Viral Video | ಕೊಳಕ್ಕೆ ಬಿದ್ದ ಮರಿಯಾನೆ ರಕ್ಷಿಸಿದ ಆನೆಗಳು; ಬೇಲಿಯಾಚೆಗಿದ್ದ ಆನೆಗೆ ಇನ್ನಿಲ್ಲದ ತಳಮಳ ! - Vistara News

ವೈರಲ್ ನ್ಯೂಸ್

Viral Video | ಕೊಳಕ್ಕೆ ಬಿದ್ದ ಮರಿಯಾನೆ ರಕ್ಷಿಸಿದ ಆನೆಗಳು; ಬೇಲಿಯಾಚೆಗಿದ್ದ ಆನೆಗೆ ಇನ್ನಿಲ್ಲದ ತಳಮಳ !

ಆನೆಗಳು ಮರಿಯನ್ನು ರಕ್ಷಣೆ ಮಾಡಿದ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿವೆ. ಈ ಪ್ರಾಣಿಗಳ ಸಮಯಪ್ರಜ್ಞೆಯನ್ನು ಜನ ಮೆಚ್ಚಿಕೊಂಡಿದ್ದಾರೆ.

VISTARANEWS.COM


on

Elephants
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೋಷಿಯಲ್​ ಮೀಡಿಯಾಗಳಲ್ಲಿ ಆನೆಗಳಿಗೆ ಸಂಬಂಧಿಸಿದ ಅನೇಕ ವಿಡಿಯೋಗಳನ್ನು ಈಗಾಗಲೇ ನೋಡಿರುತ್ತೀರಿ. ಹಾಗೇ ಈಗ ಮತ್ತೊಂದು ವಿಡಿಯೋ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಒಂದು ಪುಟ್ಟ ಆನೆಮರಿ ಕೊಳಕ್ಕೆ ಬಿದ್ದಾಗ ಎರಡು ಆನೆಗಳು ಅದನ್ನು ರಕ್ಷಣೆ ಮಾಡುವ ಪರಿ ನೆಟ್ಟಿಗರ ಮನಮುಟ್ಟಿದೆ. Gabriele Corno ಎಂಬ ಟ್ವಿಟರ್​ ಬಳಕೆದಾರರು ವಿಡಿಯೋ ಶೇರ್ ಮಾಡಿಕೊಂಡು ‘ಸಿಯೋಲ್​ (ದಕ್ಷಿಣ ಕೊರಿಯಾ) ನಲ್ಲಿರುವ ಒಂದು ಅಭಯಾರಣ್ಯದಲ್ಲಿ ಕಂಡು ಬಂದ ಸನ್ನಿವೇಶ’ ಎಂದು ಹೇಳಿದ್ದಾರೆ.

‘ಆನೆಯೊಂದು ತನ್ನ ಮರಿಯನ್ನು ಪಕ್ಕದಲ್ಲೇ ನಿಲ್ಲಿಸಿಕೊಂಡು ಕೊಳದಲ್ಲಿ (ಅದೊಂದು ಮಾನವ ನಿರ್ಮಿತ ಕೊಳ) ನೀರು ಕುಡಿಯುತ್ತಿತ್ತು. ಮರಿಯಾನೆಯೂ ತನ್ನ ಗಿಡ್ಡದಾದ ಸೊಂಡಲಿನಿಂದ ನೀರು ಹೀರಿಕೊಳ್ಳುತ್ತಿತ್ತು. ಆದರೆ ಅದು ತೀರ ಸಣ್ಣಗಿದ್ದ ಕಾರಣ, ಆಯ ತಪ್ಪಿ ಅಕಸ್ಮಾತ್​ ಆಗಿ ನೀರಿನಲ್ಲಿ ಬಿದ್ದುಹೋಯಿತು. ಮರಿಯಾನೆ ಬಿದ್ದ ತಕ್ಷಣ, ಮೇಲೆ ಇದ್ದ ಆನೆ ಒಮ್ಮೆಲೇ ಅಲರ್ಟ್ ಆಯಿತು. ಅಷ್ಟೇ ಅಲ್ಲ, ಅಲ್ಲೇ ಸ್ವಲ್ಪ ದೂರದಲ್ಲಿ ಇದ್ದ ಆನೆಯೊಂದು ಲಘುಬಗೆಯಿಂದ ಓಡೋಡಿ ಬಂತು. ಇನ್ನೊಂದು ಆನೆ ಬರಲು ಪ್ರಯತ್ನಿಸಿತಾದರೂ ಗೇಟ್ ಹಾಕಿದ್ದರಿಂದ ಕೊಳದ ಬಳಿ ಬರಲಾಗದೆ ಪರಿತಪಸಿತು. ಗೇಟ್​ ಬುಡದಲ್ಲಿ ನಿಂತು ಅತ್ತಿಂದತ್ತ ಓಡಾಡಿ ತನ್ನ ತಳಮಳವನ್ನು ಹೊರಹಾಕುತ್ತಿತ್ತು. ಕೊಳದಲ್ಲಿ ಬಿದ್ದಿದ್ದ ಆನೆ ಮರಿ ಮುಳುಗುವಷ್ಟು ನೀರು ಅಲ್ಲಿತ್ತು. ಹೀಗಾಗಿ ಅದು ಏನು ಮಾಡಲು ತೋಚದೆ, ಸೊಂಡಿಲನ್ನು ಸ್ವಲ್ಪವೇ ಮೇಲೆತ್ತುತ್ತಿತ್ತು. ಈ ಎರಡು ದೊಡ್ಡ ಆನೆಗಳು ತಾವೂ ಕೊಳಕ್ಕೆ ಇಳಿದು, ಅದನ್ನು ಕರೆದುಕೊಂಡು ಬಂದಿದ್ದನ್ನು ವಿಡಿಯೋದಲ್ಲಿ ನೋಡಬಹುದು.

