Puneet Rajkumar | ಪುನೀತ್ ‌ಪೋಟೋ ಹಿಡಿದು ನಿಗಿ ನಿಗಿ ಬೆಂಕಿ ತುಳಿದ ಯುವಕ! - Vistara News

ಕರ್ನಾಟಕ

Puneet Rajkumar | ಪುನೀತ್ ‌ಪೋಟೋ ಹಿಡಿದು ನಿಗಿ ನಿಗಿ ಬೆಂಕಿ ತುಳಿದ ಯುವಕ!

Puneet Rajkumar | ಮೊಹರಂ ಹಬ್ಬದ ಪ್ರಯುಕ್ತ ಕೆಂಡ ಹಾಯುವಾಗ ಯುವಕನೊಬ್ಬ ತನ್ನ ನೆಚ್ಚಿನ ನಟ ಪುನೀತ್‌ ರಾಜಕುಮಾರ್‌ ಅವರ ಫೋಟೋ ಹಿಡಿದು ಕೆಂಡದ ಮೇಲೆ ಹೆಜ್ಜೆ ಹಾಕಿದ್ದು, ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

puneet fan fire
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ಪುನೀತ್ ರಾಜಕುಮಾರ್‌ (Puneet Rajkumar) ಅವರು ಇಹಲೋಕ ತ್ಯಜಿಸಿ ವರ್ಷ ಸಮೀಪಿಸುತ್ತಿದ್ದರೂ ಅವರ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ. ದೇವದುರ್ಗ ತಾಲೂಕಿನ ದೊಂಡಬಳಿ ಗ್ರಾಮದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಕೆಂಡ ಹಾಯುವಾಗ ಯುವಕನೊಬ್ಬ ಪುನೀತ್‌ ಫೋಟೋ ಹಿಡಿದು ಭಕ್ತಿ ಹಾಗೂ ಪ್ರೀತಿ ಮೆರೆದಿದ್ದಾನೆ.

ದೇವದುರ್ಗ ತಾಲೂಕಿನ ದೊಂಡಬಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಮೊಹರಂ ಹಬ್ಬದ ಪ್ರಯುಕ್ತವಾಗಿ ಕೆಂಡ ಹಾಯುವ ಪದ್ಧತಿಯನ್ನು ಆಚರಿಸಲಾಗುತ್ತಿತ್ತು. ಈ ವೇಳೆ ಯುವಕರೆಲ್ಲ ಸೇರಿ ಗೆಜ್ಜೆ ನೃತ್ಯವನ್ನೂ ಮಾಡಿದ್ದಾರೆ. ಜತೆಗೆ ಪುನೀತ್‌ ಫೋಟೋ ಹಿಡಿದು ನೃತ್ಯ ಮಾಡಿದ್ದಾರೆ.

ನೃತ್ಯದ ಬಳಿಕ ಕೆಂಡ ಹಾಯುವಾಗ ಯುವಕನೊಬ್ಬ ತನ್ನ ನೆಚ್ಚಿನ ನಟ ಪುನೀತ್‌ ರಾಜಕುಮಾರ್‌ ಅವರ ಫೋಟೋ ಹಿಡಿದು ಯಾವುದೇ ಭೀತಿ ಇಲ್ಲದೆ ನಿಧಾನವಾಗಿ ಕೆಂಡದ ಮೇಲೆ ನಡೆದಿದ್ದಾನೆ. ಈ ವಿಡಿಯೊ ಈಗ ವೈರಲ್‌ ಆಗಿದೆ.

ಇದನ್ನೂ ಓದಿ | ಸೌಹಾರ್ದ ಸಂಭ್ರಮ| ಈ ಊರಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ, ಹಿಂದೂಗಳಿಂದಲೇ ಮೊಹರಂ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru Murder : ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

Bengaluru Murder : ಪರಿಚಿತನಿಂದಲೇ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ವ್ಯಕ್ತಿಯನ್ನು ಕೊಂದು ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ಹಂತಕ ಮೋರಿಗೆ ಬಿಸಾಡಿ ಪರಾರಿ ಆಗಿದ್ದ. ಇದೀಗ ಆರೋಪಿಯನ್ನು ಬಂಧಿಸಿ, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Bengaluru murder
ಕೊಲೆ ಆರೋಪಿ ಮಾಧವ್‌ ರಾವ್‌ ಹಾಗೂ ತುಂಡಾರಿಸಿದ ಮೃತದೇಹವನ್ನು ಬ್ಯಾಗ್‌ನಲ್ಲಿ ಕೊಂಡೊಯ್ಯುತ್ತಿರುವ ದೃಶ್ಯ ಸೆರೆ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿ‌ನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್‌ ರಾಡ್‌ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿಯಾಗಿದ್ದಾನೆ.

