8th Pay Commission| ಎಂಟನೇ ವೇತನ ಆಯೋಗ ಈ ವರ್ಷ ಇಲ್ಲ, 2026ಕ್ಕೆ ಮುಂದಿನ ಆಯೋಗ ಸಾಧ್ಯತೆ - Vistara News

ಉದ್ಯೋಗ

8th Pay Commission| ಎಂಟನೇ ವೇತನ ಆಯೋಗ ಈ ವರ್ಷ ಇಲ್ಲ, 2026ಕ್ಕೆ ಮುಂದಿನ ಆಯೋಗ ಸಾಧ್ಯತೆ

ಸರ್ಕಾರ 8ನೇ ವೇತನ ಆಯೋಗ ರಚನೆಯ ( 8th Pay Commission) ಪ್ರಸ್ತಾಪ ಸದ್ಯಕ್ಕಿಲ್ಲ ಎಂದಿದ್ದರೂ, ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಹಣದುಬ್ಬರ ಆಧರಿಸಿ 6 ತಿಂಗಳಿಗೊಮ್ಮೆ ತುಟ್ಟಿ ಭತ್ಯೆ (DA) ಪರಿಷ್ಕರಣೆ ನಡೆಯುತ್ತಿದೆ ಎಂದು ರಾಜ್ಯಸಭೆಗೆ ಸಚಿವ ಪಂಕಜ್‌ ಚೌಧುರಿ ತಿಳಿಸಿದ್ದಾರೆ. ಹೀಗಾಗಿ ಸದ್ಯಕ್ಕೆ ಉದ್ಯೋಗಿಗಳಿಗೆ ಡಿಎ ಪರಿಷ್ಕರಣೆ ಸಿಗಲಿದೆ. ವೇತನದ ಶ್ರೇಣಿ ಪರಿಷ್ಕರಣೆಗೆ ಕಾಯಬೇಕು.

VISTARANEWS.COM


on

pay commission
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ೮ನೇ ವೇತನ ಆಯೋಗವನ್ನು (8th Pay Commission) ರಚಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಪರಿಶೀಲನೆಯಲ್ಲಿ ಇಲ್ಲ ಎಂದು ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್‌ ಚೌಧುರಿ ರಾಜ್ಯಸಭೆಗೆ ಸೋಮವಾರ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಮುಂದಿನ ವೇತನ ಆಯೋಗ ಯಾವಾಗ ರಚನೆಯಾಗಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ. ಇದರೊಂದಿಗೆ ೨೦೨೨ರಲ್ಲಿ ೮ನೇ ವೇತನ ಆಯೋಗ ರಚನೆಯ ಪ್ರಶ್ನೆ ಅಪ್ರಸ್ತುತವಾಗಿದೆ. ಹೊಸ ವೇತನ ಆಯೋಗ ಸ್ಥಾಪನೆಯಾದ ಬಳಿಕ ಅದರ ಶಿಫಾರಸುಗಳು ಜಾರಿಯಾಗಲು ಎರಡು ವರ್ಷ ಬೇಕಾಗುತ್ತದೆ. ಹೀಗಾಗಿ ಬಹುಶಃ ೨೦೨೬ರ ವೇಳೆಗೆ ಹೊಸ ವೇತನ ಆಯೋಗ ರಚನೆಯಾಗುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ ೭ನೇ ವೇತನ ಆಯೋಗವನ್ನು ೨೦೧೪ರ ಫೆಬ್ರವರಿ ೨೮ರಂದು ರಚಿಸಿತ್ತು. ಹಾಗೂ ಇದರ ಶಿಫಾರಸುಗಳು ೨೦೧೬ರ ಜನವರಿ ೧ರಿಂದ ಜಾರಿಯಾಗಿತ್ತು.

ಎಂಟನೇ ವೇತನ ಆಯೋಗದ ಶಿಫಾರಸುಗಳನ್ನು ೨೦೨೬ರ ಜನವರಿ ೧ರಿಂದ ಜಾರಿಯಾಗುವಂತೆ ನೋಡಿಕೊಳ್ಳುವ ಸಲುವಾಗಿ ಹೊಸ ಆಯೋಗ ರಚನೆಯ ಪ್ರಸ್ತಾಪ ಸರ್ಕಾರದ ಮುಂದೆ ಇದೆಯೇ ಎಂಬ ಪ್ರಶ್ನೆಗೆ ಸಚಿವ ಪಂಕಜ್‌ ಚೌಧುರಿ ಉತ್ತರಿಸುತ್ತಾ, ಈ ವರ್ಷ ಅಂಥ ಪ್ರಸ್ತಾಪ ಸರ್ಕಾರದ ಪರಿಶೀಲನೆಯಲ್ಲಿ ಇಲ್ಲ ಎಂದಿದ್ದಾರೆ.