ಆನೆಗಳು ಮರಿಯಾನೆಯನ್ನು ರಕ್ಷಿಸಿದ ರೀತಿ ಮತ್ತು ಅದು ನೀರಿಗೆ ಬೀಳುತ್ತಿದ್ದಂತೆ ಇವು ತೋರಿದ ಸಮಯಪ್ರಜ್ಞೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ‘ಆನೆಗಳು ಮರಿಯನ್ನು ರಕ್ಷಿಸುವ ಹಲವು ವಿಡಿಯೋಗಳನ್ನು ನೋಡಿದ್ದೇನೆ. ಎಲ್ಲವೂ ಖುಷಿಕೊಡುತ್ತವೆ’ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ‘ಆ ಮರಿ ಬಿದ್ದ ತಕ್ಷಣ ಆನೆಗಳು ಅದರ ರಕ್ಷಣೆಗೆ ಆನೆಗಳು ತೋರಿಸಿದ ಅವಸರ ನೋಡಿ ಆಶ್ಚರ್ಯವಾಯಿತು’ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video | ಸ್ವಾತಂತ್ರ್ಯ ಹಬ್ಬಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ಭರ್ಜರಿ ಡ್ಯಾನ್ಸ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Shocking Video: ಮಗುವನ್ನು ಎತ್ತಿಕೊಂಡು ಹೋಗಲು ಕೋತಿಯ ಶತಪ್ರಯತ್ನ; ಮುಂದೇನಾಯ್ತು?

ಕೋತಿಗಳು ನಿಮ್ಮ ಸುತ್ತಮುತ್ತ ಇದ್ದರೆ ಎಚ್ಚರ. ಪುಟ್ಟ ಮಕ್ಕಳನ್ನು ಇದು ಎಳೆದುಕೊಂಡು ಹೋಗುವುದು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಈ ಎರಡು ವಿಡಿಯೋಗಳು ನಿಮ್ಮ ಎದೆಯಲ್ಲಿ ನಡುಕ (Shocking Video) ಹುಟ್ಟಿಸದೆ ಇರಲಾರದು.

VISTARANEWS.COM


on

By

Shocking Video
Koo

ಮಕ್ಕಳು (Kids) ಆಟವಾಡುವಾಗ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಯಾಕೆಂದರೆ ಅಪಾಯ (danger) ಎಲ್ಲಿಂದ, ಹೇಗೆ ಬರುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿರುವ ಈ ವಿಡಿಯೋ ನೋಡಿದರೆ ಒಂದು ಕ್ಷಣ ಎಂತವರನ್ನೂ ಭಯ ಬೀಳಿಸದೆ (Shocking Video) ಇರಲಾರದು. ಆಟವಾಡುತ್ತಿದ್ದ ಮಗುವಿನ ಮೇಲೆ ಕೋತಿಯೊಂದು ನಿರಂತರ ದಾಳಿಗೆ ಮುಂದಾದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್ ಆಗಿರುವ ಈ ವಿಡಿಯೋದಲ್ಲಿ ಕೋತಿಯೊಂದು ಇತರ ಮಕ್ಕಳೊಂದಿಗೆ ಹೊರಗೆ ಆಡುತ್ತಿರುವ ಮಗುವಿನ ಮೇಲೆ ದಾಳಿ ಮಾಡಿದೆ. ಮಗು ಮನೆಯ ಹೊರಗೆ ಮರದ ಮೆಟ್ಟಿಲುಗಳ ಮೇಲೆ ಇದ್ದಾಗ ಮಂಗ ಇದ್ದಕ್ಕಿದ್ದಂತೆ ಹಾರಿ ಬಂದು ಮಗುವನ್ನು ಎಳೆದುಕೊಂಡು ಹೋಗಲು ಪ್ರಯತ್ನಿಸುತ್ತಿದೆ.