ಥಣಿಸಂದ್ರದ ಅಂಜನಾದ್ರಿ ಲೇಔಟ್ ನಿವಾಸಿಯಾದ ಕೆ.ವಿ. ಶ್ರೀನಾಥ್‌ ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚಿಟ್‌ ಫಂಡ್‌ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ. ಹೀಗಿರುವಾಗ ಕಳೆದ ಮೇ.28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್‌ ವಾಪಸ್ ಆಗಿರಲಿಲ್ಲ. ಇದರಿಂದ ಹೆದರಿದ ಶ್ರೀನಾಥ್‌ ಪತ್ನಿ ಮೇ.29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ದಾಖಲಿಸಿದ್ದರು.

ದೂರು ದಾಖಲಿಸಿಕೊಂಡು ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಕೆ.ವಿ.ಶ್ರೀನಾಥ್ ಮೇ.28ರಂದು ಆರೋಪಿ ಮಾಧವರಾವ್ ಮನೆಗೆ ಹೋಗಿದ್ದು ಗೊತ್ತಾಗಿತ್ತು. ಕೆ.ಆರ್.ಪುರಂನ ವಿಜಿನಪುರದಲ್ಲಿರುವ ಮಾಧವರಾವ್ ಮನೆಗೆ ಶ್ರೀನಾಥ್‌ ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೆ ಒಳಗೆ ಹೋದವನು ಹೊರಗೆ ಬಂದಿರಲಿಲ್ಲ. ಜತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ವು. ಇದರಿಂದ ಮಾಧವರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿದ್ದ.

ಬಳಿಕ ಆತನ ಮೊಬೈಲ್‌ ಲೋಕೇಶನ್‌ ಪತ್ತೆ ಮಾಡಿದ ಪೊಲೀಸರಿಗೆ ಆರೋಪಿ ಆಂಧ್ರಪ್ರದೇಶದಲ್ಲಿಇದ್ದಾನೆ ಎಂದು ಗೊತ್ತಾಗಿತ್ತು. ನಂತರ ಮಾಧವರಾವ್‌ನನ್ನು ಕರೆತಂದು ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಅಸಲಿ ಕಥೆಯನ್ನು ತೆರೆದಿಟ್ಟಿದ್ದ.

Bengaluru  Murder
ತುಂಡು ತುಂಡಾಗಿ ಕತ್ತರಿಸಿದ ದೇಹಕ್ಕಾಗಿ ಹುಡುಕಾಟ

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಅಕ್ರಮ ಸಂಬಂಧದ ಶಂಕೆ

ಮಾಧವರಾವ್ ಮತ್ತು ಕೆ.ವಿ.ಶ್ರೀನಾಥ್‌ ಇಬ್ಬರು ಎರಡು ವರ್ಷದಿಂದ ಪರಿಚಯಸ್ಥರಾಗಿದ್ದರು. ಕೆ.ವಿ.ಶ್ರೀನಾಥ್ ಬಳಿ ಮಾಧವರಾವ್ 5 ಲಕ್ಷ ರೂ. ಹಣದ ಚೀಟಿ ಹಾಕಿದ್ದ. ಈ ಚೀಟಿ ಹಣದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿತ್ತು. ಚೀಟಿ ಹಣ ವಾಪಸ್ ಕೊಡುವಂತೆ ಶ್ರೀನಾಥ್‌ ಒತ್ತಾಯ ಮಾಡುತ್ತಿದ್ದ. ಅಷ್ಟಲ್ಲದೇ ಮಾಧವರಾವ್‌ ಪತ್ನಿ ಜತೆ ಶ್ರೀನಾಥ್‌ ಅಕ್ರಮ ಸಂಬಂಧವನ್ನು ಹೊಂದಿದ್ದನಂತೆ.

