ಕ್ರಾಂತಿಕಾರಕ ಬದಲಾವಣೆಗಾಗಿಯೇ ನೂತನ ಶಿಕ್ಷಣ ನೀತಿ: ನೃಪತುಂಗ ವಿವಿ ಉದ್ಘಾಟಿಸಿದ ಅಮಿತ್‌ ಷಾ - Vistara News

ಕರ್ನಾಟಕ

ಕ್ರಾಂತಿಕಾರಕ ಬದಲಾವಣೆಗಾಗಿಯೇ ನೂತನ ಶಿಕ್ಷಣ ನೀತಿ: ನೃಪತುಂಗ ವಿವಿ ಉದ್ಘಾಟಿಸಿದ ಅಮಿತ್‌ ಷಾ

ದೇಶದಲ್ಲಿ ಸಂಭವಿಸುತ್ತಿರುವ ಶೈಕ್ಷಣಿಕ ಕ್ರಾಂತಿಯಲ್ಲಿ ಭಾರತೀಯ ಪ್ರಾದೇಶಿಕ ಭಾಷೆಗಳಿಗೆ ಮಹತ್ವದ ಸ್ಥಾನವಿದೆ. ಎನ್ಇಪಿಯನ್ನು ಕರ್ನಾಟಕವು ಜಾರಿಗೆ ತರುವಲ್ಲಿ ಮುಂಚೂಣಿಯಲ್ಲಿದೆ ಎಂದು ಷಾ ಶ್ಲಾಘಿಸಿದ್ದಾರೆ.

VISTARANEWS.COM


on

ನೃಪತುಂಗ ಏಕೀಕೃತ ವಿಶ್ವವಿದ್ಯಾಲಯವನ್ನು ಅಧಿಕೃತವಾಗಿ ಉದ್ಘಾಟಿಸಿದ ಕೇಂದ್ರ ಗೃಹಸಚಿವ ಅಮಿತ್‌ ಷಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸರಸ್ವತಿ ವಿಗ್ರಹ ನೀಡಿ ಗೌರವಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತವನ್ನು ಸಶಕ್ತವಾಗಿ ಕಟ್ಟಿ ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಾಪಿಸುವುದು ಮತ್ತು ಯುವಜನರಿಗೆ ಉಜ್ವಲ ಅವಕಾಶಗಳನ್ನು ಒದಗಿಸಬೇಕೆನ್ನುವುದೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಂಕಲ್ಪವಾಗಿದೆ. ಈ ಕ್ರಾಂತಿಕಾರಕ ಬದಲಾವಣೆಗಳನ್ನು ತರಲೆಂದೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದ್ದು, ಭಾರತವನ್ನು ಜ್ಞಾನಾಧರಿತ `ಸೂಪರ್ ಪವರ್’ ಮಾಡಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಮಂಗಳವಾರ ಹೇಳಿದರು.

ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯವನ್ನು ಅಧಿಕೃತವಾಗಿ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನೂತನ ವಿವಿ ಶೈಕ್ಷಣಿಕ ಸಮುಚ್ಚಯ ನಿರ್ಮಾಣಕ್ಕೆ ಶಂಕುಸ್ಥಾಪನೆ, ಲಾಂಛನ ಅನಾವರಣ ಮತ್ತು ಬಳ್ಳಾರಿಯಲ್ಲಿ ಸ್ಥಾಪಿಸಲಾಗಿರುವ ವಿಧಿವಿಜ್ಞಾನ ಪ್ರಯೋಗಾಲಯದ ವರ್ಚುಯಲ್ ಉದ್ಘಾಟನೆಯನ್ನೂ ನೆರವೇರಿಸಿದರು.

ದೇಶದಲ್ಲಿ ಸಂಭವಿಸುತ್ತಿರುವ ಶೈಕ್ಷಣಿಕ ಕ್ರಾಂತಿಯಲ್ಲಿ ಭಾರತೀಯ ಪ್ರಾದೇಶಿಕ ಭಾಷೆಗಳಿಗೆ ಮಹತ್ವದ ಸ್ಥಾನವಿದೆ. ಎನ್ಇಪಿಯನ್ನು ಕರ್ನಾಟಕವು ದೇಶದ ಮೊದಲ ರಾಜ್ಯವಾಗಿ ಜಾರಿಗೆ ತರುವ ಹೊಣೆಯನ್ನು ಸ್ವೀಕರಿಸಿರುವುದು ಶ್ಲಾಘನೀಯ ನಡೆಯಾಗಿದೆ. ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಅವರಲ್ಲಿ ದೇಶಭಕ್ತಿಯ ಸಂಸ್ಕಾರವನ್ನು ಬೆಳೆಸಬೇಕಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಇದು ಕೇಂದ್ರ ಸರಕಾರದ ಪ್ರತಿಜ್ಞೆಯಾಗಿದೆ ಎಂದು ಅವರು ಹೇಳಿದರು.

