ಗೋವಾದಲ್ಲಿ ಕಾಂಗ್ರೆಸ್‌ ಕಗ್ಗಂಟು; ಲೋಬೋ, ಕಾಮತ್‌ರನ್ನು ಅನರ್ಹಗೊಳಿಸಲು ಸ್ಪೀಕರ್‌ಗೆ ಅರ್ಜಿ - Vistara News

ದೇಶ

ಗೋವಾದಲ್ಲಿ ಕಾಂಗ್ರೆಸ್‌ ಕಗ್ಗಂಟು; ಲೋಬೋ, ಕಾಮತ್‌ರನ್ನು ಅನರ್ಹಗೊಳಿಸಲು ಸ್ಪೀಕರ್‌ಗೆ ಅರ್ಜಿ

ಗೋವಾ ಕಾಂಗ್ರೆಸ್‌ ಅಸ್ಥಿರಗೊಂಡಿದೆ. ಏಳು ಶಾಸಕರು ಪಕ್ಷದ ಸಭೆಗೆ ಹಾಜರಾಗಿರಲಿಲ್ಲ. ಇವರೆಲ್ಲ ಪಕ್ಷದಿಂದ ಬಂಡಾಯ ಎದ್ದಿದ್ದಾರೆ. ಬಿಜೆಪಿ ಸೇರ್ಪಡೆಯಾಗಲು ಅವರಿಗೆ ಹಣದ ಆಫರ್‌ ಬಂದಿದೆ ಎನ್ನಲಾಗಿದೆ.

VISTARANEWS.COM


on

Goa Congress
ಸ್ಪೀಕರ್‌ಗೆ ಅನರ್ಹತೆ ಅರ್ಜಿ ಸಲ್ಲಿಸಿದ ಕಾಂಗ್ರೆಸ್‌ ಗೋವಾ ಅಧ್ಯಕ್ಷ ಅಮಿತ್‌ ಪಾಟ್ಕರ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಣಜಿ: ಗೋವಾದಲ್ಲಿ ಕಾಂಗ್ರೆಸ್‌ನಲ್ಲಿ ಏಳು ಶಾಸಕರು ಬಂಡಾಯ ಎದ್ದ ಬೆನ್ನಲ್ಲೇ, ಅವರು ಬಿಜೆಪಿ ಸೇರ್ಪಡೆಯಾಗುತ್ತಾರೆ. ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ ಭರ್ಜರಿ ಹಣದ ಆಫರ್‌ ಬರುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇನ್ನು ಪಕ್ಷದಲ್ಲಿ ಉಂಟಾದ ಈ ಗೊಂದಲಕ್ಕೆ ಪಕ್ಷದ ನಾಯಕರಾದ ಮೈಕಲ್‌ ಲೋಬೋ ಮತ್ತು ದಿಗಂಬರ್‌ ಕಾಮತ್‌ ಅವರೇ ಕಾರಣ ಎಂದೂ ಕಾಂಗ್ರೆಸ್‌ ಪ್ರಮುಖರು ಹೇಳಿದ್ದಾರೆ. ಈಗಾಗಲೇ ಮೈಕೆಲ್‌ ಲೋಬೋರನ್ನು ಗೋವಾ ವಿಧಾನಸಭೆ ವಿಪಕ್ಷ ನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ. ಇದೀಗ ಇನ್ನೂ ಮುಂದುವರಿದು ಮೈಕೆಲ್‌ ಲೋಬೋ ಮತ್ತು ದಿಗಂಬರ್‌ ಕಾಮತ್‌ರನ್ನು ಅನರ್ಹಗೊಳಿಸಬೇಕು ಎಂಬ ಅರ್ಜಿಯನ್ನು ವಿಧಾನಸಭೆ ಸ್ಪೀಕರ್‌ಗೆ ಸಲ್ಲಿಸಲಾಗಿದೆ.

