Animal Trafficking | ಬ್ಯಾಂಕಾಕ್‌ನಿಂದ ಬಂದವನ ಬ್ಯಾಗ್‌ನಲ್ಲಿತ್ತು ಹಾವು, ಕೋತಿ, ಆಮೆ - Vistara News

ಕ್ರೈಂ

Animal Trafficking | ಬ್ಯಾಂಕಾಕ್‌ನಿಂದ ಬಂದವನ ಬ್ಯಾಗ್‌ನಲ್ಲಿತ್ತು ಹಾವು, ಕೋತಿ, ಆಮೆ

ಬ್ಯಾಂಕಾಕ್‌ನಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವ್ಯಕ್ತಿಯ ಬ್ಯಾಗ್‌ನಲ್ಲಿ ಕೋತಿ, ಹಾವು, ಆಮೆ ಪತ್ತೆಯಾಗಿದ್ದು, (Animal Trafficking) ಕಸ್ಟಮ್ಸ್‌ ಅಧಿಕಾರಿಗಳು ವ್ಯಕ್ತಿಯ ವಿಚಾರಣೆ ನಡೆಸುತ್ತಿದ್ದಾರೆ.

VISTARANEWS.COM


on

Pythons
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ದೂರ ದೇಶದ ಪ್ರಯಾಣಕ್ಕೆ ಹೋಗುವಾಗ ಒಂದಿಷ್ಟು ಬಟ್ಟೆ ಬರೆಗಳು, ತುರ್ತು ಅಗತ್ಯದ ಔಷಧಗಳು ಸೇರಿದಂತೆ ಕೆಲವು ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗುತ್ತೇವೆ. ಆದರೆ, ಚೆನ್ನೈ ಏರ್‌ಪೋರ್ಟ್‌ಗೆ ಬ್ಯಾಂಕಾಕ್‌ನಿಂದ ಬಂದ ವ್ಯಕ್ತಿಯೊಬ್ಬರ ಚೀಲದಲ್ಲಿ ಸಿಕ್ಕಿರುವ ವಸ್ತುಗಳನ್ನು ನೋಡಿ ಕಸ್ಟಮ್ಸ್‌ ಅಧಿಕಾರಿಗಳೇ ದಂಗಾಗಿದ್ದಾರೆ. ಅವುಗಳು ಏನೇನೂ ಗೊತ್ತೇ? ಹೆಬ್ಬಾವು, ಆಮೆ ಮತ್ತು ಕೋತಿ ಮರಿ.

ಟಿಜಿ-೩೩೭ ವಿಮಾನದಲ್ಲಿ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವ್ಯಕ್ತಿಯು ಅಕ್ರಮವಾಗಿ ಹಲವು ಪ್ರಾಣಿಗಳನ್ನು ಸಾಗಿಸುತ್ತಿದ್ದಾರೆ ಎಂಬ ಕುರಿತು ನಿಖರ ಮಾಹಿತಿ ಪಡೆದ ಕಸ್ಟಮ್ಸ್‌ ಅಧಿಕಾರಿಗಳು, ಬ್ಯಾಗ್‌ ಪರಿಶೀಲಿಸಿದ್ದಾರೆ. ಆಗ ಬ್ಯಾಗ್‌ನಲ್ಲಿ ಒಂದು ಡಿ ಬ್ರಾಜಾ ಕೋತಿ, 15 ಕಿಂಗ್‌ ಸ್ನೇಕ್ಸ್‌, ಐದು ಹೆಬ್ಬಾವಿನ ಮರಿಗಳು ಪತ್ತೆಯಾಗಿವೆ. ಕೂಡಲೇ ಅಧಿಕಾರಿಗಳು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಅನಿಮಲ್ಸ್‌ ಕ್ವಾರಂಟೈನ್‌ ಅಂಡ್‌ ಸರ್ಟಿಫಿಕೇಷನ್‌ ಸರ್ವಿಸಸ್‌ (ಎಕ್ಯುಸಿಎಸ್) ಜತೆ ಮಾತನಾಡಿದ ಬಳಿಕ ಏರ್ಪೋರ್ಟ್‌ ಅಧಿಕಾರಿಗಳು ಥಾಯ್‌ ಏರ್‌ವೇಸ್‌ನ ವಿಮಾನದ ಮೂಲಕ ಅವುಗಳ ಮೂಲ ದೇಶಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಹಣಕ್ಕಾಗಿ ಬೇರೆ ದೇಶಗಳಿಂದ ಪ್ರಾಣಿಗಳನ್ನು ಅಕ್ರಮವಾಗಿ ತಂದು ಮಾರಾಟ ಮಾಡುವುದು ವ್ಯಕ್ತಿಯ ಉದ್ದೇಶವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ | ವಿಷಕಾರಿ ಹಾವುಗಳ ಕಡಿತಕ್ಕೆ ಬೆಂಗಳೂರಿನಲ್ಲಿ ಸಿಗಲಿದೆ ಜೀವರಕ್ಷಕ ʻಪ್ರತಿವಿಷʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Neha Murder Case: ನೇಹಾ ಹತ್ಯೆ: ಅಪರಾಧಿಗೆ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ!

