ದ್ವೇಷ ಬಿಡಿ ಸಂಸದ ತೇಜಸ್ವಿ ಸೂರ್ಯ ಅಭಿಯಾನಕ್ಕೆ ಚಾಲನೆ - Vistara News

ಬೆಂಗಳೂರು

ದ್ವೇಷ ಬಿಡಿ ಸಂಸದ ತೇಜಸ್ವಿ ಸೂರ್ಯ ಅಭಿಯಾನಕ್ಕೆ ಚಾಲನೆ

ಸುಳ್ಯದ ಬಜರಂಗದಳ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ನಂತರ ರಾಜ್ಯಾದ್ಯಂತ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದರು. ಈ ಸಮಯದಲ್ಲಿ ಚಿಕ್ಕಮಗಳೂರಿನ ಕಾರ್ಯಕರ್ತನ ಬಳಿ ಮಾತನಾಡುವಾಗ ತೇಜಸ್ವಿ ಸೂರ್ಯ ನೀಡಿದ್ದ ಹೇಳಿಕೆ ವೈರಲ್‌ ಆಗಿತ್ತು.

VISTARANEWS.COM


on

shankara guha dwarakanath pooja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರವಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ಇತ್ತೀಚೆಗೆ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದರ ಹಿನ್ನೆಲೆಯಲ್ಲಿ ʻಧ್ವೇಷ ಬಿಡಿ ಸಂಸದ ತೇಜಸ್ವಿ ಸೂರ್ಯʼ ಅಭಿಯಾಣಕ್ಕೆ ಕಾಂಗ್ರೆಸ್‌ ಚಾಲನೆ ನೀಡಿದೆ.

ಅಭಿಯಾನದ ಆರಂಭವಾಗಿ, ಶ್ರೀನಗರದಲ್ಲಿರುವ ಕೆಪಿಸಿಸಿ ವಕ್ತಾರ ಡಾ.ಶಂಕರ್ ಗುಹಾ ದ್ವಾರಕಾನಾಥ್ ಅವರ ಕಚೇರಿಯಲ್ಲಿ ಶುಭಕೃತ್ ನಾಮ ಸಂವತ್ಸರದ ಶ್ರಾವಣ ಮಾಸದಲ್ಲಿ ಶುಕ್ಲಪಕ್ಷದ ದ್ವಾದಶಿ ತಿಥಿಯಂದು ಪಂಚ ಪುಷ್ಪಗಳಲ್ಲಿ ವಿಶೇಷವಾದ ಪಂಚದುರ್ಗಾ ಮಹಾಪೂಜೆ ನೆರವೇರಿಸಲಾಯಿತು.

ಪೂಜೆಯಲ್ಲಿ ಬಸವನಗುಡಿ ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಿದ್ದರು. ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿಸುಬ್ರಹ್ಮಣ್ಯ ಅವರಿಗೆ ಒಳ್ಳೆಯ ಮನಸ್ಸನ್ನು ದೇವರು ದಯಪಾಲಿಸಲಿ ಎಂದು ಪ್ರಾರ್ಥನೆ ಮಾಡಲಾಯಿತು.

ಇದನ್ನೂ ಓದಿ | ತೇಜಸ್ವಿ ಸೂರ್ಯ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ವಕ್ತಾರ ಡಾ.ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು ಬಂಧನ

ಕಾಂಗ್ರೆಸ್ ಸರ್ಕಾರವಿದ್ದರೆ ಕಲ್ಲು ಹೊಡೆಯಬಹುದಾಗಿತ್ತು ಎಂದು ಇತ್ತೀಚೆಗೆ ಸಂಸದರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯಿಂದ ಅಶಾಂತಿಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿತ್ತು. ಹಾಗಾಗಿ ‘Quit hatred Tejasvi Surya’ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಸಂಸದರಲ್ಲಿರುವ ದ್ವೇಷ, ಕ್ಲೇಶ, ದುಷ್ಟ ಬುದ್ಧಿಗಳು ದೂರವಾಗಲಿ, ತಮ್ಮ ಕ್ಷೇತ್ರದ ಜನರನ್ನು ಪ್ರೀತಿಯಿಂದ ಕಾಣುವಂತಾಗಲಿ ಎಂದು ಪೂಜೆ ಮಾಡಲಾಗುತ್ತಿದೆ ಎಂದು ಡಾ. ಶಂಕರ ಗುಹಾ ದ್ವಾರಕಾನಾಥ್‌ ತಿಳಿಸಿದ್ದಾರೆ. ಪೂಜೆಯ ಬಳಿಕ ಸಂಸದರಿಗೆ ಪ್ರಸಾದವನ್ನು ಕಳಿಸಿಕೊಡಲಾಗುತ್ತದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ತಿಳಿಸಿದ್ದಾರೆ.