ಇತರ ಮಕ್ಕಳು ಭಯದಿಂದ ಓಡಿಹೋಗುತ್ತಾರೆ. ಕೂಡಲೇ ಮಗುವಿನ ಬೊಬ್ಬೆ ಕೇಳಿ ಓಡಿ ಬಂದ ತಾಯಿ ಮಗುವನ್ನು ರಕ್ಷಿಸಲು ಪ್ರಯತ್ನಿಸುತ್ತಾಳೆ. ಆದರೂ ಮಗ ಆಕೆಯ ಕೈಯಿಂದ ಮಗುವನ್ನು ಹಿಡಿದುಕೊಂಡು ಹೋಗಲು ಪ್ರಯತ್ನಿಸುತ್ತದೆ. ಕೂಡಲೇ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಕೋತಿಯನ್ನು ಹೆದರಿಸಲು ಪ್ರಯತ್ನಿಸುತ್ತಾರೆ. ಅವರು ಎಷ್ಟೇ ಪ್ರಯತ್ನ ಮಾಡಿದರೂ ಕೋತಿಯೂ ಮಗುವನ್ನು ಕೊಂಡೊಯ್ಯಲು ಬಿಡದ ಪ್ರಯತ್ನ ನಡೆಸಿದೆ.


ಮಗುವಿನ ತಾಯಿ ಮಗುವನ್ನು ಕೋತಿಯ ಹಿಡಿತದಿಂದ ಕಿತ್ತು ತನ್ನ ಮಡಿಲಲ್ಲಿ ಹಿಡಿದಿಡುತ್ತಾಳೆ. ಆದರೆ, ಪಟ್ಟುಬಿಡದ ಕೋತಿ ತನ್ನ ದಾಳಿಯನ್ನು ಮುಂದುವರೆಸಿದೆ. ತಾಯಿಯ ತೋಳುಗಳಿಂದಲೂ ಮಗುವನ್ನು ಎಳೆಯಲು ಪ್ರಯತ್ನಿಸುತ್ತಿದೆ.

ಈಗಾಗಲೇ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆದಿದೆ. ಸುಮಾರು 7 ಮಿಲಿಯನ್ ಮಂದಿ ಇದನ್ನು ವೀಕ್ಷಿಸಿದ್ದಾರೆ. ಇದಕ್ಕೆ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದು ಎಲ್ಲರ ಅಸಹಾಯಕತೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ.

ಈ ವಿಡಿಯೋ ಜೊತೆಗೆ ನೆಟ್ಟಿಗರೊಬ್ಬರು ಮತ್ತೊಂದು ಕೋತಿ ದಾಳಿಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇತರ ಮಕ್ಕಳೊಂದಿಗೆ ಆಡುತ್ತಿದ್ದ ಪುಟ್ಟ ಮಗುವನ್ನು ಕೋತಿಯೊಂದು ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ.


ಮನೆಯ ಹೊರಗೆ ಇತರ ಮಕ್ಕಳೊಂದಿಗೆ ಪುಟ್ಟ ಮಗು ಆಟವಾಡುತ್ತಿತ್ತು. ಅಲ್ಲಿಗೆ ಬಂದ ಕೋತಿಯೊಂದು ಮಗುವನ್ನು ಅಂಗಳದಲ್ಲಿ ಸಾಕಷ್ಟು ದೂರದವರೆಗೆ ಎಳೆದುಕೊಂಡು ಹೋಗಿದೆ. ಆದರೆ ಮಗುವನ್ನು ಎತ್ತಿಕೊಂಡು ಹೋಗಲು ಆಗಲಿಲ್ಲ. ಅಲ್ಲಿಯೇ ಇದ್ದ ಜನರನ್ನು ಕಂಡು ಹೆದರಿ ಅದು ಮಗುವನ್ನು ಬಿಟ್ಟು ಹೋಯಿತು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದ್ದು, ಸುಮಾರು 52 ಸಾವಿರ ಮಂದಿ ಇದನ್ನು ವೀಕ್ಷಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ತನ್ನಿಂದಲೇ ಅತ್ಯಾಚಾರಕ್ಕೊಳಗಾಗಿದ್ದ ಯುವತಿಯ ಅಪಹರಣಕ್ಕೆ ಯತ್ನ; ಕತ್ತಿ ಝಳಪಿಸಿ ಕಿಡಿಗೇಡಿಯ ಅಟ್ಟಹಾಸ-ವಿಡಿಯೋ ಇದೆ