Neha Murder Case: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಯಾದ ಯುವತಿ. ಈ ಪ್ರಕರಣ ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಬರ್ಬರ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಫಯಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸಿನಿಮಾ ತಾರೆಯರು ಕೂಡ ಧ್ವನಿ ಎತ್ತಿದ್ದಾರೆ.

VISTARANEWS.COM


on

Neha Murder Case dhruva sarja priya savadi and kavya shastry condemn
Koo

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ  ನೇಹಾ ಹಿರೇಮಠ (Neha Murder Case)  ಬರ್ಬರ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಫಯಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸಿನಿಮಾ ತಾರೆಯರು ಕೂಡ ಧ್ವನಿ ಎತ್ತಿದ್ದಾರೆ. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (dhruva sarja) ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ‘ಸಹೋದರಿ ನೇಹಾ ಹಿರೇಮಠ ಅವರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್​ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ಪೋಸ್ಟ್​ ಮಾಡಿದ್ದಾರೆ. 

ನಟಿ ಪ್ರಿಯಾ ಸವದಿ (priya savadi) ಕೂಡ ಮಾಧ್ಯಮದ ಮುಂದೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಆಕೆ ನನಗೆ ಸಂಬಂಧಿಯೇ ಆಗಬೇಕಂದಿಲ್ಲ. ಇಲ್ಲಿ ಎಲ್ಲಾರೂ ನಮಗೆ ಅಕ್ಕಾ ತಂಗಿಯರೇ. ನನ್ನ ಅಕ್ಕ-ತಂಗಿನೇ ಬೇಕಾಗಿತ್ತಾ ಇವನಿಗೆ. ಇಲ್ಲಿ ಬಂದಿರುವ ಪ್ರತಿಯೊಬ್ಬರಿಗೂ ಆಕೆ ತಂಗಿ, ಅಕ್ಕ, ಮಗಳೇ.. ಆ ಆರೋಪಿಯನ್ನು ನಮಗೆ ಕೈಗೆ ಕೊಡಿ. ಅವನಿಗೆ ಶಿಕ್ಷೆ ಯಾರು ಕೊಡುತ್ತಾರೆ? ಅವನಿಗೆ ಮನೆಯಲ್ಲಿ ಯಾರೂ ಇಲ್ಲವಾ? ಮುಸ್ಲಿಂ ಅವ್ರು ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಬೀದಿಗೆ ಬಿಡ್ತಾರಾ? ಆದರೆ ಅವರಿಗೆ ಚೆನ್ನಾಗಿರೋ ಹುಡುಗೀರು ಬೇಕು. ಸರ್ಕಾರದವರು ಐದು, ಹತ್ತು ವರ್ಷ ಇರುತ್ತಾರೆ ಹೋಗುತ್ತಾರೆ. ಅವರಿಗೆ ಇದರ ನೆನಪು ಸಹ ಇರುವುದಿಲ್ಲ. ಎಲ್ಲಾ ಮುಚ್ಚಿ ಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

