Kannada Movies | ಒಗ್ಗಟ್ಟಿಗೆ ಸಾಕ್ಷಿಯಾದ ಸ್ಯಾಂಡಲ್‌ವುಡ್‌; ಇದು ತಾರೆಗಳ ಸಮಾಗಮ! - Vistara News

ಬೆಂಗಳೂರು

Kannada Movies | ಒಗ್ಗಟ್ಟಿಗೆ ಸಾಕ್ಷಿಯಾದ ಸ್ಯಾಂಡಲ್‌ವುಡ್‌; ಇದು ತಾರೆಗಳ ಸಮಾಗಮ!

ಕನ್ನಡ ಸಿನಿಮಾಗಳಲ್ಲಿ (Kannada Movies) ಹಲವಾರು ಇವೆಂಟ್‌ ಹಾಗೂ ಕಾರ್ಯಕ್ರಮಗಳಲ್ಲಿ ಸ್ಯಾಂಡಲ್‌ವುಡ್‌ ನಟ-ನಟಿಯರು ಭಾಗವಹಿಸಿ ಸಿನಿಮಾ ಯಶಸ್ಸಿಗೆ ಸಾಥ್‌ ನೀಡುತ್ತಿದ್ದಾರೆ.

VISTARANEWS.COM


on

Kannada Movies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಶಸ್ವಿ ದೇವಾಡಿಗ, ಬೆಂಗಳೂರು
ಸ್ಯಾಂಡಲ್‌ವುಡ್‌ ವ್ಯಾಪ್ತಿ ವಿಸ್ತಾರಗೊಂಡಿದೆ. ಪ್ಯಾನ್‌ ಇಂಡಿಯಾ ಸಿನಿಮಾಗಳು ಸದ್ದು ಮಾಡುತ್ತಿವೆ. ದೇಶ-ವಿದೇಶಗಳಲ್ಲಿ ಕನ್ನಡ ಚಲನಚಿತ್ರಗಳಿಗೆ (Kannada Movies) ಜನಮನ್ನಣೆ ಸಿಗುತ್ತಿವೆ. ಈ ನಡುವೆ ಚಂದನವನದಲ್ಲಿ ಸ್ಟಾರ್‌ ಇಸಂಗಳು ದೂರಾಗುತ್ತಿರುವ ಎಲ್ಲ ಸೂಚನೆಗಳೂ ಸ್ಪಷ್ಟವಾಗುತ್ತಿದ್ದು, ಒಬ್ಬರ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್‌ ನಟರು ಬೆನ್ನುತಟ್ಟುವ ಪರಿಪಾಠ ಆರಂಭವಾಗಿದೆ. ಈ ಮೂಲಕ ಸಿನಿಮಾ ಗೆಲ್ಲುತ್ತಿದೆ.

ಕೊರೊನಾ ನಂತರದ ದಿನಗಳಲ್ಲಿ ಸಾಕಷ್ಟು ಸಾಲು ಸಾಲು ಸಿನಿಮಾಗಳು ತೆರೆಗೆ ಅಪ್ಪಳಿಸಿವೆ. ಕೆಜಿಎಫ್‌ 2ರ ನಂತರ ಸಿನಿಮಾಗಳು ಒಂದರ ಮೇಲೊಂದು ಕಾಂಪಿಟೇಷನ್‌ನಲ್ಲಿ ಬಿಡುಗಡೆಗೊಂಡವು. ಒಟಿಟಿಗೆ ಮಾತ್ರ ಸೀಮಿತವಾಗಿದ್ದ ಪ್ರೇಕ್ಷಕರು ನಂತರದಲ್ಲಿ ಹಿಟ್‌ ಸಿನಿಮಾಗಳು ಬಿಡುಗಡೆಗೊಂಡ ಹಿನ್ನೆಲೆಯಲ್ಲಿ ಜನ ಸಹ ಥಿಯೇಟರ್‌ನತ್ತ ಮುಖ ಮಾಡುತ್ತಿದ್ದಾರೆ.

