Bihar politics | ಸೋನಿಯಾ ಭೇಟಿಗೆ ಸಮಯ ಕೇಳಿದ ನಿತೀಶ್‌, ಬೆಂಬಲ ನೀಡಲು ಸಿದ್ಧ ಎಂದ ಆರ್‌ಜೆಡಿ - Vistara News

ದೇಶ

Bihar politics | ಸೋನಿಯಾ ಭೇಟಿಗೆ ಸಮಯ ಕೇಳಿದ ನಿತೀಶ್‌, ಬೆಂಬಲ ನೀಡಲು ಸಿದ್ಧ ಎಂದ ಆರ್‌ಜೆಡಿ

ಬಿಹಾರದಲ್ಲಿ ಎದ್ದಿರುವ ರಾಜಕೀಯ ಬಿರುಗಾಳಿ ಹೊಸ ಸರಕಾರ ರಚನೆಗೆ ಕಾರಣವಾಗುತ್ತದಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಬಿಜೆಪಿ ಸಖ್ಯವನ್ನು ಬಿಟ್ಟು ಆರ್‌ಜೆಡಿ ಮತ್ತು ಕಾಂಗ್ರೆಸ್‌ ಜತೆ ಸೇರುವ ಪ್ರಯತ್ನದಲ್ಲಿದ್ದಾರೆ ನಿತೀಶ್‌ ಕುಮಾರ್‌.

VISTARANEWS.COM


on

bihar politics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು, ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಳ್ಳುವ ಲಕ್ಷಣಗಳು ದಟ್ಟವಾಗಿ ಗೋಚರಿಸಿವೆ. ಈ ನಡುವೆ ತನ್ನ ಸರಕಾರವನ್ನು ಉಳಿಸಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿರುವ ನಿತೀಶ್‌ ಅವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭೇಟಿಗೆ ಸಮಯ ನಿಗದಿ ಮಾಡಲು ಸೂಚಿಸಿದೆ. ಇದರ ಜತೆಗೇ ಲಾಲೂ ಪ್ರಸಾದ್‌ ನೇತೃತ್ವದ ಆರ್‌ಜೆಡಿಯು ಕೂಡಾ ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ.

ನಿತೀಶ್‌ ಕುಮಾರ್‌ ಅವರು ಕಳೆದ ಕೆಲವು ತಿಂಗಳುಗಳಿಂದ ಹಲವು ಕಾರಣಗಳಿಗಾಗಿ ಬಿಜೆಪಿ ಮೇಲೆ ತೀವ್ರವಾಗಿ ಮುನಿಸಿಕೊಂಡಿದ್ದಾರೆ. ಇದೇ ಕಾರಣಕ್ಕಾಗಿ ಕಳೆದ ೨೦ ದಿನಗಳ ಅವಧಿಯಲ್ಲಿ ಕೇಂದ್ರ ಸರಕಾರದ ಆಯೋಜನೆಯಲ್ಲಿ ನಡೆದ ನಾಲ್ಕು ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದರು. ಜುಲೈ ೧೭ರಂದು ಅಮಿತ್‌ ಶಾ ಅವರು ಕರೆದ ಸಭೆಗೆ ಹೋಗಿರಲಿಲ್ಲ. ಜುಲೈ ೧೯ರಂದು ರಾಷ್ಟ್ರಪತಿಯಾಗಿದ್ದ ರಾಮನಾಥ ಕೋವಿಂದ್‌ ಅವರ ಬೀಳ್ಕೊಡುಗೆ ಸಮಾರಂಭಕ್ಕಾಗಲೀ, ಜುಲೈ ೨೨ರಂದು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕಾಗಲೀ ಅವರು ಹೋಗಿರಲಿಲ್ಲ. ಅದೆಲ್ಲಕ್ಕಿಂತ ಮುಖ್ಯವಾಗಿ ಆಗಸ್ಟ್‌ ೭ರಂದು ನಡೆದ ನೀತಿ ಆಯೋಗದ ಸಭೆಗೆ ಅವರು ಹೋಗಲೇ ಬೇಕಿತ್ತು. ಅದಕ್ಕೂ ಗೈರು ಹಾಜರಾಗುವ ಮೂಲಕ ಕೇಂದ್ರ ಸರಕಾರ ಮತ್ತು ಬಿಜೆಪಿ ಜತೆಗಿನ ತನ್ನ ಅಸಹಕಾರವನ್ನು ಸ್ಪಷ್ಟವಾಗಿ ತೋರಿಸಿದ್ದಾರೆ.

ಹೀಗಾಗಿಯೇ ಸೋಮವಾರ ಬೆಳಗ್ಗಿನಿಂದ ಬಿಹಾರ ರಾಜಕೀಯದಲ್ಲಿನ ತಲ್ಲಣಗಳೆಲ್ಲ ಒಂದೊಂದಾಗಿ ಬಯಲಿಗೆ ಬರುತ್ತಿವೆ. ಜೆಡಿಯುವನ್ನು ವಿಭಜಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎನ್ನುವುದು ಪ್ರಧಾನ ಆರೋಪ. ಇದಕ್ಕೆ ಪೂರಕವಾಗಿ ಹಲವು ವಿದ್ಯಮಾನಗಳು ನಡೆದಿವೆ ಎನ್ನುವುದನ್ನು ಜೆಡಿಯು ಆಗಾಗ ದಾಖಲಿಸಿದೆ.