“ಹಂತಕ ಫಯಾಜ್‌ನನ್ನು ಎನ್ ಕೌಂಟರ್ ಮಾಡಬೇಕು. ಅವನಿಗೆ ಯಾವುದೇ ಕರುಣೆ ಬೇಕಾಗಿಲ್ಲ. ನೇಹಾ ಹಿರೇಮಠ್ ಕೊಲೆ ಖಂಡನೀಯ. ಕೊಲೆಗಾರನಿಗೆ ಸಿಗುವ ಶಿಕ್ಷೆ ಎಲ್ಲರಿಗೂ ಪಾಠವಾಗಬೇಕು” ಎಂದು ನಟಿ ಕಾವ್ಯಾ ಶಾಸ್ತ್ರಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿತ್ತು. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ!

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಳು. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದರು.

Continue Reading

ಕರ್ನಾಟಕ

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

Neha Murder Case: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣದ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣ (Neha Murder Case) ದೇಶಾದ್ಯಂತ ಸದ್ದು ಮಾಡುತ್ತಿದೆ. ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಮಾತನಾಡಿರುವ ಬಾಬಾ ಸಾಹೇಬ್‌ ಸುಬಾನಿ, ನನ್ನ ಮಗ ಮಾಡಿದ ತಪ್ಪಿಗೆ ನಾನು ಮುನವಳ್ಳಿ ಹಾಗೂ ರಾಜ್ಯದ ಜನರ ಬಳಿ ಕ್ಷಮೆ ಕೇಳುತ್ತೇನೆ. ನಮ್ಮನ್ನು ಮುನವಳ್ಳಿ ಜನ ಬೆಳೆಸಿದ್ದಾರೆ. ಅವರ ಋಣ ತೀರಿಸಲು ಸಾಧ್ಯವಿಲ್ಲ. ಹೀಗಾಗಿ ನಮ್ಮೂರಿನ ಜನ ನನ್ನನ್ನು ಕ್ಷಮಿಸಬೇಕು. ದಯವಿಟ್ಟು ಯಾವುದೇ ಯುವಕರು, ನನ್ನ ಮಗನ ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಬಾರದು ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.

ನಾನು ಯಾವತ್ತೂ ಯಾರಿಗೂ ಕೆಟ್ಟದ್ದು ಮಾಡಿಲ್ಲ, ಈಗ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಹೀಗಾಗಿ ನನ್ನನ್ನು ಮುನವಳ್ಳಿ ಗ್ರಾಮದ ಜನರು ಕ್ಷಮಿಸಬೇಕು ಎಂದು ಕಣ್ಣೀರು ಹಾಕಿರುವ ಅವರು, ನಾನು ಸಾಯೋವರೆಗೆ ಮುನವಳ್ಳಿ ಜನರ ಸೇವೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಯಾರೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡುತ್ತಾರೋ ಅಂತಹವರಿಗೆ ಮುಂದಿನ ದಿನಗಳಲ್ಲಿ ಯಾರೂ ಅಂಥ ಕೃತ್ಯ ಮಾಡಬಾರದು, ಆ ರೀತಿಯ ಶಿಕ್ಷೆ ಆಗಬೇಕು. ಇಂತಹ ಘಟನೆಗಳಿಂದ ನಾಳಿನ ದಿನ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಲು ಜನ ಭಯಪಡುತ್ತಾರೆ. ಹೀಗಾಗಿ ನನ್ನ ಜನ್ಮಭೂಮಿ ಮುನವಳ್ಳಿ, ಅವರಿಗಾಗಿ ನಾನು ಬದುಕುತ್ತೇನೆ ಎಂದು ಹೇಳಿದ್ದಾರೆ.