Viral Video: ಕಲ್ಲು ಅಲಿಯಾಸ್‌ ಸಲೀಂ ಖಾನ್‌ ಎಂಬಾತ ತನ್ನ ಸ್ನೇಹಿತರ ಜೊತೆಗೆ ಏಕಾಏಕಿ 22 ವರ್ಷದ ಹುಡುಗಿಯ ಮನೆಗೆ ನುಗ್ಗಿದ್ದ. ಅಲ್ಲಿ ಮತ್ತೊಂದು ಯುವಕನ ಜೊತೆ ಆಕೆ ನಿಶ್ಚಿತಾರ್ಥ ನಡೆಯುತ್ತಿರುವ ಬಗ್ಗೆ ತಿಳಿದೇ ಮನೆಗೆ ನುಗ್ಗಿದ್ದ ಸಲೀಂ ತಲ್ವಾರ್‌ ತೋರಿಸಿ ಎಲ್ಲರನ್ನೂ ಹೆದರಿಸಿದ್ದಾನೆ. ಅಷ್ಟೇ ಅಲ್ಲದೇ ಯುವತಿಯನ್ನು ಅಲ್ಲಿಂದ ಎಳೆದೊಯ್ಯಲು ಯತ್ನಿಸಿದ್ದ. ಆಗ ಆಕೆಯ ಮನೆಯವರು ಅಡ್ಡಿಪಡಿಸಿದ್ದಾರೆ. ಆಗ ಕೋಪಕೊಂಡ ಸಲೀಂ ಆಕೆಯ ತಂದೆಯ ಕಾಲು ಮುರಿದಿದ್ದಾನೆ. ಆಕೆ ಸಹೋದರನ ಕೈ ಮುರಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೇ ಯುವತಿಯ ತಾಯಿಯನ್ನು ಭೀಕರವಾಗಿ ಥಳಿಸಿದ್ದಾನೆ.

VISTARANEWS.COM


on

Viral Video
Koo

ಭೋಪಾಲ್‌: ಈಗೀಗ ಪ್ರೀತಿ ಪ್ರೇಮದ ಹೆಸರಿನಲ್ಲಿ ಹಲ್ಲೆ, ಹತ್ಯೆ, ಅತ್ಯಾಚಾರ ಇವೆಲ್ಲ ಸರ್ವೇ ಸಾಮಾನ್ಯ ಎನ್ನುವಂತೆ ನಡೆಯುತ್ತಿರುತ್ತವೆ. ಇಲ್ಲೊಬ್ಬ ಭೂಪಾ ಮದುವೆ ನಿಶ್ಚಿತಾರ್ಥ(Engagement) ನಡೆಯುತ್ತಿದ್ದ ಮನೆಗೆ ನುಗ್ಗಿ ತಲ್ವಾರ್‌ ತೋರಿಸಿ ವಧುವನ್ನೇ ಅಪಹರಿಸಲು ಯತ್ನಿಸಿದ ಘಟನೆ ಮಧ್ಯಪ್ರದೇಶ(Madhya Pradesh)ದಲ್ಲಿ ನಡೆದಿದೆ. ಅಶೋಕ್‌ ನಗರದಲ್ಲಿ ಈ ಘಟನೆ ನಡೆದಿದ್ದು, ತನ್ನಿಂದ ಅತ್ಯಾಚಾರ(Rape)ಕ್ಕೊಳಗಾಗಿದ್ದ ಸಂತ್ರಸ್ತೆ ಮದುವೆ ಆಗುತ್ತಿದ್ದಾಳೆ ಎಂದು ತಿಳಿದ ಕೂಡಲೇ ಮದುವೆ ನಿಶ್ಚಿತಾರ್ಥ ಆಗುತ್ತಿದ್ದ ಮನೆಗೆ ನುಗ್ಗಿದ ಕಿಡಿಗೇಡಿ ಆಕೆ ತಂದೆ ತಾಯಿ ಮೇಲೆ ದಾರುಣವಾಗಿ ಹಲ್ಲೆ ನಡೆಸಿ ಆಕೆಯನ್ನು ಅಪಹರಿಸಲು ಯತ್ನಿಸಿದ್ದಾನೆ. ಈ ಭೀಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಕಲ್ಲು ಅಲಿಯಾಸ್‌ ಸಲೀಂ ಖಾನ್‌ ಎಂಬಾತ ತನ್ನ ಸ್ನೇಹಿತರ ಜೊತೆಗೆ ಏಕಾಏಕಿ 22 ವರ್ಷದ ಹುಡುಗಿಯ ಮನೆಗೆ ನುಗ್ಗಿದ್ದ. ಅಲ್ಲಿ ಮತ್ತೊಂದು ಯುವಕನ ಜೊತೆ ಆಕೆ ನಿಶ್ಚಿತಾರ್ಥ ನಡೆಯುತ್ತಿರುವ ಬಗ್ಗೆ ತಿಳಿದೇ ಮನೆಗೆ ನುಗ್ಗಿದ್ದ ಸಲೀಂ ತಲ್ವಾರ್‌ ತೋರಿಸಿ ಎಲ್ಲರನ್ನೂ ಹೆದರಿಸಿದ್ದಾನೆ. ಅಷ್ಟೇ ಅಲ್ಲದೇ ಯುವತಿಯನ್ನು ಅಲ್ಲಿಂದ ಎಳೆದೊಯ್ಯಲು ಯತ್ನಿಸಿದ್ದ. ಆಗ ಆಕೆಯ ಮನೆಯವರು ಅಡ್ಡಿಪಡಿಸಿದ್ದಾರೆ. ಆಗ ಕೋಪಕೊಂಡ ಸಲೀಂ ಆಕೆಯ ತಂದೆಯ ಕಾಲು ಮುರಿದಿದ್ದಾನೆ. ಆಕೆ ಸಹೋದರನ ಕೈ ಮುರಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೇ ಯುವತಿಯ ತಾಯಿಯನ್ನು ಭೀಕರವಾಗಿ ಥಳಿಸಿದ್ದಾನೆ.