೬ ತಿಂಗಳಿಗೊಮ್ಮೆ ತುಟ್ಟಿಭತ್ಯೆ ಪರಿಷ್ಕರಣೆ ( Dearness allowances): ಹಣದುಬ್ಬರ ಅಥವಾ ಬೆಲೆ ಏರಿಕೆಯ ಪರಿಣಾಮ, ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ತಮ್ಮ ವೇತನದ ನೈಜ ಮೌಲ್ಯ ಕಡಿಮೆಯಾಗದಂತೆ ನೋಡಿಕೊಳ್ಳಲು, ಹಣದುಬ್ಬರಕ್ಕೆ ತಕ್ಕಂತೆ ತುಟ್ಟಿಭತ್ಯೆಯನ್ನು ನೀಡಲಾಗುತ್ತದೆ. ಹಾಗೂ ಅದನ್ನು ಪ್ರತಿ ೬ ತಿಂಗಳಿಗೊಮ್ಮೆ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದರು. ಅಕ್ರೋಯ್ಡ್‌ ಸೂತ್ರದ (Aykroyd formula) ಪ್ರಕಾರವೂ ದೈನಂದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ಪರಿಗಣಿಸಿ ವೇತನ ಪರಿಷ್ಕರಣೆಯ ಶಿಫಾರಸು ಸಲ್ಲಿಕೆಯಾಗುತ್ತದೆ.

ಏನಿದು ವೇತನ ಆಯೋಗ?: ಸರ್ಕಾರಿ ಉದ್ಯೋಗಿಗಳ ವೇತನದ ಸ್ವರೂಪಕ್ಕೆ ಸಂಬಂಧಿಸಿ ಸರ್ಕಾರಕ್ಕೆ ಶಿಫಾರಸು ನೀಡುವ ಕೆಲಸವನ್ನು ವೇತನ ಆಯೋಗ ಮಾಡುತ್ತದೆ. ೧೯೪೬ರ ಜನವರಿಯಲ್ಲಿ ಮೊದಲ ವೇತನ ಆಯೋಗ ರಚನೆಯಾಗಿತ್ತು. ಬಳಿಕ ೧೦ ವರ್ಷಕ್ಕೊಮ್ಮೆ ಕೇಂದ್ರ ಸರ್ಕಾರ ವೇತನ ಆಯೋಗವನ್ನು ರಚಿಸಿದೆ. ಸಾಮಾನ್ಯವಾಗಿ ಶಿಫಾರಸು ಸಲ್ಲಿಸಲು ೧೮ ತಿಂಗಳಿನ ಕಾಲಾವಕಾಶ ನೀಡಲಾಗುತ್ತದೆ. ಹೊಸದಿಲ್ಲಿಯಲ್ಲಿ ಇದರ ಪ್ರಧಾನ ಕಚೇರಿ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯು ಪಾಸಾದವರು ಅಪ್ಲೈ ಮಾಡಿ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ. ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ (SSC CHSL Recruitment 2024). ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಲೋವರ್‌ ಡಿವಿಷನ್‌ ಕ್ಲರ್ಕ್‌ (LDC) / ಜೂನಿಯರ್‌ ಸೆಕ್ರೆಟೆರಿಯೇಟ್‌ ಅಸಿಸ್ಟಂಟ್‌ (JSA), ಡೇಟಾ ಎಂಟ್ರಿ ಆಪರೇಟರ್‌ (DEO) ಮತ್ತು ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ʼA’ ಹುದ್ದೆಗಳಿವೆ. ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಎರಡು ಹಂತದ ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌ / ಟೈಪಿಂಗ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮೊದಲ ಹಂತದ ಪರೀಕ್ಷೆ ಜುಲೈ 1,2,3,4,5,8,9,10,11,12ರಂದು ನಡೆಯಲಿದೆ. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ವೈಯಕ್ತಿಕ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
  • ನಿಮಗೆ ಬಂದಿರುವ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಾಣಿಸುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಸೂಚಿಸಿರುವ ಅಳತೆಯಲ್ಲಿ ದಾಖಲೆಗಳನ್ನು ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾದ ಬಳಿಕ ಈ ಬಗ್ಗೆ ಇಮೇಲ್‌, ಎಸ್‌ಎಂಎಸ್‌ ಮೂಲಕ ಸಂದೇಶ ಬರಲಿದೆ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Job Alert: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4. ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ (Revenue Department) ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4 (Job Alert).