ಒಂದು ದೇಶ ದೊಡ್ಡದೊಡ್ಡ ಸಾಧನೆಗಳನ್ನು ಮಾಡಲು ವ್ಯಕ್ತಿಗಳ ಚಿಕ್ಕಚಿಕ್ಕ ಸಂಕಲ್ಪಗಳು ನಿರ್ಣಾಯಕ ಕೊಡುಗೆ ಕೊಡುತ್ತವೆ. ಈ ನಿಟ್ಟಿನಲ್ಲಿ, ದೇಶವನ್ನು ಪ್ರೀತಿಸುವಂತಹ ಶಿಕ್ಷಣವನ್ನು ಎನ್ಇಪಿ ಅಡಿಯಲ್ಲಿ ಒದಗಿಸಲಾಗುವುದು. ಇದು ಸಂಪೂರ್ಣ ಭಾರತೀಯ ದೃಷ್ಟಿಕೋನವನ್ನು ಹೊಂದಿದೆ. ದೇಶದ ಪ್ರಗತಿಯ ದೃಷ್ಟಿಯಿಂದ ಮುಂದಿನ 25 ವರ್ಷಗಳಿಗೆ ಅತಿಶಯ ಮಹತ್ವವಿದ್ದು, ಭಾರತವು ವಿಶ್ವಗುರು ಎನಿಸಿಕೊಳ್ಳುವುದು ನಿಶ್ಚಿತ ಎಂದು ಹೇಳಿದರು.

ಕಳೆದ ಎಂಟು ವರ್ಷಗಳಿಂದ ಈಚೆಗೆ ದೇಶದ ಗ್ರಾಮೀಣ ಭಾಗದಲ್ಲಿ 410 ಉನ್ನತ ಶಿಕ್ಷಣ ಸಂಸ್ಥೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ. ಜತೆಗೆ ಜಮ್ಮು-ಕಾಶ್ಮೀರದ ಲಡಾಖ್ ಮತ್ತು ಈಶಾನ್ಯ ಭಾರತ ಸೇರಿದಂತೆ ಉದ್ದಗಲಕ್ಕೂ ಕೇಂದ್ರೀಯ ವಿವಿ, ಏಮ್ಸ್, ಐಐಟಿಗಳು, ವೈದ್ಯಕೀಯ ಕಾಲೇಜುಗಳು ಮತ್ತು ಹೊಸ ಜ್ಞಾನಶಾಖೆಗಳ ವಿ.ವಿ.ಗಳನ್ನು ಆರಂಭಿಸಲಾಗಿದೆ. ಈ ಮೂಲಕ ದೇಶದ ಎಲ್ಲಾ ಭಾಗಗಳನ್ನೂ ಸಮಾನವಾಗಿ ಕಾಣಲಾಗುತ್ತಿದೆ.

ಪ್ರಧಾನಿ ಮೋದಿ ತಮ್ಮ ದಕ್ಷ ನೀತಿಗಳ ಮೂಲಕ ದೇಶವನ್ನು ಉತ್ಪಾದನಾ ಹಬ್ ಆಗಿ ಬೆಳೆಸುತ್ತಿದ್ದಾರೆ. ಇನ್ನೊಂದೆಡೆ, ಭಯೋತ್ಪಾದನೆ ಮತ್ತಿತರ ಪಿಡುಗುಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ ಭಾರತವು ಅಮೆರಿಕ ಮತ್ತು ಇಸ್ರೇಲ್ ದೇಶಗಳ ಮಟ್ಟಕ್ಕೆ ಬೆಳೆದು, ಬೆಳಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ | 2nd PU Exam: ಪಿಯುಸಿ ಪರೀಕ್ಷೆಗೂ ಹಿಜಾಬ್‌ ಧರಿಸುವಂತಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ

