ನಿಗೂಢ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ರೂಪದರ್ಶಿ - Vistara News

ಪ್ರಮುಖ ಸುದ್ದಿ

ನಿಗೂಢ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ರೂಪದರ್ಶಿ

ಬೆಳಗಿನ ಜಾವ 1 ಗಂಟೆಗೆ ನೆರೆಹೊರೆಯವರಿಂದ ಶಹಾನಾ ಸಾವಿನ ಸುದ್ದಿ ತಿಳಿಯಿತು ಎಂದು ಕಾಸರಗೋಡಿನ ಆಕೆಯ ಸಂಬಂಧಿಕರು ತಿಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆವಾಯೂರ್: ನಟಿ ಹಾಗೂ ರೂಪದರ್ಶಿ ಶಹಾನಾ ಶುಕ್ರವಾರ ಕೋಝಿಕ್ಕೋಡ್‌ನ ಚೇವಾಯೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ನಾನು 65 ವರ್ಷದ ಯುವಕ, 75ರವರೆಗೂ Young: CM ಆಗುವ ಅವಕಾಶವಿದೆ ಎಂದ ಉಮೇಶ್‌ ಕತ್ತಿ

ಆಕೆಯ ಸಾವು ನಿಗೂಢ ಎಂದು ಆಕೆಯ ಕುಟುಂಬದವರು ಹೇಳಿದ್ದು, ಹಣಕ್ಕಾಗಿ ಆಕೆಯ ಪತಿ ಸಜಾದ್ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ ಬೆಳಗಿನ ಜಾವ 1 ಗಂಟೆಗೆ ನೆರೆಹೊರೆಯವರಿಂದ ಶಹಾನಾ ಸಾವಿನ ಸುದ್ದಿ ತಿಳಿಯಿತು ಎಂದು ಕಾಸರಗೋಡಿನ ಆಕೆಯ ಸಂಬಂಧಿಕರು ತಿಳಿಸಿದ್ದಾರೆ. ಶಹಾನಾ ಮದುವೆಯಾಗಿ ಒಂದೂವರೆ ವರ್ಷಗಳಾದರೂ, ಸಜಾದ್ ತನ್ನ ಕುಟುಂಬಕ್ಕೆ ಬಂದು ಅವಳನ್ನು ಭೇಟಿ ಮಾಡಲು ಮತ್ತು  ತನ್ನ ಸಂಬಂಧಿಕರನ್ನು ಕರೆಯಲು ಅವಕಾಶ ನೀಡಿರಲಿಲ್ಲ ಎಂದು ತಿಳಿದು ಬಂದಿದೆ. ಇದೀಗ ಕಾಸರಗೋಡು ಮೂಲದ ಪತಿ ಸಜಾದ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಇದನ್ನೂ ಓದಿ : ವಿದ್ಯಾರ್ಥಿನಿಯನ್ನು ವೇದಿಕೆಗೆ ಕರೆದಿದ್ದಕ್ಕೆ ಛೀಮಾರಿ ಹಾಕಿದ ಮುಸ್ಲಿಂ ವಿದ್ವಾಂಸನ ವಿರುದ್ಧ ಕೇರಳ ರಾಜ್ಯಪಾಲ ಗರಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Rahul Gandhi: ಹ್ಯಾಕರ್‌ಗಳು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ಅನ್ನು ಬಳಸಿಕೊಂಡು ಚುನಾವಣೆ ಮತಯಂತ್ರಗಳನ್ನು ಹ್ಯಾಕ್‌ ಮಾಡಬಹುದು. ಹಾಗಾಗಿ, ಇವಿಎಂಗಳನ್ನು ಚುನಾವಣೆಯಲ್ಲಿ ಬಳಸಬಾರದು ಎಂದು ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ ಹೇಳಿದ್ದಾರೆ. ಇದು ಈಗ ಅಮೆರಿಕದಲ್ಲಿ ಭಾರಿ ಸಂಚಲನ ಮೂಡಿಸಿದೆ. ಎಲಾನ್‌ ಮಸ್ಕ್‌ ಹೇಳಿಕೆ ಕುರಿತು ಪರ ಹಾಗೂ ವಿರೋಧ ಚರ್ಚೆಗಳು ಶುರುವಾಗಿವೆ. ಎಲಾನ್‌ ಮಸ್ಕ್‌ ಅವರ ಆರೋಪಗಳಿಗೆ ರಾಹುಲ್‌ ಗಾಂಧಿ ಅವರೂ ಪ್ರತಿಕ್ರಿಯಿಸಿದ್ದು, ಭಾರತದ ಇವಿಎಂಗಳ ಕುರಿತು ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಸಾಧಿಸಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್‌ ಈಗ 99 ಕ್ಷೇತ್ರಗಳಲ್ಲಿ ಗೆದ್ದಿದೆ. ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವೂ (INDIA Bloc) 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಬಿಜೆಪಿಯೊಂದಕ್ಕೇ ಬಹುಮತ ಬರುವುದನ್ನು ತಪ್ಪಿಸಿವೆ. ಇಷ್ಟೆಲ್ಲ ಆದರೂ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಮತ್ತೆ ಚುನಾವಣೆ ಮತಯಂತ್ರಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಲಾನ್‌ ಮಸ್ಕ್‌ ಹೇಳಿದ್ದಿಷ್ಟು…