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.

ಇದನ್ನೂ ಓದಿ: Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

Latest

Tata Consultancy Services: ಮನೆಯಿಂದಲೇ ಕೆಲಸ ಮಾಡುವವರಿಗೆ ಬೋನಸ್‌, ಟಿವಿಪಿ ಕಟ್‌ ಮಾಡಿದ ಟಿಸಿಎಸ್!

Tata Consultancy Services: ವರ್ಕ್ ಫ್ರಮ್ ಹೋಮ್ ಕಡಿತಗೊಳಿಸಿರುವ ಟಿಸಿಎಸ್ ಕಚೇರಿಯಲ್ಲಿ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದೆ. ಅಲ್ಲದೇ ಕಚೇರಿ ಹಾಜರಾತಿ ಕಡಿಮೆಯಾದರೆ ಅಂತವರಿಗೆ ಬೋನಸ್ ಕಡಿತಗೊಳಿಸುವುದಾಗಿ ಹೇಳಿದೆ.

VISTARANEWS.COM


on

By

Tata Consultancy Services
Koo

ಹೊಸದಿಲ್ಲಿ: ಮೂರು ತಿಂಗಳಲ್ಲಿ ಕಚೇರಿಯಲ್ಲಿ ಉದ್ಯೋಗಿಗಳ ಹಾಜರಾತಿ (attendance in office) ಶೇ. 60ಕ್ಕಿಂತ ಕಡಿಮೆ ಇರಬಾರದು. ಒಂದು ವೇಳೆ ಶೇ. 60ಕ್ಕಿಂತ ಯಾವುದೇ ಉದ್ಯೋಗಿಯ ಹಾಜರಾತಿ ಕಡಿಮೆಯಾದರೆ ಅಂಥವರು ಬೋನಸ್ ಗೆ (quarterly bonus) ಅರ್ಹರಾಗಿರುವುದಿಲ್ಲ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (Tata Consultancy Services) ತಿಳಿಸಿದೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ಉದ್ಯೋಗಿಗಳಿಗೆ ಕಚೇರಿಯಲ್ಲಿನ ಹಾಜರಾತಿಯೊಂದಿಗೆ ತ್ರೈಮಾಸಿಕ ವೇರಿಯಬಲ್ ಪಾವತಿಯನ್ನು ಲಿಂಕ್ ಮಾಡಿದೆ. ಈ ಹೊಸ ನೀತಿಯ ಅಡಿಯಲ್ಲಿ ಶೇ. 60ಕ್ಕಿಂತ ಕಡಿಮೆ ಕಚೇರಿಯ ಹಾಜರಾತಿ ಹೊಂದಿರುವ ಉದ್ಯೋಗಿಗಳು ಬೋನಸ್‌ಗೆ ಅರ್ಹರಾಗಿರುವುದಿಲ್ಲ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಅವರು ಪೂರ್ಣ ತ್ರೈಮಾಸಿಕ ವೇರಿಯಬಲ್ ವೇತನವನ್ನು ಪಡೆಯಲು ಉದ್ಯೋಗಿಗಳಿಂದ ಕಚೇರಿಯಲ್ಲಿ ಕನಿಷ್ಠ ಶೇ. 85ರಷ್ಟು ಹಾಜರಾತಿಯನ್ನು ನಿರೀಕ್ಷಿಸುತ್ತಿದೆ ಎಂದು ತಿಳಿಸಿದೆ.

