Praveen Nettaru | ಪಕ್ಷ, ಸಿದ್ಧಾಂತಕ್ಕೆ ಹೋರಾಡುವವರಿಗಿಲ್ಲ ರಕ್ಷಣೆ; ನೂರಾರು ಬಿಜೆಪಿ ಕಾರ್ಯಕರ್ತರ ರಾಜೀನಾಮೆ - Vistara News

ಕರ್ನಾಟಕ

Praveen Nettaru | ಪಕ್ಷ, ಸಿದ್ಧಾಂತಕ್ಕೆ ಹೋರಾಡುವವರಿಗಿಲ್ಲ ರಕ್ಷಣೆ; ನೂರಾರು ಬಿಜೆಪಿ ಕಾರ್ಯಕರ್ತರ ರಾಜೀನಾಮೆ

ಈ ಹಿಂದೆ ನಡೆದಂತಹ ಬಿಜೆಪಿ, ಹಿಂದು ಕಾರ್ಯಕರ್ತರ ಕೊಲೆಗಳಿಗೆ ನ್ಯಾಯ ಸಿಕ್ಕಿಲ್ಲ. ಪ್ರವೀಣ್‌ (Praveen Nettaru) ಹತ್ಯೆ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಪಕ್ಷದ ಯಾವುದೇ ಜವಾಬ್ದಾರಿಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ.

VISTARANEWS.COM


on

Praveen Nettaru
ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಖಂಡಿಸಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಪಕ್ಷ ಹಾಗೂ ಸಿದ್ಧಾಂತಕ್ಕೆ ಹೋರಾಡುತ್ತಿರುವ ಕಾರ್ಯಕರ್ತರ ಪ್ರಾಣಕ್ಕೆ ಬಿಜೆಪಿ ಸರ್ಕಾರದಲ್ಲೇ ರಕ್ಷಣೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ನೂರಾರು ಕಾರ್ಯಕರ್ತರು, ಮುಖಂಡರು ತಮ್ಮ ಜವಾಬ್ದಾರಿಗಳಿಗೆ ರಾಜೀನಾಮೆ ನೀಡಿದ್ದಾರೆ. ಪ್ರವೀಣ್‌ ಹತ್ಯೆಗೆ ನ್ಯಾಯ ಸಿಗುವವರೆಗೆ ಪಕ್ಷದ ಕಾರ್ಯಕಲಾಪಗಳಲ್ಲಿ ಸಕ್ರಿಯವಾಗುವುದಿಲ್ಲ ಎಂದು ಈ ಮೂಲಕ ವರಿಷ್ಠರಿಗೆ ಎಚ್ಚರಿಕೆ ರವಾನಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷದ ವಿರುದ್ಧವೇ ಬಿಜೆಪಿ ಯುವ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದ್ದು, ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. ಇಂದಿನ ಕಾಲಘಟ್ಟದಲ್ಲೂ ಕೂಡ ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದು ಒದಗಿರುವುದು ಕಾರ್ಯಕರ್ತರಿಗೆ ನೋವಾಗುತ್ತಿದೆ. ಪ್ರವೀಣ್ ನೆಟ್ಟಾರು ಸಾವು ಹಿಂದು ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಬಿಜೆಪಿ ಯುವ ಮೋರ್ಚಾ ಹೇಳಿದೆ.

ಹಿಂದೆಲ್ಲ ನಡೆದಂತಹ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣ ಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿಯೇ ಉಳಿದಿರುವ ಕಾರಣ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸಂದೀಪ್‌ ಹರವಿನಗಂಡಿ ಸೇರಿ ಜಿಲ್ಲೆಯ ಯುವಮೋರ್ಚಾದ ಎಲ್ಲ ಪದಾಧಿಕಾರಿಗಳು ಹಾಗೂ 9 ಮಂಡಲದ ಅಧ್ಯಕ್ಷರು ಸೇರಿ ಪಕ್ಷದ ಜವಾಬ್ದಾರಿಗಳಿಗೆ ಸಾಮೂಹಿಕ ರಾಜಿನಾಮೆ ನೀಡುತ್ತಿರುವುದಾಗಿ ಯುವ ಮೋರ್ಚಾ ಘಟಕ ತಿಳಿಸಿದೆ.‌

ಇದನ್ನೂ ಓದಿ | Praveen nettar| ಮುಗ್ಧ ಪ್ರಾಣಿಗಳ ಮೇಲೆ ಅಪಾರ ಪ್ರೀತಿ, ಅನಾಥ ನಾಯಿ ಮರಿಗಳಿಗೆ ಆಸರೆ ಒದಗಿಸಿದ್ದರು ಪ್ರವೀಣ್‌