ಹೀಗಿರುವಾಗ ಮೇ 28ರಂದು ಬೆಳಗ್ಗೆ ಮಾಧವರಾವ್ ಮನೆಗೆ ಶ್ರೀನಾಥ್‌ ಬಂದಿದ್ದ. ಈ ವೇಳೆ ಮನೆಯಲ್ಲಿ ಇಬ್ಬರಿಗೂ ಹಣದ ವಿಚಾರಕ್ಕೆ ಗಲಾಟೆ ಆಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಲ್ಲಿ ಮಾಧವರಾವ್ ಮನೆಯಲ್ಲಿದ್ದ ಜಾಕ್ ರಾಡ್‌ನಿಂದ ಶ್ರೀನಾಥ್ ತಲೆಗೆ ಹೊಡೆದಿದ್ದ. ಕುಸಿದು ಬಿದ್ದ ಶ್ರೀನಾಥ್‌ನ ದೇಹವನ್ನು ಮಚ್ಚಿನಿಂದ ತುಂಡು ತುಂಡಾಗಿ ಕತ್ತರಿಸಿದ್ದ.

ಬಳಿಕ ಸಾಕ್ಷಿ ನಾಶ ಮಾಡಲು ಶ್ರೀನಾಥ್‌ನ ಮೃತದೇಹವನ್ನು ಮೂರು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ. ಮೊದಲಿಗೆ ಒಂದು ಬ್ಯಾಗ್ ನಂತರ ಎರಡು ಬ್ಯಾಗ್‌ಗಳಲ್ಲಿ ಮೃತದೇಹದ ತುಂಡುಗಳನ್ನು ತುಂಬಿಕೊಂಡು ಬೆಳತ್ತೂರು ಬಳಿಯ ಮೋರಿಯಲ್ಲಿ (ಪಿನಾಕಿನಿ ನದಿ) ಹಾಕಿದ್ದ. ನಂತರ ತನ್ನ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಆಂಧ್ರಪ್ರದೇಶಕ್ಕೆ ಎಸ್ಕೇಪ್ ಆಗಿದ್ದ.

ಸದ್ಯ ಕೊಲೆ ಪ್ರಕರಣವನ್ನು ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ರಾಮಮೂರ್ತಿನಗರ ಪೊಲೀಸರು ಕೊಲೆ (302) ಮತ್ತು ಸಾಕ್ಷಿ ನಾಶ(201)ರಡಿ ಕೇಸ್ ದಾಖಲು ಮಾಡಿಕೊಂಡು, ಶ್ರೀನಾಥ್‌ ಮೃತದೇಹದ ತುಂಡುಗಳಿಗೆ ಕಳೆದ ಮೂರು ದಿನದಿಂದ ಹುಡುಕಾಡುತ್ತಿದ್ದಾರೆ. ಸದ್ಯಕ್ಕೆ ಮೋರಿಯಲ್ಲಿ ಮೃತದೇಹದ ತುಂಡುಗಳು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದ್ದು, ಮಂಗಳೂರಿನಿಂದ ನುರಿತರನ್ನು ಕರೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾರ್ತಿಕ್ ಗೌಡ ಬಂಧನ

Prajwal Revanna Case: ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್‌ ಅನ್ನು ವಕೀಲ ದೇವರಾಜೇಗೌಡಗೆ ನೀಡಿದ ಆರೋಪದಲ್ಲಿ ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡನನ್ನು ಬಂಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನದ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಹಾಗೂ ಆರೋಪಿ ಕಾರ್ತಿಕ್‌ ಗೌಡ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್‌ ಅನ್ನು ವಕೀಲ ದೇವರಾಜೇಗೌಡಗೆ ನೀಡಿದ ಆರೋಪದಲ್ಲಿ ಕಾರ್ತಿಕ್ ಗೌಡನನ್ನು ಮೈಸೂರು-ಹಾಸನ ಗಡಿಭಾಗದಲ್ಲಿ ಬಂಧಿಸಲಾಗಿದೆ. ಅಲ್ಲಿಂದ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಪೆನ್‌ಡ್ರೈವ್‌ ಹಂಚಿಕೆ ಆರೋಪದಲ್ಲಿ ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಕಾರ್ತಿಕ್‌ ಗೌಡ, ಪುಟ್ಟಿ ಅಲಿಯಾಸ್ ಪುಟ್ಟರಾಜ್, ನವೀನ್ ಗೌಡ ಹಾಗೂ ಚೇತನ್ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಪೈಕಿ ನವೀನ್‌ ಗೌಡ ಹಾಗೂ ಚೇತನ್‌ನನ್ನು ಇತ್ತೀಚೆಗೆ ಎಸ್‌ಐಟಿ ಬಂಧಿಸಿತ್ತು. ಇದೀಗ ಕಾರ್ತಿಕ್‌ ಗೌಡನನ್ನು ಬಂಧಿಸಲಾಗಿದೆ.