ಹೊಸ ಸರಕಾರ ರಚನೆ ಯತ್ನ
೨೪೩ ಶಾಸಕರಿರುವ ರಾಜ್ಯ ವಿಧಾನಸಭೆಯಲ್ಲಿ ೧೨೨ ಮ್ಯಾಜಿಕ್‌ ಸಂಖ್ಯೆ. ಪ್ರಸಕ್ತ ಜೆಡಿಯು ೪೩ ಮತ್ತು ಬಿಜೆಪಿ ೭೪ ಶಾಸಕರನ್ನು ಹೊಂದಿದೆ. ಜತೆಗೆ ಪಕ್ಷೇತರರ ಬೆಂಬಲದೊಂದಿಗೆ ಸರಕಾರ ಭದ್ರವಾಗಿದೆ. ಇದೇವೇಳೆ ಯುಪಿಎ ಕೂಟದಲ್ಲಿ ಆರ್‌ಜೆಡಿ ೭೫ ಶಾಸಕರು ಮತ್ತು ಕಾಂಗ್ರೆಸ್‌ ೧೯ ಶಾಸಕರನ್ನು ಹೊಂದಿದೆ.
ಒಂದು ವೇಳೆ ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಳ್ಳುವುದೇ ನಿಜವಾದರೆ ಪರ್ಯಾಯ ಸರಕಾರ ರಚನೆಗೂ ನಿತೀಶ್‌ ಕುಮಾರ್‌ ಪ್ರಯತ್ನ ನಡೆಸುತ್ತಿದ್ದಾರೆ.

ಒಂದು ಕಡೆ ನಿತೀಶ್‌ ಅವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜತೆ ಮಾತುಕತೆಗೆ ಮುಂದಾಗಿದ್ದಾರೆ. ಇನ್ನೊಂದು ಕಡೆ ಒಂದು ವೇಳೆ ಜೆಡಿಯು ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಂಡರೆ ಬೆಂಬಲ ನೀಡಲು ಸಿದ್ಧ ಎಂದು ಆರ್‌ಜೆಡಿಯ ತೇಜಸ್ವಿ ಯಾದವ್‌ ಹೇಳಿದ್ದಾರೆ. ಇದು ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಯು-ಆರ್‌ಜೆಡಿ-ಕಾಂಗ್ರೆಸ್‌ ಮೈತ್ರಿ ಸರಕಾರ ರಚನೆಯಾಗುವ ಸಾಧ್ಯತೆ ಕಡೆಗೆ ಬೆಟ್ಟು ಮಾಡಿದೆ.

ನಾಳೆ ನಿರ್ಣಾಯಕ ಸಭೆ
ಮಂಗಳವಾರ ಜೆಡಿಯು ಶಾಸಕರು, ಸಂಸದರು ಮತ್ತು ಮೇಲ್ಮನೆ ಸದಸ್ಯರ ಮಹತ್ವದ ಸಭೆಯೊಂದನ್ನು ಪಟನಾದಲ್ಲಿ ಆಯೋಜಿಸಲಾಗಿದೆ. ಎಲ್ಲರೂ ಅದಕ್ಕೆ ಬರಬೇಕು ಎಂದು ಸೂಚನೆ ನೀಡಲಾಗಿದೆ. ಈ ಸಭೆಗೆ ಎಲ್ಲ ಶಾಸಕರು ಬರುತ್ತಾರಾ ಅಥವಾ ಕೆಲವರು ಗೈರು ಹಾಜರಾಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಇದರ ನಡುವೆ ಆರ್‌ಜೆಡಿ ಕೂಡಾ ಮಂಗಳವಾರ ಸಂಜೆ ಪಟನಾದಲ್ಲಿ ತನ್ನ ಶಾಸಕರ ಸಭೆಯನ್ನು ಕರೆದಿದೆ.

ಇದರ ನಡುವೆ ಸಿಕ್ಕಿರುವ ಇನ್ನೊಂದು ಮಾಹಿತಿಯ ಪ್ರಕಾರ, ಜೆಡಿಯು ನಾಯಕ ಉಪೇಂದ್ರ ಕುಶ್ವಾಹ ಅವರು ಜುಲೈ ತಿಂಗಳ ಆರಂಭದಲ್ಲೇ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಂದರೆ ಜೆಡಿಯು ಕಳೆದ ಕೆಲವು ತಿಂಗಳುಗಳಿಂದಲೇ ಮೈತ್ರಿ ಮುರಿದುಕೊಳ್ಳುವ ಚಿಂತನೆ ನಡೆದಿರುವುದು ಸ್ಪಷ್ಟ.

ಇದನ್ನೂ ಓದಿ | ವಿಸ್ತಾರ Explainer | ಬಿಜೆಪಿ ಜತೆಗೆ ನಿತೀಶ್‌ ಕುಮಾರ್‌ ಮುನಿಸಿಗೆ ಕಾರಣಗಳೇನು? ಮುಂದೇನು ಗೇಮ್‌ ಪ್ಲ್ಯಾನ್‌?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

Reservation Row: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉದ್ಯೋಗಗಳನ್ನು ಕಾಯ್ದಿರಿಸುವುದನ್ನು ವಿರೋಧಿಸುತ್ತೇನೆ. ಯಾಕೆಂದರೆ ಮೀಸಲಾತಿ ಅವರಲ್ಲಿ ಕೀಳರಿಮೆಯನ್ನು ಸೃಷ್ಟಿಸುತ್ತದೆʼʼ ಎಂದು ಹೇಳಿದ್ದ ನೆಹರೂ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.