ಇನ್ನು ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರು, ಪ್ರವೀಣ್ ಹತ್ಯೆಗೆ ನ್ಯಾಯ ಸಿಗುವವರೆಗೆ ಸಂಘಟನೆಯಲ್ಲಿ ಕೆಲಸ ಮಾಡುವುದಿಲ್ಲ ಎಂದು ಹೊಸದುರ್ಗ ಮಂಡಲ ಉಪಾಧ್ಯಕ್ಷ ಮಂಜು ಸಾಣೇಹಳ್ಳಿ, ಕಾರ್ಯದರ್ಶಿ ಎನ್.ಆರ್.ಜಗದೀಶ್, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ರಮೇಶ್ ಗೂಳಿಹಟ್ಟಿ ತಿಳಿಸಿದ್ದು, ಅಗತ್ಯಬಿದ್ದರೆ ರಾಜೀನಾಮೆಗೂ ಸಿದ್ಧ ಎಂದು ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೂ ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ. ಈಗಾಗಲೇ ಕೊಪ್ಪಳ ಗ್ರಾಮೀಣ ಮಂಡಲದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಶೇಖರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಅದೇ ರೀತಿ ತುಮಕೂರು ಸಾಮಾಜಿಕ ಜಾಲತಾಣ ಪ್ರಕೋಷ್ಟ ಪದಾಧಿಕಾರಿ ಶಕುಂತಲಾ ನಟರಾಜ್‌ ಎಂಬುವವರು ರಾಜೀನಾಮೆ ನೀಡಿದ್ದಾರೆ.

ಹಾಗೆಯೇ ಬಾಗಲಕೋಟೆ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ, ಪ್ರಧಾನ‌ ಕಾರ್ಯದರ್ಶಿ ಭುವನೇಶ್ವರ ಪೂಜಾರ್ ಸೇರಿ 12 ಮಂಡಲಗಳ ಪದಾಧಿಕಾರಿಗಳು, ಕಾರ್ಯಕರ್ತರು, ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇನ್ನು ಮೈಸೂರಿನಲ್ಲೂ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ. ಮೈಸೂರು ನಗರದ ನರಸಿಂಹರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಸೇರಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಪ್ರವೀಣ್‌ ಹಂತಕರನ್ನು ಬಂಧಿಸುವಲ್ಲಿ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿ ನಗರ ಬಿಜೆಪಿ ಮಂಡಲದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ನಗರ ಬಿಜೆಪಿ ಮಂಡಲದ ಅಧ್ಯಕ್ಷ ಪುರುಷೋತ್ತಮ್ ಮಾತನಾಡಿ, ಸಂಘ ಪರಿವಾರ, ಹಿಂದುಪರ ಕಾರ್ಯಕರ್ತರ ಹತ್ಯೆ ನಿರಂತರವಾಗಿ ರಾಜ್ಯದಲ್ಲಿ ನಡೆಯುತ್ತಿದ್ದು, ನಮ್ಮದೇ ಸರ್ಕಾರ ಅಧಿಕಾರದಲ್ಲಿದ್ದರೂ ಜಿಹಾದಿ ಮನಸ್ಥಿತಿಯ ಹಂತಕರಿಗೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಕೂಡಲೇ ಸರ್ಕಾರ ಪ್ರವೀಣ್ ಅವರನ್ನು ಹತ್ಯೆ ಮಾಡಿದ ಹಂತಕರನ್ನು ಬಂಧಿಸಿ ಶೂಟ್‌ಔಟ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಎಂ.ಪಿ.ರೇಣುಕಾಚಾರ್ಯ
ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ, ಕಾರ್ಯಕರ್ತರ ಸಾವಿನಿಂದ ನನಗೆ ಬೇಸರ ಆಗಿದೆ. ಪ್ರವೀಣ್‌ ನೆಟ್ಟಾರು ಹತ್ಯೆಗೈದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಹಲವು ಕಾರ್ಯಕರ್ತರು ನನಗೆ ಕರೆ ಮಾಡುತ್ತಿದ್ದಾರೆ, ಅವರಿಗೆ ಉತ್ತರ ಕೊಡಲು ಆಗುತ್ತಿಲ್ಲ. ಪಕ್ಷ ಬಿ ಫಾರ್ಮ್‌ ಕೊಟ್ಟಿದೆ. ಆದರೆ, ಜನರು ನಮಗೆ ಅಧಿಕಾರ ಕೊಟ್ಟಿದ್ದಾರೆ. ಶಾಸಕ ಸ್ಥಾನ ಶಾಶ್ವತವಲ್ಲ, ಅಧಿಕಾರಕ್ಕೆ ನಾನು ಅಂಟಿಕೊಂಡು ಕುಳಿತಿಲ್ಲ. ನಾಳೆ ಕ್ಷೇತ್ರಕ್ಕೆ ಹೋಗಿ ಸಭೆ ಮಾಡಿ, ಕಾರ್ಯಕರ್ತರು ಏನು ಹೇಳುತ್ತಾರೋ ಅದನ್ನೇ ಮಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ | Praveen Nettaru | ಪ್ರವೀಣ್ ಕುಟುಂಬಕ್ಕೆ ಸಂಘ ಪರಿವಾರದಿಂದ 50 ಲಕ್ಷ ರೂ. ನೆರವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Liquor Price Karnataka: ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ಸುದ್ದಿಯನ್ನು ರಾಜ್ಯ ಸರಕಾರ (Karnataka Government) ನೀಡಿದ್ದು, ಜುಲೈ ಒಂದರಿಂದ ಮದ್ಯದ ದರಗಳನ್ನು ಕಡಿಮೆ (Liquor Price Karnataka) ಮಾಡುತ್ತಿದೆ. ಭಾರಿ ಬೆಲೆಯ ಪ್ರೀಮಿಯಂ ಬ್ರಾಂಡ್‌ಗಳ (Premium brand) ಮದ್ಯದ ದರಗಳು ಜುಲೈ 1ರಿಂದ ಇಳಿಕೆಯಾಗಲಿವೆ.

ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

ಹೆಚ್ಚುವರಿ ಅಬಕಾರಿ ತೆರಿಗೆ ರಾಜ್ಯದಲ್ಲಿ ಹೆಚ್ಚು ಇರುವ ಕಾರಣದಿಂದ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ ದರ ದುಬಾರಿಯಾಗಿದೆ. ಈ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದಲೂ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಪೂರೈಕೆಯಾಗುತ್ತಿರುವುದೂ ಕಂಡುಬರುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅಬಕಾರಿ ತೆರಿಗೆ ನಷ್ಟವಾಗುತ್ತಿದೆ.

ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ. ಮೊದಲ ಐದು ಸ್ಲಾಬ್‌ಗಳಲ್ಲಿ ಈಗ ಇರುವ ಹೆಚ್ಚುವರಿ ಅಬಕಾರಿ ತೆರಿಗೆ ವ್ಯತ್ಯಾಸವಾಗುತ್ತಿಲ್ಲ. ಆದರೆ, ಆರರಿಂದ 16ನೇ ಸ್ಲಾಬ್‌ಗಳಲ್ಲಿ ಹೆಚ್ಚುವರಿ ಅಬಕಾರಿ ತೆರಿಗೆ ದರ ಗಣನೀಯವಾಗಿ ಇಳಿಕೆಯಾಗಲಿದೆ. ಈ ಬಗ್ಗೆ ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಈಗ 750 ಎಂ.ಎಲ್. ಗಾತ್ರದ ಬಾಟಲಿಗೆ ₹2,000 ದರ ಇರುವ ಬ್ರಾಂಡ್‌ಗಳ ಮದ್ಯದ ದರವು ಜುಲೈ 1ರಿಂದ ₹1,700ರಿಂದ ₹1,800ಕ್ಕೆ ಇಳಿಕೆಯಾಗಲಿದೆ. ಪ್ರತಿ ಬಾಟಲಿಗೆ ₹5,000 ದರ ಇರುವ ಬ್ರಾಂಡ್ ಮದ್ಯಗಳ ದರ ₹3,600ರಿಂದ 23,700ಕ್ಕೆ ಇಳಿಯಲಿದೆ. ಪ್ರತಿ ಬಾಟಲಿಗೆ 27,100 ಇರುವ ಮದ್ಯದ ದರ 5,200ರ ಅಸುಪಾಸಿಗೆ ಕಡಿಮೆಯಾಗುವ ಸಾಧ್ಯತೆಯೂ ಇದೆ.

ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ಸಾಕಷ್ಟು ದುಬಾರಿಯೇ ಇದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದ ಸರಕಾರ, ಜುಲೈ 1ರಿಂದ ಪರಿಷ್ಕೃತ ಮದ್ಯ ದರ ಅನ್ವಯಿಸಲಿದೆ ಎಂದು ಗೊತ್ತಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂಚಬೇಕಾದ ಸ್ಥಿತಿಯಲ್ಲಿರುವ ಸರಕಾರ, ವರಮಾನ ಹೆಚ್ಚಳಕ್ಕಾಗಿ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಇಳಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ಕ್ರೈಂ

‌Actor Darshan: ದರ್ಶನ್‌ ಗ್ಯಾಂಗ್‌ನಿಂದ ಪೊಲೀಸರು ವಶಪಡಿಸಿಕೊಂಡದ್ದೇನು?

‌Actor Darshan: ಒಟ್ಟಾರೆ 139 ವಸ್ತುಗಳನ್ನು ಸೇರಿ ಮಹತ್ವದ ಟೆಕ್ನಿಕಲ್ ಸಾಕ್ಷಿಗಳನ್ನು ಅಧಿಕಾರಿಗಳು ಕಲೆಹಾಕಿದ್ದಾರೆ. ಹಲ್ಲೆ ಕೃತ್ಯ ನಡೆಯಲು ಪ್ರಮುಖ ಪ್ರಚೋದನಾ ವ್ಯಕ್ತಿ ಹಾಗೂ ಕೇಂದ್ರ ಬಿಂದು ಆಗಿರುವಳು ಪವಿತ್ರಾ ಗೌಡ ಎಂಬುದು ಬಯಲಾಗಿದ್ದು, ರೇಣುಕಾ ಸ್ವಾಮಿ ಜೊತೆಗೆ ನಡೆಸಿದ ಚಾಟಿಂಗ್‌ ಸಾಕ್ಷಿಯನ್ನು ಕಲೆಹಾಕಲಾಗಿದೆ.

