ಡಾ. ರಾಜ್‌, ರಂಜನಿಕಾಂತ್‌, ಅನಂತ್‌ನಾಗ್‌ ಮತ್ತಿತರ ಹಿರಿಯ ನಟರಿಗೆ ಮೇಕಪ್‌ ಮಾಡಿದ್ದ ಕೇಶವಣ್ಣ ನಿಧನ - Vistara News

ಶ್ರದ್ಧಾಂಜಲಿ

ಡಾ. ರಾಜ್‌, ರಂಜನಿಕಾಂತ್‌, ಅನಂತ್‌ನಾಗ್‌ ಮತ್ತಿತರ ಹಿರಿಯ ನಟರಿಗೆ ಮೇಕಪ್‌ ಮಾಡಿದ್ದ ಕೇಶವಣ್ಣ ನಿಧನ

ಕನ್ನಡ ಚಿತ್ರರಂಗದ ವರ್ಣಾಲಂಕಾರ ಕಲಾವಿದ ಎಂ.ಎಸ್‌. ಕೇಶವಣ್ಣ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

VISTARANEWS.COM


on

ಎಂ.ಎಸ್ ಕೇಶವಣ್ಣ ನಿಧನ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು : ಕನ್ನಡ ಚಿತ್ರರಂಗದ ಹಿರಿಯ ವರ್ಣಾಲಂಕಾರ ಕಲಾವಿದ ಎಂ.ಎಸ್. ಕೇಶವಣ್ಣ ಅವರು ಶನಿವಾರ (ಜು.16)ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗದಲ್ಲಿ 53 ವರ್ಷಗಳ ಕಾಲ ಇವರು ಸೇವೆ ಸಲ್ಲಿಸಿದ್ದರು.

ಇವರ ತಂದೆ ಸುಬ್ಬಣ್ಣ ಅವರೂ ಸಹ ನಟ ರಾಜ್‌ಕುಮಾರ್‌ ಅವರ ಮೇಕಪ್‌ ಮ್ಯಾನ್‌ ಆಗಿದ್ದರು. ಸುಮಾರು 30 ವರ್ಷಗಳ ಕಾಲ ರಾಜ್‌ಕುಮಾರ್‌ ಅವರ ಕಂಪನಿಯಲ್ಲಿ ಎಂ.ಎಸ್. ಕೇಶವಣ್ಣ ಅವರು ವರ್ಣಾಲಂಕಾರ ಕಲಾವಿದರಾಗಿದ್ದರು. ಈಶ್ವರಿ ಪ್ರೊಡಕ್ಷನ್‌ನಲ್ಲಿ ಹಲವು ವರ್ಷ ಸೇವೆ ಸಲ್ಲಿಸಿದ್ದಾರೆ. ಇವರು ಮೊದಲ ಬಾರಿಗೆ ಮೇಕಪ್‌ ಮಾಡಿದ್ದು ನಟ ನರಸಿಂಹ ರಾಜು ಅವರಿಗೆ ಎನ್ನುವುದು ವಿಶೇಷ. ಪೃಥ್ವಿರಾಜ್ ಕಪೂರ್, ಬಾಲಣ್ಣ, ಉದಯ ಕುಮಾರ್, ವಜ್ರ ಮುನಿ ಹೀಗೆ ಹಲವು ಕಲಾವಿದರಿಗೆ ಮೇಕಪ್‌ ಮಾಡಿದ್ದಾರೆ.

ಇದನ್ನೂ ಓದಿ | ಖ್ಯಾತ ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ

ಕನ್ನಡದ ʻನಾನಿನ್ನ ಬಿಡಲಾರೆʼ ಸಿನಿಮಾದಲ್ಲಿ ಅನಂತ್‌ ನಾಗ್‌ ಅವರಿಗೆ ದೆವ್ವದ ಪಾತ್ರಕ್ಕೆ ಕೇಶವಣ್ಣ ಮೇಕಪ್‌ ಮಾಡಿದ್ದರು. ಸಾಕ್ಷಾತ್ಕಾರ, ಮಯೂರ, ಮುರುವರೆ ವಜ್ರ, ಪ್ರೇಮಲೋಕ, ಶಾಂತಿ ಕ್ರಾಂತಿ, ಸಂಗೊಳ್ಳಿ ರಾಯಣ್ಣ ಚಿತ್ರದ ನಟರಿಗೆ ಬಣ್ಣ ಹಚ್ಚಿದ್ದಾರೆ.

