Lucky Man Movie | ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆದ ಪವರ್ ಸ್ಟಾರ್ ಲಕ್ಕಿಮ್ಯಾನ್! - Vistara News

ಸಿನಿಮಾ

Lucky Man Movie | ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆದ ಪವರ್ ಸ್ಟಾರ್ ಲಕ್ಕಿಮ್ಯಾನ್!

ಡಾರ್ಲಿಂಗ್‌ ಕೃಷ್ಣ ಅಭಿನಯದ ʼಲಕ್ಕಿ ಮ್ಯಾನ್‌ʼ ಚಿತ್ರದಲ್ಲಿ (Lucky Man Movie) ಪುನೀತ್‌ ರಾಜ್‌ಕುಮಾರ್‌ ಅಭಿನಯಿಸಿದ್ದಾರೆ. ಈ ಸಿನಿಮಾದ ವಿತರಣೆಯ ಹಕ್ಕು ಈಗಾಗಲೇ ಮಾರಾಟವಾಗಿದೆ.

VISTARANEWS.COM


on

Lucky Man Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಪುನೀತ್ ರಾಜ್​ಕುಮಾರ್ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ‘ಲಕ್ಕಿಮ್ಯಾನ್’ (Lucky Man Movie) ಸಿನಿಮಾ ರಿಲೀಸ್​ಗೆ ರೆಡಿಯಾಗುತ್ತಿದೆ. ಈ ಹೊತ್ತಲ್ಲೇ ಸಿನಿಮಾ ಟೀಮ್‌ಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಬಿಡುಗಡೆಗೂ ಮೊದಲೇ ‘ಲಕ್ಕಿಮ್ಯಾನ್’ ಹೊಸ ದಾಖಲೆ ಬರೆದಿದೆ. ಅಪ್ಪು ಅಭಿನಯದ ಕೊನೆಯ ಕಮರ್ಷಿಯಲ್ ಸಿನಿಮಾಗೆ ಅಭಿಮಾನಿಗಳು ಖುಷಿಯಿಂದ ಕಾಯುತ್ತಿದ್ದಾರೆ.

ಅಷ್ಟಕ್ಕೂ ‘ಲಕ್ಕಿಮ್ಯಾನ್’ ಸಿನಿಮಾ ಹಲವು ವಿಚಾರಗಳಿಗೆ ಈ ಮೊದಲಿನಿಂದಲೂ ಭಾರಿ ಗಮನ ಸೆಳೆದಿತ್ತು. ‘ಜೇಮ್ಸ್’ ರಿಲೀಸ್ ದಿನವನ್ನು ಹಬ್ಬದಂತೆ ಅಪ್ಪು ಫ್ಯಾನ್ಸ್ ಸೆಲೆಬ್ರೇಟ್ ಮಾಡಿದ್ದರು. ಇದಾದ ಬಳಿಕ ‘ಗಂಧದಗುಡಿ’ ಡಾಕ್ಯುಮೆಂಟರಿ ಬಿಟ್ಟರೆ ಅಪ್ಪು ನಟಿಸಿರುವ ಕೊನೆಯ ಕಮರ್ಷಿಯಲ್ ಸಿನಿಮಾ ‘ಲಕ್ಕಿಮ್ಯಾನ್’. ಹೀಗಾಗಿ ಅಭಿಮಾನಿಗಳು ತೀವ್ರ ಕುತೂಹಲದಿಂದ ಸಿನಿಮಾ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಹೀಗಾಗಿ ವಿತರಣೆ ಹಕ್ಕನ್ನು ಪಡೆಯಲು ವಿತರಕರು ಮುಗಿಬಿದ್ದಿದ್ದರು. ಇದೇ ಕಾರಣಕ್ಕೆ ಹೊಸ ದಾಖಲೆ ಬರೆದಿದೆ ‘ಲಕ್ಕಿಮ್ಯಾನ್’ ಚಿತ್ರ.

ಇದನ್ನೂ ಓದಿ | Lucky Man Movie | ಆಗಸ್ಟ್‌ನಲ್ಲಿ ತೆರೆಗೆ ಅಪ್ಪಳಿಸಲಿದೆ ಲಕ್ಕಿ ಮ್ಯಾನ್‌: ಅಪ್ಪು ಬಾಸ್‌ ನೋಡಲು ಫ್ಯಾನ್ಸ್‌ ಕಾತುರ

ವಿತರಣೆ ಹಕ್ಕು ಸೋಲ್ಡ್ ಔಟ್!