VISTARANEWS.COM


on

Reservation Row
Koo

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ (Reservation Row). ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ʼʼಈ ವರದಿಯು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿಯ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು ಎನ್ನುವುದಕ್ಕೆ ಸಾಕ್ಷಿ ಒದಗಿಸುತ್ತದೆʼʼ ಎಂದು ಅಮಿತ್ ಮಾಳವೀಯ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ಅಖಿಲ ಭಾರತ ಮಾಜಿ ಅಪರಾಧಿ ಬುಡಕಟ್ಟುಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ್ದ ನೆಹರೂ, ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉದ್ಯೋಗಗಳನ್ನು ಕಾಯ್ದಿರಿಸುವುದನ್ನು ವಿರೋಧಿಸುತ್ತೇನೆ. ಯಾಕೆಂದರೆ ಮೀಸಲಾತಿ ಅವರಲ್ಲಿ ಕೀಳರಿಮೆಯನ್ನು ಸೃಷ್ಟಿಸುತ್ತದೆʼʼ ಎಂದು ಹೇಳಿದ್ದರು ಎನ್ನುವುದನ್ನು ಆರ್ಕೈವಲ್ ಪತ್ರಿಕೆಯ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನು ಉಲ್ಲೇಖಿಸಿ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸಬಲೀಕರಣವನ್ನು ಕಾಂಗ್ರೆಸ್ ಐತಿಹಾಸಿಕವಾಗಿ ವಿರೋಧಿಸಿದೆ ಎಂದು ಮಾಳವೀಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್‌ನಲ್ಲಿ ಪ್ರತಿಪಾದಿಸಿದ್ದಾರೆ. “ಕಾಂಗ್ರೆಸ್ ಯಾವಾಗಲೂ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿಗಳ ಸಬಲೀಕರಣದ ವಿರುದ್ಧವಾಗಿದೆ. ಆದರೆ ಮೀಸಲಾತಿಯ ಸಾಂವಿಧಾನಿಕ ನಿಬಂಧನೆಗಳನ್ನು ಯಾರೂ ಹಾಳು ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೋಡಿಕೊಳ್ಳುತ್ತದೆʼʼ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಬಹುದೊಡ್ಡ ಹಿನ್ನಡೆ ಎದುರಾದಂತಾಗಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಪ್ರಸ್ತುತ ಜಾರಿಯಲ್ಲಿರುವ ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಹೆಚ್ಚಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದರು. “ಇಂದು ಮೀಸಲಾತಿಗೆ ಶೇ. 50ರಷ್ಟು ಮಿತಿ ಇದೆ. ನಾವು ಈ ಮಿತಿಯನ್ನು ತೆಗೆದು ಹಾಕುತ್ತೇವೆ. ಬಡವರಿಗೆ ಮೀಸಲಾತಿ ಮಿತಿಯನ್ನು ಹೆಚ್ಚಿಸುತ್ತೇವೆ ” ಎಂದು ರಾಬರೇಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್‌ ಗಾಂಧಿ ಘೋಷಿಸಿದ್ದರು.

ಪ್ರಣಾಳಿಕೆಯಲ್ಲಿಯೂ ಘೋಷಣೆ

2024ರ ಲೋಕಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ, ಎಸ್‌ಟಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯ ಶೇ. 50ರಷ್ಟು ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಇತ್ತ ಕಾಂಗ್ರೆಸ್ ಆರೋಪಗಳನ್ನು ನಿರಾಕರಿಸಿರುವ ಬಿಜೆಪಿ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಇರುವವರೆಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊನೆಗೊಳ್ಳುವುದಿಲ್ಲ ಎಂದು ಸಮರ್ಥಿಸಿಕೊಂಡಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ಜಾರಿಗೆ ತರುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕಲ್ಯಾಣ ಯೋಜನೆಗಳು ತಲುಪುವುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದೂ ಬಿಜೆಪಿ ಹೇಳಿದೆ.

Continue Reading

ದೇಶ

Maldives: ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ ಆಗಮಿಸಿದ ಮಾಲ್ಡೀವ್ಸ್ ಸಚಿವ ಮೂಸಾ ಜಮೀರ್

Maldives: ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಮಾಲ್ಡೀವ್ಸ್‌ನ ಸಚಿವ ಮೂಸಾ ಜಮೀರ್ ಅವರು ದೆಹಲಿಗೆ ಆಗಮಿಸಿದ್ದಾರೆ. ಈ ಅಧಿಕೃತ ಭೇಟಿ ವೇಳೆ ಅವರು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಭೇಟಿಯ ವೇಳೆ ಎರಡೂ ಕಡೆಯವರು ದ್ವಿಪಕ್ಷೀಯ ಸಂಬಂಧ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜತೆಗೆ ಎರಡೂ ದೇಶಗಳ ನಡುವಿನ ಸಂಬಂಧ ವೃದ್ಧಿಗಾಗಿ ಕೈಗೊಳ್ಳಬೇಕಾದ ಮಾರ್ಗಗಳ ಬಗ್ಗೆಯೂ ಮಾತುಕತೆ ನಡೆಯಲಿದೆ ಎನ್ನುವ ನಿರೀಕ್ಷೆ ಇದೆ.