ಇದೀಗ ಸ್ಯಾಂಡಲ್‌ವುಡ್‌ ಸಿನಿಮಾಗಳ ಪ್ರಮೋಷನ್‌ ಭರದಿಂದ ಸಾಗಿದೆ. ಆದರೆ, ಈ ನಡುವೆ ಸೆಲೆಬ್ರಿಟಿಗಳು ತಮ್ಮ ಸಿನಿಮಾ ಮಾತ್ರವಲ್ಲದೆ ಇತರ ನಟ, ನಟಿಯರ ಸಿನಿಮಾಗಳನ್ನು ಪ್ರಮೋಟ್‌ ಮಾಡುವುದರ ಮೂಲಕ ಟ್ರೆಂಡ್‌ ಸೆಟ್ಟಿಂಗ್‌ಗೆ ನಾಂದಿ ಹಾಡುತ್ತಿದ್ದಾರೆ. ಸಿನಿಮಾಗಳ ಡೇಟ್‌ ಅನೌನ್ಸ್‌ ಆದ ಕೂಡಲೇ ಸೆಲೆಬ್ರಿಟಿಗಳು ತಮ್ಮ ಸೋಷಿಯಲ್‌ ಮೀಡಿಯಾ ಮೂಲಕ ಅವುಗಳ ಬಗ್ಗೆ ಮಾಹಿತಿ ಶೇರ್‌ ಮಾಡಿಕೊಂಡು, ಶುಭಾಶಯ ಕೋರುವ ಪರಿಪಾಠ ನಡೆಯುತ್ತಿದ್ದು, ಇಂತಹ ಹಲವಾರು ಉದಾಹರಣೆಗಳನ್ನು ಕಾಣಬಹುದಾಗಿದೆ.

ಹಲವು ವೇದಿಕೆಯಲ್ಲಿ ಸ್ಯಾಂಡಲ್‌ವುಡ್‌ ತಾರೆಗಳ ಸಮಾಗಮ

UI ಸಿನಿಮಾ

ಈ ಹಿಂದೆ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಯುಐ ಚಿತ್ರದ ಮುಹೂರ್ತದಲ್ಲಿ ಹಲವು ನಟರು ಭಾಗಿಯಾಗಿದ್ದರು. ನಟ ಕಿಚ್ಚ ಸುದೀಪ್‌ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ಶಿವರಾಜ್‌ಕುಮಾರ್‌ ಕ್ಯಾಮರಾ ಆನ್‌ ಮಾಡಿದ್ದರು. ಡಾಲಿ ಧನಂಜಯ, ವಸಿಷ್ಠ ಸಿಂಹ, ಕಬ್ಜ ನಿರ್ದೇಶಕ ಆರ್‌. ಚಂದ್ರು ಸಹ ಮುಹೂರ್ತದಲ್ಲಿ ಪಾಲ್ಗೊಂಡು ಚಿತ್ರತಂಡಕ್ಕೆ ಶುಭಾಶಯ ಕೋರಿದ್ದರು.

ಇದನ್ನೂ ಓದಿ | Liger | ಲೈಗರ್ ಸಿನಿಮಾದ ಥೀಮ್ ಸಾಂಗ್ ರಿಲೀಸ್‌: ಸಖತ್‌ ಮಾಸ್‌ ಸಾಂಗ್‌ ಎಂದ ಫ್ಯಾನ್ಸ್‌

ವಿಕ್ರಾಂತ್‌ ರೋಣ

ಸ್ಯಾಂಡಲ್‌ವುಡ್‌ ಬಾದ್‌ಷಾ ಕಿಚ್ಚ ಸುದೀಪ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ವಿಕ್ರಾಂತ್‌ ರೋಣ (Vikrant Rona Movie) ಟ್ರೈಲರ್‌ ಲಾಂಚ್‌ ಇವೆಂಟ್‌ನಲ್ಲಿಯೂ ಕನ್ನಡ ಚಿತ್ರರಂಗದ ನಟ-ನಟಿಯರು ಭಾಗಿಯಾಗಿದ್ದರು. ವಿಶೇಷವಾಗಿ ಇವೆಂಟ್‌ನಲ್ಲಿ ರವಿಚಂದ್ರನ್‌ ಹಾಗೂ ಶಿವಣ್ಣ ಮುಖ್ಯ ಅತಿಥಿಗಳಾಗಿದ್ದು, ರವಿಚಂದ್ರನ್‌ ವೇದಿಕೆ ಮೇಲೆ ಬರುವಾಗ ಕಿಚ್ಚ ಸುದೀಪ್‌ ಅವರನ್ನು ಕರೆದುಕೊಂಡು ವೇದಿಕೆ ಮೇಲೆ ಬಂದಿದ್ದರು. ಟ್ರೈಲರ್‌ ಲಾಂಚ್‌ ವೇಳೆ ರಿಷಬ್‌ ಶೆಟ್ಟಿ, ರಕ್ಷಿತ್‌ ಶೆಟ್ಟಿ, ಡಾಲಿ ಧನಂಜಯ್‌ ಹಾಗೂ ಅರವಿಂದ್‌ ರಮೇಶ್‌ ಸೇರಿದಂತೆ ಹಲವು ನಟರು ಭಾಗಿಯಾಗಿದ್ದರು.

