ಬೊಮ್ಮಾಯಿ ನೇತೃತ್ವದಲ್ಲಿ 50 ಸೀಟೂ ಬರಲ್ಲ ಎಂದು ಯಾರೂ ಹೇಳಿಲ್ಲ ಎಂದ ಕತ್ತಿ - Vistara News

ಕರ್ನಾಟಕ

ಬೊಮ್ಮಾಯಿ ನೇತೃತ್ವದಲ್ಲಿ 50 ಸೀಟೂ ಬರಲ್ಲ ಎಂದು ಯಾರೂ ಹೇಳಿಲ್ಲ ಎಂದ ಕತ್ತಿ

ಯಾವಾಗ ಮಾತನಾಡಿದರೂ ನಾನು ಸಿಎಂ ಆಗ್ತೇನೆ ಎಂದೇ ಹೇಳುವ ಉಮೇಶ್‌ ಕತ್ತಿ ಅವರು ಈ ಬಾರಿ ಸ್ವಲ್ಪ ಬದಲಾಗಿದ್ದಾರೆ. ಮಂತ್ರಿ ಆಗೋ ಆಸೆಯೇನೋ ಇದೆ. ಆದರೆ, ಬೊಮ್ಮಾಯಿ ಅವರು ಸಿಎಂ ಆಗಿರೋವರೆಗೆ ಆಸೆಪಡೊಲ್ಲ ಎಂದಿದ್ದಾರೆ.

VISTARANEWS.COM


on

Umesh katti
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೊದರೆ ಐವತ್ತು ಸೀಟೂ ಬರಲ್ಲ ಎಂದು ಯಾವ ಶಾಸಕನೂ ಹೇಳಿಲ್ಲ… ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಕೂಡಾ ಸಿಎಂ ಆಕಾಂಕ್ಷಿ ಎಂಬ ತಮ್ಮ ಹಳೆ ಡಯಲಾಗನ್ನು ಪುನರುಚ್ಚರಿಸಿದರು. ʻʻಈಗಲೂ ಹೇಳ್ತೀನಿ, ನಾನು ಸಿಎಂ ಆಕಾಂಕ್ಷಿ. 75 ವರ್ಷಕ್ಕೂ ನಾನು ಆಕಾಂಕ್ಷಿ. ನಸೀಬು ಇದ್ರೆ ನಾಳೆನೇ ಸಿಎಂ ಆಗಬಹುದು.. 15 ವರ್ಷ ಆದ್ಮೇಲೆಯೂ ಸಿಎಂ ಸೀಟ್ ಬರಬಹುದು..ʼʼ ಎಂದರು ಕತ್ತಿ. ಆದರೆ, ಈಗ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿಯನ್ನು ಕಿತ್ತು ಹಾಕಿ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಕೇಳುವವ ನಾನಲ್ಲ ಎಂದರು. ʻʻನನಗೆ ಇನ್ನೂ ೧೫ ವರ್ಷದ ಅವಕಾಶವಿದೆ. ಹಾಗಾಗಿ ಅವಸರವೇನೂ ಇಲ್ಲʼʼ ಎಂದರು ೬೧ ವರ್ಷದ ಉಮೇಶ್‌ ಕತ್ತಿ.

ʻʻಬೊಮ್ಮಾಯಿ ಉತ್ತಮ ಆಡಳಿತ ನೀಡ್ತಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆʼʼ ಎಂದು ಸ್ಪಷ್ಟಪಡಿಸಿದ ಅವರು, ಅಮಿತ್‌ ಶಾ ಅವರು ಮೊನ್ನೆ ಬಂದಿದ್ದು ಖಾಸಗಿ ಕಾರ್ಯಕ್ರಮಕ್ಕೆ, ಡೇರಿ ಉದ್ಘಾಟನೆಗೆ ಅಂತ ನನಗೆ ಗೊತ್ತು. ಹೆಚ್ಚಿನ ಮಾಹಿತಿ ನಿಮಗೇ ಇರಬಹುದುʼ ಎಂದರು.

