Explainer: ದೇಶದ್ರೋಹ ಕಾಯಿದೆಯ ಸುತ್ತಮುತ್ತ - Vistara News

EXPLAINER

Explainer: ದೇಶದ್ರೋಹ ಕಾಯಿದೆಯ ಸುತ್ತಮುತ್ತ

ದೇಶದ್ರೋಹ ಕಾಯಿದೆ (Sedition Law) ಯನ್ನು ಸುಪ್ರೀ ಕೋರ್ಟ್‌ ತಾತ್ಕಾಲಿಕವಾಗಿ ಅಮಾನತಿನಲ್ಲಿ ಇಟ್ಟಿದೆ. ಪುರಾತನ ಕಾಲದ ಈ ಕಾಯಿದೆಯ ಇತಿಹಾಸ, ವರ್ತಮಾನಗಳು ಇಲ್ಲಿವೆ.

VISTARANEWS.COM


on

No data to show Same Sex Marriage is elitist concept, Says Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇಶದ್ರೋಹ ಕಾಯಿದೆ (Sedition Law) ಬಳಕೆ, ದುರ್ಬಳಕೆಯ ಕುರಿತಾದ ಚರ್ಚೆ ಇಂದು ನಿನ್ನೆಯದಲ್ಲ. ಯಾವುದು ದೇಶದ್ರೋಹ, ಯಾವುದು ಅಲ್ಲ ಎಂಬ ಬಗ್ಗೆ, ಅದು ವ್ಯಾಪಕವಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆ ಕೇಸ್‌ಗಳ ಪ್ರಾಮಾಣಿಕತೆಯ ಬಗ್ಗೆ ಪ್ರಶ್ನೆಗಳು ಏಳುತ್ತಿದ್ದವು. ಕೆಲವೊಮ್ಮೆ ದೇಶದ್ರೋಹ ಪ್ರಕರಣ ದಾಖಲು ಸಂಪೂರ್ಣವಾಗಿ ವ್ಯಾಖ್ಯಾನದ ಮೇಲೆಯೇ ನಿಂತಿರುತ್ತಿತ್ತು. ಬ್ರಿಟಿಷರ ಕಾಲದ ಈ ಕಾಯಿದೆಯ ಪೂರ್ಣ ಲಾಭ ಪಡೆದವರು ಕೇಂದ್ರ ಹಾಗೂ ರಾಜ್ಯಗಳಲ್ಲಿ ಅಧಿಕಾರದಲ್ಲಿ ಇದ್ದವರು. ನೈಜ ಪ್ರಕರಣಗಳೂ ಸಾಕಷ್ಟು ಇದ್ದವಾದರೂ, ಅದರ ದುರ್ಬಳಕೆಯೇ ಅದಕ್ಕೆ ಮುಳುವಾಗಿದೆ.

ಸೆಕ್ಷನ್‌ 124Aಯಲ್ಲಿ ಏನಿದೆ?
ಮಾತು ಅಥವಾ ಬರಹದಲ್ಲಿ ಅಥವಾ ಸನ್ನೆಗಳ ಮೂಲಕ, ಅಥವಾ ದೃಶ್ಯ ಪ್ರಾತಿನಿಧ್ಯದ ಮೂಲಕ, ಸರಕಾರದ ವಿರುದ್ಧ ದ್ವೇಷ ಅಥವಾ ತಿರಸ್ಕಾರವನ್ನು ಮೂಡಿಸಲು, ಅಥವಾ ಅಸಮಾಧಾನವನ್ನು ಪ್ರಚೋದಿಸಲು ಪ್ರಯತ್ನಿಸಿದರೆ, ಅಂಥವರಿಗೆ ಜೀವಾವಧಿ ಸೆರೆವಾಸ, ಮೂರು ವರ್ಷದ ಜೈಲುವಾಸ ಮತ್ತು ದಂಡವನ್ನು ವಿಧಿಸಬಹುದು.
ಕಾನೂನುಬದ್ಧ ಮಾಧ್ಯಮಗಳ ಮೂಲಕ ಸರಕಾರದ ಕ್ರಮಗಳ ಕುರಿತು ಅಸಾಮಾಧಾನ ವ್ಯಕ್ತಪಡಿಸುವುದು, ಯಾವುದೇ ದ್ವೇಷವನ್ನು ಪ್ರಚೋದಿಸದಂಥ ಟೀಕೆಗಳು, ಇದರ ವ್ಯಾಪ್ತಿಗೆ ಬರುವುದಿಲ್ಲ.
ಈ ಪ್ರಕರಣದಡಿ ಶಿಕ್ಷೆಯಾದದ್ದು ಬಹಳ ಕಡಿಮೆ. ಯಾಕೆಂದರೆ ಹಿಂಸೆಯನ್ನು ಪ್ರಚೋದಿಸುವ ಹೇಳಿಕೆ ಯಾವುದು, ಯಾವುದು ಅಲ್ಲ ಎಂಬುದನ್ನು ಸಾಕ್ಷ್ಯಾಧಾರ ಸಹಿತ ಸಾಬೀತುಪಡಿಸುವುದು ಕಷ್ಟವಾಗಿದೆ. ಹೀಗಾಗಿ ಬಹುತೇಕ ಪ್ರಕರಣಗಳು ಬಿದ್ದುಹೋಗುತ್ತಿವೆ.

ಇದು ಸುದ್ದಿ: ದೇಶದ್ರೋಹ ಕಾಯ್ದೆ ಮರುಪರಿಶೀಲನೆ: ಉತ್ತರಿಸಲು ಕೇಂದ್ರ ಸರ್ಕಾರಕ್ಕೆ 24 ಗಂಟೆ ಗಡುವು ನೀಡಿದ ಸುಪ್ರೀಂ ಕೋರ್ಟ್‌

ಎಷ್ಟಿವೆ ಕೇಸ್?‌
ಕೇಂದ್ರ ಗೃಹ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 5 ವರ್ಷದಲ್ಲಿ 326 ದೇಶದ್ರೋಹ ಪ್ರಕರಣ ದಾಖಲಾಗಿವೆ. 141 ಪ್ರಕರಣಗಳ ಕುರಿತು ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಆದರೆ ಇದರಲ್ಲಿ ಆರು ಜನ ಮಾತ್ರ ಅಪರಾಧಿಗಳು ಎಂಬುದು ಸಾಬೀತಾಗಿದೆ. ಅಸ್ಸಾಂನಲ್ಲಿ ಅತಿ ಹೆಚ್ಚು, ಅಂದರೆ 54 ಪ್ರಕರಣ ದಾಖಲಾಗಿವೆ. ಜಾರ್ಖಂಡ್‌ನಲ್ಲಿ 40, ಹರಿಯಾಣ 31, ಕೇರಳ, ಬಿಹಾರ, ಜಮ್ಮು-ಕಾಶ್ಮೀರದಲ್ಲಿ ತಲಾ 25 ಪ್ರಕರಣ ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ 17, ಪಶ್ಚಿಮ ಬಂಗಾಳದಲ್ಲಿ ಎಂಟು, ಮಹಾರಾಷ್ಟ್ರ, ಪಂಜಾಬ್‌ ಹಾಗೂ ಉತ್ತರಾಖಂಡದಲ್ಲಿ ತಲಾ ಒಂದು ಕೇಸ್‌ ದಾಖಲಾಗಿವೆ. ಸುಪ್ರೀಂ ಕೋರ್ಟ್‌ನಲ್ಲಿ ಕಕ್ಷಿದಾರರ ಪರ ವಕೀಲರಾದ ಕಪಿಲ್‌ ಸಿಬಲ್‌ ಅವರು ಮಾಹಿತಿ ನೀಡಿರುವ ಪ್ರಕಾರ, ಒಟ್ಟಾರೆ ದೇಶಾದ್ಯಂತ 800 ಪ್ರಕರಣಗಳು ಇವೆ ಹಾಗೂ ಇದಕ್ಕೆ ಸಂಬಂಧಿಸಿ 13,000 ಮಂದಿ ಜೈಲಲ್ಲಿದ್ದಾರೆ.

