ಮಸೂದ್‌, ಫಾಜಿಲ್‌ ಮನೆಗೂ ಸಿಎಂ ಹೋಗುತ್ತಾರೆ: ಎನ್‌. ರವಿಕುಮಾರ್‌ ಹೇಳಿಕೆ - Vistara News

ದಕ್ಷಿಣ ಕನ್ನಡ

ಮಸೂದ್‌, ಫಾಜಿಲ್‌ ಮನೆಗೂ ಸಿಎಂ ಹೋಗುತ್ತಾರೆ: ಎನ್‌. ರವಿಕುಮಾರ್‌ ಹೇಳಿಕೆ

ಹಿಂದು ಯುವಕನ ಮನೆಗೆ ಮಾತ್ರ ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದು, ಮುಸ್ಲಿಂ ಯುವಕರ ಮನೆಗೆ ಹೋಗಿಲ್ಲ ಎಂಬ ಕುರಿತು ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

VISTARANEWS.COM


on

congress-protest-on netaji subhashchandra bose birthday is disgrace to freedom fighter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಮನೆಗೆ ಮಾತ್ರ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ ಎಂಬುದರ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಎನ್‌. ರವಿಕುಮಾರ್‌, ಮಸೂದ್‌ ಹಾಗೂ ಫಾಜಿಲ್‌ ಮನೆಗೂ ಸಿಎಂ ಭೇಟಿ ನೀಡುತ್ತಾರೆ ಎಂದು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ವಿಧಾನಪರಿಷತ್‌ ಸದಸ್ಯ ಎನ್‌. ರವಿಕುಮಾರ್‌, ದಕ್ಷಿಣ ಕನ್ನಡದಲ್ಲಿ ನಡೆದ ಕೊಲೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೊಲೆಗಡುಕರ ಬಂಧನ ಶೀಘ್ರದಲ್ಲೇ ಆಗಲಿದೆ. ಅಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಫಾಜಿಲ್‌ ಮನೆಗೆ ಹೋಗಲಾಗದ ಸಂದರ್ಭ ಇತ್ತು. ನಾವು ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ. ಸಂದರ್ಭ ಬಂದಾಗ ಫಾಜಿಲ್‌, ಮಸೂದ್‌ ಮನೆಗೂ ಹೋಗುತ್ತಾರೆ ಎಂದು ತಿಳಿಸಿದರು.

ಸಂವಿಧಾನಾತ್ಮಕವಾಗಿ ಎಲ್ಲರೂ ಒಂದೇ ಎಂಬಂತೆ ನೋಡಬೇಕು. ಮನುಷ್ಯನಾಗಿ ಎಲ್ಲರನ್ನೂ ನೋಡಬೇಕು. ನಾನು ನನ್ನ ಅಭಿಪ್ರಾಯ ಮಾತ್ರ ಹೇಳುತ್ತೇನೆ, ಉಳಿದದ್ದನ್ನು ಅವರನ್ನೇ ಕೇಳಿ. ಈಗ ಪ್ರಶ್ನೆ ಮಾಡುತ್ತಿರುವವರು, ಅವರ ಕಾಲದಲ್ಲಿ ಹತ್ಯೆಗಳು ನಡೆದಾಗ ಏನಾದವು ಎಂದು ನೋಡಿಕೊಳ್ಳಲಿ. ನಾನು ಎಲ್ಲವನ್ನೂ ಗಮನಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಯಾರಿಗೂ ಭೇದಭಾವ ಇಲ್ಲ

ಈ ಕುರಿತು ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ. ಇಂತಹ ವಿಚಾರಗಳು ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಾಗ ಅವರು ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ | ಸುರತ್ಕಲ್‌ ಫಾಜಿಲ್‌ ಹತ್ಯೆ: ಮೊದಲ ಆರೋಪಿ ಅರೆಸ್ಟ್‌, ಇವನು ಹಂತಕರು ಬಂದ ಕಾರಿನ ಚಾಲಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Bengaluru Rain : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ಜತೆಗೆ ಬಿಸಿಲಿನಿಂದ ತತ್ತರಿಸಿದ್ದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

Mrs India Karnataka: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ಮಿಸಸ್ ಕರ್ನಾಟಕ ಮಂಗಳೂರು ಕಾರ್ಯಕ್ರಮ ನೆರವೇರಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಫ್ಯಾಷನ್‌ ಶೋ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

