Business success | ಮೂವರು ಸ್ನೇಹಿತರು 2 ಲಕ್ಷ ರೂ.ಗೆ ಶುರು ಮಾಡಿದ ಬೇಕರಿಯ 75 ಕೋಟಿ ರೂ. ಬಿಸಿನೆಸ್! - Vistara News

ಪ್ರಮುಖ ಸುದ್ದಿ

Business success | ಮೂವರು ಸ್ನೇಹಿತರು 2 ಲಕ್ಷ ರೂ.ಗೆ ಶುರು ಮಾಡಿದ ಬೇಕರಿಯ 75 ಕೋಟಿ ರೂ. ಬಿಸಿನೆಸ್!

ದಿಲ್ಲಿಯಲ್ಲಿ 6 ವರ್ಷಗಳ ಹಿಂದೆ ಮೂವರು ಕಾಲೇಜು ಸ್ನೇಹಿತರು ಸೇರಿ ಶುರು ಮಾಡಿದ ಆನ್‌ಲೈನ್‌ ಬೇಕರಿ ಈಗ 75 ಕೋಟಿ ರೂ. ವಹಿವಾಟು ನಡೆಸುವ ಉದ್ದಿಮೆಯಾಗಿ ಬೆಳೆದಿದೆ! ಮನಸ್ಸಿದ್ದರೆ ಮಾರ್ಗ ( Business success) ಹಲವು ಎನ್ನುವುದಕ್ಕೆ ಇಲ್ಲಿದೆ ನಿದರ್ಶನ.

VISTARANEWS.COM


on

bakingo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬಿಸಿನೆಸ್‌ ಮಾಡಲು ಒಂದೊಳ್ಳೆಯ ಐಡಿಯಾ ಕೂಡ ಮುಖ್ಯವಾಗುತ್ತದೆ ಎಂಬುದಕ್ಕೆ ಇಲ್ಲಿದೆ ತಾಜಾ ಉದಾಹರಣೆ. ದಿಲ್ಲಿಯ ವಿಶ್ವವಿದ್ಯಾಲಯದಲ್ಲಿ ಓದಿದ್ದ ಮೂವರು ಸ್ನೇಹಿತರು ಸೇರಿ ೨೦೧೬ರಲ್ಲಿ ಆರಂಭಿಸಿದ ಆನ್‌ಲೈನ್‌ ಬೇಕರಿಯೊಂದು ಈಗ ದೇಶದ ೧೧ ನಗರಗಳಲ್ಲಿ ವಹಿವಾಟು ನಡೆಸುತ್ತಿದೆ. ೭೫ ಕೋಟಿ ರೂ.ಗಳ ಬಿಸಿನೆಸ್‌ ನಡೆಸುವ ಸಂಸ್ಥೆಯಾಗಿ (Business success) ಹೊರಹೊಮ್ಮಿದೆ!

ಕೇವಲ ಆರು ವರ್ಷಗಳ ಹಿಂದೆ ದಿಲ್ಲಿಯ ನೇತಾಜಿ ಸುಭಾಷ್‌ ಯುನಿವರ್ಸಿಟಿಯಲ್ಲಿ ಓದಿದ್ದ ಮೂವರು ಸ್ನೇಹಿತರಾದ ಹಿಮಾಂಶು ಚಾವ್ಲಾ, ಶ್ರೇ ಸೆಹಗಲ್ ಮತ್ತು ಸುಮನ್‌ ಪಾತ್ರಾ ಅವರು ಹೊಸ ಬಿಸಿನೆಸ್‌ ಆರಂಭಿಸಲು ನಿರ್ಧರಿಸಿದರು.‌