…ʻʻಬೊಮ್ಮಾಯಿ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರಲ್ಲೇ ಅಸಮಾಧಾನ ಇದೆ ಎಂಬುದು ಸರಿಯಲ್ಲ. ನಾವ್ಯಾರೂ ಆ ತರ ಹೇಳಿಲ್ಲ. ಶಾಸಕರಂತೂ ಹೇಳೇ ಇಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿʼʼ ಎಂದು ಗರಂ ಆದರು ಕತ್ತಿ. ಬೊಮ್ಮಾಯಿ ಅವರ ನೇತೃತ್ವದಲ್ಲೇ ಚುನಾವಣೆ ನಡೆದರೆ ಐವತ್ತು ಸೀಟು ಬರಲ್ಲ ಎಂದು ಶಾಸಕರು ಹೇಳಿದ್ದಾರೆ ಎಂಬುದು ಕೂಡಾ ಸುಳ್ಳು ಎನ್ನುವುದು ಕತ್ತಿ ಮಾತು.

ಅಪ್ಪನಂತ ಕಾರ್ಯಕ್ರಮ ಮಾಡ್ತೀವಿ..
ಸಿದ್ದರಾಮೋತ್ಸವ ಕಂಡು ಬಿಜೆಪಿ ನಾಯಕರಿಗೆ ನಡುಕ ಹುಟ್ಟಿದೆ ಎಂಬ ಅಭಿಪ್ರಾಯಗಳಿಗೆ ಉತ್ತರಿಸಿದ ಅವರು, ʻʻನಮಗ್ಯಾಕ್ರಿ ನಡುಕ ಹುಟ್ಟತದರೀ.. ಸಿದ್ದರಾಮಯ್ಯನ ಅಪ್ಪನಂತ ಕಾರ್ಯಕ್ರಮ ಹಿಂದೆಯೂ ಮಾಡಿದ್ದೇವೆ.. ಮುಂದೆಯೂ ಮಾಡ್ತೇವೆ..ʼʼ ಎಂದರು ಉಮೇಶ್‌. ʻʻಕಾರ್ಯಕ್ರಮ ರೂಪಿಸುವ ಬಗ್ಗೆ ಪಕ್ಷ ಚಿಂತನೆ ನಡೆಸಲಿದೆ. ಪಕ್ಷದ ಅಧ್ಯಕ್ಷರಿದ್ದಾರೆ.. ಅವರು ಚಿಂತನೆ ಮಾಡ್ತಾರೆ. ಅವರು ಏನು ಮಾರ್ಗದರ್ಶ ಮಾಡ್ತಾರೋ ಹಾಗೆ ನಾವು ಮಾಡ್ತೇವೆʼʼ ಎಂದರು.

ಸಿಗಬಹುದು ನೋಡೋಣ
ಮತ್ತೆ ಮತ್ತೆ ಸಿಎಂ ವಿಚಾರಕ್ಕೇ ಬರುವ ಉಮೇಶ್‌ ಕತ್ತಿ, ʻʻನನಗೆ ಸಿಎಂ ಆಗೋ ಅವಕಾಶ ಸಿಕ್ಕೇ ಸಿಗುತ್ತೆ. ನಾನು 9 ಬಾರಿ ಎಂಎಲ್‌ಎ ಆದೋನು. ಈ ಅವಧಿಯಲ್ಲಿ ಸಿಎಂ ಸ್ಥಾನದ ಬೇಡಿಕೆ ಇಲ್ಲ.. ಈಗ ಸಿಗಬೇಕು ಅಂತಾ ಆಸೆ ಇಲ್ಲ.. ನಮ್ಮವರೆ ಮುಖ್ಯಮಂತ್ರಿ ಇದ್ದಾರೆ, ಉತ್ತರ ಕರ್ನಾಟಕದವರೇ ಸಿಎಂ ಇದ್ದಾರೆ. ಹೀಗಾಗಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಡೊಲ್ಲ. ಇನ್ನು 15 ವರ್ಷ ಟೈಂ ಇದೆ, ಮುಂದೆ‌ ಸಿಗಬಹುದಾ ನೋಡೋಣʼʼ ಎಂದರು ಕತ್ತಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿತು. ಇದಾದ ಕೆಲ ಹೊತ್ತಿನಲ್ಲೇ, ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿಯೇ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದರು. ಇನ್ನು ಪ್ರಜ್ವಲ್‌ ರೇವಣ್ಣ ಕೂಡ ವಿದೇಶದಿಂದ ಬಂದು ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅಶ್ಲೀಲ ವಿಡಿಯೊಗಳು, ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ಸೇರಿ ದೇಶಾದ್ಯಂತ ಸುದ್ದಿಯಾಗಿರುವ ಪೆನ್‌ಡ್ರೈವ್‌ ಕೇಸ್‌ನಲ್ಲಿ (Pendrive Case) ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪುತ್ರ ಎಸ್‌ಐಟಿ ವಶಕ್ಕೆ ಸೇರಿದ್ದು, ಪ್ರಕರಣಕ್ಕೆ ಮಹತ್ವದ ತಿರುವೊಂದು ಸಿಕ್ಕಿದೆ. ಇದರ ಬೆನ್ನಲ್ಲೇ‌, ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಕೂಡ ಭಾರತಕ್ಕೆ ಬಂದು ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ.