VISTARANEWS.COM


on

Maldives
Koo

ನವದೆಹಲಿ: ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಮಾಲ್ಡೀವ್ಸ್ (Maldives)ನ ಸಚಿವ ಮೂಸಾ ಜಮೀರ್ (Moosa Zameer) ಅವರು ದೆಹಲಿಗೆ ಆಗಮಿಸಿದ್ದಾರೆ. ಈ ಅಧಿಕೃತ ಭೇಟಿ ವೇಳೆ ಅವರು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಲಕ್ಷದ್ವೀಪ (Lakshadweep)ಕ್ಕೆ ತೆರಳಿ ಅಲ್ಲಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಮೂಸಾ ಜಮೀರ್ ಅವರ ಭೇಟಿ ಮಹತ್ವದ್ದಾಗಲಿದೆ.

ಭೇಟಿಯ ವೇಳೆ ಎರಡೂ ಕಡೆಯವರು ದ್ವಿಪಕ್ಷೀಯ ಸಂಬಂಧ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜತೆಗೆ ಎರಡೂ ದೇಶಗಳ ನಡುವಿನ ಸಂಬಂಧ ವೃದ್ಧಿಗಾಗಿ ಕೈಗೊಳ್ಳಬೇಕಾದ ಮಾರ್ಗಗಳ ಬಗ್ಗೆಯೂ ಮಾತುಕತೆ ನಡೆಯಲಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೂಸಾ ಜಮೀರ್ ಅವರನ್ನು ಸ್ವಾಗತಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದೆ. “ಮಾಲ್ಡೀವ್ಸ್‌ನ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ. ಅವರನ್ನು ಆತ್ಮೀಯವಾಗಿ ಸ್ವಾಗತಿಸುತ್ತಿದ್ದೇವೆ. ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಚರ್ಚೆಗಳು ಮತ್ತು ನಮ್ಮ ಬಹುಮುಖಿ ಸಂಬಂಧಕ್ಕೆ ಪ್ರಚೋದನೆ ನೀಡುವ ಮಾರ್ಗಗಳ ಬಗ್ಗೆ ಮಾತುಕತೆ ನಡೆಸಲಿದ್ದೇವೆʼʼ ಎಂದು ಬರೆದುಕೊಂಡಿದೆ.

ಮಾಲ್ಡೀವ್ಸ್ ಸಚಿವರು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಸಭೆ ನಡೆಸಿ ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಹಿಂದೂ ಮಹಾಸಾಗರ ಪ್ರದೇಶದಲ್ಲಿ (IOR) ಮಾಲ್ಡೀವ್ಸ್ ಭಾರತದ ಪ್ರಮುಖ ನೆರೆಯ ರಾಷ್ಟ್ರವಾಗಿದೆ ಮತ್ತು ವಿದೇಶಾಂಗ ಸಚಿವ ಜಮೀರ್ ಅವರ ಭೇಟಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರಕ್ಕೆ ಮತ್ತಷ್ಟು ವೇಗವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಮೇ 10ರೊಳಗೆ ಮಾಲ್ಡೀವ್ಸ್‌ನಿಂದ ತನ್ನ ಮಿಲಿಟರಿ ಸಿಬ್ಬಂದಿಯನ್ನು ಹಿಂಪಡೆಯುವುದಾಗಿ ಭಾರತ ಹೇಳಿದ ನಂತರ ಈ ಬೆಳವಣಿಗೆ ನಡೆದಿದೆ. ಮೇ 3ರಂದು ಭಾರತ ಮತ್ತು ಮಾಲ್ಡೀವ್ಸ್ ದ್ವಿಪಕ್ಷೀಯ ಉನ್ನತ ಮಟ್ಟದ ಸಭೆ ನಡೆದಿತ್ತು. ಈ ವೇಳೆ ಮೇ 10ರೊಳಗೆ ದ್ವೀಪ ರಾಷ್ಟ್ರದಿಂದ ಭಾರತೀಯ ಮಿಲಿಟರಿ ಸಿಬ್ಬಂದಿಯನ್ನು ಹಿಂಪಡೆಯುವ ಬಗ್ಗೆ ಚರ್ಚೆ ನಡೆಸಲಾಗಿತ್ತು. ಇದಕ್ಕೂ ಮೊದಲು ಮೊಹಮ್ಮದ್ ಮುಯಿಝು ನೇತೃತ್ವದ ಮಾಲ್ಡೀವ್ಸ್ ಸರ್ಕಾರವು ಭಾರತವು ಮಾಲೆಯಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿತ್ತು.

ಇದನ್ನೂ ಓದಿ: Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

ಕಳೆದ ತಿಂಗಳು ಮಾಲ್ಡೀವ್ಸ್‌ನಿಂದ ಭಾರತೀಯ ಸಿಬ್ಬಂದಿಯ ಮೊದಲ ಬ್ಯಾಚ್ ಅನ್ನು ಹಿಂದಕ್ಕೆ ಕರೆಯಿಸಿಕೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿತ್ತು. ಭಾರತ ಮತ್ತು ಮಾಲ್ಡೀವ್ಸ್ ಈಗಾಗಲೇ ಎರಡು ಉನ್ನತ ಮಟ್ಟದ ಸಭೆಗಳನ್ನು ನಡೆಸಿದ್ದು, ಮೂರನೆಯದು ಶೀಘ್ರದಲ್ಲೇ ನಡೆಯುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು.

