Carla belluci: ಇವಳ ಮದುವೆಯಲ್ಲಿ ಟಿಕೆಟ್‌ ಹಣ ಕೊಟ್ಟು ಆಗಮನವೇ ಆಶೀರ್ವಾದ, ದುಡ್ಡು ಕೊಟ್ಟರೇ ಊಟ! - Vistara News

ಪ್ರಮುಖ ಸುದ್ದಿ

Carla belluci: ಇವಳ ಮದುವೆಯಲ್ಲಿ ಟಿಕೆಟ್‌ ಹಣ ಕೊಟ್ಟು ಆಗಮನವೇ ಆಶೀರ್ವಾದ, ದುಡ್ಡು ಕೊಟ್ಟರೇ ಊಟ!

Carla Belluci ಎಂಬ ಮಾಡೆಲ್‌ ಹೊಸದೊಂದು ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದ್ದಾಳೆ. ತನ್ನ ಮದುವೆಗೆ ಬರುವ ಗೆಸ್ಟ್‌ಗಳು ಟಿಕೆಟ್‌ ಹಣ ನೀಡಿ ಬರಬೇಕು ಎಂದಿದ್ದಾಳೆ.

VISTARANEWS.COM


on

carla belluci
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟಿಕೇಟು ಖರೀದಿಸಿ ಸಿನೆಮಾ ನೋಡುತ್ತೇವೆ. ಸರ್ಕಸ್ಸು, ನಾಟಕ ನೋಡುತ್ತೇವೆ. ದುಡ್ಡು ಕೊಟ್ಟು ರೆಸಾರ್ಟ್‌ ಬುಕ್‌ ಮಾಡಿ ಊಟ ತಿಂಡಿ ಮೋಜು ಮಸ್ತಿಗೆಲ್ಲಾ ದುಡ್ಡು ಖರ್ಚು ಮಾಡುತ್ತೇವೆ. ಏನೆಲ್ಲಾ ಸಾಧ್ಯವೋ ಅವನ್ನೆಲ್ಲ ಟಿಕೇಟು ಕೊಟ್ಟು ನೋಡುತ್ತೇವೆ, ಭಾಗವಹಿಸುತ್ತೇವೆ. ಆದರೆ ಇಂಥದ್ದೊಂದನ್ನು ಮಾತ್ರ ಈವರೆಗೆ ಅಷ್ಟಾಗಿ ಯಾರೂ ಯೋಚಿಸಿಲ್ಲ. ಇಲ್ಲೊಬ್ಬಳು ಸುಂದರಿ ನನ್ನ ಮದುವೆ ನೋಡಬೇಕೆಂದರೆ ಟಿಕೇಟು ಹಣ ಕೊಟ್ಟು ಭಾಗವಹಿಸಿ ಎನ್ನುತ್ತಿದ್ದಾಳೆ!

ತಮಾಷೆಯಲ್ಲ, ಇದು ಸತ್ಯ. ಇಂದು ಡೆಸ್ಟಿನೇಷನ್‌ ವೆಡ್ಡಿಂಗ್‌ ಹೆಸರಿನಲ್ಲಿ ನಡೆಯುವ ಮದುವೆಗಳನ್ನು ನೋಡಬೇಕಿದ್ದರೆ ಇದು ಸಕಾಲ. ಆಕೆಯ ಮದುವೆಯನ್ನು ಭರ್ಜರಿ ಜಾಗವೊಂದರಲ್ಲಿ ನೋಡಿಕೊಂಡು, ಭರ್ಜರಿಯಾಗಿ ಉಂಡು, ಅಲ್ಲೇ ತಿರುಗಾಡಿ ಬರಬೇಕೆಂದಿದ್ದರೆ ಆಕೆಯ ಮದುವೆಯ ಟಿಕೆಟ್‌ ಖರೀದಿಸಿ ಮದುವೆ ನೋಡಿ ಚೆನ್ನಾಗಿ ಉಂಡು ತೇಗಿ ಬರಬಹುದು. ಆದರೆ ಊಟಕ್ಕೂ ಪ್ರತ್ಯೇಕ ದರವಿದೆ. ಜೊತೆಗೆ ಅಲ್ಲಿಗೆ ಹೋಗಿ ಬರುವ ಖರ್ಚು, ವಿಮಾನ ದರ ಎಲ್ಲವನ್ನೂ ನೀವೇ ನೋಡಿಕೊಳ್ಳಬೇಕು ಎಂದು ಆಕೆ ಹೇಳಿದ್ದಾಳೆ.

೪೦ರ ಹರೆಯದ ಇಂಗ್ಲೆಂಡ್‌ ಮೂಲದ ಮಾಡೆಲ್‌ ಕಾರ್ಲಾ ಬೆಲ್ಲೂಸಿ ತನ್ನ ೫೨ರ ಹರೆಯದ ಪ್ರಿಯಕರ ಜೋವನ್ನಿ ಜೊತೆಗೆ ಸುಮಾರು ೪೦ ಸಾವಿರ ಪೌಂಡ್‌ ವೆಚ್ಚದ ಭಾರೀ ಬಜೆಟ್‌ನಲ್ಲಿ ಮದುವೆಯಾಗಲು ನಿರ್ಧರಿಸಿದ್ದಾಳೆ. ಈ ಸಂದರ್ಭದಲ್ಲಿ ಕೊಂಚವಾದರೂ ಹಣ ಉಳಿಸಬೇಕೆನ್ನುವ ಯೋಚನೆ ಮಾಡಿರುವ ಈಕೆ, ಯಾರಿಗಾದರೂ ತನ್ನ ಅದ್ದೂರಿ ಮದುವೆ ನೋಡಬೇಕೆಂದಿದ್ದಲ್ಲಿ ೧೦೦ ಪೌಂಡ್‌ ಕೊಟ್ಟು ಸೀಟು ಬುಕ್‌ ಮಾಡಿಕೊಳ್ಳಬಹುದು ಎಂದು ಆಕೆ ಹೇಳಿದ್ದಾಳೆ.

