ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಬಿಜೆಪಿ ಸೇರ್ಪಡೆ ಹಾದಿ ಸುಗಮ - Vistara News

ರಾಜಕೀಯ

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಬಿಜೆಪಿ ಸೇರ್ಪಡೆ ಹಾದಿ ಸುಗಮ

ಜಾತ್ಯಾತೀತ ಜನತಾದಳದೊಂದಿಗೆ ದಶಕಗಳ ಕಾಲ ಗುರುತಿಸಿಕೊಂಡಿದ್ದ ಹಿರಿಯ ರಾಜಕೀಯ ಮುಖಂಡ ಬಸವರಾಜ ಹೊರಟ್ಟಿ ಸದ್ಯದಲ್ಲೆ ನಡೆಯುವ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಉದ್ದೇಶ ಹೊಂದಿದ್ದಾರೆ.

VISTARANEWS.COM


on

basavaraja horatti
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜೆಡಿಎಸ್‌ ಹಿರಿಯ ನಾಯಕ ಹಾಗೂ ಐದು ಬಾರಿ ವಿಧಾನ ಪರಿಷತ್‌ ಸದಸ್ಯರಾದ ಅನುಭವ ಹೊಂದಿರುವ ಬಸವರಾಜ ಹೊರಟ್ಟಿ, ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಉಪಸಭಾಪತಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಷ್ಟೆ ತಿಳಿಸಿದ್ದಾರೆ.

ಜಾತ್ಯಾತೀತ ಜನತಾದಳದೊಂದಿಗೆ ದಶಕಗಳ ಕಾಲ ಗುರುತಿಸಿಕೊಂಡಿದ್ದ ಹಿರಿಯ ರಾಜಕೀಯ ಮುಖಂಡ ಹೊರಟ್ಟಿ ಸದ್ಯದಲ್ಲೆ ನಡೆಯುವ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಉದ್ದೇಶ ಹೊಂದಿದ್ದಾರೆ. ಈ ಕುರಿತು ಮಾತುಕತೆ ನಡೆಸಿದ್ದ ಅವರು, ಮೇ 3ರಂದು ಕೇಂದ್ರ ಗೃಹಸಚಿವ ಅಮಿತ್‌ ಷಾ ಎದುರು ಅನೌಪಚಾರಿಕವಾಗಿ ಪಕ್ಷಕ್ಕೆ ಸೇರ್ಪಡೆ ಆಗಿದ್ದರು.

ಆದರೆ ಸಭಾಪತಿ ಸ್ಥಾನದಲ್ಲಿರುವವರು ಯಾವುದೇ ಪಕ್ಷಕ್ಕೆ ಅಧಿಕೃತವಾಗಿ ಸೇರಲು ಅವಕಾಶವಿಲ್ಲ. ಹೀಗಾಗಿ, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೇರ್ಪಡೆ ಆಗುವುದಾಗಿ ತಿಳಿಸಿದ್ದರು. ಅಮಿತ್‌ ಷಾ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌, ಕಂದಾಯ ಸಚಿವ ಆರ್‌. ಅಶೋಕ್‌ ಮುಂತಾದವರು ಜತೆಗಿದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಹೊರಟ್ಟಿ, ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದೇನೆ. ಅಧಿಕೃತವಾಗಿ ಸೇರ್ಪಡೆ ಆಗಲು ಕೆಲವು ತೊಂದರೆಗಳಿವೆ. ಮೊದಲಿಗೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸದ್ಯ ಉಪಸಭಾಪತಿ ಯಾರೂ ಇಲ್ಲ. ಹಾಗಾಗಿ ರಾಜೀನಾಮೆಗೆ ಕೆಲವು ತಾಂತ್ರಿಕ ತೊಂdರೆ ಇವೆ. ಇವುಗಳನ್ನು ಬಗೆಹರಿಸಿಕೊಂಡು ರಾಜೀನಾಮೆ ನೀಡುತ್ತೇನೆ. ನಂತರ ಪಕ್ಷ ನಿಗದಿ ಮಾಡುವ ದಿನಾಂಕದಲ್ಲಿ ಸೇರ್ಪಡೆ ಆಗುತ್ತೇನೆ ಎಂದಿದ್ದರು.

ಮುಂಬರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಮೂಲಕ ಕಣಕ್ಕಿಳಿಯುವುದಾಗಿ ಸ್ಪಷ್ಟಪಡಿಸಿದ್ದ ಹೊರಟ್ಟಿ, ಈ ಬಾರಿ ತಮಗೇ ಟಿಕೆಟ್‌ ಲಭಿಸುತ್ತದೆ ಎಂದು ತಿಳಿಸಿದ್ದ ಬಿಜೆಪಿ ಹಿರಿಯ ನಾಯಕ ಮೋಹನ್‌ ಲಿಂಬಿಕಾಯಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.

ಇದನ್ನೂ ಓದಿ | ಬಿ.ವೈ ವಿಜಯೇಂದ್ರಗೆ ಪರಿಷತ್‌ ಟಿಕೆಟ್ ಪಕ್ಕಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

MLC Election: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನವು ಜೂನ್ 3ರಂದು ವಿಜಯನಗರ ಜಿಲ್ಲೆಯ 6 ತಾಲೂಕಿನ ಒಟ್ಟು 21 ಮತಗಟ್ಟೆ ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ತಿಳಿಸಿದ್ದಾರೆ.

VISTARANEWS.COM


on

Necessary Preparation for North East Graduate Constituency Election Voting says DC M S Diwakar
Koo

ಹೊಸಪೇಟೆ: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ (MLC Election) ಮತದಾನವು ಜೂನ್ 3ರಂದು ವಿಜಯನಗರ ಜಿಲ್ಲೆಯ 6 ತಾಲೂಕಿನ ಒಟ್ಟು 21 ಮತಗಟ್ಟೆ ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಪರಿಷತ್‌ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 15 ಮತಗಟ್ಟೆಗಳು ಮತ್ತು 5880 ಮತದಾರರು ಇದ್ದರು. ಈ ಬಾರಿ ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಬಗ್ಗೆ ಉತ್ತಮವಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೊಸಪೇಟೆ, ಹರಪನಹಳ್ಳಿ ಮತ್ತು ಕೂಡ್ಲಿಗಿ ತಾಲೂಕುಗಳ ವ್ಯಾಪ್ತಿಯಲ್ಲಿನ ಒಟ್ಟು ಪುರುಷ ಮತದಾರರು 11,895 ಹಾಗೂ ಮಹಿಳಾ ಮತದಾರರು 6336 ಮತ್ತು ಇತರೆ ಇಬ್ಬರು ಸೇರಿ ಒಟ್ಟು 18,233 ಮತದಾರರು ಮತದಾನ ಮಾಡಲು ಅರ್ಹರಿದ್ದಾರೆ ಎಂದು ಅವರು ತಿಳಿಸಿದರು.

ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಒಟ್ಟು 21 ಮತಗಟ್ಟೆ ಕೇಂದ್ರಗಳಲ್ಲಿ ಲೈವ್ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ 6 ತಾಲೂಕುಗಳ ಕಚೇರಿಯಲ್ಲಿ ಮತದಾರ ಸಹಾಯವಾಣಿ ಕೇಂದ್ರ ಇದ್ದು ಹರಪನಹಳ್ಳಿ – 08398-280262, ಹಡಗಲಿ- 08399-240238, ಹೊಸಪೇಟೆ- 08394-224208, ಕೂಡ್ಲಿಗಿ- 08391297121., ಕೊಟ್ಟೂರು- 08391-225400 ಮತ್ತು ಎಚ್.ಬಿ. ಹಳ್ಳಿ- 914662854 ಇದ್ದು ಈ ಸಹಾಯವಾಣಿ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮತಗಟ್ಟೆ ಸಂಖ್ಯೆ, ಕ್ರಮ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಜಯನಗರ ಜಿಲ್ಲೆಯ 21 ಮತಗಟ್ಟೆ ಕೇಂದ್ರಗಳ ಮಾಹಿತಿಯನ್ನು ಮತದಾರದಾರರಿಗೆ ನೀಡಲಾಗಿದೆ. ಜತೆಗೆ ಮತದಾರ ಚೀಟಿಯನ್ನು ಸಹ ವಿತರಣೆ ಮಾಡಲಾಗಿದೆ. ಮತದಾರರ ಚೀಟಿಯಲ್ಲಿ ಮತಗಟ್ಟೆ ಮಾಹಿತಿಯ ಸಂಪೂರ್ಣ ವಿವರಣೆ ಮತ್ತು ಮತಗಟ್ಟೆ ಕೇಂದ್ರಗಳ ಕ್ಯೂಆರ್ ಕೋಡ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

ಮತದಾನ ಆದ್ಯಾತಾನುಸಾರ ಚಲಾವಣೆ ಮಾಡಬೇಕಾಗಿರುತ್ತದೆ. ಅದಕ್ಕೆ ಮತದಾನ ಚಲಾವಣೆ ಕುರಿತು ಜಿಲ್ಲಾಮಟ್ಟದ ಸ್ವೀಪ್ ಸಮಿತಿಯಿಂದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಭಾರತ ಚುನಾವಣೆ ಆಯೋಗವು ಮತ ಚಲಾವಣೆಗಾಗಿ ನೀಡಿರುವ ನೇರಳೆ ಬಣ್ಣದ ಸ್ಕೇಚ್‌ಪೆನ್‌ಗಳ ಮೂಲಕ ಮಾತ್ರ ಮತ ಚಲಾವಣೆ ಮಾಡಬೇಕಾಗಿರುತ್ತದೆ ಎಂದರು.

ಮತದಾನ ದಿನದಂದು ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಹಾಗೂ ಸಹಾಯವಾಣಿ ಕೇಂದ್ರಕ್ಕೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮತಗಟ್ಟೆ ಇರುವ ಪ್ರದೇಶದ ವ್ಯಾಪ್ತಿಯಲ್ಲಿ ಚುನಾವಣೆಯು ಶಾಂತಿ ಹಾಗೂ ಮುಕ್ತ ನ್ಯಾಯಸಮ್ಮತವಾಗಿ ನಡೆಯುವ ಸಂಬಂಧ ಜೂನ್ 1ರ ಸಂಜೆ 6 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿವರೆಗೆ ಸಿಆರ್‌ಪಿಸಿ ಕಲಂ 144 ರಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯೋಗಿಕ ಸಂಸ್ಥೆಗಳಲ್ಲಿ ಮತ್ತು ಇತರ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂನ್ 03ರ ಸೋಮವಾರ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಮೇ 29ರಂದು ಹೊರಡಿಸಿದ ಕರ್ನಾಟಕ ಸರ್ಕಾರದ ಅಧಿಸೂಚನೆಯಲ್ಲಿ ಆದೇಶಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ: Prevention Of Obesity: ಆರೋಗ್ಯಪೂರ್ಣ ಜೀರ್ಣಕ್ರಿಯೆ ಮೂಲಕ ಬೊಜ್ಜು ನಿವಾರಣೆ ಸಾಧ್ಯ

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ, ಚುನಾವಣಾ ಶಾಖೆಯ ಮನೋಜ್ ಲಾಡೆ ಇದ್ದರು.

Continue Reading

ರಾಜಕೀಯ

MLC Election: ವಿಧಾನಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ

MLC Election: ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ, ಹಾಗೂ ಮೇರಿ ಮಾತಾ ಪ್ರೌಢಶಾಲೆಗಳಲ್ಲಿ ಗುರುವಾರ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ ನಡೆಸಿದರು.