VISTARANEWS.COM


on

Sam Pitroda
Koo

ಕಳೆದ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಮ್ಮ ಹೇಳಿಕೆಗಳ ಮೂಲಕ ಹಾನಿಯೆಸಗುವ ಮಣಿಶಂಕರ ಅಯ್ಯರ್‌ ಮುಂತಾದವರ ಪರಂಪರೆಯನ್ನು ಕಾಂಗ್ರೆಸ್‌ ಪಕ್ಷದ ಭಾರತೀಯ ಸಾಗರೋತ್ತರ ವಿಭಾಗದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಮುಂದುವರಿಸುತ್ತಿರುವಂತಿದೆ. ದೇಶದ ವೈವಿಧ್ಯತೆಯ ಬಗ್ಗೆ ಮಾತನಾಡುವಾಗ ರಾಷ್ಟ್ರದ ವಿವಿಧ ಭಾಗಗಳ ಜನತೆಯನ್ನು ಚೀನಿಯರು, ಅರಬ್ಬರು, ಬಿಳಿಯರು ಮತ್ತು ಆಫ್ರಿಕನ್ನರಿಗೆ ಹೋಲಿಸಿ ಸ್ಯಾಮ್‌ ಪಿತ್ರೋಡಾ ವಿವಾದ ಹುಟ್ಟುಹಾಕಿದ್ದಾರೆ. “ಭಾರತದಲ್ಲಿ ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ. ಪಶ್ಚಿಮದಲ್ಲಿ ಜನರು ಅರಬ್ಬರಂತೆ, ಉತ್ತರದ ಜನರು ಬಹುಶಃ ಶ್ವೇತವರ್ಣೀಯರಂತೆ ಹಾಗೂ ದಕ್ಷಿಣದ ಜನರು ದಕ್ಷಿಣ ಆಫ್ರಿಕಾದವರಂತೆ ಕಾಣುತ್ತಾರೆ. ಪರವಾಗಿಲ್ಲ, ನಾವೆಲ್ಲರೂ ಸಹೋದರರು ಮತ್ತು ಸಹೋದರಿಯರು” ಎಂದು ಪಿತ್ರೋಡಾ ಹೇಳಿದ್ದಾರೆ.

ಸಹಜವಾಗಿಯೇ ಈ ಮಾತು ವಿವಾದ ಹುಟ್ಟುಹಾಕಿದೆ. ಇಂಥ ಅವಕಾಶವನ್ನು ಎಂದೂ ಕಳೆದುಕೊಳ್ಳದ ಪ್ರಧಾನಮಂತ್ರಿ ನರೇಂದ್ರ ಮೋದಿ, “ಕಪ್ಪು ಚರ್ಮ ಇರುವ ಭಾರತೀಯರು ಆಫ್ರಿಕಾದವರು ಎಂದು ಈ ʼತತ್ವಜ್ಞಾನಿ ಅಂಕಲ್‌ʼ ಹೇಳಿದ್ದಾರೆ. ಇದರರ್ಥ, ನೀವು ದೇಶದ ಹಲವಾರು ಜನರನ್ನು ಅವರ ಚರ್ಮದ ಬಣ್ಣದ ಆಧಾರದ ಮೇಲೆ ನಿಂದಿಸುತ್ತಿದ್ದೀರಿ. ಚರ್ಮದ ಬಣ್ಣದ ಆಧಾರದ ಮೇಲೆ ಭಾರತೀಯರಿಗೆ ಮಾಡುವ ಅವಮಾನವನ್ನು ಈ ದೇಶ ಸಹಿಸುವುದಿಲ್ಲ” ಎಂದು ಪಿತ್ರೋಡಾ ಮೇಲೆ ಹರಿಹಾಯ್ದಿದ್ದಾರೆ. “ಆದಿವಾಸಿ ಕುಟುಂಬದ ಮಗಳಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಪದವಿಯ ಸ್ಪರ್ಧೆಯ ವೇಳೆ ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸಿತು ಎಂದು ನಾನು ತುಂಬಾ ಯೋಚಿಸುತ್ತಿದ್ದೆ. ಇಂದು ನನಗೆ ಅದರ ಕಾರಣ ತಿಳಿಯಿತು. ಅಮೆರಿಕದಲ್ಲಿರುವ ‘ಶೆಹಜಾದಾ’ನ ಅಂಕಲ್‌ ಹಾಗೂ ಫಿಲಾಸಫಿ ಮಾರ್ಗದರ್ಶಕ (ಪಿತ್ರೋಡಾ) ಈ ‘ಶೆಹಜಾದಾ’ಗೆ ಕ್ರಿಕೆಟ್‌ನ ಮೂರನೇ ಅಂಪೈರ್‌ನಂತೆ ಸಲಹೆ ನೀಡುತ್ತಾರೆ” ಎಂದು ಕುಟುಕಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು, “ಸ್ಯಾಮ್ ಭಾಯ್, ನಾನು ಈಶಾನ್ಯದಿಂದ ಬಂದವನು ಮತ್ತು ನಾನು ಭಾರತೀಯನಂತೆ ಕಾಣುತ್ತೇನೆ. ನಮ್ಮ ದೇಶದ ಬಗ್ಗೆ ಸ್ವಲ್ಪ ತಿಳಿವಳಿಕೆ ಬೆಳೆಸಿಕೊಳ್ಳಿ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು. ಕಾಂಗ್ರೆಸ್‌ ಪಕ್ಷ ಈ ಹೇಳಿಕೆಯಿಂದ ಉಂಟಾದ ಕೋಲಾಹಲದಿಂದ ಬೆಚ್ಚಿಬಿದ್ದು, ಪಿತ್ರೋಡಾ ಹೇಳಿಕೆಯಿಂದ ಅಂತರ ಕಾಪಾಡಿಕೊಂಡಿತ್ತು.

