IND vs ENG ODI | ಕೊಹ್ಲಿ ಅಲಭ್ಯತೆಗೆ ಗಾಯ ಕಾರಣವೇ? ಜಾಲತಾಣದಲ್ಲಿ ಚರ್ಚೆ ಜೋರು - Vistara News

ಕ್ರೀಡೆ

IND vs ENG ODI | ಕೊಹ್ಲಿ ಅಲಭ್ಯತೆಗೆ ಗಾಯ ಕಾರಣವೇ? ಜಾಲತಾಣದಲ್ಲಿ ಚರ್ಚೆ ಜೋರು

IND vs ENG ODI ಟೀಮ್‌ ಇಂಡಿಯಾ ಬ್ಯಾಟರ್‌ ವಿರಾಟ್‌ ಕೊಹ್ಲಿಯ ಫಾರ್ಮ್‌ ಕಳೆದ ಕೆಲ ತಿಂಗಳಿಂದ ಭಾರಿ ಚರ್ಚೆಗೆ ಒಳಗಾಗುತ್ತಿರುವ ವಿಚಾರ. ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ಕೊಹ್ಲಿ ಆಡುತ್ತಿಲ್ಲ ಎಂದು ತಿಳಿದು ಬಂದಿದೆ. ಆದರೆ ಕೊಹ್ಲಿ ಆಡದೇ ಇರುವುದಕ್ಕೆ ಕಾರಣ ಬೇರೆ ಇರಬಹುದು ಎಂಬುದು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬರುತ್ತಿರುವ ಅಭಿಪ್ರಾಯ.

VISTARANEWS.COM


on

IND vs ENG ODI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ತೊಡೆ ಸಂದು ನೋವಿಗೆ ಒಳಗಾಗಿದ್ದು ಇಂಗ್ಲೆಂಡ್‌ ವಿರುದ್ಧದ ಮೊದಲ (IND vs ENG ODI) ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಸಣ್ಣ ಪ್ರಮಾಣದಲ್ಲಿ ತೊಡೆಸಂದು ಗಾಯ (groin injury)ಕ್ಕೆ ಕೊಹ್ಲಿ ತುತ್ತಾಗಿದ್ದು, ಈ ಕಾರಣದಿಂದ ಮೊದಲ ಪಂದ್ಯದಲ್ಲಿ ಆಡುವ ಬಳಗದಲ್ಲಿಲ್ಲ ಎಂದು ಬಿಸಿಸಿಐ ತಿಳಿಸಿದೆ.

ವಿರಾಟ್‌ ಕೊಹ್ಲಿ ಟೀಮ್‌ ಇಂಡಿಯಾದ ಅತ್ಯಂತ ಫಿಟ್‌ ಆಟಗಾರ. ಅವರು ಗಾಯಗೊಳ್ಳುವುದು ಅಪರೂಪ. ಉತ್ತಮ ಬ್ಯಾಟರ್‌ ಅಷ್ಟೇ ಅಲ್ಲ ಉತ್ತಮ ಫೀಲ್ಡರ್‌ ಆಗಿರುವ ಅವರು ಗಾಯದ ಕಾರಣಕ್ಕೆ ಪಂದ್ಯಕ್ಕೆ ಅಲಭ್ಯರಾದ ಉದಾಹರಣೆ ಬಹಳ ಕಡಿಮೆ. ಹೀಗಾಗಿ ಕೊಹ್ಲಿಯ ವಿಚಾರದಲ್ಲಿ ಟೀಮ್‌ ಮ್ಯಾನೇಜ್‌ಮೆಂಟ್‌ ಸುಳ್ಳು ಹೇಳುತ್ತಿದೆ ಎಂಬುವುದು ಕೆಲವು ಅಭಿಮಾನಿಗಳ ಅಭಿಪ್ರಾಯ. ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಬಹಳ ಜೋರಾಗಿದ್ದು, ಕೆಲ ಕ್ರಿಕೆಟ್‌ ಪ್ರೇಮಿಗಳು ವ್ಯಕ್ತಪಡಿಸಿರುವ ಕೆಲವು ಅಭಿಪ್ರಾಯಗಳ ತುಣುಕು ಇಲ್ಲಿದೆ.

೧. ವಿರಾಟ್‌ ಕೊಹ್ಲಿ ಐಪಿಎಲ್‌ ೧೫ನೇ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಇಂಗ್ಲೆಂಡ್‌ ವಿರುದ್ಧದ ಬರ್ಮಿಂಗ್‌ಹ್ಯಾಮ್‌ ಟೆಸ್ಟ್‌ನ ಎರಡೂ ಇನಿಂಗ್ಸ್‌ನಲ್ಲಿ ಉತ್ತಮವಾಗಿ ಆಡಿರಲಿಲ್ಲ. ಅಂತೆಯೇ ಟಿ೨೦ ಸರಣಿಯ ಕೊನೆಯೆರಡು ಪಂದ್ಯಗಳಲ್ಲಿ ಪಾಲ್ಗೊಂಡು ಬ್ಯಾಟಿಂಗ್‌ ವೈಫಲ್ಯ ಎದುರಿಸಿದ್ದರು. ಇದಕ್ಕೂ ಮೊದಲು ಕೊಹ್ಲಿ ಕಳಪೆ ಫಾರ್ಮ್‌ ಅನುಭವಿಸುತ್ತಿದ್ದು ೨ ವರ್ಷಗಳಿಂದ ಯಾವುದೇ ಪ್ರಾಕಾರದ ಕ್ರಿಕೆಟ್‌ನಲ್ಲಿ ಶತಕ ಭಾರಿಸಿಲ್ಲ.

