GodFather | ಒಂದೇ ಫ್ರೇಂನಲ್ಲಿ ಇಬ್ಬರು ಸೂಪರ್‌ ಸ್ಟಾರ್‌ಗಳ ಡ್ಯಾನ್ಸ್? ಫೋಟೊ ವೈರಲ್‌ - Vistara News

ಟಾಲಿವುಡ್

GodFather | ಒಂದೇ ಫ್ರೇಂನಲ್ಲಿ ಇಬ್ಬರು ಸೂಪರ್‌ ಸ್ಟಾರ್‌ಗಳ ಡ್ಯಾನ್ಸ್? ಫೋಟೊ ವೈರಲ್‌

ಸಲ್ಮಾನ್‌ ಖಾನ್‌ ಹಾಗೂ ಚಿರಂಜೀವಿ ಅವರು ಒಟ್ಟಿಗೆ ತೆರೆ ಮೆಲೆ ಕಾಣಿಸಿಕೊಳ್ಳುತ್ತಿದ್ದಾರೆ. ಗಾಡ್‌ಫಾದರ್‌ (GodFather) ಸಿನಿಮಾ ಕುರಿತು ಚಿರಂಜೀವಿ ಅವರು ಇನ್ಸ್ಟಾ ಮೂಲಕ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

GodFather
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೆಲುಗು ಚಿತ್ರ ಗಾಡ್‌ಫಾದರ್‌ನಲ್ಲಿ (GodFather) ಬಾಲಿವುಡ್ ಸ್ಟಾರ್‌ ಸಲ್ಮಾನ್ ಖಾನ್ ಮತ್ತು ಮೆಗಾಸ್ಟಾರ್ ಚಿರಂಜೀವಿ ಮೊದಲ ಬಾರಿಗೆ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಗಾಡ್‌ಫಾದರ್ ಸಿನಿಮಾದಲ್ಲಿ ಇಬ್ಬರೂ ಒಂದೇ ಫ್ರೇಮ್‌ನಲ್ಲಿ ಡ್ಯಾನ್ಸ್ ಮಾಡುತ್ತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಚಿರಂಜೀವಿ ಅವರು ಇಬ್ಬರ ಪೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಸಲ್ಲು ಜತೆ ಹೆಜ್ಜೆ ಹಾಕಲು ರೆಡಿ ಎಂದು ಬರೆದುಕೊಂಡಿದ್ದಾರೆ. ಈ ಡ್ಯಾನ್ಸ್‌ಗೆ ಪ್ರಭುದೇವ ಅವರು ನಿರ್ದೇಶನ ಮಾಡುತ್ತಿದ್ದಾರೆ ಎಂದು ನಟ ಚಿರಂಜೀವಿ ಅವರು ಬಹಿರಂಗಪಡಿಸಿದ್ದಾರೆ.

ಮೋಹನ್‌ ರಾಜ್‌ ನಿರ್ದೇಶನದ ಈ ಚಿತ್ರ ಮೋಹನ್‌ಲಾಲ್‌ ಅವರ ನಟನೆಯ ಮಲಯಾಳಂ ಲೂಸಿಫರ್ ಚಿತ್ರದ ತೆಲುಗು ರಿಮೇಕ್ ಆಗಿದೆ. ಇದನ್ನು ಕೊನಿಡೆಲಾ ಪ್ರೊಡಕ್ಷನ್ ಕಂಪನಿ ಮತ್ತು ಸೂಪರ್ ಗುಡ್ ಫಿಲ್ಮ್ಸ್ ಬ್ಯಾನರ್‌ಗಳ ಅಡಿಯಲ್ಲಿ ನಿರ್ಮಿಸಲಾಗಿದೆ.