ಪಿತ್ರೋಡಾ ಅವರು ತಮ್ಮ ಮಾತನ್ನು ವಿಶ್ಲೇಷಣೆ ಎಂದುಕೊಂಡಿರುವಂತಿದೆ. ಆದರೆ ವಿಶ್ಲೇಷಣೆಗೂ ಜನಾಂಗೀಯ ನಿಂದನೆಗೂ ಅವರು ವ್ಯತ್ಯಾಸ ಗುರುತಿಸಿಕೊಳ್ಳಬೇಕಿದೆ. ದಕ್ಷಿಣ ಭಾರತೀಯರು ತುಸು ಕಪ್ಪಗಿದ್ದಾರೆ ಸರಿ; ಅಷ್ಟಕ್ಕೇ ಅವರು ಆಫ್ರಿಕನ್ನರಿಗೆ ಸಮವೋ? ಭಾರತದಲ್ಲಿ ಅತಿ ಹೆಚ್ಚಿನ ತೆರಿಗೆ ಉತ್ಪತ್ತಿಯಾಗುವುದು, ಜಿಡಿಪಿಗೆ ಹೆಚ್ಚಿನ ಕೊಡುಗೆ ನೀಡುವವರು ದಕ್ಷಿಣ ಭಾರತೀಯರು. ಇಲ್ಲಿನ ಸಂಸ್ಕೃತಿ ಅಲ್ಲಿಗಿಂತ ವಿಭಿನ್ನ. ಪೂರ್ವಭಾಗದವರು ಚೀನೀಯರಂತೆ ಕಾಣುತ್ತಾರೆ ಎನ್ನುವ ಮೂಲಕ, ʼಅರುಣಾಚಲ ನಮ್ಮದುʼ ಎನ್ನುತ್ತಿರುವ ಚೀನಾಕ್ಕೆ ಪಿತ್ರೋಡಾ ಸಹಾಯ ಮಾಡುತ್ತಿರುವಂತಿದೆ. ಭೌಗೋಳಿಕ ಹಾಗೂ ಸಾಂಸ್ಕೃತಿಕ ಭಿನ್ನತೆಗಳು ಪ್ರತಿ ದೇಶದಲ್ಲೂ ಇದ್ದೇ ಇರುತ್ತವೆ. ಭಾರತ ವಿಶಾಲ ದೇಶವಾದುದರಿಂದ ಇಲ್ಲಿ ಹೆಚ್ಚಿನ ವೈವಿಧ್ಯವಿದೆ. ಆ ಕಾರಣಕ್ಕೇ ಇದು ಸಾಂಸ್ಕೃತಿಕವಾಗಿ ಶ್ರೀಮಂತವೂ ಆಗಿದೆ. ಇದು ಭಾರತದ ಶಕ್ತಿಯೇ ಹೊರತು, ಇನ್ನೊಂದರ ನಕಲು ಅಲ್ಲ. ನಾವು ನಮ್ಮನ್ನು ಬೇರೆ ದೇಶಗಳಿಗೆ ಚರ್ಮದ ಬಣ್ಣದಿಂದ ಹೋಲಿಸಿಕೊಳ್ಳಬೇಕಿಲ್ಲ. ಬೇಕಿದ್ದರೆ ಭೂತಾನಿನ ಆನಂದದ ಸ್ವಭಾವದ ಸೂಚ್ಯಂಕಕ್ಕೆ, ಜಪಾನಿನ ಪರಿಶ್ರಮದ ಗುಣಕ್ಕೆ, ಕೆರಿಬಿಯನ್ನರ ದೈಹಿಕ ಬಲಕ್ಕೆ ಹೋಲಿಸಿಕೊಳ್ಳೋಣ.