VISTARANEWS.COM


on

MLA Belur Gopalakrishna election campaign for Congress candidates at ripponpete
Koo

ರಿಪ್ಪನ್‌ಪೇಟೆ: ವಿಧಾನಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ (MLC Election) ಗೆಲುವು ಸಾಧಿಸುವುದು ನಿಶ್ಚಿತ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ, ಹಾಗೂ ಮೇರಿ ಮಾತಾ ಪ್ರೌಢಶಾಲೆಗಳಲ್ಲಿ ಗುರುವಾರ ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮತಯಾಚನೆ ನಡೆಸಿ ಅವರು ಮಾತನಾಡಿದರು.

ಇದನ್ನೂ ಓದಿ: Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

ಇದೇ ಜೂನ್ 3 ರಂದು ನಡೆಯುವ ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಕೆ. ಮಂಜುನಾಥ್ ಅವರಿಗೆ ಮೊದಲ ಪ್ರಾಶಸ್ತ್ಯದ ಮತವನ್ನು ನೀಡಿ, ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ನೈರುತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ 85 ಸಾವಿರ ಪದವೀಧರ ಮತದಾರರು ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 24 ಸಾವಿರ ಮತದಾರರನ್ನು ಹೊಂದಿದ್ದು, ಕಾಂಗ್ರೆಸ್ ಪಕ್ಷದ ಪಕ್ಷದ ಅಭ್ಯರ್ಥಿಗಳು ಹಿರಿಯರು ನೀಡಿರುವ ಜವಾಬ್ದಾರಿಯನ್ನು ಯಾವುದೇ ಕಪ್ಪು ಚುಕ್ಕಿ ಬಾರದಂತೆ ಸಮರ್ಥವಾಗಿ ನಿರ್ವಹಿಸುವ ಮೂಲಕ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಸಮಸ್ಯೆಗಳಿಗೆ ಪರಿಷತ್‌ನಲ್ಲಿ ಧ್ವನಿಯಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಬಂಡಿ ರಾಮಚಂದ್ರ, ಹೊಸನಗರ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮೀ, ಪಕ್ಷದ ಹಿರಿಯ ಮುಖಂಡರುಗಳಾದ ಕೆರೆಹಳ್ಳಿ ರವಿ, ಫ್ಯಾನ್ಸಿ ರಮೇಶ್, ಮಧುಸೂದನ್, ಜಿ. ಆರ್. ಗೋಪಾಲಕೃಷ್ಣ, ಲೇಖನ, ಅಮೀರ್ ಹಂಜಾ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Continue Reading

ಕರ್ನಾಟಕ

Pralhad Joshi: ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಾಕುತ್ತಿದ್ದಾರೆ ಸಿದ್ದರಾಮಯ್ಯ: ಜೋಶಿ ಆರೋಪ

Pralhad Joshi: ಕೇರಳದ ಯುವಕರಿಗೆ ಬಿಎಂಟಿಸಿ ಚಾಲಕ ಹುದ್ದೆಗೆ ಅವಕಾಶ ಕಲ್ಪಿಸುವ ಮೂಲಕ ಕನ್ನಡಿಗರಿಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರ ಹುದ್ದೆಗೆ ಕೇರಳದವರನ್ನು ನೇಮಿಸಿಕೊಳ್ಳುವುದೇಕೆ? ಕನ್ನಡಿಗರು ಯಾರೂ ಸಿದ್ಧರಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Union Minister Pralhad Joshi Statement
Koo

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕನ್ನಡಿಗರ ತೆರಿಗೆಯಲ್ಲಿ ಕೇರಳದವರನ್ನು ಸಾಕಲು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ.

ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್‌ಗಳಲ್ಲಿ ಕನ್ನಡಿಗರ ಬದಲು ಕೇರಳದ ಯುವಕರಿಗೆ ಅವಕಾಶ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಸಚಿವ ಪ್ರಲ್ಹಾದ್‌ ಜೋಶಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: IAS Exam : ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ತರಬೇತಿ

ಕೇರಳದ ಯುವಕರಿಗೆ ಬಿಎಂಟಿಸಿ ಚಾಲಕ ಹುದ್ದೆಗೆ ಅವಕಾಶ ಕಲ್ಪಿಸುವ ಮೂಲಕ ಕನ್ನಡಿಗರಿಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಖಂಡಿಸಿರುವ ಅವರು, ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರ ಹುದ್ದೆಗೆ ಕೇರಳದವರನ್ನು ನೇಮಿಸಿಕೊಳ್ಳುವುದೇಕೆ? ಕನ್ನಡಿಗರು ಯಾರೂ ಸಿದ್ಧರಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Fruit and Veggie Smoothies: ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಖಾಸಗಿ ಏಜೆನ್ಸಿ ಮೂಲಕ ನೇಮಕವಾದದ್ದು ಎಂಬುದು ಬರಿಯ ಸಬೂಬು. ಕಾಂಗ್ರೆಸ್ ಯುವನಿಧಿ ಗ್ಯಾರಂಟಿಯ ಹಕೀಕತ್ತು ಇದೇ ಎಂದು ಹೇಳಿರುವ ಅವರು, ಸಿಎಂ ಸಿದ್ದರಾಮಯ್ಯ ಅವರ ನಿಷ್ಠೆ ಕರ್ನಾಟಕ ಅಥವಾ ಕನ್ನಡಿಗರ ಪರವಾಗಿಲ್ಲ ಎಂಬುದು ಇದರಿಂದ ಸ್ಪಷ್ಟವಾಗಿದೆ. ಮತ ಹಾಕಲು ಕನ್ನಡಿಗರೇ ಬೇಕು, ಆದರೆ ನಿಯತ್ತು ಮಾತ್ರ ಪರರ ಪರ ಎಂದು ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

Continue Reading

Lok Sabha Election 2024

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಈ ಬಾರಿ ಲೋಕ ಸಭಾ ಚುನಾವಣಾ ಪ್ರಚಾರದ ಅಂತ್ಯವನ್ನು ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ನಡೆಸಲಿದ್ದಾರೆ. ಇಲ್ಲಿ ಸುಮಾರು 45 ಗಂಟೆಗಳ ಕಾಲ ಅವರು ಕಳೆಯಲಿದ್ದಾರೆ.

VISTARANEWS.COM


on

By

PM Modi
Koo

ಲೋಕಸಭಾ ಚುನಾವಣೆ- 2024ರ (Loksabha election-2024) ಬಿಜೆಪಿ ಪ್ರಚಾರ ಕಾರ್ಯವನ್ನು ಅಂತ್ಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಕನ್ಯಾಕುಮಾರಿಗೆ ತೆರಳಲಿದ್ದು, ( Kanyakumari) ಇಲ್ಲಿನ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ (Vivekananda Rock Memorial) ಮೇ 30ರಿಂದ ಜೂನ್ 1ರವರೆಗೆ ಒಟ್ಟು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ.

ಇದೇ ಸ್ಥಳದಲ್ಲಿ ಭಾರತದ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು 1892ರಲ್ಲಿ ಮೂರು ದಿನಗಳ ಕಾಲ ಧ್ಯಾನ ಮಾಡಿ ಜ್ಞಾನೋದಯವನ್ನು ಪಡೆದಿದ್ದರು.

2019ರ ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಮೋದಿ ಅವರು ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿ 15 ಗಂಟೆಗಳ ‘ಏಕಾಂತವಾಸ್’ (ಏಕಾಂತ ಧ್ಯಾನ) ಕೈಗೊಂಡಿದ್ದರು.