ಇದಾದ ಬಳಿಕ ಕಿಡಿಗೇಡಿಗಳು ಕತ್ತಿ, ರಾಡ್‌ ತೋರಿಸಿ ಝಳಪಿಸಿ ಅಲ್ಲಿದ್ದ ಜನರನ್ನು ಹೆದರಿಸಿ, ಯುವತಿಯನ್ನು ಎಳೆದೊಯ್ಯಲು ಯತ್ನಿಸಿದ್ದಾರೆ. ಯುವತಿ ಸಹಾಯಕ್ಕಾಗಿ ಎಷ್ಟೇ ಕೂಗಿದರೂ ದುಷ್ಕರ್ಮಿಗಳ ಕೈಯಲ್ಲಿದ್ದ ಕತ್ತಿ ನೋಡಿ ಜನ ಹೆದರಿದ್ದರು. ಆದರೆ ಮತ್ತಷ್ಟು ಜನ ಸ್ಥಳದಲ್ಲಿ ಜಮಾಯಿಸಿದ್ದನ್ನು ಕಂಡು ಹೆದರಿದ ದುಷ್ಕರ್ಮಿಗಳು ಯುವತಿಯನ್ನು ಅಲ್ಲೇ ಬಿಟ್ಟು ಎಸ್ಕೇಪ್‌ ಆಗಿದ್ದಾರೆ. ಅಲ್ಲಿಂದ ಹೊರಡುವಾಗ ಯುವತಿ ಮತ್ತು ಆಕೆಯ ಕುಟುಂಬಸ್ಥರಿಗೆ ಬೆದರಿಕೆ ಒಡ್ಡಿದ್ದಾನೆ.

ಕಿಡಿಗೇಡಿಗಳು ಪೊಲೀಸ್‌ ಬಲೆಗೆ

ಇನ್ನು ಘಟನೆ ಬೆನ್ನಲ್ಲೇ ಪೊಲೀಸ್‌ ಕೇಸ್‌ ದಾಖಲಾಗಿದ್ದು, ಕಲ್ಲು ಅಲಿಯಾಸ್‌ ಸಲೀಂ ಖಾನ್‌, ಜೋಧಾ, ಸಮೀರ್‌ ಮತ್ತು ಶಾರೂಖ್‌ನನ್ನು ಅರೆಸ್ಟ್‌ ಮಾಡಿದ್ದಾರೆ. ಇನ್ನು ಸಲೀಂ ಈ ಹಿಂದೆ ಯುವತಿ ಮೇಲೆ ಅತ್ಯಾಚಾರ ಎಸಗಿ ಆಕೆ ಖಾಸಗಿ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಲೀಕ್‌ ಮಾಡಿ ದುಷ್ಕೃತ್ಯ ಮೆರೆದಿದ್ದ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಮೊಕದ್ದಮೆ ಎದುರಿಸುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Continue Reading

