ್ತದೆ. ಫ್ರೇಮ್‌ವರ್ಕ್ ಮುಕ್ತ ಮೂಲವಾಗಿರುತ್ತದೆ ಮತ್ತು ವಿಷಯ ಉತ್ಪಾದನೆ, ಸಾರಾಂಶ, ಪಠ್ಯ ಅನುವಾದ ಮತ್ತು ಚಿತ್ರಗಳನ್ನು ಉತ್ಪಾದಿಸಲು ಬಳಸಬಹುದು ಎಂದು ಕಂಪನಿ ಹೇಳಿದೆ.

ಲರ್ನ್‌ ಎಲ್‌ಎಂ

ಕಂಪನಿಯು ಲರ್ನ್‌ಎಲ್‌ಎಂ ಅನ್ನು ಅನಾವರಣಗೊಳಿಸಿದ್ದು, ಇದು ಕಲಿಕೆಗಾಗಿ “ಫೈನ್-ಟ್ಯೂನ್ಡ್” ಉತ್ಪಾದಕ ಎಐ ಮಾದರಿಗಳ ಹೊಸ ಕುಟುಂಬವಾಗಿದೆ. ಗೂಗಲ್‌ನ ಡೀಪ್‌ಮೈಂಡ್ ಎಐ ಸಂಶೋಧನಾ ವಿಭಾಗ ಮತ್ತು ಗೂಗಲ್ ರಿಸರ್ಚ್ ನಡುವಿನ ಸಹಯೋಗ- ಮಾದರಿಗಳು ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ “ಸಂಭಾಷಣೆಯ” ಬೋಧನೆಯನ್ನು ನೀಡುತ್ತದೆ ಎಂದು ಗೂಗಲ್ ಹೇಳಿದೆ.

ಯೂಟ್ಯೂಬ್ ರಸಪ್ರಶ್ನೆಗಳು

ಯೂಟ್ಯೂಬ್ ಎಐ ರಚಿತವಾದ ರಸಪ್ರಶ್ನೆಗಳನ್ನು ಸಹ ಹೊಂದಿದೆ. ಇದು ಶೈಕ್ಷಣಿಕ ವಿಡಿಯೋಗಳನ್ನು ವೀಕ್ಷಿಸುತ್ತಿರುವಾಗ ಬಳಕೆದಾರರಿಗೆ ಸಾಂಕೇತಿಕವಾಗಿ “ತಮ್ಮ ಕೈಯನ್ನು ಮೇಲಕ್ಕೆತ್ತಲು” ಅನುಮತಿಸುತ್ತದೆ. ಉಪಕರಣವನ್ನು ಬಳಸಿಕೊಂಡು, ನೀವು ಪ್ರಶ್ನೆಗಳನ್ನು ಕೇಳಬಹುದು, ವಿವರಣೆಗಳನ್ನು ಪಡೆಯಬಹುದು ಅಥವಾ ವಿಷಯದ ಬಗ್ಗೆ ರಸಪ್ರಶ್ನೆ ತೆಗೆದುಕೊಳ್ಳಬಹುದು.

ಜೆಮ್ಮಾ 2 ನವೀಕರಣಗಳು

ಗೂಗಲ್ ಜೆಮ್ಮಾ 2ಗೆ ಹೊಸ 27 ಬಿಲಿಯನ್ ಪ್ಯಾರಾಮೀಟರ್ ಮಾದರಿಯನ್ನು ಸೇರಿಸಲಿದೆ ಮತ್ತು ಈ ಮಾದರಿಗಳ ಮುಂದಿನ ಪೀಳಿಗೆಯು ಈ ವರ್ಷದ ಜೂನ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಕಂಪನಿ ತಿಳಿಸಿದೆ.