VISTARANEWS.COM


on

Mrs India Karnataka
Koo

ಮಂಗಳೂರು: ಮಹಿಳೆಯರಿಗೆ ಫ್ಯಾಷನ್ ಲೋಕದಲ್ಲಿ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರತಿಭಾ ಸಂಶೀಮಠ ಅವರ ನೇತೃತ್ವದಲ್ಲಿ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಮಿಸಸ್ ಕರ್ನಾಟಕ ಮಂಗಳೂರು (Mrs India Karnataka) ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ನಡೆಯಿತು.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಸುಮಾರು 26 ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಾಲ್ಕು ವರ್ಷಗಳಿಂದ ಮಿಸಸ್ ಕರ್ನಾಟಕವನ್ನು ಆಯೋಜನೆ ಮಾಡುತ್ತಿದ್ದು, ಇದೀಗಾ 5ನೇ ವರ್ಷದ ಮಿಸಸ್ ಕರ್ನಾಟಕ ಆವೃತ್ತಿ ಮಂಗಳೂರಿನಲ್ಲಿ ನಡೆಯಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಈ ಗ್ರ್ಯಾಂಡ್ ಫಿನಾಲೆ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

ಇದನ್ನೂ ಓದಿ | Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Continue Reading

ಕರ್ನಾಟಕ

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Harish Poonja: ಅಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಆರೋಪದಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿದೆ.

VISTARANEWS.COM


on

Harish Poonja
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕನ ವಿರುದ್ಧ ಕೇಸ್‌ ದಾಖಲಾಗಿದೆ.

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ | Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Prajwal Revanna Case
Devaraje Gowda’s Claim About DK Shivakumar’s Rs 100 Crore Is True: Says R Ashok

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ (Devarajegowda) ನೀಡಿದ ಹೇಳಿಕೆ ಸಂಚಲನ ಮೂಡಿಸಿದೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಅವರು 100 ಕೋಟಿ ರೂ. ಆಫರ್‌ ಮಾಡಿದ್ದರು ಎಂದು ದೇವರಾಜೇಗೌಡ ನೀಡಿದ ಹೇಳಿಕೆ ಕುರಿತು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಪ್ರತಿಕ್ರಿಯಿಸಿದ್ದು, “ಬೆಂಕಿ ಇಲ್ಲದೆ ಹೊಗೆಯಾಡಲ್ಲ” ಎಂದಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾದ ಬಳಿಕ ಆರ್‌.ಅಶೋಕ್‌ ಸುದ್ದಿಗಾರರೊಂದಿಗೆ ಮಾತನಾಡಿದರು. “ದೇವರಾಜೇಗೌಡ ಬಳಿ ಸಾಕ್ಷ್ಯ ಇದೆ ಎಂಬ ಕಾರಣಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ. ದೇವರಾಜೇಗೌಡ ಹೊರಗಿದ್ದರೆ ದಾಖಲೆ ಬಿಡುಗಡೆ ಮಾಡುತ್ತಾರೆ ಎಂಬ ಭಯದಿಂದ ಬಂಧಿಸಲಾಗಿದೆ. ದೇವರಾಜೇಗೌಡ ಮಾಡಿದ ಆರೋಪಗಳು ನಿಜವೇ ಇರಬೇಕು. ಅದಕ್ಕೆಲ್ಲ ಅವರ ಬಳಿ ಸಾಕ್ಷ್ಯ ಇದೆ ಎನಿಸುತ್ತದೆ. ಅವರು ಹೇಳಿದ್ದೆಲ್ಲ ನೂರಕ್ಕೆ ನೂರು ಸತ್ಯ. ಅಷ್ಟಕ್ಕೂ ಬೆಂಕಿಯೇ ಇಲ್ಲದೆ ಹೊಗೆಯಾಡಲ್ಲ” ಎಂದು ಹೇಳಿದರು.