ಲೋಬೋ ಮತ್ತು ಕಾಮತ್‌ ಅನರ್ಹತೆಗೆ ಮನವಿ ಮಾಡಿ ಸ್ಪೀಕರ್‌ಗೆ ಅರ್ಜಿ ಸಲ್ಲಿಸಿದ ಬಳಿಕ ಮಾತನಾಡಿದ ಕಾಂಗ್ರೆಸ್‌ ಗೋವಾ ಅಧ್ಯಕ್ಷ ಅಮಿತ್‌ ಪಾಟ್ಕರ್‌, ʼಹಿರಿಯ ನಾಯಕರಾದ ಮೈಕೆಲ್‌ ಲೋಬೋ ಮತ್ತು ದಿಗಂಬರ್‌ ಕಾಮತ್‌ ಇಬ್ಬರೂ ಪಕ್ಷ ವಿರೋಧಿ ಚಟುವಟಿಕೆ ನಡೆಸುವ ಮೂಲಕ ಸ್ವಯಂ ಇಷ್ಟದಿಂದಲೇ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಬಿಟ್ಟಿದ್ದಾರೆ. ಯಾರೇ ಆಗಲಿ ಪಕ್ಷ ದುರ್ಬಲಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡರೆ, ಅವರು ಸ್ವಯಂಪ್ರೇರಿತರಾಗಿಯೇ ಪ್ರಾಥಮಿಕ ಸದಸ್ಯತ್ವ ಬಿಟ್ಟಂತೆ ಎಂದು 2020ರಲ್ಲಿ ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಅದೇ ತೀರ್ಪಿನ ಆಧಾರದ ಮೇಲೆ ನಾವು ಇಂದು ಕ್ರಮ ಕೈಗೊಂಡಿದ್ದೇವೆ. ಅನರ್ಹಗೊಳಿಸಲು ಮನವಿ ಮಾಡಲಾಗಿದೆʼ ಎಂದು ತಿಳಿಸಿದ್ದಾರೆ.

ದಿನೇಶ್‌ ಗುಂಡೂರಾವ್‌ ಆರೋಪದಿಂದ ಬೇಸರ
ಗೋವಾದ ಕಾಂಗ್ರೆಸ್‌ ನಾಯಕರು ಪಕ್ಷದ ಸಭೆಗೆ ಗೈರಾಗುತ್ತಿದ್ದಂತೆ ಬಂಡಾಯದ ವಾಸನೆ ಬಡಿದಿತ್ತು. ಒಟ್ಟು 11 ಶಾಸಕರಿದ್ದು, ಅದರಲ್ಲಿ ಏಳು ಮಂದಿ ಸಭೆಗೆ ಬಂದಿರಲಿಲ್ಲ. ಆ ಏಳು ಜನರಲ್ಲಿ ಆರು ಮಂದಿ ಬಿಜೆಪಿ ಸೇರುವುದು ಪಕ್ಕಾ ಎನ್ನಲಾಗಿತ್ತು. ಅದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಎಐಸಿಸಿ ಗೋವಾ ಉಸ್ತುವಾರಿ ದಿನೇಶ್‌ ಗುಂಡೂರಾವ್‌, ಲೋಬೋ ಮತ್ತು ಕಾಮತ್‌ ವಿರುದ್ಧ ಆರೋಪ ಮಾಡಿದ್ದರು.

ತಮ್ಮ ಮೇಲಿನ ಆಪಾದನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ದಿಗಂಬರ್‌ ಕಾಮತ್‌, ʼನಾನು ದಿನೇಶ್‌ ಗುಂಡೂರಾವ್‌ ಸುದ್ದಿಗೋಷ್ಠಿ ನೋಡಿದೆ. ಅವರು ಮಾಡಿದ ಆರೋಪ ಕೇಳಿ ನನಗೇ ದಿಗಿಲಾಯಿತು. ಶಾಕ್‌ ಆಯಿತುʼ ಎಂದು ಹೇಳಿಕೊಂಡಿದ್ದರು. ಲೋಬೋ ಕೂಡ ಇದನ್ನು ತೀವ್ರವಾಗಿ ಖಂಡಿಸಿದ್ದರು. ನಾವು ಕಾಂಗ್ರೆಸ್‌ ಒಡೆಯುವ ಪ್ರಯತ್ನ ಮಾಡುತ್ತಿಲ್ಲ. ಬಿಜೆಪಿ ಸೇರ್ಪಡೆಯಾಗುವುದಿಲ್ಲ ಎಂದು ಇಬ್ಬರೂ ನಾಯಕರು ಪದೇಪದೆ ಹೇಳುತ್ತಿದ್ದಾರೆ. ಹಾಗಿದ್ದಾಗ್ಯೂ ಇಬ್ಬರ ವಿರುದ್ಧ ಕ್ರಮ ಮತ್ತಷ್ಟು ಜಟಿಲವಾಗುತ್ತಲೇ ಇದೆ.

