NEP Crisis | ನೂತನ ಶಿಕ್ಷಣ ನೀತಿಯಿಂದ ರಾಜ್ಯದ 40 ಸಾವಿರ ಅಂಗನವಾಡಿ ಶಿಕ್ಷಕಿಯರ ಕೆಲಸಕ್ಕೆ ಕುತ್ತು! - Vistara News

ಕರ್ನಾಟಕ

NEP Crisis | ನೂತನ ಶಿಕ್ಷಣ ನೀತಿಯಿಂದ ರಾಜ್ಯದ 40 ಸಾವಿರ ಅಂಗನವಾಡಿ ಶಿಕ್ಷಕಿಯರ ಕೆಲಸಕ್ಕೆ ಕುತ್ತು!

ಮುಂದಿನ ವರ್ಷದಿಂದ ನೂತನ ಶಿಕ್ಷಣ ನೀತಿ ಜಾರಿಗೆ ಬರುವುದರ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಇಲಾಖೆಯು ೪೦ ಸಾವಿರ ಶಿಕ್ಷಕಿಯರನ್ನು ಕೆಲಸದಿಂದ ಕೈಬಿಡಲು ಯೋಜನೆ ರೂಪಿಸಿದೆ. ಹಾಗಾಗಿ, ಸರ್ಕಾರದ ವಿರುದ್ಧ ಶಿಕ್ಷಕಿಯರು ಆಕ್ರೋಶ (NEP Crisis) ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Anganwadi
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ವಿಸ್ತಾರ ವಿಶೇಷ

ವೀರೇಶ್ ಹಿರೇಮಠ, ಬೆಂಗಳೂರು
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರಲು ಕೇಂದ್ರ ಸರ್ಕಾರವೇನೋ ನೂತನ ಶಿಕ್ಷಣ ನೀತಿ (NEP) ಜಾರಿಗೆ ತರುತ್ತಿದೆ. ಆದರೆ, ಇದೇ ಶಿಕ್ಷಣ ನೀತಿಯಿಂದ ರಾಜ್ಯದ ೪೦ ಸಾವಿರ ಅಂಗನವಾಡಿ ಶಿಕ್ಷಕಿಯರ ಉದ್ಯೋಗದ ಮೇಲೆ ಕತ್ತಿ ನೇತಾಡುತ್ತಿದೆ. ಮುಂದಿನ ವರ್ಷದಿಂದ ನೂತನ ಶಿಕ್ಷಣ ನೀತಿ ಜಾರಿಗೆ ಬರುವುದರ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಇಲಾಖೆಯು ೪೦ ಸಾವಿರ ಶಿಕ್ಷಕಿಯರನ್ನು ಕೆಲಸದಿಂದ ಕೈಬಿಡಲು ಯೋಜನೆ ರೂಪಿಸಿದೆ. ಹಾಗಾಗಿ, ಸರ್ಕಾರದ ವಿರುದ್ಧ ಶಿಕ್ಷಕಿಯರು ಆಕ್ರೋಶ (NEP Crisis) ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದಲ್ಲಿ 66,361 ಅಂಗನವಾಡಿಗಳಿವೆ. ಇವುಗಳಲ್ಲಿ 6,017 ಪದವಿ ಪಡೆದವರು, 16,303 ಪಿಯುಸಿ ಹಾಗೂ 40,786 ಎಸ್ಎಸ್ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ಶಿಕ್ಷಕಿಯರು ಮಕ್ಕಳಿಗೆ ಬೋಧಿಸುತ್ತಿದ್ದಾರೆ. ಆದರೆ, ನೂತನ ಶಿಕ್ಷಣ ನೀತಿ ಜಾರಿಯಾದರೆ, ನೀತಿ ಅನ್ವಯ ತರಬೇತಿ ಪಡೆದು ಬೋಧನೆ ಮಾಡಬೇಕು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಇರುವ 40,786 ಶಿಕ್ಷಕರಿಯರಿಗೆ ಇದು ಕಷ್ಟವಾಗುತ್ತದೆ. ಇವರೆಲ್ಲ 40-48 ವರ್ಷ ದಾಟಿದ ಶಿಕ್ಷಕಿಯರಾಗಿದ್ದಾರೆ. ಇವರು ಹೊಸ ನೀತಿಗೆ ಹೊಂದಿಕೊಳ್ಳುವುದು ಕಷ್ಟ ಎನ್ನುವ ಕಾರಣಕ್ಕೆ ಇವರನ್ನು ಕೈಬಿಟ್ಟು ಪರ್ಯಾಯ ವ್ಯವಸ್ಥೆ ಮಾಡುವ ಚಿಂತನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ.