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜೀವ್‌ ಚಂದ್ರಶೇಖರ್‌ ತಿರುಗೇಟು

ಎಲಾನ್‌ ಮಸ್ಕ್‌ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ತಿರುಗೇಟು ನೀಡಿದ್ದಾರೆ. “ಸುರಕ್ಷಿತವಾಗಿರುವ ಡಿಜಿಟಲ್‌ ಹಾರ್ಡ್‌ವೇರ್‌ಅನ್ನು ಯಾರೂ ತಯಾರಿಸಲು ಆಗುವುದಿಲ್ಲ ರೀತಿಯಲ್ಲಿ ನೀವು ಇವಿಎಂ ಕುರಿತು ಸಾಮಾನ್ಯವಾದ ಹೇಳಿಕೆ ನೀಡಿದ್ದೀರಿ. ಇವಿಎಂಗೆ ಇಂಟರ್‌ನೆಟ್‌, ಬ್ಲ್ಯೂಟ್‌, ವೈಫೈ ಸಂಪರ್ಕ ಕೂಡ ಇಲ್ಲ. ಕಾರ್ಖಾನೆಯಲ್ಲಿ ತಯಾರಾದ ಇವಿಎಂಗಳನ್ನು, ಯಾವುದೇ ಕನೆಕ್ಟಿವಿಲ್ಲದ ಇವಿಎಂಗಳನ್ನು ಹ್ಯಾಕ್‌ ಮಾಡಲು ಆಗುವುದಿಲ್ಲ. ಭಾರತದಲ್ಲಿ ಇದು ಸಾಬೀತಾಗಿದೆ. ನಾವು ಈ ಕುರಿತು ಒಂದು ಟ್ಯುಟೋರಿಯಲ್‌ ತೆರೆಯೋಣ” ಎಂದು ಟಾಂಟ್‌ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Continue Reading

ಪ್ರಮುಖ ಸುದ್ದಿ

Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

Renuka Swamy Murder: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ವಿಧಿ ವೈದ್ಯ ಮತ್ತು ವಿಷ ವಿಜ್ಞಾನ ಶಾಸ್ತ್ರ ವಿಭಾಗದ ವೈದ್ಯರು, ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿಯನ್ನು ಪೊಲೀಸರಿಗೆ ನೀಡಿದ್ದಾರೆ.

VISTARANEWS.COM


on

Renuka Swamy murder
Koo

ಬೆಂಗಳೂರು: ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ (Renuka Swamy Murder) ಪೊಲೀಸ್‌ಗೆ ಹಸ್ತಾಂತರಗೊಂಡಿದ್ದು, ವರದಿಯಲ್ಲಿ ಭಯಾನಕ ಅಂಶಗಳು ಪತ್ತೆಯಾಗಿವೆ. ವಿಕ್ಟೋರಿಯಾ ಆಸ್ಪತ್ರೆಯ ವಿಧಿ ವೈದ್ಯ ಮತ್ತು ವಿಷ ವಿಜ್ಞಾನ ಶಾಸ್ತ್ರ ವಿಭಾಗದ ವೈದ್ಯರಿಂದ ಮರಣೋತ್ತರ ಪರೀಕ್ಷೆ ವರದಿಯನ್ನು ಪೊಲೀಸರಿಗೆ ನೀಡಲಾಗಿದೆ.