ಎರಡು ದಿನಗಳಿಂದ ಆರೋಗ್ಯದಲ್ಲಿ ಏರುಪೇರು ಆಗಿದ್ದ ಕಾರಣ ಚಿಕಿತ್ಸೆ ಪಡೆಯುತ್ತಿದ್ದ ಇವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರಿನಲ್ಲಿ ಭಾನುವಾರ (ಜು.17)ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kamala Hampana: ಖ್ಯಾತ ಸಾಹಿತಿ ನಾಡೋಜ ಕಮಲಾ ಹಂಪನಾ ಇನ್ನಿಲ್ಲ

Kamala Hampana: ನಾಡಿನ ಖ್ಯಾತ ಸಾಹಿತಿ, ನಾಡೋಜ ಪ್ರೊ. ಕಮಲಾ ಹಂಪನಾ (89) ಅವರು ಇಂದು (ಜೂನ್‌ 22) ನಿಧನ ಹೊಂದಿದರು. ಪತಿ, ಖ್ಯಾತ ಸಾಹಿತಿ ಹಂಪ‌ ನಾಗರಾಜಯ್ಯ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿ ಅನೇಕ ಬಂದು ಮಿತ್ರರು, ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ. ಸಂಜೆಯ ತನಕ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Kamala Hampana
Koo

ಬೆಂಗಳೂರು: ನಾಡಿನ ಖ್ಯಾತ ಸಾಹಿತಿ, ನಾಡೋಜ ಪ್ರೊ. ಕಮಲಾ ಹಂಪನಾ (Kamala Hampana) (89) ಅವರು ಇಂದು (ಜೂನ್‌ 22) ನಿಧನ ಹೊಂದಿದರು. ಪತಿ, ಖ್ಯಾತ ಸಾಹಿತಿ ಹಂಪ‌ ನಾಗರಾಜಯ್ಯ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿ ಅನೇಕ ಬಂಧು ಮಿತ್ರರು, ಅಪಾರ ಸಾಹಿತ್ಯಾಭಿಮಾನಿಗಳನ್ನು ಅವರು ಅಗಲಿದ್ದಾರೆ. ಸಂಜೆಯ ತನಕ ರಾಜಾಜಿನಗರದ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.

60 ವರ್ಷಗಳ ಕಾಲ ಸಾಹಿತ್ಯ ಕೃಷಿ

ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ. ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ. ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರಿಗೆ ಕರ್ನಾಟಕ ಸರ್ಕಾರ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಲಭಿಸಿದೆ.

ಡಾ.ಕಮಲಾ ಹಂಪನಾ ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಸುಮಾರು 60ಕ್ಕೂ ಹೆಚ್ಚು ಕೃತಿಗಳು ಇದುವರೆಗೆ ಪ್ರಕಟವಾಗಿದ್ದು, ಇದರಲ್ಲಿ ಸೃಜನಕೃತಿಗಳೂ ಇವೆ. ʼಬಿಂದಲಿʼ, ʼಬುಗುಡಿʼ ಹಾಗೂ ʼಬಯಲುʼ ಇವು ಕಮಲಾ ಹಂಪನಾ ಅವರ ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas ಹಾಗೂ Jainism and Other Essays- ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ಬರೆದಿದ್ದಾರೆ.

ಜೀವಪರ ಸಂವೇದನೆ, ಸಾಮಾಜಿಕ ಬದ್ಧತೆ, ಸಾಂಸ್ಕೃತಿಕ ಕಾಳಜಿಯನ್ನು ಪ್ರಭಾವಶಾಲಿಯಾಗಿ ಬಿಂಬಿಸುವ ಕಮಲಾ ಹಂಪನಾ ಅವರ ಸಾಕ್ಷ್ಯಚಿತ್ರವನ್ನು ಕರ್ನಾಟಕ ಸರ್ಕಾರ ಸಿದ್ಧಪಡಿಸಿದೆ. ಜಗತ್ತಿನ ಅಯ್ದು ಆದರ್ಶ ಜೋಡಿಗಳನ್ನು ಆಧರಿಸಿ ಜರ್ಮನಿಯ ಯಾಸೇಮಿನ್ ನಿರ್ದೇಶಿಸಿರುವ ಅಂತಾರಾಷ್ಟ್ರೀಯ ಸಾಕ್ಷ್ಯಚಿತ್ರಕ್ಕೆ ಇಡೀ ಭಾರತದಿಂದ ಕಮಲಾ-ಹಂಪನಾ ಜೋಡಿ ಆಯ್ಕೆಯಾಗಿದ್ದು ವಿಶೇಷ. ʼಬೇರು ಬೆಂಕಿ ಬಿಳಲುʼ ಎನ್ನುವುದು ಕಮಲಾ ಹಂಪನಾ ಅವರ ಜೀವನಯಾನದ ಹೃದಯಸ್ಪರ್ಶಿ ಸಂಕಥನ. ಕಮಲಾ ಹಂಪನಾ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Continue Reading