ಶಿಕ್ಷಕಿಯರ ಆಕ್ರೋಶ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನೆಪದಲ್ಲಿ ಸರ್ಕಾರ ಸಾವಿರಾರು ಅಂಗನವಾಡಿ ಶಿಕ್ಷಕಿಯರ ಹುದ್ದೆಗೆ ಕತ್ತರಿ ಪ್ರಯೋಗಕ್ಕೆ ಚಿಂತೆನೆ ನಡೆಸುತ್ತಿರುವುದಕ್ಕೆ ಅಂಗನವಾಡಿ ಶಿಕ್ಷಕಿಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಲಾಖೆಯು ಏಕಾಏಕಿ ಈ ನಿರ್ಧಾರ ಕೈಗೊಳ್ಳುತ್ತಿರುವುದು ತಪ್ಪು. ನಾವು ಈಗಾಗಲೇ 5 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ. ಅವುಗಳನ್ನು ಬಗೆಹರಿಸಲು ಮುಂದಾಗುತ್ತಿಲ್ಲ. ಇದೀಗ ಎನ್‌ಇಪಿಯನ್ನು ಮುಂದಿಟ್ಕೊಂಡು ಶಿಕ್ಷಕಿಯರ ಕೆಲಸ ಕಿತ್ತುಕೊಳ್ಳುವ ಹುನ್ನಾರ ಮಾಡಲಾಗುತ್ತಿದೆ. ಈ ನಿರ್ಧಾರವನ್ನು ಇಲಾಖೆ ತಕ್ಷಣವೇ ಕೈಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಶಿಕ್ಷಕಿಯರು ಎಚ್ಚರಿಸಿದ್ದಾರೆ.

“5 ವರ್ಷದೊಳಗಿನ ಮಕ್ಕಳ ಶಿಕ್ಷಣ ಮತ್ತು ಆರೈಕೆಗೆ ಸರ್ಕಾರ ಎನ್‌ಇಪಿಯನ್ನು ಜಾರಿಗೊಳಿಸುತ್ತಿರುವುದು ಒಳ್ಳೆಯ ವಿಚಾರ. ಆದರೆ, ನೀತಿಯಿಂದಾಗಿ 40 ಸಾವಿರ ಶಿಕ್ಷಕರ ಉದ್ಯೋಗಕ್ಕೆ ಕತ್ತರಿ ಬೀಳಲಿದ್ದು, ಅವರ ಜೀವನ ಬೀದಿಗೆ ಬರುತ್ತದೆ. ಈ ಬಗ್ಗೆ ಸರ್ಕಾರ ತಜ್ಞರ ಜತೆ ಚರ್ಚಿಸಿ ಶಿಕ್ಷಕಿಯರ ಪರ ನಿರ್ಧಾರ ಕೈಗೊಳ್ಳಬೇಕು.”

-ಎಂ.ಜಯಮ್ಮ, ರಾಜ್ಯ ಅಂಗನವಾಡಿ ಕಾರ್ಯರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್