ರೇಣುಕಾಸ್ವಾಮಿ ಪೋಸ್ಟ್ ಮಾರ್ಟಂ ರಿಪೋರ್ಟ್‌ನಲ್ಲಿ ಭಯಾನಕ ಅಂಶಗಳು ಪತ್ತೆಯಾಗಿವೆ. ರೇಣುಕಾಸ್ವಾಮಿ ದೇಹದ ಮೇಲೆ 30ಕ್ಕೂ ಅಧಿಕ ಗಾಯಗಳು ಕಂಡುಬಂದಿದ್ದು, ತಲೆ ಮೇಲೆ ನಾಲ್ಕು ಬಲವಾದ ಗಾಯಗಳು ಪತ್ತೆಯಾಗಿವೆ. ಸಾಯುವ ಮುನ್ನ ನಾಲ್ಕು ಬಾರಿ ಎಲೆಕ್ಟ್ರಿಕ್ ಶಾಕ್ ನೀಡಿರುವುದು ತಿಳಿದುಬಂದಿದೆ. ಹೀಗಾಗಿ ತೀವ್ರ ರಕ್ತ ಸ್ರಾವದಿಂದ ರೇಣುಕಾಸ್ವಾಮಿ ಸಾವನ್ನಪ್ಪಿರುವುದು ದೃಢವಾಗಿದೆ. ಕಬ್ಬಿಣದ ರಾಡ್, ದೊಣ್ಣೆಯಿಂದ ಹಲ್ಲೆ ನಡೆಸಿದ್ದರಿಂದ ರಕ್ತ ಹೆಪ್ಪುಗಟ್ಟಿ, ರಕ್ತಸಾವ್ರದಿಂದ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ಮತ್ತೊಂದು ಹಂತದ ತನಿಖೆಗೆ ಮುಂದಾದ ಪೊಲೀಸರು

ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತೊಂದು ಹಂತದ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ ಕಸ್ಟಡಿಗೆ ಪಡೆದ ಆರೋಪಿಗಳ ವಿಚಾರಣೆ ವೇಗಗೊಳಿಸಿದ್ದು, ಈ ವೇಳೆ ಸಾಕ್ಷ್ಯ ನಾಶಕ್ಕೆ ಸತ ಪ್ರಯತ್ನ ನಡೆಸಿರುವುದು ತಿಳಿದುಬಂದಿದೆ.

ಆರೋಪಿಗಳ ಬಳಿ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ಇನ್ನು ಸ್ಥಳ ಮಹಜರು ವೇಳೆ ಮತ್ತಷ್ಟು ಆಧಾರಗಳು ಪತ್ತೆಯಾಗಿವೆ ಎನ್ನಲಾಗಿದೆ. ಈಗಾಗಲೇ ಆಯುಧಗಳು, 30 ಲಕ್ಷ ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿ ಮಾಡಲಾಗಿದೆ.

ಸಂಸ್ಕಾರ ಹಾಗೂ ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ; ಶಿಷ್ಯನ ಬಗ್ಗೆ ಗುರು ಬೇಸರ!