2014 ರಲ್ಲಿ ಮಹಾರಾಷ್ಟ್ರದ ಪ್ರತಾಪಗಢಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು. 1659ರ ನವೆಂಬರ್ ನಲ್ಲಿ ಬಿಜಾಪುರದ ಆದಿಲ್ ಶಾಹಿ ಸುಲ್ತಾನರ ಸೇನಾಪತಿ ಅಫ್ಜಲ್ ಖಾನ್ ಅವರನ್ನು ಕೊಂದು ಯುದ್ಧದಲ್ಲಿ ಗೆದ್ದ ಛತ್ರಪತಿ ಶಿವಾಜಿಗೆ ಗೌರವ ಸಲ್ಲಿಸಿದರು. ಈ ವಿಜಯವು ಮರಾಠಾ ಸಾಮ್ರಾಜ್ಯದ ಮುಖ್ಯಸ್ಥನಾಗಿ ಶಿವಾಜಿಯ ಪಟ್ಟಾಭಿಷೇಕಕ್ಕೆ ದಾರಿ ಮಾಡಿಕೊಟ್ಟಿತು. ಇದನ್ನು ಹಿಂದವಿ ಸ್ವರಾಜ್ ಎಂದು ಛತ್ರಪತಿ ಶಿವಾಜಿ ಕರೆದರು.

ಇದೀಗ ಜೂನ್ 4 ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಮೋದಿ ಕನ್ಯಾಕುಮಾರಿ ಪ್ರವಾಸ ಯೋಜನೆ ಹಾಕಿಕೊಂಡಿದ್ದಾರೆ.


ವಿವೇಕಾನಂದ ಬಂಡೆಯ ಮಹತ್ವ ಏನು?

ಹಿಂದೂ ಮಹಾಸಾಗರ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿರುವ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ವವತುರೈ ಕಡಲತೀರದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ದ್ವೀಪದ ಮೇಲೆ ಧ್ಯಾನ ಮಾಡುವಾಗ ಸ್ವಾಮಿ ವಿವೇಕಾನಂದರು ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡಿದ್ದರು.

ಭಾರತದಾದ್ಯಂತ ನಾಲ್ಕು ವರ್ಷಗಳ ಕಾಲ ಅಲೆದಾಡಿದ ಅವರು ದೈವಿಕ ಸ್ವಭಾವ, ಸತ್ಯ, ಶುದ್ಧತೆ, ಪ್ರಾಮಾಣಿಕತೆ, ಪರಿಶ್ರಮ, ಧೈರ್ಯ, ಶಕ್ತಿ ಮತ್ತು ಪ್ರೀತಿಯಲ್ಲಿ ನಂಬಿಕೆಯ ಇಡುವ ತತ್ತ್ವವನ್ನು ಸಾರಿದರು.

ಸ್ವಾಮಿ ರಾಮಕೃಷ್ಣಾನಂದರಿಗೆ 1894ರಲ್ಲಿ ವಿವೇಕಾನಂದರು, ಭಾರತೀಯ ಬಂಡೆಯ ಕೊನೆಯ ತುಣುಕಿನ ಮೇಲೆ ಕುಳಿತು ನಾನು ಒಂದು ಯೋಜನೆಯನ್ನು ಕಂಡಿದ್ದೇನೆ. ಸನ್ಯಾಸಿಗಳು ಅಲೆದಾಡುತ್ತಾ ಜನರಿಗೆ ಆಧ್ಯಾತ್ಮಿಕತೆಯನ್ನು ಕಲಿಸುವುದು ಹುಚ್ಚುತನ. ಬಡವರು ಅತ್ಯಂತ ಕಷ್ಟವಾದ ಜೀವನ ನಡೆಸುತ್ತಿರುವುದು ಅವರ ಅಜ್ಞಾನದಿಂದಾಗಿ. ನಾವು ಅದನ್ನು ಹೋಗಲಾಡಿಸುವ ಬದಲು ಅವರ ರಕ್ತವನ್ನು ಹೀರುತ್ತಿದ್ದೇವೆ ಮತ್ತು ಅವರನ್ನು ಪಾದದಡಿಯಲ್ಲಿ ತುಳಿಯುತ್ತಿದ್ದೇವೆ ಎಂದು ಹೇಳಿದ್ದರು.

