ಪರೀಕ್ಷಾ ಕೇಂದ್ರದಲ್ಲಿ ಬ್ರಾ ಬಿಚ್ಚಿ, ಮಾನಸಿಕ ಹಿಂಸೆಗೆ ಒಳಗಾಗಿದ್ದ ವಿದ್ಯಾರ್ಥಿನಿಯರಿಗೆ ನೀಟ್​ ಮರು ಪರೀಕ್ಷೆ - Vistara News

ದೇಶ

ಪರೀಕ್ಷಾ ಕೇಂದ್ರದಲ್ಲಿ ಬ್ರಾ ಬಿಚ್ಚಿ, ಮಾನಸಿಕ ಹಿಂಸೆಗೆ ಒಳಗಾಗಿದ್ದ ವಿದ್ಯಾರ್ಥಿನಿಯರಿಗೆ ನೀಟ್​ ಮರು ಪರೀಕ್ಷೆ

ಜುಲೈ ತಿಂಗಳಲ್ಲಿ ರಾಷ್ಟ್ರಾದ್ಯಂತ ನೀಟ್​ ಪರೀಕ್ಷೆ ನಡೆದಿತ್ತು. ಆದರೆ ಕೇರಳದ ಕೊಲ್ಲಂ ಪರೀಕ್ಷಾ ಕೇಂದ್ರದಲ್ಲಿ ಹಲವು ವಿದ್ಯಾರ್ಥಿನಿಯರಿಗೆ ಬ್ರಾ ಬಿಚ್ಚಿಸಲಾಗಿದೆ ಎಂಬ ಸುದ್ದಿ, ದೊಡ್ಡ ವಿವಾದ ಸೃಷ್ಟಿಸಿತ್ತು.

VISTARANEWS.COM


on

NEET Exams
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರ: ಜುಲೈನಲ್ಲಿ ನಡೆದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET) ಸಂದರ್ಭದಲ್ಲಿ ಕೇರಳದ ಕೊಲ್ಲಂನಲ್ಲಿ ಒಂದಷ್ಟು ಹುಡುಗಿಯರಿಗೆ ಒಳ ಉಡುಪು ಬಿಚ್ಚಿಸಲಾಗಿದೆ ಎಂಬ ಆರೋಪ ದೊಡ್ಡ ಮಟ್ಟದ ವಿವಾದ (NEET frisking row) ಸೃಷ್ಟಿಸಿತ್ತು. ಚಾತಮಂಗಲಂನಲ್ಲಿರುವ ಮಾರ್ಥೋಮಾ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೇಶನ್‌ ಆಫ್‌ ಟೆಕ್ನಾಲಜಿ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಹೋಗಿದ್ದ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಬ್ರಾ ಬಿಚ್ಚಿಸಿ, ಕಳಿಸಲಾಗಿದೆ ಎಂದು ಅಂದು ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ತಂದೆಯೇ ದೂರು ನೀಡಿದ್ದರು. ಅಂದು ಯಾವೆಲ್ಲ ವಿದ್ಯಾರ್ಥಿನಿಯರಿಗೆ ಈ ಕೆಟ್ಟ ಅನುಭವ ಆಗಿದೆಯೋ, ಅವರಿಗೆ ಮರು ಪರೀಕ್ಷೆಗೆ ಅವಕಾಶ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (NTA) ಇದೀಗ ಹೇಳಿದೆ. ಅಂದು ಸಂತ್ರಸ್ತರಾಗಿದ್ದ ಹುಡುಗಿಯರಿಗೆ ಸೆಪ್ಟೆಂಬರ್​ 4ರಂದು ಮತ್ತೊಮ್ಮೆ ನೀಟ್​​​​ ಪರೀಕ್ಷೆ ನಡೆಸಲಾಗುವುದು, ಈ ಬಗ್ಗೆ ಅವರಿಗೆ ಇ ಮೇಲ್​ ಕಳಿಸಲಾಗಿದೆ ಎಂದೂ ಎನ್​ಟಿಎ ಮಾಹಿತಿ ನೀಡಿದೆ.