ಇದನ್ನೂ ಓದಿ | Laal Singh Chaddha | ನಟ ಚಿರಂಜೀವಿ ಮನೆಯಲ್ಲಿ ಸ್ಪೆಷಲ್‌ ಶೋ: ಕಣ್ಣೀರಿಟ್ಟ ಆಮಿರ್‌ ಖಾನ್

ನಯನತಾರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಲ್ಮಾನ್ ಖಾನ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮತ್ತು ಸತ್ಯದೇವ್ ಕಾಂಚರಣ ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಎಸ್.ಎಸ್. ಥಾಮನ್ ಸಂಗೀತ ನೀಡಿದ್ದಾರೆ. ಈ ಫೋಟೊ ನೋಡಿರುವ ಅಭಿಮಾನಿಗಳಿಗೆ ಸಿನಿಮಾದ ಬಗೆಗಿನ ನಿರೀಕ್ಷೆ ಡಬಲ್ ಆಗಿದೆ.

ಸಲ್ಮಾನ್ ಪ್ರಸ್ತುತ ಶೆಹನಾಜ್ ಗಿಲ್, ಪೂಜಾ ಹೆಗ್ಡೆ ಮತ್ತು ಜಸ್ಸಿ ಗಿಲ್ ಅವರೊಂದಿಗೆ ಕಭಿ ಈದ್ ಕಭಿ ದೀಪಾವಳಿ ಚಿತ್ರೀಕರಣದಲ್ಲಿದ್ದಾರೆ. ಇದರ ಜತೆಗೆ ಕತ್ರೀನಾ ಕೈಫ್ ಜತೆ ಟೈಗರ್ 2 ಸಿನಿಮಾ ಕೂಡ ಇದೆ. ವರ್ಷದ ಅಂತ್ಯದ ವೇಳೆಗೆ ಸಲ್ಮಾನ್ ಖಾನ್ ನೋ ಎಂಟ್ರಿ 2 ಚಿತ್ರೀಕರಣವನ್ನು ಪ್ರಾರಂಭಿಸುವ ಸಾಧ್ಯತೆಯಿದೆ.

ಇದನ್ನೂ ಓದಿ | Laal Singh Chaddha | ನಟ ಚಿರಂಜೀವಿ ಮನೆಯಲ್ಲಿ ಸ್ಪೆಷಲ್‌ ಶೋ: ಕಣ್ಣೀರಿಟ್ಟ ಆಮಿರ್‌ ಖಾನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Rashmika Mandanna: ಇತ್ತ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.

VISTARANEWS.COM


on

Rashmika Mandanna Ayushmann Khurrana Team Up For Horror Comedy
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಹಿಂದಿಯಲ್ಲಿ ಈಗಾಗಲೇ ಗುಡ್ ಬೈ, ಮಿಶನ್ ಮಜ್ನು, ಛಾವಾ ಚಿತ್ರಗಳನ್ನು ಮಾಡಿರುವ ರಶ್ಮಿಕಾ, ಸಲ್ಮಾನ್ ಖಾನ್ ಜತೆ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ಸಲ್ಮಾನ್ ಅಭಿನಯದ `ಸಿಕಂದರ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದರ ನಡುವೆ ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಚಿತ್ರಕ್ಕೆ ಗ್ನೀನ್ ಸಿಗ್ನಲ್ ನೀಡಿದ್ದಾರೆ, ಬಾಲಿವುಡ್‌ನ ಪ್ರತಿಭಾವಂತ ಹೀರೋ ಆಯುಷ್ಮಾನ್ ಖುರಾನಾಗೆ ನಾಯಕಿಯಾಗಿದ್ದಾರೆ ಎಂದು ವರದಿಯಾಗಿದೆ. ಆಯುಷ್ಮಾನ್ ಖುರಾನ ಮತ್ತು ರಶ್ಮಿಕಾ ಅಭಿನಯಿಸಲಿರುವ ಈ ಚಿತ್ರಕ್ಕೆ ʻವ್ಯಾಂಪೈರ್ಸ್‌ ಆಫ್ ವಿಜಯ್ ನಗರʼ ಎಂದು ಹೆಸರಿಡಲಾಗಿದೆ.