VISTARANEWS.COM


on

Actor Darshan Please leave Pavitra Darshan request to police
Koo

ಬೆಂಗಳೂರು: ಆರ್‌ಆರ್‌ ನಗರದಲ್ಲಿ ನಡೆದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣದಲ್ಲಿ, ನಟ ದರ್ಶನ್‌ (Actor Darshan) ಹಾಗೂ ಈತನ ಗ್ಯಾಂಗ್‌ (D boss Gang) ವಿರುದ್ಧ ಸಾಕ್ಷಿಯಾಗಿ (evidence) 139ಕ್ಕೂ ಹೆಚ್ಚು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 28 ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ.

ಆರೋಪಿಗಳು ಧರಿಸಿದ್ದ ಬಟ್ಟೆ, ಶೆಡ್‌ನಲ್ಲಿ ಹಲ್ಲೆಗೆ ಬಳಸಿದ್ದ ಲಾಠಿ, ಮರದ ರಿಪೀಸ್ ವಸ್ತುಗಳು, ತುಳಿದ ಶೂಗಳು, ಆರೋಪಿಗಳು ತಂಗಿದ್ದ ಹೋಟೆಲ್ ಲೆಡ್ಜರ್ ಬುಕ್, ಸಿಸಿಟಿವಿ ರೆಕಾರ್ಡ್, ಕೃತ್ಯದ ವೇಳೆ ಹಾಗೂ ಶವ ಬಿಸಾಡಲು ಬಳಸಿದ್ದ ಕಾರುಗಳು‌, ಆರೋಪಿಗಳು ಪಡೆದುಕೊಂಡಿದ್ದ ಹಣ, ಆರೋಪಿಗಳ ಮೊಬೈಲ್ ಪೋನ್, ಕಾರ್ ಶೆಡ್ ಕಡೆ ಹೋಗುವ ಸಿಸಿಟಿವಿ ರೆಕಾರ್ಡ್‌, ಮೃತದೇಹದ ಮೇಲಿಂದ ಕಳುವಾಗಿದ್ದ ‍ಚಿನ್ನಾಭರಣ ಸೇರಿದಂತೆ ಒಟ್ಟು 139 ವಸ್ತು ಸೀಜ್ ಮಾಡಲಾಗಿದೆ.

ಪ್ರಕರಣದಲ್ಲಿ ಇದುವರೆಗೂ 28 ಕಡೆ ಮಹಜರ್ ಮಾಡಲಾಗಿದೆ. ದರ್ಶನ್ ಸೇರಿ ಎಲ್ಲ 17 ಆರೋಪಿಗಳ ನಿವಾಸ ಹಾಗೂ ಬೇರೆ 11 ಸ್ಥಳಗಳಲ್ಲೂ ಮಹಜರ್ ನಡೆಸಲಾಗಿದೆ. ರೇಣುಕಾಸ್ವಾಮಿ ಕರೆತಂದು ಹಲ್ಲೆ ಕೃತ್ಯ ನಡೆಸಿದ ಪಟ್ಟಣಗೆರೆ ಶೆಡ್, ರೇಣುಕಾಸ್ವಾಮಿಯ ಶವ ಬಿಸಾಡಿದ ರಾಜಕಾಲುವೆ, ಶವ ಬಿಸಾಡಿದ್ದ ಆರೋಪಿಗಳು ತಂಗಿದ್ದ ಆರ್.ಆರ್.ನಗರದ ಹೋಟೆಲ್, ಪಾರ್ಟಿ ಮಾಡಿದ್ದ ಸ್ಟೋನಿಬ್ರೂಕ್ ರೆಸ್ಟೋರೆಂಟ್, ಕಿಡ್ನಾಪ್ ಮಾಡಿದ್ದ ಚಿತ್ರದುರ್ಗದ ಸ್ಥಳ, ಮೈಸೂರಿನ ಖಾಸಗಿ ಹೋಟೆಲ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ.

ಒಟ್ಟಾರೆ 139 ವಸ್ತುಗಳನ್ನು ಸೇರಿ ಮಹತ್ವದ ಟೆಕ್ನಿಕಲ್ ಸಾಕ್ಷಿಗಳನ್ನು ಅಧಿಕಾರಿಗಳು ಕಲೆಹಾಕಿದ್ದಾರೆ. ಹಲ್ಲೆ ಕೃತ್ಯ ನಡೆಯಲು ಪ್ರಮುಖ ಪ್ರಚೋದನಾ ವ್ಯಕ್ತಿ ಹಾಗೂ ಕೇಂದ್ರ ಬಿಂದು ಆಗಿರುವಳು ಪವಿತ್ರಾ ಗೌಡ ಎಂಬುದು ಬಯಲಾಗಿದ್ದು, ರೇಣುಕಾ ಸ್ವಾಮಿ ಜೊತೆಗೆ ನಡೆಸಿದ ಚಾಟಿಂಗ್‌ ಸಾಕ್ಷಿಯನ್ನು ಕಲೆಹಾಕಲಾಗಿದೆ.