ಜುಲೈ 17ರಂದು ರಾಷ್ಟ್ರಾದ್ಯಂತ ನೀಟ್​ ಪರೀಕ್ಷೆ ನಡೆದಿತ್ತು. ಮರುದಿನವೇ ಕೇರಳದಲ್ಲಿ ಒಳ ಉಡುಪಿನ ವಿವಾದ ಎದ್ದಿತ್ತು. ‘ಮಾರ್ಥೋಮಾ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೇಶನ್‌ ಆಫ್‌ ಟೆಕ್ನಾಲಜಿ’ ಪರೀಕ್ಷಾ ಕೇಂದ್ರದಲ್ಲಿ ನನ್ನ ಮಗಳು ಪರೀಕ್ಷೆ ಬರೆದಿದ್ದಾಳೆ. ಆದರೆ ಕೇಂದ್ರಕ್ಕೆ ಹೋದ ಆಕೆ ಮತ್ತು ಸುಮಾರು ಶೇ.90ರಷ್ಟು ವಿದ್ಯಾರ್ಥಿನಿಯರ ಮೇಲೆ ಅಲ್ಲಿನ ಮೇಲ್ವಿಚಾರಕರು ದೌರ್ಜನ್ಯ ನಡೆಸಿದ್ದಾರೆ. ಮೆಟಲ್​ ಡಿಟೆಕ್ಟರ್​ ತಪಾಸಣೆ ಮಾಡಿದಾಗ, ವಿದ್ಯಾರ್ಥಿನಿಯರ ಬ್ರಾ ಹುಕ್​​ನ ಕಾರಣಕ್ಕೆ ಅದು ಸದ್ದು ಮಾಡಿದೆ. ಹೀಗಾಗಿ ಅವರಿಗೆಲ್ಲ ಒಳ ಉಡುಪು ಬಿಚ್ಚುವಂತೆ ಹೇಳಲಾಗಿದೆ. ವಿದ್ಯಾರ್ಥಿನಿಯರು ಕಣ್ಣೀರು ಹಾಕುತ್ತಲೇ, ತಮ್ಮ ಬ್ರಾ ಬಿಚ್ಚಿ, ಕೋಣೆಯೊಂದರಲ್ಲಿ ಇಟ್ಟು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಮಾನಸಿಕ ಹಿಂಸೆ ಉಂಟಾಗಿದೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದರು. ಕೊಟ್ಟಾರಕರ ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.

ಈ ವಿವಾದ ಎದ್ದ ನಂತರ ರಾಷ್ಟ್ರೀಯ ತನಿಖಾ ದಳ ಸಮರ್ಥನೆ ನೀಡಿ, ‘ನಮಗೆ ಬಂದ ಮಾಹಿತಿ ಪ್ರಕಾರ ಕೇರಳದ ಕೊಲ್ಲಂ ಸೇರಿ ಯಾವುದೇ ಪರೀಕ್ಷಾ ಕೇಂದ್ರದಲ್ಲೂ ಪರೀಕ್ಷೆ ಬರೆಯಲು ಬಂದ ಹುಡುಗಿಯರಿಗೆ ಒಳ ಉಡುಪು ಬಿಚ್ಚಿಸಿಲ್ಲ. ಆದರೆ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತೇವೆ’ ಎಂದು ಹೇಳಿಕೊಂಡಿತ್ತು. ಹಾಗೇ, ತನಿಖೆಗಾಗಿ ಮೂವರು ಸದಸ್ಯರನ್ನು ಒಳಗೊಂಡ ಸತ್ಯ ಶೋಧನಾ ಸಮಿತಿಯನ್ನೂ ರಚಿಸಿತ್ತು. ಮಹಿಳಾ ಆಯೋಗ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಘಟನೆ ನಡೆದ ದಿನ ಪರೀಕ್ಷಾ ಕೇಂದ್ರದಲ್ಲಿದ್ದ ಐವರು ಮಹಿಳಾ ಸಿಬ್ಬಂದಿಯನ್ನೂ ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು.

ಇದನ್ನೂ ಓದಿ:ನೀಟ್‌ ಪರೀಕ್ಷಾರ್ಥಿಗಳ ಬ್ರಾ ಬಿಚ್ಚಿಸಿದ ಪ್ರಕರಣ; ಐವರು ಮಹಿಳೆಯರನ್ನು ಬಂಧಿಸಿದ ಕೇರಳ ಪೊಲೀಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mohan Yadav: ಇನ್ಮುಂದೆ ಶಾಲಾ ಪಠ್ಯದಲ್ಲಿ ಇರಲಿದೆ ‘ತುರ್ತು ಪರಿಸ್ಥಿತಿ’ಯ ಅಧ್ಯಾಯ

Mohan Yadav: ಸ್ವತಂತ್ರ ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಕಪ್ಪು ಚುಕ್ಕೆಯಾಗಿ ಉಳಿದುಕೊಂಡಿದೆ. ಇಂದಿಗೆ ತುರ್ತು ಪರಿಸ್ಥಿತಿ ಹೇರಿ 49 ವರ್ಷ ಕಳೆದಿದೆ. ಇದೀಗ ಮಧ್ಯ ಪ್ರದೇಶ ದ ಬಿಜೆಪಿ ಸರ್ಕಾರ ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ಕುರಿತು ಅಧ್ಯಾಯವೊಂದನ್ನು ಅಳವಡಿಸಲು ಮುಂದಾಗಿದೆ. ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಮಾಹಿತಿ ನೀಡಿದ್ದಾರೆ.