ಇದನ್ನೂ ಓದಿ | Audio Leak | ಕಾಂಗ್ರೆಸ್ ಸರ್ಕಾರ ಆಗಿದ್ರೆ ಕಲ್ಲು ಹೊಡೆಯಬಹುದಿತ್ತು ಎಂದ ತೇಜಸ್ವಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

Child Actor Master OM: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟ ಮಾಸ್ಟರ್ ಓಂ‌, ಇದೀಗ 10ನೇ ತರಗತಿಯ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್)ನಲ್ಲಿ 97% ಅಂಕ ಗಳಿಸುವ ಮೂಲಕ ಬೆಂಗಳೂರಿನ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ.

VISTARANEWS.COM


on

ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಮತ್ತು ಬಾಲ ನಟ ಓಂ
Koo

ಬೆಂಗಳೂರು: ಕರ್ನಾಟಕ ಸೂಪರ್‌ ಟೀನ್‌ ಮಾಡೆಲ್‌ ಹಾಗೂ ಬಾಲ ನಟನಾಗಿದ್ದ (Child Actor Master OM) ಮಾಸ್ಟರ್ ಓಂ, ಇದೀಗ 10ನೇ ತರಗತಿ ಬೋರ್ಡ್‌ ಎಕ್ಸಾಂ (ಐಸಿಎಸ್‌ಇ ಸಿಲಬಸ್) ಪರೀಕ್ಷೆಯಲ್ಲಿ 97% ಅಂಕ ಗಳಿಸುವ ಮೂಲಕ ಪ್ರತಿಷ್ಠಿತ ಆಚಾರ್ಯ ಪಾಠಶಾಲೆಯ ಟಾಪರ್ಸ್‌ ಲಿಸ್ಟ್‌ಗೆ ಸೇರಿದ್ದಾನೆ. ಐಸಿಎಸ್‌ಸಿ ಸಿಲಬಸ್‌ನಲ್ಲಿ ಓದುವವರು ಕನ್ನಡವೆಂದರೇ ಕಬ್ಬಿಣದ ಕಡಲೆ ಎಂದು ಭಾವಿಸುತ್ತಾರೆ. ಆದರೆ, ಓಂ ಕನ್ನಡದಲ್ಲಿ 100 ಕ್ಕೆ 97 ಅಂಕಗಳನ್ನು ಗಳಿಸುವ ಮೂಲಕ ಇದನ್ನು ಸಾಧಿಸಿ ತೋರಿಸಿದ್ದಾನೆ. ಗಣಿತ ಹಾಗೂ ಹಿಸ್ಟರಿಯಲ್ಲಿ 100ಕ್ಕೆ 99 ಮಾರ್ಕ್ಸ್‌ ಗಳಿಸಿದ್ದಾನೆ. ಇನ್ನುಳಿದ ಎಲ್ಲಾ ವಿಷಯಗಳಲ್ಲೂ ಕ್ರಮವಾಗಿ 95, 96, 97 ಹೀಗೆ ಅತ್ಯಧಿಕ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಇದಕ್ಕೆಲ್ಲಾ ಶಾಲೆಯ ಪ್ರಾಂಶುಪಾಲರು, ಟೀಚರ್ಸ್‌ ಹಾಗೂ ಪೋಷಕರ ಸಹಕಾರವೇ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾನೆ.