ʻಸ್ತ್ರೀʼ. ʻಬೇಡಿಯಾʼ.. ʻಮುಂಜ್ಯಾʼನಂತಹ ಹಾರರ್ ಕಾಮಿಡಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ದಿನೇಶ್ ವಿಜನ್ ಆಯುಷ್ಮಾನ್ ಕುರಾನಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ.

ಈ ವರ್ಷದ ನವೆಂಬರ್‌ನಿಂದ ಚಿತ್ರ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. “ಇದು ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿರುವ ಮೊದಲ ಸಿನಿಮಾ. ಪ್ರಸ್ತುತ ಸಿನಿಮಾ ಸ್ಕ್ರಿಪ್ಟ್ ಆಗುತ್ತಿದೆ. ಶೀಘ್ರದಲ್ಲೇ ಪ್ರೀ-ಪ್ರೊಡಕ್ಷನ್ ಹಂತ ಮುಗಲಿದೆʼ ಎಂದು ವರದಿಯಾಗಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಆದಿತ್ಯ ಸತ್ಪೋದರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸದ್ಯಕ್ಕೆ ದಿನೇಶ್ ವಿಜನ್ ತಮ್ಮ ಸ್ತ್ರೀ 2 ಚಿತ್ರದ ಬಿಡುಗಡೆಯ ಕೆಲಸದಲ್ಲಿದ್ದಾರೆ. ಇತ್ತ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ.ಆಯುಷ್ಮಾನ್ ಖುರಾನಾ ಸದ್ಯಕ್ಕೆ ಕರಣ್ ಜೋಹರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೂ ಆಯುಷ್ಮಾನ್ ಕೈಯಲ್ಲಿ ʻಬಾರ್ಡರ್ʼ ಚಿತ್ರದ ಸಿಕ್ವೆಲ್ ಕೂಡ ಇದೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

Continue Reading

ಟಾಲಿವುಡ್

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Famous Serial Actress:  ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Famous Serial Actress kasthuri shankar half naked photos leaked
Koo