VISTARANEWS.COM


on

Mohan Yadav
Koo

ಭೋಪಾಲ್‌: ಸ್ವತಂತ್ರ ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ (Emergency) ಕಪ್ಪು ಚುಕ್ಕೆಯಾಗಿ ಉಳಿದುಕೊಂಡಿದೆ. ಇಂದಿಗೆ ತುರ್ತು ಪರಿಸ್ಥಿತಿ ಹೇರಿ 49 ವರ್ಷ ಕಳೆದಿದೆ. 1975ರ ಜೂನ್‌ 25ರಂದು ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಬಗ್ಗೆ ಬಿಜೆಪಿ ಆಗಾಗ ಪ್ರಸ್ತಾಪಿಸಲುತ್ತಲೇ ಇರುತ್ತದೆ. ಇದೀಗ ಮಧ್ಯ ಪ್ರದೇಶ (Madhya Pradesh)ದ ಬಿಜೆಪಿ ಸರ್ಕಾರ ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ಕುರಿತು ಅಧ್ಯಾಯವೊಂದನ್ನು ಅಳವಡಿಸಲು ಮುಂದಾಗಿದೆ. ಮುಖ್ಯಮಂತ್ರಿ ಮೋಹನ್ ಯಾದವ್ (Mohan Yadav) ಈ ಕುರಿತು ಮಾಹಿತಿ ನೀಡಿದ್ದಾರೆ.

ಈ ಅಧ್ಯಾಯ 1975ರಲ್ಲಿ ಕಾಂಗ್ರೆಸ್ ಸರ್ಕಾರವು ಹೇರಿದ ತುರ್ತು ಪರಿಸ್ಥಿತಿಯ ಸಮಯದಲ್ಲಿ ನಡೆದ ʼಅತಿರೇಕಗಳು ಮತ್ತು ದಬ್ಬಾಳಿಕೆʼಯನ್ನು ವಿವರಿಸಲಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ʼʼ1975ರಿಂದ 1977ರ ತುರ್ತು ಪರಿಸ್ಥಿತಿಯ ಅವಧಿಯಲ್ಲಿನ ಹೋರಾಟದ ಬಗ್ಗೆ ಇಂದಿನ ಪೀಳಿಗೆಗೆ ಅರಿವು ಮೂಡಿಸುವುದು ಈ ಕ್ರಮದ ಹಿಂದಿನ ಉದ್ದೇಶʼʼ ಎಂದು ಹೇಳಿದ್ದಾರೆ.

“ದೇಶದಲ್ಲಿ ಅಂದು ಚಾಲ್ತಿಯಲ್ಲಿದ್ದ ಪರಿಸ್ಥಿತಿಗಳು, ದಬ್ಬಾಳಿಕೆ ಮತ್ತು ಆಗಿನ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ಕಠಿಣ ಕ್ರಮವನ್ನು ವಿರೋಧಿಸಿದ ಲೋಕತಂತ್ರ ಸೇನಾನಿ (ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರು)ಗಳ ಹೋರಾಟವನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಲಾಗುವುದು” ಮೋಹನ್ ಯಾದವ್ ತಿಳಿಸಿದ್ದಾರೆ.

ವಿವಿಧ ಸೌಲಭ್ಯ

ಅಲ್ಲದೆ ಅವರು ಲೋಕತಂತ್ರ ಸೇನಾನಿಗಳಿಗೆ ವಿವಿಧ ಸವಲತ್ತುಗಳನ್ನು ಘೋಷಿಸಿದ್ದಾರೆ. ಶೇ. 50ರಷ್ಟು ರಿಯಾಯಿತಿಯೊಂದಿಗೆ ಲೋಕತಂತ್ರ ಸೇನಾನಿಗಳು ಮೂರು ದಿನಗಳ ಕಾಲ ಸರ್ಕಾರಿ ಸರ್ಕ್ಯೂಟ್ ಮತ್ತು ವಿಶ್ರಾಂತಿ ಗೃಹಗಳಲ್ಲಿ ಉಳಿಯಬಹುದು. ಹೆದ್ದಾರಿಗಳ ಟೋಲ್ ಮೊತ್ತದಲ್ಲಿ ರಿಯಾಯಿತಿ ದೊರೆಯಲಿದೆ. ತಮ್ಮ ಆಯುಷ್ಮಾನ್ ಆರೋಗ್ಯ ಕಾರ್ಡ್ ಮೂಲಕ ಪಡೆದ ಚಿಕಿತ್ಸೆಗಾಗಿ ಮಾಡಿದ ವೆಚ್ಚವನ್ನು ತ್ವರಿತವಾಗಿ ಪಾವತಿಸಲು ಕ್ರಮ ಕೂಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಇದಲ್ಲದೆ ಲೋಕತಂತ್ರ ಸೇನಾನಿಗಳಿಗೆ ಗಂಭೀರ ಆರೋಗ್ಯ ಸಮಸ್ಯೆಗಳ ಎದುರಾದರೆ ಅವರಿಗೆ ಏರ್ ಆಂಬ್ಯುಲೆನ್ಸ್‌ ನೆರವು ಒದಗಿಸಲಾಗುತ್ತದೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತ ಲೋಕತಂತ್ರ ಸೇನಾನಿಗಳ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು. ಜತೆಗೆ ಅಂತ್ಯಸಂಸ್ಕಾರಕ್ಕಾಗಿ ಅವರ ಕುಟುಂಬಸ್ಥರಿಗೆ ನೀಡುವ ಸಹಾಯಧನವನ್ನು 8,000 ರೂ.ಯಿಂದ 10,000 ರೂ.ಗೆ ಏರಿಸಲಾಗುವುದು. ಅವರ ಕುಟುಂಬದ ಸದಸ್ಯರಿಗೆ ಅಗತ್ಯ ತರಬೇತಿ ನೀಡಿ ಉದ್ಯೋಗಾವಕಾಶವನ್ನೂ ನೀಡಲಾಗುವುದು ಎಂದು ಮೋಹನ್‌ ಯಾದವ್‌ ಘೋಷಿಸಿದ್ದಾರೆ.