೨೦೦೬ರಲ್ಲಿ ಕಾಲೇಜು ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಸ್ವಲ್ಪ ಸಮಯ ಕೆಲ ಕಂಪನಿಗಳಲ್ಲಿ ಉದ್ಯೋಗದಲ್ಲಿದ್ದರು. ಬಳಿಕ ಸ್ವಂತ ಬಿಸಿನೆಸ್‌ ಶುರು ಮಾಡಲು ನಿರ್ಧರಿಸಿದರು. ೨೦೧೦ರಲ್ಲಿ ಫ್ಲವರ್‌ ಔರಾ ಎಂಬ ಗಿಫ್ಟಿಂಗ್ ಕಂಪನಿಯನ್ನು ಗುರ್‌ಗಾಂವ್‌ನಲ್ಲಿ ತೆರೆದರು. ೨೦೧೦ರಲ್ಲಿ ೨ ಲಕ್ಷ ರೂ. ಬಂಡವಾಳದಲ್ಲಿ ವಹಿವಾಟು ಶುರುವಾಯಿತು. ಆನ್‌ಲೈನ್‌ ಮೂಲಕ ಅಲಂಕಾರಿಕ ಹೂವು, ಕೇಕ್‌ಗಳ ಆರ್ಡರ್‌ ಗಳಿಸಿ ಮಾರಾಟ ಮಾಡುತ್ತಿದ್ದರು. ೨೦೧೬ರಲ್ಲಿ ಈ ಮೂವರು ಸ್ನೇಹಿತರು ಬೇಕಿಂಗೊ ( Bakingo) ಎಂಬ ಹೆಸರಿನಲ್ಲಿ ಹೊಸ ಕಂಪನಿಯನ್ನು ಆರಂಭಿಸಿದರು. ತಾಜಾ ಕೇಕ್‌ಗಳನ್ನು ಆನ್‌ಲೈನ್‌ ಮೂಲಕ ಮಾರಾಟ ಮಾಡಲು ಶುರು ಮಾಡಿದರು. ಇದು ದಿನದಿಂದ ದಿನಕ್ಕೆ ಜನಪ್ರಿಯತೆ ಗಳಿಸಿತು.‌ ಕಂಪನಿಯಲ್ಲಿ ೬೫೦ ಸಿಬ್ಬಂದಿ ಇದ್ದಾರೆ.

ಭಾರತದಲ್ಲಿ ಬೇಕರಿ ವಹಿವಾಟು ಸಾಂಪ್ರದಾಯಿಕ ವಿಧಾನದಲ್ಲಿ ನಡೆಯುತ್ತಿದೆ. ಇದಕ್ಕೆ ಸ್ಥಳೀಯ ಸೊಗಡಿನ ಸ್ಪರ್ಶ ನೀಡಿದರೆ ಹೆಚ್ಚು ಗ್ರಾಹಕರನ್ನು ಆಕರ್ಷಿಸಬಹುದುʼʼ ಎನ್ನುತ್ತಾರೆ ಹಿಮಾಂಶು.

೨೦೨೧-೨೨ರಲ್ಲಿ ೭೫ ಕೋಟಿ ರೂ. ವಹಿವಾಟು!

ಬೇಕಿಂಗೊ ಆನ್‌ಲೈನ್‌ ಬೇಕರಿಯು ಹೈದರಾಬಾದ್‌, ಬೆಂಗಳೂರು, ದಿಲ್ಲಿ, ಎನ್‌ಸಿಆರ್‌ ಇತ್ಯಾದಿ ನಗರಗಳಲ್ಲಿ ಅಸ್ತಿತ್ವ ಹೊಂದಿದೆ. ೩೦% ಬಿಸಿನೆಸ್‌ ಬಕಿಂಗೊದ ವೆಬ್‌ಸೈಟ್‌ ಮೂಲಕ ನಡೆಯುತ್ತದೆ. ೭೦% ಬಿಸಿನೆಸ್‌ ಇತರ ಫುಡ್‌ ಪೋರ್ಟಲ್‌ಗಳಾದ ಸ್ವಿಗ್ಗಿ, ಜೊಮ್ಯಾಟೊ ಮೂಲಕ ನಡೆಯುತ್ತದೆ. ೨೦೨೧-೨೨ರಲ್ಲಿ ಕಂಪನಿ ೭೫ ಕೋಟಿ ರೂ. ವಹಿವಾಟು ನಡೆಸಿದೆ. ಬೇಕಿಂಗೊ ಈ ವರ್ಷ ದಿಲ್ಲಿಯಲ್ಲಿ ತನ್ನ ಮೊದಲ ಆಫ್‌ಲೈನ್‌ ಬೇಕರಿ ಮಳಿಗೆ ತೆರೆದಿದೆ.