ಇತ್ತೀಚೆಗೆ ಕಾರ್ತಿಕ್ ಗೌಡ ಅಜ್ಞಾತ ಸ್ಥಳದಲ್ಲಿದ್ದುಕೊಂಡು ವಿಡಿಯೊ ಮಾಡಿ, ಅಶ್ಲೀಲ ವಿಡಿಯೊ ಲೀಕ್ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದ. ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸವನ್ನು ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ. ಆ ಸಮಯದಲ್ಲಿ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೊ ರಿಲೀಸ್ ಮಾಡಬಾರದು ಎಂದು ಅಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದರು. ನಿನ್ನ ಬಳಿ ಇರುವ ವಿಡಿಯೊ, ಫೋಟೊಗಳನ್ನು ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ದೇವರಾಜೇಗೌಡ ಕೇಳಿದ್ದರು. ಅವರನ್ನು ನಂಬಿ ನನ್ನ ಬಳಿಯಿದ್ದ ವಿಡಿಯೊದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದ.

ಇದನ್ನೂ ಓದಿ | Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ವಿಡಿಯೊವನ್ನು ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತೂ ನಾನು ವಿಡಿಯೊ ಕೊಟ್ಟಿಲ್ಲ. ಕಾಂಗ್ರೆಸ್‌ನವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ ಡ್ರೈವ್ ಅನ್ನು ಯಾರು ಹಂಚಿದರೋ ಗೊತ್ತಿಲ್ಲ ಎಂದು ಕಾರ್ತಿಕ್‌ ಹೇಳಿದ್ದ. ನಂತರ ವಕೀಲ ದೇವರಾಜೇಗೌಡರನ್ನು ಎಸ್‌ಐಟಿ ಬಂಧಿಸಿತ್ತು. ಇದೀಗ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಗೌಡನನ್ನು ಬಂಧಿಸಲಾಗಿದೆ.

ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Prajwal Revanna Case

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಹಣ ಸಹಾಯ ಮಾಡಿದ ಆರೋಪದಡಿ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್ ನೀಡಿದೆ. ಸಹಾಯ ಮಾಡುವ ಜತೆಗೆ ಇಲ್ಲಿನ ವಿದ್ಯಾಮಾನಗಳನ್ನು ಗರ್ಲ್ ಫ್ರೆಂಡ್ ಅಪ್ ಡೇಟ್ ಮಾಡುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಬಂದಿರಲಿಲ್ಲ. ಆರ್ಥಿಕವಾಗಿ ಕಟ್ಟಿ ಹಾಕಲು ಅವರ ಬ್ಯಾಂಕ್ ಅಕೌಂಟ್‌ಗಳನ್ನು ಸೀಜ್‌ ಮಾಡಲು ಎಸ್ಐಟಿ ಮುಂದಾಗಿತ್ತು. ತನಿಖೆ ವೇಳೆ ಪ್ರಜ್ವಲ್‌ಗೆ ಹಣ ವರ್ಗಾವಣೆ ಮಾಡಿದ ಅಕೌಂಟ್‌ಗಳ ಮೇಲೆಯೂ ನಿಗಾ ಇಡಲಾಗಿತ್ತು. ಆದರೆ ಪ್ರಜ್ವಲ್‌ಗೆ ಗರ್ಲ್ ಫ್ರೆಂಡ್ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Bhavani Revanna: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ ಹೇಳಿದ್ದೇನು?