ಪುರಾತನ ಕಾಯಿದೆ
ದೇಶದ್ರೋಹವನ್ನು ಶಿಕ್ಷಾರ್ಹ ಎಂದು ಭಾರತೀಯ ದಂಡಸಂಹಿತೆಯ ಸೆಕ್ಷನ್‌ 124ಎ ಸಾರುತ್ತದೆ. ಇದು ದೇಶದ್ರೋಹ ಕಾಯಿದೆಯೆಂದೇ ಪ್ರಸಿದ್ಧವಾಗಿದೆ. 1860ರಲ್ಲಿ ಬ್ರಿಟಿಷರು ಭಾರತದಲ್ಲಿ ಭಾರತೀಯ ದಂಡಸಂಹಿತೆಯನ್ನು ಜಾರಿಗೆ ತಂದರು. ನ್ಯಾಯಾಲಯಗಳು ಆರಂಭವಾದವು. ಇದೇ ಕಾಲದಲ್ಲಿ ಬ್ರಿಟಿಷರ ಆಡಳಿತದ ವಿರುದ್ಧ ಜನರ ಅಸಾಮಾಧನ ಹೆಚ್ಚತೊಡಗಿ, ಅಲ್ಲಲ್ಲಿ ಟೀಕೆ ಭಿನ್ನಾಭಿಪ್ರಾಯಗಳು ದಾಖಲಾಗತೊಡಗಿದವು. ಸ್ವಾತಂತ್ರ್ಯ ಹೋರಾಟದ ದನಿಗಳು ಹೆಚ್ಚತೊಡಗಿದವು. ಇದನ್ನು ಹತ್ತಿಕ್ಕಲು ಯೋಚಿಸಿದ ಬ್ರಿಟಿಷ್‌ ಸರಕಾರ, ದಂಡಸಂಹಿತೆಯಲ್ಲಿ 124ಎ ಸೆಕ್ಷನ್‌ ಸೇರಿಸಿದರು. ಇದನ್ನು ಬಳಸಿಯೇ ಬಾಲಗಂಗಾಧರ ತಿಲಕ್‌, ಮಹಾತ್ಮ ಗಾಂಧಿ, ವೀರ ಸಾವರ್ಕರ್‌ ಮುಂತಾದ ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿ ಕಿರುಕುಳ ನೀಡಿದರು.

ಮಹಾತ್ಮ ಗಾಂಧಿ ಅವರು ಈ ಕಾಯಿದೆಯನ್ನು ʼʼಜನತೆಯ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಭಾರತೀಯ ದಂಡಸಂಹಿತೆಯ ಕಾನೂನುಗಳಲ್ಲಿ ಈ ಕಾಯಿದೆಗೆ ರಾಜನ ಸ್ಥಾನʼʼ ಎಂದು ಟೀಕಿಸಿದರು. ಬ್ರಿಟಿಷ್‌ ಆಡಳಿತದಿಂದ ದೇಶ ಮುಕ್ತಿಗೊಂಡು ನಮ್ಮದೇ ಸರಕಾರ ಬಂದ ನಂತರವೂ ಇದು ಮುಂದುವರಿಯಿತು. ಹಲವಾರು ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಮ್ಮ ವಿರುದ್ಧ ಟೀಕೆಯನ್ನು ದಾಖಲಿಸಿದ, ಭಾಷಣ ಮಾಡಿದ, ಪತ್ರಿಕೆಗಳಲ್ಲಿ ಬರೆದವರ ಮೇಲೆ ಈ ಕೇಸುಗಳನ್ನು ಜಡಿದರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ರಷ್ಯಾ ವಿರುದ್ಧ ಮತ ಹಾಕಿದ ಭಾರತದ ನ್ಯಾಯಾಧೀಶ

ಎಲ್ಲವೂ ದೇಶದ್ರೋಹವಲ್ಲ
ದೇಶದ್ರೋಹ ಕಾಯಿದೆಯಡಿ ದಾಖಲಾದ ಹೆಚ್ಚಿನ ಪ್ರಕರಣಗಳು ನಿಜಕ್ಕೂ ದೇಶದ್ರೋಹವಲ್ಲ ಎಂದು ಸಾಧಿಸಲು ಹೆಚ್ಚಿನ ಕಾನೂನು ಜ್ಞಾನ ಬೇಕಿಲ್ಲ. ʼಕೇದಾರ್‌ನಾಥ್‌ ಸಿಂಗ್‌ ವರ್ಸಸ್‌ ಸ್ಟೇಟ್‌ ಆಫ್‌ ಬಿಹಾರ್‌ 1962′ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಒಂದು ಐತಿಹಾಸಿಕ ನಿರ್ಣಯ ನೀಡಿತು. ಸರಕಾರದ ಕುರಿತು ಟೀಕೆ ಮಾಡುವುದು ದೇಶದ್ರೋಹವಲ್ಲ. ಹಿಂಸೆಗೆ ಪ್ರಚೋದನೆ ನೀಡುವಂತೆ ಅಥವಾ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವಂತೆ ಇಲ್ಲದಿದ್ದರೆ ಅದನ್ನು ದೇಶದ್ರೋಹ ಎಂದು ಹೇಳಲಾಗದು ಎಂದು ಐವರು ಸದಸ್ಯರ ನ್ಯಾಯಪೀಠ ಹೇಳಿತು.

2011ರಲ್ಲಿ ಇಂದ್ರಾದಾಸ್‌ ವರ್ಸಸ್‌ ಅಸ್ಸಾಂ ಸರಕಾರ ಹಾಗೂ ಅರುಣಾಚಲ ಪ್ರದೇಶ ಸರಕಾರ ಪ್ರಕರಣದಲ್ಲಿಯೂ ʼʼಸಾರ್ವಜನಿಕ ಶಾಂತಿಗೆ ಭಂಗ ತರುವ ಕ್ರಿಯೆ ಮಾತ್ರವೇ ದೇಶದ್ರೋಹʼʼ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತು. ಆದರೆ ನಾಗರಿಕ ಹಕ್ಕು ಹೋರಾಟಗಾರ ವಿನಾಯಕ ಸೇನ್‌, ಲೇಖಕಿ ಆರುಂಧತಿ ರಾಯ್‌, ಕಾರ್ಟೂನಿಸ್ಟ್‌ ಅಸೀಮ್‌ ತ್ರಿವೇದಿ, ಹೋರಾಟಗಾರ ಹಾರ್ದಿಕ್‌ ಪಟೇಲ್‌ ಮುಂತಾದವರ ಮೇಲೆಲ್ಲ ದೇಶದ್ರೋಹ ಕೇಸುಗಳಿವೆ.

ಕಕ್ಷಿದಾರರು ಯಾರು?
ದೇಶದ್ರೋಹ ಕಾಯಿದೆ ದೊಡ್ಡ ಪ್ರಮಾಣದಲ್ಲಿ ದುರ್ಬಳಕೆಯಾಗುತ್ತಿದೆ ಎಂದು ಆಕ್ಷೇಪಿಸಿ ಎಡಿಟರ್ಸ್‌ ಗಿಲ್ಡ್‌ ಆಫ್‌ ಇಂಡಿಯಾ, ಮಾಜಿ ಕೇಂದ್ರ ಸಚಿವ ಹಾಗೂ ಪತ್ರಕರ್ತ ಅರುಣ್‌ ಶೌರಿ, ಕರ್ನಾಟಕ ಮೂಲದ ನಿವೃತ್ತ ಮೇಜರ್‌ ಜನರಲ್‌ ಎಸ್‌.ಜಿ.ವೊಂಬತ್ಕೆರೆ, ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಮುಂತಾದವರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕಾಯ್ದೆ ರದ್ದುಪಡಿಸಬೇಕು ಮತ್ತು ಇದರ ಸಾಂವಿಧಾನಿಕತೆಯನ್ನು ಪರಿಶೀಲಿಸಬೇಕು ಎಂದು ಕೋರಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರ ವಿಭಾಗೀಯ ಪೀಠ, ಈ ಕುರಿತು ಕೇಂದ್ರ ಸರಕಾರದ ಅಭಿಪ್ರಾಯ ಕೇಳಿತ್ತು.