ಬೇಕಿಂಗೊ ಆನ್‌ಲೈನ್‌ ಮೂಲಕ ಆರ್ಡರ್‌ಗಳನ್ನು ಸ್ವೀಕರಿಸಿ, ಭಾರತದ ಯಾವುದೇ ಮೂಲೆಗೂ ನಾನಾ ವಿಧದ ಕೇಕ್‌ಗಳನ್ನು ತಲುಪಿಸುತ್ತದೆ. ಸ್ಥಳೀಯ ಬೇಕರಿಗಳಲ್ಲಿ ನಿಮಗೆ ೧೦-೧೫ ಮಾರಿಯ ಕೇಕ್‌ ಲಭಿಸಿದರೆ, ಇಲ್ಲಿ ೫೦೦ಕ್ಕೂ ಹೆಚ್ಚು ಮಾದರಿಯ ಕೇಕ್‌ಗಳು ದೊರೆಯುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Stray dogs attack: ಬೀದಿನಾಯಿಗಳು ದಾಳಿ ನಡೆಸಿ, ನಾಲ್ಕು ಮಕ್ಕಳು ಹಾಗೂ ಓರ್ವ ಮಹಿಳೆಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಗರದ 12 ನೇ ವಾರ್ಡ್ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಜರುಗಿದೆ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಕಚ್ಚಿ ಗಾಯಗೊಳಿಸಿವೆ. ಇದೇ ವೇಳೆ ರಕ್ಷಣೆಗೆಂದು ಹೋದ ಮಹಿಳೆಯ ಮೇಲೂ ದಾಳಿ ನಡೆಸಿ, ಗಾಯಗೊಳಿಸಿವೆ.

VISTARANEWS.COM


on

Stray dogs attack in Shira 4 children one woman injured
Koo

ಶಿರಾ: ಬೀದಿನಾಯಿಗಳು ದಾಳಿ (Stray Dogs Attack) ನಡೆಸಿ, ನಾಲ್ಕು ಮಕ್ಕಳು ಹಾಗೂ ಒಬ್ಬ ಮಹಿಳೆಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಗರಸಭೆಯ 12ನೇ ವಾರ್ಡ್ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಡೆದಿದೆ.

ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಕಚ್ಚಿ ಗಾಯಗೊಳಿಸಿವೆ. ಇದೇ ವೇಳೆ ಮಕ್ಕಳ ರಕ್ಷಣೆಗೆಂದು ಹೋದ ಮಹಿಳೆಯ ಮೇಲೂ ದಾಳಿ ನಡೆಸಿ, ಗಾಯಗೊಳಿಸಿವೆ.

ಬೀದಿನಾಯಿಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಶಿರಾ ನಗರಸಭೆ ವ್ಯಾಪ್ತಿಯ 12ನೇ ವಾರ್ಡ್‌ನ ನಿವಾಸಿಗಳು, ನಗರಸಭೆಯ ಆಯುಕ್ತ ಕೆ. ರುದ್ರೇಶ್‌ ಅವರಿಗೆ ಮನವಿ ಸಲ್ಲಿಸಿದರು.

ರಿಹಾನ್ (7), ತಾಸ್ಮಿಯ (13), ಜಿಯಾ ಉಲ್ಲಾಖಾನ್ (7), ಇಬದುಲ್ಲಾ ಖಾನ್ (1) ಹಾಗೂ ಶಾಹಿನ (45) ಅವರಿಗೆ ಗಾಯಗಳಾಗಿದ್ದು, ಶಿರಾ ನಗರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ 4 ಮಕ್ಕಳು ಹಾಗೂ ಮಹಿಳೆಯನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

ಬೀದಿನಾಯಿಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಶಿರಾ ನಗರಸಭೆ ವ್ಯಾಪ್ತಿಯ 12ನೇ ವಾರ್ಡ್‌ನ ನಿವಾಸಿಗಳು, ನಗರಸಭೆಯ ಆಯುಕ್ತ ಕೆ. ರುದ್ರೇಶ್‌ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ನಗರಸಭೆಯ ಆಯುಕ್ತ ಕೆ. ರುದ್ರೇಶ್‌, ನಗರಸಭೆ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವ ಎಬಿಸಿ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಸಭೆ ತೀರ್ಮಾನ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಡವಾಯಿತು. ಸದ್ಯದಲ್ಲೇ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದ ತಿಳಿಸಿದರು.