ಪ್ರಮುಖ ಸುದ್ದಿ

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Death News: ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌, ಭಾಷಣ ಮುಗಿಸಿದ ಕೂಡಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು.

VISTARANEWS.COM


on

death news bhanuprakash petrol diesel price hike
Koo

ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ (Petrol Diesel Price hike) ಪ್ರತಿಭಟಿಸಿ ಬಿಜೆಪಿ (BJP protest) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾದ ಬಿಜೆಪಿ ನಾಯಕ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್‌ (MB Bhanuprakash) ಅವರು ಭಾಷಣ ಮುಗಿಸಿದ ತಕ್ಷಣವೇ ಹೃದಯಾಘಾತಕ್ಕೊಳಗಾಗಿ (Heart Attack) ಮೃತಪಟ್ಟಿದ್ದಾರೆ (Death News).

ಬಿಜೆಪಿ ಪ್ರತಿಭಟನೆಯಲ್ಲಿ ಅವರು ʼಕಾಂಗ್ರೆಸ್‌ನ ಶವಯಾತ್ರೆ ಮಾಡಬೇಕುʼ ಎಂದು ನೀಡಿದ ಭಾಷಣ ಇದೀಗ ವೈರಲ್‌ (Viral speech) ಆಗುತ್ತಿದೆ. ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌, ಭಾಷಣ ಮುಗಿಸಿದ ಕೂಡಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್‌ ಅವರು ಕೊನೆಯುಸಿರು ಎಳೆದರು.

“ಕಾಂಗ್ರೆಸ್ ಶವಯಾತ್ರೆ ಮಾಡಲು ನೀವು ಇಲ್ಲಿಗೆ ಬರಬೇಕು ಎಂದು ಹೇಳಿದರು. ಯಾವಾಗ, ಎಷ್ಟು ಹೊತ್ತಿಗೆ, ಯಾಕೆ ಡಾಕ್ಟರ್ ಬಳಿ ತೋರಿಸಿಲ್ಲವೆ, ಸಂಬಂಧಿಕರಿಗೆ ತಿಳಿಸಿದ್ದೀರಾ ಎಂದು ಕೇಳಿದೆ. ಶವಯಾತ್ರೆಗೆ ಕಾಂಗ್ರೆಸ್ ಪರವಾಗಿ ಸಿದ್ದು, ಡಿಕೆಶಿ ಬರುತ್ತಾರೆ ಎಂದರು. ಸರ್ಕಾರ ಆರಿಸಿ ಬರಲಿಕ್ಕೆ ಬೇಕಾಗಿ ಭರವಸೆ ಕೊಡುವ ಗ್ಯಾರಂಟಿ ನೀಡಿದರು. ಅದನ್ನು ನಾವು ಸ್ವಾಗತಿಸಿದ್ದೇವೆ. ಅದನ್ನು ಮಾಡಬಾರದು ಎಂದಿದ್ದರೆ ನಾವು ಬಡವರ ವಿರೋಧಿಗಳಾಗುತ್ತಿದ್ದೆವು. ನಾವು ಬಡವರ ಪರ, ನಾವೆಲ್ಲ ದೀನ ದಲಿತರ ಪರವಾಗಿಯೆ ಇದ್ದೆವು. ಆದರೆ ಬರೀ ಬಾಯಿಮಾತಿನಲ್ಲಿ ಹೇಳದೆ ನಾವು ಅದನ್ನು ಮಾಡುತ್ತಾ ಬಂದಿದ್ದೇವೆ” ಎಂದು ಭಾನುಪ್ರಕಾಶ್‌ ಭಾಷಣದಲ್ಲಿ ಹೇಳಿದ್ದರು.