ಇ-ಬೀಟ್ ಪೊಲೀಸ್ ಪಹರೆ, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಚಾಲನೆ

ರಾಜ್ಯ ಪೊಲೀಸ್ ಇಲಾಖೆಯ ಇ-ಬೀಟ್ (ಸ್ಮಾರ್ಟ್ ಪೊಲೀಸಿಂಗ್) ವ್ಯವಸ್ಥೆಗೂ ಚಾಲನೆ ನೀಡಿದರು. ಜತೆಗೆ, ಬಳ್ಳಾರಿಯ ವಿಧಿವಿಜ್ಞಾನ ಪ್ರಯೋಗಾಲಯವನ್ನೂ ಅಮಿತ್‌ ಷಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, `ಗುಜರಾತಿನಲ್ಲಿರುವ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಒಂದು ಕ್ಯಾಂಪಸ್ಸನ್ನು ರಾಜ್ಯದಲ್ಲಿ ತೆರೆಯಲು ಕೇಂದ್ರ ಸರಕಾರವನ್ನು ಕೋರಲಾಗಿದ್ದು, 50 ಎಕರೆ ಜಮೀನನ್ನು ಮೀಸಲಿಡಲಾಗಿದೆ. ಇದಕ್ಕೆ ಅಮಿತ್‌ ಶಾ ಭಾಗಶಃ ಒಪ್ಪಿಗೆಯನ್ನೂ ಸೂಚಿಸಿದ್ದಾರೆ’ ಎಂದು ತಿಳಿಸಿದರು.

ಇದನ್ನೂ ಓದಿ | ಶಿಕ್ಷಣದಲ್ಲಿ ಭಾರತೀಯತೆ ರೂಪಿಸಲು ಎಲ್ಲರ ಸಹಕಾರ ಬೇಕು: ವಿಶ್ವದರ್ಶನ ಸಂಭ್ರಮದಲ್ಲಿ ಸಚಿವ ಬಿ. ಸಿ. ನಾಗೇಶ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ತಿದ್ದ ಪ್ರಜ್ವಲ್ ರೇವಣ್ಣ!

Prajwal Revanna Case: ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

VISTARANEWS.COM


on

prajwal revanna case test
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಇದೀಗ ಜೈಲಿನಲ್ಲಿರುವ ಹಾಸನ (Hassan news) ಮಾಜಿ ಸಂಸದ ಪ್ರಜ್ವಲ್ ರೇವಣ್ಣ , (Prajwal Revanna case) ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ (HIV Test) ಮಾಡಿಸಿಕೊಳ್ಳುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್‌ಐವಿ ಟೆಸ್ಟ್ ವಿಚಾರವೂ ಒಂದು. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

ಹಲವು ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಎಂಬ ಆರೋಪಕ್ಕೆ ಈ ಸಂಗತಿ ಪುಷ್ಟಿ ನೀಡಿದ್ದು, ಇದನ್ನು ಪ್ರಜ್ವಲ್‌ಗೆ ವಿರೋಧ ಸಾಕ್ಷ್ಯವಾಗಿ ಬಳಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ.

ಪ್ರತಿದಿನ ಫೋನ್‌ ಮಾಡಿ ಬೆತ್ತಲಾಗಲು ಹೇಳ್ತಿದ್ದ: ಪ್ರಜ್ವಲ್‌ ವಿರುದ್ಧ ನಾಲ್ಕನೇ ದೂರು

ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ‌ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್‌ ಫೋನ್‌ ನಂಬರ್ ಪಡೆದಿದ್ದ. ನಂಬರ್‌ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.

ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್‌ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ‌ ಚುರುಕುಗತಿ ಪಡೆದುಕೊಂಡಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

Continue Reading

ಪ್ರಮುಖ ಸುದ್ದಿ

Dengue Fever: ಹಾಸನ ಜಿಲ್ಲೆಯಲ್ಲಿ ಮೂರು ಮಕ್ಕಳ ಬಲಿ ಪಡೆದ ಜ್ವರ; ಡೆಂಗ್ಯು ಮರಣ ಮೃದಂಗ?

Dengue Fever: ಅರಕಲಗೂಡು ಮೂಲದ ಒಂದು ಹಾಗು ಹೊಳೆನರಸೀಪುರ ಮೂಲದ ಎರಡು ಕಂದಮ್ಮಗಳು ಸಾವಿಗೀಡಾಗಿವೆ. ಮೂರೂ ಮಕ್ಕಳೂ ತೀವ್ರ ಜ್ವರದಿಂದ ಬಳಲಿದ್ದವು. ನಿನ್ನೆ ಕೂಡ ಹೊಳೆನರಸೀಪುರ ತಾಲ್ಲೂಕಿನ ಕಲಾಶ್ರೀ ಜಿ.ಎಲ್ (11) ನಿಧನ ಹೊಂದಿದ್ದಾಳೆ.

VISTARANEWS.COM


on

Dengue fever rises across the state including Bengaluru BBMP Commissioner also get fever
Koo

ಹಾಸನ: ಹಾಸನ ಜಿಲ್ಲೆಯಲ್ಲಿ (Hassan news) ಡೆಂಗ್ಯು ಜ್ವರ (Dengue Fever) ಮರಣ ಮೃದಂಗ ಬಾರಿಸುತ್ತಿದೆ ಎಂದು ಶಂಕೆಗೆ ಕಾರಣವಾಗುವಂತೆ, ಮೂವರು ಮಕ್ಕಳು ಜ್ವರ ಏರಿ (Children death) ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯು ಹಾವಳಿ ವಿಪರೀತವಾಗಿದ್ದು, ಈ ಮಕ್ಕಳನ್ನೂ ಡೆಂಗ್ಯು ಜ್ವರ ಬಲಿ ಪಡೆದಿದೆ ಎಂದು ಶಂಕಿಸಲಾಗಿದೆ.