ವರ್ಷದ ಹಿಂದೆ ನೇಹಾ ಅವರ ತಂದೆ ನನಗೂ ಎರಡು ಬಾರಿ ಫೋನ್‌ ಮಾಡಿದ್ದರು. ನನ್ನ ಮಗಳಿಗೆ ನಿಮ್ಮ ಮಗ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದರು. ಅವರ ತುಂಬಾ ಒಳ್ಳೆಯವರು. ನಾವಿಬ್ಬರೂ ಪ್ರೀತಿ ಮಾಡುತ್ತಿದ್ದೇವೆ ಎಂದು ಮಗ ಹೇಳಿದ್ದ. ಆದರೆ, ನಾನು ಮಾಡಲ್ಲ ಎಂದಿದ್ದೆ. ಹೀಗಾಗಿ ಅವನು ಜಗಳ ಮಾಡಿದ್ದ. ಈಗ ಅವನು ನನ್ನ ಬಳಿ ಮಾತನಾಡಲ್ಲ. ನಮ್ಮ ದಾಂಪತ್ಯ ಜೀವನ ಸರಿಯಿಲ್ಲದ ಕಾರಣ ಅವರ ತಾಯಿ ಜತೆ ಅವನು ಪ್ರತ್ಯೇಕವಾಗಿ ವಾಸವಾಗಿದ್ದ ಎಂದು ಹೇಳಿದರು.

ಇದನ್ನೂ ಓದಿ | Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ನಾನು ಸೈನಿಕನಾಗಿ ದೇಶ ಸೇವೆ ಸಲ್ಲಿಸಬೇಕು ಅಂದುಕೊಂಡಿದ್ದೆ. ಆದರೆ, ನಮ್ಮ ತಾಯಿ ಬೇಡ ಅಂದಿದ್ದರು. ಹೀಗಾಗಿ ನನ್ನ ಮಗನನ್ನು ಸೇನೆಗೆ ಸೇರಿಸಬೇಕು ಅಂದುಕೊಂಡಿದ್ದೆ. ಆದರೆ ಅವನು ಈ ರೀತಿಯ ಕೆಲಸ ಮಾಡಿದ್ದಾನೆ ಎಂದು ತಿಳಿಸಿದರು.

Continue Reading

ಕರ್ನಾಟಕ

‌Assault Case: ಮೋದಿ ಹಾಡು ಬರೆದ ಯುವಕನ ಮೇಲೆ ಹಲ್ಲೆ; ಐವರ ವಿರುದ್ಧ ಎಫ್ಐಆರ್

‌Assault Case: ಮೈಸೂರಿನ ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಶುಕ್ರವಾರ ಮಧ್ಯಾಹ್ನ ಲಕ್ಷ್ಮಿನಾರಾಯಣ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿತ್ತು. ಮೋದಿ ಹಾಡು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಯುವಕನನ್ನು ಥಳಿಸಲಾಗಿತ್ತು. ಈ ಸಂಬಂಧ ಐವರ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

‌Assault Case
Koo

ಮೈಸೂರು: ಮೋದಿ ಹಾಡು ಬಿಡುಗಡೆ ಮಾಡಿದ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ (‌Assault Case) ಸಂಬಂಧಿಸಿ ನಗರದ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಲ್ಲೆಗೊಳಗಾದ ಯುವಕ ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಲೀಂ, ಜಾವೀದ್, ಪಾಷಾ ಸೇರಿ ಐವರ ಮೇಲೆ ಎಫ್ಐಆರ್ ದಾಖಲಾಗಿದೆ. ಹಳ್ಳಿಕೆರೆಹುಂಡಿ ಗ್ರಾಮದ ಲಕ್ಷ್ಮೀನಾರಾಯಣ್ ಎಂಬ ಯುವಕನ ಮೇಲೆ ಮೈಸೂರಿನ ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಶುಕ್ರವಾರ ಮಧ್ಯಾಹ್ನ ಹಲ್ಲೆ ನಡೆದಿತ್ತು.