Continue Reading

ದೇಶ

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

Somnath Bharti: ಎಲ್ಲ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಕ್ಷೇತ್ರಗಳ ಪೈಕಿ 355-380 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ 2019ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಆಪ್‌ ನಾಯಕ ಸೋಮನಾಥ್‌ ಭಾರ್ತಿ ಅವರು ಮತಗಟ್ಟೆ ಸಮೀಕ್ಷೆಗಳನ್ನು ತಿರಸ್ಕರಿಸಿದ್ದಾರೆ.

VISTARANEWS.COM


on

Somnath Bharti
Koo

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ತೆರೆ ಬಿದ್ದಿದ್ದು, ಮತಗಟ್ಟೆ ಸಮೀಕ್ಷೆಗಳು ಕೂಡ ಬಹಿರಂಗವಾಗಿವೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹೇಳಿದಂತೆ ಎನ್‌ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸದಿದ್ದರೂ, ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುತೇಕ ಸಮೀಕ್ಷೆಗಳು ತಿಳಿಸಿವೆ. ಆದರೆ, ಆಪ್‌ ನಾಯಕ, ನವದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸೋಮನಾಥ್‌ ಭಾರ್ತಿ (Somnath Bharti) ಅವರು ಮತಗಟ್ಟೆ ಸಮೀಕ್ಷೆಯನ್ನು ತಿರಸ್ಕರಿಸಿದ್ದಾರೆ. ಅಷ್ಟೇ ಅಲ್ಲ, “ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾದರೆ ನನ್ನ ತಲೆ ಬೋಳಿಸಿಕೊಳ್ಳುತ್ತೇನೆ” ಎಂದಿದ್ದಾರೆ.

“ಜೂನ್‌ 4ರಂದು ಎಲ್ಲ ಮತಗಟ್ಟೆ ಸಮೀಕ್ಷೆಗಳು ತಪ್ಪು ಎಂಬುದು ಸಾಬೀತಾಗಲಿದೆ. ಖಂಡಿತವಾಗಿಯೂ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದಿಲ್ಲ. ದೆಹಲಿಯ ಎಲ್ಲ 7 ಲೋಕಸಭೆ ಕ್ಷೇತ್ರಗಳಲ್ಲೂ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇನ್ನು, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದರೆ, ನಾನು ನನ್ನ ತಲೆಯನ್ನು ಬೋಳಿಸಿಕೊಳ್ಳುತ್ತೇನೆ” ಎಂಬುದಾಗಿ ಮತಗಟ್ಟೆ ಸಮೀಕ್ಷೆಗಳ ವರದಿಗಳ ಬಳಿಕ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಪೋಸ್ಟ್‌ ಈಗ ವೈರಲ್‌ ಆಗಿದ್ದು, ಜೂನ್‌ 4ರಂದು ತಲೆ ಬೋಳಿಸಿಕೊಳ್ಳಲು ಸಜ್ಜಾಗಿ ಎಂಬುದಾಗಿ ಜನ ಪ್ರತಿಕ್ರಿಯಿಸಿದ್ದಾರೆ.

ಮತಗಟ್ಟೆ ಸಮೀಕ್ಷೆಯ ಸಾರವೇನು?

ಎಲ್ಲ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಕ್ಷೇತ್ರಗಳ ಪೈಕಿ 355-380 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ 2019ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ ಎಂದು ಹೇಳಲಾಗುತ್ತಿದೆ. 2019ರಲ್ಲಿ ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.

ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟವು ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲಿ 125-165 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ಮತಗಟ್ಟೆ ಸಮೀಕ್ಷೆಗಳ ಒಟ್ಟು ಸಾರವಾಗಿದೆ. ಇದರೊಂದಿಗೆ ಇಂಡಿಯಾ ಒಕ್ಕೂಟವು ಮ್ಯಾಜಿಕ್‌ ನಂಬರ್‌ (272) ಬಿಡಿ, 200 ಕ್ಷೇತ್ರಗಳನ್ನೂ ತಲುಪುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಇದರೊಂದಿಗೆ ಕಾಂಗ್ರೆಸ್‌ ಸೇರಿ ಪ್ರತಿಪಕ್ಷಗಳಿಗೆ ಸತತ ಮೂರನೇ ಬಾರಿಯೂ ಹಿನ್ನಡೆಯಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ದಕ್ಷಿಣದಲ್ಲಿ ಬಿಜೆಪಿಗೆ ಮುನ್ನಡೆ

ದಕ್ಷಿಣ ಭಾರತದಲ್ಲಿ, ಅದರಲ್ಲೂ ಕೇರಳ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿವೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ. ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ.

ಇದನ್ನೂ ಓದಿ: Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Continue Reading

ಕ್ರೀಡೆ

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

T20 World Cup : ಇಲ್ಲಿನ ನಸ್ಸಾವು ಕೌಂಟಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ಗೆ 182 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಬಾಂಗ್ಲಾದೇಶ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ಗೆ 120 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

T 20 world cup
Koo

ನ್ಯೂಯಾರ್ಕ್​​: ಟಿ20 ವಿಶ್ವ ಕಪ್​ ಅಭಿಯಾನದ (T20 World Cup) ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿದೆ. ತನ್ನ ನೆರೆಯ ದೇಶ ಬಾಂಗ್ಲಾ ವಿರುದ್ಧದ ಹಣಾಹಣಿಯಲ್ಲಿ 60 ರನ್​ಗಳ ಭರ್ಜರಿ ವಿಜಯ ತನ್ನದಾಗಿಸಿಕೊಂಡಿದೆ. ವಿಕೆಟ್​ ಕೀಪರ್​ ಬ್ಯಾಟರ್ ರಿಷಭ್​ ಪಂತ್(53 ರನ್​, 32 ಎಸೆತ)​ ಹಾಗೂ ಹಾರ್ದಿಕ್ ಪಾಂಡ್ಯ (23 ಎಸೆತಕ್ಕೆ 43 ರನ್​) ಭಾರತ ಪರ ಬ್ಯಾಟಿಂಗ್​ನಲ್ಲಿ ಮಿಂಚಿದರೆ ಬೌಲಿಂಗ್​ನಲ್ಲಿ ಅರ್ಶ್​ದೀಪ್​ ಸಿಂಗ್​ (2 ವಿಕೆಟ್) ಪಡೆದರು. ಈ ಗೆಲುವಿನೊಂದಿಗೆ ಭಾರತ ತಂಡ ತನ್ನ ವಿಶ್ವಾಸ ಪ್ರದರ್ಶಿಸಿತು.