ಇದನ್ನೂ ಓದಿ: ದುರ್ಗಾಪುರದ ಯುವಕರಿಗೆ ನಿತ್ಯವೂ ಬೇಕು ರಾಶಿ ರಾಶಿ ಕಾಂಡೊಮ್‌; ಇವರಿಗೆ ನಶೆಯ ಚಟ !

ಹಾಗಂತ ನಾನು ಯಾರನ್ನೂ ನನ್ನ ಮದುವೆಗೆ ಬನ್ನಿ ಎಂದು ಒತ್ತಾಯ ಮಾಡುವುದಿಲ್ಲ. ಅದು ಅವರವರ ಆಸಕ್ತಿ, ಇಷ್ಟಕ್ಕೆ ಬಿಟ್ಟದ್ದು. ಮದುವೆಯಲ್ಲಿ ಭಾಗವಹಿಸಲು ಯಾರಾದರೂ ಅವರಾಗಿಯೇ ಆಸಕ್ತಿ ತೋರಿಸಿದರೆ ಅವರು ಈ ದರ ನೀಡಿ  ಭಾಗವಹಿಸಲು ಅನುವು ಮಾಡಿಕೊಡಲಾಗುತ್ತದೆ ಎಂದಿದ್ದಾಳೆ.

ಈ ಮದುವೆ ಮುಂದಿನ ವರ್ಷ ಜುಲೈನಲ್ಲಿ ಆಫ್ರಿಕಾದ ಕೇಪ್‌ ವರ್ಡ್‌ನಲ್ಲಿ ನಡೆಯಲಿದ್ದು, ಈಕೆಯ ಮದುವೆಗೆ ಆಸೆಪಟ್ಟು ನೋಡಲು ಬರುವವರಿಂದ ೩,೦೦೦ ಪೌಂಡ್‌ ಊಟಕ್ಕೆ ಪೀಕಿಸಲಿದ್ದಾಳಂತೆ. ʻʻನನ್ನ ಮದುವೆಗೆ ಜನರು ಟಿಕೆಟ್‌ ದರ ಕೊಟ್ಟು ಬಂದು ನೋಡುತ್ತಾರೆ ಎಂದರೆ ಅದಕ್ಕಿಂತ ಸಂತೋಷದ ವಿಷಯ ಇನ್ಯಾವುದಿದೆ? ನನಗಂತೂ ಇದು ನನ್ನ ಕನಸಿನ ಮದುವೆ. ಹಾಗೂ ಕೊನೆಯ ಮದುವೆ. ನನಗೆ ಮುಂದೆ ಇನ್ನು ಮದುವೆಯಾಗುವ ಯೋಚನೆಗಳಿಲ್ಲ. ಹಾಗಾಗಿ ಇದನ್ನು ಎಷ್ಟು ಸಾಧ್ಯವೋ ಅಷ್ಟು ಖುಷಿಯ ಗಳಿಗೆಯನ್ನಾಗಿ ಪರಿವರ್ತಿಸುವ ಆಸೆಯಿದೆʼʼ ಎಂದಿದ್ದಾಳೆ.

ಮದುವೆಗಾಗಿ ೬,೦೦೦ ಪೌಂಡ್‌ ಬೆಲೆಯ ಡ್ರೆಸ್‌ ಈಕೆ ಹೊಲಿಸಿಕೊಂಡಿದ್ದು, ಸುಮಾರು ೬,೦೦೦ ಪೌಂಡ್‌ ಬೆಲೆಯ ಉಂಗುರವನ್ನು ಈಗಾಗಲೇ ತನ್ನ ನಿಶ್ಚಿತಾರ್ಥದ ಉಂಗುರವಾಗಿ ಧರಿಸಿದ್ದಾಳೆ.

ಈಗಾಗಲೇ ನಾಲ್ಕು ಮಕ್ಕಳನ್ನು ಹೊಂದಿರುವ ಈಕೆ ಮಕ್ಕಳನ್ನು ಮದುವೆಯ ನಂತರ ಇಂಗ್ಲೆಂಡ್‌ಗೆ ಕಳುಹಿಸಿ ತಾನು ತನ್ನ ಹೊಸ ಗಂಡನ ಜೊತೆಗೆ ಹನಿಮೂನ್‌ ಆಚರಿಸಿ ಮತ್ತೆ ಇಂಗ್ಲೆಂಡ್‌ಗೆ ಮರಳುತ್ತೇನೆ ಎಂದಿದ್ದಾಳೆ. ತನ್ನ ಹಾಗೂ ಜೋವನ್ನಿ ನಡುವಿನ ಪ್ರೀತಿಯ ಸೀಕ್ರೇಟ್ಟೇ ಇಂಥದ್ದು. ವಾರಕ್ಕೊಮ್ಮೆ ರೊಮ್ಯಾಂಟಿಕ್‌ ಡಿನ್ನರ್‌ ಹಾಗೂ ಮಕ್ಕಳನ್ನು ಬಿಟ್ಟು ನಾವಿಬ್ಬರೇ ಹೋಗುವ ಐಷಾರಾಮಿ ಪ್ರವಾಸಗಳು ನಮಗೆ ಖುಷಿಕೊಡುತ್ತವೆ. ನಾನು ಇಷ್ಟು ಮಾಡಿದರೆ ಜೋವನ್ನಿ ಸಂತೋಷವಾಗಿರುತ್ತಾನೆ ಎಂದು ಆಕೆ ಹೇಳಿದ್ದಾಳೆ. ಕಳೆದ ವರ್ಷ ಆಸ್ಟ್ರೇಲಿಯಾದ ವಧುವೊಬ್ಬರು ತಮ್ಮ ಮದುವೆಗೆ ಬರಲಿಚ್ಛಿಸುವವರಿಗೆ ಇದೇ ರೀತಿ ೯೯ ಡಾಲರ್‌ ಟಿಕೆಟ್‌ ದರ ವಿಧಿಸಿದ್ದಳು. ಇದು ಮದುವೆಯಲ್ಲಿ ಭಾಗವಹಿಸಿ ಊಟವನ್ನೂ ಒಳಗೊಂಡಿತ್ತು.