ಮೂರನೇ ಬಾರಿ ಮೋದಿ ಅಧಿಕಾರಕ್ಕೆ ಏಕೆ ಬರಬೇಕು ಎಂದು ಯುವಕ ಹಾಡು ರಚಿಸಿದ್ದ. ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಸಾರ್ವಜನಿಕವಾಗಿ ವಿಡಿಯೊ ನೋಡುವಂತೆ ಮನವಿ ಮಾಡುತ್ತಿದ್ದ.
ಮೈಸೂರಿನ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ವಿಡಿಯೊ ನೋಡುವಂತೆ ಹೇಳಿದ್ದ. ನಂತರ ಆತನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿತ್ತು. ಇದೀಗ ಗಾಯಾಳು ಲಕ್ಷ್ಮೀನಾರಾಯಣ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿತ್ತು. ಇದೇ ವೇಳೆ ಪಾಕ್‌ ಪರ ಮತ್ತು ಅಲ್ಲಾಹು ಅಕ್ಬರ್‌ ಎಂದು ಪರ ಘೋಷಣೆ (Pro Pak Slogan) ಕೂಗುವಂತೆ ಯುವಕನಿಗೆ ಒತ್ತಾಯ ಮಾಡಲಾಗಿತ್ತು.

ಮೋದಿ ಹಾಡು ರಿಲೀಸ್‌ ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆ ಎಂದು ಅಪರಿಚಿತ ಮುಸ್ಲಿಂ ಯುವಕರ ಗುಂಪು, ಹಿಂದು ಯುವಕನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿತ್ತು. ಹಲ್ಲೆ ವೇಳೆ ಪಾಕಿಸ್ತಾನ ಹಾಗೂ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಯುವಕನಿಗೆ ಒತ್ತಾಯ ಮಾಡಿದ್ದರು. ನಂತರ ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಬಗ್ಗೆ ವಿಡಿಯೊ ಮೂಲಕ ಲಕ್ಷ್ಮಿನಾರಾಯಣ್ ಮಾಹಿತಿ ನೀಡಿದ್ದ.

ಇದನ್ನೂ ಓದಿ | Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

ಘಟನೆ ಬಗ್ಗೆ ಗಾಯಾಳು ಲಕ್ಷ್ಮೀನಾರಾಯಣ್ ಪ್ರತಿಕ್ರಿಯಿಸಿ, ನಾನು ಕಳೆದ ವಾರ ಮೋದಿ ಸಾಂಗ್‌ ರಿಲೀಸ್‌ ಮಾಡಿದ್ದೆ. ಪರಿಚಯಸ್ಥರ ಬಳಿ ನಮ್ಮ ಯುಟ್ಯೂಟ್‌ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡಿಸುತ್ತಿದ್ದೆ. ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಬಂದರು. ಅವರು ಮುಸ್ಲಿಂ ಎಂದು ನನಗೆ ಗೊತ್ತಿರಲಿಲ್ಲ. ನಂತರ ಆ ವ್ಯಕ್ತಿ ವಿಡಿಯೊ ನೋಡಿದ. ನಂತರ ನನ್ನನ್ನು ಒಳಗೆ ಕರೆದುಕೊಂಡು ಹೋಗಿ, ಮೋದಿ ಬಗ್ಗೆ ಸಾಂಗ್‌ ಮಾಡಿದ್ದೀಯಾ, ನಿನ್ನ ಇಲ್ಲೇ ಕೊಲ್ಲುತ್ತೇವೆ ಎಂದು ಸಹಚರರ ಜತೆ ಸೇರಿ ಹಲ್ಲೆ ಮಾಡಿದರು. ನನ್ನ ಕೈಯಲ್ಲಿ ಇದ್ದ ಶ್ರೀರಾಮನ ಫೋಟೊ, ಧ್ವಜವನ್ನು ಕಿತ್ತು ಬಿಸಾಡಿದರು. ನಂತರ ಅವಾಚ್ಯ ಶಬ್ದಗಳಿಂದ ಬೈಯ್ದು ನನ್ನ ಮೇಲೆ ಬಿಯರ್‌ ಎರಚಿ, ಮೂತ್ರ ವಿಸರ್ಜನೆ ಮಾಡಿ, ಸಿಗರೇಟ್‌ನಿಂದ ಸುಟ್ಟು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ದೇಶ

Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

Instagram Reel: ಇನ್‌ಸ್ಟಾಗ್ರಾಮ್‌ ರೀಲ್ಸ್‌ ಹುಚ್ಚಿಗೆ 21 ವರ್ಷದ ಯುವ ಬಲಿಯಾಗಿದ್ದಾನೆ. ಉತ್ತರ ಪ್ರದೇಶದ ಜನಪದ್ ಬಂದಾದ ಖೈರಾಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವಂ ಕುಮಾರ್ ಎನ್ನುವ ಯುವ ಧ್ವಜ ಸ್ತಂಭದಲ್ಲಿ ತಲೆಕೆಳಗಾಗಿ ನೇತಾಡುವ ಸಾಹಸ ಪ್ರದರ್ಶನಕ್ಕೆ ಮುಂದಾಗಿದ್ದ. ಈ ವೇಳೆ ಕಂಬ ಕುಸಿದು ಬಿದ್ದು ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Instagram Reel
Koo

ಲಕ್ನೋ: ಇತ್ತೀಚಿನ ದಿನಗಳಲ್ಲಿ ಯುವ ಜನತೆಯಲ್ಲಿ ಹುಚ್ಚು ಸಾಹಸ ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಡುತ್ತಾರೆ. ಅದರಲ್ಲೂ ಜನಪ್ರಿಯತೆ ಗಳಿಸಲು ಯಾವ ಮಟ್ಟಕ್ಕೂ ಬೇಕಾದರೂ ಇಳಿಯಲು ತಯಾರಿರುತ್ತಾರೆ. ಇಂತಹ ಇನ್‌ಸ್ಟಾಗ್ರಾಮ್‌ ರೀಲ್ಸ್‌ (Instagram Reel) ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅಂತಹದ್ದೇ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ನ ಚಿತ್ರೀಕರಣಕ್ಕಾಗಿ ಸಾಹಸ ಪ್ರದರ್ಶಿಸುತ್ತಿದ್ದ 21 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ.

ಮೃತನನ್ನು ಶಿವಂ ಕುಮಾರ್ ಎಂದು ಗುರುತಿಸಲಾಗಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಶಿವಂ ಕುಮಾರ್‌ ಶಾಲೆಯ ಧ್ವಜ ಸ್ತಂಭದಲ್ಲಿ ನೇತಾಡುತ್ತಿದ್ದ. ಸ್ನೇಹಿತರು ಇದನ್ನು ಚಿತ್ರೀಕರಿಸುತ್ತಿದ್ದರು. ಈ ವೇಳೆ ಆತನ ಭಾರ ತಾಳಲಾರದೆ ಧ್ವಜ ಸ್ತಂಭ ಕುಸಿದು ಶಿವಂ ಕುಮಾರ್ ಕೊನೆಯುಸಿರು ಎಳೆದಿದ್ದಾನೆ.