ಅರಕಲಗೂಡು ಮೂಲದ ಒಂದು ಹಾಗು ಹೊಳೆನರಸೀಪುರ ಮೂಲದ ಎರಡು ಕಂದಮ್ಮಗಳು ಸಾವಿಗೀಡಾಗಿವೆ. ಮೂರೂ ಮಕ್ಕಳೂ ತೀವ್ರ ಜ್ವರದಿಂದ ಬಳಲಿದ್ದವು. ಜುಲೈ 1ರಂದು ಅರಕಲಗೂಡು ಮೂಲದ ಅಣ್ಣಪ್ಪಶೆಟ್ಟಿ ಹಾಗು ಪದ್ಮ ದಂಪತಿ ಪುತ್ರಿ ಅಕ್ಷತಾ (13) ಸಾವಿಗೀಡಾಗಿದ್ದಾಳೆ. ಜೂನ್ 30ರಂದು ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಮೂಲದ ವರ್ಷಿಕಾ(8) ತೀವ್ರ ಜ್ವರದಿಂದ ಬಳಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ನಿನ್ನೆ ಕೂಡ ಹೊಳೆನರಸೀಪುರ ತಾಲ್ಲೂಕಿನ ಕಲಾಶ್ರೀ ಜಿ.ಎಲ್ (11) ನಿಧನ ಹೊಂದಿದ್ದಾಳೆ. ಈಕೆ ಹೊಳೆನರಸೀಪುರ ತಾಲ್ಲೂಕಿನ ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ ಮತ್ತು ತನುಜ ಎಂಬವರ ಪುತ್ರಿ.

ಪುಟ್ಟ ಮಕ್ಕಳ‌ ಪ್ರಾಣಕ್ಕೆ ಡೆಂಗ್ಯು ಕಂಟಕವಾಗುತ್ತಿದೆ ಎಂಬ ಭೀತಿ ಎದುರಾಗುತ್ತಿದೆ. ಮಕ್ಕಳು ಹಗಲು ಹೊರಗಡೆ ನಿರ್ಬೀತಿಯಿಂದ ಆಟವಾಡುತ್ತಾರೆ. ಡೆಂಗ್ಯು ಹರಡುವ ಸೊಳ್ಳೆಗಳು ಹಗಲಿನಲ್ಲಿ ಸಕ್ರಿಯವಾಗಿದ್ದು, ಬಯಲಿನಲ್ಲಿ ಸುಲಭವಾಗಿ ಸಿಗುವ ಮಕ್ಕಳನ್ನು ಕಚ್ಚುತ್ತಿವೆ. ಹೀಗಾಗಿ ಮಕ್ಕಳಲ್ಲಿ ಡೆಂಗ್ಯು ಪೀಡಿತರು ಜಾಸ್ತಿ ಎಂದು ತರ್ಕಿಸಲಾಗಿದೆ.

ಜ್ವರ ತೀವ್ರಗೊಂಡ ಬಳಿಕ ಮಕ್ಕಳು ಜಿಲ್ಲಾಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಜ್ವರದಿಂದ ಬಳಲಿದ ಮಕ್ಕಳ ಸರಣಿ ಸಾವಿನಿಂದ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ 205 ಜನರಿಗೆ ಡೆಂಗ್ಯು ಜ್ವರ ದೃಡಪಟ್ಟಿದೆ. ಸುಮಾರು 6204 ಜನರಿಗೆ ಡೆಂಗ್ಯು ಲಕ್ಷಣಗಳು ಕಾಣಿಸಿಕೊಂಡಿವೆ. ಜ್ವರ, ಮೈ ಕೈ ನೋವು ಸೇರಿ ಡೆಂಗ್ಯು ಲಕ್ಷಣ ಇರುವ ಆರು ಸಾವಿರ ಜನರ ರಕ್ತದ ಮಾದರಿ ಸಂಗ್ರಹಿಸಲಾಗಿದೆ.

ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದಾಗಿ ಡೆಂಗ್ಯು ವ್ಯಾಪಕವಾಗಿ ಹರಡುತ್ತಿದೆ. ನಿಂತ ನೀರಿನಲ್ಲಿ ಡೆಂಗ್ಯು ಸೊಳ್ಳೆಗಳು ಹುಟ್ಟಿಕೊಳ್ಳುತ್ತಿವೆ. ಡೆಂಗ್ಯು ನಿಯಂತ್ರಣ ಮಾಡುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಜನ ಆಕ್ರೋಶಿಸಿದ್ದಾರೆ.