ಇದನ್ನೂ ಓದಿ: ಗೋವಾದಲ್ಲಿ ದಿನೇಶ್‌ ಗುಂಡೂರಾವ್‌; ವಿಧಾನಸಭೆ ವಿಪಕ್ಷ ನಾಯಕನ ಸ್ಥಾನದಿಂದ ಮೈಕೆಲ್‌ ಲೋಬೋ ವಜಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hooch Tragedy: ಕಳ್ಳಬಟ್ಟಿ ಸೇವಿಸಿ 16 ಮಂದಿ ಸಾವು, 70ಕ್ಕೂ ಅಧಿಕ ಜನ ಅಸ್ವಸ್ಥ

Hooch Tragedy: ನೂರಾರು ಜನ ಮಂಗಳವಾರ (ಜೂನ್‌ 18) ರಾತ್ರಿ ಕಳ್ಳಬಟ್ಟಿ ಸೇವಿಸಿದ್ದಾರೆ. ಬುಧವಾರ ಬೆಳಗ್ಗೆ ವಾಂತಿ, ಭೇದಿ ಸೇರಿ ಹಲವು ರೀತಿಯ ಬಾಧೆ ಅನುಭವಿಸಿದ್ದಾರೆ. ಕೂಡಲೇ ಅವರನ್ನು ಕಳ್ಳಕುರಿಚಿ ಜಿಲ್ಲಾಸ್ಪತ್ರೆ ಸೇರಿ ಹಲವು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಆದರೂ, 16 ಮಂದಿ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

VISTARANEWS.COM


on

Hooch Tragedy
Koo

ಚೆನ್ನೈ: ದೇಶದಲ್ಲಿ ಕಳ್ಳಬಟ್ಟಿ ಸಾರಾಯಿಯನ್ನು ನಿಷೇಧಿಸಿ, ಅದರ ನಿಗ್ರಹಕ್ಕೆ ಹತ್ತಾರು ಕ್ರಮಗಳನ್ನು ತೆಗೆದುಕೊಂಡರೂ ದೇಶದ ಹಲವೆಡೆ ಕಳ್ಳಬಟ್ಟಿ ದಂಧೆಯು (Illicit Liquor) ಯಥೇಚ್ಛವಾಗಿ ನಡೆಯುತ್ತಲೇ ಇರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ತಮಿಳುನಾಡಿನಲ್ಲಿ (Tamil Nadu) ಕಳ್ಳಬಟ್ಟಿ ಸೇವಿಸಿ 16 ಮಂದಿ ಮೃತಪಟ್ಟರೆ (Hooch Tragedy), 70ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲೂ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ತಮಿಳುನಾಡಿನ ಕಳ್ಳಕುರಿಚಿ ಜಿಲ್ಲೆಯಲ್ಲಿ ಬುಧವಾರ ಕಳ್ಳಬಟ್ಟಿ ದುರಂತ ಸಂಭವಿಸಿದೆ. ಕರುಣಾಪುರಂ ಕಾಲೋನಿಯವರು ಸೇರಿ ನೂರಾರು ಜನ ಮಂಗಳವಾರ (ಜೂನ್‌ 18) ರಾತ್ರಿ ಕಳ್ಳಬಟ್ಟಿ ಸೇವಿಸಿದ್ದಾರೆ. ಬುಧವಾರ ಬೆಳಗ್ಗೆ ವಾಂತಿ, ಭೇದಿ ಸೇರಿ ಹಲವು ರೀತಿಯ ಬಾಧೆ ಅನುಭವಿಸಿದ್ದಾರೆ. ಕೂಡಲೇ ಅವರನ್ನು ಕಳ್ಳಕುರಿಚಿ ಜಿಲ್ಲಾಸ್ಪತ್ರೆ ಸೇರಿ ಹಲವು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಆದರೂ, 16 ಮಂದಿ ಮೃತಪಟ್ಟಿದ್ದಾರೆ. ಅಸ್ವಸ್ಥರಾಗಿರುವವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಸಿಐಡಿ ತನಿಖೆಗೆ ಆದೇಶ