ಓಂ ಸಿನಿಮಾ, ಫ್ಯಾಷನ್‌ ಜರ್ನಿ

ಮದುವೆಯ ಮಮತೆಯ ಕರೆಯೊಲೆ, ಲೀ, ವೇಷಧಾರಿ, ಪ್ರೇಮಂ, ಸಂತೋಷ-ಸಂಗೀತ, ಕಾಳಿದಾಸ ಕನ್ನಡ ಮೇಷ್ಟ್ರು, ಕಾಫಿ(ತಮಿಳು) ಸೇರಿದಂತೆ 10ಕ್ಕೂ ಹೆಚ್ಚು ಸಿನಿಮಾ, 35ಕ್ಕೂ ಅಧಿಕ ಜಾಹೀರಾತು ಮತ್ತು ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್‌ ಶೋಗಳಲ್ಲಿ ಸೆಲೆಬ್ರೆಟಿ ಶೋ ಸ್ಟಾಪರ್‌ ಆಗಿ ವಾಕ್‌ ಮಾಡಿರುವ ಓಂ ಓದಿನಲ್ಲೂ ಮುಂದಿರುವುದು ಸಿನಿಮಾ ಬಾಲ ನಟ-ನಟಿಯರಿಗೆ ಮಾದರಿಯಾಗುವಂತಿದೆ. ಇವೆಲ್ಲದರ ಜೊತೆಗೆ ಶಾಲೆಯ ಕ್ಯಾಪ್ಟನ್‌ಶಿಪ್‌ ಹಾಗೂ ತೇಜಸ್ವಿ ಸೂರ್ಯರ ಸೌತ್‌ ಸ್ಕೂಲ್‌ ಲೀಡರ್ಸ್‌ ಟೀಮ್‌ನ ಸಾಮಾಜಿಕ ಕಾರ್ಯಾಗಾರಗಳಲ್ಲೂ ಶಾಲೆಯ ಪ್ರತಿನಿಧಿಯಾಗಿ ಪಾಲ್ಗೊಂಡ ಹೆಗ್ಗಳಿಕೆ ಓಂನದು.

ಇದನ್ನೂ ಓದಿ | Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

ನಟನೆ, ಮಾಡೆಲಿಂಗ್‌ನಂಥ ಪಠ್ಯೇತರ ಚಟುವಟಿಕೆ ತನ್ನ ಓದಿಗೆ ಅಡ್ಡಿಯಾಗಲಿಲ್ಲ ಎನ್ನುವ ಓಂ, ಮುಂದಿನ ತರಗತಿಗಳಲ್ಲೂ ಉತ್ತಮ ಅಂಕ ಗಳಿಸುವ ಗುರಿ ಹೊಂದಿದ್ದಾನೆ. ಹಾಗೆಯೇ, ನಟನೆ-ಮಾಡೆಲಿಂಗ್‌ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಬಯಕೆಯನ್ನೂ ವ್ಯಕ್ತಪಡಿಸಿದ್ದಾನೆ.

Continue Reading

ಬೆಂಗಳೂರು

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

LuLu Fashion Week 2024: ಬೆಂಗಳೂರಿನ ಲುಲು ಮಾಲ್‌ನಲ್ಲಿ ಮೇ 10ರಿಂದ 12ರವರೆಗೆ ಮೂರು ದಿನಗಳವರೆಗೆ ಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿ ಆಯೋಜಿಸಲಾಗಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ವಿವಿಧ ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Koo

ಬೆಂಗಳೂರು: ನಗರದ ಲುಲು ಮಾಲ್‌ನಲ್ಲಿ ʼಲುಲು ಫ್ಯಾಷನ್ ವೀಕ್ʼ 2ನೇ ಆವೃತ್ತಿಯ (LuLu Fashion Week 2024) ಭಾಗವಾಗಿ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮವು 2ನೇ ದಿನವೂ ಅದ್ಧೂರಿಯಾಗಿ ನೆರವೇರಿತು. ಕಲರಫುಲ್ ಸಂಜೆಯಲ್ಲಿ ಮೂಡಿಬಂದ ಫ್ಯಾಷನ್ ಶೋ ನೋಡಲು ಸಾವಿರಾರು ಜನರು ಆಗಮಿಸಿದ್ದರು.