ಸಿನಿಮಾಗಳ ಟಿಕೆಟ್ ಸೋಲ್ಡ್ ಔಟ್ ಆಗೋದನ್ನು ಕೇಳಿದ್ದೀವಿ, ಆದರೆ ‘ಲಕ್ಕಿಮ್ಯಾನ್’ ಚಿತ್ರದ ವಿಚಾರದಲ್ಲಿ ಸಿನಿಮಾ ವಿತರಣೆ ಹಕ್ಕು ಒಂದೇ ದಿನಕ್ಕೆ ಸೋಲ್ಡ್ ಔಟ್ ಆಗಿದೆ. ರಾಜ್ಯಾದ್ಯಂತ ಸಿನಿಮಾ ರಿಲೀಸ್​ಗೆ ವಿತರಕರು ಹಕ್ಕು ಪಡೆದಿದ್ದು, ಒಂದೇ ದಿನದಲ್ಲಿ ವ್ಯವಹಾರ ಮುಗಿಸಿದೆ ‘ಲಕ್ಕಿಮ್ಯಾನ್’. ಈ ಮೂಲಕ ರಿಲೀಸ್​​ಗೂ ಮೊದಲೇ ಸಿಹಿಸುದ್ದಿ ಪಡೆದಿದೆ ಚಿತ್ರತಂಡ.

ತಮಿಳಿನ ‘ಓ ಮೈ ಕಡವುಲೇ’ ರಿಮೇಕ್ ಈ ‘ಲಕ್ಕಿಮ್ಯಾನ್’. ‘ಓ ಮೈ ಕಡವುಲೇ’ ಚಿತ್ರದಲ್ಲಿ ವಿಜಯ್ ಸೇತುಪತಿ ನಟಿಸಿದ್ದಾರೆ. ವಿಜಯ್ ಸೇತುಪತಿ ಅವರ ಪಾತ್ರವನ್ನು ‘ಲಕ್ಕಿಮ್ಯಾನ್’ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್‌ ನಿರ್ವಹಿಸಿದ್ದಾರೆ. ಹೀಗಾಗಿಯೇ ಈ ಚಿತ್ರದ ಬಗ್ಗೆ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಆಗಿದೆ. ಈ ವರ್ಷ ‘ಲವ್ ಮಾಕ್ಟೇಲ್ 2’ ಮೂಲಕ ಭರ್ಜರಿ ಓಪನಿಂಗ್ ಪಡೆದಿರುವ ಡಾರ್ಲಿಂಗ್ ಕೃಷ್ಣ ಅವರಿಗೆ ಮತ್ತೊಂದು ಹಿಟ್ ‘ಲಕ್ಕಿಮ್ಯಾನ್’ ಮೂಲಕ ಸಿಗುವ ಸಾಧ್ಯತೆ ದಟ್ಟವಾಗಿದೆ.

ಈ ಚಿತ್ರಕ್ಕೆ ಮೀನಾಕ್ಷಿ ಸುಂದರಂ, ಕಾಮರಾಜ್ ಬಂಡವಾಳ ಹೂಡಿದ್ದಾರೆ. ‘ಲಕ್ಕಿಮ್ಯಾನ್’ ಚಿತ್ರದ ತಾರಾಬಳಗ ಕೂಡ ತುಂಬಾ ದೊಡ್ಡದಿದೆ. ಸುಂದರ್‌ ರಾಜ್, ರಂಗಾಯಣ ರಘು, ನಾಗಭೂಷಣ್, ಸುಧಾ ಬೆಳವಾಡಿ, ಸಾಧುಕೋಕಿಲ, ರೋಶನಿ ಸೇರಿದಂತೆ ಸ್ಟಾರ್​ಗಳ ದಂಡೇ ಈ ಚಿತ್ರದಲ್ಲಿ ನಟಿಸಿದೆ. ಈಗಾಗಲೇ ‘ಲಕ್ಕಿಮ್ಯಾನ್’ ಟೀಸರ್ ಹಾಗೂ ಸಾಂಗ್ಸ್ ಸಖತ್ ಸದ್ದು ಮಾಡುತ್ತಿದೆ. ಚಿತ್ರದ ವಿತರಣೆ ಹಕ್ಕು ಬಿಸಿ ದೋಸೆಯಂತೆ ಸೋಲ್ಡ್ ಔಟ್ ಆಗಿರುವುದು ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.