ಡೆಂಗ್ಯು ಜ್ವರ ಪರೀಕ್ಷೆಗೆ ದರ ನಿಗದಿ

ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

ಡೆಂಗ್ಯೂ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಲಾಗುತ್ತದೆ. ತಲಾ 300 ರೂ.ನಂತೆ ಒಟ್ಟು 600 ರೂ. ದರವನ್ನು ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಈ ಸಂದರ್ಭವನ್ನು ಬಳಸಿಕೊಂಡು ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಲು ಮುಂದಾಗಿದೆ.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಂಗಳವಾರ ತಿಳಿಸಿದ್ದರು.

ನಮ್ಮ ವೆಬ್‌ಸೈಟಿನಲ್ಲಿ ಡೆಂಗ್ಯೂ ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಪ್ರತಿ ದಿನ ಎಷ್ಟು ಕೇಸ್ ಬಂದಿದೆ ಎನ್ನುವ ಮಾಹಿತಿ ಹಾಕುತ್ತೇವೆ. ದಿನ ನಿತ್ಯ ಡೆಂಗ್ಯೂ ಬುಲೆಟಿನ್ ಕೊಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಎಲ್ಲಾ ಮನೆಗಳ ಸರ್ವೆ ಮಾಡುತ್ತಿದೆ. ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲ ಎಲ್ಲಾ ಮನೆಗಳ ಸರ್ವೆ ನಡೆಸಲು ನಾನು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಮನೆ ಮನೆಗೆ ಭೇಟಿ ಕೊಡಲು ಸೂಚಿಸಿದ್ದೇನೆ. ರಾಜ್ಯಾದ್ಯಂತ ಡೆಂಗ್ಯೂ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯೂ ವಿಚಾರದಲ್ಲಿ ಫೀಲ್ಡ್‌ನಲ್ಲಿ ಇದ್ದು, ಮಾನಿಟರ್ ಮಾಡಲು ಸೂಚಿಸಿದ್ದೇನೆ. ಪ್ರತಿ ಶುಕ್ರವಾರ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ: Dengue Fever In Children: ಮಗುವಿನ ಮೈ ಬಿಸಿ ಆಗಿದೆಯೇ? ಡೆಂಗ್ಯು ಜ್ವರದ ಲಕ್ಷಣಗಳನ್ನು ತಿಳಿದುಕೊಳ್ಳಿ

Continue Reading

ಕ್ರೈಂ

Fraud Case: ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್, ಗರ್ಭಿಣಿಯಿಂದ ಪೊಲೀಸ್‌ಗೆ ದೂರು

Fraud Case: ಕಾಲೇಜಿನಲ್ಲಿ ಓದುವಾಗಲೇ ಈ ಜೋಡಿ ಪರಸ್ಪರ ಪ್ರೀತಿಸಿದ್ದರು. ತನ್ನನ್ನು ವಿವಾಹ ಆಗುವುದಾಗಿ ನಂಬಿಸಿ ತನ್ನನ್ನು ಬಳಸಿಕೊಂಡಿದ್ದು, ಇದೀಗ ತಾನು ಗರ್ಭಿಣಿಯಾಗಿದ್ದೇನೆ. ಆತನನ್ನು ಹುಡುಕಿಕೊಡಿ ಎಂದು ಗಗನ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

VISTARANEWS.COM


on

fraud case bagepalli
Koo

ಚಿಕ್ಕಬಳ್ಳಾಪುರ: ಪ್ರೀತಿ ಹೆಸರಲ್ಲಿ ತನ್ನನ್ನು ಗರ್ಭಿಣಿ (Pregnant) ಮಾಡಿ ವಂಚಿಸಿ (Fraud Case) ಪ್ರಿಯಕರ ಪರಾರಿಯಾಗಿದ್ದಾನೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾಳೆ. ಇದೀಗ ಆಕೆ ಗರ್ಭಿಣಿ ಆಗಿದ್ದು, ಪ್ರಿಯಕರನನ್ನು ಹುಡುಕಿ ಕೊಡುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಇಬ್ಬರೂ ಬಾಗೇಪಲ್ಲಿ ತಾಲ್ಲೂಕಿನ ದೇವರಗುಡಿಪಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಲ್ಲಸಂದ್ರ ಗ್ರಾಮದ ನಿವಾಸಿಗಳು. ಸೂರ್ಯಪ್ರಕಾಶ್ ಪ್ರೀತಿಸಿ ಗರ್ಭಿಣಿ ಮಾಡಿ ಕೈ ಕೊಟ್ಟ ಪ್ರಿಯಕರ. ಗಗನ ಪ್ರೀತಿಯ ಹೆಸರಲ್ಲಿ ಮೋಸ ಹೋದ ಪ್ರಿಯತಮೆ. ಕಾಲೇಜಿನಲ್ಲಿ ಓದುವಾಗಲೇ ಈ ಜೋಡಿ ಪರಸ್ಪರ ಪ್ರೀತಿಸಿದ್ದರು. ತನ್ನನ್ನು ವಿವಾಹ ಆಗುವುದಾಗಿ ನಂಬಿಸಿ ತನ್ನನ್ನು ಬಳಸಿಕೊಂಡಿದ್ದು, ಇದೀಗ ತಾನು ಗರ್ಭಿಣಿಯಾಗಿದ್ದೇನೆ. ಆತನನ್ನು ಹುಡುಕಿಕೊಡಿ ಎಂದು ಗಗನ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಗುದದ್ವಾರದಲ್ಲಿ 2 ಮೊಬೈಲ್‌ ಇಟ್ಟುಕೊಂಡು ಜೈಲಿನೊಳಗೆ ಹೋಗಲು ಯತ್ನಿಸಿದ ಕೈದಿ