Actor Darshan teacher Addanda Cariappa sad on arrested darshan

ಬೆಂಗಳೂರು: ನಟ ದರ್ಶನ್‌ (Actor Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರ ಬಗ್ಗೆ ಮೈಸೂರಿನ ರಂಗಾಯಣದ ಅಡ್ಡಂಡ ಕಾರ್ಯಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದರ್ಶನ್‌ ಬಗ್ಗೆ ಅವರ ಮೊದಲ ಗುರು ಅಡ್ಡಂಡ ಕಾರ್ಯಪ್ಪ ಅವರು ದರ್ಶನ್‌ ಕುರಿತಾಗಿ ಬೇಸರ ಹೊರ ಹಾಕಿದ್ದಾರೆ. ʻʻದರ್ಶನ್‌ಗೆ ಶನಿಯಾಗಿ ಬಂದಿದ್ದು ಪವಿತ್ರಾ ಗೌಡ. ರೇಣುಕಾಸ್ವಾಮಿ ಪತ್ನಿ ಅನಾಥವಾಗಿದ್ದಾಳೆʼʼಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮವೊಂದರಲ್ಲಿ ಅಡ್ಡಂಡ ಕಾರ್ಯಪ್ಪ ಮಾತನಾಡಿ ʻʻದರ್ಶನ್‌ ಮೆಜಿಸ್ಟಿಕ್‌ ಸಿನಿಮಾ ಹಿಟ್‌ ಆದ ಬಳಿಕ ನನ್ನ ಹತ್ರ ಬಂದಿದ್ದ. ನನ್ನ ಮನೆಗೆ ಬಂದು ನನ್ನ ಕಾಲಿಗೆ ಬಿದ್ದು ನಿಮ್ಮ ಆಶೀರ್ವಾದ ಎಂದ. ಅಲ್ಲಿಂದ ಅವನು ಬೆಳೆಯುತ್ತ ಹೋದ. ಹಲವು ವಿಡಿಯೊಗಳಲ್ಲಿ ಅವನ ಬಾಡಿ ಲಾಂಗ್ವೇಜ್‌ ನೋಡಿದ್ದೆ. ಅಕ್ಕನ್‌…ಅಮ್ಮನ್‌.. ಈ ರೀತಿ ಹೊಲಸು ಮಾತುಗಳು. ಅದನ್ನು ನೋಡಿ ನನಗೆ ಊಹಿಸಲು ಆಗಿಲ್ಲ. ಇವನ ನಡವಳಿಕೆ ಬರಬರುತ್ತ ತುಂಬ ಚೇಂಜ್‌ ಆಯ್ತು. ಎಜುಕೇಶನ್‌ ಕೊರತೆ ಅವನಿಗೆ ಇದೆʼʼಎಂದರು.

ಬದುಕು ಮತ್ತು ಸಿನಿಮಾ ಬೇರೆ ಬೇರೆ

ʻʻಬದುಕು ಮತ್ತು ಸಿನಿಮಾ ಬೇರೆ ಬೇರೆ. ಆದರೆ ದರ್ಶನ್‌ ಹೇಗೆ ತಿಳಿದುಕೊಂಡಿದ್ದ ಎಂದರೆ, ಸಿನಿಮಾದಲ್ಲಿ ಏನೂ ರೌಡಿಸಂ ಇರುತ್ತೋ ಅದನ್ನ ನೋಡಿ ಬದುಕು ಹಾಗೇ ಅಂದುಕೊಂಡಿದ್ದಾನೆ. ದರ್ಶನ್‌ಗೆ ಒಂದು ಪಾಠ ಇದು. ಅವನ ಜೀವನ ಇಲ್ಲಿಗೆ ಮುಗಿದಿಲ್ಲ. ರೇಣುಕಾಸ್ವಾಮಿ ಏನೋ ಸತ್ತ. ಆದರೆ ಅವನ ಹೆಂಡತಿ ಕಥೆ ಏನು? ದರ್ಶನ್‌ ಅಭಿಮಾನಿಗಳಿಗೆ ನಾನು ಹೇಳುವುದು ಇಷ್ಟೇ. ನಿಮಗೆ ದರ್ಶನ್‌ ಎಷ್ಟು ಮುಖ್ಯವೋ. ಅದೇ ರೀತಿ ರೇಣುಕಾ ಸ್ವಾಮಿ ಹೆಂಡತಿ ಕೂಡ ಅಷ್ಟೇ ಮುಖ್ಯ. ರೇಣುಕಾಸ್ವಾಮಿ ತಪ್ಪು ಮಾಡಿದ್ದಾರೆ. ಆತನ ಹೆಂಡತಿಗೆ ಸಾಂತ್ವನ ಹೇಳಿʼʼಎಂದರು.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

ಸಂಸ್ಕಾರ ಮತ್ತು ಶಿಕ್ಷಣ ಮುಖ್ಯ, ದರ್ಶನ್‌ ಬಳಿ ಎರಡೂ ಇಲ್ಲ!