ವಿಚಾರಣೆಯ ವೇಳೆ ಕೆಲ ತೀಕ್ಷ್ಣ ಅಭಿಪ್ರಾಯಗಳನ್ನು ನ್ಯಾಯಪೀಠ ವ್ಯಕ್ತಪಡಿಸಿತ್ತು. ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸಿದರೆ ಜಾಮೀನು ಸಿಗುವುದಿಲ್ಲ. ಇದು ಸರಕಾರದ ವಿರುದ್ಧದ ಯಾವುದೇ ಭಿನ್ನಾಭಿಪ್ರಾಯ ಅಥವಾ ಅಸಮಾಧಾನ ವ್ಯಕ್ತಪಡಿಸುವವರನ್ನು ಕೂಡ ಜೀವಾವಧಿ ಶಿಕ್ಷೆ ವಿಧಿಸಬಹುದಾದ ಕ್ರಿಮಿನಲ್‌ ಆರೋಪದಡಿ ಬಂಧಿಸಲು ಅವಕಾಶ ನೀಡುತ್ತದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಹತ್ತಿಕ್ಕಲು ಬ್ರಿಟಿಷ್‌ ಅಧಿಕಾರಿಗಳು ಇದೇ ಕಾಯಿದೆ ಬಳಸುತ್ತಿದ್ದರು. ಸ್ವಾತಂತ್ರ್ಯ ಬಂದು 75 ವರ್ಷದ ನಂತರವೂ ಈ ಕಾಯಿದೆಯ ಅಗತ್ಯವಿದೆಯೇ? ಕೇಂದ್ರ ಸರಕಾರ ಏಕೆ ಈ ಕಾಯ್ದೆಯನ್ನು ರದ್ದುಪಡಿಸುತ್ತಿಲ್ಲ ಎಂದು ಪ್ರಶ್ನಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Petrodollar Explainer: ಅಮೆರಿಕ ಜೊತೆಗಿನ 50 ವರ್ಷಗಳ ಪೆಟ್ರೊಡಾಲರ್‌ ಒಪ್ಪಂದ ಕೊನೆಗೊಳಿಸಿದ ಸೌದಿ ಅರೇಬಿಯಾ; ಡಾಲರ್‌ ಗರ್ವ ಭಂಗ?

Petrodollar Explainer: ಸೌದಿ ಅರೇಬಿಯಾವು ಅಮೆರಿಕ ಜೊತೆಗಿನ 50 ವರ್ಷಗಳ ಹಿಂದಿನ ಪೆಟ್ರೋಡಾಲರ್ ಒಪ್ಪಂದವನ್ನು (Petrodollar Deal) ಕೊನೆಗೊಳಿಸಿದೆ. 1974ರಲ್ಲಿ ಸಹಿ ಮಾಡಲಾದ ಈ ಒಪ್ಪಂದ ಮುರಿದಿರುವುದರಿಂದ ಇದು ಜಾಗತಿಕ ವಹಿವಾಟಿನಲ್ಲಿ ಬಹುದೊಡ್ಡ ಬದಲಾವಣೆ ಬಿರುವುದು ಮಾತ್ರವಲ್ಲ ವಿಶ್ವದ ಆರ್ಥಿಕತೆಯ ಮೇಲೂ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಕುರಿತ ವಿಸ್ತೃತ ಚಿತ್ರಣ ಇಲ್ಲಿದೆ.

VISTARANEWS.COM


on

By

Petrodollar Deal
Koo

ಸೌದಿ ಅರೇಬಿಯಾವು (Saudi Arabia) ಅಮೆರಿಕದೊಂದಿಗಿನ (United States) 50 ವರ್ಷಗಳ ಹಳೆಯ ಪೆಟ್ರೋಡಾಲರ್ ಒಪ್ಪಂದವನ್ನು (Petrodollar Explainer) ಕೊನೆಗೊಳಿಸಲು ನಿರ್ಧರಿಸಿದೆ. 1974ರ ಜೂನ್ 8ರಂದು ಸಹಿ ಹಾಕಲಾದ ಈ ಒಪ್ಪಂದವು ಜೂನ್ 9ರಂದು ಮುಕ್ತಾಯಗೊಂಡಿದೆ. ಮಧ್ಯಪ್ರಾಚ್ಯ ದೇಶವು (Middle East country) ಈಗ ಅದನ್ನು ನವೀಕರಿಸದಿರಲು ನಿರ್ಧರಿಸಿದೆ. ಇದು ಎರಡು ರಾಷ್ಟ್ರಗಳ ನಡುವಿನ ಆರ್ಥಿಕ ಮತ್ತು ರಾಜತಾಂತ್ರಿಕ ಸಂಬಂಧಗಳಲ್ಲಿ ಐತಿಹಾಸಿಕ ತಿರುವು ಎಂದರೆ ತಪ್ಪಾಗಲಾರದು. ಇದರಿಂದ ಸೌದಿ ಅರೇಬಿಯಾ ಮತ್ತು ಅಮೆರಿಕ ನಡುವಿನ ದೀರ್ಘಕಾಲದ ತೈಲ ಡಾಲರ್ ಒಪ್ಪಂದ ಕೊನೆಯಾದಂತಾಗಿದೆ.

ಏನಿದು ಪೆಟ್ರೋಡಾಲರ್?

ಪೆಟ್ರೋಡಾಲರ್ ಎಂಬ ಪದವು ಜಾಗತಿಕ ಕಚ್ಚಾ ತೈಲ ವಹಿವಾಟುಗಳಿಗೆ ಕರೆನ್ಸಿಯಾಗಿ ಯುಎಸ್ ಡಾಲರ್ ಬಳಕೆಯನ್ನು ಸೂಚಿಸುತ್ತದೆ. ಯುಎಸ್ ಚಿನ್ನ ವಹಿವಾಟುಗಳಿಗೆ ಕರೆನ್ಸಿಯಾಗಿ ಡಾಲರ್ ಬಳಕೆಯನ್ನು ಕಡಿಮೆಗೊಳಿಸಿದ ಬಳಿಕ ಪೆಟ್ರೋಡಾಲರ್ ವ್ಯವಸ್ಥೆಯು ಜಾರಿಗೆ ಬಂದಿತು.

ಏನು ಸಮಸ್ಯೆ?

ಸೌದಿ ಅರೇಬಿಯಾವು ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ತನ್ನ ದೀರ್ಘಕಾಲದ ಒಪ್ಪಂದವನ್ನು ನವೀಕರಿಸದಿರಲು ನಿರ್ಧರಿಸಿದೆ. ಇದಕ್ಕೆ ಮುಖ್ಯ ಕಾರಣ ಯುನೈಟೆಡ್ ಸ್ಟೇಟ್ಸ್ ತೈಲವನ್ನು ಯುಎಸ್ ಡಾಲರ್‌ಗಳಲ್ಲಿ ಪ್ರತ್ಯೇಕವಾಗಿ ಮಾರಾಟ ಮಾಡುತ್ತದೆ. ಪೆಟ್ರೋಡಾಲರ್ ವ್ಯವಸ್ಥೆಯು ಜಾಗತಿಕ ತೈಲ ಮಾರುಕಟ್ಟೆಯ ಮೂಲಾಧಾರವಾಗಿದೆ ಮತ್ತು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಯುಎಸ್ ಡಾಲರ್ ಅನ್ನು ಹೆಚ್ಚು ಪ್ರಭಾವಶಾಲಿಗೊಳಿಸಿದೆ. ಪೆಟ್ರೋಡಾಲರ್ ಒಪ್ಪಂದವು ಆರ್ಥಿಕ ಸಹಕಾರ ಮತ್ತು ಸೌದಿ ಅರೇಬಿಯಾದ ಮಿಲಿಟರಿ ಅಗತ್ಯಗಳಿಗಾಗಿ ಜಂಟಿ ಆಯೋಗಗಳನ್ನು ಸ್ಥಾಪಿಸಿತ್ತು.