ಕಳ್ಳಬಟ್ಟಿ ದುರಂತವು ದೇಶಾದ್ಯಂತ ಸುದ್ದಿಯಾಗಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಲೇ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಪ್ರಕರಣದ ತನಿಖೆಯನ್ನು ಸಿಬಿ-ಸಿಐಡಿಗೆ ವಹಿಸಿದ್ದಾರೆ. ಅಷ್ಟೇ ಅಲ್ಲ, ಕಳ್ಳಕುರಿಚಿ ಜಿಲ್ಲಾಧಿಕಾರಿ ಶ್ರವಣ್‌ಕುಮಾರ್‌ ಜಟಾವಥ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಎಂ.ಎಸ್.ಪ್ರಶಾಂತ್‌ ಅವರನ್ನು ಕಳ್ಳಕುರಿಚಿ ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿದ್ದಾರೆ. ಹಾಗೆಯೇ, ರಾಜ್ಯದಲ್ಲಿ ಯಾವುದೇ ಭಾಗದಲ್ಲೂ ಕಳ್ಳಬಟ್ಟಿ ಕಾಣಿಸಕೂಡದು ಎಂಬುದಾಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಕಳ್ಳಬಟ್ಟಿ ಪ್ರಕರಣವು ಸುದ್ದಿಯಾಗುತ್ತಲೇ ಕಳ್ಳಬಟ್ಟಿ ದಂಧೆಯಲ್ಲಿ ತೊಡಗಿದ್ದ, ಗ್ರಾಮೀಣ ಭಾಗದ ಜನರಿಗೆ ಕಳ್ಳಬಟ್ಟಿಯನ್ನು ಪ್ಯಾಕೆಟ್‌ಗಳಲ್ಲಿ ತುಂಬಿ ಸರಬರಾಜು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 200 ಲೀಟರ್‌ ಕಳ್ಳಬಟ್ಟಿಯನ್ನೂ ವಶಪಡಿಸಿಕೊಂಡಿದ್ದಾರೆ. ಇದರ ಜತೆಗೆ, ಕಳ್ಳಕುರಿಚಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಮಯಸಿಂಗ್‌ ಮೀನಾ ಸೇರಿ ಒಟ್ಟು 10 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ರಾಜ್ಯಾದ್ಯಂತ ಕಳ್ಳಬಟ್ಟಿಯನ್ನು ನಿರ್ಮೂಲನೆ ಮಾಡಬೇಕು ಎಂದು ಮಹಿಳೆಯರು ಸೇರಿ ಹಲವು ಸಂಘಟನೆಗಳು ಆಗ್ರಹಿಸಿವೆ.

ಇದನ್ನೂ ಓದಿ: Toxic Liquor Deaths : ಕಳ್ಳಬಟ್ಟಿ ಕುಡಿದು 20 ಮಂದಿಯ ಸಾವು, ಆರು ಮಂದಿ ಗಂಭೀರ

Continue Reading

ದೇಶ

NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

NET 2024: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ ಸುಮಾರು 11 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೆಟ್‌ ಬರೆದಿದ್ದರು.

VISTARANEWS.COM


on

NET 2024
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET 2024) ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಜೂನ್‌ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನೇ (NET 2024) ಕೇಂದ್ರ ಸರ್ಕಾರವು ರದ್ದುಗೊಳಿಸಿದೆ. ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ನ್ಯಾಷನ್‌ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೆಟ್‌ಗೆ ಹಾಜರಾಗಿದ್ದರು. ಈಗ ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌.ಡಿ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಬದಲು ಅಭ್ಯರ್ಥಿಯು ನೆಟ್‌ನಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಲು ಯುಜಿಸಿಯು ಈಗಾಗಲೇ ಅನುಮೋದನೆ ನೀಡಿದೆ. ಹಾಗಾಗಿ, ಅಭ್ಯರ್ಥಿಗಳಿಗೆ ನೆಟ್‌ ಪ್ರಮುಖ ಸಂಗತಿಯಾಗಿದೆ.