ಘಟನೆ ವಿವರ

ಈ ಅವಘಡ ಗುರುವಾರ (ಏಪ್ರಿಲ್‌ 18) ಸಂಜೆ ನಡೆದಿದೆ. ಉತ್ತರ ಪ್ರದೇಶದ ಜನಪದ್ ಬಂದಾದ ಖೈರಾಡಾ ಗ್ರಾಮದ ಪ್ರೌಢಶಾಲೆಯಲ್ಲಿ ಈ ಘಟನೆ ವರದಿಯಾಗಿದೆ. ಶಿವಂ ತನ್ನ ತಂದೆಯನ್ನು ರೈಲ್ವೆ ನಿಲ್ದಾಣದಿಂದ ಕರೆದುಕೊಂಡು ಬಂದು ಮನೆಗೆ ಬಿಟ್ಟು ಸಂಜೆ ಸುಮಾರು 5 ಗಂಟೆಗೆ ಶಾಲೆಗೆ ತಲುಪಿದ್ದ. ಅಷ್ಟರಲ್ಲೆ ಶಾಲೆಗೆ ಬಂದಿದ್ದ ಆತನ ಸ್ನೇಹಿತರಾದ ಅನು ಮತ್ತು ಅಂಕಿತ್ ಅವನಿಗಾಗಿ ಕಾಯುತ್ತಿದ್ದರು. ನಂತರ ಈ ಮೂವರು ಶಾಲೆಯ ಛಾವಣಿಯನ್ನು ಏರಿದರು. ಇದು ಶಿವಂ ಅವರ ಕೊನೆಯ ಇನ್‌ಸ್ಟಾಗ್ರಾಂ ಸ್ಟಂಟ್ ಎಂದು ಆಗ ಅವರಿಗೆ ತಿಳಿದಿರಲಿಲ್ಲ. ಸ್ನೇಹಿತರು ರೆಕಾರ್ಡ್‌ ಮಾಡುತ್ತಿದ್ದಂತೆ ಶಿವಂ ಕಂಬದಲ್ಲಿ ಸಾಹಸ ಪ್ರದರ್ಶಿಸತೊಡಗಿದ್ದ. ಆಗ ಇದ್ದಕ್ಕಿದ್ದಂತೆ ಕಂಬ ಕುಸಿಯಿತು. ಬಿದ್ದು ಗಂಭೀರ ಗಾಯಗೊಂಡಿದ್ದ ಶಿವಂ ಸ್ನೇಹಿತರ ಕಣ್ಣೇದುರು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಹಿಂದೆಯೂ ಇದೇ ರೀತಿಯ ಸಾಹಸ ಪ್ರದರ್ಶಿಸಿದ್ದ

ಅಚ್ಚರಿ ಎಂದರೆ ಶಿವಂ ಇಂತಹ ಸಾಹಸ ಪ್ರದರ್ಶಿಸುತ್ತಿರುವುದು ಇದು ಮೊದಲ ಸಲವೇನಲ್ಲ. ಆತನ ಇನ್‌ಸ್ಟಾಗ್ರಾಂ ತುಂಬ ಇಂತಹದ್ದೇ ಸಾಹಸದ ವಿಡಿಯೊ ತುಂಬಿಕೊಂಡಿದೆ. ಮರ ಮತ್ತು ಛಾವಣಿಯಲ್ಲಿ ತಲೆಕೆಳಗಾಗಿ ನೇತಾಡುತ್ತಿರುವ ಹಲವು ರೀಲ್ಸ್‌ಗಳಿವೆ.

ಶಿವಂ ಅವರದ್ದು ಬಡತನದ ಕುಟುಂಬ. ಅವರ ತಂದೆ ವರ್ದಾನಿ ವಾಟರ್ ಪೌಚ್ ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದಾರೆ. ಕುಟುಂಬವು ಇದುವರೆಗೆ ಯಾವುದೇ ಔಪಚಾರಿಕ ದೂರು ದಾಖಲಿಸಿಲ್ಲ ಎಂದು ಮಾಟೌಂಡ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ರಾಮ್ ಮೋಹನ್ ರೈ ಹೇಳಿದ್ದಾರೆ.