ಯಾವಾಗ ಸಹಿ ಹಾಕಲಾಯಿತು?

ಯುಎಸ್ ಸರ್ಕಾರದ ಪರವಾಗಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಮತ್ತು ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ಮತ್ತು ಸೌದಿ ರಾಜಮನೆತನದ ನೇತೃತ್ವದಲ್ಲಿ ನಡೆದ ಮಾತುಕತೆ ವೇಳೆ 1974ರ ಜೂನ್ 8ರಂದು ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಅನಂತರ ಪೆಟ್ರೋಡಾಲರ್ ವ್ಯವಸ್ಥೆಯನ್ನು ಸ್ಥಾಪಿಸಲಾಯಿತು.

ಈ ಒಪ್ಪಂದದ ಪ್ರಕಾರ ಸೌದಿ ಆಡಳಿತದ ಭದ್ರತೆಯನ್ನು ಖಾತರಿಪಡಿಸಲು ಯುಎಸ್ ಮಿಲಿಟರಿ ಸಹಾಯವನ್ನು ಒದಗಿಸುವ ಬದಲಾಗಿ ಸೌದಿ ಅರೇಬಿಯಾ ತನ್ನ ತೈಲ ರಫ್ತುಗಳಿಗೆ ಯುಎಸ್ ಡಾಲರ್‌ಗಳಲ್ಲಿ ಪ್ರತ್ಯೇಕವಾಗಿ ಬೆಲೆ ನೀಡಲು ಒಪ್ಪಿಕೊಂಡಿತು. ಈ ಒಪ್ಪಂದವು ಯುಎಸ್ ಡಾಲರ್‌ಗೆ ಸ್ಥಿರವಾದ ಬೇಡಿಕೆಯನ್ನು ಖಾತ್ರಿಪಡಿಸಿತು. ಏಕೆಂದರೆ ಇತರ ದೇಶಗಳಿಗೆ ತೈಲವನ್ನು ಖರೀದಿಸಲು ಡಾಲರ್‌ಗಳ ಅಗತ್ಯವಿತ್ತು. ವಿಶ್ವದ ಪ್ರಾಥಮಿಕ ಮೀಸಲು ಕರೆನ್ಸಿಯಾಗಿ ಡಾಲರ್‌ನ ಸ್ಥಿತಿಯನ್ನು ಪರಿಣಾಮಕಾರಿಯಾಗಿ ಬಲಪಡಿಸಿತು.

ಪೆಟ್ರೋಡಾಲರ್ ಒಪ್ಪಂದದ ಮಹತ್ವವೇನು?

ಪೆಟ್ರೋಡಾಲರ್ ವ್ಯವಸ್ಥೆಯು ಹಲವಾರು ಕಾರಣಗಳಿಗಾಗಿ ಗಮನಾರ್ಹವಾಗಿದೆ.

ಯುಎಸ್ ಡಾಲರ್ ಪ್ರಾಬಲ್ಯ

ಈ ಒಪ್ಪಂದವು ಯುಎಸ್ ಡಾಲರ್‌ನ ಸ್ಥಾನವನ್ನು ವಿಶ್ವದ ಪ್ರಬಲ ಕರೆನ್ಸಿಯಾಗಿ ಭದ್ರಪಡಿಸಿತು. ಅಂತಾರಾಷ್ಟ್ರೀಯ ವ್ಯಾಪಾರವನ್ನು ಸುಗಮಗೊಳಿಸಿತು ಮತ್ತು ಜಾಗತಿಕ ಹಣಕಾಸು ವ್ಯವಸ್ಥೆಯ ಮೇಲೆ ಯುಎಸ್ ಗಮನಾರ್ಹ ಪ್ರಭಾವವನ್ನು ಬೀರಲು ಅನುವು ಮಾಡಿಕೊಟ್ಟಿತ್ತು.

ಆರ್ಥಿಕ ಸ್ಥಿರತೆ

ಯುಎಸ್ ಡಾಲರ್‌ಗೆ ಸ್ಥಿರವಾದ ಬೇಡಿಕೆಯು ಅದರ ಮೌಲ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡಿತು ಮತ್ತು ತಕ್ಷಣದ ಆರ್ಥಿಕ ಪರಿಣಾಮಗಳನ್ನು ಎದುರಿಸದೆ ದೊಡ್ಡ ವ್ಯಾಪಾರ ಕೊರತೆಗಳನ್ನು ಚಲಾಯಿಸುವ ಅನನ್ಯ ಸಾಮರ್ಥ್ಯವನ್ನು ಯುಎಸ್ ಗೆ ಒದಗಿಸಿತು.


ಭೌಗೋಳಿಕ ರಾಜಕೀಯ ಪ್ರಭಾವ

ಯುಎಸ್ ಮತ್ತು ಸೌದಿ ಅರೇಬಿಯಾ ನಡುವಿನ ಕಾರ್ಯತಂತ್ರದ ಮೈತ್ರಿಯನ್ನು ಪಡೆದುಕೊಂಡಿತು. ಮಧ್ಯಪ್ರಾಚ್ಯದಲ್ಲಿ ಅದರ ತೈಲ ಸಂಪನ್ಮೂಲಗಳಿಗೆ ನಿರ್ಣಾಯಕ ಪ್ರದೇಶವಾದ ಅಮೆರಿಕದ ಪ್ರಭಾವವನ್ನು ಖಾತ್ರಿಪಡಿಸಿತು.

ಹಣಕಾಸು ಮಾರುಕಟ್ಟೆಗಳು

ಪೆಟ್ರೋಡಾಲರ್ ಮರುಬಳಕೆಯ ಕಾರ್ಯವಿಧಾನವು ತೈಲ- ರಫ್ತು ಮಾಡುವ ದೇಶಗಳಿಗೆ ತಮ್ಮ ಹೆಚ್ಚುವರಿ ಡಾಲರ್‌ಗಳನ್ನು ಯುಎಸ್ ಆಸ್ತಿಗಳಲ್ಲಿ ಹೂಡಿಕೆ ಮಾಡಲು ಅವಕಾಶ ಮಾಡಿಕೊಟ್ಟಿತು. ಇದರಿಂದಾಗಿ ಅಮೆರಿಕಾದ ಹಣಕಾಸು ಮಾರುಕಟ್ಟೆಗಳು ಮತ್ತು ಸರ್ಕಾರದ ಸಾಲಕ್ಕೆ ಬೆಂಬಲವಾಯಿತು.

ಒಪ್ಪಂದ ನವೀಕರಿಸದಿರುವ ಪರಿಣಾಮ ಏನು?