ಇಲ್ಲಿನ ನಸ್ಸಾವು ಕೌಂಟಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ಗೆ 182 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಬಾಂಗ್ಲಾದೇಶ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ಗೆ 120 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಭಾರತ ಪರ ಇನಿಂಗ್ಸ್ ಆರಂಭಿಸಲು ಅವಕಾಶ ಪಡೆದ ಸಂಜು ಸ್ಯಾಮ್ಸನ್​ ಬ್ಯಾಟಿಂಗ್​ನಲ್ಲಿ ವೈಫಲ್ಯ ಕಂಡರು. ಅವರು 1 ರನ್​ಗೆ ಔಟಾದರು. ರೋಹಿತ್ ಶರ್ಮಾ ಕೂಡ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ಇರದೇ 23 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. 59 ರನ್​ಗಳಿಗೆ 2 ವಿಕೆಟ್​ ನಷ್ಟ ಮಾಡಿಕೊಂಡ ಭಾರತ ಉತ್ತಮ ಆರಂಭ ಪಡೆಯಲಿಲ್ಲ. ಆದರೆ ಬಳಿಕ ರಿಷಭ್​ ಪಂತ್​ ಹಾಗೂ ಸೂರ್ಯಕುಮಾರ್ ಯಾದವ್​ ಇನಿಂಗ್ಸ್​ ಕಟ್ಟಿದರು. ಪಂತ್ 32 ಎಸೆತಗಳಿಗೆ 4 ಸಿಕ್ಸರ್​ ಹಾಗೂ ಅಷ್ಟೇ ಸಂಖ್ಯೆಯ ಫೋರ್​ನೊಂದಿಗೆ 53 ರನ್ ಬಾರಿಸಿದರೆ ಸೂರ್ಯಕುಮಾರ್ ಯಾದವ್​​ 18 ಎಸೆತಕ್ಕೆ 4 ಫೋರ್​ ಸಮೇತ 31 ರನ್ ಕೊಡುಗೆ ಕೊಟ್ಟರು. ಹೀಗಾಗಿ ಭಾರತದ ರನ್​ 3 ವಿಕೆಟ್​ 103 ತಲುಪಿತು.

ಇದನ್ನೂ ಓದಿ: Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

ಶಿವಂ ದುಬೆ 14 ಎಸೆತಕ್ಕೆ 13 ರನ್ ಬಾರಿಸಿ ಔಟಾದರೆ ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ 24 ಎಸೆತಕ್ಕೆ 2 ಫೋರ್ ಹಾಗೂ 4 ಸಿಕ್ಸರ್ ಸಮೇತ 4 ರನ್ ಬಾರಿಸಿದರು. ಜಡೇಜ ಕೊಡುಗೆ 4 ರನ್​.

ಬಾಂಗ್ಲಾ ಬ್ಯಾಟಿಂಗ್ ವೈಫಲ್ಯ

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಬಾಂಗ್ಲಾ ದೇಶದ ಆರಂಭಿಕರು ಲಗುಬಗನೆ ವಿಕೆಟ್​ ಕಳೆದುಕೊಂಡರು. ತಂಜಿದ್​ ಹಸನ್​ 17 ರನ್ ಬಾರಿಸಿದರೆ ಸೌಮ್ಯ ಸರ್ಕಾರ್​ ಶೂನ್ಯಕ್ಕೆ ಔಟಾದರು. ಲಿಟನ್​ ದಾಸ್ 7 ರನ್ ಬಾರಿಸಿದರೆ ನಜ್ಮುಲ್ ಹೊಸೈನ್ ಕೂಡ ಸೊನ್ನೆ ಸುತ್ತಿದರು. 39 ರನ್​ಗೆ 4 ವಿಕೆಟ್ ಕಳೆದುಕೊಂಡು ಬಾಂಗ್ಲಾ ಗೆಲುವಿನ ಆಸೆ ಕೈಬಿಟ್ಟಿತು. ಬಳಿಕ ಶಕಿಬ್ ಅಲ್ ಹಸನ್​ 28 ರನ್ ಹಾಗೂ ಮಹಮ್ಮದುಲ್ಲಾ 40 ರನ್ ಬಾರಿಸುವ ಮೂಲಕ ತಂಡದ ಮರ್ಯಾದೆ ಕಾಪಾಡಿದರು. ಭಾರತ ಪರ ಬೌಲಿಂಗ್​ನಲ್ಲಿ ಅರ್ಶ್​ದೀಪ್ ಸಿಂಗ್​ ಮತ್ತು ಶಿವಂ ದುಬೆ ತಲಾ ಎರಡು ವಿಕೆಟ್ ಕಬಳಿಸಿದರು.

Continue Reading

ಪ್ರಮುಖ ಸುದ್ದಿ

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Exit Poll 2024 : ಬಿಜೆಪಿಯ ಬಲವಾದ ಚುನಾವಣಾ ಕಾರ್ಯತಂತ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೂಲಕ ಎನ್​ಡಿಎಗೆ ಭರ್ಜರಿ ಗೆಲುವು ಸಿಗಲಿದೆ ಎಂದು ಸಮೀಕ್ಷೆಗಳು ಸೂಚಿಸಿವೆ. ಈ ಅಂದಾಜುಗಳು ನಿಜವಾಗಿದ್ದರೆ ಇದು 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅದರ ಹಿಂದಿನ ಸಾಧನೆಯನ್ನು ಮೀರಿಸಲಿದೆ.