ಇದನ್ನೂ ಓದಿ: Viral News | ಪಾಕಿಸ್ತಾನದ ವಕ್ರ ಕುತ್ತಿಗೆಯ ಬಾಲಕಿಗೆ ದೇವರಾದ ಭಾರತದ ಡಾಕ್ಟರ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Ancient snake: ಭಾರತದಲ್ಲಿತ್ತು 1000 ಕಿಲೋ ತೂಕ, 50 ಅಡಿ ಉದ್ದದ ʼವಾಸುಕಿʼ ಹಾವು!

Ancient snake: 2005ರಲ್ಲಿ ಗುಜರಾತ್‌ನಲ್ಲಿ ಪತ್ತೆಯಾದ ಪಳೆಯುಳಿಕೆಗಳು, ಭೂಮಿಯ ಮೇಲೆ ಅಸ್ತಿತ್ವದಲ್ಲಿದ್ದ ಅತಿದೊಡ್ಡ ಹಾವಿನದ್ದು ಆಗಿವೆ. ಇದನ್ನು ಸಂಶೋಧಕರು “ವಾಸುಕಿ ಇಂಡಿಕಸ್” ಎಂದು ಹೆಸರಿಸಿದ್ದಾರೆ. ಇದು 4.7 ಕೋಟಿ ವರ್ಷಗಳ ಹಿಂದೆ ಕಚ್‌ನ ಜವುಗು ಪ್ರದೇಶಗಳಲ್ಲಿ ವಾಸಿಸಿತ್ತು.

VISTARANEWS.COM


on

Ancient snake vasuki indicus
Koo

ಹೊಸದಿಲ್ಲಿ: ಜಗತ್ತಿನ ಅತೀ ದೊಡ್ಡ, ಭಾರೀ ಗಾತ್ರದ ಹಾವು (big snake) ಭಾರತದಲ್ಲಿ ಬದುಕಿತ್ತು ಎಂಬುದು ಇದೀಗ ಸಂಶೋಧನೆಯಿಂದ ಗೊತ್ತಾಗಿದೆ. ಗುಜರಾತ್‌ನಲ್ಲಿ ಪತ್ತೆಯಾದ ಪ್ರಾಚೀನ ಹಾವೊಂದರ (Ancient snake) ಪಳೆಯುಳಿಕೆಗಳು (follisls) ಅದರ ಭಾರೀ ಗಾತ್ರ ಹಾಗೂ ತೂಕವನ್ನು ತಿಳಿಯಪಡಿಸಿವೆ. ಅದು ಸುಮಾರು 50 ಅಡಿ ಉದ್ದ ಹಾಗೂ 1,000 ಕೆಜಿ ತೂಕವಿತ್ತಂತೆ!

2005ರಲ್ಲಿ ಗುಜರಾತ್‌ನಲ್ಲಿ ಪತ್ತೆಯಾದ ಪಳೆಯುಳಿಕೆಗಳು, ಭೂಮಿಯ ಮೇಲೆ ಅಸ್ತಿತ್ವದಲ್ಲಿದ್ದ ಅತಿದೊಡ್ಡ ಹಾವಿನದ್ದು ಆಗಿವೆ. ಇದನ್ನು ಸಂಶೋಧಕರು “ವಾಸುಕಿ ಇಂಡಿಕಸ್” ಎಂದು ಹೆಸರಿಸಿದ್ದಾರೆ. ಇದು 4.7 ಕೋಟಿ ವರ್ಷಗಳ ಹಿಂದೆ ಕಚ್‌ನ ಜವುಗು ಪ್ರದೇಶಗಳಲ್ಲಿ ವಾಸಿಸಿತ್ತು. ನಿನ್ನೆ ವಿಜ್ಞಾನ ಪತ್ರಿಕೆಗಳಲ್ಲಿ ಇದು ವರದಿಯಾಗಿದೆ. ಈ ಜಾತಿಯ ಹಾವು 36ರಿಂದ ಸುಮಾರು 50 ಅಡಿ ಉದ್ದದವರೆಗೂ ಬೆಳೆಯುತ್ತಿತ್ತು.