ಹೊಳೆನರಸೀಪುರದ ನಿವಾಸದಲ್ಲಿ ಸ್ಥಳ ಮಹಜರು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸ್ಥಳ ಮಹಜರು ನಡೆಸಲು ಪ್ರಜ್ವಲ್‌ ರೇವಣ್ಣ ಅವರನ್ನು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇದಕ್ಕಾಗಿ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕ್ಯಾಮೆರಾಗಳಿಗೂ ಕಾಣದಂತೆ ಪ್ರಜ್ವಲ್‌ ರೇವಣ್ಣ ಅವರನ್ನು ಕರೆದೊಯ್ಯಲಾಗಿದೆ.

ನಾನು ಯಾರನ್ನೂ ಕರೆದುಕೊಂಡು ಬರಲು ಹೇಳಿಲ್ಲ: ಭವಾನಿ

ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನಾನು ಸಂತ್ರಸ್ತೆಯನ್ನು ಕರೆದುಕೊಂಡು ಬರಲು ಹೇಳಿಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಶುಕ್ರವಾರ ನಾಲ್ಕು ಗಂಟೆಗಳ ಕಾಲ ಭವಾನಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪುನಃ ವಿಚಾರಣೆಗೆ ಕರೆದಾಗ ಬರುವಂತೆ ಸೂಚಿಸಲಾಗಿದೆ. ಇಂದು ಮತ್ತೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಮಗನ ರಕ್ಷಣೆಗೆ ಯತ್ನಿಸಿ ಇಕ್ಕಟ್ಟಿಗೆ ಸಿಲುಕಿದ ತಾಯಿ

ಮಗ ಪ್ರಜ್ವಲ್‌ ರೇವಣ್ಣ ರಕ್ಷಣೆಗೆ ಯತ್ನಿಸಿ ತಾಯಿ ಭವಾನಿ ರೇವಣ್ಣ ಇಕ್ಕಟ್ಟಿಗೆ ಸಿಲುಕಿದ್ದಾರೆ. ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ತಾಯಿ-ಮಗನ ವಿಚಾರಣೆ ತೀವ್ರಗೊಂಡಿದೆ. ಎಷ್ಟೇ ವಿಚಾರಣೆ ನಡೆಸಿದರೂ ಇಬ್ಬರೂ ಸೂಕ್ತ ಉತ್ತರ ನೀಡುತ್ತಿಲ್ಲ. ಒಂದೇ ಕಡೆ ಇದ್ದರೂ ತಾಯಿ-ಮಗನ ಭೇಟಿ ಅವಕಾಶ ನೀಡಿಲ್ಲ.

ಇದನ್ನೂ ಓದಿ | Prajwal Revanna Case: ರೇವಣ್ಣ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್‌ 14ಕ್ಕೆ ಮುಂದೂಡಿಕೆ

ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಒಂದೂವರೆ ತಿಂಗಳಿನಿಂದ ಮಗನ ಮುಖ ತಾಯಿ ನೋಡಿಲ್ಲ. ನೆನ್ನೆ ಎಸ್ಐಟಿ ಕಚೇರಿಗೆ ಬಂದರೂ ಮಗನ ಮುಖ ನೋಡಲಾಗದ ಪರಿಸ್ಥಿತಿ ಇತ್ತು. ಹೀಗಾಗಿ ವಿಚಾರಣೆ ಮುಗಿಸಿ ಭವಾನಿ ರೇವಣ್ಣ‌ ವಾಪಸ್ ಆಗಿದ್ದರು.

Continue Reading

ಚಾಮರಾಜನಗರ

Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

Self Harming : ದುಷ್ಟನೊಬ್ಬ ಮಗಳ ನಗ್ನ ಫೋಟೋ ತೋರಿಸಿ ಬೆದರಿಸುತ್ತಿದ್ದ ಎಂದು ಹೆದರಿ ಮರ್ಯಾದೆಗೆ ಅಂಜಿದ ಕುಟುಂಬವೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಕುಟುಂಬದ ಯಜಮಾನ ಮೃತಪಟ್ಟರೆ, ಉಳಿದ ಮೂವರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