ಯೋಜನೆ ಜಾರಿಯ ಉದ್ದೇಶ

ದೇಶದ ಶಿಕ್ಷಣ ತಜ್ಞರ ಸಲಹೆಯಂತೆ ಬ್ರಿಟಿಷ್ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು 2014ರಲ್ಲಿ ನೂತನ ಶಿಕ್ಷಣ ನೀತಿಗೆ ಸಮಿತಿ ರಚಿಸಲಾಯಿತು. ನಮ್ಮ ರಾಜ್ಯದಲ್ಲಿ ಮದನ್ ಗೋಪಾಲ್ ಅವರ ಸಮಿತಿ ರಚಿಸಿ, 2020ರಲ್ಲಿ NEPಯನ್ನು ಜಾರಿಗೆ ತರಲಾಯಿತು. ಬಾಲ್ಯಪೂರ್ವ ಶಿಕ್ಷಣ ಮತ್ತು ಆರೈಕೆಗಾಗಿ ಅಂಗನವಾಡಿಗಳಲ್ಲೂ ಮುಂದಿನ ವರ್ಷದಿಂದ NEP ಜಾರಿಗೆ ತರಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. 3 ವರ್ಷದಲ್ಲೇ ಮಕ್ಕಳ ಪ್ರಾರಂಭಿಕ ಹಂತದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಲು ಯೋಜನೆ ರೂಪಿಸಲಾಗಿದೆ.

ಇದನ್ನೂ ಓದಿ | ಕ್ರಾಂತಿಕಾರಕ ಬದಲಾವಣೆಗಾಗಿಯೇ ನೂತನ ಶಿಕ್ಷಣ ನೀತಿ: ನೃಪತುಂಗ ವಿವಿ ಉದ್ಘಾಟಿಸಿದ ಅಮಿತ್‌ ಷಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಂದುವರಿಯಲಿದೆ ವಿಪರೀತ ಮಳೆ; ಕರಾವಳಿಗೆ ಆರೆಂಜ್‌, ಮಲೆನಾಡಿಗೆ ಯೆಲ್ಲೋ ಅಲರ್ಟ್‌

Rain News : ಭಾನುವಾರದಂದು ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್‌ ಹಾಗೂ ಯೆಲ್ಲೋ ಎಚ್ಚರಿಕೆಯನ್ನು (Karnataka Weather Forecast) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಮತ್ತೆ ಸಕ್ರಿಯವಾಗಿದೆ. ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Wayanad Landslide: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ರಾಜ್ಯ ಸರ್ಕಾರದ 100 ಮನೆಗಳ ನಿರ್ಮಾಣದ ನೆರವಿನ ಜತೆಗೆ ಕರುನಾಡಿನ ನೂರಾರು ಸಂಘ-ಸಂಸ್ಥೆಗಳು ಕೂಡ ಹಲವು ರೀತಿಯಲ್ಲಿ ಕೇರಳ ಜನರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಮೆರೆದಿವೆ.

VISTARANEWS.COM


on

Wayanad Landslide
Koo

ಬೆಂಗಳೂರು: ಕೇರಳದ ವಯನಾಡಿನಲ್ಲಿ ಭೂಕುಸಿತ (Wayanad Landslide) ಸಂಭವಿಸುತ್ತಲೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕರ್ನಾಟಕ (Karnataka) ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಭರವಸೆ ನೀಡಿದ್ದಾರೆ. ಇದರೊಂದಿಗೆ ರಾಜ್ಯದ ಕೈಗಾರಿಕೋದ್ಯಮಿಗಳು, ಖಾಸಗಿ ಸಂಘ ಸಂಸ್ಥೆಗಳೂ ಕೂಡ ವಿವಿಧ ರೂಪದಲ್ಲಿ ನೆರವಾಗಲು ಮುಂದಾಗಿವೆ.