2024-25ನೇ ಶೈಕ್ಷಣಿಕ ಸಾಲಿನಿಂದಲೇ ಪಿಎಚ್‌.ಡಿ ಪ್ರವೇಶಾತಿ ವೇಳೆ ಸಿಇಟಿ ಬದಲಾಗಿ ನೆಟ್‌ ಅಂಕಗಳನ್ನೇ ಪರಿಗಣಿಸಬೇಕು ಎಂಬುದಾಗಿ ಯುಜಿಸಿಯು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ (NEP) ಅಡಿಯಲ್ಲಿಯೇ ಯುಜಿಸಿಯು ಈ ತೀರ್ಮಾನ ತೆಗೆದುಕೊಂಡಿದೆ. ಕಳೆದ ಮಾರ್ಚ್‌ 13ರಂದು ನಡೆದ ಸಭೆಯಲ್ಲಿ ಯುಜಿಸಿ ನೆಟ್‌ ಪರೀಕ್ಷೆಯ ನಿಬಂಧನೆಗಳ ಮರುಪರಿಶೀಲನೆ ಕುರಿತು ರಚಿಸಿದ ತಜ್ಞರ ಸಮಿತಿಯ ಶಿಫಾರಸುಗಳ ಅನ್ವಯ ಯುಜಿಸಿ ತೀರ್ಮಾನ ತೆಗೆದುಕೊಂಡಿದೆ. ಈ ಕುರಿತು ಅಧಿಸೂಚನೆಯನ್ನೂ ಹೊರಡಿಸಲಾಗಿದೆ.

ಇದನ್ನೂ ಓದಿ: NEET UG 2024: ನೀಟ್ ಯುಜಿ ವಿವಾದ; ಶೇ. 0.001ರಷ್ಟು ನಿರ್ಲಕ್ಷ್ಯವೂ ಸಹಿಸಲು ಸಾಧ್ಯವಿಲ್ಲ ಎಂದು ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

Continue Reading

ದೇಶ

Hajj Pilgrims: ಬಿಸಿಗಾಳಿ, ಬಿಸಿಲಿನ ಹೊಡೆತ; ಹಜ್‌ ಯಾತ್ರೆ ಕೈಗೊಂಡ 68 ಭಾರತೀಯರ ಸಾವು

Hajj Pilgrims: Hajj Pilgrims: ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಗರಿಷ್ಠ ತಾಪಮಾನವು 50 ಡಿಗ್ರಿ ಸೆಲ್ಸಿಯಸ್​ ತಲುಪಿದ್ದು, ಹಜ್‌ ಯಾತ್ರೆ ಕೈಗೊಂಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಬಿಸಿಲಿನ ಹೊಡೆತಕ್ಕೆ ಸಿಲುಕಿ ಸುಮಾರು 550 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಶಾಖ ಸಂಬಂಧಿತ ಕಾಯಿಲೆಗಳಿಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇವರಲ್ಲಿ ಭಾರತೀಯರೂ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

VISTARANEWS.COM


on

Hajj Pilgrims
Koo

ಮೆಕ್ಕಾ: ಸೌದಿ ಅರೇಬಿಯಾದ (Saudi Arabia) ಮೆಕ್ಕಾದಲ್ಲಿರುವ ಮುಸ್ಲಿಮರ ಪವಿತ್ರ ಹಜ್‌ ಯಾತ್ರೆ ಕೈಗೊಂಡಿರುವವರಿಗೆ ಬೇಸಿಗೆಯ ಬಿಸಿಲು, ಬಿಸಿಗಾಳಿಯ ಹೊಡೆತವು ಮಾರಣಾಂತಿಕವಾಗಿ ಪರಿಣಮಿಸಿದೆ. ಬಿಸಿಗಾಳಿ ಸಂಬಂಧಿತ ಕಾಯಿಲೆಯಿಂದ ಮೆಕ್ಕಾದಲ್ಲಿ (Mecca) 550ಕ್ಕೂ ಅಧಿಕ ಯಾತ್ರಿಕರು ಮೃತಪಟ್ಟಿದ್ದು, ಮೃತರಲ್ಲಿ ಭಾರತದ 68 ಯಾತ್ರಿಕರು (Hajj Pilgrims) ಇದ್ದಾರೆ ಎಂದು ಸೌದಿ ಅರೇಬಿಯಾದ ರಾಜತಾಂತ್ರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಭಾರತದ 68 ಯಾತ್ರಿಕರು ಮೃತಪಟ್ಟಿರುವುದು ದೃಢವಾಗಿದೆ. ಇವರಲ್ಲಿ ಕೆಲವು ಜನ ವಯೋಸಹಜ ಕಾಯಿಲೆಯಿಂದ ಮೃತಪಟ್ಟರೆ, ಹೆಚ್ಚಿನ ಜನ ಉಷ್ಣಗಾಳಿ ಸಂಬಂಧಿತ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ” ಎಂಬುದಾಗಿ ರಾಜತಾಂತ್ರಿಕ ಅಧಿಕಾರಿಗಳು ಎಎಫ್‌ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ. ಈ ಕಾರಣಕ್ಕೆ ಪ್ರತಿ ವರ್ಷ ಇಲ್ಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಸೋಮವಾರ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ.

ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು, 60 ಮಂದಿ ಜೋರ್ಡಾನ್‌ನವರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಸೇರಿದ್ದಾರೆ. ಇನ್ನು ತನ್ನ ದೇಶದ ಐವರು ಯಾತ್ರಿಕರು ಸಾವಿಗೀಡಾಗಿದ್ದಾರೆ ಎಂದು ಇರಾನ್ ಹೇಳಿದ್ದು, ಕಾರಣವನ್ನು ಬಹಿರಂಗಪಡಿಸಿಲ್ಲ. ಸೆನೆಗಲ್ ಮೂರು ಸಾವುಗಳನ್ನು ವರದಿ ಮಾಡಿದೆ. ಹಜ್ ಸಮಯದಲ್ಲಿ 136 ಇಂಡೋನೇಷ್ಯಾದ ಯಾತ್ರಿಕರು ಮತಪಟ್ಟಿದ್ದಾರೆ, ಇದರಲ್ಲಿ ಕನಿಷ್ಠ ಮೂವರು ಶಾಖದ ಹೊಡೆತದಿಂದ ನಿಧನರಾಗಿದ್ದಾರೆ ಎಂದು ಅಲ್ಲಿನ ಅದಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೌದಿ ಅರೇಬಿಯಾದ ಅಧಿಕಾರಿಗಳು ಶಾಖದ ಒತ್ತಡದಿಂದ ಬಳಲುತ್ತಿರುವ 2,000ಕ್ಕೂ ಹೆಚ್ಚು ಯಾತ್ರಾರ್ಥಿಗಳಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ವರದಿ ಹೇಳಿದೆ. ಕಳೆದ ವರ್ಷ ಇಲ್ಲಿ ವಿವಿಧ ದೇಶಗಳಲ್ಲಿ ಕನಿಷ್ಠ 240 ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು. ಈ ಪೈಕಿ ಹೆಚ್ಚಿನವರು ಇಂಡೋನೇಷ್ಯಾದವರು. ಈ ವರ್ಷ ಸುಮಾರು 18,00,000 ಯಾತ್ರಾರ್ಥಿಗಳು ಹಜ್ ಯಾತ್ರೆಯಲ್ಲಿ ಭಾಗವಹಿಸಿದ್ದು, ಆ ಪೈಕಿ 16,00,000 ವಿದೇಸಿಗರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಧಿಕೃತ ಹಜ್ ವೀಸಾ ದುಬಾರಿಯಾದ ಕಾರಣ ಪ್ರತಿವರ್ಷ ಸಾವಿರಾರು ಯಾತ್ರಿಕರು ಅಕ್ರಮವಾಗಿಯೂ ಇಲ್ಲಿಗೆ ಆಗಮಿಸುತ್ತಾರೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನದ ಜೇಬುಗಳ್ಳರ ಕಾಟ; ಸೌದಿ ಅರೇಬಿಯಾ ಖಡಕ್ ವಾರ್ನಿಂಗ್‌

Continue Reading

ದೇಶ

Union Cabinet: ಭತ್ತ ಸೇರಿ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿದ ಮೋದಿ ಸರ್ಕಾರ; ರೈತರಿಗೆ ಗುಡ್‌ ನ್ಯೂಸ್

Union Cabinet: ಕೇಂದ್ರ ಸರ್ಕಾರವು ಬೆಂಬಲ ಬೆಲೆ ಏರಿಕೆ ಮಾಡಿರುವುದರಿಂದ ದೇಶದ ರೈತರು ಸುಮಾರು 2 ಲಕ್ಷ ಕೋಟಿ ರೂಪಾಯಿಯನ್ನು ಕನಿಷ್ಠ ಬೆಂಬಲ ಬೆಲೆಯನ್ನಾಗಿ ಪಡೆಯಲಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ 35 ಸಾವಿರ ಕೋಟಿ ರೂಪಾಯಿಯನ್ನು ಎಂಎಸ್‌ಪಿಯಾಗಿ ರೈತರಿಗೆ ನೀಡಲಾಗುತ್ತದೆ ಎಂಬುದಾಗಿ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಅಶ್ವಿನಿ ವೈಷ್ಣವ್‌ ಅವರು ಮಾಹಿತಿ ನೀಡಿದರು.