ಇದನ್ನೂ ಓದಿ: Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

1975ರ ಜೂನ್ 25ರಂದು ಏನಾಯ್ತು?

ಚುನಾವಣೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಅಲಹಾಬಾದ್‌ ಹೈಕೋರ್ಟ್‌ನ ಆದೇಶವನ್ನು 1975ರ ಜೂನ್‌ 24ರಂದು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿತ್ತು. ಹೀಗಾಗಿ ಅದರ ಮಾರನೇ ದಿನ ಅಂದರೆ ಜೂನ್‌ 25ರಂದು ಇಂದಿರಾ ಗಾಂಧಿ ಅವರ ಸೂಚನೆ ಮೇರೆಗೆ ಅಂದಿನ ರಾಷ್ಟ್ರಪತಿ ಫಕ್ರುದ್ದೀನ್‌ ಅಲಿ ಅಹಮದ್‌ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಈ ವೇಳೆ ಹಲವು ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲಾಗಿತ್ತು. ಪ್ರತಿಪಕ್ಷದ ನಾಯಕರನ್ನು ಮತ್ತು ಸರ್ಕಾರದ ನಡೆಯನ್ನು ಟೀಕಿಸುವವರನ್ನು ಬಂಧಿಸಲಾಗಿತ್ತು. ಅಲ್ಲದೆ ಮಾಧ್ಯಮಗಳಿಗೆಂದೇ ಮಾರ್ಗಸೂಚಿಯನ್ನು ಜಾರಿ ಮಾಡಲಾಗಿತ್ತು. ಸುಮಾರು 2 ವರ್ಷಗಳ ಬಳಿಕ ತುರ್ತು ಪರಿಸ್ಥಿತಿಯನ್ನು ಹಿಂಪಡೆಯಲಾಯಿತು.

Continue Reading

ದೇಶ

Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

Droupadi Murmu: ನಿನ್ನೆಯಷ್ಟೇ ಸ್ಪೀಕರ್‌ ಓಂ ಬಿರ್ಲಾ ಅವರು ಸಂಸತ್‌ನಲ್ಲಿ ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಿದ್ದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ ಎಂದಿದ್ದಾರೆ.

VISTARANEWS.COM


on

Droupadi Murmu
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Sessions)ದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಮಾತನಾಡಿದ್ದಾರೆ. ಲೋಕಸಭಾ ಸ್ಪೀಕರ್‌ ಆಗಿ ಎರಡನೇ ಬಾರಿ ಚುನಾಯಿತರಾಗಿರುವ ಓಂ ಬಿರ್ಲಾ ಹಾಗೂ ನೂತನ ಸಂಸದರಿಗೆ ಅಭಿನಂದನೆ ಸಲ್ಲಿಸುವ ಮೂಲಕ ಮುರ್ಮು ಅವರು ತಮ್ಮ ಭಾಷಣ ಆರಂಭಿಸಿದರು.

ತುರ್ತು ಪರಿಸ್ಥಿತಿ ಬಗ್ಗೆ ಮುರ್ಮು ಪ್ರಸ್ತಾಪ

ನಿನ್ನೆಯಷ್ಟೇ ಸ್ಪೀಕರ್‌ ಓಂ ಬಿರ್ಲಾ ಅವರು ಸಂಸತ್‌ನಲ್ಲಿ ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಿದ್ದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ ಎಂದಿದ್ದಾರೆ.

ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿ ಹೆಚ್ಚು ಮತದಾನ ಆಗಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ರಾಷ್ಟ್ರಪತಿ ಮರ್ಮು, ದಶಕಗಳ ದಾಖಲೆಯನ್ನು ಮುರಿದು ಜಮ್ಮು ಮತ್ತು ಕಾಶ್ಮೀರ ಹೊರಹೊಮ್ಮಿದೆ. ಇದು ಬಹಳ ಉತ್ತಮ ಬೆಳವಣಿಗೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅತ್ಯಂತ ಕಡಿಮೆ ಮತದಾನ ಆಗುವಂತೆ ನೋಡಿಕೊಂಡು ನಮ್ಮ ಶತ್ರುಗಳು ನಮ್ಮ ವಿರುದ್ಧ ಸಂಚು ರೂಪಿಸುತ್ತಿದ್ದರು. ಅಲ್ಲದೇ ಕಣಿವೆ ರಾಜ್ಯ ಜನರ ಅಭಿಪ್ರಾಯಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದ್ದರು. ಆದರೆ ಈ ಬಾರಿ ಅತಿಹೆಚ್ಚು ಮತದಾನ ಮೂಲಕ ಜನ ಶತ್ರುಗಳಿಗೆ ತಕ್ಕ ಉತ್ತರ ನೀಡಿದ್ದಾರೆ.

ದೇಶದ ಆರ್ಥಿಕತೆ ಬಗ್ಗೆ ಮೆಚ್ಚುಗೆ

ಇದೇ ವೇಳೆ ಅವರು ದೇಶದ ಆರ್ಥಿಕ ಸುಧಾರಣೆ ಬಗ್ಗೆ ಪ್ರಸ್ತಾಪಿಸಿದ್ದು, “ಸುಧಾರಣೆ, ಕಾರ್ಯಕ್ಷಮತೆ ಮತ್ತು ರೂಪಾಂತರದ ಪ್ರತಿಜ್ಞೆಯು ಭಾರತವನ್ನು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನಾಗಿ ರೂಪಿಸಿದೆ. 10 ವರ್ಷಗಳಲ್ಲಿ, 11 ನೇ ಸ್ಥಾನದಿಂದ 5ನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ದೇಶವಾಗಿ ಭಾರತ ಬೆಳೆಯಿತು. ಸಾಂಕ್ರಾಮಿಕ ಮತ್ತು ವಿವಿಧ ಸಂಘರ್ಷಗಳ ಹೊರತಾಗಿಯೂ ಪ್ರಪಂಚದ ಕೆಲವು ಭಾಗಗಳಲ್ಲಿ, ಭಾರತವು ಕಳೆದ 10 ವರ್ಷಗಳಲ್ಲಿ ರಾಷ್ಟ್ರೀಯ ಹಿತಾಸಕ್ತಿಯಿಂದ ಕೈಗೊಂಡ ಸುಧಾರಣೆಗಳು ಮತ್ತು ನಿರ್ಧಾರಗಳಿಂದಾಗಿ ಈ ಬೆಳವಣಿಗೆಯನ್ನು ಸಾಧಿಸಲು ಸಾಧ್ಯವಾಯಿತು. ಪ್ರಪಂಚದ ಅಭಿವೃದ್ಧಿಯಲ್ಲಿ ಭಾರತ 15% ರಷ್ಟು ಕೊಡುಗೆ ನೀಡುತ್ತಿದೆ. ಭಾರತವನ್ನು ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವುದೇ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

CAA ಬಗ್ಗೆ ಮುರ್ಮು ಏನಂದ್ರು?

ನನ್ನ ಸರ್ಕಾರವು CAA ಕಾನೂನಿನ ಅಡಿಯಲ್ಲಿ ನಿರಾಶ್ರಿತರಿಗೆ ಪೌರತ್ವವನ್ನು ನೀಡಲು ಪ್ರಾರಂಭಿಸಿದೆ. CAA ಅಡಿಯಲ್ಲಿ ಪೌರತ್ವವನ್ನು ಪಡೆದ ಕುಟುಂಬಗಳಿಗೆ ನಾನು ಉತ್ತಮ ಭವಿಷ್ಯವನ್ನು ಬಯಸುತ್ತೇನೆ. ನನ್ನ ಸರ್ಕಾರವು ಭಾರತದ ಪರಂಪರೆ ಮತ್ತು ಸಂಸ್ಕೃತಿಯನ್ನು ಮರುಸ್ಥಾಪಿಸಲು ಬಯಸುತ್ತದೆ ಎಂದರು.

ಇದನ್ನೂ ಓದಿ: Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Continue Reading

ದೇಶ

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರಿದಿದೆ. ಅದನ್ನು ನಿಲ್ಲಿಸಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶವು ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಸಾರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Amartya Sen
Koo

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶವು ಭಾರತ (India) ಹಿಂದೂ ರಾಷ್ಟ್ರವಲ್ಲ (Hindu Rashtra) ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ (Nobel laureate) ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಪ್ರತಿಪಾದಿಸಿದರು. ಯುಎಸ್‌ನಿಂದ (US) ಕೋಲ್ಕತ್ತಾಗೆ (Kolkata) ಆಗಮಿಸಿದ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆಯನ್ನು ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರೆದಿದೆ. ಅದನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಭಾರತವು ಜಾತ್ಯತೀತ ಸಂವಿಧಾನವನ್ನು ಹೊಂದಿರುವ ಜಾತ್ಯತೀತ ರಾಷ್ಟ್ರವಾಗಿರುವಾಗ ರಾಜಕೀಯವಾಗಿ ಮುಕ್ತ ಮನಸ್ಸಿನ ಅವಶ್ಯಕತೆಯಿದೆ. ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಕಲ್ಪನೆಯು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ ಅವರು, ಹೊಸ ಕೇಂದ್ರ ಸಚಿವ ಸಂಪುಟವು ಹಿಂದಿನ ಸಂಪುಟದ ನಕಲು ಎಂದು ಅಭಿಪ್ರಾಯಪಟ್ಟರು.