ಪೆಟ್ರೋಡಾಲರ್ ಒಪ್ಪಂದವನ್ನು ಅಂತ್ಯಗೊಳಿಸಲು ಸೌದಿ ಅರೇಬಿಯಾದ ನಿರ್ಧಾರವು ದೂರಾಲೋಚನೆಯನ್ನು ಹೊಂದಿದೆ. ಇದು ಬಹಳ ಪರಿಣಾಮಗಳನ್ನು ಉಂಟುಮಾಡುತ್ತದೆ. ಪೆಟ್ರೋಡಾಲರ್ ವ್ಯವಸ್ಥೆಯ ಅಂತ್ಯದಿಂದ ಯುಎಸ್ ಡಾಲರ್‌ಗೆ ಜಾಗತಿಕ ಬೇಡಿಕೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಯುರೋ, ಚೈನೀಸ್ ಯುವಾನ್ ಅಥವಾ ಕ್ರಿಪ್ಟೋಕರೆನ್ಸಿಗಳಂತಹ ಇತರ ಕರೆನ್ಸಿಗಳು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಳ್ಳಬಹುದು. ಇದು ಡಾಲರ್‌ನ ಪ್ರಾಬಲ್ಯವನ್ನು ಕಡಿಮೆ ಮಾಡುತ್ತದೆ. ಸೌದಿ ಅರೇಬಿಯಾ ಪ್ರಾಜೆಕ್ಟ್ ಎಂಬ್ರಿಡ್ಜ್‌ನಲ್ಲಿ ಭಾಗವಹಿಸಿದೆ. ಇದು ಕೇಂದ್ರೀಯ ಬ್ಯಾಂಕುಗಳು ಮತ್ತು ವಾಣಿಜ್ಯ ಬ್ಯಾಂಕುಗಳ ಬಳಕೆಗಾಗಿ ಡಿಜಿಟಲ್ ಕರೆನ್ಸಿ ಪ್ಲಾಟ್‌ಫಾರ್ಮ್ ಅನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: Aliens: ಏಲಿಯನ್‌ಗಳು ಅನ್ಯಗ್ರಹ ಜೀವಿಗಳಲ್ಲ; ಈ ಭೂಮಿಯ ರಹಸ್ಯ ನಿವಾಸಿಗಳು! ಹಾರ್ವರ್ಡ್ ವಿಜ್ಞಾನಿಗಳ ಸಂಶೋಧನೆ

ವಿನಿಮಯ ದರಗಳಲ್ಲಿ ಚಂಚಲತೆ

ಡಾಲರ್‌ಗೆ ಬೇಡಿಕೆಯಲ್ಲಿನ ಕಡಿತವು ವಿನಿಮಯ ದರ ಮತ್ತು ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚಿನ ಚಂಚಲತೆಗೆ ಕಾರಣವಾಗಬಹುದು. ಇದು ಡಾಲರ್ ನಾಮಕರಣದ ವ್ಯಾಪಾರ ಮತ್ತು ಸಾಲದ ಮೇಲೆ ಹೆಚ್ಚು ಅವಲಂಬಿತವಾಗಿರುವ ದೇಶಗಳ ಮೇಲೆ ಪರಿಣಾಮ ಬೀರಬಹುದು.

ಅಮೆರಿಕಕ್ಕೆ ಆರ್ಥಿಕ ಸವಾಲು

ಯುಎಸ್ ತನ್ನ ಕೊರತೆಗಳಿಗೆ ಹಣಕಾಸು ಒದಗಿಸಲು ಮತ್ತು ಪೆಟ್ರೋಡಾಲರ್‌ಗಳ ನಿರಂತರ ಒಳಹರಿವು ಇಲ್ಲದೆ ತನ್ನ ಆರ್ಥಿಕ ಪ್ರಾಬಲ್ಯವನ್ನು ಉಳಿಸಿಕೊಳ್ಳುವಲ್ಲಿ ಸವಾಲುಗಳನ್ನು ಎದುರಿಸಬಹುದು. ಇದು ಹೆಚ್ಚಿನ ಬಡ್ಡಿ ದರ ಮತ್ತು ಹಣಕಾಸಿನ ನೀತಿಗಳ ಮರುಮೌಲ್ಯಮಾಪನಕ್ಕೆ ಕಾರಣವಾಗಬಹುದು.

ಭೌಗೋಳಿಕ ರಾಜಕೀಯ ಮರುಜೋಡಣೆ

ಈ ಒಪ್ಪಂದದ ಮುಕ್ತಾಯವು ಜಾಗತಿಕ ಮೈತ್ರಿಗಳ ಮರುಜೋಡಣೆಗೆ ಕಾರಣವಾಗಬಹುದು. ಸೌದಿ ಅರೇಬಿಯಾವು ಚೀನಾ ಅಥವಾ ರಷ್ಯಾದಂತಹ ಇತರ ಪ್ರಮುಖ ಶಕ್ತಿಗಳೊಂದಿಗೆ ಸಂಬಂಧವನ್ನು ಬಲಪಡಿಸಲು ಪ್ರಯತ್ನಿಸಬಹುದು. ಆ ಮೂಲಕ ಮಧ್ಯಪ್ರಾಚ್ಯ ಮತ್ತು ಅದರಾಚೆಗಿನ ಭೌಗೋಳಿಕ ರಾಜಕೀಯ ಚಿತ್ರಣ ಬದಲಾಗಬಹುದು.

ತೈಲ ಮಾರುಕಟ್ಟೆ

ತೈಲ ರಫ್ತು ಮಾಡುವ ದೇಶಗಳು ತಮ್ಮ ತೈಲಕ್ಕಾಗಿ ಬಹು ಕರೆನ್ಸಿಗಳನ್ನು ಸ್ವೀಕರಿಸಲು ಪ್ರಾರಂಭಿಸಬಹುದು. ಇದು ಹೆಚ್ಚು ವೈವಿಧ್ಯಮಯ ಮತ್ತು ಹೆಚ್ಚು ಸಂಕೀರ್ಣವಾದ ತೈಲ ಮಾರುಕಟ್ಟೆಗೆ ಕಾರಣವಾಗುತ್ತದೆ. ಇದು ಜಾಗತಿಕ ತೈಲ ಬೆಲೆಗಳು ಮತ್ತು ವ್ಯಾಪಾರ ಅಭ್ಯಾಸಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈಗಾಗಲೇ ಭಾರತ ಕೆಲವು ತೈಲ ರಾಷ್ಟ್ರಗಳ ಜತೆ ಡಾಲರ್‌ ಬದಲು ರೂಪಾಯಿಯಲ್ಲೇ ವ್ಯವಹಾರ ನಡೆಸಲು ಆರಂಭಿಸಿದೆ.

Continue Reading

ಶಿಕ್ಷಣ

NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

ಅಕ್ರಮ ಆರೋಪದ ನಡುವೆಯೇ ಕೇಂದ್ರ ಸರ್ಕಾರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದೆ. ಗ್ರೇಸ್ ಅಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರು ಪರೀಕ್ಷೆ ನಡೆಸಿ ಜೂನ್ 30ರಂದು ಫಲಿತಾಂಶ (NEET UG Result 2024) ಪ್ರಕಟಿಸುವುದಾಗಿ ಘೋಷಿಸಿದೆ. ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ. ನೀಟ್‌ ವಿವಾದದ ಸಂಪೂರ್ಣ ಚಿತ್ರಣ ಇಲ್ಲಿದೆ.

VISTARANEWS.COM


on

By

NEET UG Result 2024
Koo

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG Result 2024) ಅಕ್ರಮ ನಡೆದಿದೆ ಎಂದು ನೀಟ್ ಆಕಾಂಕ್ಷಿಗಳು ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ (exam) ಗ್ರೇಸ್ ಅಂಕಗಳನ್ನು (grace marks) ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ (retest) ನಡೆಸಲು ಕೇಂದ್ರ ಸರ್ಕಾರ (central govt) ಗುರುವಾರ ಪ್ರಸ್ತಾವನೆ ಸಲ್ಲಿಸಿದೆ. ನೀಟ್ ಫಲಿತಾಂಶ ಘೋಷಣೆಯಾದ ಬಳಿಕ ಆಕಾಂಕ್ಷಿಗಳು ಮತ್ತು ಪೋಷಕರು ಕೆಲವು ಕೇಂದ್ರಗಳಲ್ಲಿ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ತನಿಖೆ ಮತ್ತು ಮರು ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ.