ಗಾತ್ರದಲ್ಲಿ ʼವಾಸುಕಿʼಯ ಗಾತ್ರ ಹಾಗೂ ತೂಕ ಈಗ ಅಳಿವಿನಂಚಿನಲ್ಲಿರುವ ʼಟೈಟಾನೊಬೊವಾʼವನ್ನು ಮೀರಿರಬಹುದು. ಇದು 42 ಅಡಿ ಅಳತೆಯ ಅತಿದೊಡ್ಡ ಹಾವು. ಇದು 1 ಟನ್ ಅಥವಾ 1,000 ಕಿಲೋಗ್ರಾಂಗಳಷ್ಟು ತೂಕವನ್ನು ಹೊಂದಿರಬಹುದು ಎಂದು ಸಂಶೋಧಕರು ಹೇಳುತ್ತಾರೆ. ಇಂದು ಜೀವಂತವಾಗಿರುವ ಅತಿದೊಡ್ಡ ಹಾವೆಂದರೆ ಏಷ್ಯಾದ 33 ಅಡಿ ಉದ್ದದ ರೆಟಿಕ್ಯುಲೇಟೆಡ್ ಹೆಬ್ಬಾವು.

“ಅದರ ದೊಡ್ಡ ಗಾತ್ರವನ್ನು ಪರಿಗಣಿಸಿದರೆ, ವಾಸುಕಿಯು ನಿಧಾನವಾಗಿ ಚಲಿಸುವ ಹೊಂಚುದಾಳಿ ಪರಭಕ್ಷಕವಾಗಿತ್ತು. ಅದು ಅನಕೊಂಡಗಳು ಮತ್ತು ಹೆಬ್ಬಾವುಗಳಂತೆ ಸುತ್ತುವರಿದು ಬಿಗಿಯುವಿಕೆಯ ಮೂಲಕ ತನ್ನ ಬೇಟೆಯನ್ನು ಪಡೆಯುತ್ತಿತ್ತು” ಎಂದು ಐಐಟಿ-ರೂರ್ಕಿಯಲ್ಲಿ ಪ್ಯಾಲಿಯಂಟಾಲಜಿಯ ಪೋಸ್ಟ್‌ ಡಾಕ್ಟರಲ್ ಸಂಶೋಧಕ ಮತ್ತು ಅಧ್ಯಯನದ ಪ್ರಮುಖ ಲೇಖಕ ದೇಬಜಿತ್ ದತ್ತಾ ಹೇಳುತ್ತಾರೆ. “ಈ ಹಾವು ಕರಾವಳಿಯ ಸಮೀಪವಿರುವ ಜೌಗು ಪ್ರದೇಶದಲ್ಲಿ ಜಾಗತಿಕ ತಾಪಮಾನವು ಇಂದಿನಕ್ಕಿಂತ ಹೆಚ್ಚಿರುವ ಸಮಯದಲ್ಲಿ ವಾಸಿಸುತ್ತಿತ್ತು” ಎಂದಿದ್ದಾರೆ.

ಹಿಂದೂ ಪುರಾಣಗಳಲ್ಲಿ ʼವಾಸುಕಿʼ ಎಂಬ ಭಾರೀ ನಾಗರಾಜನ ಕತೆಗಳು ಇವೆ. ಇದನ್ನು ಸಾಮಾನ್ಯವಾಗಿ ಶಿವನ ಕುತ್ತಿಗೆಗೆ ಸುತ್ತುವಂತೆ ಚಿತ್ರಿಸಲಾಗುತ್ತದೆ. ಸಮುದ್ರ ಮಥನಕ್ಕೆ ಈ ಹಾವನ್ನು ಬಳಸಿಕೊಳ್ಳಲಾಗಿತ್ತು ಎಂದು ಕತೆಯಿದೆ. ಈ ಹಿನ್ನೆಲೆಯಲ್ಲಿ ಸಂಶೋಧಕರು ಇದಕ್ಕೆ ʼವಾಸುಕಿ ಇಂಡಿಕಸ್ʼ ಎಂಬ ಹೆಸರನ್ನು ನೀಡಿದ್ದಾರೆ.

“ಇದು ಬಹಳ ಸಾಂಕೇತಿಕವಾಗಿದೆ” ಎಂದು ನಾಮಕರಣದ ನಂತರ ದತ್ತ ಹೇಳಿದ್ದಾರೆ. “ವಾಸುಕಿ ನಮ್ಮ ಸರ್ಪರಾಜ. ಹೀಗಾಗಿ ಇಲ್ಲಿರುವ ಅಸಾಧಾರಣವಾದ ದೊಡ್ಡ ಗಾತ್ರದ ಹಾವೂ ಅದೇ” ಎಂದು ಅವರು ವಿವರಿಸಿದರು.

ವಾಸುಕಿ ಇಂಡಿಕಸ್‌ನ ಪಳೆಯುಳಿಕೆಯನ್ನು IIT-ರೂರ್ಕಿಯ ಪ್ರಾಗ್ಜೀವಶಾಸ್ತ್ರದ ಪ್ರಾಧ್ಯಾಪಕ ಸುನಿಲ್ ಬಾಜಪೇಯಿ ಅವರು 2005ರಲ್ಲಿ ಕಂಡುಹಿಡಿದರು. ಅವರು ಕಚ್‌ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಅವಶೇಷಗಳನ್ನು ಪತ್ತೆಹಚ್ಚಿದರು.

ಆ ಸಮಯದಲ್ಲಿ, ʼಸೈಂಟಿಫಿಕ್ ಅಮೇರಿಕನ್ʼ ಪ್ರಕಾರ, ಅವಶೇಷಗಳು ಈಗಾಗಲೇ ತಿಳಿದಿರುವ ಇತಿಹಾಸಪೂರ್ವ ಜಾತಿಯ ಮೊಸಳೆಗೆ ಸೇರಿವೆ ಎಂದು ಬಾಜಪೇಯಿ ನಂಬಿದ್ದರು. 2022ರವರೆಗೆ ಪಳೆಯುಳಿಕೆ ಅವರ ಪ್ರಯೋಗಾಲಯದಲ್ಲಿ ಇತ್ತು. ಅದೇ ವರ್ಷ ಪ್ರಯೋಗಾಲಯಕ್ಕೆ ಸೇರಿದ ದತ್ತಾ ಅವುಗಳನ್ನು ಪರೀಕ್ಷಿಸಲು ಪ್ರಾರಂಭಿಸಿದರು. ಆ ಚೂರುಗಳು ಬೇರೆ ಜಾತಿಗೆ ಸೇರಿದವು ಎಂದು ಇಬ್ಬರಿಗೂ ಅರಿವಾಯಿತು.