ವೈರಲ್ ನ್ಯೂಸ್

Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

Rameshwaram Cafe: ವಾರದ ಹಿಂದೆ ಹೈದರಾಬಾದ್‌ನಲ್ಲಿರುವ ರಾಮೇಶ್ವರಂ ಕೆಫೆ ಮೇಲೆ ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅವಧಿ ಮೀರಿದ 100 ಕೆ.ಜಿ. ಉದ್ದು, 10 ಕೆ.ಜಿ. ಮೊಸರು ಮತ್ತು 8 ಲೀಟರ್ ಹಾಲು ಪತ್ತೆ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಮಾಲೀಕ ರಾಘವೇಂದ್ರ ರಾವ್‌ ಗ್ರಾಹಕರಲ್ಲಿ ಕ್ಷಮೆ ಕೋರಿ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ಸದ್ಯ ಈ ವಿಡಿಯೊ ನೆಟ್ಟಿಗರ ಟೀಕೆಗೆ ಗುರಿಯಾಗಿದೆ. ಅದಕ್ಕೇನು ಕಾರಣ? ಇಲ್ಲಿದೆ ಉತ್ತರ.

VISTARANEWS.COM


on

Rameshwaram Cafe
Koo

ಹೈದರಾಬಾದ್‌: ಹೈಟೆಕ್​ ಮಾದರಿಯಲ್ಲಿ ಆಹಾರ ತಯಾರಿಸುವ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ (Rameshwaram Cafe) ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ತಿಂಗಳುಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಂಡ ಸುದ್ದಿ ದೇಶಾದ್ಯಂತ ಸದ್ದು ಮಾಡಿತ್ತು. ಬೆಂಗಳೂರಿನ ವೈಟ್​ಫೀಲ್ಡ್​ ಶಾಖೆಯ ಮೇಲೆ ನಡೆದ ಬಾಂಬ್​ ದಾಳಿಯ ತನಿಖೆ ಈಗಲೂ ನಡೆಯುತ್ತಿದೆ. ಈ ಮಧ್ಯೆ ವಾರದ ಹಿಂದೆ ಹೈದರಾಬಾದ್‌ನಲ್ಲಿರುವ ರಾಮೇಶ್ವರಂ ಕೆಫೆ ಮೇಲೆ ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅವಧಿ ಮೀರಿದ 100 ಕೆ.ಜಿ. ಉದ್ದು, 10 ಕೆ.ಜಿ. ಮೊಸರು ಮತ್ತು 8 ಲೀಟರ್ ಹಾಲು ಪತ್ತೆಯಾಗಿತ್ತು. ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಕೆಫೆ ಮಾಲೀಕ ರಾಘವೇಂದ್ರ ರಾವ್‌ ಗ್ರಾಹಕರಲ್ಲಿ ಕ್ಷಮೆ ಕೋರಿ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ಸದ್ಯ ಈ ವಿಡಿಯೊಕ್ಕೂ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅದಕ್ಕೇನು ಕಾರಣ? ಇಲ್ಲಿದೆ ವಿವರ (Viral Video).

ರಾಘವೇಂದ್ರ ರಾವ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ವಿಡಿಯೊವೊಂದನ್ನು ಪೋಸ್ಟ್‌ ಮಾಡಿದ್ದಾರೆ. ತಮ್ಮಿಂದಾದ ತಪ್ಪನ್ನು ಒಪ್ಪಿಕೊಂಡ ಅವರು ಅದನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ʼʼನಾವು ಇಲ್ಲಿ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನಷ್ಟೇ ಗ್ರಾಹಕರಿಗೆ ನೀಡುತ್ತಿದ್ದೇವೆ. ಆಹಾರ ತಯಾರಿಗೆ ಉತ್ಕೃಷ್ಟ ವಸ್ತುಗಳನ್ನು ಬಳಸಲಾಗುತ್ತಿದೆ. ಹೌದು, ನಮ್ಮಿಂದ ಕೆಲವೊಂದು ಸಣ್ಣ ಪುಟ್ಟ ತಪ್ಪುಗಳಾಗಿವೆ. ಅದಕ್ಕಾಗಿ ಕ್ಷಮೆ ಕೋರುತ್ತಿದ್ದೇನೆ. ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್‌ ಕಲಾಂ ಅವರ ಹಾದಿಯಲ್ಲೇ ನಾವೂ ಸಾಗುತ್ತೇವೆ ಎಂದು ಎಲ್ಲ ಗ್ರಾಹಕರಿಗೆ ಈ ಮೂಲಕ ಭರವಸೆ ನೀಡುತ್ತಿದ್ದೇನೆʼʼ ಎಂದು ಅವರು ತಿಳಿಸಿದ್ದಾರೆ.