ಈ ಹಿಂದೆ ಮಣಿಶಂಕರ ಅಯ್ಯರ್‌ ಮುಂತಾದವರು ಹೀಗೆ ʼಸೆಲ್ಫ್‌ ಗೋಲ್‌ʼ ಅಥವಾ ʼಆತ್ಮಹತ್ಯಾ ದಾಳಿʼ ಮಾಡಿಕೊಳ್ಳುತ್ತಿದ್ದರು. ಇಂಥವರು ಸ್ವತಃ ತಮ್ಮ ಪಕ್ಷಕ್ಕೇ ತಮ್ಮ ಹೇಳಿಕೆಗಳಿಂದ ಗಂಡಾಂತರ ತಂದೊಡ್ಡುತ್ತಿರುತ್ತಾರೆ. 2017ರಲ್ಲಿ ಮಣಿಶಂಕರ ಅಯ್ಯರ್‌ ಅವರು ಮೋದಿಯವರನ್ನು ʼನೀಚʼ ಎಂದು ಕರೆದಿದ್ದರು. ಇತ್ತೀಚೆಗೆ ಅವರು ಪಾಕಿಸ್ತಾನದಲ್ಲಿ ನಿಂತು “ಭಾರತದ ಮೂರನೇ ಎರಡು ಭಾಗ ಜನ ಪಾಕ್‌ನತ್ತ ಬರಲು ಸಿದ್ಧರಿದ್ದಾರೆ” ಎಂದಿದ್ದರು. 2007ರಲ್ಲಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ʼಸಾವಿನ ಸರದಾರʼ ಎಂದು ಕರೆದಿದ್ದರು. ಇತ್ತೀಚೆಗೆ ಗುಜರಾತ್‌ ಚುನಾವಣೆ ಸಂದರ್ಭ ಮೋದಿಯವರಿಗೆ ಮಲ್ಲಿಕಾರ್ಜುನ ಖರ್ಗೆಯವರು ʼರಾವಣʼ ಎಂದಿದ್ದರು. ಆದರೆ ಇಂಥ ಹೇಳಿಕೆಗಳೆಲ್ಲ ಹೇಳಿದವರಿಗೇ ತಿರುಮಂತ್ರವಾಗಿ, ನಿಂದಿಸಲ್ಪಟ್ಟವರು ಭಾರಿ ಬಹುಮತದಿಂದ ಗೆದ್ದಿದ್ದರು. ಮತದಾರರ ಮನಶ್ಶಾಸ್ತ್ರ ಅರ್ಥ ಮಾಡಿಕೊಳ್ಳದ ಜನನಾಯಕರು ಇಂಥ ಮಾತುಗಳನ್ನು ಬಳಸುತ್ತಾರೆ. ನಂತರ ನಾಲಿಗೆ ಕಚ್ಚಿಕೊಳ್ಳುತ್ತಾರೆ. ಇದು ಅವರನ್ನೇ ಇಕ್ಕಟ್ಟಿಗೆ ಸಿಲುಕಿಸುವುದಲ್ಲದೆ, ಅವರ ಚಾರಿತ್ರ್ಯವನ್ನೂ ಹರಾಜಿಗಿಡುತ್ತದೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading

ದೇಶ

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಹಾಸ್ಟೆಲ್‌ ವಿದ್ಯಾರ್ಥಿನಿಯರ ಪ್ರಕಾರ, ಮತ್ತೊಬ್ಬ ವಿದ್ಯಾರ್ಥನಿಯು ಪ್ರತಿದಿನ ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಯುವತಿಯರು ಸ್ನಾನ ಮಾಡು ಫೋಟೊಗಳನ್ನು ತೆಗೆದು, ವಿಡಿಯೊಗಳನ್ನು ಮಾಡಿ, ತನ್ನ ಬಾಯ್‌ಫ್ರೆಂಡ್‌ಗೆ ಕಳುಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಇದಾದ ಬಳಿಕ ವಿದ್ಯಾರ್ಥಿನಿಯರು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

VISTARANEWS.COM


on

Pune
Koo

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು ಆತಂಕಕ್ಕೀಡಾಗುವಂತಾಗಿದೆ. ವಿದ್ಯಾರ್ಥಿನಿಯೊಬ್ಬಳು ವಿವಿ ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ವಿದ್ಯಾರ್ಥಿನಿಯರ ನೂರಾರು ಬೆತ್ತಲೆ ಫೋಟೊಗಳನ್ನು (Photos) ತೆಗೆದು, ವಿಡಿಯೊಗಳನ್ನು (videos) ರೆಕಾರ್ಡ್‌ ಮಾಡಿ, ಅವುಗಳನ್ನು ತನ್ನ ಬಾಯ್‌ಫ್ರೆಂಡ್‌ಗೆ ಶೇರ್‌ ಮಾಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವತಿಯ ವಿರುದ್ಧ ಕೇಸ್‌ ದಾಖಲಿಸಿದ್ದಾರೆ.

ಮೇ 5ರಂದು ಈ ಕುರಿತು ವಿದ್ಯಾರ್ಥಿಯೊಬ್ಬ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಳಿಕ ಪ್ರಕರಣ ಬಯಲಾಗಿದೆ. “ಪ್ರತಿಷ್ಠಿತ ಸಿಒಇಪಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೂರಾರು ವಿದ್ಯಾರ್ಥಿನಿಯರು ಬಾತ್‌ರೂಮ್‌ನಲ್ಲಿ ಸ್ನಾನ ಮಾಡುವಾಗ ಅವರ ಫೋಟೊಗಳನ್ನು ತೆಗೆದು, ವಿಡಿಯೊ ರೆಕಾರ್ಡ್‌ ಮಾಡಿದ್ದಾಳೆ ಎಂಬ ಭಯಾನಕ ಸಂಗತಿ ಬಯಲಾಗಿದೆ. ಇಷ್ಟಾದರೂ ವಿಶ್ವವಿದ್ಯಾಲಯವು ಪೊಲೀಸರಿಗೆ ದೂರು ನೀಡಿಲ್ಲ. ಇದರಿಂದಾಗಿ, ಗರ್ಲ್ಸ್‌ ಹಾಸ್ಟೆಲ್‌ನ ನೂರಾರು ವಿದ್ಯಾರ್ಥಿನಿಯರಿಗೆ ಆತಂಕ ಎದುರಾಗಿದೆ. ಅವರು ಹಾಸ್ಟೆಲ್‌ನಲ್ಲಿ ಇರಲು ಕೂಡ ಭಯಪಡುವಂತಾಗಿದೆ” ಎಂದು ವಿಡಿಯೊ ಪೋಸ್ಟ್ ಮಾಡಿದ್ದ. ಇದಾದ ಬಳಿಕ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ.