ವಿಡಿಯೋ ಮಾಡಿದ ಮೂವರು ಪೊಲೀಸ್‌ ವಶಕ್ಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renuka Swamy Murder) ಸಂಬಂಧಿಸಿದಂತೆ ಪೊಲೀಸರ ತನಿಖೆಯು ತೀವ್ರಗೊಳ್ಳುತ್ತಿದೆ. ಈ ನಡುವೆ ನಟ ದರ್ಶನ್ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದಾಗ ಅದನ್ನೂ ವಿಡಿಯೋ ಮಾಡಿಕೊಂಡಿದ್ದ ಮೂವರು ಹುಡುಗರನ್ನು ವಶಕ್ಕೆ ಪಡೆಯಲಾಗಿದೆ.

ಹಲ್ಲೆ ವಿಡಿಯೋವನ್ನು ಬೇರೆ ಯಾರಿಗೋ ಫಾರ್ವರ್ಡ್ ಮಾಡಿದ್ದು, ಇದಾದ ನಂತರವೇ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮೂವರು ನಾಪತ್ತೆಯಾಗಿದ್ದರು. ಗುರುವಾರ ಮಧ್ಯಾಹ್ನ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ವಿಡಿಯೋ ಮಾಡಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೊಬೈಲ್ ಪರಿಶೀಲನೆ ವೇಳೆ ವಿಡಿಯೋ ಡಿಲೀಟ್ ಮಾಡಿರುವುದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಡಿಯೋ ರಿಟ್ರೀವ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ವಿಡಿಯೊ ರಿಟ್ರೀವ್ ಆದರೆ ಕೇಸ್‌ಗೆ ಮತ್ತೊಂದು ಮಹತ್ವದ ಸಾಕ್ಷ್ಯ ಆಗಲಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

Continue Reading

ಮಳೆ

Karnataka Weather : ಜೂ.23ಕ್ಕೆ ಹೈ ಅಲರ್ಟ್‌! ಇಂದು ವಿಪರೀತ ಮಳೆಯೊಂದಿಗೆ ಬೀಸಲಿದೆ ಬಿರುಗಾಳಿ

Karnataka Weather forecast : ರಾಜ್ಯಾದ್ಯಂತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Rain News) ನೀಡಿದೆ. ಜೂ.23ಕ್ಕೆ ಕರಾವಳಿಗೆ ಹೈ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಜೂ.21ರಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ (Karnataka Weather Forecast) ನೀಡಲಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಸೇರಿ ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

ಬೆಂಗಳೂರಲ್ಲಿ ಚದುರಿದಂತೆ ಮಳೆ

ಬೆಂಗಳೂರಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್‌ 23ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್‌ 22ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಇಂದಿನಿಂದ ಜೂನ್‌ 23ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

International Yoga Day 2024: ವಿಶ್ವಕ್ಕೆ ಯೋಗವನ್ನು ಪರಿಚಯಿಸಿದವರು ಕನ್ನಡಿಗ ಬಿಕೆಎಸ್ ಅಯ್ಯಂಗಾರ್!

“ಆಧುನಿಕ ಯೋಗದ ಪಿತಾಮಹ” ಎಂದು ಕರೆಯಲ್ಪಡುವ ಅಯ್ಯಂಗಾರ್ ಅವರು ಪೂರ್ವದಿಂದ ಪಶ್ಚಿಮಕ್ಕೆ ಯೋಗದ ಸಂದೇಶವನ್ನು ರವಾನಿಸಿದರು. ಸುಮಾರು 60 ದೇಶಗಳಿಗೆ ಯೋಗದ ಪ್ರಯೋಜನಗಳನ್ನು ತಿಳಿಸಿ ಅಭ್ಯಾಸ ಮಾಡಲು ಪ್ರೇರೇಪಣೆ ನೀಡಿದ ಕೀರ್ತಿ ಇವರದ್ದಾಗಿದೆ. ವಿಶ್ವ ಯೋಗ ದಿನಾಚರಣೆಯ (International Yoga Day 2024) ಈ ಸಂದರ್ಭದಲ್ಲಿ ಅವರ ಯೋಗ ಪಯಣ ಹೇಗಿತ್ತು ಎಂಬುದನ್ನು ತಿಳಿಯೋಣ.

VISTARANEWS.COM


on

By

International Yoga Day 2024
Koo

ವಿಶ್ವದಾದ್ಯಂತ ಇಂದು (ಜೂನ್ 21) ಯೋಗ ದಿನವನ್ನು (International Yoga Day 2024) ಆಚರಿಸಲಾಗುತ್ತಿದೆ. ಯೋಗದ (yoga) ಕುರಿತಾಗಿ ಜಾಗತಿಕ ಅರಿವು ಮೂಡಿಸುವುದು, ದೈಹಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ (physical and mental well-being) ಅದರ ಬಹುಮುಖಿ ಪ್ರಯೋಜನಗಳನ್ನು ತಿಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ವಿದೇಶಿಯರು, ಸೆಲೆಬ್ರಿಟಿಗಳಲ್ಲಿ ಯೋಗವು ಸಾಕಷ್ಟು ಜನಪ್ರಿಯವಾಗಿದೆ. ಜಾಗತಿಕವಾಗಿ ಯೋಗದ ಕುರಿತು ಅರಿವು ಮೂಡಿಸುವಲ್ಲಿ ಭಾರತೀಯ ಯೋಗ ಗುರು ಬಿಕೆಎಸ್ ಅಯ್ಯಂಗಾರ್ (BKS Iyengar) ಅವರ ಪ್ರಮುಖ ಪಾತ್ರವಿದೆ.