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara Jail) ಜೈಲಿನಲ್ಲಿ ಕೈದಿಗಳ (Prison inmates) ಕಳ್ಳಾಟ ನಿಲ್ಲುತ್ತಿಲ್ಲ. ಕೈದಿಗಳಿಂದಲೇ ರಾಜಾರೋಷವಾಗಿ ಜೈಲಿನಲ್ಲಿ ಮೊಬೈಲ್ ಮಾರಾಟ (mobile phone sale) ನಡೆಯುತ್ತಿದ್ದು, ಜೈಲಿನಲ್ಲಿಯೇ ಇದರಿಂದ ಕೆಲವರು ಲಕ್ಷ ಲಕ್ಷ ಸಂಪಾದನೆ ಮಾಡುತ್ತಿದ್ದಾರೆ. ಈ ವರದಿ ಓದಿದರೆ, ಮೊಬೈಲ್‌ ಸಾಗಿಸಲು ಇಂಥ ಹಾದಿ ಹಿಡಿಯುವವರೂ ಇರ್ತಾರಾ ಎಂದು ನಿಮಗೆ ಸೋಜಿಗ ಆಗಬಹುದು.

ಹೀಗೆ ಒಬ್ಬ ಕೈದಿ ಕದ್ದು ಮುಚ್ಚಿ ಜೈಲಿಗೆ ಮೊಬೈಲ್ ತೆಗೆದುಕೊಂಡು ಹೋಗಲು ಯತ್ನಿಸಿದ್ದು, ಈತ ಮೊಬೈಲ್ ಇಟ್ಟುಕೊಂಡ ಜಾಗ ಮಾತ್ರ ಪತ್ತೆ ಮಾಡಿದ್ದೇ ರೋಚಕ. ಕೋರ್ಟ್‌ಗೆ ಹೋಗಿ ಮರಳುತ್ತಿದ್ದ ಕೈದಿಯೊಬ್ಬನ ಗುದದ್ವಾರದಲ್ಲಿ ಎರಡು ಮೊಬೈಲ್ ಸಿಕ್ಕಿವೆ! ಜೈಲಿನ ಒಳಗೆ ಬರುವಾಗ ಸ್ಕ್ಯಾನ್ ಮಾಡಿದಾಗ ಈ ವಿಚಾರ ಪತ್ತೆಯಾಗಿದೆ. ರಘುವೀರ್ ಎಂಬ ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ ಎರಡು ಮೊಬೈಲ್ ಹಾಗೂ ಬ್ಯಾಟರಿ ಪತ್ತೆಯಾಗಿವೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿದ್ದ ಪೊಲೀಸರು ವಾಪಸ್ ಬರುವಾಗ ಯಾರಿಂದಲೋ ಹೇಗೋ ಕಣ್ಣು ತಪ್ಪಿಸಿ ಈತ ಮೊಬೈಲ್ ಪಡೆದಿದ್ದ. ಶ್ರೀಕೃಷ್ಣ ಎಂಬ ಪೊಲೀಸ್ ಪೇದೆ ರಘುವೀರ್‌ನನ್ನು ಕರೆದುಕೊಂಡು ಹೋಗಿದ್ದ. ವಾಪಸ್ ಬಂದಾಗ ಜೈಲಿನ ತಪಾಸಣೆ ವೇಳೆ ಸ್ಕ್ಯಾನ್ ಸೈರನ್ ಮಾಡಿತ್ತು. ಕೂಡಲೇ ರಘುವೀರ್‌ನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದು ಎಕ್ಸರೇ ಮಾಡಿದಾಗ ಪೊಲೀಸರಿಗೇ ಶಾಕ್ ಆಗಿತ್ತು.