ಮೇ 10ರಂದು ಆರಂಭವಾದ ಕಾರ್ಯಕ್ರಮ ಮೇ 12 ಭಾನುವಾರದವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ. ಶನಿವಾರ ನಡೆದ ಸ್ಪ್ರಿಂಗ್‌ ಸಮ್ಮರ್‌ 2024 ಕಾರ್ಯಕ್ರಮದಲ್ಲಿ ನುವಾ, ಪೆಪೆ ಜೀನ್ಸ್ ಲಂಡನ್, ಪೀಟರ್ ಇಂಗ್ಲೆಂಡ್, ಅಮೆರಿಕನ್ ಟೂರಿಸ್ಟರ್, ಕ್ರೊಯ್ಡಾನ್ ಸೇರಿದಂತೆ ಹಲವಾರು ಬ್ರ್ಯಾಂಡ್‌ಗಳ ಫ್ಯಾಷನ್ ಶೋ ನಡೆಯಿತು. ಜೊತೆಗೆ ಬಿಗ್ ಚೋಕೋ ಡೇಸ್ ಲೋಗೋ ಲಾಂಚ್ ಮಾಡಲಾಯಿತು. ನಂತರ ಫ್ಯಾಷನ್ ಫೋರಂನಲ್ಲಿ ಭವಿಷ್ಯದ ಫ್ಯಾಷನ್ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಚಂದನವನದ ನಟ ರಿಷಿ ಭಾಗಿಯಾಗಿದ್ದರು.

ಇನ್ನು ಹಲವಾರು ಕಲೆಗಳಿಗೆ ಕಾರ್ಯಕ್ರಮ ವೇದಿಕೆಯಾಯಿತು. ವಿವಿಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಲುಲು ಮಾಲ್ ಅಂಗಳದಲ್ಲಿ ನಡೆದ ಫ್ಯಾಷನ್ ಶೋನಲ್ಲಿ ವಿಭಿನ್ನವಾದ ಬಟ್ಟೆ ತೊಟ್ಟು ನಾರಿಯರು ಕಂಗೊಳಿಸಿದರು. ವಾರಾಂತ್ಯವಾಗಿದ್ದರಿಂದ ಹೆಚ್ಚಿನ ಜನರು ಆಗಮಿಸಿದ್ದು, ಮಕ್ಕಳು ಸಹ ಖುಷಿಪಟ್ಟರು.

ಇದನ್ನೂ ಓದಿ | Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

ಒಟ್ಟಿನಲ್ಲಿ ಲುಲು ಫ್ಯಾಷನ್ ವೀಕ್ ಬಹು ಜೋರಾಗಿದ್ದು, ಪ್ಯಾಷನ್ ಶೋ ನೋಡಿ ನೆರೆದಿದ್ದ ಜನರು ಫುಲ್ ಫಿದಾ ಆಗಿದ್ದಾರೆ. ಇನ್ನು ಮೇ 12 ಭಾನುವಾರ ಫ್ಯಾಷನ್ ವೀಕ್ ಮುಕ್ತಾಯಗೊಳ್ಳಲಿದೆ.

Continue Reading

ಕರ್ನಾಟಕ

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Murder Case: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ಯವಕನ ಹತ್ಯೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕತ್ತು ಕೊಯ್ಯಲಾಗಿದೆ.

VISTARANEWS.COM


on

Murder Case
Koo

ಕಲಬುರಗಿ: ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ (Murder Case) ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ ವಿಚಾರಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ರಮಜಾನ್ ಮೆಹಬೂಬ್ ತಾರಾ (24) ಹತ್ಯೆಯಾದ ಯುವಕ. ಘಟನಾ ಸ್ಥಳಕ್ಕೆ ಅಫಜಲಪುರ ಸಿಪಿಐ ಮತ್ತು ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

14 ವರ್ಷದ ಬಾಲಕಿಯ ಅಪಹರಿಸಿ ಕೊಲೆಯತ್ನ

ಕಲಬುರಗಿ: 14 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆಯತ್ನ ಮಾಡಿರುವ ಘಟನೆ ಕಲಬುರಗಿ ನಗರದ ಮರಪಳ್ಳಿ‌ ಲೇಔಟ್‌ನಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಹಲರ್ಕಟಿ ಗ್ರಾಮದ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕತ್ತು ಕೊಯ್ಯಲಾಗಿದೆ.

ಇದನ್ನೂ ಓದಿ | Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

ಹಲರ್ಕಟಿ ಗ್ರಾಮದಿಂದ ಬಾಲಕಿಯನ್ನು ಕಲಬುರಗಿಗೆ ಕರೆದುಕೊಂಡು ಹೋಗಿದ್ದ ಕಿರಾತಕರು, ಕಲಬುರಗಿಯ ಮರಪಳ್ಳಿ‌ಲೇಔಟ್ ಬಳಿ ಕತ್ತು ಕೊಯ್ದು ಪರಾರಿಯಾಗಿದ್ದಾರೆ. ಸ್ಥಳೀಯರು ಬಾಲಕಿಯ ರಕ್ಷಣೆ ಮಾಡಿ ಕಲಬುರ್ಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರ್ಗಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Murder Case in kodagu