೨. ಕೊಹ್ಲಿ ವೈಫಲ್ಯಕ್ಕೆ ಟೀಂ ಇಂಡಿಯಾದ ಮಾಜಿ ಆಟಗಾರರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಸುನಿಲ್‌ ಗವಾಸ್ಕರ್‌, ವೆಂಕಟೇಶ್‌ ಪ್ರಸಾದ್‌ ಸೇರಿ ಹಲವರು ಕೊಹ್ಲಿಯನ್ನು ತಂಡದಿಂದ ಕೈಬಿಡಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಏಕದಿನ ಸರಣಿಯಲ್ಲೂ ವೈಫಲ್ಯ ಕಂಡರೆ ಇನ್ನಷ್ಟು ಟೀಕೆಗಳನ್ನು ಕೇಳಬೇಕಾಗಬಹುದು ಎಂಬ ಕಾರಣಕ್ಕೆ ಈ ಸರಣಿಯಲ್ಲಿ ಆಡದೆ ತಪ್ಪಿಸಿಕೊಂಡು ಒಂದಷ್ಟು ಸಮಯಾವಕಾಶ ಪಡೆದುಕೊಳ್ಳುವ ಉದ್ದೇಶದಿಂದ ಕೊಹ್ಲಿ ಆಡುವ ಬಳಗದಿಂದ ಸ್ವತಃ ಹೊರಗುಳಿದಿದ್ದಾರೆ ಎಂಬುದು ಕೆಲವರ ಅಭಿಪ್ರಾಯ.

೩. ಮಾಜಿ ನಾಯಕನ ವೈಫಲ್ಯ ಹಾಗೂ ಯುವ ಆಟಗಾರರ ಉತ್ತಮ ಪ್ರದರ್ಶನ ಟೀಮ್‌ ಮ್ಯಾನೇಜ್‌ಮೆಂಟ್‌ ಚಿಂತೆಯನ್ನು ಹೆಚ್ಚಿಸಿದೆ. ಯುವಕರಿಗೆ ಅವಕಾಶ ನೀಡದೆ ಕೊಹ್ಲಿಯನ್ನೇ ಆಡಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಬಹುದು ಎಂಬ ಕಾರಣಕ್ಕೆ ಕೊಹ್ಲಿಗೆ ಗಾಯದ ನೆಪ ನೀಡಿ ಅವರನ್ನು ಕಣಕ್ಕಿಳಿಸದಿರುವ ನಿರ್ಧಾರಕ್ಕೆ ಟೀಮ್‌ ಮ್ಯಾನೇಜ್‌ಮೆಂಟ್‌ ಬಂದಿರಬಹುದು ಎಂಬ ವಾದವೂ ಇದೆ.

ಪ್ರಾಕ್ಟಿಸ್‌ನಲ್ಲೂ ಪಾಲ್ಗೊಂಡಿಲ್ಲ:

ಈ ಅಭಿಪ್ರಾಯ, ವಾದಗಳೇನೇ ಇದ್ದರೂ ಕೊಹ್ಲಿ ಗಾಯಗೊಂಡಿಲ್ಲ ಎಂಬುದನ್ನು ಖಚಿತಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಕೊಹ್ಲಿಯ ಕಳಪೆ ಫಾರ್ಮ್‌ನಿಂದ ಬೇಸರಗೊಂಡಿರುವ ಕ್ರಿಕೆಟ್‌ ಅಭಿಮಾನಿಗಳು ಹೀಗೆ ಕಾರಣಗಳನ್ನು ಹುಡುಕಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಏಕೆಂದರೆ, ಟಿ೨೦ ಸರಣಿಯ ಮೂರನೇ ಪಂದ್ಯದ ವೇಳೆ ಅವರು ಗಾಯಗೊಂಡಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಹೀಗಾಗಿ ಅವರು ಸೋಮವಾರ ಅಭ್ಯಾಸವನ್ನೂ ಮಾಡಲಿಲ್ಲ ಹಾಗೂ ಅಭ್ಯಾಸಕ್ಕೆ ಹೊರಟ ಟೀಮ್‌ ಇಂಡಿಯಾದ ಬಸ್‌ನಲ್ಲೂ ಕಾಣಿಸಿಕೊಂಡಿಲ್ಲ. ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿರುವುದಾಗಿ ಬಿಸಿಸಿಐ ತಿಳಿಸಿದ್ದು ಕೊಹ್ಲಿ ಶೀಘ್ರವೇ ಚೇತರಿಸಿಕೊಳ್ಳುವ ನಿರೀಕ್ಷೆ ಇದೆ.