ಇದನ್ನೂ ಓದಿ | Lucky Man Movie | ನಟ ಪುನೀತ್ ರಾಜಕುಮಾರ್ ಅಭಿನಯದ ಲಕ್ಕಿ ಮ್ಯಾನ್ ಸಿನಿಮಾದ ಟೀಸರ್ ಔಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Kamal Haasan: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್!

Kamal Haasan: 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Kamal Haasan indian 2 second song out
Koo

ಬೆಂಗಳೂರು: ಕಾಲಿವುಡ್‌ ನಟ ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಸಿನಿಮಾ ʻಇಂಡಿಯನ್ 2ʼ ಜುಲೈ 12ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ. ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಮ ಜೋಗಯ್ಯಶಾಸ್ತ್ರಿ ತೆಲುಗು ವರ್ಷನ್ ಹಾಡಿಗೆ ಸಾಹಿತ್ಯ ಬರೆದಿದ್ದು, ತಾಮರೈ ತಮಿಳು ವರ್ಷನ್ ಗೆ ಪದ ಗೀಚಿದ್ದಾರೆ. ಅನಿರುದ್ಧ ರವಿಚಂದರ್ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಕಮಲ್ ಹಾಸನ್ ಜತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ʻತಿಥಿʼ ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ ʻದಾಸಪ್ಪʼ ಸಿನಿಮಾ ಟ್ರೈಲರ್‌ ಔಟ್‌!

Kannada New Movie: “ತಿಥಿ” ಚಿತ್ರದ (Kannada New Movie) ಮೂಲಕ ಎಲ್ಲರ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿರುವ “ದಾಸಪ್ಪ” ಚಿತ್ರದ ಟ್ರೈಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್‌ ಟ್ರೈಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

VISTARANEWS.COM


on

Kannada New Movie Dasappa Kannada Movie Trailer
Koo

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ “ತಿಥಿ” ಚಿತ್ರದ (Kannada New Movie) ಮೂಲಕ ಎಲ್ಲರ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿರುವ “ದಾಸಪ್ಪ” ಚಿತ್ರದ ಟ್ರೈಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್‌ ಟ್ರೈಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ನಿರ್ದೇಶಕ ವಿಜಯ್ ಕೀಲಾರ ಮಾತನಾಡಿ ʻʻದಾಸಪ್ಪ” ಪಕ್ಕಾ ಗ್ರಾಮೀಣ ಸೊಗಡಿನ ಚಿತ್ರ. ಎಲ್ಲಾ ಹಳ್ಳಿಗಳಲ್ಲಿ ಯಾವುದೇ ಕಾರ್ಯವಾದರೂ “ದಾಸಪ್ಪ” ಅವರು ಇರಲೇ ಬೇಕು. ಅಂತಹ ದಾಸಪ್ಪ ಎಂಬ ಪಾತ್ರದ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. “ತಿಥಿ” ಚಿತ್ರದ ಸ್ಫೂರ್ತಿಯಿಂದ ಈ ಚಿತ್ರ ಮಾಡಿದ್ದೇನೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ನಾನೇ ಬರೆದಿದ್ದೇನೆ. ಆನಂದ್ ಕೆಂಪೇಗೌಡ ಕೆಬ್ಬಳ್ಳಿ ಈ ಚಿತ್ರದ ನಿರ್ಮಾಪಕರು. ಶ್ರೀನಿವಾಸ್ ಹಾಗೂ ರಾಘವೇಂದ್ರ ಸಹ ನಿರ್ಮಾಪಕರು‌. “ತಿಥಿ” ಖ್ಯಾತಿಯ ನಟ ತಮ್ಮಣ್ಣ ಅವರು “ದಾಸಪ್ಪ”ನಾಗಿ ಅಭಿನಯಿಸಿದ್ದಾರೆ. ಮಂಜು ಪಾವಗಡ, ವಿನೋದ್ ಗೊಬ್ರಗಾಲ, ಅಂಜನ ಗಿರೀಶ್, ಸುರಕ್ಷಿತ ಶೆಟ್ಟಿ, ಸಿಂಚನ ಗೌಡ ಮುಂತಾದವರು ಅಭಿನಯಿಸಿದ್ದಾರೆ. ಹಾಡುಗಳು ಹಾಗೂ ಸಾಹಸ ಸನ್ನಿವೇಶಗಳು ಇಲ್ಲದಿರುವುದು ಈ ಚಿತ್ರದ ವಿಶೇಷ. ಮಂಡ್ಯ, ಕೀಲಾರ, ಮದ್ದೂರಿನಲ್ಲಿ ಚಿತ್ರೀಕರಣವಾಗಿದೆ. ಸದ್ಯದಲ್ಲೇ ತೆರೆಗೆ ಬರಲಿದೆʼʼ ಎಂದರು.