“ದೇವರಾಜೇಗೌಡ ಅವರೇ ತಮಗೆ ಹಣದ ಆಫರ್ ಮಾಡಿದ ಬಗ್ಗೆ ಹೇಳಿದ್ದಾರೆ. ಈಗಾಗಲೇ ಡಿಕೆಶಿ ಮಾತಾಡಿದ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ. ಅವರನ್ನು ಬಿಟ್ಟರೆ ಸರಣಿ ದಾಖಲೆ ಬಿಡುಗಡೆ ಮಾಡುತ್ತಾರೆ. ಸರ್ಕಾರಕ್ಕೆ ಮುಜುಗರ ಆಗುತ್ತದೆ ಎಂದು ಬಂಧಿಸಿದ್ದಾರೆ. ಇದೆಲ್ಲ ಮಾಧ್ಯಮಗಳಲ್ಲಿ ಬರಬಾರದು ಎಂಬುದು ಡಿಕೆಶಿ ಉದ್ದೇಶವಾಗಿದೆ. ದೇವರಾಜೇಗೌಡ ಹೇಳಿದ್ದೆಲ್ಲ ಸತ್ಯ ಇರಬಹುದು. ರಣದೀಪ್ ಸುರ್ಜೇವಾಲಾ, ಸಿಎಂ‌ ಸಿದ್ದರಾಮಯ್ಯ, ಡಿಕೆಶಿ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ” ಎಂದು ಆರೋಪಿಸಿದರು.

ಒಕ್ಕಲಿಗರ ಮುಗಿಸಲು ತಂತ್ರ

“ರಾಜ್ಯದಲ್ಲಿ ಒಕ್ಕಲಿಗರನ್ನು ಮುಗಿಸಲು ಕಾಂಗ್ರೆಸ್‌ ತಂತ್ರ ಮಾಡುತ್ತಿದೆ. ಈಗಾಗಲೇ ಸಿದ್ದರಾಮಯ್ಯ ದಲಿತರನ್ನು ಮುಗಿಸಿದ್ದಾರೆ. ಪರಮೇಶ್ವರ್ ಅವರು ಸಿಎಂ ಅಗೋದನ್ನು ತಪ್ಪಿಸಿದ್ದಾರೆ. ಸಿಬಿಐ ತನಿಖೆಗೆ ಕೊಟ್ರೆ ಸತ್ಯ ಹೊರಗೆ ಬರುತ್ತದೆ ಎಂದು ತನಿಖೆಗೆ ಕೊಡತ್ತಿಲ್ಲ. ಕೆ.ಜೆ. ಜಾರ್ಜ್‌ ವಿಚಾರದಲ್ಲೂ ಸಿಬಿಐ ತನಿಖೆ ನಡೆಯಿತು. ತಪ್ಪಿದ್ದರೆ ತಪ್ಪಿದೆ ಎಂದು, ತಪ್ಪಿಲ್ಲದಿದ್ದರೆ ತಪ್ಪಿಲ್ಲ ಎಂದು ಸಿಬಿಐ ವರದಿ ನೀಡುತ್ತದೆ. ಎಸ್ಐಟಿಯಿಂದ ಸತ್ಯ ಹೊರಗೆ ಬರುತ್ತದೆ ಎಂಬ ನಂಬಿಕೆ ಯಾರಿಗೂ ಇಲ್ಲ. ಸರ್ಕಾರ ಹೇಳಿದಂತೆ ಎಸ್‌ಐಟಿ ಕೆಲಸ ಮಾಡುತ್ತದೆ. ಕಾರ್ತಿಕ್‌ಗೆ ಜಾಮೀನು ನಿರಾಕರಿಸಿದರೂ ಯಾಕೆ ಬಂಧಿಸಿಲ್ಲ? ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲಿ. ಇದು ಪ್ರಜ್ವಲ್‌ ರೇವಣ್ಣ ಅವರಿಗೂ ಅನ್ವಯವಾಗುತ್ತದೆ. ಆದರೆ, ಪೆನ್‌ಡ್ರೈವ್‌ ಹಂಚಿಕೆ ಮಾಡಿದವರಿಗೂ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ಕರೆತರೋಕೆ ಎಸ್‌ಐಟಿ ಮಾಸ್ಟರ್‌ ಸ್ಟ್ರೋಕ್!‌

ದೇವರಾಜೇಗೌಡ ಹೇಳಿದ್ದೇನು?

“ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದರು.