ಗಾಳಿಪಟ-2

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ ಗಾಳಿಪಟ-2 (Gaalipata 2) ರಾಜ್ಯಾದ್ಯಂತ ಆಗಸ್ಟ್‌ 12ರಂದು ತೆರೆಗೆ ಬರಲು ಸಜ್ಜಾಗಿದೆ. ಗಾಳಿಪಟ-2 ಪ್ರೀ ರಿಲೀಸ್ ಇವೆಂಟ್ ಆಯೋಜನೆ ಮಾಡಿದ್ದು, ‘ಕರುನಾಡ ಚಕ್ರವರ್ತಿ’ ಶಿವರಾಜ್‌ಕುಮಾರ್, ‘ರಿಯಲ್ ಸ್ಟಾರ್’ ಉಪೇಂದ್ರ , ರಮೇಶ್ ಅರವಿಂದ್ ಸೇರಿದಂತೆ ಅನೇಕರು ಸಮಾರಂಭದಲ್ಲಿ ಭಾಗಿಯಾಗಿ ಶುಭ ಹಾರೈಸಿದ್ದರು. ಕಾರ್ಯಕ್ರಮದಲ್ಲಿ ನಟ ಉಪೇಂದ್ರ ಅವರು ʻಪ್ರೀತಿ ಪುಸ್ತಕದ ಬದನೆಕಾಯಿ, ಸ್ನೇಹ ಪುಸ್ತಕದ ಬೆಂಡೆಕಾಯಿʼ ಡೈಲಾಗ್ ಹೇಳಿ ರಂಜಿಸಿದ್ದರು.

ತ್ರಿವಿಕ್ರಮ ಸಿನಿಮಾ

ಕ್ರೇಜಿ ಪುತ್ರನ ಚೊಚ್ಚಲ ಸಿನಿಮಾದ ಗ್ರ್ಯಾಂಡ್‌ ವೇದಿಕೆಯಲ್ಲಿ ವಿಕ್ರಮ್ ಅಲಿಯಾಸ್ ತ್ರಿವಿಕ್ರಮ ಸಿನಿಮಾ (Trivikrama Movie) ಪ್ರೀ ರಿಲೀಸ್ ಇವೆಂಟ್‌ ಲಾಂಚ್‌ಗೆ ಸ್ಯಾಂಡಲ್‌ವುಡ್‌ ದಂಡೇ ಬಂದಿತ್ತು. ಹ್ಯಾಟ್ರಿಕ್‌ ಹಿರೋ ಶಿವರಾಜ್‌ಕುಮಾರ್‌, ಡಾಲಿ ಧನಂಜಯ್‌, ನಿರ್ದೇಶಕ ಪ್ರೇಮ್‌, ರಕ್ಷಿತಾ ಪ್ರೇಮ್‌, ಶರಣ್‌, ನೀನಾಸಂ ಸತೀಶ್‌, ಲೂಸ್ ಮಾದ ಯೋಗಿ, ಅಜೇಯ್‌ ರಾವ್‌, ಡಾರ್ಲಿಂಗ್‌ ಕೃಷ್ಣ, ತಾರಾ, ಶೃತಿ, ವಸಿಷ್ಠ ಸಿಂಹ, ನಿಶ್ವಿಕಾ ನಾಯ್ಡು ಹಾಗೂ ಮನುರಂಜನ್‌ ಸೇರಿದಂತೆ ಇನ್ನೂ ಹಲವರು ಪ್ರೀ ರಿಲೀಸ್‌ ಇವೆಂಟ್‌ನಲ್ಲಿ ಭಾಗಿಯಾಗಿದ್ದರು. ಅಲ್ಲದೆ ಹಲವಾರು ಪೋಸ್ಟರ್‌ ಹಾಗೂ ಟ್ರೈಲರ್‌ ಮತ್ತು ಹೊಸ ತಂಡಗಳಿಗೆ ಸ್ಯಾಂಡಲ್‌ವುಡ್‌ ತಾರಾ ವರ್ಗ ಸಾಥ್‌ ನೀಡುತ್ತಿದೆ.