ಬೆಂಗಳೂರು: ಸೋಷಿಯಲ್‌ ಮೀಡಿಯಾದಿಂದಾಗಿ ಹಲವು ನಟ ನಟಿಯರು (Famous Serial Actress) ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರುತ್ತಾರೆ. ಇನ್ನು ಕೆಲವರು ಸೋಷಿಯಲ್ ಮೀಡಿಯಾವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರಿಂದ ನಾಯಕಿಯರು, ಹಿರಿಯ ನಟರು ಮುಜುಗರಕ್ಕೊಳಗಾದ ಪ್ರಕರಣಗಳು ಸಾಕಷ್ಟಿವೆ. ಇದೀಗ ಅಂಥಹದ್ದೇ ಘಟನೆಗೆ ಖ್ಯಾತ ನಟಿ ಒಳಗಾಗಿದ್ದಾರೆ. ಇತ್ತೀಚೆಗಷ್ಟೇ ಧಾರಾವಾಹಿ ನಟಿ ಕಸ್ತೂರಿ ಶಂಕರ್ (kasthuri shankar) ಅವರಿಗೂ ಇಂತಹದ್ದೇ ಘಟನೆ ನಡೆದಿದೆ. ʻಅನ್ನಮಯ್ಯʼ ಚಿತ್ರದ ಮೂಲಕ ಕಸ್ತೂರಿ ಶಂಕರ್ ಅವರಿಗೆ ಒಳ್ಳೆಯ ಮನ್ನಣೆ ಸಿಕ್ಕಿತು. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ. ನಟಿಯ ಕೆಲವು ಅರೆನಗ್ನ ಫೋಟೊಗಳು ವೈರಲ್‌ ಆಗಿವೆ. ಇತ್ತೀಚೆಗಷ್ಟೇ ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಕಸ್ತೂರಿ ಶಂಕರ್ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ನಟನೆಯಿಂದ ಸ್ವಲ್ಪ ಕಾಲ ಗ್ಯಾಪ್ ತೆಗೆದುಕೊಂಡ ಕಸ್ತೂರಿ ಧಾರಾವಾಹಿಗಳು ಮತ್ತು ವೆಬ್ ಸರಣಿಗಳಲ್ಲಿ ನಟಿಸಲು ಶುರು ಮಾಡಿದರು. ಲೈಂಗಿಕ ಕಿರುಕುಳದ ಬಗ್ಗೆ ನಟಿ ಅದೆಷ್ಟೋ ಬಾರಿ ಹೇಳಿಕೊಂಡಿದ್ದು ಇದೆ. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೊಗಳಿಂದ ನಟಿ ಭಾರೀ ಚರ್ಚೆಗೆ ಗುರಿಯಾಗಿದ್ದಾರೆ. ಕಸ್ತೂರಿ ಇತ್ತೀಚೆಗೆ ತನ್ನ ಮಗುವಿಗೆ ಹಾಲುಣಿಸುವಾಗ ಅರೆಬೆತ್ತಲೆ ಫೋಟೋ ಶೂಟ್ ಮಾಡಿಸಿದ್ದರು. ಈ ಫೋಟೋಗಳು ಇದೀಗ ವೈರಲ್‌ ಆಗಿವೆ. ಈ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ʻʻನನ್ನ ಅನುಮತಿಯಿಲ್ಲದೆ ಭಾರತದ ಪ್ರಮುಖ ಮಾಧ್ಯಮ ಸಂಸ್ಥೆಯು ಮೂಲ ಫೋಟೊಗಳನ್ನು ಕದ್ದು ಪ್ರಕಟಿಸಿದೆ. ನಿಜವಾಗಿಯೂ ನಾನು ಆ ಫೋಟೋ ಶೂಟ್ ಮಾಡಿದ್ದು ಭಾರತಕ್ಕಾಗಿ ಅಲ್ಲ. ಅಮೆರಿಕಾದಲ್ಲಿ ತಾಯ್ತನದ ಬಗ್ಗೆ ಪತ್ರಿಕೆಯೊಂದಕ್ಕೆ ಮಾಡಿಸಿದ್ದ ಪೋಟೋಶೂಟ್‌ ಅದು. ಭಾರತದಲ್ಲಿ ಬಿಡುಗಡೆ ಮಾಡಬೇಡಿ ಎಂದು ನಾನು ಅವರಿಗೆ ಹೇಳಿದೆ, ಆದರೆ ಅವರು ನನ್ನನ್ನು ಸಂಪರ್ಕಿಸದೆ ಭಾರತದಲ್ಲಿ ಅದನ್ನು ಸೋರಿಕೆ ಮಾಡಿದ್ದಾರೆ. ಸದ್ಯ ಈ ಅರೆಬೆತ್ತಲೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆʼʼಎಂದು ಹೇಳಿಕೊಂಡಿದ್ದಾರೆ.

Continue Reading

ಟಾಲಿವುಡ್

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

Kamal Haasan: ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

VISTARANEWS.COM


on

Kamal Haasan predicts Deepika Padukone baby choose cinema career
Koo

ಬೆಂಗಳೂರು: : ನಾಗ್ ಅಶ್ವಿನ್ ಅವರ ಕಲ್ಕಿ 2898 ADಯ (Kalki 2898 AD) ಪ್ರೀ-ರಿಲೀಸ್ ಈವೆಂಟ್ ಮುಂಬೈನಲ್ಲಿ ಇತ್ತೀಚೆಗೆ ನಡೆದಿತ್ತು. ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದ ತಂಡದಲ್ಲಿ ಕಲ್ಕಿ ಕ್ರಾನಿಕಲ್ಸ್ ಎಂಬ ಶೀರ್ಷಿಕೆಯ ಚರ್ಚೆಯ (Kamal Haasan) ಸಂದರ್ಭದಲ್ಲಿ, ಕಮಲ್ ಹಾಸನ್ ಅವರು ದೀಪಿಕಾ ಅವರ ಮಗು ಮುಂದೊಂದು ದಿನ ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದರು.