ಹೊಟ್ಟೆಯೊಳಗೆ ಎರಡು ಮೊಬೈಲ್ ಇದ್ದವು. ಹೊಟ್ಟೆಯೊಳಗೆ ಮೊಬೈಲ್ ಹಾಕಿಕೊಂಡು, ಸೆಲ್ಲೋ ಟೇಪ್ ಗುದದ್ವಾರದಲ್ಲಿ ಕೆಳಗೆ ಬಿಟ್ಟಿದ್ದ. ಜೈಲಿನೊಳಗೆ ಹೋಗಿ ಅದನ್ನು ತೆಗೆದು ಲಕ್ಷ ಲಕ್ಷಕ್ಕೆ ಮಾರಾಟ ಮಾಡಲು ಪ್ಲಾನ್‌ ಮಾಡಿಕೊಂಡಿದ್ದ. ಆದರೆ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ, ಆತ ಯಾರಿಗೆ ಮಾರಲು ಮೊಬೈಲ್‌ ಒಯ್ದಿದ್ದ ಎಂಬ ಕುತೂಹಲ ಮೂಡಿದೆ. ಹೈ ಪ್ರೊಫೈಲ್, ವಿಐಪಿ ಕೈದಿಗಳು ಕೂಡ ಜೈಲಿನಲ್ಲಿರುವುದರಿಂದ ಈ ಕುತೂಹಲ.

ಇದನ್ನೂ ಓದಿ: Arun Somanna: ವಂಚನೆ, ಜೀವ ಬೆದರಿಕೆ; ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್

Continue Reading

ಪ್ರಮುಖ ಸುದ್ದಿ

Board Exam: ಈ ವರ್ಷ 5, 8, 9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ: ಶಿಕ್ಷಣ ಇಲಾಖೆ

Board Exam: ಈ ತರಗತಿಗಳ ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇರುವುದರಿಂದ 2024-25ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಪದ್ಧತಿಯೇ ಮುಂದುವರಿಯಲಿದೆ ಎಂದು ಇಲಾಖೆ ಸೂಚಿಸಿದೆ.

VISTARANEWS.COM


on

board exam
Koo

ಬೆಂಗಳೂರು: ರಾಜ್ಯ ಪಠ್ಯ ಕ್ರಮದ (State Syllabus) ಶಾಲೆಗಳ 5, 8 ಹಾಗೂ 9ನೇ ತರಗತಿ ಮಕ್ಕಳಿಗೆ ಈ ವರ್ಷ ಪಬ್ಲಿಕ್‌ ಪರೀಕ್ಷೆ (Public exam, board Exam) ನಡೆಸಲಾಗುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ (Education Department) ತಿಳಿಸಿದೆ. ಈ ತರಗತಿಗಳ ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇರುವುದರಿಂದ 2024-25ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಪದ್ಧತಿಯೇ ಮುಂದುವರಿಯಲಿದೆ ಎಂದು ಇಲಾಖೆ ಸೂಚಿಸಿದೆ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯ ಕ್ರಮದ 1ರಿಂದ 10ನೇ ತರಗತಿ ಶಾಲೆಗಳಿಗೆ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಹೊರಡಿಸಲಾಗಿದೆ. ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯ ವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ಸೂಚಿಸಿ, ಅದರಂತೆ ಕ್ರಮವಹಿಸಲು ತಿಳಿಸಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ: 29-05-2024ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23ನೇ ʼಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24ನೇ ಸಾಲಿನಲ್ಲಿ ʼಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಚಟುವಟಿಕೆ ಕೋಶಗಳನ್ನು ಸಿದ್ಧಪಡಿಸಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಅಳವಡಿಸಿ ಕಲಿಕಾ ಅಂತರವನ್ನು ಬೆಸೆಯಲು ನಿರಂತರವಾಗಿ ಉಪಕ್ರಮಗಳನ್ನು ಅನುಷ್ಠಾನಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಸಜ್ಜುಗೊಳಿಸಲು ಶೈಕ್ಷಣಿಕ ವರ್ಷದ ಆರಂಭದಲ್ಲಿ ʼಸೇತುಬಂಧ’ ಕಾರ್ಯಕ್ರಮವನ್ನು ಜೂನ್ ತಿಂಗಳಿನಲ್ಲಿ ನಡೆಸುವುದು. 1ರಿಂದ 10ನೇ ತರಗತಿಗಳಿಗೆ ಸೇತುಬಂಧ ಸಾಹಿತ್ಯವನ್ನು ಸಿದ್ಧಪಡಿಸಿ DSERT website ನಲ್ಲಿ ಅಳವಡಿಸಲಾಗಿದೆ. ಕಾರ್ಯಕ್ರಮ ಅನುಷ್ಠಾನಿಸುವ ಕುರಿತು ಸೇತುಬಂಧ ಸುತ್ತೋಲೆಯ ಮೂಲಕ ಮಾರ್ಗದರ್ಶನ ನೀಡಲಾಗಿದೆ.