ಇದನ್ನೂ ಓದಿ: Viral News: ರಿಕ್ಷಾದ ಟಾಪ್‌ಗೆ ಹತ್ತಿ ಸ್ಟೆಪ್‌ ಹಾಕಿದ ಯುವಕ; ವಿಡಿಯೊ ಕೊನೆಯಲ್ಲಿರುವ ರೋಚಕ ಟ್ವಿಸ್ಟ್‌ ಮಿಸ್‌ ಮಾಡದೆ ನೋಡಿ

ಕೆಲವು ದಿನಗಳ ಹಿಂದೆ ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಉತ್ತರ ಪ್ರದೇಶದಲ್ಲಿ ಅಮಾನುಷ ಘಟನೆಯೊಂದು ನಡೆದಿತ್ತು. ಗಾಜಿಯಾಬಾದ್‌ನಲ್ಲಿ ಯುವಕನೋರ್ವ ನಾಯಿಯ ಕಾಲನ್ನು ಹಿಡಿದು ಕ್ರೂರವಾಗಿ ತಿರುಗಿಸುವ ಮೂಲಕ ಅಮಾನುಷವಾಗಿ ವರ್ತಿಸಿದ ವಿಡಿಯೊ ವೈರಲ್‌ ಆದ ಬಳಿಕ ಈತನ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದರು. ಝಾಫರ್‌ (Zafar) ಎನ್ನುವ ಯುವಕ ನಾಯಿಯನ್ನು ಬಲವಂತದಿಂದ ಎಳೆದುಕೊಂಡು ಬರುತ್ತಾನೆ. ನಾಯಿ ಗಾಬರಿಯಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಮತ್ತಷ್ಟು ಬಿಗಿಯಾಗಿ ಹಿಡಿದುಕೊಳ್ಳುವ ಆತ ಅದನ್ನು ಅನಾಮತ್ತಾಗಿ ಎತ್ತಿಕೊಳ್ಳುತ್ತಾನೆ. ಬಳಿಕ ಅದರ ಕಾಲುಗಳನ್ನು ಹಿಡಿದುಕೊಂಡು ವೇಗವಾಗಿ ಸುತ್ತುತ್ತಾನೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಇದನ್ನು ಚಿತ್ರೀಕರಿಸಲಾಗಿತ್ತು.

Continue Reading
Advertisement
Neha Murder Case dhruva sarja priya savadi and kavya shastry condemn
ಸಿನಿಮಾ3 mins ago

Neha Murder Case: ನೇಹಾ ಹತ್ಯೆ: ಅಪರಾಧಿಗೆ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ!

IPL 2024
ಕ್ರೀಡೆ14 mins ago

IPL 2024 : ಸೋಲಿನ ಬಳಿಕ ಚೆನ್ನೈ ತಂಡದ ಅಂಕಪಟ್ಟಿಯಲ್ಲಿನ ಸ್ಥಾನವೆಷ್ಟು? ಇಲ್ಲಿದೆ ಎಲ್ಲ ವಿವರ

cet exam karnataka exam authority
ಪ್ರಮುಖ ಸುದ್ದಿ23 mins ago

CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

Ancient snake vasuki indicus
ವೈರಲ್ ನ್ಯೂಸ್51 mins ago

Ancient snake: ಭಾರತದಲ್ಲಿತ್ತು 1000 ಕಿಲೋ ತೂಕ, 50 ಅಡಿ ಉದ್ದದ ʼವಾಸುಕಿʼ ಹಾವು!

charlie chaplin rajamarga
ಪ್ರಮುಖ ಸುದ್ದಿ1 hour ago

ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

Karnataka Weather Forecast
ಮಳೆ2 hours ago

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Modi in Karnataka today Massive rally in Chikkaballapur and roadshow in Bengaluru
Lok Sabha Election 20243 hours ago

Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

Kids Sleep
ಲೈಫ್‌ಸ್ಟೈಲ್3 hours ago

Kids Sleep: ಪೋಷಕರೇ ಎಚ್ಚರ; ನಿಮ್ಮ ಮಕ್ಕಳ ನಿದ್ರೆ ಕಸಿದುಕೊಳ್ಳುವ ಈ ವಸ್ತುಗಳನ್ನು ಕೊಡಲೇಬೇಡಿ

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

ಕರ್ನಾಟಕ9 hours ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ17 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ1 week ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

ಟ್ರೆಂಡಿಂಗ್‌