ಮುಂದುವರಿದು, “ನೀವು ಪರೀಕ್ಷೆಗಾಗಿ ನಮ್ಮಲ್ಲಿನ ಯಾವುದೇ ಬೇಳೆಕಾಳುಗಳು ಮತ್ತು ಮಸಾಲೆಗಳನ್ನು ತೆಗೆದುಕೊಳ್ಳಬಹುದು. ಉತ್ತಮ ಗುಣಮಟ್ಟದ್ದನ್ನೇ ಬಳಸುತ್ತಿದ್ದೇವೆ. ನಾವು ಬಳಸುವ ತರಕಾರಿ ಕೂಡ ಪ್ರೀಮಿಯಂ ಗುಣಮಟ್ಟದ್ದಾಗಿವೆ. ನಾವು ಯಾವ ರೀತಿಯ ತರಕಾರಿಗಳನ್ನು ಬಳಸುತ್ತೇವೆ ಎಂಬುದನ್ನು ತಪಾಸಣೆ ನಡೆಸುವಂತೆ ನಾನು ಆಹಾರ ಸುರಕ್ಷತಾ ಇಲಾಖೆಗೆ ಮನವಿ ಮಾಡುತ್ತೇನೆ. ನಮ್ಮಿಂದಾದ ತಪ್ಪುಗಳನ್ನು ತಿದ್ದಿದ್ದೇವೆʼʼ ಎಂದು ರಾಘವೇಂದ್ರ ರಾವ್‌ ತಿಳಿಸಿದ್ದಾರೆ.

ಟೀಕೆ ಯಾಕೆ?

ಕ್ಷಮೆ ಕೋರಿದ್ದೇನೋ ಸರಿ. ಇದರಲ್ಲೇನು ತಪ್ಪು? ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಕ್ಷಮೆ ಕೋರುವಾಗ ರಾಘವೇಂದ್ರ ರಾವ್‌ ವರ್ತಿಸಿದ ರೀತಿ ಮತ್ತು ಬಾಡಿ ಲಾಂಗ್ವೇಜ್‌ಗೆ ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ. ಇದು ಕ್ಷಮೆ ಕೋರುವ ಹಾಗಿಲ್ಲ, ಬದಲಾಗಿ ಬೆದರಿಕೆ ಹಾಕುವಂತಿದೆ. ಅವರ ಮಾತಿನ ಶೈಲಿ ಮತ್ತು ಬೆರಳನ್ನು ಮುಂದೆ ಮಾಡಿರುವ ರೀತಿ ನೋಡಿದರೆ ಅವರು ಬೆದರಿಸುವಂತೆ ಭಾಸವಾಗುತ್ತದೆ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

ನೆಟ್ಟಿಗರ ಪ್ರತಿಕ್ರಿಯೆ

ʼʼಮಾತನಾಡುವ ರೀತಿ ಕ್ಷಮೆ ಕೋರುವ ಹಾಗೆ ಕಾಣಿಸುತ್ತಿಲ್ಲ. ರಾಮೇಶ್ವರಂ ಕೆಫೆಯಲ್ಲಿ ದೋಸೆಗೆ ಸುಮಾರು 200 ರೂ. ನಿಗದಿ ಪಡಿಸಲಾಗಿದೆ. ದರ ದುಬಾರಿಯಾದರೂ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸುತ್ತಾರೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಇದನ್ನು ಯಾರಾದರೂ ಕ್ಷಮೆ ಕೋರುವುದು ಎಂದು ಕರೆಯುತ್ತಾರಾ? ಅವರ ಧ್ವನಿ, ಬಾಡಿ ಲಾಂಗ್ವೇಜ್‌ ನೋಡಿದರೆ ಬೆದರಿಕೆ ಹಾಕುವಂತಿದೆʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಅವರು ಗ್ರಾಹಕರನ್ನು ಬೆದರಿಸುತ್ತಿದ್ದಾರೆʼʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಒಟ್ಟಿನಲ್ಲಿ ರಾಮೇಶ್ವರಂ ಕೆಫೆ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ.