1963ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಶತಮಾನೋತ್ಸವದ ಮುನ್ನಾದಿನ ಆರ್‌ಎಸ್‌ಎಸ್ ಕಾರ್ಯಕರ್ತ ಏಕನಾಥ್ ರಾನಡೆ ನೇತೃತ್ವದ ವಿವೇಕಾನಂದ ರಾಕ್ ಸ್ಮಾರಕ ಸಮಿತಿಯು ಈ ಸ್ಥಳವನ್ನು ನೆನಪಿಸಿತ್ತು. ಇದನ್ನು 1970 ರಲ್ಲಿ ರಾಷ್ಟ್ರಪತಿ ವಿ.ವಿ.ಗಿರಿ ಅವರು ಔಪಚಾರಿಕವಾಗಿ ಉದ್ಘಾಟಿಸಿದರು.

ಒಂದು ನಂಬಿಕೆಯ ಪ್ರಕಾರ ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿರುವಾಗ ಇದೇ ಬಂಡೆಯ ಮೇಲೆ ಒಂದೇ ಕಾಲಿನ ಮೇಲೆ ಧ್ಯಾನ ಮಾಡುತ್ತಿದ್ದಳು.

ವವತುರೈನಿಂದ 15 ನಿಮಿಷಗಳ ದೋಣಿ ಸಂಚಾರದ ಮೂಲಕ ಕಲ್ಲಿನ ದ್ವೀಪವನ್ನು ಪ್ರವೇಶಿಸಬಹುದು. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ.


ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು.

ಈ ಬಾರಿ ತಮಿಳುನಾಡಿನ ಕನ್ಯಾಕುಮಾರಿಯನ್ನು ಅವರು ಧ್ಯಾನ ಮಾಡಲು ಅವರು ಆಯ್ಕೆ ಮಾಡಿರುವುದು ಈ ವರ್ಷದ ಚುನಾವಣಾ ಪ್ರಚಾರದ ಸಮಯದಲ್ಲಿ ಅವರ ಪಕ್ಷ ದಕ್ಷಿಣ ಭಾರತದಲ್ಲಿ ಬಲವಾಗಿರುವುದನ್ನು ಸೂಚಿಸುತ್ತದೆ. ಕಳೆದ ಮೂರು ವರ್ಷಗಳಲ್ಲಿ ಅವರ ಒಟ್ಟು ಪ್ರವಾಸಗಳಲ್ಲಿ ಮೂರನೇ ಒಂದು ಭಾಗದಷ್ಟು ಅವರು ದಕ್ಷಿಣ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು. 2024ರಲ್ಲಿ ತಮಿಳುನಾಡಿಗೆ ಏಳು ಭಾರಿ ಭೇಟಿ ನೀಡಿದ್ದಾರೆ.

ದಕ್ಷಿಣದ ರಾಜ್ಯಗಳ ಮೇಲೆ ದೃಷ್ಟಿ

ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕವು ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ 131 ಸ್ಥಾನಗಳನ್ನು ಹೊಂದಿವೆ. ತಮಿಳುನಾಡುವೊಂದೇ ಸಂಸತ್ತಿನಲ್ಲಿ 39 ಸ್ಥಾನಗಳನ್ನು ಹೊಂದಿದೆ. ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದರು.

ಮೋದಿ ಭೇಟಿಗೆ ಸಿದ್ಧತೆ ಏನು?