VISTARANEWS.COM


on

By

Self Harming
Koo

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಚಂದಗಾಲು ಗ್ರಾಮದ ಮಹದೇವನಾಯಕ (65) ಅವರ ಪುತ್ರಿ ರಿಷಿಕಾ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಇತ್ತೀಚೆಗೆ ಆತನಿಂದ ಅಂತರ ಕಾಯ್ದುಕೊಂಡಾಗ ರಿಷಿಕಾಳ ಜತೆಗಿದ್ದ ನಗ್ನ ವಿಡಿಯೊ ಹಾಗೂ ಫೋಟೋ ಇಟ್ಟುಕೊಂಡು ಬೆದರಿಕೆ (Black mail Case) ಹಾಕುತ್ತಿದ್ದ ಎನ್ನಲಾಗಿದೆ.

ಈ ವಿಚಾರವಾಗಿ ಅನೇಕ ಬಾರಿ ಯುವಕನ ಹಾಗು ರಿಷಿಕಾ ಕುಟುಂಬದ ಜತೆ ಗಲಾಟೆ ಸಹ ಆಗಿದೆ. ಈತನ ಕಾಟಕ್ಕೆ ಬೇಸತ್ತ ಕುಟುಂಬ, ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ರಿಷಿಕಾಳನ್ನು ಹನೂರು ತಾಲೂಕಿನ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ತಾಯಿ ಗೌರಮ್ಮ ಹಾಗೂ ಲೀಲಾವತಿಗೆ ಹೆಚ್ಚಿನ ಚಿಕಿತ್ಸೆಗೆಂದು ಕೊಳ್ಳೇಗಾಲದಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ರಿಷಿಕಾ ತಂದೆ ಮಹದೇವನಾಯಕ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

MM Hills

ಮಾದಪ್ಪನ ದರ್ಶನ ಮಾಡಿ ವಿಷ ಸೇವಿಸಿದ ಕುಟುಂಬ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ನಾಲ್ವರು ವಿಷ ಸೇವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟರೆ, ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಲೆಮಹದೇಶ್ವರ ಬೆಟ್ಟ (MM Hills) ವ್ಯಾಪ್ತಿಯ ತಾಳಬೆಟ್ಟದಲ್ಲಿ ಘಟನೆ ನಡೆದಿತ್ತು.

ಚಂದಗಾಲು ಗ್ರಾಮದ ಮಹದೇವನಾಯಕ (65) ಮೃತ ದುರ್ದೈವಿ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ(60), ರಿಷಿತಾ (21), ಲೀಲಾವತಿ (45) ಎಂಬುವವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮೈಸೂರಿನ ಕೆಆರ್‌ನಗರ ತಾಲೂಕಿನ ಚಂದಗಾಲು ಗ್ರಾಮಸ್ಥರು ಎಂದು ತಿಳಿದು ಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹದೇವನಾಯಕ ವಿಷ ಸೇವಿಸಿದ ಕೂಡಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇತ್ತ ಗೌರಮ್ಮ, ಲೀಲಾವತಿ, ರಿಷಿತಾ ವಿಷ ಸೇವನೆ ಮಾಡಿದ್ದಾರೆ. ಆದರೆ ದೇಹದಲ್ಲಿ ಉರಿ ಕಾಣಿಸಿಕೊಂಡು ಜೋರಾಗಿ ಕೂಗಿಕೊಂಡು ನರಳಾಡಿದ್ದಾರೆ.