“ದಾಸಪ್ಪ” ನ ಪಾತ್ರದಲ್ಲಿ ಅಭಿನಯಿಸಿದ್ದು ಖುಷಿಯಾಗಿದೆ ಎಂದ ನಟ ತಮ್ಮಣ್ಣ, ಚಿತ್ರತಂಡದವರಿಗೆ ಧನ್ಯವಾದ ತಿಳಿಸಿದರು.

ಇದನ್ನೂ ಓದಿ: Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

ʻʻನಿರ್ದೇಶಕರು ನನ್ನ ಸ್ನೇಹಿತರು. ಕಥೆ ಕೇಳಿ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು. ನಿರ್ಮಾಣದ ಜತೆಗೆ ಸಣ್ಣ ಪಾತ್ರದಲ್ಲೂ ಕಾಣಿಸಿಕೊಂಡಿರುವುದಾಗಿʼʼ ಸಹ ನಿರ್ಮಾಪಕ ಶ್ರೀನಿವಾಸ್ ತಿಳಿಸಿದರು‌. ಮತ್ತೊಬ್ಬ ಸಹ ನಿರ್ಮಾಪಕ ರಾಘವೇಂದ್ರ ಹಾಗೂ ಸಿರಿ ಮ್ಯೂಸಿಕ್ ಸುರೇಶ್ ಚಿಕ್ಕಣ್ಣ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಚಿತ್ರದಲ್ಲಿ ನಟಿಸಿರುವ ಮಂಜು ಪಾವಗಡ, ವಿನೋದ್ ಗೊಬ್ರಗಾಲ, ಸುರಕ್ಷಿತ, ಸಿಂಚನ ಗೌಡ ಮುಂತಾದವರು ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು.

Continue Reading

ಸ್ಯಾಂಡಲ್ ವುಡ್

Prajwal Devaraj: ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಕುಟುಂಬಸ್ಥರ ಆಕ್ರೋಶ!

Prajwal Devaraj: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.ಪ್ರಜ್ವಲ್‌ ಬಗ್ಗೆ ಹರಿದಾಡುತ್ತಿರುವ ಈ ವಿಚಾರವನ್ನು ಅರಗಿಸಿಕೊಳ್ಳಲಾಗದೇ, ಅಭಿಮಾನಿ ವಲಯವೂ ಆತಂಕಕ್ಕೀಡಾಗಿತ್ತು. ಈ ಬಗ್ಗೆ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ.