“ಆಧುನಿಕ ಯೋಗದ ಪಿತಾಮಹ” ಎಂದು ಕರೆಯಲ್ಪಡುವ ಅಯ್ಯಂಗಾರ್ ಅವರು ಪೂರ್ವದಿಂದ ಪಶ್ಚಿಮಕ್ಕೆ ಯೋಗದ ಸಂದೇಶವನ್ನು ಸಾಗಿಸಿದರು. ಸುಮಾರು 60 ದೇಶಗಳಿಗೆ ಯೋಗದ ಪ್ರಯೋಜನಗಳನ್ನು ತಿಳಿಸಿ ಅಭ್ಯಾಸ ಮಾಡಲು ಪ್ರೇರೇಪಣೆ ನೀಡಿದ ಕೀರ್ತಿ ಇವರದ್ದಾಗಿದೆ.

2002ರಲ್ಲಿ ನ್ಯೂಯಾರ್ಕ್ ಟೈಮ್ಸ್ ಒಂದು ಲೇಖನದಲ್ಲಿ ಹೀಗೆ ಬರೆದಿದೆ: ಪ್ರಾಯಶಃ ಯೋಗವನ್ನು ಪಶ್ಚಿಮಕ್ಕೆ ತರಲು ಅಯ್ಯಂಗಾರ್ ಅವರಿಗಿಂತ ಹೆಚ್ಚಿನದನ್ನು ಯಾರೂ ಮಾಡಿಲ್ಲ. ಅಯ್ಯಂಗಾರ್ ಅವರು ಅಮೆರಿಕನ್ನರಿಗೆ ಜಗತ್ತಿನ ಇತರರ ಜೊತೆ ಆಸನಗಳು ಮತ್ತು ಉಸಿರಾಟದ ನಿಯಂತ್ರಣದ ತಂತ್ರಗಳನ್ನು ಕಲಿಸುತ್ತಿದ್ದರು. ಬಿಕೆಎಸ್ ಅಯ್ಯಂಗಾರ್ ಅವರು ಯೋಗವು ದೈಹಿಕ ಅಭ್ಯಾಸಕ್ಕಿಂತ ಹೆಚ್ಚಿನದು. ಅದು ಕಲೆ, ವಿಜ್ಞಾನ ಮತ್ತು ತತ್ತ್ವ ಶಾಸ್ತ್ರ ಎಂದು ನಂಬಿದ್ದರು.


ಬಿಕೆಎಸ್ ಅಯ್ಯಂಗಾರ್ ಪ್ರಯಾಣ ಹೇಗಿತ್ತು?

1950ರ ದಶಕದಲ್ಲಿ ಮುಂಬಯಿ ಪ್ರವಾಸದ ಸಮಯದಲ್ಲಿ ಅಯ್ಯಂಗಾರ್ ಅವರನ್ನು ಕಂಡ ಅಮೆರಿಕನ್- ಬ್ರಿಟಿಷ್ ಪಿಟೀಲು ವಾದಕ ಯೆಹೂದಿ ಮೆನುಹಿನ್ ಅವರೊಂದಿಗಿನ ಮುಖಾಮುಖಿಯಾಯಿತು. ಇದು ಯೋಗವನ್ನು ಜಾಗತಿಕವಾಗಿ ಪ್ರಚಾರ ಪಡಿಸಲು ಪ್ರೇರೇಪಿಸಿತು. 1952ರಲ್ಲಿ ಭಾರತಕ್ಕೆ ಭೇಟಿ ನೀಡಿದ ಮೆನುಹಿನ್ ಅವರು ಅಯ್ಯಂಗಾರ್‌ ಬಳಿ ಯೋಗಾಭ್ಯಾಸದ ಬಗ್ಗೆ ಕೇಳಿದರು. ಅವರು ಎಷ್ಟು ಪ್ರಭಾವಿತರಾದರೆಂದರೆ, ಕೇವಲ ಹತ್ತು ನಿಮಿಷಗಳಿಗೆಂದು ನಿಗದಿಯಾಗಿದ್ದ ಇವರ ನಡುವಿನ ಸಂಭಾಷಣೆಯು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮುಂದುವರಿಯಿತು! ಅಯ್ಯಂಗಾರ್ ಅವರನ್ನು ಮೆನುಹಿನ್ ತಮ್ಮೊಂದಿಗೆ ಸ್ವಿಟ್ಜರ್ಲೆಂಡ್‌ಗೆ ಮತ್ತು ಅನಂತರ ಲಂಡನ್‌ಗೆ ಕರೆತಂದರು. ಇತರ ಪ್ರಭಾವಿ ವ್ಯಕ್ತಿಗಳಿಗೆ ಪರಿಚಯಿಸಿದರು.