ಗುರುವಾರ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ಪ್ರಧಾನಿಯವರ 45 ಗಂಟೆಗಳ ವಾಸ್ತವ್ಯ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸುಮಾರು 2,000 ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

ತಿರುನೆಲ್ವೇಲಿ ವ್ಯಾಪ್ತಿಯ ಡಿಐಜಿ ಪ್ರವೇಶ್ ಕುಮಾರ್ ಅವರು ಪೊಲೀಸ್ ವರಿಷ್ಠಾಧಿಕಾರಿ ಇ. ಸುಂದರವತನಂ ಅವರೊಂದಿಗೆ ಇಲ್ಲಿನ ಕಲ್ಲಿನ ಸ್ಮಾರಕ, ಬೋಟ್ ಜೆಟ್ಟಿ, ಹೆಲಿಪ್ಯಾಡ್ ಮತ್ತು ರಾಜ್ಯ ಅತಿಥಿ ಗೃಹದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಪ್ರಚಾರವನ್ನು ಮುಗಿಸಿದ ಅನಂತರ ಪ್ರಧಾನಿ ಗುರುವಾರ ಮಧ್ಯಾಹ್ನ ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಸಂಜೆ ಕನ್ಯಾಕುಮಾರಿಯಲ್ಲಿರುವ ರಾಜ್ಯ ಅತಿಥಿ ಗೃಹ ತಲುಪಿ ದೋಣಿ ಮೂಲಕ ವಿವೇಕಾನಂದ ಕಲ್ಲಿನ ಸ್ಮಾರಕಕ್ಕೆ ತೆರಳಲಿದ್ದಾರೆ. ಅವರು ಶನಿವಾರ ಮಧ್ಯಾಹ್ನದವರೆಗೆ ಅಲ್ಲಿಯೇ ಇರುತ್ತಾರೆ ಎನ್ನಲಾಗಿದೆ.

ಮೋದಿ ಶನಿವಾರ ಸಂಜೆ ವೇಳೆಗೆ ಕನ್ಯಾಕುಮಾರಿ ಹೆಲಿಪ್ಯಾಡ್ ತಲುಪಿ ತಿರುವನಂತಪುರಕ್ಕೆ ಹಿಂತಿರುಗಿ ಅದೇ ದಿನ ದೆಹಲಿಗೆ ತೆರಳಲಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವು ಪ್ರಧಾನಿಯವರ ಈ ಭೇಟಿಗೆ ಅನುಮತಿಯನ್ನು ವಿರೋಧಿಸಿ ಪ್ರಸ್ತುತ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆ ಮತ್ತು ನಡೆಯುತ್ತಿರುವ ಪ್ರವಾಸೋದ್ಯಮ ಋತುವನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

Continue Reading
Advertisement
3 Indian companies have featured in Time magazines list of 100 most influential companies in the world
ದೇಶ54 mins ago

Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Murder News
ಪ್ರಮುಖ ಸುದ್ದಿ2 hours ago

Murder News : ಬಾಯ್​ಫ್ರೆಂಡ್​ ಜತೆ ಸೇರಿ ಅಪ್ಪ, ತಮ್ಮನನ್ನು ಕೊಂದು ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿ

Reserve Bank of India
ದೇಶ2 hours ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ2 hours ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್3 hours ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು3 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ3 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Viral Video
ವೈರಲ್ ನ್ಯೂಸ್4 hours ago

Viral Video: ಮುಂಬಯಿ ವಿಮಾನ ನಿಲ್ದಾಣದಲ್ಲಿ ಯುವತಿಯ ರೀಲ್ಸ್ ಹುಚ್ಚಾಟ; ಸಿಡಿದೆದ್ದ ನೆಟ್ಟಿಗರು

Muslim Personal Law
ಪ್ರಮುಖ ಸುದ್ದಿ4 hours ago

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Prajwal Revanna Case
ಕರ್ನಾಟಕ4 hours ago

ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುವ ಮೊದಲೇ ಎಚ್‌ಡಿಕೆ ಅಂತರ; ಕಬಿನಿಯಲ್ಲಿ ಪತ್ನಿ ಜತೆ ಬೋಟಿಂಗ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ11 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