ನಿರ್ದೇಶಕ ನಾಗ್ ಅಶ್ವಿನ್ ಅವರು ಮಗುವಿನಂತೆ ಎಂದು ದೀಪಿಕಾ ಚರ್ಚೆ ನಡೆಯುತ್ತಿರುವಾಗ ಹೇಳಿದರು. ಈ ಬಗ್ಗೆ ದೀಪಿಕಾ ಮಾತನಾಡಿ ʻʻನಾಗ್ ಅಶ್ವಿನ್ ಅವರು ಕಾಲ್‌ ಮಾಡಿದ್ದಾಗ, ನಾನು ಬಾಂಬೆಯಲ್ಲಿದ್ದೆ. ಬೇರೆ ಬೇರೆ ಶೆಡ್ಯೂಲ್‌ಗಳಲ್ಲಿ ಚಿತ್ರೀಕರಣ ನಡೆಸುತ್ತಿದ್ದರಿಂದ ಸಿನಿಮಾಗೆ ಲಾಂಗ್‌ ಬ್ರೇಕ್‌ ಹಾಕಿದ್ದೆ. ಹೀಗಾಗಿ ಒಂದು ದಿನ ನಾಗ್ ಅಶ್ವಿನ್ ಅವರು ನನಗೆ ಕರೆ ಮಾಡಿದ್ದು. ಅವರಿಂದ ತುಂಬ ಮಿಸ್ಡ್ ಕಾಲ್ ಇತ್ತು. ಹೀಗಾಗಿ ನಾನು ಏನಾಯಿತು ಎಂದು ಕೇಳಿದಾಗ, ‘ನಾವು ಕಮಲ್ ಸರ್ ಜೊತೆಗೆ ನಮ್ಮ ಮೊದಲ ದಿನವನ್ನು ಶೂಟ್ ಮಾಡಿದ್ದೇವೆ ಎಂದು ಹೇಳಲು ನಾನು ನಿಮಗೆ ಕರೆ ಮಾಡಿದ್ದೇನೆ.’ ಎಂದು ಮಗುವಿನಂತೆ ಹೇಳಿದರುʼʼಎಂದರು. ಈ ವೇಳೆ ಕಮಲ್‌ ಅವರು ನಟಿಯ ಬೇಬಿ ಬಂಪ್‌ ಕಡೆ ತೋರಿಸಿ ʻʻಮುಂದೊಂದು ದಿನ ಈ ಮಗು ಕೂಡ ಸಿನಿಮಾ ಮಾಡಲಿ ಎಂದು ಆಶಿಸುತ್ತೇವೆʼʼ ಎಂದು ಹೇಳಿದರು.

ಇದನ್ನೂ ಓದಿ: Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

Continue Reading

ಟಾಲಿವುಡ್

Actor Nagarjuna: ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ನಾಗಾರ್ಜುನ ಬಾಡಿಗಾರ್ಡ್‌; ಕ್ಷಮೆ ಕೇಳಿದ ನಟ!