ನೀಟ್- ಯುಜಿ ಅನ್ನು ಮೊದಲು ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ (AIPMT) ಎಂದು ಕರೆಯಲಾಗುತ್ತಿತ್ತು. ಇದು ದೇಶದಾದ್ಯಂತ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನಡೆಯುವ ಏಕೈಕ ಪ್ರವೇಶ ಪರೀಕ್ಷೆಯಾಗಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿದಂತೆ ಹದಿಮೂರು ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸುವ ಉಸ್ತುವಾರಿ ವಹಿಸಿಕೊಂಡಿದೆ. ಈ ಹಿಂದೆ ಸೆಂಟ್ರಲ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್ (CBSE) ಇದನ್ನು ನಡೆಸುತ್ತಿತ್ತು.

ನೀಟ್ ಯುಜಿ ಫಲಿತಾಂಶಗಳ ಸುತ್ತ ವಿವಾದ

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರಿಪೂರ್ಣ ಅಂಕಗಳನ್ನು ಸಾಧಿಸಲು ಪ್ರಶ್ನೆ ಪತ್ರಿಕೆ ಸೋರಿಕೆಯೇ ಕಾರಣ ಎಂಬ ಆರೋಪಗಳೂ ಕೇಳಿ ಬಂದಿದೆ.

ನೀಟ್ ಯುಜಿ ಪರೀಕ್ಷೆ ಬರೆದ 67 ವಿದ್ಯಾರ್ಥಿಗಳು ಒಟ್ಟು 720 ಅಂಕಗಳನ್ನು ಗಳಿಸಿದ್ದಾರೆ ಎಂಬುದು ಫಲಿತಾಂಶ ತೋರಿಸಿವೆ. ಇದು ಹಿಂದಿನ ವರ್ಷಗಳ ಫಲಿತಾಂಶಗಳಿಗೆ ಹೋಲಿಸಿದರೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಪೂರ್ಣ ಅಂಕ ಗಳಿಸಿದ್ದರೆ, 2022ರಲ್ಲಿ ಮೂವರು, 2021ರಲ್ಲಿ ಇಬ್ಬರು, 2020ರಲ್ಲಿ ಒಬ್ಬರು ಮಾತ್ರ ಪೂರ್ಣ ಅಂಕ ಗಳಿಸಿದ್ದರು. ಈ ಬಾರಿ ಹರ್ಯಾಣದ ಒಂದೇ ಕೇಂದ್ರದಲ್ಲಿ ಆರು ಮಂದಿ ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಇದು ಸಂಶಯಕ್ಕೆ ಆಸ್ಪದ ಮಾಡಿ ಕೊಟ್ಟಿದೆ.


ಸುಪ್ರೀಂ ಕೋರ್ಟ್ ಹೇಳಿದ್ದೇನು?

ನೀಟ್ ಯುಜಿ 2024ರಲ್ಲಿ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಮರು ಪರೀಕ್ಷೆಯು ಜೂನ್ 23ರಂದು ನಡೆಯಲಿದೆ. ಆದರೆ ಪ್ರವೇಶ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಿಲ್ಲಿಸದಿರಲು ಸುಪ್ರೀಂ ಕೋರ್ಟ್ ಆದೇಶಿಸಿದೆ. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ.

ಜುಲೈ 6ರಂದು ಕೌನ್ಸೆಲಿಂಗ್ ಪ್ರಾರಂಭ

ಮರು ಪರೀಕ್ಷೆಯ ಫಲಿತಾಂಶವನ್ನು ಜೂನ್ 30ರಂದು ಪ್ರಕಟಿಸಲಾಗುವುದು ಮತ್ತು ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 6 ರಂದು ಕೌನ್ಸೆಲಿಂಗ್ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ಗೆ ಮೊರೆ

ನೀಟ್ ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮತ್ತು ಗ್ರೇಸ್ ಮಾರ್ಕ್‌ ಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಲು ಮರುಪರೀಕ್ಷೆಯನ್ನು ನಡೆಸುವಂತೆ ಕೋರಿ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿತ್ತು. ನ್ಯಾಯಾಧೀಶರಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಗಳನ್ನು ಆಲಿಸಿತು.

ಫಿಸಿಕ್ಸ್ ವಾಲಾ ಸಿಇಒ ಅಲಖ್ ಪಾಂಡೆ, ಅರ್ಜಿದಾರರಲ್ಲಿ ಒಬ್ಬರು ಗ್ರೇಸ್ ಅಂಕಗಳನ್ನು ನೀಡುವ ಎನ್‌ಟಿಎ ನಿರ್ಧಾರವು ನಿರಂಕುಶ ಎಂದು ವಾದಿಸಿದರು. ಅವರು ಸುಮಾರು 20,000 ವಿದ್ಯಾರ್ಥಿಗಳ ಪ್ರತಿಕ್ರಿಯೆಯನ್ನು ಸಂಗ್ರಹಿಸಿದ್ದಾರೆ. ಸುಮಾರು 70-80 ಅಂಕಗಳನ್ನು ಕನಿಷ್ಠ 1,500 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳಾಗಿ ನೀಡಿರುವುದು ಆಕ್ಷೇಪಕಾರಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಎರಡನೇ ಅರ್ಜಿಯನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಸದಸ್ಯರಾದ ಅಬ್ದುಲ್ಲಾ ಮೊಹಮ್ಮದ್ ಫೈಜ್ ಮತ್ತು ಡಾ. ಶೇಕ್ ರೋಷನ್ ಮೊಹಿದ್ದೀನ್ ಅವರು ಎನ್‌ಇಇಟಿ ಮರುಪರೀಕ್ಷೆಗೆ ವಿನಂತಿಸಿದ್ದರು. ಹಲವಾರು ವಿದ್ಯಾರ್ಥಿಗಳು ಗ್ರೇಸ್ ಅಂಕಗಳನ್ನು ಪಡೆದಿರುವುದು ಇಡೀ ನೀಟ್‌ ಪರೀಕ್ಷಾ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ ಎಂದು ಅವರು ವಾದಿಸಿದ್ದರು.

ಮೂರನೇ ಅರ್ಜಿಯನ್ನು ನೀಟ್ ಅಭ್ಯರ್ಥಿ ಜಾರಿಪಿಟಿ ಕಾರ್ತೀಕ್ ಅವರು ಸಲ್ಲಿಸಿದ್ದು, ಪರೀಕ್ಷೆಯ ಸಮಯದಲ್ಲಿ ಕಳೆದುಹೋದ ಸಮಯಕ್ಕೆ ಪರಿಹಾರವಾಗಿ ಗ್ರೇಸ್ ಅಂಕಗಳನ್ನು ನೀಡುವುದನ್ನು ಪ್ರಶ್ನಿಸಿದ್ದರು.

Continue Reading

EXPLAINER

Jagannath Temple: 4 ವರ್ಷದ ಬಳಿಕ ಜಗನ್ನಾಥ ದೇಗುಲದ ಬಾಗಿಲು ಓಪನ್;‌ ಇದಕ್ಕೂ ಬಿಜೆಪಿ ಪ್ರಣಾಳಿಕೆಗೂ ಇದೆ ಸಂಬಂಧ!