ಮೈಸೂರು ಜಿಲ್ಲಾಡಳಿತವು ವೈದ್ಯರ ತಂಡದೊಂದಿಗೆ 15 ಫ್ರೀಜರ್‌ ಬಾಕ್ಸ್‌ಗಳು, ನಾಲ್ಕು ಟ್ರಾಕ್ಟರ್‌ ಮೌಂಟೆಡ್‌ ಕಂಪ್ರೆಸರ್‌ ಮತ್ತು ಜಾಕ್‌ ಹ್ಯಾಮರ್‌, 500 ಬಾಡಿ ಬ್ಯಾಗ್‌ಗಳು, ತುರ್ತು ಸಂದರ್ಭಗಳಲ್ಲಿ ಬಳಸುವ 15 ದೀಪಗಳ ವ್ಯವಸ್ಥೆ, 40 ಸ್ಟ್ರೆಚರ್‌ಗಳು, 288 ಗಮ್‌ಬೂಟ್‌ಗಳು, 5 ಸ್ಟೀಲ್‌ ಕಟ್ಟರ್‌ಗಳು, 10 ಗ್ಯಾಸ್‌ ಕಟ್ಟರ್‌ಗಳು, 2040 ನ್ಯಾಪ್‌ಕಿನ್‌ಗಳು, 1000 ಗ್ಲೋವ್‌ಗಳು, 2050 ಮಾಸ್ಕ್‌ಗಳು, 1000 ಬಾಟಲ್‌ ಸ್ಯಾನಿಟೈಸರ್‌ಗಳು ಹಾಗೂ ಆರೋಗ್ಯ ಇಲಾಖೆಯ ಔಷಧಗಳನ್ನು ಒದಗಿಸಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (KIAL) ವತಿಯಿಂದ 250 ಎಂ.ಎಲ್‌. ನ 1008 ನೀರಿನ ಬಾಟಲ್‌ಗಳು, 100 ರೇನ್‌ಕೋಟ್‌ಗಳು, 500 ಬಾಟಲ್‌ ಸ್ಯಾನಿಟೈಸರ್‌ಗಳು, 15 ಟೆಂಟ್‌ಗಳು, 1000 ಪಿಪಿಇ ಕಿಟ್‌ಗಳು, 5000 ಗ್ಲೋವ್‌ಗಳು, 3೦೦೦ 3- ಪ್ಲೈ ಮಾಸ್ಕ್‌ಗಳು ಹಾಗೂ 8000 N-95 ಮಾಸ್ಕ್‌ಗಳನ್ನು ಕಳುಹಿಸಲಾಗಿದೆ.

ವೋಲ್ವೋ ಸಂಸ್ಥೆಯಿಂದ 2000 ಪ್ಯಾಕ್‌ ಸ್ಯಾನಿಟರಿ ಪ್ಯಾಡ್‌ಗಳು, 100 PPE ಕಿಟ್‌ಗಳು ಹಾಗೂ ಎರಡು ಟ್ರಕ್‌ಗಳನ್ನು ಒದಗಿಸಲಾಗಿದೆ. ಎಲೆಕ್ಟ್ರಾನಿಕ್‌ ಸಿಟಿ ಕೈಗಾರಿಕಾ ಸಂಘ(ELCIA) ದ ಸದಸ್ಯ ಸಂಸ್ಥೆಗಳು ಮತ್ತು ಪ್ರಣವ್‌ ಫೌಂಡೇಷನ್‌ ವತಿಯಿಂದ 40 ಸ್ಟ್ರೆಚರ್‌ಗಳು, 250 ಬಾಡಿ ಬ್ಯಾಗ್‌ಗಳು, 1000 N-95 ಮಾಸ್ಕ್‌ಗಳು, 500 ಬಾಟಲ್‌ ಸ್ಯಾನಿಟೈಸರ್‌ಗಳು, 1000 ಗ್ಲೋವ್‌ಗಳನ್ನು ಒದಗಿಸಲಾಗಿದೆ.

ಹಲವು ಸಂಸ್ಥೆಗಳಿಂದಲೂ ನೆರವು

ಬಯೋಕಾನ್‌ ಮತ್ತು ಭಾಗೀದಾರ ಸಂಸ್ಥೆಗಳಾದ ನಾರಾಯಣ ಹೆಲ್ತ್‌ ಮತ್ತು ಸಿಂಜೀನ್‌ ಸಂಸ್ಥೆಗಳಿಂದ 2,200 ಮಾಸ್ಕ್‌ಗಳು, 100 ಗುಣಮಟ್ಟದ ರೇನ್‌ ಕೋಟ್‌ಗಳು, 400 ಲೀಟರ್‌ ಸ್ಯಾನಿಟೈಸರ್‌, 5 ಕಾರ್ಟನ್‌ಗಳಷ್ಟು ಬೆಡ್‌ಶೀಟ್‌ ಮತ್ತು ಬಟ್ಟೆ ಹಾಗೂ 250 ಪಿಪಿಇ ಕಿಟ್‌ಗಳನ್ನು ಕಳುಹಿಸಲಾಗಿದೆ.