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಕುರಿತು ಪ್ರಕ್ರಿಯೆ ಮುಗಿಸುವ ಅವರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಿದ್ದಾರೆ. ಆದಾಗ್ಯೂ, ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಕಾರಣ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆ ಬಳಿಕ ವಿಚಾರಣೆ ನಡೆಸಲಿದ್ದಾರೆ. ಇಲ್ಲವೇ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಹಂಗೇರಿಯಲ್ಲಿ ಪ್ರಜ್ವಲ್?‌

ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಪಾಸ್‌ಪೋರ್ಟ್‌ ಎಂಟ್ರಿ ಮಾಹಿತಿಯ ಮೇರೆಗೆ ಒಂದಷ್ಟು ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್‌ಪೋರ್ಟ್‌ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣ ಬುಡಾಫೆಸ್ಟ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್‌ ರೇವಣ್ಣ ಪತ್ತೆಗೆ ಕಸರತ್ತು ನಡೆಸುತ್ತಿರುವ ಎಸ್‌ಐಟಿ ಅಧಿಕಾರಗಳು, ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಮನವಿ ಕೂಡ ಮಾಡಿದ್ದಾರೆ.

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

ಇದನ್ನೂ ಓದಿ: HD Revanna: ಮಾಜಿ ಪ್ರಧಾನಿ ಪುತ್ರ ಎಚ್‌.ಡಿ.ರೇವಣ್ಣ ಬಂಧನ; ಮುಂದೇನಾಗಲಿದೆ? ಪ್ರಕ್ರಿಯೆ ಏನು?

Continue Reading

ಕರ್ನಾಟಕ

Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

Drown In River: ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಮೃತಪಟ್ಟಿದ್ದಾನೆ.

VISTARANEWS.COM


on

Drown in River
Koo

ವಿಜಯನಗರ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕುರಿಗಾಹಿ ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿ ನಡೆದಿದೆ.

ಕೊಟ್ಟೂರು ತಾಲೂಕು ಹರಾಳು ಗ್ರಾಮದ ಅಂಜಿನಪ್ಪ (26) ಮೃತಪಟ್ಟ ಕುರಿಗಾಹಿ. ತುಂಗಭದ್ರಾ ನದಿ ದಂಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ ಈಜಲು ನದಿಗೆ ಇಳಿದಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

ಸಿಸಿಬಿ ಅಧಿಕಾರಿಗಳ ಕಂಡು ಡಿಸಿಪಿ ಕಚೇರಿಯಿಂದ ರೌಡಿಶೀಟರ್‌ ಒಂಟೆ ರೋಹಿತ್‌ ಎಸ್ಕೇಪ್‌

Rowdy sheeter camel Rohit escapes from DCPs office after ccb officials spotted him