1956ರಲ್ಲಿ ನ್ಯೂಯಾರ್ಕ್‌ಗೆ ಅಯ್ಯಂಗಾರ್ ಅವರು ಮೊದಲ ಬಾರಿಗೆ ಭೇಟಿ ನೀಡಿದರು. ಅಲ್ಲಿನವರಿಗೆ ಯೋಗದ ಬಗ್ಗೆ ಹೆಚ್ಚಿನ ಆಸಕ್ತಿ ಇರಲಿಲ್ಲ. ಅಲ್ಲಿ ದಶಕಗಳ ಕಾಲ ಕಾಲ ಅವರು ಜನರನ್ನು ಆಕರ್ಷಿಸಲು ಪ್ರಾರಂಭಿಸಿದರು. ಅನಂತರ ಅವರು ಅಂತಿಮವಾಗಿ ಆರು ಖಂಡಗಳಲ್ಲಿ ಯೋಗ ಸಂಸ್ಥೆಗಳನ್ನು ತೆರೆಯಲು ಹೋದರು. ಯೋಗ ಗುರುಗಳು ಆ ಸಮಯದಲ್ಲಿ 85 ವರ್ಷದ ಬೆಲ್ಜಿಯಂನ ರಾಣಿ ಎಲಿಸಬೆತ್‌ಗೆ ತಲೆಯ ಮೇಲೆ ನಿಲ್ಲುವ ಶಿರ್ಷಾಸನ ಕಲಿಸಿದರು.

1966ರಲ್ಲಿ ಅವರು ತಮ್ಮ ಮೊದಲ ಪುಸ್ತಕ ʼಲೈಟ್ ಆನ್ ಯೋಗʼ (1966) ಅನ್ನು ಪ್ರಕಟಿಸಿದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಮಾರಾಟವಾದ ಕೃತಿಯಾಯಿತು.


ಬಿಕೆಎಸ್ ಅಯ್ಯಂಗಾರ್ ಯಾರು?

ಅಯ್ಯಂಗಾರ್ ಅವರು 1918ರ ಡಿಸೆಂಬರ್ 14ರಂದು ಕರ್ನಾಟಕದ ಕೋಲಾರ ಜಿಲ್ಲೆಯ ಬೆಳ್ಳೂರಿನಲ್ಲಿ ಜನಿಸಿದರು. ಅವರು 1937ರಲ್ಲಿ ಮಹಾರಾಷ್ಟ್ರದ ಪುಣೆಗೆ ಬಂದರು. ‘ಅಯ್ಯಂಗಾರ್ ಯೋಗ’ ಎಂದು ಕರೆಯಲ್ಪಡುವ ತಮ್ಮ ಯೋಗ ಶೈಲಿಯನ್ನು ಅವರು ಅಲ್ಲಿ ಪ್ರಚಾರಪಡಿಸಿದರು. ಗಮನಾರ್ಹ ವಿಷಯವೆಂದರೆ ಅವರು ಬಾಲ್ಯದಲ್ಲಿ ಕ್ಷಯರೋಗ, ಟೈಫಾಯಿಡ್ ಮತ್ತು ಮಲೇರಿಯಾಗೆ ತುತ್ತಾಗಿ ಬದುಕುಳಿದರು. ಯೋಗವು ಅವರ ಜೀವವನ್ನು ಉಳಿಸಿದ ಕೀರ್ತಿಗೆ ಕಾರಣವಾಯಿತು.


ಯೋಗದ ಜ್ಞಾನವನ್ನು ಹರಡಿದ ಅನಂತರ ಅವರು 1975ರಲ್ಲಿ ತಮ್ಮದೇ ಆದ ‘ಯೋಗವಿದ್ಯಾ’ ಸಂಸ್ಥೆಯನ್ನು ಸ್ಥಾಪಿಸಿದರು. ಅನಂತರ ಅವರು ದೇಶ ಮತ್ತು ವಿದೇಶದ ವಿವಿಧ ಶಾಖೆಗಳಿಗೆ ವಿಸ್ತರಿಸಿದರು. ವಿಶ್ವದ ಅತ್ಯುತ್ತಮ ಯೋಗ ಗುರುಗಳಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿರುವ ಅಯ್ಯಂಗಾರ್ ಅವರು ಯೋಗದ ಕುರಿತು ‘ಲೈಟ್ ಆನ್ ಯೋಗ’, ‘ಲೈಟ್ ಆನ್ ಪ್ರಾಣಾಯಾಮ’ ಮತ್ತು ‘ಲೈಟ್ ಆನ್ ದಿ ಯೋಗ ಸೂತ್ರಾಸ್ ಆಫ್ ಪತಂಜಲಿ’ ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. “ಆಧುನಿಕ ಋಷಿ” ಎಂದು ಪ್ರಶಂಸಿಸಲ್ಪಟ್ಟ ಅಯ್ಯಂಗಾರ್ ಅವರು ವಿವಿಧ ದೇಶಗಳಲ್ಲಿ ತಮ್ಮ ಸಂಸ್ಥೆಯ 100 ಶಾಖೆಗಳನ್ನು ಸ್ಥಾಪಿಸಿದರು.