ಇದನ್ನೂ ಓದಿ | Kangana Ranaut | ಎಮರ್ಜೆನ್ಸಿ ಸಿನಿಮಾದಲ್ಲಿ ಅಟಲ್ ಬಿಹಾರಿ ವಾಜಪೇಯಿ ಆಗಿ ಶ್ರೇಯಸ್ ತಲ್ಪಾಡೆ

ಹೀಗೆ ಇತ್ತೀಚೆಗೆ ಹಲವಾರು ದೊಡ್ಡ ದೊಡ್ಡ ನಾಯಕರು ಸೇರಿದಂತೆ ಹೊಸ ಸಿನಿಮಾಗಳಿಗೂ ಬೆನ್ನುತಟ್ಟಿ ಪ್ರೋತ್ಸಾಹ ನೀಡುವ ಮೂಲಕ ಸ್ಯಾಂಡಲ್‌ವುಡ್‌ ನಟರು ಔದಾರ್ಯವನ್ನು ತೋರುವುದಲ್ಲದೆ, ಇತರರಿಗೆ ಮಾದರಿಯಾಗುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದ್ದಾರೆ. ಈ ಕಾರಣದಿಂದ ಕನ್ನಡ ಸಿನಿಮಾ ಜಗತ್ತು ಮತ್ತಷ್ಟು ಬೆಳೆಯಲು ಪೂರಕ ವಾತಾವರಣಕ್ಕೆ ಸಾಕ್ಷಿಯಾಗಲಿದೆ ಎಂಬ ಮಾತು ಕೇಳಿಬರುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಈ ನಡುವೆ ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದ್ದು, ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

VISTARANEWS.COM


on

Prajwal Revanna Case Prajwal never boarded a flight from Germany
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬುದು ಸುಳ್ಳಾಗಿದೆ. ಅವರು ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನ ಲಾಂಜ್‌ನಲ್ಲಿಯೇ ಕಾಣಿಸಿಕೊಂಡಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಅಲ್ಲದೆ, ಫ್ಲೈಟ್‌ ಟೇಕ್‌ ಆಫ್‌ ಆಗಿದ್ದರೂ ಅವರು ಅವರು ಅತ್ತ ಸುಳಿದಿಲ್ಲ. ಹೀಗಾಗಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್‌ ಮಾಡಿಸಿಯೂ ಅವರು ವಿಮಾನವನ್ನು ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ.

ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಇದರ ಬ್ಯುಸಿನೆಸ್ ಕ್ಲಾಸ್ ಫ್ಲೈಟ್ ಟಿಕೆಟ್‌ಗೆ
ಸುಮಾರು 3 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಇಷ್ಟಾದರೂ ಪ್ರಜ್ವಲ್ ಅಲ್ಲಿಂದ ಹೊರಟೇ ಇಲ್ಲ ಎಂದು ತಿಳಿದುಬಂದಿದೆ.

ಬುಕ್ ಮಾಡಿದ್ದ ಲುಫ್ತಾನ್ಸಾ ಫ್ಲೈಟ್‌ ಹತ್ತದ ಪ್ರಜ್ವಲ್ ರೇವಣ್ಣ!

ಲುಫ್ತಾನ್ಸಾ ಏರ್‌ಲೈನ್ಸ್ ಫ್ಲೈಟ್ LH764 ರಲ್ಲಿ ಬ್ಯುಸಿನೆಸ್ ಕ್ಲಾಸ್ ಕ್ಯಾಟಗರಿ 6ಜಿ ಸೀಟ್‌ ಅನ್ನು ಪ್ರಜ್ವಲ್‌ ರೇವಣ್ಣ ಬುಕ್ ಮಾಡಿದ್ದರು. ಈ ನಿರೀಕ್ಷೆಯಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡ ಸಹ ಇದ್ದವು. ಆದರೆ, ಎಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ಕಳ್ಳಾಟ ಆಡಲು ಶುರು ಮಾಡಿದರೋ, ಅದೀಗ ಎಸ್‌ಐಟಿ ತಂಡವನ್ನು ಗರಂ ಆಗಿಸಿದೆ. ಒಂದು ಕಡೆ ಕಾನೂನಿಗೆ ತಲೆಬಾಗುತ್ತೇನೆ ಎಂದು ಪ್ರಜ್ವಲ್ ಅಪ್ಪ ಎಚ್.ಡಿ. ರೇವಣ್ಣ ಹೇಳುತ್ತಾರೆ. ಆದರೆ, ಇನ್ನೊಂದು ಕಡೆ ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದೆ.