“ಪಳೆಯುಳಿಕೆಯು 2005ರಲ್ಲಿ ಕಂಡುಬಂದಿದೆ, ಆದರೆ ನಾನು ಬೇರೆ ಬೇರೆ ಪಳೆಯುಳಿಕೆಗಳ ಮೇಲೆ ಕೆಲಸ ಮಾಡುತ್ತಿರುವುದರಿಂದ, ಅದು ಹಾಗೇ ಉಳಿಯಿತು. 2022ರಲ್ಲಿ ನಾವು ಪಳೆಯುಳಿಕೆಯನ್ನು ಮರು-ಪರಿಶೀಲಿಸಲು ಪ್ರಾರಂಭಿಸಿದ್ದೇವೆ. ಆರಂಭದಲ್ಲಿ ಅದರ ಗಾತ್ರದಿಂದಾಗಿ, ಇದು ಮೊಸಳೆ ಎಂದು ನಾನು ಭಾವಿಸಿದೆ. ಆದರೆ ನಂತರ ಅದು ಹಾವಿನದ್ದಾಗಿದೆ ಎಂದು ಅರಿತುಕೊಂಡೆವು” ಎಂದು ಬಾಜಪೇಯಿ ತಿಳಿಸಿದರು.

ಇದನ್ನೂ ಓದಿ: Hottest Year: 1.25 ಲಕ್ಷ ವರ್ಷಗಳಲ್ಲೇ 2023 ಅತಿ ಬಿಸಿಯಾದ ವರ್ಷ, ಕಾರಣ ಏನು?

Continue Reading

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

ರಾಜಮಾರ್ಗ ಅಂಕಣ: ತನ್ನ ಅದ್ಭುತವಾದ ಅಭಿನಯ ಹಾಗೂ ರೋಚಕವಾದ ಸಿನೆಮಾಗಳ ಮೂಲಕ ಇಡೀ ಜಗತ್ತನ್ನು ಚಾರ್ಲಿ ಚಾಪ್ಲಿನ್‌ಗೆ ಮೊನ್ನೆ ಮೊನ್ನೆ (ಏಪ್ರಿಲ್ 16) ಹುಟ್ಟುಹಬ್ಬ. A day without laughter is a day wasted ಎಂದು ಹೇಳಿದ್ದ ಚಾಪ್ಲಿನ್ ಅದರಂತೆ ಬದುಕಿದ್ದ! ತನ್ನ ನೂರಾರು ನೋವುಗಳನ್ನು ನುಂಗಿ ಜಗತ್ತನ್ನು ನಗಿಸಿದ ಚಾರ್ಲಿ ಚಾಪ್ಲಿನ್ ಬದುಕು ಅವನ ಸಿನೆಮಾಗಳಷ್ಟೆ ರೋಚಕ.

VISTARANEWS.COM


on

charlie chaplin rajamarga
Koo

ಜಗತ್ತಿಗೆ ನಗುವನ್ನು ಕಲಿಸಿದ ಚಾರ್ಲಿ ಬದುಕು ದುರಂತ ಆಗಿತ್ತು!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಜಗತ್ತಿನ ಮಹೋನ್ನತವಾದ ಕಾಮಿಡಿ (comedy) ಸ್ಟಾರ್, ನಿರ್ಮಾಪಕ, ಎಡಿಟರ್, ನಿರ್ದೇಶಕ (Director), ಲೇಖಕ, ಮಹಾನ್ ನಟ (Actor), ಸಂಗೀತ ನಿರ್ದೇಶಕ…………..ಇನ್ನೂ ಏನೇನೋ ಅವತಾರಗಳು! ಚಾರ್ಲಿ ಚಾಪ್ಲಿನ್ (Charlie Chaplin) ಬದುಕಿದ ರೀತಿಯೇ ಹಾಗಿತ್ತು.

ಆತನ TRAMP ಜಗತ್ತಿನ ಅತ್ಯಂತ ಜನಪ್ರಿಯ ಪಾತ್ರ!

ಆ ವಿಚಿತ್ರವಾದ ಬುಟ್ಟಿಯಾಕಾರದ ಟೋಪಿ, ಬೂಟ್ ಪಾಲಿಶ್ ಮೀಸೆ, ಉದ್ದವಾದ ನಡೆಕೋಲು ಈ ಮೂರು ಸೇರಿದರೆ ಚಾಪ್ಲಿನ್ ಚಿತ್ರವು ಕಣ್ಮುಂದೆ ಬಂದಾಯಿತು! ಆ ಪಾತ್ರದ ಹೆಸರು TRAMP. ಜಗತ್ತಿನ ಅತ್ಯಂತ ಜನಪ್ರಿಯ ಪಾತ್ರವದು!