ಆಶಯ ಟ್ರಸ್ಟ್ ಹಾಗೂ ಉತ್ತಿಷ್ಠ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ 1,000 ಬ್ಲಾಂಕೆಟ್‌ ಮತ್ತು ಟಾರ್ಪಾಲಿನ್‌ಗಳು ಹಾಗೂ ಎರಡು ಆಂಬುಲೆನ್ಸ್‌ಗಳನ್ನು ಒದಗಿಸಲಾಗಿದೆ. ಅವರು 25 ಲಕ್ಷ ರೂ. ಆರ್ಥಿಕ ನೆರವು ಒದಗಿಸಿದ್ದಾರೆ. ವಯನಾಡಿಗೆ ಪರಿಹಾರ ಸಾಮಗ್ರಿಗಳು, ವೈದ್ಯಕೀಯ ಸಲಕರಣೆಗಳು ಮತ್ತಿತರ ನೆರವು ಒದಗಿಸಿ ಮಾನವೀಯತೆ ಮೆರೆದ ಎಲ್ಲ ಸಂಸ್ಥೆಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Continue Reading

ಕರ್ನಾಟಕ

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Best Teacher Award: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರು ಆಗಸ್ಟ್ 3ರಿಂದ‌ 16ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ. ಕಾವೇರಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

VISTARANEWS.COM


on

Best Teacher Award
Koo

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ (Best Teacher Award) ಶಿಕ್ಷಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಶಿಕ್ಷಕರು ಆಗಸ್ಟ್ 3ರಿಂದ‌ 16ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಶಿಕ್ಷಕರಿಗೆ ಸೆ.5ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ. ಕಾವೇರಿ ಅವರು ಸುತ್ತೋಲೆ ಹೊರಡಿಸಿದ್ದಾರೆ. ತರಗತಿ ಕೋಣೆಯಲ್ಲಿ ವಿಷಯ ಪಾಂಡಿತ್ಯದ ಜತೆಗೆ ಪೂರಕ ಪರಿಕರಗಳೊಂದಿಗೆ ಬೋಧನಾ ಚಟುವಟಿಕೆಗಳನ್ನು ಸಾದರಪಡಿಸಿ ಮಕ್ಕಳಲ್ಲಿ ಶಾಶ್ವತ ಮತ್ತು ಸಂತಸದಾಯಕ ಕಲಿಕೆಯನ್ನುಂಟು ಮಾಡುವ ಬಹುಮುಖ ವ್ಯಕ್ತಿತ್ವದ ಶಿಕ್ಷಕರನ್ನು, ಉಪನ್ಯಾಸಕರನ್ನು, ಮುಖ್ಯ ಶಿಕ್ಷಕರನ್ನು ಹಾಗೂ ಪ್ರಾಂಶುಪಾಲರನ್ನು ಗುರ್ತಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ವರ್ಷ ಸೆಪ್ಟೆಂಬರ್-05 ರಂದು ಕ್ರಮವಾಗಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡುವುದರ ಮೂಲಕ ಗೌರವಿಸುತ್ತಿವೆ.

ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅಹರ್ನಿಶಿ ತೊಡಗಿಸಿಕೊಳ್ಳುವ ಹಲವು ಅತ್ಯುತ್ತಮ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಲೆ ಮರೆಯ ಕಾಯಿಯಂತೆ ಇದ್ದು, ಅಂತಹ ತೆರೆಮರೆಯ ಸಾಧಕರನ್ನು ಸ್ವಯಂಪ್ರೇರಿತವಾಗಿ ಗುರುತಿಸಿ ಸದರಿ ಪ್ರಶಸ್ತಿಗಳನ್ನು ಪ್ರದಾನ ಮಾಡಬೇಕೆನ್ನುವುದು ಸರ್ಕಾರದ ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಶಯವಾಗಿರುತ್ತದೆ. ಇದರಿಂದಾಗಿ ರಾಜ್ಯದ ಶಿಕ್ಷಕ ವೃಂದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮತ್ತಷ್ಟು ಹುರುಪಿನಿಂದ ತೊಡಗಿಸಿಕೊಳ್ಳಲು ಪ್ರೇರೇಪಣೆಯನ್ನು ಮತ್ತು ಉತ್ತೇಜನವನ್ನು ಒದಗಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಸಕಾಲಿಕ ಕ್ರಮಗಳನ್ನು ವಹಿಸಬೇಕಾಗಿರುವುದು ಸಂಬಂಧಿಸಿದ ಇಲಾಖಾಧಿಕಾರಿಗಳ ಆದ್ಯ ಕರ್ತವ್ಯ ಹಾಗೂ ಪ್ರಮುಖ ಹೊಣೆಗಾರಿಕೆಯಾಗಿರುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯದ ಮಾದರಿಯಲ್ಲೇ ರಾಜ್ಯದಲ್ಲಿಯೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರನ್ನು, ವಿಶೇಷ ಶಿಕ್ಷಕರನ್ನು ಹಾಗೂ ಮುಖ್ಯ ಶಿಕ್ಷಕರನ್ನು ಆಯ್ಕೆ ಮಾಡಲು ಆನ್-ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಿ, ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್-ಲೈನ್ ಮೂಲಕವೇ ನಿರ್ವಹಿಸಲು ಮುಂದಾಗಿದೆ. ಅದರಂತೆ, 2024-25 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಅರ್ಹ ಶಿಕ್ಷಕರು. ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಆನ್-ಲೈನ್ ಪೋರ್ಟಲ್ http://www.schooleducation.kar.nic.in ಮೂಲಕ ಅರ್ಜಿಯನ್ನು ಸಲ್ಲಿಸದಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ| Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

Continue Reading

ಕರ್ನಾಟಕ

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

BJP-JDS Padayatra: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತೆತ್ತಿದರೆ ತಮ್ಮ ಜೀವನ ತೆರೆದ ಪುಸ್ತಕ, ತಾವು ಶುದ್ಧ ಹಸ್ತದ ರಾಜಕಾರಣ ಎನ್ನುತ್ತಾರೆ ಆದರೆ, 2013-18 ರವರೆಗೆ ರಿಡು ಮಾಡಿದ್ಯಾರು? 80 ಲಕ್ಷ ರೂ. ವಾಚ್ ಕಟ್ಟಿ ವಿವಾದವಾಗುತ್ತಲೇ ವಾಪಸ್ ಕೊಟ್ಟಿದ್ಯಾರು ಎಂದು ಪ್ರಶ್ನಿಸಿದ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿಯೇ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Union Minister Pralhad Joshi latest statement at Mysore Chalo Padayatra
Koo

ಬೆಂಗಳೂರು: ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಹ ಶೇರ್ ಹೋಲ್ಡರ್ಸ್ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (BJP-JDS Padayatra) ನೇರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಇಂದು ಎನ್‌ಡಿಎ ಮೈತ್ರಿಕೂಟದ ನೇತೃತ್ವದಲ್ಲಿ ನಡೆಸಿದ ಮೈಸೂರು ಚಲೋ ಪಾದಯಾತ್ರೆ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಸಚಿವರು, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಈ ಹಗರಣಗಳಲ್ಲಿ ಪಾಲುದಾರರು. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಧೈರ್ಯ ಅವರಿಗಿಲ್ಲವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Pralhad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್‌‌ನಿಂದ ರಾಜಕೀಯ; ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್ ಹೈಕಮಾಂಡ್‌ನ ಈ ಇಬ್ಬರೂ ನಾಯಕರು ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಪಡೆದು ಹೊರಗಿದ್ದಾರೆ. ಈಗ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣದಲ್ಲಿ ಜೈಲಿಗೆ ಹೋಗುವವರನ್ನು ತಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಎಂ ಮನೆಗೆ ಹೋಗೋ ಕಾಲ ಬಂದಿದೆ

ವಾಲ್ಮೀಕಿ ನಿಗಮ ಮತ್ತು ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಹಾಗಾಗಿ ಇದರ ವಿರುದ್ಧ ಕಾನೂನು ಮತ್ತು ರಾಜಕೀಯವಾಗಿ ಹೋರಾಟ ಮಾಡಿ ಈ ಭ್ರಷ್ಟಾಚಾರ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡುತ್ತೇವೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದರು.