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿತ್ತು.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ಬುಧವಾರ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿತ್ತು. ಆದರೆ, ಟಿಕೆಟ್‌ ಬುಕ್‌ ಮಾಡಿದ್ದ ಪ್ರಜ್ವಲ್‌ ಮಾತ್ರ ಇತ್ತ ಸುಳಿಯಲೇ ಇಲ್ಲ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಾಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎಂದೇ ಭಾವಿಸಲಾಗಿತ್ತು.

Continue Reading

ಕರ್ನಾಟಕ

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

B C Mylarappa: ಅಕ್ರಮ ಭೂ ವ್ಯವಹಾರ ಆರೋಪದಲ್ಲಿ ಬಂಧನವಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರೊಫೆಸರ್‌ ಬಿ.ಸಿ.ಮೈಲಾರಪ್ಪ ಅವರನ್ನು ಅಮಾನತು ಮಾಡಲು ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.

VISTARANEWS.COM


on

B C Mylarappa
Koo

ಬೆಂಗಳೂರು: ಅಕ್ರಮ ಭೂ ವ್ಯವಹಾರ ಆರೋಪದಲ್ಲಿ ಬಂಧನವಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರೊಫೆಸರ್‌ ಬಿ.ಸಿ.ಮೈಲಾರಪ್ಪ (B C Mylarappa) ಅವರನ್ನು ಅಮಾನತು ಮಾಡುವಂತೆ ಬೆಂಗಳೂರು ವಿವಿ ಕುಲಸಚಿವರಿಗೆ ಉನ್ನತ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಹೈದರಬಾದ್‌ನ ಜ್ಯುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಕೆ. ಶಶಿಧರ್ ರೆಡ್ಡಿ ಎಂಬುವರು 2023ರ ಫೆ. 15ರಂದು ನೀಡಿದ್ದ ದೂರಿನ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು, 2024ರ ಮಾ.22ರಂದು ಮೈಲಾರಪ್ಪ ಸೇರಿ ಪ್ರಕರಣದ ಇತರ ಆರೋಪಿಗಳಾದ ಕೊರಟಗೆರೆ ಕೃಷ್ಣಪ್ರಸಾದ್, ಆರ್. ಜಗನ್ನಾಥ್, ಸುರೇಂದರ್ ರೆಡ್ಡಿ ಅವರನ್ನು ಬಂಧಿಸಿದ್ದರು.

ಮೈಲಾರಪ್ಪ ಅವರ ಬಂಧನದ ಬಗ್ಗೆ ತೆಲಂಗಾಣ ಪೊಲೀಸರು ಬೆಂಗಳೂರು ವಿವಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಂತರ ನೀತಿ ಸಂಹಿತೆ ಜಾರಿಯಾದ ಕಾರಣ ವಿವಿಯ ಸಿಂಡಿಕೇಟ್‌ ಸಭೆ ಕರೆದು ತೀರ್ಮಾನ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ ಅಭಿಪ್ರಾಯ ನೀಡುವಂತೆ ಉನ್ನತ ಶಿಕ್ಷಣ ಇಲಾಖೆಯನ್ನು ಕೋರಿದ್ದರು. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಪತ್ರ ಬರೆದಿದ್ದು, ಮೈಲಾರಪ್ಪ ಅವರು 48 ಗಂಟೆಗೂ ಅಧಿಕ ಕಾಲ ಕಾರಾಗೃಹ ವಾಸದಲ್ಲಿದ್ದುದರಿಂದ ಬಂಧಿಸಲಾದ ದಿನಾಂಕದಿಂದ (ಮಾ.22) ಪೂರ್ವಾನ್ವಯ ಆಗುವಂತೆ ಅಮಾನತಿನಲ್ಲಿಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

ಏನಿದು ಪ್ರಕರಣ?