1889ರ ಏಪ್ರಿಲ್ 16ರಂದು ಲಂಡನ್ನಿನಲ್ಲಿ ಹುಟ್ಟಿದ ಅವನ ಬಾಲ್ಯವು ದೊಡ್ಡ ಸಮಸ್ಯೆಗಳಿಂದ ಕೂಡಿತ್ತು. ಹುಟ್ಟಿಸಿದ ತಂದೆಯು ಮಗನನ್ನು ಬಿಟ್ಟು ಹೋಗಿದ್ದರು. ತಾಯಿಗಂತೂ ಗುಣವಾಗದ ಮನೋವ್ಯಾಧಿ. ಮಗ ಚಾರ್ಲಿ ಒಂಬತ್ತನೆಯ ವಯಸ್ಸಿಗೆ ತಲುಪಿದಾಗ ಅಮ್ಮ ಹೆಚ್ಚು ಕಡಿಮೆ ಜೀವನದಲ್ಲಿ ಆಸಕ್ತಿಯನ್ನು ಕಳೆದುಕೊಂಡಿದ್ದರು.

ಆಕೆ ಹಲವು ಮನೆಗಳಲ್ಲಿ ಕೆಲಸ ಮಾಡಿದ್ದು, ಹಲವು ನಾಟಕ ಮಂಡಳಿಗಳಲ್ಲಿ ಕಾಮಿಡಿ ಪಾತ್ರ ಮಾಡಿ ನಗಿಸಿದ್ದು ಎಲ್ಲವೂ ಹೊಟ್ಟೆಪಾಡಿಗಾಗಿ! ಅಮ್ಮನ ಮೇಲೆ ಮಗನಿಗೆ ಅತಿಯಾದ ಪ್ರೀತಿ. ಬದುಕು ಜಟಕಾ ಬಂಡಿ ಅವನನ್ನು ಅತ್ಯಂತ ಕಿರಿಯ ಪ್ರಾಯದಲ್ಲಿ ಅಮೆರಿಕಕ್ಕೆ ಕರೆದುಕೊಂಡು ಹೋಯಿತು. ಆ TRAMP ಪಾತ್ರದ ಕಲ್ಪನೆಯು ಮೂಡಿದ್ದು, ಚಾರ್ಲಿಯು ಸಿನೆಮಾದ ಭಾಷೆಯನ್ನು ಕಲಿತದ್ದು ಅಮೆರಿಕಾದಲ್ಲಿ.

ಆತನ ವಿಚಿತ್ರ ಮ್ಯಾನರಿಸಂ ಜಗತ್ತಿಗೆ ಹುಚ್ಚು ಹಿಡಿಸಿದವು!

1921ರಲ್ಲಿ ಅವನ ಮೊದಲ ಸಿನೆಮಾವಾದ The Kid ತೆರೆಗೆ ಬಂದಿತು. ಅವನ ವಿಚಿತ್ರವಾದ ನಡಿಗೆ, ದೇಹ ಭಾಷೆ, ವಿಚಿತ್ರ ಮ್ಯಾನರಿಸಂಗಳು ಮತ್ತು ವ್ಯಂಗ್ಯವಾದ ನಗು ಜಗತ್ತಿನ ಸಿನಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟವು. ಆಗ ಟಾಕಿ ಸಿನೆಮಾಗಳು ಆರಂಭ ಆಗಿದ್ದರೂ ಚಾರ್ಲಿ ಆರಂಭದಲ್ಲಿ ಮಾಡಿದ್ದೆಲ್ಲವೂ ಮೂಕಿ ಸಿನಿಮಾಗಳೇ! SILENCE is the best mode of expressions ಎಂದು ಚಾರ್ಲಿ ನಂಬಿದ್ದ.

ಹಿಟ್ಲರನನ್ನು ನಗಿಸಿದ ಚಾಪ್ಲಿನ್!

ಅವನ ಸಿನೆಮಾಗಳ ಕಥೆಗಾರ, ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ, ಎಡಿಟರ್ ಎಲ್ಲವೂ ಅವನೇ! ನಂತರ ಬಂತು ನೋಡಿ ಸಾಲು ಸಾಲು ಚಿತ್ರಗಳು. The Circus, Gold Rush, City Lights, Modern Times…. ಎಲ್ಲವೂ ಸೂಪರ್ ಹಿಟ್! ತನ್ನ ಮೊದಲ ಟಾಕಿ ಸಿನೆಮಾ ಆಗಿ The Great Dictator(1940) ತೆರೆಗೆ ತಂದ ಚಾರ್ಲಿ. ಅದು ಆ ಕಾಲದ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರನನ್ನು ಅಣಕಿಸುವ ಸಿನೆಮಾ. ಆಗ ಹಿಟ್ಲರನು ಜೀವಂತ ಇದ್ದ. ಆ ಸಿನೆಮಾವನ್ನು ನೋಡಿ ಸಿಟ್ಟು ಮಾಡಿಕೊಂಡು ಆತನು ಚಾರ್ಲಿಯನ್ನು ಕೊಂದೇ ಬಿಡ್ತಾನೆ ಎಂಬ ಸುದ್ದಿಯು ಎಲ್ಲೆಡೆಯು ಹರಡಿತ್ತು! ಆದರೆ ಆ ಸಿನೆಮಾವನ್ನು ನೋಡಿದ ಹಿಟ್ಲರ್ ಬಿದ್ದು ಬಿದ್ದು ನಕ್ಕು ಬಿಟ್ಟನು ಮತ್ತು ಚಾರ್ಲಿಗೆ ಶಾಬಾಷ್ ಹೇಳಿದ್ದನು ಅನ್ನೋದೇ ಚಾರ್ಲಿಗೆ ದೊರೆತ ಬಹುದೊಡ್ಡ ಪ್ರಶಸ್ತಿ!

charlie chaplin rajamarga

ನನಗೆ ಸಿನೆಮಾ ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದ ಚಾರ್ಲಿ!