ಏನಿದು ಗಾಯ?

ಕ್ರೀಡಾಪಟುಗಳಿಗೆ ತೊಡೆ ಸಂದು ಗಾಯ ಮಾಮೂಲು. ಸಾಕಷ್ಟು ಕ್ರಿಕೆಟಿಗರು ಈ ಸಮಸ್ಯೆ ಎದುರಿಸಿದ್ದಾರೆ. ಟೀಮ್‌ ಇಂಡಿಯಾದ ಆರಂಭಿಕ ಬ್ಯಾಟರ್‌ ಕೆ. ಎಲ್.‌ ರಾಹುಲ್‌ ಸದ್ಯ ವಿಶ್ರಾಂತಿಯಲ್ಲಿ ಇರುವುದು ಕೂಡ ಇದೇ ಗಾಯದ ಸಮಸ್ಯೆಗೆ. ಈ ಗಾಯ ತೀವ್ರಗೊಂಡರೆ ಸರ್ಜರಿ ಕೂಡ ಬೇಕಾಗುತ್ತದೆ.

ಇದನ್ನೂ ಓದಿ: Commonwealth Games ; ಇದೇ ಮೊದಲ ಬಾರಿಗೆ ಮಹಿಳೆಯರ ಕ್ರಿಕೆಟ್‌, ಭಾರತ ತಂಡ ಪ್ರಕಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Dinesh Karthik: ಟೋಕಿಯೊ ಒಲಿಂಪಿಕ್ಸ್​​ ಚಿನ್ನದ ವಿಜೇತ ನೀರಜ್​ ಚೋಪ್ರಾ(Neeraj Chopra) ಜತೆ ದಿನೇಶ್​ ಕಾರ್ತಿಕ್(Dinesh Karthik)​ ಅವರು ಜಾವೆಲಿನ್​ ಅಭ್ಯಾಸ ನಡೆಸುತ್ತಿರುವ ವಿಡಿಯೊವೊಂದು ವೈರಲ್​(viral video) ಆಗಿದೆ.

VISTARANEWS.COM


on

Dinesh Karthik
Koo

ಮುಂಬಯಿ: ಇತ್ತೀಚೆಗೆ ಕ್ರಿಕೆಟ್​ಗೆ​ ವಿದಾಯ ಹೇಳಿದ ದಿನೇಶ್​ ಕಾರ್ತಿಕ್(Dinesh Karthik)​ ಅವರು ಇದೀಗ ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಕ್ರಿಡಾಕೂಟಕ್ಕೆ ಸಜ್ಜಾಗುತ್ತಿದ್ದಂತೆ ಕಂಡುಬಂದಿದೆ. ಟೋಕಿಯೊ ಒಲಿಂಪಿಕ್ಸ್​​ ಚಿನ್ನದ ವಿಜೇತ ನೀರಜ್​ ಚೋಪ್ರಾ(Neeraj Chopra) ಜತೆ ಜಾವೆಲಿನ್​ ಅಭ್ಯಾಸ ನಡೆಸುತ್ತಿರುವ ವಿಡಿಯೊವೊಂದು ವೈರಲ್​(viral video) ಆಗಿದೆ.

ಪ್ಯಾರಿಸ್​ ಒಲಿಂಪಿಕ್ಸ್​ಗೆ ಸಿದ್ಧತೆಯಲ್ಲಿರುವ ನೀರಜ್​ ಚೋಪ್ರಾ ಜತೆ ದಿನೇಶ್​​ ಕಾರ್ತಿಕ್​ ಕೂಡ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಬಹು ದೂರ ಜಾವೆಲಿನ್ ಎಸೆದು ಗಮನಸೆಳೆದಿದ್ದಾರೆ. ಇದನ್ನು ಕಂಡ ನೆಟ್ಟಿಗರು ಡಿಕೆ ಅವರು ಈ ಬಾರಿ ಪ್ಯಾರಿಸ್​ನಲ್ಲಿ ನೀರಜ್​ ಚೋಪ್ರಾಗೆ ತೀವ್ರ ಪೈಪೋಟಿ ನೀಡುವ ಸಾಧ್ಯತೆ ಇದೆ ಎಂದು ಕಮೆಂಟ್​ ಮಾಡಿದ್ದಾರೆ. ಅಸಲಿಗೆ ಉಭಯ ಕ್ರೀಡಾಪಟುಗಳು ಜಾಹಿರಾತಿನ ಭಾಗವಾಗಿ ಜತೆಯಾಗಿ ಕಾಣಸಿಕೊಂಡದ್ದು.

ಕಳೆವು ವಾರಗಳ ಹಿಂದೆ ನಡೆದಿದ್ದ ಫೆಡರೇಷನ್ ಕಪ್‌ನಲ್ಲಿ(Federation Cup) ಕಣಕ್ಕಿಳಿದ್ದ ನೀರಜ್ ಚೋಪ್ರಾ(82.27 ಮೀ.), ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಚಿನ್ನದ ಪದಕ ಗೆದ್ದಿದ್ದರು. ಈ ಟೂರ್ನಿ ಬಳಿಕ ನೀರಜ್​ ಗಾಯಗೊಂಡಿದ್ದು ಸದ್ಯ ವಿಶ್ರಾಂತಿಯಲ್ಲಿದ್ದಾರೆ.

ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಅಭ್ಯಾಸದ ವೇಳೆ ಈಗಾಗಲೆ ನೀರಜ್​ ಹಲವು ಬಾರಿ 90 ಮೀ. ಗಡಿ ದಾಟಿದ್ದಾರೆ. ಆದರೆ, ಸ್ಪರ್ಧೆಗಳಲ್ಲಿ ಇದು ಸಾಧ್ಯವಾಗಿರಲಿಲ್ಲ. ಈ ಬಾರಿ ಸ್ಪರ್ಧೆಯಲ್ಲಿಯೂ ಇದನ್ನು ಸಾಧಿಸಲಿದ್ದೇನೆ ಎಂದು ನೀರಜ್​ ಹೇಳಿದ್ದಾರೆ.

ಇದನ್ನೂ ಓದಿ Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

ದಿನೇಶ್​ ಕಾರ್ತಿಕ್​ ಅವರಿಗೆ ರಾಜಸ್ಥಾನ್​ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯವೇ ವಿದಾಯ(dinesh karthik retirement) ಪಂದ್ಯ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಪಂದ್ಯ ಮುಕ್ತಾಯದ ಬಳಿಕ ಸಹ ಆಟಗಾರರು ಭಾವುಕರಾಗಿ ಕಾರ್ತಿಕ್​ಗೆ ಮೈದಾನದಲ್ಲಿಯೇ ತಬ್ಬಿಕೊಂಡು ವಿದಾಯ ಹೇಳಿದಂತಿತ್ತು. ಅದರಲ್ಲೂ ವಿರಾಟ್ ಕೊಹ್ಲಿಯೊಂದಿಗೆ(virat kohli) ಭಾವುಕ ಆಲಿಂಗನವನ್ನು ಹಂಚಿಕೊಂಡಿದ್ದರು.

ಐಪಿಎಲ್​ನಲ್ಲಿ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಆರ್​ಸಿಬಿಗೆ​ ಟ್ರೋಫಿ ಗೆದ್ದು ವಿದಾಯ ಹೇಳುವ ನಿರೀಕ್ಷೆಯಲ್ಲಿದ್ದ ಡಿಕೆ ಕನಸಿಗೆ ರಾಜಸ್ಥಾನ್​ ರಾಯಲ್ಸ್​ ಅಡ್ಡಗಾಲಿಕ್ಕಿತು. ದಿನೇಶ್ ಕಾರ್ತಿಕ್ 257 ಪಂದ್ಯಗಳಲ್ಲಿ 22 ಅರ್ಧಶತಕಗಳನ್ನು ಬಾರಿಸಿ 4,842 ರನ್‌ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 15 ಪಂದ್ಯಗಳಲ್ಲಿ 326 ರನ್​ ಬಾರಿಸಿದ್ದಾರೆ.

Continue Reading

ವೈರಲ್ ನ್ಯೂಸ್

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Babar Azam: ಪಾಕಿಸ್ತಾನ ತಂಡ ಇಂಗ್ಲೆಂಡ್​ ವಿರುದ್ಧ 4 ಪಂದ್ಯಗಳ ಟಿ20 ಸರಣಿಯನ್ನಾಡಲು ಲಂಡನ್​ನಲ್ಲಿದೆ. ಈಗಾಗಲೇ ಸರಣಿಯಲ್ಲಿ 2 ಪಂದ್ಯಗಳು ಮಳೆಯಿಂದ ರದ್ದುಗೊಂಡರೆ, ಒಂದು ಪಂದ್ಯವನ್ನು ಇಂಗ್ಲೆಂಡ್​ ಗೆದ್ದಿದೆ. ಅಂತಿಮ ಪಂದ್ಯ ನಾಳೆ(ಮೇ 30) ನಡೆಯಲಿದೆ.