ಬೆಂಗಳೂರು: ಉತ್ತರ ವಿಭಾಗ ಡಿಸಿಪಿ ಕಚೇರಿಯಿಂದ ರೌಡಿಶೀಟರ್‌ವೊಬ್ಬ (Rowdy Sheeter) ಪೊಲೀಸ್‌ರಿಂದ ತಪ್ಪಿಸಿಕೊಂಡಿದ್ದಾನೆ. ರೋಹಿತ್‌ ಅಲಿಯಾಸ್‌ ಒಂಟೆ ರೋಹಿತ್‌ ಎಸ್ಕೇಪ್ ಆದವನು. 110 ಸೆಕ್ಷನ್ ಬಾಂಡ್ ಹಾಕಲು ಸುಬ್ರಹ್ಮಣ್ಯ ನಗರ ಠಾಣೆ ರೌಡಿಶೀಟರ್ ಆಗಿರುವ ಒಂಟೆ ರೋಹಿತ್‌ನನ್ನು ಕರೆಸಿಕೊಂಡಿದ್ದರು. ಒಂದು ವಾರದ ಹಿಂದೆ ಠಾಣೆಗೆ ಕರೆಸಿಕೊಂಡಿದ್ದ ಪೊಲೀಸರು ಇಂದು ಠಾಣೆಯಿಂದ ಡಿಸಿಪಿ ಮುಂದೆ ಕರೆದೊಯ್ದಿದ್ದರು.

ಇತ್ತ ಒಂಟೆ ರೋಹಿತ್‌ಗಾಗಿ ಹುಡುಕಾಟ ನಡೆಸುತ್ತಿದ್ದ ಸಿಸಿಬಿ ಪೊಲೀಸರು, ಮುಂಚೆಯೇ ಡಿಸಿಪಿ ಕಚೇರಿ ಬಳಿ ಕಾಯುತ್ತಿದ್ದರು. ಸಿಸಿಬಿ ಪೊಲೀಸರನ್ನು ನೋಡಿದ ಕೂಡಲೇ ಒಂಟೆ ರೋಹಿತ್‌ ಸುಬ್ರಹ್ಮಣ್ಯ ನಗರ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೇಪ್‌ ಆಗಿದ್ದಾನೆ.

ಈ ಒಂಟೆ ರೋಹಿತ್‌, ಸೈಲೆಂಟ್ ಸುನಿಲ್ ಅಸೋಸಿಯೇಟ್ ಆಗಿದ್ದ. ಕೊಲೆ, ಕೊಲೆ ಯತ್ನ ಸೇರಿ ಹಲವು ಕೇಸಿನಲ್ಲಿ ಫಿಟ್ ಆಗಿದ್ದ. ಸದ್ಯ‌ ಪೊಲೀಸರ ಕೈಯಿಂದ ಎಸ್ಕೇಪ್ ಆಗಿರುವ ಒಂಟೆ ರೋಹಿತ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

ಏನಿದು 110 ಸೆಕ್ಷನ್‌

ಬೆಂಗಳೂರಿನಲ್ಲಿ ಕ್ರೈಂ ರೇಟ್‌ ಹೆಚ್ಚಾಗುತ್ತಲೇ ಇದೆ. ಅಪರಾಧ ಕೃತ್ಯಗಳನ್ನು ತಡೆಯಲು ಆಗದಷ್ಟು ಪೊಲೀಸರು ಕೈ ಚೆಲ್ಲಿ ಕುಳಿತಂತೆ ಇದೆ. ಸದ್ಯ ರೌಡಿಗಳ ಪಾಲಿಗೆ ದುಸ್ವಪ್ನವಾಗಿರುವ ಸೆಕ್ಷನ್‌ 110 ಪ್ರಕಾರ ಪೊಲೀಸರು ರೌಡಿಗಳಿಂದ ತಾವು ಯಾವುದೇ ಅಪರಾಧಿ ಚಟುವಟಿಕೆಗಳಲ್ಲಿ ಭಾಗವಹಿಸೋದಿಲ್ಲ ಎಂದು ಬಾಂಡ್ ಬರೆಸಿಕೊಳ್ಳುತ್ತಾರೆ.