ಯಾವಾಗ ವಿದ್ಯಾರ್ಥಿನಿಯೊಬ್ಬಳು ಪ್ರಕರಣದ ಕುರಿತು ಪೋಸ್ಟ್‌ ಮಾಡಿದಳೋ, ಅದಾದ ಬಳಿಕ ಜನರಿಂದ ಭಾರಿ ಟೀಕೆಗಳು ವ್ಯಕ್ತವಾದವು. ಕೊನೆಗೆ ಎಚ್ಚೆತ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಪೊಲೀಸರಿಗೆ ದೂರು ನೀಡಿದೆ. ಹಾಗೆಯೇ, ಪ್ರಕರಣದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದೆ. ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಪೋಷಕರು ಕೂಡ ಪ್ರಕರಣದ ಕುರಿತು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಹಾಸ್ಟೆಲ್‌ ವಿದ್ಯಾರ್ಥಿನಿಯರ ಪ್ರಕಾರ, ಮತ್ತೊಬ್ಬ ವಿದ್ಯಾರ್ಥನಿಯು ಪ್ರತಿದಿನ ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಯುವತಿಯರು ಸ್ನಾನ ಮಾಡು ಫೋಟೊಗಳನ್ನು ತೆಗೆದು, ವಿಡಿಯೊಗಳನ್ನು ಮಾಡಿ, ತನ್ನ ಬಾಯ್‌ಫ್ರೆಂಡ್‌ಗೆ ಕಳುಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಮೇ 1ರಂದು ವಿದ್ಯಾರ್ಥಿನಿಯು ಬಾತ್‌ರೂಮ್‌ನಲ್ಲಿ ವಿಡಿಯೊ ರೆಕಾರ್ಡ್‌ ಮಾಡುವ ಕುರಿತು ಕೆಲ ವಿದ್ಯಾರ್ಥಿನಿಯರಿಗೆ ಸುಳಿವು ಸಿಕ್ಕಿದೆ. ಕೂಡಲೇ ವಿಷಯವು ಎಲ್ಲೆಡೆ ಹರಡಿದೆ. ಇದಾದ ಬಳಿಕ ಅವರು ವಿವಿ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Continue Reading
Advertisement
Jyothi Rai clarity For torturing on indecent videos
ಕಿರುತೆರೆ28 seconds ago

Jyothi Rai: ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಹೀಗಿದೆ!

IPL 2024 - Points Table
ಕ್ರೀಡೆ5 mins ago

IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

Reservation Row
Lok Sabha Election 20245 mins ago

Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

Gurpatwant Singh Pannun
ವಿದೇಶ20 mins ago

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ಭಾರತದ ಕೈವಾಡ; ಅಮೆರಿಕ ಆರೋಪಕ್ಕೆ ರಷ್ಯಾ ಟಾಂಗ್‌

Sangeeth Sivan dies Riteish Deshmukh Tusshar Kapoor pay tribute
ಮಾಲಿವುಡ್27 mins ago

Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

SRH vs LSG
ಕ್ರೀಡೆ44 mins ago

SRH vs LSG: ಬಿರುಸಿನ ಅರ್ಧಶತಕ ಬಾರಿಸಿ ಗೇಲ್​, ನರೈನ್​ ದಾಖಲೆ ಮುರಿದ ಟ್ರಾವಿಸ್ ಹೆಡ್​

bagalakote unrest
ಕ್ರೈಂ53 mins ago

Bagalakote Unrest: ಹಿಂದೂ ಯುವಕ- ಮುಸ್ಲಿಂ ಯುವತಿ ನವದಂಪತಿ ರಕ್ಷಣೆಗೆ ನಿಂತ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ಲಾಠಿಚಾರ್ಜ್‌

Do You Know
ಲೈಫ್‌ಸ್ಟೈಲ್1 hour ago

Do You Know: ನಿಮಗಿದು ಗೊತ್ತಾ? ಲವ್‌ ಮಾಡುತ್ತಿದ್ದರೆ ತೂಕ ಜಾಸ್ತಿಯಾಗುತ್ತದೆ!

hd revanna jailed prajwal revanna case
ಕ್ರೈಂ1 hour ago

Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

Nijjar Killling
ವಿದೇಶ1 hour ago

Nijjar Killing: ಒಂದೇ ದಿನದಲ್ಲಿ ಸ್ಟೂಡೆಂಟ್‌ ವೀಸಾ ಪಡೆದು ಕೆನಡಾಕ್ಕೆ ಬಂದಿದ್ನಂತೆ ನಿಜ್ಜರ್‌ ಹಂತಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