ಗೂಗಲ್ ಪ್ಲೇಗೆ ಬದಲಾವಣೆಗಳು

ಗೂಗಲ್ ಪ್ಲೇ ಅಪ್ಲಿಕೇಶನ್‌ಗಳಿಗಾಗಿ ಹೊಸ ಅನ್ವೇಷಣೆ ವೈಶಿಷ್ಟ್ಯವನ್ನು ಹೊಂದಿರುತ್ತದೆ. ಬಳಕೆದಾರರನ್ನು ಪಡೆದುಕೊಳ್ಳಲು ಹೊಸ ಮಾರ್ಗಗಳು, ಪ್ಲೇ ಪಾಯಿಂಟ್‌ಗಳಿಗೆ ನವೀಕರಣಗಳು ಮತ್ತು ಗೂಗಲ್ ಪ್ಲೇ ಎಸ್ ಡಿಕೆ ಕನ್ಸೋಲ್ ಮತ್ತು ಪ್ಲೇ ಇಂಟೆರ್ ಗ್ರಿಟಿ ಎಪಿಐ ನಂತಹ ವರ್ಧನೆಗಳನ್ನು ಒಳಗೊಂಡಿರುತ್ತದೆ.


ಇದನ್ನೂ ಓದಿ: Warning For Android Users: ಆಂಡ್ರಾಯ್ಡ್ ಬಳಕೆದಾರರಿಗೆ ಕಾದಿದೆ ಅಪಾಯ; ಸರ್ಕಾರದಿಂದ ಗಂಭೀರ ಎಚ್ಚರಿಕೆ

ಕರೆಗಳ ಸಮಯದಲ್ಲಿ ವಂಚನೆಯ ಅಲರ್ಟ್‌

ಕರೆಗಳ ಸಮಯದಲ್ಲಿ ಸಂಭಾವ್ಯ ವಂಚನೆಗಳ ಬಗ್ಗೆ ಬಳಕೆದಾರರನ್ನು ಎಚ್ಚರಿಸುವ ವೈಶಿಷ್ಟ್ಯವನ್ನು ಗೂಗಲ್ ಪೂರ್ವವೀಕ್ಷಣೆ ಮಾಡಿದೆ. ಇದನ್ನು ಆಂಡ್ರಾಯ್ಡ್‌ನ ಭವಿಷ್ಯದ ಆವೃತ್ತಿಯಲ್ಲಿ ನಿರ್ಮಿಸಲಾಗುವುದು ಮತ್ತು ನೈಜ ಸಮಯದಲ್ಲಿ ಸಾಮಾನ್ಯವಾಗಿ ಸ್ಕ್ಯಾಮ್‌ಗಳೊಂದಿಗೆ ಸಂಯೋಜಿತವಾಗಿರುವ ಸಂಭಾಷಣೆ ಮಾದರಿಗಳನ್ನು ಪರಿಣಾಮಕಾರಿಯಾಗಿ ಕೇಳಲು ಜೆಮಿನಿ ನ್ಯಾನೋವನ್ನು ಬಳಸುತ್ತದೆ ಎಂದು ಕಂಪೆನಿ ಹೇಳಿದೆ.

ಒಟ್ಟಿನಲ್ಲಿ ಪ್ರಾಜೆಕ್ಟ್ ಅಸ್ಟ್ರಾ, ಸುಧಾರಿತ ನೋಡುವ ಮತ್ತು ಮಾತನಾಡುವ ಎಐ ಏಜೆಂಟ್, ವೆಯೋ ಜನರೇಟಿವ್ ಎಐ ವಿಡಿಯೋ ಮಾದರಿ ಮತ್ತು 6 ನೇ ತಲೆಮಾರಿನ ಟ್ರಿಲಿಯಮ್ ಟೆನ್ಸರ್ ಪ್ರೊಸೆಸಿಂಗ್ ಯುನಿಟ್ ಅನ್ನು ಗೂಗಲ್ ನ ವಾರ್ಷಿಕ ಡೆವಲಪರ್ ಕಾನ್ಫರೆನ್ಸ್ I/O ನಲ್ಲಿ ಘೋಷಿಸಲಾಯಿತು. ಹುಡುಕಾಟದಲ್ಲಿ ಎಐ ಅವಲೋಕನ, ಜೆಮಿನಿ 1.5 ಪ್ರೊ ಸುಧಾರಣೆಗಳು ಮತ್ತು ಹೊಸ 1.5 ಫ್ಲ್ಯಾಶ್ ಮಾದರಿಯನ್ನು ಹೊರತರುವುದಾಗಿ ಗೂಗಲ್ ಘೋಷಿಸಿತು. ಜೆಮಿನಿಯೊಂದಿಗೆ ಫೋಟೋಗಳನ್ನು ಹುಡುಕಲು ಹೊಸ ಮಾರ್ಗವಾದ ‘ಫೋಟೋಗಳನ್ನು ಕೇಳಿ’ ಅನ್ನು ಕೂಡ ಘೋಷಿಸಲಾಗಿದೆ.