ಶಾಲಾ ಬ್ಯಾಗ್‌ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ಪಠ್ಯ ಪುಸ್ತಕಗಳನ್ನು ಭಾಗ-1 ಮತ್ತು ಭಾಗ-2ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1ರ ಪಠ್ಯ ಶೇ.50 ಹಾಗೂ ಭಾಗ-2ರ ಪಠ್ಯ ಶೇ.50 ಒಟ್ಟು ಸೇರಿ ಶೇ.100ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆ ಕ್ರಮವಹಿಸುವುದು.

ಉಲ್ಲೇಖಿತ ಸುತ್ತೋಲೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಆಧರಿಸಿ, ವಾರ್ಷಿಕ ಪಾಠ ಹಂಚಿಕೆ ಮಾಡಿಕೊಂಡು, ಕಲಿಕೆಯನ್ನು ಅನುಕೂಲಿಸುತ್ತಾ, ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಮೌಲ್ಯಾಂಕನ ನಿರ್ವಹಿಸಲು ಅನುವಾಗುವಂತೆ ಮಾಹಿತಿಯನ್ನು ನೀಡಲಾಗಿರುತ್ತದೆ. ಅದರಂತೆ, ಶಾಲಾಹಂತದಲ್ಲಿ ನಿಗದಿತ ಕಾಲಾವಧಿಯೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮವಹಿಸುವುದು.

ಇದನ್ನೂ ಓದಿ: Public Exam: 5, 8, 9ನೇ ತರಗತಿ ಪಬ್ಲಿಕ್‌ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪ; ವಿವರ ಸಲ್ಲಿಕೆಗೆ ಸರ್ಕಾರ ಸೂಚನೆ

Continue Reading
Advertisement
Prajwal Devaraj birthday Karavali Cinema Update
ಸ್ಯಾಂಡಲ್ ವುಡ್13 mins ago

Prajwal Devaraj: ಪ್ರಜ್ವಲ್ ದೇವರಾಜ್‌ ಬರ್ತ್‌ಡೇ; ‘ಕರಾವಳಿ’ಯಿಂದ ಸಿಕ್ತು ಭರ್ಜರಿ ಗಿಫ್ಟ್!

prajwal revanna case test
ಪ್ರಮುಖ ಸುದ್ದಿ16 mins ago

Prajwal Revanna Case: 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ತಿದ್ದ ಪ್ರಜ್ವಲ್ ರೇವಣ್ಣ!

Actor Darshan Will Attend The Court Hearing From Online
ಸಿನಿಮಾ33 mins ago

Actor Darshan: ಇಂದು ನ್ಯಾಯಾಲಯಕ್ಕೆ ಹಾಜರಾಗ್ತಿಲ್ಲ ದರ್ಶನ್ &ಟೀಂ; ಕಾರಣವೇನು?

Price Hike
ವಾಣಿಜ್ಯ35 mins ago

Price Hike: ಮೊಬೈಲ್ ಕಂಪನಿಗಳಿಂದ ದರ ಏರಿಕೆ; ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬಹುದೆ?

Team India
ಕ್ರೀಡೆ40 mins ago

Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

Dengue fever rises across the state including Bengaluru BBMP Commissioner also get fever
ಪ್ರಮುಖ ಸುದ್ದಿ40 mins ago

Dengue Fever: ಹಾಸನ ಜಿಲ್ಲೆಯಲ್ಲಿ ಮೂರು ಮಕ್ಕಳ ಬಲಿ ಪಡೆದ ಜ್ವರ; ಡೆಂಗ್ಯು ಮರಣ ಮೃದಂಗ?

Varalaxmi Sarathkumar Reception attend By sudeep Family
ಸ್ಯಾಂಡಲ್ ವುಡ್1 hour ago

Varalaxmi Sarathkumar: ವರಲಕ್ಷ್ಮಿ ಶರತ್‌ಕುಮಾರ್ ರಿಸಪ್ಷನ್‌ನಲ್ಲಿ ಮಿಂಚಿದ ಕಿಚ್ಚ ಸುದೀಪ್ ಕುಟುಂಬ!

fraud case bagepalli
ಕ್ರೈಂ1 hour ago

Fraud Case: ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್, ಗರ್ಭಿಣಿಯಿಂದ ಪೊಲೀಸ್‌ಗೆ ದೂರು

Suryakumar Yadav
ಕ್ರೀಡೆ1 hour ago

Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

Kalki 2898 AD records global box office collection
ಟಾಲಿವುಡ್2 hours ago

Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ7 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ7 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