ಈ ಮೊದಲು ಕೂಡ ಬಾಂಡ್ ಬರೆಸಿಕೊಂಡು ಸುಮ್ಮನೆ ಇರುತ್ತಿದ್ದರು. ಅದರ ಕಾರ್ಯ ರೂಪ‌ ಮಾತ್ರ ಆಗುತ್ತಿರಲಿಲ್ಲ. ಪೊಲೀಸರು ಕೂಡಾ ಇಷ್ಟು ದಿನ ಸುಮ್ಮನೆ ಇದ್ದರು. ಆದರೆ ನಗರದಲ್ಲಿ ಕ್ರೈಂ ರೇಟ್ ಹೆಚ್ಚಾಗುತ್ತಿರುವುದರಿಂದ ಈ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಈ ಬಾಂಡಿನಲ್ಲಿ ರೌಡಿಗಳಿಂದ 3-5ಲಕ್ಷದವರೆಗೆ ಕುಟುಂಬ ಸಮೇತವಾಗಿ ಬಾಂಡ್ ಬರೆಸಿಕೊಳ್ಳಲಾಗುತ್ತದೆ. ರೌಡಿಶೀಟರ್‌ ಬಾಂಡ್​ಗೆ ಸಹಿ ಹಾಕಿದ ಮೇಲೆ ಕೊಲೆ, ಕಳ್ಳತನ, ದರೋಡೆಯಂತಹ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ. ಒಂದು ವೇಳೆ ಬಾಂಡ್ ಮೀರಿ ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಅಂಥ ಆರೋಪಿಗಳನ್ನು ನ್ಯಾಯಾಧೀಶರ ‌ಮುಂದೆ ಹಾಜರು ಪಡಿಸುವ ಅಗತ್ಯ ಇಲ್ಲ. ಬದಲಿಗೆ ಯಾವುದೇ ರೀತಿಯ ಕೇಸ್ ದಾಖಲಿಸದಯೇ ಡಿಸಿಪಿ ಅಧಿಕಾರಿ ಉಪಯೋಗಿಸಿ ನೇರವಾಗಿ 3ರಿಂದ 10 ತಿಂಗಳವರೆಗೆ ಜೈಲಿಗೆ ಅಟ್ಟಬಹುದು.

Continue Reading

ದಾವಣಗೆರೆ

Lok Sabha Election: ಚುನಾವಣೆಯಲ್ಲಿ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ್ ಮನವಿ

Lok Sabha Election 2024: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಮನೂರು, ನಿಟ್ಟುವಳ್ಳಿಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ನಡೆಸಿ, ಮತಯಾಚನೆ ಮಾಡಿದರು.ಈ ಬಾರಿಯ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ, ಗೆಲ್ಲಿಸುವಂತೆ ಮತದಾರರಲ್ಲಿ ಅವರು ಮನವಿ ಮಾಡಿದರು.

VISTARANEWS.COM


on

Davanagere lok sabha constituency bjp candidate gayatri siddeshwar election campaign
Koo

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧೆಡೆ ಸಾವಿರಾರು ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ನಡೆಸಿ, ಮತಯಾಚನೆ (Lok Sabha Election 2024) ನಡೆಸಿದರು. ಈ ಬಾರಿಯ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ, ಗೆಲ್ಲಿಸುವಂತೆ ಮತದಾರರಲ್ಲಿ ಅವರು ಮನವಿ ಮಾಡಿದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಮನೂರು, ನಿಟ್ಟುವಳ್ಳಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ಹೆಚ್ಚಿನ ಮತಗಳ ಅಂತರದಿಂದ ತಮ್ಮನ್ನು ಗೆಲ್ಲಿಸುವಂತೆ ಕೋರಿದರು.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

ಈ ವೇಳೆ ಶಾಮನೂರು, ನಿಟ್ಟುವಳ್ಳಿಯಲ್ಲಿ ಸ್ಥಳೀಯರು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ಲೊಕಿಕೆರೆ ನಾಗರಾಜ್, ಸಂಕೋಳ್, ಚಂದ್ರಶೇಖರ್‌, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್‌, ಗ್ಯಾರಿಳಿ ಶಿವಕುಮಾರ್, ವೀರೇಶ್, ಚಂದ್ರಪ್ಪ, ಗೌಡರು ಚನ್ನಪ್ಪ, ಯುವರಾಜ್, ರಾಜು, ಬುದಳ್ ನಿಂಗರಾಜ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

HD Revanna: ಮಾಜಿ ಪ್ರಧಾನಿ ಪುತ್ರ ಎಚ್‌.ಡಿ.ರೇವಣ್ಣ ಬಂಧನ; ಮುಂದೇನಾಗಲಿದೆ? ಪ್ರಕ್ರಿಯೆ ಏನು?