ಈ ವೇಳೆ ತಾಳ ಬೆಟ್ಟದಲ್ಲಿದ್ದ ಸ್ಥಳೀಯರು ಪರಿಶೀಲನೆ ನಡೆಸಿದಾಗ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ಕಂಡು ಬಂದಿದೆ. ಕೂಡಲೇ ಅಲ್ಲಿದ್ದವರು ನಾಲ್ವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಮಹದೇವನಾಯಕರಿಗೆ ವಿಷ ದೇಹದೊಳಗೆ ಸೇರಿದ್ದರಿಂದ ಅದಾಗಲೇ ಉಸಿರು ಚೆಲ್ಲಿದ್ದರು. ಸದ್ಯ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Prajwal Revanna Case: ವಿದೇಶಕ್ಕೆ ಪರಾರಿಯಾದ ಪ್ರಜ್ವಲ್‌ಗೆ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೋಟಿಸ್‌ ನೀಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಹಣ ಸಹಾಯ ಮಾಡಿದ ಆರೋಪದಡಿ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್ ನೀಡಿದೆ. ಸಹಾಯ ಮಾಡುವ ಜತೆಗೆ ಇಲ್ಲಿನ ವಿದ್ಯಾಮಾನಗಳನ್ನು ಗರ್ಲ್ ಫ್ರೆಂಡ್ ಅಪ್ ಡೇಟ್ ಮಾಡುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಬಂದಿರಲಿಲ್ಲ. ಆರ್ಥಿಕವಾಗಿ ಕಟ್ಟಿ ಹಾಕಲು ಅವರ ಬ್ಯಾಂಕ್ ಅಕೌಂಟ್‌ಗಳನ್ನು ಸೀಜ್‌ ಮಾಡಲು ಎಸ್ಐಟಿ ಮುಂದಾಗಿತ್ತು. ತನಿಖೆ ವೇಳೆ ಪ್ರಜ್ವಲ್‌ಗೆ ಹಣ ವರ್ಗಾವಣೆ ಮಾಡಿದ ಅಕೌಂಟ್‌ಗಳ ಮೇಲೆಯೂ ನಿಗಾ ಇಡಲಾಗಿತ್ತು. ಆದರೆ ಪ್ರಜ್ವಲ್‌ಗೆ ಗರ್ಲ್ ಫ್ರೆಂಡ್ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Bhavani Revanna: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ ಹೇಳಿದ್ದೇನು?

ಹೊಳೆನರಸೀಪುರದ ನಿವಾಸದಲ್ಲಿ ಸ್ಥಳ ಮಹಜರು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸ್ಥಳ ಮಹಜರು ನಡೆಸಲು ಪ್ರಜ್ವಲ್‌ ರೇವಣ್ಣ ಅವರನ್ನು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇದಕ್ಕಾಗಿ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕ್ಯಾಮೆರಾಗಳಿಗೂ ಕಾಣದಂತೆ ಪ್ರಜ್ವಲ್‌ ರೇವಣ್ಣ ಅವರನ್ನು ಕರೆದೊಯ್ಯಲಾಗಿದೆ.

ನಾನು ಯಾರನ್ನೂ ಕರೆದುಕೊಂಡು ಬರಲು ಹೇಳಿಲ್ಲ: ಭವಾನಿ

ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನಾನು ಸಂತ್ರಸ್ತೆಯನ್ನು ಕರೆದುಕೊಂಡು ಬರಲು ಹೇಳಿಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಶುಕ್ರವಾರ ನಾಲ್ಕು ಗಂಟೆಗಳ ಕಾಲ ಭವಾನಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪುನಃ ವಿಚಾರಣೆಗೆ ಕರೆದಾಗ ಬರುವಂತೆ ಸೂಚಿಸಲಾಗಿದೆ. ಇಂದು ಮತ್ತೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಮಗನ ರಕ್ಷಣೆಗೆ ಯತ್ನಿಸಿ ಇಕ್ಕಟ್ಟಿಗೆ ಸಿಲುಕಿದ ತಾಯಿ

ಮಗ ಪ್ರಜ್ವಲ್‌ ರೇವಣ್ಣ ರಕ್ಷಣೆಗೆ ಯತ್ನಿಸಿ ತಾಯಿ ಭವಾನಿ ರೇವಣ್ಣ ಇಕ್ಕಟ್ಟಿಗೆ ಸಿಲುಕಿದ್ದಾರೆ. ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ತಾಯಿ-ಮಗನ ವಿಚಾರಣೆ ತೀವ್ರಗೊಂಡಿದೆ. ಎಷ್ಟೇ ವಿಚಾರಣೆ ನಡೆಸಿದರೂ ಇಬ್ಬರೂ ಸೂಕ್ತ ಉತ್ತರ ನೀಡುತ್ತಿಲ್ಲ. ಒಂದೇ ಕಡೆ ಇದ್ದರೂ ತಾಯಿ-ಮಗನ ಭೇಟಿ ಅವಕಾಶ ನೀಡಿಲ್ಲ.