ಹಲವು ಸಚಿವರಿಗೆ ಅವರ ಖಾತೆಗಳನ್ನು ಮುಂದುವರಿಸಲಾಗಿದೆ. ಸ್ವಲ್ಪಮಟ್ಟಿಗೆ ಪುನರ್ರಚನೆಯ ಹೊರತಾಗಿಯೂ, ರಾಜಕೀಯವಾಗಿ ಪ್ರಬಲರು ಇನ್ನೂ ಪ್ರಬಲರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ಜೈಲಿನಲ್ಲಿಡಲಾಗಿತ್ತು ಎಂದು ತಮ್ಮ ಬಾಲ್ಯದ ದಿನಗಳನ್ನು ಸೇನ್ ನೆನಪಿಸಿಕೊಂಡರು.

ನಾನು ಚಿಕ್ಕವನಿದ್ದಾಗ ನನ್ನ ಅನೇಕ ಚಿಕ್ಕಪ್ಪಂದಿರು ಮತ್ತು ಸೋದರಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕಲಾಯಿತು. ಭಾರತವು ಇದರಿಂದ ಮುಕ್ತವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಇದು ನಿಲ್ಲದಿದ್ದಕ್ಕೆ ಕಾಂಗ್ರೆಸ್ ಕೂಡ ಕಾರಣ. ಅವರು ಅದನ್ನು ಬದಲಾಯಿಸಲಿಲ್ಲ. ಆದರೆ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ಇದು ಹೆಚ್ಚು ಆಚರಣೆಯಲ್ಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಬಿಜೆಪಿ ಫೈಜಾಬಾದ್ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿರುವ ಬಗ್ಗೆ ಸೇನ್, ದೇಶದ ನಿಜವಾದ ಗುರುತನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ಇದನ್ನೂ ಓದಿ: Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ಈ ರೀತಿ ನಡೆಯಬಾರದಿತ್ತು. ಭಾರತವನ್ನು ಹಿಂದೂ ರಾಷ್ಟ್ರ’ ಎಂದು ಬಿಂಬಿಸಲು ತುಂಬಾ ಹಣ ಖರ್ಚು ಮಾಡಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದ ನಿಜವಾದ ಗುರುತನ್ನು ನಿರ್ಲಕ್ಷಿಸುವ ಪ್ರಯತ್ನವನ್ನು ತೋರಿಸುತ್ತದೆ ಮತ್ತು ಇದು ಬದಲಾಗಬೇಕು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯದಂತಹ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸೇನ್ ಹೇಳಿದರು.

Continue Reading

ಕ್ರೈಂ

Orissa High Court: ‘ದಿನಕ್ಕೆ ಹಲವು ಬಾರಿ ನಮಾಜ್‌ ಮಾಡ್ತಾನೆʼ- ಅಪ್ರಾಪ್ತೆ ಹತ್ಯಾಚಾರ ಎಸಗಿದವನ ಗಲ್ಲು ಶಿಕ್ಷೆ ರದ್ದುಪಡಿಸಿದ ಕೋರ್ಟ್‌

Orissa High Court: ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶೇಖ್ ಆಸಿಫ್ ಅಲಿಯ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಒರಿಸ್ಸಾ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಆಸಿಫ್ ದಿನಕ್ಕೆ ಹಲವು ಬಾರಿ ನಿರಂತರವಾಗಿ ನಮಾಜ್ ಮಾಡುತ್ತಿರುವುದನ್ನು ಗಮನಿಸಿದ ಕೋರ್ಟ್‌ ಆತ ತನ್ನ ಕೃತ್ಯಕ್ಕೆ ಪ್ರಾಯಶ್ಚಿತ ಪಡುತ್ತಿರುವುದನ್ನು ಉಲ್ಲೇಖಿಸಿದ ಈ ತೀರ್ಪು ನೀಡಿದೆ. ಜತೆಗೆ ಅಪರಾಧವನ್ನು ಪೂರ್ವಯೋಜಿತ ರೀತಿಯಲ್ಲಿ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಶಿಕ್ಷೆಯನ್ನು ಕಡಿತಗೊಳಿಸಿದೆ.