VISTARANEWS.COM


on

Babar Azam
Koo

ಲಂಡನ್​: ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ(Babar Azam) ಅವರು ಇಂಗ್ಲೆಂಡ್​ ವಿರುದ್ಧದ ನಾಲ್ಕನೇ ಹಾಗೂ ಅಂತಿಮ ಟಿ20 ಪಂದ್ಯವನ್ನಾಡಲು(England vs Pakistan) ಹೋಟೆಲ್​ನಿಂದ ತೆರಳುವ ವೇಳೆ ಅಭಿಮಾನಿಗಳು ಫೋಟೊ ತೆಗೆಸಿಕೊಳ್ಳಲು ಮುಗಿಬಿದ್ದ ವೇಳೆ ತಾಳ್ಮೆ ಕಳೆದುಕೊಂಡು ಭದ್ರತಾ ಸಿಬ್ಬಂದಿಗಳಿಗೆ ಎಲ್ಲರನ್ನೂ ದೂರ ಕಳುಹಿಸುವಂತೆ ಹೇಳಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಪಾಕಿಸ್ತಾನ ತಂಡ ಇಂಗ್ಲೆಂಡ್​ ವಿರುದ್ಧ 4 ಪಂದ್ಯಗಳ ಟಿ20 ಸರಣಿಯನ್ನಾಡಲು ಲಂಡನ್​ನಲ್ಲಿದೆ. ಈಗಾಗಲೇ ಸರಣಿಯಲ್ಲಿ 2 ಪಂದ್ಯಗಳು ಮಳೆಯಿಂದ ರದ್ದುಗೊಂಡರೆ, ಒಂದು ಪಂದ್ಯವನ್ನು ಇಂಗ್ಲೆಂಡ್​ ಗೆದ್ದಿದೆ. ಅಂತಿಮ ಪಂದ್ಯ ನಾಳೆ(ಮೇ 30) ನಡೆಯಲಿದೆ. ಸರಣಿಯನ್ನು 1-1 ಸಮಬಲಗೊಳಿಸಬೇಕಿದ್ದರೆ ಪಾಕಿಸ್ತಾನಕ್ಕೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಇದೇ ಪಂದ್ಯವನ್ನಾಡಲು ತೆರಳುವ ವೇಳೆ ಬಾಬರ್​ ಅವರೊಂದಿಗೆ ಅಭಿಮಾನಿಗಳು ಫೋಟೊ ಮತ್ತು ಆಟೋಗ್ರಾಫ್ ಪಡೆಯಲು ಮುಂದಾಗಿದ್ದಾರೆ. ಇದರಿಂದ ಬಾಬರ್​ಗೆ ಕಿರಿಕಿರಿ ಉಂಟಾಗಿದೆ.

ಅಭಿಮಾನಿಗಳ ದಂಡೇ ಹಿಂಬಾಲಿಸಿ ಬಂದಿದ್ದರಿಂದ ಕೋಪಗೊಂಡ ಬಾಬರ್ ಸ್ವಲ್ಪ ಹೊತ್ತು ನನ್ನನ್ನು ಪ್ರಶಾಂತವಾಗಿರಲು ಬಿಡಿ ಎಂದು ಕೋಪದಿಂದ ನಿಂದಿಸಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಭದ್ರತಾ ಸಿಬ್ಬಂದಿಗಳಿಗೆ ಎಲ್ಲರನ್ನೂ ದೂರ ಕಳುಹಿಸುವಂತೆ ಹೇಳಿದ್ದಾರೆ. ಒಂದು ಕ್ಷಣ ಕೋಪಗೊಂಡರೂ ಕೂಡ ಕೊನೆಗೆ ಅಭಿಮಾನಿಗಳೊಂದಿಗೆ ಫೋಟೊ ಕ್ಲಿಕ್ಕಿಸಿದ್ದಾರೆ.

ಇದನ್ನೂ ಓದಿ Babar Azam : ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಪಾಕ್​ ನಾಯಕ ಅಜಮ್​

ಕಳೆದ ವರ್ಷ(2023) ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಬಾಬರ್​ ಸಾರಥ್ಯದಲ್ಲಿ ಪಾಕಿಸ್ತಾನ ತಂಡ ನೀರಸ ಪ್ರದರ್ಶನ ತೋರಿತ್ತು. ಆಡಿದ 9 ಪಂದ್ಯಗಳ ಪೈಕಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ ಲೀಗ್​ ಹಂತದಲ್ಲೇ ಹೊರಬಿದ್ದಿತ್ತು. ಹೀಗಾಗಿ ಬಾಬರ್​ ವಿರುದ್ಧ ಪಾಕ್​ ತಂಡದ ಮಾಜಿ ಆಟಗಾರರು ಸೇರಿ ಅಂದಿನ ಪಿಬಿ ಅಧ್ಯಕ್ಷ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಾಬರ್ ಎಲ್ಲಾ ಮೂರು ಸ್ವರೂಪಗಳ ನಾಯಕತ್ವದಿಂದ ಕೆಳಗಿಳಿದಿದ್ದರು. ಬಾಬರ್ ಕೆಳಗಿಳಿದ ಬಳಿಕ ಶಾನ್ ಮಸೂದ್ ಅವರನ್ನು ಟೆಸ್ಟ್ ನಾಯಕರನ್ನಾಗಿ ನೇಮಿಸಿದರೆ, ಶಾಹೀನ್ ಅಫ್ರಿದಿಗೆ ಟಿ20 ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಯಿತು. ಆದರೆ ಇವರ ನಾಯಕತ್ವದಲ್ಲಿ ಪಾಕಿಸ್ತಾನ ಹಿಂದೆಂದು ಕಾಣದ ವೈಫಲ್ಯ ಕಂಡಿತ್ತು. ಆಡಿದ ಹಲವು ಸರಣಿಗಳಲ್ಲಿ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಮತ್ತೆ ಬಾಬರ್​ ಅಜಂ ಅವರನ್ನು ತಂಡದ ನಾಯಕನನ್ನಾಗಿ ಮರು ನೇಮಕ ಮಾಡಲಾಯಿತು.