Continue Reading

ವೈರಲ್ ನ್ಯೂಸ್

Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

Viral Video:ಸಮೋಸಾ ಅಂಗಡಿಯಲ್ಲಿ ಏಕಾಏಕಿ ಬೆಂಕಿ(Fire Accident )ಕಾಣಿಸಿಕೊಂಡಿತ್ತು. ಧಗಧಗನೇ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಲು ಜನ ಹರಸಾಹಸ ಪಡುತ್ತಿದ್ದರು. ಮತ್ತೆ ಕೆಲವರು ರಸ್ತೆಯಲ್ಲಿ ನಿಂತು ನೋಡುತ್ತಿದ್ದರು. ಇನ್ನು ಕೆಲವು ಮೊಬೈಲ್‌ನಲ್ಲಿ ಘಟನೆಯ ದೃಶ್ಯವನ್ನು ರೆಕಾರ್ಡ್‌ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲೇ ಇದ್ದ ಸಿಲಿಂಡರ್‌ಗೂ ಬೆಂಕಿ ತಗುಲಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಅಲ್ಲೇ ಇದ್ದ ಜನರಿಗೆ ಬೆಂಕಿ ಜ್ವಾಲೆ ತಗುಲಿದೆ. ತಕ್ಷಣ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Viral Video
Koo

ತಿರುನೆಲ್ವೆಲಿ: ಸಮೋಸ ಅಂಗಡಿ(Samosa Shop)ಯಲ್ಲಿ ಸಿಲಿಂಡರ್‌ ಸ್ಫೋಟ(Cylinder Blast)ಗೊಂಡು ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಿರುನೆಲ್ವೆಲಿ ಜಿಲ್ಲೆಯಲ ಉತ್ತರ ರಾಧಾ ರಸ್ತೆಯಲ್ಲಿರುವ ಸಮೋಸಾ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಅಂಗಡಿ ಮಾಲೀಕ ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣದಲ್ಲಿ ಹೋರಾಟ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಭೀಕರ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ.

ಘಟನೆ ವಿವರ:

ಸಮೋಸಾ ಅಂಗಡಿಯಲ್ಲಿ ಏಕಾಏಕಿ ಬೆಂಕಿ(Fire Accident )ಕಾಣಿಸಿಕೊಂಡಿತ್ತು. ಧಗಧಗನೇ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಲು ಜನ ಹರಸಾಹಸ ಪಡುತ್ತಿದ್ದರು. ಮತ್ತೆ ಕೆಲವರು ರಸ್ತೆಯಲ್ಲಿ ನಿಂತು ನೋಡುತ್ತಿದ್ದರು. ಇನ್ನು ಕೆಲವು ಮೊಬೈಲ್‌ನಲ್ಲಿ ಘಟನೆಯ ದೃಶ್ಯವನ್ನು ರೆಕಾರ್ಡ್‌ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲೇ ಇದ್ದ ಸಿಲಿಂಡರ್‌ಗೂ ಬೆಂಕಿ ತಗುಲಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಅಲ್ಲೇ ಇದ್ದ ಜನರಿಗೆ ಬೆಂಕಿ ಜ್ವಾಲೆ ತಗುಲಿದೆ. ತಕ್ಷಣ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ನಿನ್ನೆ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಸಂಪಿಗೇಹಳ್ಳಿ ಸಮೀಪದ ಎಂಎಸ್ ನಗರದಲ್ಲಿ ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಒಂದೇ ಕುಂಟುಂಬದ ಐವರಿಗೆ ಶೇ.90ರಷ್ಟು ಸುಟ್ಟ ಗಾಯಗಳಿಗೆ ತುತ್ತಾಗಿದ್ದಾರೆ. ದಂಪತಿ ಮದನ್ ಚೌಹಾರ (32), ಪ್ರೇಮ್ ಜಾಲ(28) ಹಾಗೂ ಮಕ್ಕಳಾದ ಹಿರದ್ (12), ಪ್ರಶಾಂತ್ (06), ಅನಿತಾ (8) ಈ ಐವರು ಗಂಭೀರ ಗಾಯಗೊಂಡಿದ್ದಾರೆ. ತಡರಾತ್ರಿ ಗ್ಯಾಸ್‌ ಲಿಂಕ್‌ ಆಗಿದ್ದು, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಸಿಲಿಂಡರ್‌ ಸ್ಫೋಟಗೊಂಡಿದೆ ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿದ್ದವರಿಗೆ ಗಂಭೀರವಾದ ಸುಟ್ಟು ಗಾಯವಾಗಿವೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ನೇಪಾಳ ಮೂಲದ ಕುಟುಂಬವು ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸಂಪಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral Video: KSRTC ಬಸ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ವೈದ್ಯರು! ಡ್ರೈವರ್‌ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

Continue Reading
Advertisement
Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್3 mins ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ6 mins ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ22 mins ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neha Gowda is pregnant the actress shared the good news
ಕಿರುತೆರೆ30 mins ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ30 mins ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ32 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ40 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ46 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Dolly Dhananjay kotee distribution rights held by KRG Studios
ಸ್ಯಾಂಡಲ್ ವುಡ್50 mins ago

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

bhavani revanna case
ಪ್ರಮುಖ ಸುದ್ದಿ1 hour ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