VISTARANEWS.COM


on

Narendra Modi
Koo

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ನರೇಂದ್ರ ಮೋದಿ ಅವರು ದೇಶದ ಜನರಿಗೆ ಹಲವು ಸಿಹಿ ಸುದ್ದಿ ನೀಡಿದ್ದಾರೆ. ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅನ್ವಯ 9.26 ಕೋಟಿ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ವರ್ಗಾವಣೆ, ಪಿಎಂ ಆವಾಸ್‌ ಯೋಜನೆ ಅಡಿಯಲ್ಲಿ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣ ಸೇರಿ ಹಲವು ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ, ಭತ್ತ, ಸೂರ್ಯಕಾಂತಿ, ಜೋಳ ಸೇರಿ 14 ಹಿಂಗಾರು ಬೆಳೆಗಳಿಗೆ (Kharif Crops) ಕನಿಷ್ಠ ಬೆಂಬಲ ಬೆಲೆ (Minimum Support Price) ನೀಡಲು ಕೇಂದ್ರ ಸಚಿವ ಸಂಪುಟ ಸಭೆಯು (Union Cabinet) ಬುಧವಾರ (ಜೂನ್‌ 19) ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಅವರು ತೀರ್ಮಾನಗಳ ಕುರಿತು ಮಾಹಿತಿ ನೀಡಿದರು. “ನರೇಂದ್ರ ಮೋದಿ ಅವರ ಸರ್ಕಾರವು ರೈತರ ಕಲ್ಯಾಣಕ್ಕೆ ಬದ್ಧವಾಗದೆ. ಹಾಗಾಗಿ, ಭತ್ತ ಸೇರಿ 14 ಹಿಂಗಾರು ಬೆಳೆಗಳಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ. ಭತ್ತಕ್ಕೆ ನೀಡುವ ಎಂಎಸ್‌ಪಿಯನ್ನು 117 ರೂ. ಏರಿಕೆ ಮಾಡಲಾಗಿದ್ದು, ಇದರೊಂದಿಗೆ ಒಟ್ಟು ಎಂಎಸ್‌ಪಿ 2,300 ರೂ. ಆಗಿದೆ” ಎಂಬುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರ

ಭತ್ತ, ಹತ್ತಿ, ಜೋಳ, ರಾಗಿ, ಬಾಜ್ರಾ, ಮೆಕ್ಕೆ ಜೋಳ, ಸೂರ್ಯಕಾಂತಿ, ಎಳ್ಳು ಸೇರಿ 14 ಬೆಳೆಗಳ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ. ಹತ್ತಿಗೆ ಒಂದು ಕ್ವಿಂಟಾಲ್‌ಗೆ 501 ರೂ. ಏರಿಕೆ ಮಾಡಲಾದರೆ, ಸೂರ್ಯಕಾಂತಿಗೆ 983 ರೂ., ಎಳ್ಳಿಗೆ 632 ರೂ., ತೊಗರಿಗೆ 550 ರೂ. ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರವು ಬೆಂಬಲ ಬೆಲೆ ಏರಿಕೆ ಮಾಡಿರುವುದರಿಂದ ದೇಶದ ರೈತರು ಸುಮಾರು 2 ಲಕ್ಷ ಕೋಟಿ ರೂಪಾಯಿಯನ್ನು ಕನಿಷ್ಠ ಬೆಂಬಲ ಬೆಲೆಯನ್ನಾಗಿ ಪಡೆಯಲಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ 35 ಸಾವಿರ ಕೋಟಿ ರೂಪಾಯಿಯನ್ನು ಎಂಎಸ್‌ಪಿಯಾಗಿ ರೈತರಿಗೆ ನೀಡಲಾಗುತ್ತದೆ ಎಂಬುದಾಗಿ ಮಾಹಿತಿ ನೀಡಿದರು.