Continue Reading

ದೇಶ

Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಚಾರಿಕೆಯೋ?

Seema Haider: ಸೀಮಾ ಪ್ರೀತಿ ಪ್ರೇಮಕ್ಕಾಗಿ ಭಾರತಕ್ಕೆ ಬಂದಿಲ್ಲ. ಆಕೆಯ ಉದ್ದೇಶ ಬೇರೆಯದ್ದೇ ಇದೆ. ಆಕೆ ಮತ್ತು ಆಕೆ ಕುಟುಂಬಸ್ಥರು ಆಗಾಗ ಪಾಕಿಸ್ತಾನಕ್ಕೆ ಭೇಟಿ ಕೊಡುತ್ತಿರುತ್ತಾರೆ. ಅಲ್ಲದೇ ಅವರು ಪಾಕ್‌ ಸೇನೆ ಜೊತೆ ನಂಟು ಹೊಂದಿದ್ದಾರೆ ಎಂದು ಗುಲಾಂ ಹೇಳಿಕೆಯೊಂದನ್ನು ಕೊಟ್ಟಿದ್ದಾನೆ. ಸೀಮಾ ಆಗಾಗ ಪಾಕಿಸ್ತಾನ ಸೇನಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡುತ್ತಿರುತ್ತಾಳೆ. ಆಕೆ ಚಿಕ್ಕಪ್ಪ ಗುಲಾಮ್‌ ಅಕ್ಬರ್‌ ಕೂಡ ಪಾಕ್‌ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆತನನ್ನು ಆಗಾಗ ಭೇಟಿ ಆಗುತ್ತಿರುತ್ತಾಳೆ. ಇದನ್ನೆಲ್ಲಾ ನೋಡಿದರೆ ಆಕೆ ಭಾರತಕ್ಕೆ ಹೋಗಿರುವುದು ಗೂಢಾಚಾರಿಣಿಯಾಗೋ ಎಂಬ ಅನುಮಾನ ಹುಟ್ಟಿಕೊಳ್ಳುತ್ತದೆ ಎಂದು ಗುಲಾಮ್‌ ಹೇಳಿದ್ದಾನೆ.

VISTARANEWS.COM


on

Seema Haider
Koo

ನವದೆಹಲಿ:ಆನ್‌ಲೈನ್‌ ಪಬ್‌ ಜಿ ಗೇಮ್‌ ಆಡುವಾಗ ಪರಿಚಯವಾದ ಗ್ರೇಟರ್‌ ನೊಯ್ಡಾದ ಸಚಿನ್‌ ಮೀನಾ (Sachin Meena) ಎಂಬ ಯುವಕನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದು, ಸಚಿನ್‌ ಮೀನಾ ಜತೆ ಇರುವ ಸೀಮಾ ಹೈದರ್‌(Seema Haider) ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಸೀಮಾ ಹೈದರ್‌ ಮೊದಲ ಪತಿ ಗುಲಾಂ ಹೈದರ್‌ (Ghulam Haider) ಸೀಮಾ ಬಗ್ಗೆ ಆಘಾತಕಾರಿ ಸಂಗತಿಯೊಂದನ್ನು ಬಹಿರಂಗ ಪಡಿಸಿದ್ದು, ಇದೀಗ ಬಹಳ ಚರ್ಚೆ ಆಗುತ್ತಿದೆ.

ಸೀಮಾ ಪತಿ ಹೇಳಿದ್ದೇನು?