VISTARANEWS.COM


on

Orissa High Court
Koo

ಭುವನೇಶ್ವರ: ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶೇಖ್ ಆಸಿಫ್ ಅಲಿ (Sheikh Asif Ali)ಯ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಒರಿಸ್ಸಾ ಹೈಕೋರ್ಟ್‌ (Orissa High Court) ತೀರ್ಪು ನೀಡಿದೆ.

ಆಸಿಫ್ ದಿನಕ್ಕೆ ಹಲವು ಬಾರಿ ನಿರಂತರವಾಗಿ ನಮಾಜ್ ಮಾಡುತ್ತಿರುವುದನ್ನು ಗಮನಿಸಿದ ಕೋರ್ಟ್‌ ಆತ ತನ್ನ ಕೃತ್ಯಕ್ಕೆ ಪ್ರಾಯಶ್ಚಿತ ಪಡುತ್ತಿರುವುದನ್ನು ಉಲ್ಲೇಖಿಸಿದ ಈ ತೀರ್ಪು ನೀಡಿದೆ. ಜತೆಗೆ ನ್ಯಾಯಮೂರ್ತಿ ಎಸ್.ಕೆ.ಸಾಹೂ ಮತ್ತು ನ್ಯಾಯಮೂರ್ತಿ ಆರ್.ಕೆ.ಪಟ್ನಾಯಕ್ ಅವರನ್ನೊಳಗೊಂಡ ನ್ಯಾಯಪೀಠವು, ಶೇಖ್ ಆಸಿಫ್ ಅಲಿ ವಿರುದ್ಧ ಮರಣ ದಂಡನೆ ವಿಧಿಸಬಹುದಾದ ಪ್ರಬಲ ಸಾಕ್ಷಿಗಳಿಲ್ಲ ಎಂದು ತಿಳಿಸಿದೆ. ಈ ಪ್ರಕರಣವು ಸಾಂದರ್ಭಿಕ ಪುರಾವೆಗಳನ್ನು ಆಧರಿಸಿದೆ ಮತ್ತು ಅಪರಾಧವನ್ನು ಪೂರ್ವಯೋಜಿತ ರೀತಿಯಲ್ಲಿ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಶಿಕ್ಷೆಯನ್ನು ಕಡಿತಗೊಳಿಸಿದೆ.

ಘಟನೆಯ ಹಿನ್ನೆಲೆ

ಇದು ಸುಮಾರು 10 ವರ್ಷಗಳ ಹಿಂದಿನ ಘಟನೆ. 2014ರ ಆಗಸ್ಟ್‌ 21ರಂದು ಆರು ವರ್ಷದ ಸಂತ್ರಸ್ತೆ ತನ್ನ ಅಪ್ರಾಪ್ತ ವಯಸ್ಸಿನ ಕಸಿನ್‌ ಜತೆ ಅಪರಾಹ್ನ 2 ಗಂಟೆ ಸುಮಾರಿಗೆ ಚಾಕೋಲೆಟ್‌ ಖರೀದಿಸಲು ಅಂಗಡಿಗೆ ತೆರಳಿದ್ದಳು. 3 ಗಂಟೆಯಾದರೂ ಬಾಲಕಿ ಹಿಂದಿರುಗದ ಕಾರಣ ಮನೆಯವರಿಗೆ ಗಾಬರಿ ಅಕ್ಕ ಪಕ್ಕದ ಮನೆಯವರಿಗೆ ಸುದ್ದಿ ತಿಳಿಸಿದರು. ಹೀಗೆ ಅವರೆಲ್ಲ ಸೇರಿ ಬಾಲಕಿಯನ್ನು ಹುಡುಕತೊಡಗಿದರು.

ಅನೇಕ ತಾಸಿನ ಹುಡುಕಾಟದ ಬಳಿಕ ಆರು ವರ್ಷದ ಬಾಲಕಿ ನಗ್ನಾವಸ್ಥೆಯಲ್ಲಿ, ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಶೇಖ್ ಖೈರುದ್ದೀನ್‌ ಎಂಬಾತನ ಮನೆಯ ಸಮೀಪ ಕಂಡು ಬಂದಿದ್ದಳು. ಕೂಡಲೇ ಆಕೆಯನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಅವರು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ದಾಖಲಿಸುವಂತೆ ಸಲಹೆ ನೀಡಿದರು. ಆದರೆ ಅಷ್ಟರಲ್ಲಿ ಬಾಲಕಿ ಅಸುನೀಗಿದ್ದಳು.