ಅಂತಾರಾಷ್ಟ್ರೀಯ ಖ್ಯಾತಿಯ ಯೋಗ ಗುರು ಶ್ರೀಸಾಮಾನ್ಯರ ಜೊತೆಗೆ ಅನೇಕ ಪ್ರಮುಖ ವ್ಯಕ್ತಿಗಳಿಗೆ ಯೋಗಾಸನಗಳನ್ನು ಕಲಿಸಿದರು. ಅವರಿಂದ ಯೋಗವನ್ನು ಕಲಿತವರಲ್ಲಿ ಪ್ರಖ್ಯಾತ ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ್ ಮತ್ತು ಪ್ರಸಿದ್ಧ ತತ್ತ್ವಜ್ಞಾನಿ ಜೆ. ಕೃಷ್ಣಮೂರ್ತಿ ಸೇರಿದ್ದಾರೆ. ಅಯ್ಯಂಗಾರ್‌ ಅವರ ಯೋಗ ವಿಧಾನವು ಅನೇಕರನ್ನು ಆಕರ್ಷಿಸಿತು. ಅವರಲ್ಲಿ ನಟಿ ಕರೀನಾ ಕಪೂರ್, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ನಟಿ ಆನೆಟ್ ಬೆನಿಂಗ್, ಡಿಸೈನರ್ ಡೊನ್ನಾ ಕರಂಟೊ ಮತ್ತು ಬರಹಗಾರ ಅಲ್ಡಸ್ ಹಕ್ಸ್ಲೆ ಸೇರಿದ್ದಾರೆ.


ಇದನ್ನೂ ಓದಿ: International Yoga Day 2024: ಹಿರಿಯರಿಗೆ ಸೂಕ್ತವಾದ ಯೋಗಾಸನಗಳಿವು

ಇವರಿಗೆ ಸಂದ ಪ್ರಶಸ್ತಿಗಳು

ಯೋಗಕ್ಕೆ ನೀಡಿರುವ ಅಪಾರ ಕೊಡುಗೆಗಾಗಿ ಅಯ್ಯಂಗಾರ್ ಅವರಿಗೆ 1991ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಮತ್ತು 2014ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

2004ರಲ್ಲಿ ಅವರು ಅಮೆರಿಕದ ಪ್ರತಿಷ್ಠಿತ ʼಟೈಮ್ʼ ಮ್ಯಾಗಜೀನ್‌ನಿಂದ ವಿಶ್ವದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರೆಂದು ಅಯ್ಯಂಗಾರ್‌ ಹೆಸರಿಸಲ್ಪಟ್ಟರು. 2014ರ ಆಗಸ್ಟ್ 20ರಂದು ಅಯ್ಯಂಗಾರ್ ಅವರು ಹೃದಯ ಮತ್ತು ಮೂತ್ರಪಿಂಡ ವೈಫಲ್ಯದಿಂದ ಪುಣೆಯಲ್ಲಿ ನಿಧನರಾದರು. ಆಗ ಅವರಿಗೆ 95 ವರ್ಷ ವಯಸ್ಸಾಗಿತ್ತು.

Continue Reading
Advertisement
IRCTC Ticket Booking
Latest3 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest6 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ11 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್39 mins ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ47 mins ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Pakistan Violence
ವಿದೇಶ1 hour ago

Pakistan Violence: ಕುರಾನ್‌ಗೆ ಅಪಮಾನ; ಪೊಲೀಸ್‌ ಸ್ಟೇಶನ್‌ಗೆ ಬೆಂಕಿ..ಠಾಣೆಯೊಳಗೇ ಆರೋಪಿಯ ಬರ್ಬರ ಕೊಲೆ

Actor Darshan was careful at every step to escape from Renuka case
ಸ್ಯಾಂಡಲ್ ವುಡ್1 hour ago

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

pm narendra modi international yoga day 2024
ಪ್ರಮುಖ ಸುದ್ದಿ2 hours ago

International Yoga Day 2024: ಯೋಗ ದಿನಚರಿಯ ಭಾಗವಾಗಲಿ: ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ

Darshan Arrested troll of pavithra darshan in SSE A
ಸ್ಯಾಂಡಲ್ ವುಡ್2 hours ago

Darshan Arrested: ಇದು ʻಸಪ್ತ ಶೆಡ್ಡಿನಾಚೆ SSE side ‘D’! ಟ್ರೋಲ್‌ ಆದ್ರು ದರ್ಶನ್‌-ಪವಿತ್ರಾ!

Pavithra Gowda is restless without proper food and sleep in Parappa Agrahara
ಕ್ರೈಂ2 hours ago

Pavithra Gowda: ಪರಪ್ಪನ ಅಗ್ರಹಾರದಲ್ಲಿ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿರುವ ಪವಿತ್ರ ಗೌಡ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