ಸೀಮಾ ಪ್ರೀತಿ ಪ್ರೇಮಕ್ಕಾಗಿ ಭಾರತಕ್ಕೆ ಬಂದಿಲ್ಲ. ಆಕೆಯ ಉದ್ದೇಶ ಬೇರೆಯದ್ದೇ ಇದೆ. ಆಕೆ ಮತ್ತು ಆಕೆ ಕುಟುಂಬಸ್ಥರು ಆಗಾಗ ಪಾಕಿಸ್ತಾನಕ್ಕೆ ಭೇಟಿ ಕೊಡುತ್ತಿರುತ್ತಾರೆ. ಅಲ್ಲದೇ ಅವರು ಪಾಕ್‌ ಸೇನೆ ಜೊತೆ ನಂಟು ಹೊಂದಿದ್ದಾರೆ ಎಂದು ಗುಲಾಂ ಹೇಳಿಕೆಯೊಂದನ್ನು ಕೊಟ್ಟಿದ್ದಾನೆ. ಸೀಮಾ ಆಗಾಗ ಪಾಕಿಸ್ತಾನ ಸೇನಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡುತ್ತಿರುತ್ತಾಳೆ. ಆಕೆ ಚಿಕ್ಕಪ್ಪ ಗುಲಾಮ್‌ ಅಕ್ಬರ್‌ ಕೂಡ ಪಾಕ್‌ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆತನನ್ನು ಆಗಾಗ ಭೇಟಿ ಆಗುತ್ತಿರುತ್ತಾಳೆ. ಇದನ್ನೆಲ್ಲಾ ನೋಡಿದರೆ ಆಕೆ ಭಾರತಕ್ಕೆ ಹೋಗಿರುವುದು ಗೂಢಾಚಾರಿಣಿಯಾಗೋ ಎಂಬ ಅನುಮಾನ ಹುಟ್ಟಿಕೊಳ್ಳುತ್ತದೆ ಎಂದು ಗುಲಾಮ್‌ ಹೇಳಿದ್ದಾನೆ. ಗುಮಾಮ್‌ ಹೇಳಿಕೆಯನ್ನು ಆತನ ವಕೀಲ ಮೊಮಿನ್‌ ಮಾಲಿಕ್‌ ಎಂದು ಬಹಿರಂಗಪಡಿಸಿದ್ದಾರೆ.

ತಂತ್ರಜ್ಞಾನದ ಬಗ್ಗೆ ಸೀಮಾಗೆ ಅತೀವ ಜ್ಞಾನ

ಸೀಮಾಗೆ ತಂತ್ರಜ್ಞಾನದ ಬಳಕೆ ಬಗ್ಗೆ ಅತೀವ ಜ್ಞಾನ ಇದೆ. ಮೊಬೈಲ್‌ ಫೋನ್‌ ಅನ್ನು ಜೋಡಿಸುವುದು, ಟಿಕ್‌ ಟಾಕ್‌ ಬ್ಯಾನ್‌ ಆದ ಮೇಲೂ ಅದನ್ನು ಬಳಸುವುದು ಹೀಗೆ ತಂತ್ರಜ್ಞಾನದ ಬಗ್ಗೆ ಬಹಳಷ್ಟು ತಿಳಿದುಕೊಂಡಿದ್ದಳು. ಆದರೆ ಆಕೆಗೆ ಪಬ್‌ಜಿ ಆಟ ಬಗ್ಗೆ ತಿಳಿದಿರಲಿಲ್ಲ. ಹೀಗಾಗಿ ಪಬ್‌ ಜಿ ಮೂಲಕ ಸಚಿನ್‌ ಪರಿಚಯ ಆಗಿದೆ ಎಂಬ ಆಕೆಯ ಹೇಳಿಕೆ ಸುಳ್ಳು ಎಂದು ಗುಲಾಮ್‌ ಹೈದರ್‌ ಹೇಳಿದ್ದಾನೆ.