VISTARANEWS.COM


on

Exit Poll
Koo

ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶಕ್ಕೆ (Lok Sabha Election) ಮುಂಚಿತವಾಗಿ ಪ್ರಕಟಗೊಂಡಿರುವ ಮತಗಟ್ಟೆ ಸಮೀಕ್ಷೆಯ ಪ್ರಕಾರ (Exit Poll 2024) ನರೇಂದ್ರ ಮೋದಿ ನಿರೀಕ್ಷಿಸಿದ ರೀತಿಯಂತೆಯೇ 400ಕ್ಕೂ ಅಧಿಕ ಸೀಟ್​​ಗಳನ್ನು ಗೆಲ್ಲಲಿದೆ. ಆಕ್ಸಿಸ್ ಮೈ ಇಂಡಿಯಾ ನಡೆಸಿರು ಸಮೀಕ್ಷೆಯಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಸಾಧಿಸಲಿದೆ. ಈ ಸಂಸ್ಥೆಯ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಒಟ್ಟು 543 ಸಂಸದೀಯ ಸ್ಥಾನಗಳಲ್ಲಿ ಎನ್ಡಿಎ 361 ರಿಂದ 401 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

  • ಎನ್​​ಡಿಎ – 361-401
  • ಭಾರತ – 131-166
  • ಇತರರು – 8-20

ಬಿಜೆಪಿಯ ಬಲವಾದ ಚುನಾವಣಾ ಕಾರ್ಯತಂತ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೂಲಕ ಎನ್​ಡಿಎಗೆ ಭರ್ಜರಿ ಗೆಲುವು ಸಿಗಲಿದೆ ಎಂದು ಸಮೀಕ್ಷೆಗಳು ಸೂಚಿಸಿವೆ. ಈ ಅಂದಾಜುಗಳು ನಿಜವಾಗಿದ್ದರೆ ಇದು 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅದರ ಹಿಂದಿನ ಸಾಧನೆಯನ್ನು ಮೀರಿಸಲಿದೆ.

ಏಳು ಹಂತಗಳ ಚುನಾವಣೆ ಶನಿವಾರ ಮುಕ್ತಾಯ

ಏಳನೇ ಹಂತದ ಮತದಾನದ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ಮೋದಿ ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಬಳಿ ತೆರಳಿ ಧ್ಯಾನ ಮಾಡಿದ್ದರು. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎಗೆ ಸುಲಭ ನಿರಾಯಾಸ ಗೆಲುವು ನೀಡುತ್ತದೆ ಎಂದು ಭವಿಷ್ಯ ನುಡಿದಿವೆ. ಆಡಳಿತಾರೂಢ ಪಕ್ಷವು ಬಹುಮತದ ಕೊರತೆ ಅನುಭವಿಸಬಹುದು ಎಂಬ ಇಂಡಿಯಾ ಬಣದ ಭವಿಷ್ಯವಾಣಿಗೆ ವ್ಯತಿರಿಕ್ತವಾಗಿ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪರ ವಾಲಿವೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ 353 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

ಜೂನ್ 4ರಂದು ಚುನಾವಣೋತ್ತರ ಸಮೀಕ್ಷೆಗಳು ನಿಜವೆಂದು ಸಾಬೀತಾದರೆ, ಇದು ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅತಿದೊಡ್ಡ ವಿಜಯವಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಜವಾಹರಲಾಲ್ ನೆಹರೂ ನಂತರ ನರೇಂದ್ರ ಮೋದಿ ಮೂರು ಬಾರಿ ದೇಶದ ಪ್ರಧಾನಿಯಾದ ಏಕೈಕ ವ್ಯಕ್ತಿಯಾಗಲಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಎರಡು ಬಾರಿ ಪ್ರಧಾನಿಯಾಗಿದ್ದರು.