ಇತ್ತೀಚಿನ ಅಪ್‌ಡೇಟ್‌ ಗಳ ಪ್ರಕಾರ, ಐಟಿ ಸೇವೆಗಳ ದೈತ್ಯ ಕಂಪನಿಗಳು ಉದ್ಯೋಗಿಗಳನ್ನು ವಾರದಲ್ಲಿ ಐದು ದಿನ ಕಚೇರಿಯಿಂದ ಕೆಲಸ ಮಾಡಲು ಕಡ್ಡಾಯಗೊಳಿಸಿದೆ. ಈ ಆದೇಶ ಬಂದ ಕೆಲವು ತಿಂಗಳುಗಳ ಅನಂತರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ಉದ್ಯೋಗಿಗಳಿಗೆ ಅವರ ಕಚೇರಿಯಲ್ಲಿ ಹಾಜರಾತಿಯೊಂದಿಗೆ ತ್ರೈಮಾಸಿಕ ವೇರಿಯಬಲ್ ಪೇ ಔಟ್ ಅನ್ನು ಲಿಂಕ್ ಮಾಡಿದೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

ಈ ಬದಲಾವಣೆಗಳನ್ನು ಉದ್ಯೋಗಿಗಳಿಗೆ ತಿಳಿಸಲು ಆಂತರಿಕ ಮಾನವ ಸಂಪನ್ಮೂಲ ಪೋರ್ಟಲ್‌ನಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ನೀತಿಯನ್ನು ಇತ್ತೀಚೆಗೆ ನವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪೆನಿಯ ಪೂರ್ಣ ತ್ರೈಮಾಸಿಕ ವೇರಿಯಬಲ್ ವೇತನವನ್ನು ಪಡೆಯಲು ಕಚೇರಿಯಲ್ಲಿ ಕನಿಷ್ಠ ಶೇ. 85ರಷ್ಟು ಉದ್ಯೋಗಿಗಳ ಹಾಜರಾತಿಯನ್ನು ನಿರೀಕ್ಷಿಸುತ್ತಿದೆ. ಅಲ್ಲದೆ, ಇದನ್ನು ನಿರಂತರವಾಗಿ ಅನುಸರಿಸದಿರುವುದು ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಕಾರಣವಾಗಬಹುದು ಎನ್ನಲಾಗಿದೆ.


ಹೆಚ್ಚು ಹಾಜರಾತಿಗೆ ಪ್ರೋತ್ಸಾಹ

ಕಚೇರಿ ಹಾಜರಾತಿಯಿಂದ ಶೇ. 75- 85ರಷ್ಟು ಕೆಲಸ ಮಾಡುವ ನೌಕರರು ತಮ್ಮ ವೇರಿಯಬಲ್ ವೇತನದ ಶೇ. 75ರಷ್ಟನ್ನು ಪಡೆಯುತ್ತಾರೆ ಮತ್ತು ಶೇ. 60- 75 ರಷ್ಟು ಹಾಜರಾತಿ ಹೊಂದಿರುವವರು ತಮ್ಮ ವೇರಿಯಬಲ್ ವೇತನದ ಶೇ. 50ರಷ್ಟನ್ನು ಮಾತ್ರ ಪಡೆಯುತ್ತಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ನ ಸಿಇಒ ಮತ್ತು ಎಂಡಿ ಕೆ. ಕೃತಿವಾಸನ್ ಅವರು ಮಾರ್ಚ್ 31ಕ್ಕೆ ಕೊನೆಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ ಹೆಚ್ಚಿನ ಉದ್ಯೋಗಿಗಳು ಕೆಲಸದ ಸ್ಥಳಕ್ಕೆ ಮರಳಿದ್ದಾರೆ. ಕೆಲಸ ಹಂಚಿಕೆಯ ಅನುಭವಗಳನ್ನು ಸೃಷ್ಟಿಸಿದ್ದಾರೆ. ಹೆಚ್ಚಿನ ಕಲಿಕೆ, ಸಹಯೋಗ ಮತ್ತು ಬೆಳವಣಿಗೆಯನ್ನು ಮಾಡಿದ್ದಾರೆ. ಕಂಪೆನಿಯಲ್ಲಿ ಸೌಹಾರ್ದತೆ ಹೆಚ್ಚಾಗಿದೆ . ನಾವು ವೇಗವನ್ನು ಹೆಚ್ಚಿಸಿದಾಗ ನಾವು ಒಟ್ಟಿಗೆ ಅನೇಕ ಹೊಸ ಅವಕಾಶಗಳನ್ನು ತೆರೆಯುತ್ತೇವೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ ಎಂದು ಹೇಳಿದ್ದರು.