VISTARANEWS.COM


on

Prajwal Devaraj death news take leagal action by family
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್​ ದೇವರಾಜ್ (Prajwal Devaraj) ಅವರುಇನ್ನಿಲ್ಲ ಎಂಬ ಸುದ್ದಿ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ‘ಪ್ರಜ್ವಲ್​ ದೇವರಾಜ್​ ಇನ್ನಿಲ್ಲ. ಓಂ ಶಾಂತಿ’ ಎಂಬ ಕ್ಯಾಪ್ಷನ್​ನೊಂದಿಗೆ ಪ್ರಜ್ವಲ್​ ದೇವರಾಜ್​ ಅವರ ಫೋಟೊವನ್ನು ಕಿಡಿಗೇಡಿಗಳು ವೈರಲ್​ ಮಾಡಿದ್ದಾರೆ. ಇದು ಅವರ ಕುಟುಂಬದವರ ಗಮನಕ್ಕೂ ಬಂದಿದೆ. ಪ್ರಜ್ವಲ್‌ ಬಗ್ಗೆ ಹರಿದಾಡುತ್ತಿರುವ ಈ ವಿಚಾರವನ್ನು ಅರಗಿಸಿಕೊಳ್ಳಲಾಗದೇ, ಅಭಿಮಾನಿ ವಲಯವೂ ಆತಂಕಕ್ಕೀಡಾಗಿತ್ತು. ಈ ಬಗ್ಗೆ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ.

ʻʻನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನ ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ.. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು. ಇದರಿಂದಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ ಉಂಟಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆʼʼಎಂದು ಕುಟುಂಬ ಮಾಹಿತಿ ಹಂಚಿಕೊಂಡಿದೆ.

ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Prajwal Devaraj: ಪ್ರಜ್ವಲ್ ಜತೆ ಸಂಪದಾ ರೊಮ್ಯಾನ್ಸ್!

‘ಕರಾವಳಿ’, ‘ಮಾಫಿಯಾ’, ‘ಗಣ’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ. ‘ಕರಾವಳಿ’ ಸಿನಿಮಾದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ.

ಕರಾವಳಿ (Karavali Movie)-ಇದು ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ (Gurudath Ganiga) ನಿರ್ದೇಶನದ ಅವರದೇ ಗಾಣಿಗ ಫಿಲ್ಮ್ಸ್‌ ಹಾಗೂ ವಿಕೆ ಫಿಲ್ಮ್‌ ಅಸೋಸಿಯೇಷನ್‌ನಲ್ಲಿ ನಿರ್ಮಾ಼ಣವಾಗುತ್ತಿರುವ ಚಿತ್ರ. ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ನಿರ್ದೇಶಕ ಮತ್ತು ನಿರ್ಮಾಪಕ ಗುರುದತ್ ಗಾಣಿಗ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು ‘ಇದು ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಇದು ಹಳ್ಳಿಯ ಕಥೆ. ಚಿತ್ರದಲ್ಲಿ ಕಂಬಳವೂ ಒಂದು ಪಾತ್ರವಾಗಿ ಹರಿಯಲಿದೆ’ ಎಂದು ಹೇಳಿದ್ದರು.

ಇನ್ನು ಕರಾವಳಿ ಸಿನಿಮಾಗೆ ನಾಯಕಿಯಾಗಿ ಸಂಪದಾ ಆಯ್ಕೆ ಆಗಿದ್ದಾರೆ. ಈಗಾಗಲೇ ಬೆಂಕಿ ಹಾಗೂ ರೈಡರ್ ಸಿನಿಮಾಗಳಲ್ಲಿ ಕಾಣಿಸೊಂಡಿದ್ದ ಸಂಪದಾ ಇದೀಗ ಕರಾವಳಿ ಸಿನಿಮಾದಲ್ಲಿ ಮಿಂಚಲಿದ್ದಾರೆ. ಚಿತ್ರದ ಬಗ್ಗೆಸ ಸಖತ್ ಎಕ್ಸಾಯಿಟ್ ಆಗಿರುವ ಸಂಪದಾ ಪಶುವೈದ್ಯೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಸಿನಿಮಾ

Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

Kantara Movie: ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

VISTARANEWS.COM


on

Kantara Movie Mollywood actor enters
Koo

ಬೆಂಗಳೂರು: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ದೇಶ-ವಿದೇಶದಲ್ಲಿ ಭರ್ಜರಿ ಹೆಸರು ಗಳಿಸಿದ ಬೆನ್ನಲ್ಲೇ ರಿಷಬ್‌ ಶೆಟ್ಟಿ ಅವರು ಕಾಂತಾರ ಚಾಪ್ಟರ್‌ 1‌ (Kantara Movie) (ಪ್ರಿಕ್ವೆಲ್) ಚಿತ್ರೀಕರಣಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ, ಕಾಂತಾರ ಸಿನಿಮಾದ ಡಿಜಿಟಲ್‌ ಹಕ್ಕುಗಳು (Digital Rights) ಅಮೆಜಾನ್‌ ಪ್ರೈಮ್‌ ಪಾಲಾಗಿದ್ದು, ಸುಮಾರು 125 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿತ್ತು. ಇದೀಗ ಮಾಲಿವುಡ್‌ ಖ್ಯಾತ ನಟ ಸಿನಿಮಾಗೆ ಎಂಟ್ರಿ ಕೊಟ್ಟಿರುವುದಾಗಿ ವರದಿಯಾಗಿದೆ.