ಕೊಡಗು:‌ ಮದುವೆ ರದ್ದಾಗಿದ್ದಕ್ಕೆ ಕೋಪಗೊಂಡ ಪಾಗಲ್‌ ಪ್ರೇಮಿಯೊಬ್ಬ ಬಾಲಕಿಯನ್ನು ಕೊಲೆ (Murder Case) ಮಾಡಿ ರುಂಡದೊಂದಿಗೆ ಪರಾರಿ ಆಗಿದ್ದ. ಕಾಡಿನಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಶನಿವಾರ ಬಂಧಿಸಿದ್ದರು. ಆದರೆ ಆರೋಪಿ ಸಿಕ್ಕರೂ ಬಾಲಕಿಯ ರುಂಡ ಪತ್ತೆಯಾಗಿರಲಿಲ್ಲ. ಇದೀಗ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದೆ. ಬಾಲಕಿಯ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲೆ ಇರಿಸಿದ್ದ. ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಶುಕ್ರವಾರ ಇಡೀ ದಿನ ಹುಡುಕಾಡಿದ್ದರೂ ಬಾಲಕಿ ಮೀನಾಳ ತಲೆ ಸಿಕ್ಕಿರಲಿಲ್ಲ. ಇತ್ತ ಮಗಳ ತಲೆ ಸಿಗದೆ ಮೃತದೇಹದ ಅಂತ್ಯ ಸಂಸ್ಕಾರ ಮಾಡುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದರು. ಹೀಗಾಗಿ ಶನಿವಾರ ಮತ್ತೆ 40ಕ್ಕೂ ಹೆಚ್ಚು ಪೊಲೀಸರಿಂದ ಶೋಧ ಕಾರ್ಯ ನಡೆದಿದ್ದು, ಹತ್ಯೆಯಾಗಿದ್ದ ಮೀನಾ ರುಂಡ ಪತ್ತೆ ಮಾಡಿದ್ದಾರೆ. ತಲೆ ವಶಕ್ಕೆ ಪಡೆದು ಬಾಲಕಿ ಮನೆ ಬಳಿ ಮಹಜರ್‌ ನಡೆಸಿದ್ದಾರೆ.

ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ

ಕೊಡಗಿನಲ್ಲಿ ಬಾಲಕಿ ಹತ್ಯೆಯ ಸ್ಥಳ ಮಹಜರು ವೇಳೆ ವಿಚಿತ್ರ ಘಟನೆಯೂ ನಡೆದಿದೆ. ರುಂಡ ಪತ್ತೆ ಸ್ಥಳದಲ್ಲಿ ಬಾಲಕಿ ಸಹೋದರನ ಮೈಮೇಲೆ ಶಕ್ತಿ ಆವಾಹನೆ ಆದ ರೀತಿ ವರ್ತಿಸಿದ್ದಾನೆ. ರುಂಡ ಪತ್ತೆಯಾದ ಸ್ಥಳಕ್ಕೆ ಆರೋಪಿ ಪ್ರಕಾಶ್‌ ಮತ್ತು ಬಾಲಕಿ ಸಹೋದರ ಹೋದಾಗ ಏಕಾಏಕಿ ಶಕ್ತಿ ಆವಾಹನೆ ಆದಂತೆ ವರ್ತಿಸಿದ್ದಾನೆ. ಏಕಾಏಕಿ ಆತನ ವರ್ತನೆಗೆ ಪೊಲೀಸರು ಕ್ಷಣಕಾಲ ಬೆಚ್ಚಿ ಬಿದ್ದರು. ಕೂಡಲೇ ಅಲ್ಲಿದ್ದವರು ಮೀನಾಳ ಸಹೋದರನನ್ನು ಹಿಡಿದುಕೊಂಡು ಸಮಾಧಾನಪಡಿಸಿದರು.

ಏನಿದು ಪ್ರಕರಣ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

Continue Reading

ಕರ್ನಾಟಕ

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Selco India: ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ವಾರ್ಷಿಕ ಪ್ರಶಸ್ತಿಗೆ ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ ಭಾಜನರಾಗಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

VISTARANEWS.COM


on

Richard Hansen
Koo

ಬೆಂಗಳೂರು: ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು (Selco India) 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ.

ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ತಿಳಿಸಿದ್ದಾರೆ.

ರಿಚರ್ಡ್ ಹ್ಯಾನ್ಸೆನ್ ಅವರು 1984ರಿಂದ ಮೊದಲ ಬಾರಿಗೆ ಉತ್ತರ ಅಮೇರಿಕಾದ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಮೈಕ್ರೋಫೈನಾನ್ಸ್ ಪರಿಹಾರಗಳೊಂದಿಗೆ ಪಿವಿ ತಂತ್ರಜ್ಞಾನವನ್ನು ಪರಿಚಯಿಸಲು ಲಾಭರಹಿತ ಕಾರ್ಯಕ್ರಮವನ್ನು ಮುನ್ನೆಡೆಸಿದರು. ನಂತರ ಅವರು 1989 ರಲ್ಲಿ ಇದೇ ಮಾದರಿಯನ್ನು ಹೊಂಡುರಾಸ್‌ನಲ್ಲಿ ಅಮೆರಿಕದ ಇಂಧನ ಇಲಾಖೆ ಜತೆಗೆ ಒಪ್ಪಂದ ಮಾಡಿಕೊಂಡು ಪುನರಾವರ್ತಿಸಿದರು. ಈ ಕಾರ್ಯವು ಜಾಗತಿಕವಾಗಿ ಗಮನಾರ್ಹ ಪುನರಾವರ್ತನೆಗೆ ಕಾರಣವಾಯಿತು.

ಇದನ್ನೂ ಓದಿ: Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

ಪ್ರಸ್ತುತ ಎನರ್ಜಿ ಅಕ್ಸೆಸ್‌ ಫೌಂಡೇಷನ್ (www.energyaccessfoundation.org) ನ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ರಿಚರ್ಡ್ ಹ್ಯಾನ್ಸೆನ್, ಜಾಗತಿಕವಾಗಿ ಸುಸ್ಥಿರ ಶಕ್ತಿಯೆಡೆಗಿನ ಪರಿವರ್ತನೆಗೆ ಸಹಾಯ ಮಾಡುವ ಉದ್ದೇಶದಿಂದ 1993 ರಲ್ಲಿ ರಿಚರ್ಡ್ ಸೋಲುಜ್ ಇಂಕ್ (Soluz Inc.,) ಎಂಬ ಸಾಮಾಜಿಕ ಉದ್ಯಮವನ್ನು ಸ್ಥಾಪಿಸಿದರು. ಇದು ಪಿವಿ ಉತ್ಪನ್ನಗಳು ಮತ್ತು ಸಂಬಂಧಿತ ಮೈಕ್ರೋಫೈನಾನ್ಸ್ ಪರಿಹಾರಗಳನ್ನು ಪೂರೈಸುವ ಒಂದು ಅಂಗಸಂಸ್ಥೆಯಾಗಿ ಕೆಲಸ ಮಾಡುತ್ತಿದೆ.

ರಿಚರ್ಡ್ ಹ್ಯಾನ್ಸೆನ್, ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್‌ ನ್ಯಾಷನಲ್ ಡೆವಲಪ್ಮೆಂಟ್ (ಯುಎಸ್‌ಎಐಡಿ), ವಿಶ್ವ ಬ್ಯಾಂಕ್ ಮತ್ತು ಇಂಟರ್-ಅಮೆರಿಕನ್ ಅಭಿವೃದ್ಧಿ ಬ್ಯಾಂಕ್ ಸೇರಿದಂತೆ ಬಾಂಗ್ಲಾದೇಶ, ಬೊಲಿವಿಯಾ, ಡೊಮಿನಿಕನ್ ರಿಪಬ್ಲಿಕ್, ಇಥಿಯೋಪಿಯಾ, ಹೈಟಿ, ಭಾರತ, ನೇಪಾಳ, ನಿಕರಾಗುವಾ, ಫಿಲಿಪೈನ್ಸ್ ದೇಶಗಳು ಮತ್ತು ಪ್ರಮುಖ ಸಂಸ್ಥೆಗಳಿಗೆ ಸಲಹಾ ಸೇವೆಗಳನ್ನು ಒದಗಿಸಿದ್ದಾರೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