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿತು. ಇದಾದ ಕೆಲ ಹೊತ್ತಿನಲ್ಲೇ, ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿಯೇ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದರು. ಬಂಧನದ ನಂತರ ಪ್ರಕ್ರಿಯೆಗಳ ಕುರಿತ ವಿವರ ಇಲ್ಲಿದೆ.

VISTARANEWS.COM


on

HD Revanna
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅಶ್ಲೀಲ ವಿಡಿಯೊಗಳು, ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ಸೇರಿ ದೇಶಾದ್ಯಂತ ಸುದ್ದಿಯಾಗಿರುವ ಪೆನ್‌ಡ್ರೈವ್‌ ಕೇಸ್‌ನಲ್ಲಿ (Pendrive Case) ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪುತ್ರ ಎಸ್‌ಐಟಿ ವಶಕ್ಕೆ ಸೇರಿದ್ದು, ಪ್ರಕರಣಕ್ಕೆ ಮಹತ್ವದ ತಿರುವೊಂದು ಸಿಕ್ಕಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಕುರಿತು ಪ್ರಕ್ರಿಯೆ ಮುಗಿಸುವ ಅವರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಿದ್ದಾರೆ. ಆದಾಗ್ಯೂ, ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಕಾರಣ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆ ಬಳಿಕ ವಿಚಾರಣೆ ನಡೆಸಲಿದ್ದಾರೆ. ಇಲ್ಲವೇ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಎಚ್‌.ಡಿ.ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಎಸ್‌ಐಟಿ ಅಧಿಕಾರಿಗಳು, ಆರೋಪಿಯ ವಿಚಾರಣೆಗಾಗಿ ವಶಕ್ಕೆ ನೀಡಬೇಕು ಎಂಬುದಾಗಿ ಮನವಿ ಮಾಡಲಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೂ ಪತ್ತೆಯಾಗಿರುವುದರಿಂದ, ಪ್ರಕರಣದ ಗಾಂಭೀರ್ಯವನ್ನು ಅರಿತು ವಿಚಾರಣೆಗಾಗಿ ಕಸ್ಟಡಿಗೆ ನೀಡಬೇಕು ಎಂಬುದಾಗಿ ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Continue Reading
Advertisement
HD Revanna
ಕರ್ನಾಟಕ5 mins ago

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Drown in River
ಕರ್ನಾಟಕ13 mins ago

Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

Champions Trophy
ಪ್ರಮುಖ ಸುದ್ದಿ15 mins ago

Champions Trophy : ಭಾರತ ಕ್ರಿಕೆಟ್​ ತಂಡಕ್ಕೆ ಬೆದರಿಕೆ ಒಡ್ಡಿದ ಪಾಕಿಸ್ತಾನದ ಮಾಜಿ ಆಟಗಾರ

Davanagere lok sabha constituency bjp candidate gayatri siddeshwar election campaign
ದಾವಣಗೆರೆ24 mins ago

Lok Sabha Election: ಚುನಾವಣೆಯಲ್ಲಿ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ್ ಮನವಿ

HD Revanna
ಕರ್ನಾಟಕ29 mins ago

HD Revanna: ಮಾಜಿ ಪ್ರಧಾನಿ ಪುತ್ರ ಎಚ್‌.ಡಿ.ರೇವಣ್ಣ ಬಂಧನ; ಮುಂದೇನಾಗಲಿದೆ? ಪ್ರಕ್ರಿಯೆ ಏನು?

Prajwal Revanna Case
ಕರ್ನಾಟಕ47 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Village Administrative Officer
ಪ್ರಮುಖ ಸುದ್ದಿ1 hour ago

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Lok Sabha Election
Latest1 hour ago

Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಎಚ್‌.ಡಿ.ರೇವಣ್ಣಗಿಲ್ಲ ನಿರೀಕ್ಷಣಾ ಜಾಮೀನು; ಬಂಧಿಸಲು ಸಿದ್ಧವಾದ ಎಸ್‌ಐಟಿ!

Physical abuse
ಮೈಸೂರು2 hours ago

Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