ರಿಡು- 80 ಲಕ್ಷ ವಾಚ್ ರೂವಾರಿ ಯಾರು?

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತೆತ್ತಿದರೆ ತಮ್ಮ ಜೀವನ ತೆರೆದ ಪುಸ್ತಕ, ತಾವು ಶುದ್ಧ ಹಸ್ತದ ರಾಜಕಾರಣ ಎನ್ನುತ್ತಾರೆ ಆದರೆ, 2013-18 ರವರೆಗೆ ರಿಡು ಮಾಡಿದ್ಯಾರು? 80 ಲಕ್ಷ ರು. ವಾಚ್ ಕಟ್ಟಿ ವಿವಾದವಾಗುತ್ತಲೇ ವಾಪಸ್ ಕೊಟ್ಟಿದ್ಯಾರು? ಎಂದು ಪ್ರಶ್ನಿಸಿದ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿಯೇ ಎಂದು ಆರೋಪಿಸಿದರು.

ಇದನ್ನೂ ಓದಿ: National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

ಭ್ರಷ್ಟ ಕಾಂಗ್ರೆಸ್ ಕಿತ್ತೊಗೆಯಿರಿ

ದೇಶದಲ್ಲೇ ಆಗಲಿ, ರಾಜ್ಯದಲ್ಲೇ ಆಗಲಿ ಕಾಂಗ್ರೆಸ್ ಆಡಳಿತ ಇದ್ದಾಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟಾಚಾರ ಕಾಂಗ್ರೆಸ್ಸಿಗರಿಗೆ ರಕ್ತಗತವಾಗಿ ಬಂದಿದ್ದು, ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕಿತ್ತೆಸೆಯಿರಿ ಎಂದು ಸಚಿವರು ತಿಳಿಸಿದರು.

Continue Reading
Advertisement
friendshipday fashion
ಫ್ಯಾಷನ್2 hours ago

Friendshipday Fashion: ಮಾನ್ಸೂನ್‌‌‌ನಲ್ಲಿ ಟ್ರೆಂಡಿಯಾದ ಫ್ರೆಂಡ್‌‌‌ಶಿಪ್‌ ಡೇ ಫ್ಯಾಷನ್‌ ಥೀಮ್‌

Kerala Tour
ಪ್ರವಾಸ2 hours ago

Kerala Tour: ಕೇರಳದಲ್ಲಿ ನೋಡಲೇಬೇಕಾದ 10 ಅದ್ಭುತ ಸ್ಥಳಗಳಿವು!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

karnataka weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವಿಪರೀತ ಮಳೆ; ಕರಾವಳಿಗೆ ಆರೆಂಜ್‌, ಮಲೆನಾಡಿಗೆ ಯೆಲ್ಲೋ ಅಲರ್ಟ್‌

Shravan 2024
Latest2 hours ago

Shravan 2024: ನಾಳೆಯಿಂದ ಶ್ರಾವಣ ಮಾಸ ಆರಂಭ; ಶುಭ ಕಾರ್ಯಗಳನ್ನು ಮಾಡಲು ಈ ತಿಂಗಳು ಸೂಕ್ತ ಏಕೆ?

Dina Bhavishya
ಭವಿಷ್ಯ3 hours ago

Dina Bhavishya : ಕೌಟುಂಬಿಕ ಕಲಹಗಳಿಗೆ ಧ್ವನಿ ಆಗ್ಬೇಡಿ; ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು

Uttar Pradesh
ದೇಶ7 hours ago

ಪತ್ನಿ ಇದ್ದರೂ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ವ್ಯಕ್ತಿ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ಮಾಡಿದ್ದೇನು? Video ಇದೆ

Wasim Jaffer
ಕ್ರೀಡೆ8 hours ago

Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

Ayodhya
ದೇಶ8 hours ago

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Wayanad Landslide
ಕರ್ನಾಟಕ9 hours ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ19 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