ಸೂರ್ಯಮಿತ್ರ ಪ್ರಶಸ್ತಿ

ಪ್ರತಿಷ್ಠಿತ ರಾಮೋನ್‌ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತರಾಗಿರುವ ಡಾ. ಎಚ್. ಹರೀಶ್ ಹಂದೆ ಅವರು ಸ್ಥಾಪಿಸಿ ಮುನ್ನಡೆಸುತ್ತಿರುವ ಸೆಲ್ಕೋ ಸಂಸ್ಥೆಯು ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು 2012ರಿಂದ ಕೊಡಮಾಡುತ್ತಾ ಬಂದಿದೆ. ಈ ಪ್ರಶಸ್ತಿಯನ್ನು, ಸುಸ್ಥಿರ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುವ ಹರಿಕಾರರು ಮತ್ತು ಗ್ರಾಮೀಣ ಜನತೆಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತಂದ ಅಸಾಧಾರಣ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತದೆ.

ಸೆಲ್ಕೋ ಇಂಡಿಯಾ ಸಂಸ್ಥೆ

1995ರಲ್ಲಿ ಸ್ಥಾಪಿತವಾದ ಸೆಲ್ಕೋ ಇಂಡಿಯಾ ಸಂಸ್ಥೆಯು, ಮಾನ್ಯತೆ ಪಡೆದ ಸಾಮಾಜಿಕ ಉದ್ಯಮವಾಗಿದ್ದು, ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ನವೀಕರಿಸಬಹುದಾದ ಇಂಧನ ಆಧಾರಿತ ಪರಿಹಾರಗಳನ್ನು ಒದಗಿಸುವ ಮೂಲಕ ಬಡತನ ನಿರ್ಮೂಲನೆಯಲ್ಲಿ ವಿಶಿಷ್ಟ ಮಾದರಿಯ ಕೆಲಸ ಮಾಡುತ್ತಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸೆಲ್ಕೋ ಇಂಡಿಯಾ, ದೇಶಾದ್ಯಂತ ಏಳು ರಾಜ್ಯಗಳಲ್ಲಿ ಸೌರ ಇಂಧನದ ಮೂಲಕ ಶಿಕ್ಷಣ, ಆರೋಗ್ಯ ರಕ್ಷಣೆ, ಜೀವನೋಪಾಯ ಮತ್ತು ಗ್ರಾಮೀಣಾಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

ಈ ವಲಯಗಳ ಸುಸ್ಥಿರ ಅಭಿವೃದ್ಧಿಗೆ ಬೇಕಾದ ಹಣಕಾಸು, ಕೌಶಲ್ಯಾಭಿವೃದ್ಧಿ, ಪೂರೈಕೆ ಸರಪಳಿ ಮತ್ತು ನೀತಿ-ನಿರೂಪಗಳ ಚೌಕಟ್ಟನ್ನು ಬಲಪಡಿಸುವ ಕೆಲಸಗಳ ಮೂಲಕ ಎಲ್ಲರೂ ಬಳಸಲು ಸಾಧ್ಯವಾಗುವಂತೆ ವಿಕೇಂದ್ರೀಕೃತ ಇಂಧನ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಭಾರತವು ಹೊಂದಿರುವ, ಹವಾಮಾನ ಬದಲಾವಣೆ ತಗ್ಗಿಸುವಿಕೆ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪುವ ಬದ್ಧತೆಯ ಸಂದರ್ಭದಲ್ಲಿ ಸೆಲ್ಕೋದ ಈ ಕಾರ್ಯವು ಹೆಚ್ಚು ಪ್ರಸ್ತುತವಾಗಿದೆ. ಸೆಲ್ಕೋದ ಈ ಎಲ್ಲ ಸಮಾಜಮುಖಿ ಕೆಲಸಗಳಿಗಾಗಿ ಆಶ್ಡೆನ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Advertisement
Protein Supplements
ಆರೋಗ್ಯ6 mins ago

Protein Supplements: ಪ್ರೊಟಿನ್‌ ಸಪ್ಲಿಮೆಂಟ್‌ನ ಸೈಡ್‌ ಎಫೆಕ್ಟ್‌ ಏನೇನು? ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯ ಸೂಚನೆ ಇಲ್ಲಿದೆ

Shankara Jayanti 2024
ಧಾರ್ಮಿಕ21 mins ago

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

International Nurses’s Day
ಆರೋಗ್ಯ36 mins ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ36 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ5 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ6 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ7 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು7 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು7 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್7 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ36 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು14 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