ದಾಖಲೆಯ ಪ್ರಕಾರ ಆತ ಮಾಡಿದ ಒಟ್ಟು ಸಿನೆಮಾಗಳು 83. ‘ನನಗೆ ಸಿನೆಮಾ ಬಿಟ್ಟರೆ ಬೇರೇನೂ ಗೊತ್ತಿಲ್ಲ’ ಅಂತ ಹೇಳುತ್ತಿದ್ದ ಆತ ಸಾಯುವವರೆಗೂ(1977) ಸಿನೆಮಾಗಳಲ್ಲಿ ಮುಳುಗಿಬಿಟ್ಟಿದ್ದ. ಅವನ ಸಿನೆಮಾಗಳು ಕೇವಲ ಕಾಮಿಡಿ, ನಗುವುದಕ್ಕಾಗಿ ಮಾತ್ರ ಇರದೇ ವಿಡಂಬನೆ, ವ್ಯಂಗ್ಯ, ಪ್ರೀತಿ, ಕಣ್ಣೀರು ಮತ್ತು ಪ್ರೇಮಗಳಿಂದ ಶ್ರೀಮಂತವಾಗಿ ಇದ್ದವು. ಅದರಲ್ಲಿಯೂ ಗೋಲ್ಡ್ ರಶ್, ಸಿಟಿ ಲೈಟ್ಸ್, ಮಾಡರ್ನ್ ಟೈಮ್ಸ್ ಮತ್ತು ದಿ ಗ್ರೇಟ್ ಡಿಕ್ಟೇಟರ್ ಸಿನೆಮಾಗಳು ಜಗತ್ತಿನ ಅತೀ ಶ್ರೇಷ್ಟ ಸಿನೆಮಾಗಳ ಸಾಲಿನಲ್ಲಿ ಸ್ಥಾನವನ್ನು ಪಡೆದವು. ಚಾರ್ಲಿಯ ಸಿನೆಮಾಗಳು ಎಷ್ಟು ರೋಚಕವಾಗಿ ಇದ್ದವೋ ಅವನ ಬದುಕು ಅಷ್ಟೇ ದುರಂತ ಆಗಿತ್ತು!

ಚಾಪ್ಲಿನ್ ಬದುಕಲ್ಲಿ ವಿವಾದಗಳು ಬೆನ್ನು ಬಿಡಲಿಲ್ಲ!

ಬೆನ್ನು ಬಿಡದ ನೂರಾರು ವಿವಾದಗಳು ಅವನನ್ನು ಹಿಂಡಿ ಹಿಪ್ಪೆ ಮಾಡಿದವು. ತನ್ನ ಸಿನೆಮಾದಲ್ಲಿ ಅಭಿನಯಿಸಿದ ಹದಿಹರೆಯದ ಎಲ್ಲ ಚಂದದ ಹುಡುಗಿಯರನ್ನು ಚಾರ್ಲಿ ಮಿತಿಗಿಂತ ಹೆಚ್ಚು ಮೋಹಿಸಿದ್ದ. ಜೀವನದಲ್ಲಿ 3 ಬಾರಿ ಮದುವೆಯಾಗಿ 11 ಮಕ್ಕಳನ್ನು ಪಡೆದ! ಅದರ ನಂತರವೂ ಅವನ ದಾಹವು ನೀಗಲಿಲ್ಲ. ಕೊನೆಯ ಕೆಲವು ಸಿನೆಮಾಗಳು ಸೋತು ಹೋದಾಗ ಚಾರ್ಲಿಯು ಕುಸಿದು ಹೋದರೂ ಸಿನೆಮಾ ಮಾಡುವುದನ್ನು ಬಿಡಲಿಲ್ಲ. ಚಾಪ್ಲಿನ್ ಕೊನೆಯ ಸಿನೆಮಾಗಳು ಪೂರ್ಣವಾಗಿ ಸೋತವು.

ಇನ್ನು ಸಿನೆಮಾ ಮಾಡುವುದಿಲ್ಲ ಅಂದ ಚಾಪ್ಲಿನ್!

ಅವನ ಜೀವನದ ಒಂದು ಘಟನೆಯನ್ನು ನಾನು ಉಲ್ಲೇಖ ಮಾಡಲೇಬೇಕು. ಅವನು ಜೀವಂತವಾಗಿ ಇದ್ದಾಗ ಅಮೇರಿಕಾದಲ್ಲಿ ಒಂದು ದೊಡ್ಡ ಸ್ಪರ್ಧೆ ನಡೆಯಿತು. ಅದು ಚಾರ್ಲಿಯನ್ನು, ಅವನ ಡ್ರೆಸ್ಸನ್ನು, ಅವನ ನಡಿಗೆ, ಅವನ ಅಭಿನಯ.. ಇತ್ಯಾದಿಗಳನ್ನು ಅನುಕರಣೆ ಮಾಡುವ ಸ್ಪರ್ಧೆ! ಕುತೂಹಲದಿಂದ ಚಾರ್ಲಿ ಚಾಪ್ಲಿನ್ ಆ ಸ್ಪರ್ಧೆಯಲ್ಲಿ ಬೇರೆ ಹೆಸರು ಕೊಟ್ಟು ಭಾಗವಹಿಸಿದ್ದನು. ಆದರೆ ಫಲಿತಾಂಶ ಬಂದಾಗ ಚಾರ್ಲಿಗೆ ನಿಜವಾದ ಶಾಕ್ ಆಯಿತು. ಏಕೆಂದರೆ ಅವನಿಗೇ ಸೆಕೆಂಡ್ ಪ್ರೈಜ್ ಬಂದಿತ್ತು!