Jagannath Temple: ಕಳೆದ ನಾಲ್ಕು ವರ್ಷಗಳಿಂದ ಮುಚ್ಚಲಾಗಿದ್ದ ಒಡಿಶಾದ ಪುರಿ ಜಗನ್ನಾಥ ದೇವಾಲಯದ ಎಲ್ಲ ನಾಲ್ಕೂ ಬಾಗಿಲುಗಳನ್ನು ಗುರುವಾರ ತೆರೆಯಲಾಗಿದೆ. ಅದರಂತೆ, ಕಳೆದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಬಿಜೆಪಿಯು ಅಧಿಕಾರಕ್ಕೆ ಬರುತ್ತಲೇ ಈಡೇರಿಸಿದಂತಾಗಿದೆ. ದೇವಾಲಯದ ಬಾಗಿಲುಗಳನ್ನು ಮುಚ್ಚಿದ್ದೇಕೆ? ಇದು ಏಕೆ ಪ್ರಮುಖ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

Jagannath Temple
Koo

ಭುವನೇಶ್ವರ: ಒಡಿಶಾದ ಪುರಿಯಲ್ಲಿರುವ ವಿಶ್ವಪ್ರಸಿದ್ಧ ಜಗನ್ನಾಥ ದೇವಾಲಯದ (Jagannath Temple) ಎಲ್ಲ ನಾಲ್ಕೂ ಬಾಗಿಲುಗಳನ್ನು ಗುರುವಾರ (ಜೂನ್‌ 13) ತೆರೆಯಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಒಂದೇ ಬಾಗಿಲಿನ ಮೂಲಕ ತೆರಳಿ, ದೇವರ ದರ್ಶನ ಪಡೆಯುತ್ತಿದ್ದ ಭಕ್ತರು ಗುರುವಾರದಿಂದ ನಾಲ್ಕೂ ಬಾಗಿಲುಗಳ ಮೂಲಕ ಜಗನ್ನಾಥನ ದರ್ಶನ ಪಡೆಯಬಹುದಾಗಿದೆ. ಒಡಿಶಾದ ನೂತನ ಮುಖ್ಯಮಂತ್ರಿ ಮೋಹನ್‌ ಚರಣ್‌ ಮಾಝಿ (Mohan Charan Majhi) ಅವರ ಸಮ್ಮುಖದಲ್ಲಿ ಎಲ್ಲ ಬಾಗಿಲುಗಳನ್ನು ತೆರೆಯಲಾಗಿದೆ.

ಬಾಗಿಲುಗಳಿಗೆ ಬೀಗ ಹಾಕಿದ್ದೇಕೆ?

ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಾಲ್ಕು ವರ್ಷದ ಹಿಂದೆ ಪುರಿ ಜಗನ್ನಾಥ ದೇವಾಲಯಗಳಿಗೆ ಬೀಗ ಹಾಕಲಾಗಿತ್ತು. ಕೊರೊನಾ ಲಾಕ್‌ಡೌನ್‌, ಕೊರೊನಾ ನಿರ್ಬಂಧಗಳ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಆಗಿಸುವ ಭಕ್ತರ ಸಂಖ್ಯೆ ಗಣನೀಯವಾಗಿ ಕುಸಿದಿತ್ತು. ಇದೇ ಸಂದರ್ಭದಲ್ಲಿ ದೇವಾಲಯದ ನಾಲ್ಕು ಬಾಗಿಲುಗಳನ್ನು ಮುಚ್ಚಲಾಗಿತ್ತು. ಆದರೆ, ಕೋವಿಡ್‌ 19 ಬಿಕ್ಕಟ್ಟಿನ ಬಳಿಕವೂ, ನಿರ್ಬಂಧಗಳನ್ನು ತೆರವುಗೊಳಿಸಿದ ಬಳಿಕವೂ ನಾಲ್ಕೂ ಬಾಗಿಲುಗಳನ್ನು ತೆರೆದಿರಲಿಲ್ಲ. ಸಿಂಹದ್ವಾರದ ಮೂಲಕ ಮಾತ್ರ ಭಕ್ತರು ದೇವರು ದರ್ಶನ ಪಡೆಯುವಂತಾಗಿತ್ತು.

ಬಿಜೆಪಿ ಪ್ರಣಾಳಿಕೆಗೂ, ಇದಕ್ಕೂ ಏನು ಸಂಬಂಧ?

ಪುರಿ ಜಗನ್ನಾಥ ದೇವಾಲಯಕ್ಕೆ 12ನೇ ಶತಮಾನದ ಇತಿಹಾಸವಿದೆ. ಇದನ್ನು 12ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದು, ಭಾರತ ಸೇರಿ ದೇಶ-ವಿದೇಶಗಳಿಂದ ವರ್ಷಕ್ಕೆ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಪ್ರತಿ ವರ್ಷವು ಪುರಿ ಜಗನ್ನಾಥ ರಥಯಾತ್ರೆ ನಡೆಯುತ್ತದೆ. ಇದು ವಿಶ್ವದಲ್ಲೇ ಬೃಹತ್‌ ಹಿಂದು ಹಬ್ಬ ಅಥವಾ ಜಾತ್ರೆ ಎಂದೇ ಖ್ಯಾತಿಯಾಗಿದೆ. ಆದರೆ, ಈ ದೇವಾಲಯದ ನಾಲ್ಕೂ ದ್ವಾರಗಳನ್ನು ತೆರೆಯದೆ ಇರುವುದು ರಾಜಕೀಯ ವಿಷಯವಾಗಿ ಬದಲಾಗಿತ್ತು.

ಒಡಿಶಾ ಮುಖ್ಯಮಂತ್ರಿಯಾಗಿದ್ದ ನವೀನ್‌ ಪಟ್ನಾಯಕ್‌ ಅವರ ಆಡಳಿತದಲ್ಲಿ ನಾಲ್ಕೂ ದ್ವಾರಗಳನ್ನು ತೆಗೆಯದಿರುವ ಕುರಿತು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲ, ಬಿಜೆಪಿ ಅಧಿಕಾರಕ್ಕೆ ಬಂದರೆ ದೇವಾಲಯದ ನಾಲ್ಕೂ ಬಾಗಿಲುಗಳನ್ನು ತೆರೆಯಲಾಗುವುದು, ಕಳೆದು ಹೋಗಿರುವ ಭಂಡಾರದ ಬೀಗದ ಕೈ ಕುರಿತು ತನಿಖೆ ನಡೆಸಲಾಗುವುದು ಎಂಬುದಾಗಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿತ್ತು. ಅದರಂತೆ, ಬಿಜೆಪಿಯ ಮೋಹನ್‌ ಚರಣ್‌ ಮಾಝಿ ಅವರು ದೇವಾಲಯದ ಬಾಗಿಲುಗಳನ್ನು ತೆರೆಸುವ ಮೂಲಕ ನೀಡಿದ ಭರವಸೆಯನ್ನು ಈಡೇರಿಸಿದ್ದಾರೆ.

ದೇಗುಲದ ಬಾಗಿಲುಗಳು ಏಕೆ ಪ್ರಮುಖ?

ದೇವಾಲಯದ ನಾಲ್ಕು ದ್ವಾರಗಳು ಭಕ್ತರಿಗೆ ಪ್ರಮುಖವಾಗಿವೆ. ನಾಲ್ಕೂ ದ್ವಾರಗಳು ಒಂದೊಂದು ಪ್ರಾಣಿಯನ್ನು ಪ್ರತಿನಿಧಿಸುತ್ತವೆ. ಪೂರ್ವದಲ್ಲಿರುವ ದ್ವಾರವು ಸಿಂಹವನ್ನು ಪ್ರತಿನಿಧಿಸುವ ಕಾರಣ ಇದಕ್ಕೆ ಸಿಂಹದ್ವಾರ ಎನ್ನುತ್ತಾರೆ. ಇನ್ನು ಪಶ್ಚಿಮದಲ್ಲಿರುವ ದ್ವಾರವು ಹುಲಿಯನ್ನು ಪ್ರತಿನಿಧಿಸುವ ಕಾರಣ ಇದಕ್ಕೆ ವ್ಯಾಘ್ರದ್ವಾರ ಎಂದು ಕರೆಯುತ್ತಾರೆ. ಅದರಂತೆ, ಉತ್ತರಕ್ಕೆ ಇರುವ ದ್ವಾರವು ಆನೆಯನ್ನು ಪ್ರತಿನಿಧಿಸುವ ಕಾರಣ ಅದನ್ನು ಹಸ್ತಿದ್ವಾರ ಎಂದೂ, ದಕ್ಷಿಣಕ್ಕೆ ಇರುವ ದ್ವಾರವು ಕುದುರೆಯನ್ನು ಪ್ರತಿನಿಧಿಸುವ ಕಾರಣ ಅದನ್ನು ಅಶ್ವದ್ವಾರ ಎಂದೂ ಕರೆಯುತ್ತಾರೆ.