“ಕಾಂಗ್ರೆಸ್‌ ಸರಕಾರ ತುಘ್ಲಕ್‌ ಸರಕಾರದಂತಾಗಿದೆ. ಸಾವಿರಾರು ಜನ ಸತ್ತರೂ ಆತ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಬೆಲೆ ಏರಿಕೆ, ಹಿಂದೂಗಳ ದಮನ ಆಗುತ್ತಿದ್ದರೂ ಕಾಂಗ್ರೆಸ್‌ ಸರಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇಂಧನ ಬೆಲೆ‌ ಹೆಚ್ಚುತ್ತಾ ಹೋದಂತೆ ಎಲ್ಲ ವಸ್ತುಗಳ ಬೆಲೆ ಹೆಚ್ಚುತ್ತಾ ಹೋಗುತ್ತದೆ. ಸರಕಾರದಲ್ಲಿನ ವ್ಯಕ್ತಿಗಳ ಬೆಲೆ, ಯೋಗ್ಯತೆ ಇಳಿಯುತ್ತದೆ. ನಾವು ಪ್ರತಿಭಟನೆ ಮೂಲಕ ಕಾಂಗ್ರೆಸ್‌ಗೆ ಕೊನೆಯ ಮೊಳೆ ಹೊಡೆಯುವ ಎಚ್ಚರಿಕೆ ನೀಡುತ್ತಿದ್ದೇನೆ. ಇವತ್ತು ನಡೆದಿರುವುದು ಸಾಂಕೇತಿಕ ಪ್ರತಿಭಟನೆ ಮಾತ್ರ. ನಿಮ್ಮ ಭ್ರಷ್ಟ ಆಡಳಿತ ತೊಲಗಿಸುವ ತನಕ ನಾವು ವಿಶ್ರಮಿಸುವುದಿಲ್ಲ” ಎಂದು ಭಾನುಪ್ರಕಾಶ್‌ ಭಾಷಣ ಮುಗಿಸಿದರು.

ತದನಂತರ ಅವರು ಅಸ್ವಸ್ಥರಾದರು. ಕೂಡಲೇ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಭಾನುಪ್ರಕಾಶ್ ಅವರ ಮೃತದೇಹವನ್ನು ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.

ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಸಿದ (Petrol Diesel Price Hike) ರಾಜ್ಯ ಸರಕಾರದ (Karnataka Govt) ಕ್ರಮವನ್ನು ಖಂಡಿಸಿದ ಪ್ರತಿಪಕ್ಷ ಬಿಜೆಪಿ (BJP protest) ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಬಿಜೆಪಿಯ ರಾಜ್ಯ ಪದಾಧಿಕಾರಿಗಳು ಹಾಗೂ ಇತರ ನಾಯಕರು ಪ್ರತಿಭಟಿಸಿ ಭಾಷಣ ಮಾಡಿದರು. ಪ್ರತಿಭಟನೆ ಮಾಡಿ ಸಿಎಂ ಸಿದ್ದರಾಮ‌ಯ್ಯ (CM Siddarmaiah) ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಆರ್.‌ ಅಶೋಕ್‌ (R Ashok) ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದರು.

ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಬಳಿಕ ಎತ್ತಿನಗಾಡಿ ಮೂಲಕ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ. ಅಶೋಕ್ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ತಡೆದರು. ʼʼಪೆಟ್ರೋಲ್ ರೇಟ್‌ ಹೆಚ್ಚಾಗಿದೆ. ಬಸ್‌ವರೆಗೂ ಎತ್ತಿನಗಾಡಿ ಬಿಡಿ” ಎಂದು ಅಶೋಕ್ ಆಗ್ರಹಿಸಿದರು. ಪೊಲೀಸರು ಮತ್ತು ಅಶೋಕ್ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಬಸ್‌ವರೆಗೂ ಎತ್ತಿನ ಗಾಡಿ ಬಿಟ್ಟು ನಂತರ ಅವರನ್ನು ಬಂಧಿಸಿದ ಪೊಲೀಸರು, ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದರು.

ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಚಟ್ಟ ಕಟ್ಟಿ ರಾಜ್ಯ ಸರ್ಕಾರದ ಹೆಣದ ಮೆರವಣಿಗೆ ಮಾಡಿದರು. ʼಐದು ಗ್ಯಾರಂಟಿಗಳ ಗೋವಿಂದ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೋವಿಂದʼ ಎಂದು ಚಟ್ಟ ಹಿಡಿದು ಮೆರವಣಿಗೆ ಮಾಡಿದರು.