ಧನ್ಯವಾದ ತಿಳಿಸಿದ ಮೋದಿ

ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡಿದ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಧನ್ಯವಾದ ಅರ್ಪಿಸಿದ್ದಾರೆ. ಮತದಾರರ ಬದ್ಧತೆ ಮತ್ತು ಸಮರ್ಪಣೆ ಭಾರತದ ಪ್ರಜಾಪ್ರಭುತ್ವದ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದು ಪಿಎಂ ಮೋದಿ ಹೇಳಿದ್ದಾರೆ. ಮತಗಟ್ಟೆ ಸಮೀಕ್ಷೆಗಳು(Exit Poll 2024 ) ಪ್ರಕಟಗೊಂಡು ಮೋದಿ ನೇತೃತ್ವದ ಎನ್​ಡಿಎಗೆ ಭರ್ಜರಿ ಜಯ ಸಿಗುತ್ತದೆ ಎಂದು ಗೊತ್ತಾದ ತಕ್ಷಣವೇ ಅವರು ಈ ಹೇಳಿಕೆ ನೀಡಿದ್ದಾರೆ. ಈ ವೇಳೆ ಅವರು ಪ್ರಜಾಪ್ರಭುತ್ವಕ್ಕೆ ಚೈತನ್ಯ ತಂಡ ದೇಶದ ಮಹಿಳೆಯರು ಮತ್ತು ಯುವಕರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.

ಭಾರತ ಮತ ಚಲಾಯಿಸಿದೆ! ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಅವರ ಸಕ್ರಿಯ ಭಾಗವಹಿಸುವಿಕೆ ನಮ್ಮ ಪ್ರಜಾಪ್ರಭುತ್ವದ ಬುನಾದಿ. ಅವರ ಬದ್ಧತೆ ಮತ್ತು ಸಮರ್ಪಣೆ ನಮ್ಮ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಮನೋಭಾವವು ಬೆಳೆಸಿದೆ ಎಂದು ಖಚಿತಪಡಿಸುತ್ತೇವೆ. ಭಾರತದ ನಾರಿ ಶಕ್ತಿ ಮತ್ತು ಯುವ ಶಕ್ತಿಯನ್ನು ನಾನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇವೆ. ಚುನಾವಣೆಯಲ್ಲಿ ಅವರ ಬಲವಾದ ಉಪಸ್ಥಿತಿಯು ಬಹಳ ಪ್ರೋತ್ಸಾಹದಾಯಕ” ಎಂದು ಅವರು ಎಕ್ಸ್​ನಲ್ಲಿ ಬರೆದಿದ್ದಾರೆ.

Continue Reading
Advertisement
Stray dogs attack in Shira 4 children one woman injured
ಪ್ರಮುಖ ಸುದ್ದಿ5 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ5 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ5 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ6 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ6 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Exit Poll 2024
ಪ್ರಮುಖ ಸುದ್ದಿ7 hours ago

Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Bangalore rain
ಪ್ರಮುಖ ಸುದ್ದಿ7 hours ago

Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು

Dinesh Karthik
ಪ್ರಮುಖ ಸುದ್ದಿ8 hours ago

Dinesh Karthik: ಜನ್ಮದಿನದಂದೇ ಕ್ರಿಕೆಟ್‌ ಬದುಕಿಗೆ ದಿನೇಶ್‌ ಕಾರ್ತಿಕ್‌ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್

Exit Poll
ಪ್ರಮುಖ ಸುದ್ದಿ8 hours ago

Exit Poll 2024 : ಭರ್ಜರಿ ಗೆಲುವಿನ ಮುನ್ಸೂಚನೆ ಸಿಕ್ಕಿದ ತಕ್ಷಣ ಮತದಾರರಿಗೆ ಧನ್ಯವಾದ ತಿಳಿಸಿದ ಮೋದಿ

Exit Poll 2024
ದೇಶ8 hours ago

Exit Poll 2024 : ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ; ಡಿಕೆಶಿ, ಎಂಬಿ ಪಾಟೀಲ್ ಸ್ಪಷ್ಟ ನುಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು12 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