ಬಾಬರ್​ ನಾಯಕತ್ವದ ಸಾಧನೆ


ಬಾಬರ್ ಅಜಮ್ ಪಾಕಿಸ್ತಾನದ ನಾಯಕನಾಗಿ 133 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 78 ಪಂದ್ಯಗಳು ಗೆದ್ದರೆ, 43 ಪಂದ್ಯಗಳಲ್ಲಿ ಸೋತಿದ್ದಾರೆ. ಒಂದು ಟೈ ಮತ್ತು ನಾಲ್ಕು ಪಂದ್ಯ ಡ್ರಾಗೊಂಡಿದೆ. ಏಕದಿನ ವಿಶ್ವಕಪ್​ ಟೂರ್ನಿ ಹೊರತುಪಡಿಸಿ ಉಳಿದ ಎಲ್ಲ ಸರಣಿಯಲ್ಲೂ ಬಾಬರ್​ ಸಾರಥ್ಯದಲ್ಲಿ ತಂಡ ಉತ್ತಮ ಪ್ರದರ್ಶನ ತೋರಿತ್ತು.

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತನ್ನ ಮೊದಲ ಲೀಗ್​ ಪಂದ್ಯದಲ್ಲಿ ಅಮೆರಿಕ ವಿರುದ್ಧ ಜೂನ್​ 6ರಂದು ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿ ಭಾರತ ವಿರುದ್ಧ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ಸೆಣಸಾಡಲಿದೆ. ಈ ಪಂದ್ಯಕ್ಕಾಗಿ ಉಭಯ ದೇಶದ ಕ್ರಿಕೆಟ್​ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ.

Continue Reading

ಕ್ರೀಡೆ

Team India’s T20 WC Jersey: ನೂತನ ಜೆರ್ಸಿಯಲ್ಲಿ ಕಂಗೊಳಿಸಿದ ರಿಷಭ್​ ಪಂತ್​; ಅಭಿಮಾನಿಗಳಿಂದಲೂ ಬೆಂಬಲ

Team India’s T20 WC Jersey: ಟೀಮ್​ ಇಂಡಿಯಾದ ಆಟಗಾರರು ನೂತನ ಜೆರ್ಸಿಯಲ್ಲಿ(Team India’s T20 WC Jersey) ಫೋಟೊ ಶೂಟ್​ ಮಾಡಿಸಿದ್ದಾರೆ. ಇದಕ್ಕೂ ಮುನ್ನ ಬಿಸಿಸಿಐ(BCCI) ಬಿಡುಗಡೆಗೊಳಿಸಿದ ವಿಶೇಷ ಪ್ರೋಮೋದಲ್ಲಿ ರಿಷಭ್​ ಪಂತ್(rishabh pant)​ ಕಣ್ಮನ ಸೆಳೆದಿದ್ದಾರೆ. ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಕೂಡ ನೂತನ ಜೆರ್ಸಿ ತೊಟ್ಟು ತಂಡ ಕಪ್​ ಗೆಲ್ಲಲಿ ಎಂದು ಹಾರೈಸಿದ್ದಾರೆ.

VISTARANEWS.COM


on

Team India's T20 WC Jersey
Koo

ನ್ಯೂಯಾರ್ಕ್​: ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ 3 ದಿನ ಮಾತ್ರ ಬಾಕಿ ಉಳಿದಿವೆ. ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳ ಆಟಗಾರರು ಕಪ್​ ಗೆಲ್ಲಲು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಟೀಮ್​ ಇಂಡಿಯಾದ ಆಟಗಾರರು ನೂತನ ಜೆರ್ಸಿಯಲ್ಲಿ(Team India’s T20 WC Jersey) ಫೋಟೊ ಶೂಟ್​ ಮಾಡಿಸಿದ್ದಾರೆ. ಇದಕ್ಕೂ ಮುನ್ನ ಬಿಸಿಸಿಐ(BCCI) ಬಿಡುಗಡೆಗೊಳಿಸಿದ ವಿಶೇಷ ಪ್ರೋಮೋದಲ್ಲಿ ರಿಷಭ್​ ಪಂತ್(rishabh pant)​ ಕಣ್ಮನ ಸೆಳೆದಿದ್ದಾರೆ. ಈ ವಿಡಿಯೊಗೆ ಬಿಸಿಸಿಐ ‘ಸಿದ್ಧವಾಗಿದೆ. ಸಮರ್ಥ. ನಿರ್ಧರಿಸಲಾಗುತ್ತದೆ’ ಎಂದು ಬರೆದುಕೊಂಡಿದೆ.

‘ಪ್ರತಿಕೂಲತೆಯಿಂದ ವಿಜಯದವರೆಗೆ, ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ರಿಷಭ್​ ಪಂತ್ ಅವರ ಪ್ರಯಾಣವು ಸ್ಥಿತಿಸ್ಥಾಪಕತ್ವ ಮತ್ತು ದೃಢತೆಗೆ ಸಾಕ್ಷಿಯಾಗಿದೆ. ಪಂದ್ಯದ ದಿನಗಳಲ್ಲಿ ರಾತ್ರಿ 7.52 ಕ್ಕೆ ರಾಷ್ಟ್ರದ ಚೈತನ್ಯವನ್ನು ಬೆಳಗಿಸುವಾಗ ಅವರೊಂದಿಗೆ ನಾವೆಲ್ಲರೂ ಕೈ ಜೋಡಿಸೋಣ” ಎಂದು ಬಿಸಿಸಿಐ ಬರೆದುಕೊಂಡಿದೆ.