ʻʻಸಂಸ್ಕಾರ ಮತ್ತು ಶಿಕ್ಷಣ ಮುಖ್ಯ. ಅದು ದರ್ಶನ್‌ ಬಳಿ ಎರಡೂ ಇಲ್ಲ. ಇನ್ನೊಂದು ಅವನಿಗೆ ಸಿಕ್ಕ ಲೋಫರ್ ಫ್ರೆಂಡ್ಸ್. ಸುದೀಪ್‌ಗೆ ಹಾಗೆ ಫ್ರೆಂಡ್ಸ್ ಮಾಡಿಕೊಳ್ಳೋಕೆ ಆಗಲ್ಲ. ಯಾಕಂದ್ರೆ, ಸುದೀಪ್ ವಿದ್ಯಾವಂತ. ಸಹವಾಸ ದೋಷ, ಹೆಂಡ, ಮೊದಲ ಹೆಂಡತಿಗೆ ಚಿತ್ರಹಿಂಸೆ ಕೊಟ್ಟಿದ್ದು, ಹಾಗೇ ಮೀಡಿಯಾದವರು ಅವನನ್ನ 2 ವರ್ಷ ಬ್ಯಾನ್ ಮಾಡಿದರು. ರಾಜ್‌ಕುಮಾರ್ ಅವರ ವಿನೀತತೆಯನ್ನ ನೋಡಿ ದರ್ಶನ್ ಕಲಿತುಕೊಳ್ಳಲಿಲ್ಲ’’ ಎಂದು ಅಡ್ಡಂಡ ಕಾರ್ಯಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Elon Musk: ಹ್ಯಾಕರ್‌ಗಳು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ಅನ್ನು ಬಳಸಿಕೊಂಡು ಚುನಾವಣೆ ಮತಯಂತ್ರಗಳನ್ನು ಹ್ಯಾಕ್‌ ಮಾಡಬಹುದು. ಹಾಗಾಗಿ, ಇವಿಎಂಗಳನ್ನು ಚುನಾವಣೆಯಲ್ಲಿ ಬಳಸಬಾರದು ಎಂದು ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ ಹೇಳಿದ್ದಾರೆ. ಇದು ಈಗ ಅಮೆರಿಕದಲ್ಲಿ ಭಾರಿ ಸಂಚಲನ ಮೂಡಿಸಿದೆ. ಎಲಾನ್‌ ಮಸ್ಕ್‌ ಹೇಳಿಕೆ ಕುರಿತು ಪರ ಹಾಗೂ ವಿರೋಧ ಚರ್ಚೆಗಳು ಶುರುವಾಗಿವೆ.

VISTARANEWS.COM


on

Elon Musk
Koo

ವಾಷಿಂಗ್ಟನ್‌/ನವದೆಹಲಿ: ಅದು ಲೋಕಸಭೆ ಚುನಾವಣೆ ಇರಲಿ, ಯಾವುದೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯೇ ನಡೆಯಲಿ, ಸೋತಾಗಲೆಲ್ಲ ಕಾಂಗ್ರೆಸ್‌ ನಾಯಕರು ಚುನಾವಣೆ ಮತಯಂತ್ರಗಳ (EVM) ದಕ್ಷತೆ ಬಗ್ಗೆ ಆರೋಪ ಮಾಡುವುದು ಸಾಮಾನ್ಯ ಎಂಬಂತಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಕಾರಣ ಯಾರೂ ಇವಿಎಂಗಳ ಬಗ್ಗೆ ತಕರಾರು ಎತ್ತಿಲ್ಲ. ಆದರೆ, ಜಾಗತಿಕ ಎಲೆಕ್ಟ್ರಿಕ್‌ ಕಾರು ಉತ್ಪಾದನಾ ದೈತ್ಯ ಟೆಸ್ಲಾ ಕಂಪನಿಯ ಸಿಇಒ ಎಲಾನ್‌ ಮಸ್ಕ್‌ (Elon Musk) ಅವರು ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಹಾಗಂತ, ಎಲಾನ್‌ ಮಸ್ಕ್‌ ಅವರು ಭಾರತದ ಇವಿಎಂಗಳ ಬಗ್ಗೆ ಚಕಾರ ಎತ್ತಿಲ್ಲ. ಬದಲಾಗಿ, ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ

ಎಲಾನ್‌ ಮಸ್ಕ್‌ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ತಿರುಗೇಟು ನೀಡಿದ್ದಾರೆ. “ಸುರಕ್ಷಿತವಾಗಿರುವ ಡಿಜಿಟಲ್‌ ಹಾರ್ಡ್‌ವೇರ್‌ಅನ್ನು ಯಾರೂ ತಯಾರಿಸಲು ಆಗುವುದಿಲ್ಲ ರೀತಿಯಲ್ಲಿ ನೀವು ಇವಿಎಂ ಕುರಿತು ಸಾಮಾನ್ಯವಾದ ಹೇಳಿಕೆ ನೀಡಿದ್ದೀರಿ. ಇವಿಎಂಗೆ ಇಂಟರ್‌ನೆಟ್‌, ಬ್ಲ್ಯೂಟ್‌, ವೈಫೈ ಸಂಪರ್ಕ ಕೂಡ ಇಲ್ಲ. ಕಾರ್ಖಾನೆಯಲ್ಲಿ ತಯಾರಾದ ಇವಿಎಂಗಳನ್ನು, ಯಾವುದೇ ಕನೆಕ್ಟಿವಿಲ್ಲದ ಇವಿಎಂಗಳನ್ನು ಹ್ಯಾಕ್‌ ಮಾಡಲು ಆಗುವುದಿಲ್ಲ. ಭಾರತದಲ್ಲಿ ಇದು ಸಾಬೀತಾಗಿದೆ. ನಾವು ಈ ಕುರಿತು ಒಂದು ಟ್ಯುಟೋರಿಯಲ್‌ ತೆರೆಯೋಣ” ಎಂದು ಟಾಂಟ್‌ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಿ ಎಂಬ ಮಸ್ಕ್‌ ಆಗ್ರಹಕ್ಕೆ ಅಮೆರಿಕವೂ ಸಾಥ್, ಶೀಘ್ರವೇ ಗುಡ್‌ ನ್ಯೂಸ್?

Continue Reading

ಪ್ರಮುಖ ಸುದ್ದಿ

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

Shootout Case: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರಿಂದ ರೌಡಿಶೀಟರ್‌ ಮೃತಪಟ್ಟಿದ್ದಾನೆ.

VISTARANEWS.COM


on

Shootout Case
Koo

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ.

ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

murder case in Bengaluru rural

ಬೆಂಗಳೂರು ಗ್ರಾಮಾಂತರ: ನಿರ್ಮಾಣ ಹಂತದ ಕಟ್ಟಡದಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ (Murder Case) ನಡೆಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗ್ರಾಮದ ಸಾಯಿ ಮೆಡೋಸ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಕೃಷ್ಣೋಜಿ ರಾವ್ (37) ಕೊಲೆಯಾದವನು.

ಶಿವಕುಮಾರ್, ರಾಜೇಶ್ವರಿ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಮದುವೆಯಾಗಿದ್ದ ರಾಜೇಶ್ವರಿ ಪತಿಯಿಂದ ದೂರಾಗಿದ್ದಳು. ಬಳಿಕ ಕೆಲ ವರ್ಷಗಳ ಹಿಂದೆ ಕೃಷ್ಣೋಜಿರಾವ್ ಜತೆ ರಾಜೇಶ್ವರಿ ಸಂಬಂಧ ಹೊಂದಿದ್ದಳು. ಇವರಿಬ್ಬರು ಗಂಡ-ಹೆಂಡತಿ ಎಂದು ಹೇಳಿಕೊಂಡು ಗಾರೆ ಕೆಲಸ ಮಾಡಿಕೊಂಡು ಒಟ್ಟಿಗೆ ವಾಸವಿದ್ದರು.