ಶಶಿಧರ್‌ ರೆಡ್ಡಿ ತಮ್ಮ ಒಡೆತನದ ಶ್ರಿವೆನ್‌ ಇನ್‌ಫ್ರಾ ಹೆಸರಿನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಮುಂದಾಗಿದ್ದರು. ಅವರಿಗೆ ಯಲಹಂಕದ ಹೊಸಹಳ್ಳಿಯಲ್ಲಿ ಕೃಷ್ಣಪ್ರಸಾದ್ ಎಂಬುವವರಿಗೆ ಸೇರಿದ ಜಮೀನು ಕೊಡಿಸುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 5 ಕೋಟಿ ರೂ. ಮುಂಗಡ ಹಣವನ್ನು ಆರೋಪಿಗಳು ಪಡೆದಿದ್ದರು. ಆ ಜಮೀನು ಕೃಷ್ಣಪ್ರಸಾದ್ ಅವರಿಗೆ ಸೇರಿಲ್ಲ ಎಂದು ತಿಳಿದ ಹಿನ್ನೆಲೆಯಲ್ಲಿ ಮುಂಗಡ ಹಣ ವಾಪಸ್ ನೀಡುವಂತೆ ಶಶಿಧರ್ ರೆಡ್ಡಿ ಕೇಳಿದ್ದರು. ಆಗ ಪ್ರೊ. ಮೈಲಾರಪ್ಪ ಕರೆ ಮಾಡಿ ತನಗೆ ಸರ್ಕಾರದ ಮಟ್ಟದಲ್ಲಿ ಉತ್ತಮ ಸಂಪರ್ಕವಿದೆ, ಹಣಕ್ಕಾಗಿ ಆರೋಪಿಗಳ ಮೇಲೆ ಒತ್ತಡ ಹೇರಬೇಡಿ ಎಂದು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಆ ಬಳಿಕ ಈ ಜಮೀನನ್ನು ಸರ್ಕಾರವು ವೈಎಎಸ್ ಚಾರಿಟಬಲ್ ಟ್ರಸ್ಟ್ ಮತ್ತು ಕೊಡವ ಸಮಾಜಕ್ಕೆ ಹಂಚಿಕೆ ಮಾಡಿರುವುದು ಶಶಿಧರ್ ರೆಡ್ಡಿ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಣ ವಾಪಸ್ ನೀಡುವಂತೆ ಕೇಳಿದಾಗ ಬೆದರಿಕೆ ಮತ್ತು ನಿರ್ಲಕ್ಷ್ಯ ತೋರಿದ್ದಾರೆ ಎಂದು ಶಶಿಧರ್ ರೆಡ್ಡಿ ತಮ್ಮ ದೂರಿನಲ್ಲಿ ತಿಳಿಸಿದ್ದರು.

Continue Reading

ರಾಜಕೀಯ

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Prajwal Revanna Case: ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಸಾಹಿತಿಗಳು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ ಎಂದೂ ಹೇಳಿದ್ದಾರೆ.

VISTARANEWS.COM


on

Prajwal Revanna Case Can women trust your government Writers open letter to Siddaramaiah
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿಗಳು, ಮಹಿಳಾ ಸಂಘಟನೆಗಳವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕೇಸ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಜತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆಯೂ ಅಸಮಾಧಾನವನ್ನು ಹೊರಹಾಕಿದ್ದಾರೆ. ಇನ್ನು ಈ ಸಂಬಂಧ 16 ಬೇಡಿಕೆಗಳನ್ನು ಮುಂದಿಡಲಾಗಿದೆ.

ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿಗಳಾದ ಡಾ. ಜಿ. ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ, ಕೆ, ನೀಲಾ, ಕೆ.ಎಸ್ ವಿಮಲಾ, ಕುಂ ವೀರಭದ್ರಪ್ಪ,‌ ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಜನರಿಂದ ಈ ಪತ್ರವನ್ನು ಬರೆಯಲಾಗಿದೆ. ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ ಎಂದು ಬರೆದುಕೊಳ್ಳಲಾಗಿದೆ.

ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ಕುಟುಂಬದ ಬಗ್ಗೆ ಬೇಸರ

ಪ್ರಜಲ್ ರೇವಣ್ಣ ಅವರ ತಾತ, ತಂದೆ, ತಾಯಿ, ಚಿಕ್ಕಪ್ಪ, ಚಿಕ್ಕಮ್ಮ, ಅಣ್ಣ, ತಮ್ಮ ಎಲ್ಲರೂ ಪ್ರಜಾಪ್ರಭುತ್ವದ ಎಲ್ಲ ಹುದ್ದೆಗಳನ್ನು, ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಮತ್ತು ಅವರ ಕುಟುಂಬವು ಪ್ರಜಾಪ್ರಭುತ್ವದ ಮುಸುಕಿನೊಳಗೆ ಪ್ರಜಾಪ್ರತಿನಿಧಿಗಳೆಂಬ ಧಿರಿಸು ಧರಿಸಿಕೊಂಡಿದ್ದಾರೆ. ಪ್ರಕರಣ ಹೊರ ಬಂದ ತಕ್ಷಣ ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಬಾರದಾಗಿತ್ತು. ಹಗರಣ ಬಯಲಾಗಿ ಐದು ದಿನಗಳು ಆರೋಪಿಯನ್ನು ಸ್ವತಂತ್ರವಾಗಿ ಬಿಡಲಾಗಿದೆ. ಆತನ ಮೇಲೆ ಕಣ್ಗಾವಲನ್ನು ಹಾಕಿಲ್ಲ. ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಸಂತ್ರಸ್ತರ ಕುಟುಂಬಗಳು ಮಾನಸಿಕ ಯಾತನೆಗಳಿಗೆ ಗುರಿಯಾಗಿವೆ. ಅಲ್ಲದೆ, ವಿಡಿಯೊಗಳು ಲಕ್ಷಾಂತರ ಜನರಿಗೆ ತಲುಪಿವೆ. ಇದರಿಂದ ಯುವಜನರು, ಕಾಮುಕರು, ಮಕ್ಕಳ ಮೇಲೆ ಪರಿಣಾಮ ಬೀರಬಹುದಾಗಿದೆ ಎಂದು ಸಾಹಿತಿಗಳು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

ಸರ್ಕಾರಕ್ಕೆ ಸಲ್ಲಿಸಿದ ಪ್ರಮುಖ ಬೇಡಿಕೆಗಳು ಏನು?

  • ಆರೋಪಿಯನ್ನು ಕೂಡಲೇ ಬಂಧಿಸಬೇಕು,ಐಟಿ, ಐಪಿಸಿ ಕಾಯ್ದೆಗಳ ಅಡ್ಡಿಯಲ್ಲಿ ಮೊಕದ್ದಮೆ ಹೂಡಬೇಕು
  • ಸಂತ್ರಸ್ತ‌ ಮಹಿಳೆಯರು ಭೀತಿಯಿಲ್ಲದೆ ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು
  • ತನಿಖೆ ಪೂರ್ಣಗೊಳ್ಳುವವರೆಗೆ ಎಚ್.ಡಿ. ರೇವಣ್ಣ ವಿಧಾನಸಭೆ ಸದಸ್ಯತ್ವ ತಾತ್ಕಾಲಿಕವಾಗಿ ರದ್ದು ಮಾಡಬೇಕು
  • ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕ ನಡವಳಿಕೆಗೆ ಕಡಿವಾಣ ಹಾಕಬೇಕು
  • ಎಸ್‌ಐಟಿ ತನಿಖೆಯು ಕಾಯ್ದೆ ಅನುಸಾರ ಕಾಲಮಿತಿಯೊಳಗೆ ನಡೆಯಬೇಕು
  • ಪ್ರಜ್ವಲ್ ಚಾಲಕ ಕಾರ್ತಿಕ್ ನನ್ನ ಕೂಡಲೇ ಬಂಧಿಸಬೇಕು
  • ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧವೂ ಗಂಭೀರ ಪ್ರಕರಣಗಳು ದಾಖಲು ಮಾಡಬೇಕು
  • ವಿಡಿಯೊಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ಹೂಡಬೇಕು
  • ಹಳೇ ವಿಡಿಯೊ ಎಂದು ರೇವಣ್ಣ ಹೇಳಿದ್ದಾರೆ, ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬದ ಎಲ್ಲ ಸದಸ್ಯರನ್ನು Accomplice ಗಳೆಂದು ಪರಿಗಣಿಸಿ
  • ಅವರ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ದಮೆ ಹೂಡಬೇಕು
  • ಪ್ರಜ್ವಲ್ ದೇಶ ಬಿಟ್ಟು ಪರಾರಿಯಾಗಿರುವುದು ಗೃಹ ಇಲಾಖೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯ
  • ಗೃಹ ಇಲಾಖೆ, ಗುಪ್ತಚರ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಬೇಕು
Continue Reading