2020ರಲ್ಲಿ ಸೀಮಾ ಹೈದರ್‌ ಹಾಗೂ ಸಚಿನ್‌ ಮೀನಾ ಪಬ್ಜಿ ಆನ್‌ಲೈನ್‌ ಗೇಮ್‌ ಮೂಲಕ ಪರಿಚಯವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿದೆ. ಕೊನೆಗೆ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದು, ಸೀಮಾ ಹೈದರ್‌ ಅವರು ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿದ್ದ ತಮ್ಮ ಮನೆ ಮಾರಿ, ಅಕ್ರಮವಾಗಿ 2023ರಲ್ಲಿ ಭಾರತವನ್ನು ಪ್ರವೇಶಿಸಿದ್ದಾರೆ. ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್‌ ಅವರಿಗೆ ಆಶ್ರಯ ನೀಡಿದ ಕಾರಣ ಸೀಮಾ ಹೈದರ್‌, ಆಕೆಯ ನಾಲ್ಕು ಮಕ್ಕಳು, ಸಚಿನ್‌ ಮೀನಾ ಹಾಗೂ ಆತನ ತಂದೆಯನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ. ಸೀಮಾ ಹೈದರ್‌ ಪಾಕಿಸ್ತಾನದ ಗೂಢಚಾರಿ ಇರಬಹುದು ಎಂಬ ಶಂಕೆಯಿಂದ ಎಟಿಎಸ್‌ ವಿಚಾರಣೆ ಕೂಡ ನಡೆಸಿದೆ.

ಇದನ್ನೂ ಓದಿ: Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

ತೀವ್ರ ವಿಚಾರಣೆ ಬಳಿಕ ಸೀಮಾ ಹೈದರ್‌ ಹಾಗೂ ಸಚಿನ್‌ ಮೀನಾ ಅವರು ಒಟ್ಟಿಗೆ ವಾಸಿಸಲು ಅನುಮತಿ ನೀಡಲಾಗಿದೆ. ಸೀಮಾ ಹೈದರ್‌ ಹಾಗೂ ಸಚಿನ್‌ ಮೀನಾ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್‌ ಮೂಲಕವೇ ದೇಶದ ಗಮನ ಸೆಳೆದಿದ್ದಾರೆ. ಇವರ ಪ್ರೇಮ ಪ್ರಕರಣವು ದೇಶಾದ್ಯಂತ ಸುದ್ದಿಯಾಗುವ ಜತೆಗೆ, ಇವರ ವಿಡಿಯೊಗಳು ಕೂಡ ವೈರಲ್‌ ಆಗುತ್ತಿವೆ.

Continue Reading
Advertisement
North East Graduate Constituency Election Congress party leaders and workers Meeting in Yadgiri
ರಾಜಕೀಯ12 seconds ago

MLC Election: ಪರಿಷತ್ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ದರ್ಶನಾಪುರ ಮನವಿ

T20 World Cup 2024
ಕ್ರೀಡೆ3 mins ago

T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

MLC Election
ಕರ್ನಾಟಕ16 mins ago

MLC Election: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌; ಬಂಡಾಯವಾಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ

CAA
EXPLAINER18 mins ago

CAA: ಸಿಎಎ ಅನ್ವಯ 14 ಜನಕ್ಕೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Fortis Hospital doctors team performed a successful complex kidney transplant surgery for two patients with robotic assistance
ಕರ್ನಾಟಕ20 mins ago

Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

V. Sunil Kumar latest statemetn
ಬೆಂಗಳೂರು27 mins ago

V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

private hospitals heads and health department officers Meeting at vijayanagara DC office
ವಿಜಯನಗರ37 mins ago

Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Ram Pothineni Double iSmart teaser with Sanjay Dutt
ಟಾಲಿವುಡ್39 mins ago

Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

Prajwal Revanna Case Deve Gowda lashes out at Bhavani
ರಾಜಕೀಯ41 mins ago

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Wedding men's jewel Fashion Artificial pearl necklace has entered
ಫ್ಯಾಷನ್41 mins ago

Wedding men’s jewel Fashion: ವೆಡ್ಡಿಂಗ್‌ ಮೆನ್ಸ್‌ ಜ್ಯುವೆಲರಿ ಫ್ಯಾಷನ್‌ಗೆ ಕಾಲಿಟ್ಟ ಆರ್ಟಿಫಿಶಿಯಲ್‌ ಪರ್ಲ್‌ ಹಾರ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ10 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ13 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ23 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