Continue Reading

ಮಳೆ

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka Rain : ಒಂದೇ ಮಳೆಗೆ ಬೆಂಗಳೂರಿನ ಹಲವು ಏರಿಯಾಗಳು ಸಣ್ಣ ದ್ವೀಪದಂತಾಗಿದೆ. ಚಿಕ್ಕಮಗಳೂರಿನ ಕಳಸದಲ್ಲೂ ಮಳೆಯು ಅಬ್ಬರಿಸುತ್ತಿದೆ. ಹಲವೆಡೆ ಮಳೆಯಿಂದ ಅವಘಡ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗಂಟೆ ಕಾಲ ಸುರಿದ ಮಳೆಗೆ (Karnataka Rain) ರಸ್ತೆಗಳೆಲ್ಲವೂ ಹೊಳೆಯಂತಾಗಿದೆ. ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ.

karnataka rain

ಯಲಹಂಕದ ನಾರ್ಥ್‌ ಹುಡ್ ಅಪಾರ್ಟ್‌ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ರಾತ್ರಿಯಿಂದಲೂ ಮೋಟಾರ್‌ ಮೂಲಕ ನೀರು ಹೊರಹಾಕುತ್ತಿದ್ದಾರೆ. ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದರೂ ಯಾವುದೇ ಪ್ರಯೋಜವಿಲ್ಲ ಎಂದು ಕಿಡಿಕಾರಿದ್ದಾರೆ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಪಕ್ಕದಲ್ಲಿರುವ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಸೇರುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆ

ಕಾಫಿನಾಡು ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆಗೆ ಕಳಸ ದೇವಸ್ಥಾನದ ಎತ್ತರದ ಪ್ರದೇಶದಿಂದ ನೀರು ಹರಿಯುತ್ತಿದೆ. ದಕ್ಷಿಣ ಕಾಶಿ ಕಳಸೇಶ್ವರ ಸ್ವಾಮಿ ದೇವಸ್ಥಾನದ ಮೆಟ್ಟಿಲು ಮೇಲಿಂದ ನೀರು ಹರಿಯುತ್ತಿದೆ. ಇತ್ತ ಮೆಟ್ಟಿಲ ಮೇಲೆ ನಿಂತು ಮಳೆ ನೀರಲ್ಲಿ ಮಕ್ಕಳು ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಗಾಳಿ-ಮಳೆಗೆ ಮರ ಬಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಭದ್ರಾ ನದಿ ಒಳಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ.

karnataka rain

ಕೊಪ್ಪಳದಲ್ಲೂ ಮುಂಗಾರು ಪೂರ್ವ ಮಳೆ

ಕೊಪ್ಪಳದಲ್ಲಿ ಭಾನುವಾರ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೂರು ದಿನಗಳಿಂದ ಆಗಾಗ ಮಳೆ ಸುರಿಯುತ್ತಿದೆ. ನಿನ್ನೆ ಶನಿವಾರ ಸಂಜೆ ಸುರಿದಿದ್ದ ಮಳೆಯು ಭಾನುವಾರ ಬೆಳಗಿನವರೆಗೆ ಬಿಡುವು ಕೊಟ್ಟಿತ್ತು. ಮಧ್ಯಾಹ್ನದ ನಂತರ ಧೋ ಎಂದು ಗುಡುಗು ಸಹಿತ ಮಳೆ ಸುರಿಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ebrahim Raisi
ವಿದೇಶ9 seconds ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ12 mins ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Devara Fear Song Jr NTR Unleashes Terror In Sync
ಟಾಲಿವುಡ್27 mins ago

Devara Fear Song: ಜ್ಯೂನಿಯರ್‌ ಎನ್‌ಟಿಆರ್ ಬರ್ತ್‌ಡೇ: ʻದೇವರʼ ಫಿಯರ್ ಸಾಂಗ್ ಔಟ್‌!

Lok sabha Election 2024
ದೇಶ34 mins ago

Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

Healthy Diet
ಆರೋಗ್ಯ41 mins ago

Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

lr Shivarame gowda prajwal revanna case
ಕ್ರೈಂ60 mins ago

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Triple Talaq
ದೇಶ1 hour ago

Triple Talaq: ವಾಟ್ಸ್‌ಆ್ಯಪ್‌ ವಾಯ್ಸ್‌ ಮೆಸೇಜ್‌ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ; ದೂರು ದಾಖಲು

rave party electronic city
ಕ್ರೈಂ1 hour ago

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Lok Sabha Election 2024
ದೇಶ1 hour ago

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Job Alert
ಉದ್ಯೋಗ2 hours ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ18 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ19 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