ರಿಷಭ್​ ಪಂತ್​ ಅವರು ವಿಶೇಷ ಪ್ರೋಮೋದಲ್ಲಿ ಕಾಣಿಸಲು ಕೂಡ ಒಂದು ಕಾರಣವಿದೆ. 2022ರ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್​ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.

ರಿಷಭ್​ ಪಂತ್​ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್​ ಕ್ರಿಕೆಟ್​ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್​ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್​ ತಮ್ಮ ನಂಬಿಕೆ ಮತ್ತು ಕ್ರಿಕೆಟ್​ಗೆ ಮರಳುವ ದೃಢ ಸಂಕಲ್ಪದಿಂದ ಕಠಿಣ ವ್ಯಾಯಾಮ ನಡೆಸಿ ಕೇವಲ 14 ತಿಂಗಳಲ್ಲಿ ಸಂಪೂರ್ಣ ಫಿಟ್​ ಆಗಿ ಕ್ರಿಕೆಟ್​ಗೆ ಮರಳಿದ್ದರು. ಇದೇ ಛಲ ವಿಶ್ವಕಪ್​ ಗೆಲ್ಲುವಲ್ಲಿಯೂ ತಂಡಕ್ಕೆ ಇರಬೇಕು ಎನ್ನುವ ಅರ್ಥದಲ್ಲಿ ಪಂತ್​ ಅವರನ್ನು ಬಿಸಿಸಿಐ ಈ ವಿಡೊಯೊದಲ್ಲಿ ತೋರಿಸಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟಾಪ್​ 5 ಬೌಲರ್​ಗಳು ಯಾರು?

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಭಾರತೀಯ ಕ್ರಿಕೆಟ್​ ಅಭಿಮಾನಿಗಳು ನೂತನ ಜೆರ್ಸಿ ತೊಟ್ಟು ತಂಡ ಕಪ್​ ಗೆಲ್ಲಲಿ ಎಂದು ಹಾರೈಸಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರೀಡೆ

Virat Kohli: ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಕಠಿಣ ಅಭ್ಯಾಸ; ಮುಂಬೈನಲ್ಲಿ ಪಾರ್ಟಿ ಮಾಡುತ್ತಾ ಎಂಜಾಯ್​ ಮಾಡುತ್ತಿರುವ ಕೊಹ್ಲಿ

Virat Kohli: ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಹ್ಲಿ ಮೇ 30ಕ್ಕೆ ಚಾರ್ಟರ್​ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎನ್ನಲಾಗಿದೆ. ನ್ಯೂಯಾರ್ಕ್(eam India in New York)​ ತಲುಪಿರುವ ಟೀಮ್​ ಇಂಡಿಯಾದ(Team India ) ಮೊದಲ ಬ್ಯಾಚ್​ ಅಭ್ಯಾಸ ಆರಂಭಿಸಿದೆ.

VISTARANEWS.COM


on

Virat Kohli
Koo

ಮುಂಬಯಿ: ಒಂದೆಡೆ ಟೀಮ್​ ಇಂಡಿಯಾದ ಆಟಗಾರರೆಲ್ಲ ಟಿ20 ವಿಶ್ವಕಪ್​ ಗೆಲ್ಲುವ ಪಣತೊಟ್ಟು ನ್ಯೂಯಾರ್ಕ್​ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಇತ್ತ ವಿರಾಟ್​ ಕೊಹ್ಲಿ(Virat Kohli) ಅವರು ಮುಂಬೈನಲ್ಲಿ ಸಖತ್​ ಪಾರ್ಟಿ ಮಾಡಿಕೊಂಡು ಎಂಜಾಯ್​ ಮಾಡುತ್ತಿದ್ದಾರೆ. ಕೊಹ್ಲಿಯ ಈ ನಡೆಯನ್ನು ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಖಂಡಿಸಿದ್ದಾರೆ.

ಕಳೆದ ಶನಿವಾರ ಭಾರತ ತಂಡದ ನಾಯಕ ರೋಹಿತ್​ ಶರ್ಮ, ಕೋಚ್​ ರಾಹುಲ್​ ದ್ರಾವಿಡ್​, ರಿಷಭ್​ ಪಂತ್​, ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ ಸೇರಿ ಬಹುತೇಕ ಆಟಗಾರರು ನ್ಯೂಯಾರ್ಕ್​ಗೆ ತೆರಳಿದ್ದರು. ಈ ವೇಳೆ ವಿರಾಟ್​ ಕೊಹ್ಲಿ ವೈಯಕ್ತಿಕ ಕಾರಣ ನೀಡಿ ಪ್ರಯಾಣಿಸಿರಲಿಲ್ಲ. ಇದೀಗ ಮುಂಬೈಯ ರೆಸ್ಟೋರೆಂಟ್​ನಲ್ಲಿ ಪತ್ನಿ ಅನುಷ್ಕಾ ಶರ್ಮಾ(Anushka Sharma) ಜತೆಗೆ ಮುಂಬೈನಲ್ಲಿ ಡಿನ್ನರ್ ಪಾರ್ಟಿ(Anushka Sharma And Virat Kohli’s Dinner) ನಡೆಸಿದ್ದಾರೆ.