Actor Nagarjuna: ವಿಡಿಯೊದಲ್ಲಿ ನಾಗಾರ್ಜುನ ಅವರು ತಮ್ಮ ಬಾಡಿಗಾರ್ಡ್‌ ಜತೆಗೆ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದರು. ಅವರ ಪಕ್ಕದಲ್ಲಿ ನಟ ಧನುಷ್ ಕೂಡ ಕಾಣಿಸಿಕೊಂಡಿದ್ದರು. ಹೀಗೆ ಬರುತ್ತಿರುವಾಗ ವಿಶೇಷ ಚೇತನ ಅಭಿಮಾನಿ ಒಮ್ಮೆಲೆ ನಾಗಾರ್ಜುನ ಕಡೆಗೆ ಸೆಲ್ಫಿ ಕೇಳಲು ಬಂದರು. ಆಗ ನಾಗಾರ್ಜುನ ಅವರ ಬಾಡಿಗಾರ್ಡ್‌ ಆತನನ್ನು ದೂರಕ್ಕೆ ತಳ್ಳಿದ್ದಾನೆ. ಆತ ಬೀಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಇತರೆ ಕೆಲಸಗಾರರು ಹಿಡಿದುಕೊಂಡಿದ್ದಾರೆ.

VISTARANEWS.COM


on

Nagarjuna apologises after bodyguard pushes differently abled fan
Koo

ಬೆಂಗಳೂರು: ನಟ ನಾಗಾರ್ಜುನ (Actor Nagarjuna) ಅವರು ತಮ್ಮ ಬಾಡಿಗಾರ್ಡ್‌ ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಕ್ಷಮೆಯಾಚಿಸಿದ್ದಾರೆ. ವೈರಲ್‌ ಆದ ವಿಡಿಯೊದಲ್ಲಿ ನಾಗಾರ್ಜುನ ಅವರು ತಮ್ಮ ಬಾಡಿಗಾರ್ಡ್‌ ಜತೆಗೆ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದರು. ಅವರ ಪಕ್ಕದಲ್ಲಿ ನಟ ಧನುಷ್ ಕೂಡ ಕಾಣಿಸಿಕೊಂಡಿದ್ದರು. ಹೀಗೆ ಬರುತ್ತಿರುವಾಗ ವಿಶೇಷ ಚೇತನ ಅಭಿಮಾನಿ ಒಮ್ಮೆಲೆ ನಾಗಾರ್ಜುನ ಕಡೆಗೆ ಸೆಲ್ಫಿ ಕೇಳಲು ಬಂದರು. ಆಗ ನಾಗಾರ್ಜುನ ಅವರ ಬಾಡಿಗಾರ್ಡ್‌ ಆತನನ್ನು ದೂರಕ್ಕೆ ತಳ್ಳಿದ್ದಾನೆ. ಆತ ಬೀಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಇತರೆ ಕೆಲಸಗಾರರು ಹಿಡಿದುಕೊಂಡಿದ್ದಾರೆ. ಆದರೆ ನಾಗಾರ್ಜುನ ಈ ಘಟನೆಯನ್ನು ಗಮನಿಸಿರಲಿಲ್ಲ. ಇದೀಗ ನಟ ಕ್ಷಮೆ ಕೇಳಿದ್ದಾರೆ.

“ಇದು ನನ್ನ ಗಮನಕ್ಕೆ ಬಂದಿದೆ. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಗೆ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಹೀಗಾಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆʼʼಎಂದು ಬರೆದುಕೊಂಡಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನಾಗಾರ್ಜುನ ಅವರಿಗೆ ಸಖತ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ವಿಡಿಯೋಗೆ ಪ್ರತಿಕ್ರಿಯಿಸಿದ ವ್ಯಕ್ತಿಯೊಬ್ಬರು, “ಆ ವ್ಯಕ್ತಿ ವಿಶೇಷ ಚೇತನ. ಅವರು ಎಷ್ಟು ಅವಮಾನ ಅನುಭವಿಸಿರಬೇಕು” ಎಂದು ಬರೆದಿದ್ದಾರೆ. ಇನ್ನೊಬ್ಬರು”ಸೆಲೆಬ್ರಿಟಿಗೆ ತುಂಬಾ ಹತ್ತಿರ ಬರುವ ಅಭಿಮಾನಿಗಳನ್ನು ನಿಭಾಯಿಸುವ ಕಲೆ ಗೊತ್ತಿರಬೇಕುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ಸಿನಿಮಾ ವಿಚಾರಕ್ಕೆ ಬಂದರೆ ಈ ವರ್ಷ ಸಂಕ್ರಾಂತಿ ಸಂಭ್ರಮದಲ್ಲಿ ನಾಗಾರ್ಜುನ ನಟನೆಯ ‘ನಾ ಸಾಮಿ ರಂಗ’ ಸಿನಿಮಾ ತೆರೆಗೆ ಬಂದಿತ್ತು. ಮೊದಲಿನಂತೆ ಈಗ ನಾಗ್ ಸಿನಿಮಾಗಳು ಸದ್ದು ಮಾಡುತ್ತಿಲ್ಲ. ಇದೀಗ ನಟ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಧನುಷ್ ಜೊತೆ ‘ಕುಬೇರ’ ಎನ್ನುವ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗಲಿದೆ. ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯ ಸಿನಿಮಾ ಇದು.