ಫೆಬ್ರವರಿಯಲ್ಲಿ ಆದೇಶ

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಈ ಹಿಂದೆ ಹೈಬ್ರಿಡ್ ವರ್ಕ್ ಮಾಡೆಲ್ ಪೋಸ್ಟ್ ಸಾಂಕ್ರಾಮಿಕ ರೋಗವನ್ನು ಅನುಸರಿಸುತ್ತಿತ್ತು, ಇದು 2023ರ ಅಕ್ಟೋಬರ್ 1ರಿಂದ ಕೊನೆಗೊಂಡಿತು. ಉದ್ಯೋಗಿಗಳನ್ನು ವಾರದಲ್ಲಿ ಐದು ದಿನ ಕಚೇರಿಯಿಂದ ಕೆಲಸ ಮಾಡಲು ಕೇಳುತ್ತಿದೆ. ಫೆಬ್ರವರಿಯಲ್ಲಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ನೌಕರರಿಗೆ ಇಮೇಲ್ ಕಳುಹಿಸಿದ್ದು, ಅವರ ವೇರಿಯಬಲ್ ವೇತನವನ್ನು ಶೀಘ್ರದಲ್ಲೇ ಅವರ ಕಚೇರಿ ಸೈಟ್‌ನಲ್ಲಿ ಅವರ ಹಾಜರಾತಿಗೆ ಲಿಂಕ್ ಮಾಡಲಾಗುತ್ತದೆ ಎಂದು ತಿಳಿಸಿತು.

Continue Reading

ಉದ್ಯೋಗ

Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Job Alert: ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ನ್ಯಾಷನಲ್ ಬಿಲ್ಡಿಂಗ್ಸ್ ಕನ್​​ಸ್ಟ್ರಕ್ಷನ್​​ ಕಾರ್ಪೊರೇಷನ್ ಲಿಮಿಟೆಡ್‌ ತನ್ನಲ್ಲಿ ಖಾಲಿ ಇರುವ ವಿವಿಧ 92 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ, ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7.

VISTARANEWS.COM


on

Job Alert
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ನ್ಯಾಷನಲ್ ಬಿಲ್ಡಿಂಗ್ಸ್ ಕನ್​​ಸ್ಟ್ರಕ್ಷನ್​​ ಕಾರ್ಪೊರೇಷನ್ ಲಿಮಿಟೆಡ್‌ (National Buildings Construction Corporation Limited) ಸಂಸ್ಥೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NBCC Recruitment 2024). ಜನರಲ್‌ ಮ್ಯಾನೇಜರ್‌, ಸೀನಿಯರ್‌ ಪ್ರಾಜೆಕ್ಟ್‌ ಎಕ್ಸಿಕ್ಯೂಟಿವ್‌ ಸೇರಿ 92 ಹುದ್ದೆಗಳಿವೆ. ಪದವಿ, ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಜನರಲ್ ಮ್ಯಾನೇಜರ್ – 3 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್ / ಇಇಇ / ಮೆಕ್ಯಾನಿಕಲ್
ಹೆಚ್ಚುವರಿ ಜನರಲ್ ಮ್ಯಾನೇಜರ್ – 1 ಹುದ್ದೆ, ವಿದ್ಯಾರ್ಹತೆ: ಸಿಎ, ಐಸಿಡಬ್ಲ್ಯುಎ, ಪದವಿ, ಎಂಬಿಎ, ಪಿಜಿಡಿಎಂ
ಡೆಪ್ಯುಟಿ ಜನರಲ್ ಮ್ಯಾನೇಜರ್ – 1 ಹುದ್ದೆ, ವಿದ್ಯಾರ್ಹತೆ: ಪದವಿ, ಸಿವಿಲ್‌ನಲ್ಲಿ ಬಿಇ/ ಬಿ.ಟೆಕ್‌
ಮ್ಯಾನೇಜರ್ – 2 ಹುದ್ದೆ, ವಿದ್ಯಾರ್ಹತೆ: ಪದವಿ
ಪ್ರಾಜೆಕ್ಟ್ ಮ್ಯಾನೇಜರ್ – 3 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್/ ಇಇಇ/ ಮೆಕ್ಯಾನಿಕಲ್
ಡೆಪ್ಯುಟಿ ಮ್ಯಾನೇಜರ್ – 6 ಹುದ್ದೆ, ವಿದ್ಯಾರ್ಹತೆ: ಎಂಬಿಎ, ಎಂಎಸ್‌ಡಬ್ಲ್ಯು, ಸ್ನಾತಕೋತ್ತರ ಪದವಿ
ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್ – 2 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್/ ಇಇಇ/ ಮೆಕ್ಯಾನಿಕಲ್
ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ – 30 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್
ಮ್ಯಾನೇಜ್‌ಮೆಂಟ್‌ ಟ್ರೈನಿ – 4 ಹುದ್ದೆ, ವಿದ್ಯಾರ್ಹತೆ: ಎಲ್‌ಎಲ್‌ಬಿ
ಕಿರಿಯ ಎಂಜಿನಿಯರ್ – 40 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 49 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,000 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ. ಕಂಪ್ಯೂಟರ್‌ ಬೇಸ್ಡ್‌ ಟೆಸ್ಟ್‌ (CBT), ಡಾಕ್ಯುಮೆಂಟ್‌ ಪರಿಶೀಲನೆ, ಸಂದರ್ಶನ ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • ನಿಮ್ಮ ಫೋನ್‌ ನಂಬರ್‌, ಇ-ಮೇಲ್‌ ಐಡಿ ಮುಂತಾದ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
  • ನಿಮ್ಮ ಫೋನ್‌ ನಂಬರ್‌ / ಇ-ಮೇಲ್‌ಗೆ ಕೋಡ್‌ ರವಾನೆಯಾಗುತ್ತದೆ.
  • ಇದನ್ನು ಬಳಿಸಿ ಅಪ್ಲಿಕೇಷನ್‌ ಫಾರಂ ಓಪನ್‌ ಮಾಡಿ.
  • ವೈಯಕ್ತಿಕ ಮಾಹಿತಿ, ಶೈಕ್ಷಣಿಕ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಪಾಸ್‌ಪೋರ್ಟ್‌ ಫೋಟೊ, ಸಹಿಯನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading
Advertisement
KKR vs PBKS
ಕ್ರೀಡೆ3 mins ago