ಅಂದು ವೇದಿಕೆ ಹತ್ತಿದ ಚಾಪ್ಲಿನ್ ವಿಜೇತ ಕಲಾವಿದನನ್ನು ಅಪ್ಪಿಕೊಂಡು ಅಭಿನಂದಿಸಿದನು ಮತ್ತು ತಾನು ಇನ್ನು ಯಾವ ಸಿನೆಮಾವನ್ನು ಕೂಡ ಮಾಡುವುದಿಲ್ಲ ಎಂದು ಆ ವೇದಿಕೆಯಲ್ಲಿಯೇ ಘೋಷಿಸಿದನು! ಅವನ ಕೊನೆಯ ಸಿನೆಮಾ A Countess from Hong Kong (1967).

ತನ್ನ ಅದ್ಭುತವಾದ ಅಭಿನಯ ಹಾಗೂ ರೋಚಕವಾದ ಸಿನೆಮಾಗಳ ಮೂಲಕ ಇಡೀ ಜಗತ್ತನ್ನು ನಗಿಸಿದ ಅವನಿಗೆ ಮೊನ್ನೆ ಮೊನ್ನೆ (ಏಪ್ರಿಲ್ 16) ಹುಟ್ಟುಹಬ್ಬ.

A day without laughter is a day wasted ಎಂದು ಹೇಳಿದ್ದ ಚಾಪ್ಲಿನ್ ಅದರಂತೆ ಬದುಕಿದ್ದ! ತನ್ನ ನೂರಾರು ನೋವುಗಳನ್ನು ನುಂಗಿ ಜಗತ್ತನ್ನು ನಗಿಸಿದ ಚಾರ್ಲಿ ಚಾಪ್ಲಿನ್ ಬದುಕು ಅವನ ಸಿನೆಮಾಗಳಷ್ಟೆ ರೋಚಕ ಆಗಿದೆ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತದ ಹೆಣ್ಣು ಮಕ್ಕಳಿಗೆ ಆಕಾಶದ ಎತ್ತರವೂ ಕಡಿಮೆ ಎಂದು ಸಾಬೀತು ಪಡಿಸಿದ ಕಲ್ಪನಾ ಚಾವ್ಲಾ!

Continue Reading

Lok Sabha Election 2024

Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

Modi in Karnataka: ನಾಳೆ (ಏಪ್ರಿಲ್‌ 20) ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

VISTARANEWS.COM


on

Modi in Karnataka today Massive rally in Chikkaballapur and roadshow in Bengaluru
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ (Modi in Karnataka) ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್‌ 20 ರಂದು ನಡೆಯಲಿರುವ ಎರಡು ಸಮಾವೇಶಗಳಲ್ಲಿ ಮೋದಿ ಏನು ಮಾತನಾಡಲಿದ್ದಾರೆ? ಯಾವೆಲ್ಲ ಹೊಸ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕನ್ಯಾ ರಾಶಿಯಿಂದ ಶನಿವಾರ ರಾತ್ರಿ 11:08ಕ್ಕೆ ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ವೃಷಭ ರಾಶಿಯವರು ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 22:40 ವಾರ: ಶನಿವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 14:03 ಯೋಗ: ಧ್ರುವ 26:46
ಕರಣ: ಭವ 09:22 ಅಮೃತಕಾಲ: ಬೆಳಗ್ಗೆ 06:50 ರಿಂದ 08:39
ದಿನದ ವಿಶೇಷ: ಮಾಗಡಿ ರಂಗನಾಥ ಸ್ವಾಮಿ ರಥ

ಸೂರ್ಯೋದಯ : 06:04   ಸೂರ್ಯಾಸ್ತ : 06:33

ರಾಹುಕಾಲ : ಬೆಳಗ್ಗೆ 09:11 ರಿಂದ 10:45
ಗುಳಿಕಕಾಲ: ಬೆಳಗ್ಗೆ 06:04ರಿಂದ 07:38
ಯಮಗಂಡಕಾಲ: ಮಧ್ಯಾಹ್ನ 01:52 ರಿಂದ 03:26

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳು ಮಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ, ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು,ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Ancient snake vasuki indicus
ವೈರಲ್ ನ್ಯೂಸ್7 mins ago

Ancient snake: ಭಾರತದಲ್ಲಿತ್ತು 1000 ಕಿಲೋ ತೂಕ, 50 ಅಡಿ ಉದ್ದದ ʼವಾಸುಕಿʼ ಹಾವು!

charlie chaplin rajamarga
ಪ್ರಮುಖ ಸುದ್ದಿ43 mins ago

ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

Karnataka Weather Forecast
ಮಳೆ1 hour ago

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Modi in Karnataka today Massive rally in Chikkaballapur and roadshow in Bengaluru
Lok Sabha Election 20242 hours ago

Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

Kids Sleep
ಲೈಫ್‌ಸ್ಟೈಲ್2 hours ago

Kids Sleep: ಪೋಷಕರೇ ಎಚ್ಚರ; ನಿಮ್ಮ ಮಕ್ಕಳ ನಿದ್ರೆ ಕಸಿದುಕೊಳ್ಳುವ ಈ ವಸ್ತುಗಳನ್ನು ಕೊಡಲೇಬೇಡಿ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

ಕರ್ನಾಟಕ8 hours ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Neha Hiremttt
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

Narendra Modi
ದೇಶ8 hours ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ8 hours ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ16 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ1 week ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

ಟ್ರೆಂಡಿಂಗ್‌