Continue Reading
Advertisement
honey trap harish gowda
ಕ್ರೈಂ1 min ago

Honey Trap: ಎಂಎಲ್‌ಎ ಹರೀಶ್‌ ಗೌಡಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್‌ ಸೆರೆ, ಇವರ ಖತರ್‌ನಾಕ್‌ ಐಡಿಯಾ ನೋಡಿ!

Kangana Ranaut Chirag Paswan In Parliament
ಬಾಲಿವುಡ್13 mins ago

Kangana Ranaut: ಸಂಸತ್ತಿನ ಹೊರಗೆ ಕೈ ಕುಲುಕಿ ಸಂತಸದ ಕ್ಷಣ ಹಂಚಿಕೊಂಡ ಚಿರಾಗ್ ಪಾಸ್ವಾನ್-ಕಂಗನಾ!

Viral Video
Latest31 mins ago

Viral Video: ಸಿಮೆಂಟ್, ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ ಮಹಿಳೆ; ಹೇಗೆ ಕೆಲಸ ಮಾಡುತ್ತೆ ನೋಡಿ!

Terrorist Killed
ದೇಶ31 mins ago

Terrorist Killed: ಮುಂದುವರಿದ ಉಗ್ರರ ಬೇಟೆ; ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Viral Video
Latest35 mins ago

Viral Video: ಮುಂದಿನ ಐದು ಸಾಲಿನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ! ಇದು ಸ್ವಾಮೀಜಿಯೊಬ್ಬರ ಕಂಡೀಷನ್‌!

AFG vs SA Semi Final
ಕ್ರೀಡೆ43 mins ago

AFG vs SA Semi Final: ಚೊಚ್ಚಲ ಫೈನಲ್​ ನಿರೀಕ್ಷೆಯಲ್ಲಿ ಆಫ್ಘನ್​-ದಕ್ಷಿಣ ಆಫ್ರಿಕಾ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್?​

Development of Gaanagapura kshethra on Pandharpur, Thulajapur model says DC Fauzia Tarannum
ಕಲಬುರಗಿ48 mins ago

Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

CM Siddaramaiah
ಪ್ರಮುಖ ಸುದ್ದಿ49 mins ago

CM Siddaramaiah: ಗಣಿ ಪರಿಸರ ಪುನಶ್ಚೇತನ ನಿಗಮದ ಸಭೆ; ಅಧಿಕಾರಿಗಳ ವಿಳಂಬ ಧೋರಣೆಗೆ ಸಿಎಂ ಗರಂ

Job Alert
ಉದ್ಯೋಗ51 mins ago

Job Alert: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಗಮನಿಸಿ-ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

Parliament Sessions
ದೇಶ1 hour ago

Parliament Sessions: ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಸದನ; ಶೇಕ್‌ ಹ್ಯಾಂಡ್‌ ಮಾಡಿದ ಪ್ರಧಾನಿ ಮೋದಿ, ರಾಹುಲ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