KKR vs PBKS: ಪಂಜಾಬ್​ಗೆ ಮಸ್ಟ್​ ವಿನ್​ ಗೇಮ್; ಕೆಕೆಆರ್​ ಎದುರಾಳಿ

IPL 2024
ಕ್ರೀಡೆ7 mins ago

IPL 2024 : ಸಾಯಿ ಕಿಶೋರ್ ನಿಂದನೆ; ರಸಿಕ್ ಸಲಾಂಗೆ ಪಾಠ ಕಲಿಸಿದ ಜಯ್​ ಶಾ

Haji Akbar Afridi
ವಿದೇಶ9 mins ago

Lashkar-e-Islam: ಮತ್ತೊಬ್ಬ ಭಾರತ ವಿರೋಧಿ ಉಗ್ರ ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಖತಂ

Tata Motors gets approval for 333 patents
ದೇಶ15 mins ago

Tata Motors: ಟಾಟಾ ಮೋಟಾರ್ಸ್‌ನಿಂದ ಹೊಸ ಮೈಲುಗಲ್ಲು; 333 ಪೇಟೆಂಟ್‌ಗಳಿಗೆ ಅನುಮೋದನೆ

Neha Murder Case in hubblli
ಹುಬ್ಬಳ್ಳಿ27 mins ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ33 mins ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ICICI Bank
ದೇಶ34 mins ago

ICICI Bank: ಐಸಿಐಸಿಐ ಬ್ಯಾಂಕ್‌ ಗ್ರಾಹಕರೇ ಎಚ್ಚರ; 17 ಸಾವಿರ ಜನರ ಕಾರ್ಡ್‌ ಮಾಹಿತಿ ಸೋರಿಕೆ!

Kannada Serials TRP Lakshmi Nivasa In Top Amruthadhaare in Top 5
ಕಿರುತೆರೆ41 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

Lok Sabha Election 2024 No names of election officials in voter list Protest in front of the polling booth
Lok Sabha Election 202445 mins ago

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Reliance Smart Bazar
ವಾಣಿಜ್ಯ54 mins ago

Reliance Smart Bazar: ರಿಲಯನ್ಸ್ ಸ್ಮಾರ್ಟ್ ಬಜಾರ್ ಗ್ರಾಹಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಯಾವೆಲ್ಲ ವಸ್ತುಗಳಿಗೆ ಹೆಚ್ಚಿನ ಬೇಡಿಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ27 mins ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ33 mins ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ4 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20246 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