ಇದನ್ನೂ ಓದಿ: Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Continue Reading

ಶ್ರದ್ಧಾಂಜಲಿ

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Sagri Raghavendra Upadhyaya: ಹಿರಿಯ ವಿದ್ವಾಂಸ, ಪ್ರವಚನಕಾರ, ಗ್ರಂಥಕರ್ಥ, ಪ್ರಕಾಶಕ, ಉಡುಪಿ ಮೂಲದ ಸಗ್ರಿ ರಾಘವೇಂದ್ರ ಉಪಾಧ್ಯಾಯ (71) ಅವರು ಬೆಂಗಳೂರಿನಲ್ಲಿ ಶನಿವಾರ ನಿಧನರಾಗಿದ್ದಾರೆ.

VISTARANEWS.COM


on

Hiriya vidwamsa Sagri Raghavendra Upadhyaya passed away
Koo

ಬೆಂಗಳೂರು: ಹಿರಿಯ ವಿದ್ವಾಂಸ, ಪ್ರವಚನಕಾರ, ಗ್ರಂಥಕಾರ, ಉಡುಪಿ ಮೂಲದ ಸಗ್ರಿ ರಾಘವೇಂದ್ರ ಉಪಾಧ್ಯಾಯ (71) (Sagri Raghavendra Upadhyaya) ಅವರು ಬೆಂಗಳೂರಿನಲ್ಲಿ ಶನಿವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ ಇದ್ದಾರೆ.

ನರಸಿಂಹ ಉಪಾಧ್ಯಾಯ ಮತ್ತು ಸೀತಾಲಕ್ಷ್ಮಿ ದಂಪತಿಯ ಪುತ್ರನಾಗಿ 1953ರಲ್ಲಿ ಜನಿಸಿದ ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶ್ರೀ ವಿದ್ಯಾಮಾನ್ಯ ತೀರ್ಥರು, ಶೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಶ್ರೀ ಕಾಪು ಹಯಗ್ರೀವಾಚಾರ್ಯರು ಮೊದಲಾದ ಪಂಡಿತರಲ್ಲಿ ಅಧ್ಯಯನ ಮಾಡಿ, ವೇದಾಂತ ಶಾಸ್ತ್ರದಲ್ಲಿ, ಸಂಸ್ಕೃತದಲ್ಲಿ ಎಂ.ಎ ಪಡೆದು ಎಸ್‌ಎಂಎಸ್‌ಪಿ ಸಂಸ್ಕೃತ ಕಾಲೇಜು, ಉಡುಪಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ತಮ್ಮದೇ ಆದ ಪರವಿದ್ಯಾ ಪ್ರಕಾಶನ ಸಂಸ್ಥೆ ಪ್ರಾರಂಭಿಸಿ, ನೂರಾರು ಗ್ರಂಥಗಳನ್ನು ರಚಿಸಿದ್ದಾರೆ. ಉಡುಪಿಯ ಹಲವಾರು ಮಠಗಳಿಗೆ ಆಸ್ಥಾನ ವಿದ್ವಾಂಸರಾಗಿ ಗೌರವ ಮತ್ತು ಮಾನ್ಯತೆಗೆ ಭಾಜನರಾಗಿದ್ದರು. ಕನ್ನಡ ಧಾರ್ಮಿಕ ಸಾಹಿತ್ಯದಲ್ಲಿ ಉತ್ತಮ ಹೆಸರು ಗಳಿಸಿರುವ ತತ್ವವಾದ ಮತ್ತು ಸರ್ವಮೂಲ ಮಾಸ ಪತ್ರಿಕೆಯ ಸಂಪಾದಕರಾಗಿದ್ದರು.

ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶುಕ್ರವಾರ ಸಂಜೆ ಬೆಂಗಳೂರಿನ ಶ್ರೀ ಭಂಡಾರಕೇರಿ ಮಠದಲ್ಲಿ ಶ್ರೀ ವಿದ್ಯೇಶತೀರ್ಥರ 70ನೇ ವರ್ಷದ ವರ್ಧಂತಿ ಕಾರ್ಯಕ್ರಮದಲ್ಲಿ ತಮ್ಮ ಕೊನೆಯ ಉಪನ್ಯಾಸ ನೀಡಿ, ನಂತರದ ಕೆಲವೇ ನಿಮಿಷಗಳಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಹೃದಯಾಘಾತದಿಂದ ಬಳಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚೇತರಿಸಿಕೊಳ್ಳಲಾಗದೇ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಚಾಮರಾಜಪೇಟೆ ಚಿತಾಗಾರದಲ್ಲಿ ನೂರಾರು ವಿದ್ವಾಂಸರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಿತು.