ಇದನ್ನೂ ಓದಿ | Prajwal Revanna Case: ರೇವಣ್ಣ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್‌ 14ಕ್ಕೆ ಮುಂದೂಡಿಕೆ

ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಒಂದೂವರೆ ತಿಂಗಳಿನಿಂದ ಮಗನ ಮುಖ ತಾಯಿ ನೋಡಿಲ್ಲ. ನೆನ್ನೆ ಎಸ್ಐಟಿ ಕಚೇರಿಗೆ ಬಂದರೂ ಮಗನ ಮುಖ ನೋಡಲಾಗದ ಪರಿಸ್ಥಿತಿ ಇತ್ತು. ಹೀಗಾಗಿ ವಿಚಾರಣೆ ಮುಗಿಸಿ ಭವಾನಿ ರೇವಣ್ಣ‌ ವಾಪಸ್ ಆಗಿದ್ದರು.

Continue Reading
Advertisement
Kangana Ranaut
ದೇಶ4 mins ago

Kangana Ranaut: ಕಾರಣ ಇದ್ದರೆ ಕೊಲೆ, ಅತ್ಯಾಚಾರ ಮಾಡಬಹುದೆ? ; ವಿರೋಧಿಗಳ ವಿರುದ್ಧ ಗುಡುಗಿದ ಕಂಗನಾ

Bengaluru murder
ಬೆಂಗಳೂರು14 mins ago

Bengaluru Murder : ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

Prajwal Revanna Case
ಕರ್ನಾಟಕ25 mins ago

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾರ್ತಿಕ್ ಗೌಡ ಬಂಧನ

IND vs PAK
ಕ್ರೀಡೆ27 mins ago

IND vs PAK: ಪಾಕ್​ ವಿರುದ್ಧ ಈ ಬಾರಿಯೂ ಮರುಕಳಿಸಲಿ ಕೊಹ್ಲಿಯ ಬ್ಯಾಟಿಂಗ್​ ಗತವೈಭವ

Rahul Gandhi
ಪ್ರಮುಖ ಸುದ್ದಿ33 mins ago

Rahul Gandhi: ರಾಹುಲ್‌ ಗಾಂಧಿಯೇ ಪ್ರತಿಪಕ್ಷ ನಾಯಕ; ಕಾಂಗ್ರೆಸ್‌ ಮಹತ್ವದ ತೀರ್ಮಾನ

Narendra Modi
ದೇಶ55 mins ago

Elon Musk: ಹ್ಯಾಟ್ರಿಕ್‌ ಸರದಾರ ನರೇಂದ್ರ ಮೋದಿಗೆ ಎಲಾನ್‌ ಮಸ್ಕ್ ಅಭಿನಂದನೆ

Nikhil Kumaraswamy will stay on Kannada Film industry
ಸ್ಯಾಂಡಲ್ ವುಡ್56 mins ago

Nikhil Kumaraswamy: ಚಿತ್ರರಂಗದಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಅಷ್ಟೇ ಎಂದ ನಿಖಿಲ್ ಕುಮಾರಸ್ವಾಮಿ

Nitish Kumar
Lok Sabha Election 20241 hour ago

Nitish Kumar: ಇಂಡಿ ಒಕ್ಕೂಟದ ಸಂಚಾಲಕ ಹುದ್ದೆ ನೀಡಲು ನಿರಾಕರಿಸಿದ್ದ ನಿತೀಶ್ ಕುಮಾರ್‌ಗೆ ಈಗ ಪ್ರಧಾನಿಯ ಆಫರ್!

NEET 2024
ಪ್ರಮುಖ ಸುದ್ದಿ1 hour ago

NEET 2024: ನೀಟ್‌ ಅಕ್ರಮ; 1,500 ವಿದ್ಯಾರ್ಥಿಗಳ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಸಮಿತಿ ರಚಿಸಿದ ಕೇಂದ್ರ!

IND vs PAK
ಕ್ರೀಡೆ1 hour ago

IND vs PAK: ಇಂಡೋ-ಪಾಕ್ ಟಿ20 ವಿಶ್ವಕಪ್​ ಕೌತುಕ; ಹೇಗಿದೆ ಇತ್ತಂಡಗಳ ದಾಖಲೆ? 

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ21 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ23 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