ಈ ಪಾರ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಬೌಲರ್ ಜಹೀರ್ ಖಾನ್(Zaheer Khan) ಮತ್ತು ಅವರ ಪತ್ನಿ ಸಾಗರಿಕಾ ಘಾಟ್ಗೆ(Sagarika Ghatge), ಜನಪ್ರಿಯ ದೂರದರ್ಶನ ಕಾಮೆಂಟೇಟರ್ ಗೌರವ್ ಕಪೂರ್(Gaurav Kapur) ಕೂಡ ಭಾಗಿಯಾಗಿದ್ದರು. ಈ ವಿಡಿಯೊ ಕಂಡ ನೆಟ್ಟಿಗರು ಕೊಹ್ಲಿಗೆ ಈಗ ತಂಡಕ್ಕಿಂತ ಕೇವಲ ಪಾರ್ಟಿ ಮಾಡಿ ಕಾಲ ಕಳೆಯುವುದು ಖಷಿ ನೀಡುತ್ತಿದೆ. ಈತ ಕೇವಲ ತನ್ನ ವೈಯಕ್ತಿಕ ದಾಖಲೆಗಾಗಿ ಮಾತ್ರ ಆಡುತ್ತಾನೆ ಎಂದು ಕಮೆಂಟ್​ ಮಾಡಿದ್ದಾರೆ.

ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಹ್ಲಿ ಮೇ 30ಕ್ಕೆ ಚಾರ್ಟರ್​ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎನ್ನಲಾಗಿದೆ. ನ್ಯೂಯಾರ್ಕ್(eam India in New York)​ ತಲುಪಿರುವ ಟೀಮ್​ ಇಂಡಿಯಾದ(Team India ) ಮೊದಲ ಬ್ಯಾಚ್​ ಅಭ್ಯಾಸ ಆರಂಭಿಸಿದೆ. ಎಲ್ಲ ಆಟಗಾರರು ಇಂದು ರನ್ನಿಂಗ್​ ಮತ್ತು ಫುಟ್ಬಾಲ್​ ಆಡುವ ಮೂಲಕ ವ್ಯಾಯಾಮ ನಡೆಸಿದ್ದಾರೆ. ಗುರುವಾರದಿಂದ ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸ ಆರಂಭಿಸಲಿದ್ದಾರೆ. ಟೀಮ್​ ಇಂಡಿಯಾದ ದ್ವಿತೀಯ ಬ್ಯಾಚ್​ ಇಂದು ನ್ಯೂಯಾರ್ಕ್​ಗೆ ತಲುಪಲಿದೆ.

ಇದನ್ನೂ ಓದಿ Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

ಭಾರತ ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದಾದ ಬಳಿಕ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನ ಮತ್ತು ಭಾರತ ನಡುವಣ ಪಂದ್ಯ ಜೂನ್​ 9ರಂದು ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading
Advertisement
Dinesh Karthik
ಕ್ರೀಡೆ21 mins ago

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Prajwal Revanna Case
ಕರ್ನಾಟಕ32 mins ago

Prajwal Revanna Case: ಚೇತನ್‌, ನವೀನ್ ಗೌಡಗೆ ಮೂರು ದಿನ ಎಸ್‌ಐಟಿ ಕಸ್ಟಡಿ

Forbes World Billionaires List
ವಾಣಿಜ್ಯ44 mins ago

Forbes World Billionaires List: ವಿಶ್ವದ ಶ್ರೀಮಂತ ಮಹಿಳೆಯರು; ಭಾರತದ ಸಾವಿತ್ರಿ ಜಿಂದಾಲ್‌ಗೆ ಎಷ್ಟನೇ ಸ್ಥಾನ?

Cannes 2024 Sandalwood Actress Interview
ಫ್ಯಾಷನ್46 mins ago

Cannes 2024 Sandalwood Actress Interview: ಕಾನ್‌ನಲ್ಲಿ ಹ್ಯಾಟ್ರಿಕ್‌ ವಾಕ್‌ ಮಾಡಿದ ಸ್ಯಾಂಡಲ್‌ವುಡ್‌ ನಟಿ ಇತಿ ಆಚಾರ್ಯ ಹೇಳಿದ್ದೇನು?

Delhi Temperature
ದೇಶ51 mins ago

Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Babar Azam
ವೈರಲ್ ನ್ಯೂಸ್1 hour ago

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Madhu Chopra on Priyanka Chopra-Nick Jonas' age gap
ಬಾಲಿವುಡ್1 hour ago

Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

Tamarind Fruit Benefits
ಆರೋಗ್ಯ1 hour ago

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

Karnataka Weather
ಮಳೆ2 hours ago

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Viral News
ವೈರಲ್ ನ್ಯೂಸ್2 hours ago

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ23 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