ಮಾಲಿವುಡ್‌ ನಟ ನಟ ಜಯರಾಂ ‘ಕಾಂತಾರ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ. ಒಮ್ಮೆಲೆ 5 ಭಾಷೆಗಳಲ್ಲಿ ‘ಕಾಂತಾರ’ ಚಾಪ್ಟರ್-1 ಸಿನಿಮಾ ಕಟ್ಟಿಕೊಡಲು ತಂಡ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಬೇರೆ ಭಾಷೆಗಳಲ್ಲಿ ಸಿನಿಮಾ ಬರುವುದರಿಂದ ಅಲ್ಲಿನ ಕಲಾವಿದರನ್ನು ಬಳಸಿಕೊಳ್ಳುತ್ತಿದೆ ಎನ್ನಲಾಗಿದೆ. ನಟ ಜಯರಾಂ ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಶಿವರಾಜ್‌ಕುಮಾರ್ ನಟನೆಯ ‘ಘೋಸ್ಟ್’ ಚಿತ್ರದಲ್ಲಿ ಎಸಿಪಿ ಚೆಂಗಪ್ಪ ಪಾತ್ರದಲ್ಲಿ ಅಬ್ಬರಿಸಿದ್ದರು.

ಇದನ್ನೂ ಓದಿ: Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

ಕೆಲ ದಿನಗಳ ಹಿಂದಷ್ಟೇ ರಿಷಬ್‌ ಶೆಟ್ಟಿ ಅವರು ಕಾಂತಾರ 2 ಚಿತ್ರೀಕರಣ ಆರಂಭವಾಗಿದೆ ಎಂದು ಹೇಳಿದ್ದರು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೆಯುತ್ತಿವೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದರು.

“ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್‌ಗಳಿಗೆ ಒಂದು ಪುಣ್ಯ. ಕಾಂತಾರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನೂ ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ” ಎಂದಿದ್ದರು.

ಕಾಂತಾರ ಶೂಟಿಂಗ್‌ಗಾಗಿ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

Continue Reading
Advertisement
Reserve Bank of India
ದೇಶ28 mins ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ36 mins ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್1 hour ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು2 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ2 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Viral Video
ವೈರಲ್ ನ್ಯೂಸ್2 hours ago

Viral Video: ಮುಂಬಯಿ ವಿಮಾನ ನಿಲ್ದಾಣದಲ್ಲಿ ಯುವತಿಯ ರೀಲ್ಸ್ ಹುಚ್ಚಾಟ; ಸಿಡಿದೆದ್ದ ನೆಟ್ಟಿಗರು

Muslim Personal Law
ಪ್ರಮುಖ ಸುದ್ದಿ2 hours ago

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Prajwal Revanna Case
ಕರ್ನಾಟಕ2 hours ago

ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುವ ಮೊದಲೇ ಎಚ್‌ಡಿಕೆ ಅಂತರ; ಕಬಿನಿಯಲ್ಲಿ ಪತ್ನಿ ಜತೆ ಬೋಟಿಂಗ್!

Viral Video
ವೈರಲ್ ನ್ಯೂಸ್2 hours ago

Viral Video: ಪ್ರಜ್ಞೆ ಕಳೆದುಕೊಂಡು ಬಿದ್ದ ಕೋತಿಗೆ ಮರುಜೀವ ನೀಡಿದ ಪೊಲೀಸ್ ಅಧಿಕಾರಿ; ಮನ ಮಿಡಿಯೋ ವಿಡಿಯೊ ಇಲ್ಲಿದೆ

Cow Smugling
ಪ್ರಮುಖ ಸುದ್ದಿ2 hours ago

Cow Smugling : ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ9 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