ಕ್ರೈಂ

Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

Student Self Harming: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

VISTARANEWS.COM


on

pes university student self harming
Koo

ಬೆಂಗಳೂರು: ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ (Electronic city) ಪ್ರತಿಷ್ಠಿತ ಪಿಇಎಸ್ ಯೂನಿವರ್ಸಿಟಿಯಲ್ಲಿ (PES university) ಎಂಜಿಯರಿಂಗ್‌ ವಿದ್ಯಾರ್ಥಿಯೊಬ್ಬ (Engineering Student) ಆತ್ಮಹತ್ಯೆ (Student Self harming) ಮಾಡಿಕೊಂಡಿದ್ದಾನೆ. ಪರೀಕ್ಷೆಗೆ (Exam) ತಡವಾಗಿ ಬಂದಿದ್ದಕ್ಕಾಗಿ ನಿಂದಿಸಿದ್ದರಿಂದ ನೊಂದ ಈತ, ಕಾಲೇಜಿನ 6ನೇ ಅಂತಸ್ತಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದು ಪಿಇಎಸ್‌ ಕಾಲೇಜಿನಲ್ಲಿ ಸಂಭವಿಸುತ್ತಿರುವ ಎರಡನೇ ವಿದ್ಯಾರ್ಥಿ ಆತ್ಮಹತ್ಯೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

ರಾಹುಲ್ ತನ್ನ ತಾಯಿಯೊಂದಿಗೆ ಕ್ಯಾಂಪಸ್‌ನಿಂದ 4 ಕಿಮೀ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಪರೀಕ್ಷೆ 8.30ಕ್ಕೆ ಆರಂಭವಾಗಲಿದ್ದ ಕಾರಣ 7.30ರ ಸುಮಾರಿಗೆ ಮನೆಯಿಂದ ಹೊರಟಿದ್ದ. ಆತನ ತಾಯಿ ಕಾಲೇಜು ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಅಧ್ಯಯನದಲ್ಲಿ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ರಾಹುಲ್, ಇದರಿಂದ ನೊಂದಿದ್ದ ಎನ್ನಲಾಗಿದೆ.

ನಂತರ ಸ್ವಲ್ಪ ಹೊತ್ತಿನ ಬಳಿಕ ಕಾಲೇಜಿನ ಐದನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.

ಕೆಲ ತಿಂಗಳ ಹಿಂದೆ ಹೊಸಕೆರೆಹಳ್ಳಿ ಬಳಿಯ ಪಿಇಎಸ್ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ‌ಮಾಡಿಕೊಂಡಿದ್ದ. 2023ರಲ್ಲಿ 19 ವರ್ಷದ ಆದಿತ್ಯ ಪ್ರಭು ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದುದು ವರದಿಯಾಗಿತ್ತು. ಇದೀಗ ಪಿಇಎಸ್‌ ಕಾಲೇಜಿನಲ್ಲಿ ಎರಡನೇ ಆತ್ಮಹತ್ಯೆ ಸಂಭವಿಸಿದೆ. ಇದು ಸ್ಪರ್ಧಾತ್ಮಕ ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಮೇಲಿರುವ ಮಾನಸಿಕ ಒತ್ತಡದತ್ತ ಬೆಟ್ಟು ಮಾಡಿದೆ.

ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ (Woman murder case) ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

woman murder case kengeri

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ (kengeri murder, bangalore crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ (Strangle) ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Continue Reading
Advertisement
Money Guide
ಮನಿ-ಗೈಡ್2 mins ago

Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಬ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Prajwal Revanna Case Prajwal never boarded a flight from Germany
ಕ್ರೈಂ5 mins ago

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

B C Mylarappa
ಕರ್ನಾಟಕ7 mins ago

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Job Alert
ಉದ್ಯೋಗ9 mins ago

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

House of the Dragon season 2 new trailer hints at a bloody
ಸಿನಿಮಾ21 mins ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Google Update
ತಂತ್ರಜ್ಞಾನ22 mins ago

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

Seema Haider
ದೇಶ31 mins ago

Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಾಚಾರಿಕೆಯೋ?

ICMR Dietary Guidelines
ಆರೋಗ್ಯ32 mins ago

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

viral video shakti scheme women fight
ವೈರಲ್ ನ್ಯೂಸ್41 mins ago

Viral video: ಚಪ್ಪಲಿಯಲ್ಲಿ ಬಡಿದಾಡಿ ಬಟ್ಟೆ ಹರಿದುಕೊಂಡರು; ಪುಕ್ಕಟೆ ಬಸ್‌ನಲ್ಲಿ ಮಹಿಳೆಯರ ʼಶಕ್ತಿʼ ಪ್ರದರ್ಶನ!

Narendra Modi
ದೇಶ44 mins ago

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