ಇದನ್ನೂ ಒದಿ: Drown in Quarry: ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು‌

ತೀವ್ರ ಸಂತಾಪ: ಸಗ್ರಿ ರಾಘವೇಂದ್ರ ಉಪಾಧ್ಯಾಯ ಅವರ ನಿಧನಕ್ಕೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರು, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು, ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಮತ್ತು ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Continue Reading

ಮೈಸೂರು

Death News: ಬಿಎಸ್‌ವೈ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ ನಿಧನ

Death News: ಕಾ.ಪು ಸಿದ್ದಲಿಂಗಸ್ವಾಮಿ ಅವರು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅವರು 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.

VISTARANEWS.COM


on

death news kapu siddalingaswamy
Koo

ಮೈಸೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ (Kapu Siddalingaswamy) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟರು.

ಇತ್ತೀಚೆಗೆ ಯಡಿಯೂರಪ್ಪ ಹಾಗೂ ನೂತನ ಸಂಸದ ವಿ.ಸೋಮಣ್ಣ ಮೈಸೂರಿಗೆ ಬಂದು ಅವರ ಆರೋಗ್ಯ ವಿಚಾರಿಸಿದ್ದರು. ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅವರು 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿವೆ.‌

ಇಂದು ಬಾಗಲಕೋಟೆ, ಬೀದರ್, ಕರಾವಳಿ ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜೂನ್ 6ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Karnataka Weather) ಇದೆ. ಇನ್ನು ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ (Rain Fall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ 7ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಸೇರಿದಂತೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸುತ್ತಮುತ್ತೆಲಿನ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 23 ° C ಆಗಿರಬಹುದು.

ಇದನ್ನೂ ಓದಿ | Rain News: ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು; ಜೂನ್‌ 13ರವರೆಗೆ ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ!

ಜೂನ್ 13 ರವರೆಗೆ ಭಾರಿ ಮಳೆ ಮುನ್ಸೂಚನೆ

ಜೂನ್ 5 ರಿಂದ ಜೂನ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಸುರಿಯಲಿದೆ. ಜೂನ್ 6 ರಿಂದ 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 8 ರಿಂದ 11 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Muslim Women: ಟಕಾ ಟಕ್‌ ಅಂದ್ರಲ್ಲ, 1 ಲಕ್ಷ ರೂ. ಕೊಡಿ; ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟ ಮುಸ್ಲಿಂ ಮಹಿಳೆಯರು!

Continue Reading
Advertisement
Development of Gaanagapura kshethra on Pandharpur, Thulajapur model says DC Fauzia Tarannum
ಕಲಬುರಗಿ5 mins ago

Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

CM Siddaramaiah
ಪ್ರಮುಖ ಸುದ್ದಿ6 mins ago

CM Siddaramaiah: ಗಣಿ ಪರಿಸರ ಪುನಶ್ಚೇತನ ನಿಗಮದ ಸಭೆ; ಅಧಿಕಾರಿಗಳ ವಿಳಂಬ ಧೋರಣೆಗೆ ಸಿಎಂ ಗರಂ

Job Alert
ಉದ್ಯೋಗ9 mins ago

Job Alert: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಗಮನಿಸಿ-ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

Parliament Sessions
ದೇಶ18 mins ago

Parliament Sessions: ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಸದನ; ಶೇಕ್‌ ಹ್ಯಾಂಡ್‌ ಮಾಡಿದ ಪ್ರಧಾನಿ ಮೋದಿ, ರಾಹುಲ್‌

Pavithra Gowda lipstick case Notice to PSI
ಕ್ರೈಂ34 mins ago

Pavithra Gowda: ಪವಿತ್ರಾಗೆ ಲಿಪ್‌ಸ್ಟಿಕ್‌ ಹಚ್ಚಲು ಅವಕಾಶ ಮಾಡಿಕೊಟ್ಟಿದ್ದ ಮಹಿಳಾ `PSI’ಗೆ ನೋಟಿಸ್‌!

PGCET 2024
ಕರ್ನಾಟಕ45 mins ago

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

Liquor Price karnataka
ಕರ್ನಾಟಕ46 mins ago

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Lok Sabha Speaker
ದೇಶ1 hour ago

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Tharun Sudhir and sonal monteiro love story support By Darshan
ಸ್ಯಾಂಡಲ್ ವುಡ್1 hour ago

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Kenya Violence
ವಿದೇಶ1 hour ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