ಕೃಷ್ಣೋಜಿರಾವ್, ರಾಜೇಶ್ವರಿ ಮತ್ತು ಆಕೆಯ ಮಗ ಶಿವಕುಮಾರ್ ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಿದ್ದರು. ಇತ್ತೀಚೆಗೆ ಕೃಷ್ಣೋಜಿರಾವ್ ದಿನನಿತ್ಯ ಕುಡಿದು ಬಂದು ರಾಜೇಶ್ವರಿಗೆ ಹಲ್ಲೆ ಮಾಡುತ್ತಿದ್ದ. ಇದರಿಂದಾಗಿ ರಾಜೇಶ್ವರಿ ಹಾಗೂ ಆಕೆಯ ಮಗ ಶಿವಕುಮಾರ್‌ ಬೇಸತ್ತು ಹೋಗಿದ್ದರು.

ನಿನ್ನೆ ಭಾನುವಾರ ಸಂಜೆ ಕಂಠ ಪೂರ್ತಿ ಕುಡಿದು ಬಂದಿದ್ದ ಕೃಷ್ಣೋಜಿರಾವ್, ರಾಜೇಶ್ವರಿ ಜತೆಗೆ ಗಲಾಟೆ ಮಾಡಿ ಹಲ್ಲೆ ಮಾಡುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ರಾಜೇಶ್ವರಿ ಮಗ ಶಿವಕುಮಾರ್‌ ದೊಣ್ಣೆಯಿಂದ ಕೃಷ್ಣೋಜಿರಾವ್ ತಲೆಗೆ ಹೊಡೆದಿದ್ದ.

ಆಗ ಶಿವಕುಮಾರನ ತಾಯಿ ರಾಜೇಶ್ವರಿ ಅವನನ್ನು ಬಿಡಬೇಡ ಮುಗಿಸಿಬಿಡು ಎಂದು ಹೇಳಿದ್ದಾಳೆ. ಆಗ ಮತ್ತೆ ದೊಣ್ಣೆಯಿಂದ ಮುಖ ಹಾಗೂ ತಲೆಗೆ ಹೊಡೆದು ಕೊಂದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading
Advertisement
Goat With Plastic Teeth
ವಿದೇಶ1 min ago

Goat With Plastic Teeth: ಬಕ್ರೀದ್‌ಗೆ ಬಲಿ ಕೊಡಲು ಪ್ಲಾಸ್ಟಿಕ್‌ ಹಲ್ಲಿರುವ ಮೇಕೆ ಮಾರಾಟ ಮಾಡಿ ಸಿಕ್ಕಿಬಿದ್ದ ಭೂಪ

Double iSmart to release on August 15
ಟಾಲಿವುಡ್3 mins ago

Ram Pothineni: ರಾಮ್ ಪೋತಿನೇನಿ ಅಭಿನಯದ ʻಡಬಲ್ ಇಸ್ಮಾರ್ಟ್ʼ ಬಿಡುಗಡೆಗೆ‌ ಮುಹೂರ್ತ ಫಿಕ್ಸ್!

Rahul Gandhi
ದೇಶ16 mins ago

Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Euro 2024
ಕ್ರೀಡೆ30 mins ago

Euro 2024: ಡೆನ್ಮಾರ್ಕ್ ಸವಾಲನ್ನು ಮೆಟ್ಟಿ ನಿಂತೀತೇ ಸ್ಲೊವೇನಿಯಾ?; ಬಲಾಬಲ ಹೇಗಿದೆ?

Renuka Swamy murder
ಪ್ರಮುಖ ಸುದ್ದಿ31 mins ago

Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

Elon Musk
ಪ್ರಮುಖ ಸುದ್ದಿ1 hour ago

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Shootout Case
ಪ್ರಮುಖ ಸುದ್ದಿ1 hour ago

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

kusina mane
ರಾಮನಗರ1 hour ago

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Job Alert
ಉದ್ಯೋಗ2 hours ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ2 hours ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ3 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