ಶೇಕ್‌ ಆಸಿಫ್‌ ಅಲಿ ಮತ್ತು ಶೇಕ್‌ ಅಕಿಲ್‌ ಅಲಿ ಬಾಲಕಿಯನ್ನು ಬಲವಂತದಿಂದ ಕರೆದೊಯ್ದಿರುವುದನ್ನು ನೋಡಿರುವುದಾಗಿ ಆಕೆಯ ಜತೆಗಿದ್ದ ಕಸಿನ್‌ ತಿಳಿಸಿದ್ದಳು. ಹೀಗಾಗಿ ಸಂತ್ರಸ್ತೆಯ ಕುಟುಂಬ ನೀಡಿದ ದೂರಿನಂತೆ ಈ ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302, 376-ಡಿ ಮತ್ತು 376-ಎ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮರಣೋತ್ತರ ವರದಿ ಮತ್ತು ವಿಚಾರಣೆ ವೇಳೆ, ಆರೋಪಿಗಳು ಬಾಲಕಿಯ ಬಾಯಿಯನ್ನು ಮುಚ್ಚಿಕೊಂಡು ಅವಳನ್ನು ಕರೆದೊಯ್ದು, ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿದ್ದಾರೆ ಎಂದು ತಿಳಿದು ಬಂದಿತ್ತು. ಬಳಿಕ ವಿಚಾರಣಾ ನ್ಯಾಯಾಲಯವು ಐಪಿಸಿ ಮತ್ತು ಪೋಕ್ಸೊ ಸೆಕ್ಷನ್‌ ಅಡಿಯಲ್ಲಿ ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದ್ದರೂ, ಒರಿಸ್ಸಾ ಹೈಕೋರ್ಟ್ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಶೇಖ್ ಅಕಿಲ್ ಅಲಿಯನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿತ್ತು.

ಶೇಖ್ ಆಸಿಫ್ ಅಲಿ ಪ್ರಕರಣದಲ್ಲಿ ತೀರ್ಪು ನೀಡಿ “ಶೇಖ್ ಆಸಿಫ್ ಅಲಿ ವಿರುದ್ಧ ಐಪಿಸಿಯ ಸೆಕ್ಷನ್ 376-ಡಿ ಅಡಿಯಲ್ಲಿ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ. ಆದರೆ ಐಪಿಸಿಯ ಸೆಕ್ಷನ್ 302, 376-ಎ ಮತ್ತು ಪಿಒಸಿಯ ಸೆಕ್ಷನ್ 6ರ ಅಡಿಯಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದೆʼʼ ಎಂದು ಹೇಳಿತ್ತು. ಇದೀಗ ಪೂರಕ ಸಾಕ್ಷ್ಯಾಧಾರಗಳ ಕೊರತೆಯಿಂದ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿದೆ.

ಇದನ್ನೂ ಓದಿ: Physical Abuse : ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆಗೆ ಯತ್ನಿಸಿದ ಕಾಮುಕ

Continue Reading
Advertisement
Actor Darshan
ಸಿನಿಮಾ5 mins ago

Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

cm siddaramaiah price hikes
ಕರ್ನಾಟಕ37 mins ago

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

Mohan Yadav
ದೇಶ43 mins ago

Mohan Yadav: ಇನ್ಮುಂದೆ ಶಾಲಾ ಪಠ್ಯದಲ್ಲಿ ಇರಲಿದೆ ‘ತುರ್ತು ಪರಿಸ್ಥಿತಿ’ಯ ಅಧ್ಯಾಯ

Road Accident
ಕ್ರೈಂ55 mins ago

Road Accident : ರೈಲು ಬಡಿದು ವ್ಯಕ್ತಿ ಸಾವು;ನಿಂತಿದ್ದ ಬಸ್‌ಗೆ ಗುದ್ದಿ ಛಿದ್ರಗೊಂಡ ಹೊಸ ಕಾರು

Rohit Sharma
ಕ್ರೀಡೆ60 mins ago

Rohit Sharma : ಇಂಗ್ಲೆಂಡ್​ ಸೋಲಿಸುವ ಯೋಜನೆ ವಿವರಿಸಿದ ನಾಯಕ ರೋಹಿತ್ ಶರ್ಮಾ

Droupadi Murmu
ದೇಶ1 hour ago

Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

IND vs ENG
ಪ್ರಮುಖ ಸುದ್ದಿ1 hour ago

IND vs ENG : ಭಾರತದ ವಿರುದ್ಧ ಹೂಡಲಿರುವ ತಂತ್ರಗಳನ್ನು ವಿವರಿಸಿದ ಇಂಗ್ಲೆಂಡ್ ಕೋಚ್​ ಮ್ಯಾಥ್ಯೂ ಮಾಟ್​

karnataka Rains Effected
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

Share Market
ವಾಣಿಜ್ಯ2 hours ago

Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

pattanagere shed actor darshan renuka swamy murder
ಕ್ರೈಂ2 hours ago

Actor Darshan: ಪಟ್ಟಣಗೆರೆ ಶೆಡ್ಡಾ? ನಾವು ಅಲ್ಲಿಗೆ ಹೋಗೋಲ್ಲ ಅನ್ನುತ್ತಿರುವ ವಾಹನ ಮಾಲಿಕರು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rains Effected
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಟ್ರೆಂಡಿಂಗ್‌