ಇದನ್ನೂ ಓದಿ: Best Tourist Places In Tamilnadu: ಈ ಸುಂದರ ದೇವಾಲಯಗಳ ದರ್ಶನಕ್ಕಾದರೂ ತಮಿಳುನಾಡಿಗೆ ಹೋಗಲೇಬೇಕು!

Continue Reading

ಪ್ರಮುಖ ಸುದ್ದಿ

Mandya Election Result 2024 : ಮಂಡ್ಯದಲ್ಲಿ ಕುಮಾರ ಸ್ವಾಮಿಗೆ ಭರ್ಜರಿ ಗೆಲುವು

Mandya Election Result 2024 : 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 7,03,660 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಅವರು ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆದ್ದಿದ್ದರು.

VISTARANEWS.COM


on

Mandya Election Result 2024
Koo

ಬೆಂಗಳೂರು: ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕ ಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಪಕ್ಷದ ವರಿಷ್ಠ ಎಚ್​ ಡಿ ಕುಮಾರಸ್ವಾಮಿ (8,51,881 ಮತಗಳು) ಗೆಲುವು ಸಾಧಿಸಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು (5,67.261 ಮತಗಳು) ವಿರುದ್ಧ 2,84,620 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್​ ತನ್ನ ಕ್ಷೇತ್ರವನ್ನು ಮರುವಶಪಡಿಸಿಕೊಂಡಿದೆ. ಹಿಂದಿನ ಚುನಾವಣೆಯಲ್ಲಿ ಇದನ್ನು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ನಾನಾ ರಾಜಕೀಯ ಚಟುವಟಿಕೆ ಬಳಿಕ ಗೆಲುವು ಕಂಡಿದ್ದರು.

ಎಚ್​. ಡಿ. ಕುಮಾರಸ್ವಾಮಿ (ಜೆಡಿಎಸ್​)- 8,51,881 ಮತಗಳು
ಸ್ಟಾರ್​ ಚಂದ್ರು (ಕಾಂಗ್ರೆಸ್​)- 5,67.261 ಮತಗಳು
ಗೆಲುವಿನ ಅಂತರ-2,84,620

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 7,03,660 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಅವರು ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆದ್ದಿದ್ದರು.

2018ರ ಉಪಚುನಾವಣೆಯಲ್ಲಿ ಜೆಡಿಎಸ್ ನ ಎಲ್.ಆರ್.ಶಿವರಾಮಗೌಡ 5,69,347 ಮತಗಳನ್ನು ಪಡೆದು ಗೆದ್ದಿದ್ದರು. ಬಿಜೆಪಿಯ ಡಿ.ಆರ್.ಸಿದ್ದರಾಮಯ್ಯ 2,44,404 ಹಾಗೂ ಪಕ್ಷೇತರ ಅಭ್ಯರ್ಥಿ ಎಂ.ಹೊನ್ನೇಗೌಡ 17,842 ಮತಗಳನ್ನು ಪಡೆದಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನ ರಮ್ಯಾ 4,84,085 ಮತಗಳನ್ನು ಪಡೆದು ಜಯಗಳಿಸಿದ್ದರು.

ಈ ಕ್ಷೇತ್ರವು 2009 ಮತ್ತು 2019 ರ ನಡುವೆ ಎರಡು ಉಪಚುನಾವಣೆಗಳಿಗೆ ಸಾಕ್ಷಿಯಾಗಿದೆ. 2009 ರವರೆಗೆ ಸತತ ಮೂರು ಅವಧಿಗೆ ಕನ್ನಡ ಚಲನಚಿತ್ರ ತಾರೆ ಅಂಬರೀಶ್ ಇಲ್ಲಿ ಗೆದ್ದಿದ್ದರು. ಅವರ ಪತ್ನಿ ಸುಮಲತಾ 2019 ರಲ್ಲಿ ಸ್ಪರ್ಧಿಸಿ ಗೆದ್ದರು. 2013ರಲ್ಲಿ ಜೆಡಿಎಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಚೆಲುವರಾಯಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ನಟಿ ರಮ್ಯಾ ಗೆಲುವು ಸಾಧಿಸಿದರು. 2018 ರ ಉಪಚುನಾವಣೆಯಲ್ಲಿ ಸಿ.ಎಸ್.ಪುಟ್ಟರಾಜು ರಾಜ್ಯ ವಿಧಾನಸಭೆಗೆ ಆಯ್ಕೆಯಾದ ನಂತರ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡಿತು.

ಹೇಗಿದೆ ಕ್ಷೇತ್ರ

ಮಂಡ್ಯ ಲೋಕಸಭಾ ಕ್ಷೇತ್ರವು (mandya lok sabha constituency) ಇಡೀ ಮಂಡ್ಯ ಜಿಲ್ಲೆ ಮತ್ತು ಮೈಸೂರು ಜಿಲ್ಲೆಯ ಒಂದು ಭಾಗವನ್ನು ಒಳಗೊಂಡಿದೆ. ಎಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಂಡ್ಯ ಕ್ಷೇತ್ರವು ಆರಂಭಗೊಂಡ ಬಳಿಕದಿಂದ ಶ್ರೀಮಂತ ರಾಜಕೀಯ ಇತಿಹಾಸ ಹೊಂದಿದೆ. ಮಂಡ್ಯದಲ್ಲಿ 3 ಬಾರಿ ಜೆಡಿಎಸ್ , 2 ಬಾರಿ ಜತನಾ ದಳ ಹಾಗೂ ಒಂದು ಬಾರಿ ಜನತಾ ಪಕ್ಷ ಗೆಲುವು ಸಾಧಿಸಿದೆ. ಹಿಂದಿನ ಬಾರಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿಜಯ ಕಂಡಿದ್ದರು. ಮೂಲತಃ ಮೈಸೂರು ರಾಜ್ಯದ ಭಾಗವಾಗಿದ್ದ ಮಂಡ್ಯ 1977 ರ ನಂತರ ಕರ್ನಾಟಕಕ್ಕೆ ಸೇರಿತು.

ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೃಷ್ಣರಾಜಪೇಟೆ ಮತ್ತು ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ 1 ಸ್ಥಾನಗಳನ್ನು ಹೊಂದಿವೆ.

2011ರ ಜನಗಣತಿ ಪ್ರಕಾರ ಮಂಡ್ಯದಲ್ಲಿ 1805769 ಜನಸಂಖ್ಯೆ ಇತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 70.40% – ಮಹಿಳೆಯರಲ್ಲಿ 62.54% ಮತ್ತು ಪುರುಷರಲ್ಲಿ 78.27% ಆಗಿತ್ತು. ಗ್ರಾಮೀಣ ಮತದಾರರು ಇಎಲ್ ನ 83.4% ರಷ್ಟಿದ್ದಾರೆ.

Continue Reading
Advertisement
World War 3
ಪ್ರಮುಖ ಸುದ್ದಿ5 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ7 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ7 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ8 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ8 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ9 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ9 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ9 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ9 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ10 hours ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ10 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ11 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ16 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