ಅಷ್ಟೇ ಅಲ್ಲ, ನರೇಂದ್ರ ಮೋದಿ ಅವರ ಲೋಕಸಭೆ ಕ್ಷೇತ್ರವಾದ ವಾರಾಣಸಿಯಲ್ಲಿರುವ ವಿಮಾಣ ನಿಲ್ದಾಣದಲ್ಲಿ 2,870 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಟರ್ಮಿನಲ್‌ ನಿರ್ಮಾಣಕ್ಕೂ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಮಹಾರಾಷ್ಟ್ರದಲ್ಲಿ ವಾಧವಾನ್‌ ಬಂದರು ನಿರ್ಮಾಣಕ್ಕೂ ಸಚಿವ ಸಂಪುಟ ಸಭೆಯು ಸಮ್ಮತಿ ಸೂಚಿಸಿದೆ.

ಇದನ್ನೂ ಓದಿ: Narendra Modi: ನಳಂದಾ ವಿವಿಯ ನೂತನ ಕ್ಯಾಂಪಸ್ ಉದ್ಘಾಟಿಸಿದ ಮೋದಿ; ಭಾರತವನ್ನು ಶಿಕ್ಷಣದ ಜಾಗತಿಕ ಕೇಂದ್ರವನ್ನಾಗಿಸುವ ಪಣ

Continue Reading
Advertisement
Hooch Tragedy
ದೇಶ60 mins ago

Hooch Tragedy: ಕಳ್ಳಬಟ್ಟಿ ಸೇವಿಸಿ 16 ಮಂದಿ ಸಾವು, 70ಕ್ಕೂ ಅಧಿಕ ಜನ ಅಸ್ವಸ್ಥ

Blacklist contractors who do not complete work within time says Minister Mankala Vaidya
ಉತ್ತರ ಕನ್ನಡ1 hour ago

Uttara Kannada News: ಅವಧಿಯೊಳಗೆ ಕಾಮಗಾರಿ ಮುಕ್ತಾಯಗೊಳಿಸದ ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸಿ: ಸಚಿವ ಮಂಕಾಳ ವೈದ್ಯ

Appu Cup Season 2 to be held in July A team building event was held in Bengaluru
ಬೆಂಗಳೂರು1 hour ago

Appu Cup Badminton: ʼಅಪ್ಪು ಕಪ್ ಸೀಸನ್ 2ʼ; ಟೀಮ್ ಬಿಲ್ಡಿಂಗ್‌ಗೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

RSA vs USA
ಕ್ರೀಡೆ1 hour ago

SA vs USA: ಮಿಂಚಿದ ಡಿಕಾಕ್; ಯುಎಸ್‌ಎ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 18 ರನ್‌ಗಳ ಜಯ

NET 2024
ದೇಶ2 hours ago

NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

Hajj Pilgrims
ದೇಶ3 hours ago

Hajj Pilgrims: ಬಿಸಿಗಾಳಿ, ಬಿಸಿಲಿನ ಹೊಡೆತ; ಹಜ್‌ ಯಾತ್ರೆ ಕೈಗೊಂಡ 68 ಭಾರತೀಯರ ಸಾವು

Bescom complaint against false information video about electricity compensation for farmers
ಕರ್ನಾಟಕ4 hours ago

Fact Check: ಹೊಲದಲ್ಲಿ ಟ್ರಾನ್ಸ್‌ಫಾರ್ಮರ್‌ ಇದ್ದರೆ ರೈತರಿಗೆ ಪರಿಹಾರ? ಬೆಸ್ಕಾಂ ಹೇಳಿದ್ದೇನು?

Murder Case
ಕರ್ನಾಟಕ4 hours ago

Murder Case: 3 ವರ್ಷದ ಬಾಲಕನ ಕತ್ತು ಸೀಳಿ ಕೊಂದ ಚಿಕ್ಕಪ್ಪ; ನದಿಯಲ್ಲಿ ಈಜಲು ಹೋಗಿ ಇಬ್ಬರು ನಾಪತ್ತೆ

Suniel Shetty
ಬಾಲಿವುಡ್4 hours ago

Suniel Shetty: ಅಪ್ಪ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ ರೆಸ್ಟೋರೆಂಟ್‌ಗೆ ಈಗ ಸುನೀಲ್‌ ಶೆಟ್ಟಿ ಒಡೆಯ; ಇದಪ್ಪ Success ಅಂದ್ರು ಜನ!

DCM DK Shivakumar visit Kengal Anjaneya temple
ಕರ್ನಾಟಕ4 hours ago

DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