ವಿಸ್ತಾರ TOP 10 NEWS | ಚೀನಾ ಕಂಪನಿಗಳಿಗೆ ED ಆಘಾತದಿಂದ ಲಿಂಬಾವಳಿ ಆವಾಜ್‌ವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ಚೀನಾ ಕಂಪನಿಗಳಿಗೆ ED ಆಘಾತದಿಂದ ಲಿಂಬಾವಳಿ ಆವಾಜ್‌ವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Vistara TOP 10 03092022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದ ಡಿಜಿಟಲ್‌ ಎಕಾನಮಿ ಶರವೇಗದ ಜತೆಯಲ್ಲೇ ವಂಚನೆ ಪ್ರಕರಣಗಳೂ ಹೆಚ್ಚುತ್ತಿದ್ದು, ಪೇಟಿಎಂ ಸೇರಿ ಚೀನಾ ಮೂಲದ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ರಾಜಕಾಲುವೆ ಒತ್ತುವರಿ ಸಂಬಂಧ ಮಹಿಳೆಯೊಬ್ಬರ ಕುರಿತು ಬಿಜೆಪಿ ಹಿರಿಯ ಶಾಸಕ ಅರವಿಂದ ಲಿಂಬಾವಳಿ ಆಡಿದ ಮಾತು ವಿವಾದಕ್ಕೀಡಾಗಿದೆ, ಬೆಂಗಳೂರು-ಮೈಸೂರು ದಶಪಥ ಕಾಮಗಾರಿ ಇದೀಗ ರಾಜಕೀಯ ಹಗ್ಗಜಗ್ಗಾಟದ ವೇದಿಕೆಯಾಗಿದೆ ಎನ್ನುವುದು ಸೇರಿ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. ಪೇಟಿಎಂ, ರೇಜರ್‌ ಪೇ ಸೇರಿ ಚೈನೀಸ್‌ ಕಂಪನಿಗಳ ಮೇಲೆ ED ದಾಳಿ: ₹17 ಕೋಟಿ ವಶ
ಆನ್‌ಲೈನ್‌ ಮೂಲಕ ಸಾಲ ನೀಡುವ ಹಾಗೂ ಜನರನ್ನು ವಂಚಿಸುವ ಚೈನೀಸ್‌ ಮೊಬೈಲ್‌ ಆ್ಯಪ್‌ ಕಂಪನಿಗಳ ಬೆಂಗಳೂರು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ED) ಗುರುವಾರ ದಾಳಿ ನಡೆಸಿದೆ. ಚೀನಾದ ವ್ಯಕ್ತಿಗಳಿಂದ ನಿರ್ವಹಿಸಲ್ಪಡುತ್ತಿರುವ ಕಂಪನಿಗಳಿಗೆ ಸಂಬಂಧಿಸಿ ಬೆಂಗಳೂರಿನ ಆರು ಸ್ಥಳಗಳಲ್ಲಿ ದಾಳಿ ನಡೆದಿದ್ದು, ಪ್ರಸಿದ್ಧ ಆನ್‌ಲೈನ್‌ ವ್ಯವಹಾರಗಳ ಸಂಸ್ಥೆ ಪೇಟಿಎಂ, ರೇಜರ್‌ಪೇ ಸಹ ಸೇರಿವೆ. ಈ ಕುರಿತು ಜಾರಿ ನಿರ್ದೇಶನಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಅಕ್ರಮ ಹಣ ಸಂಗ್ರಹಣೆ ನಿಷೇಧ ಕಾಯ್ದೆ(PMLA) ಅಡಿಯಲ್ಲಿ ಚೈನೀಸ್‌ ಲೋನ್‌ ಆ್ಯಪ್‌ ವಿಚಾರವಾಗಿ ಬೆಂಗಳೂರಿನ ಆರು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ಇಡಿ ತಿಳಿಸಿದೆ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. ಬೆಂಗಳೂರು| ಅಹವಾಲು ಸಲ್ಲಿಸಲು ಬಂದ ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ ಆವಾಜ್, ಆಕೆಯ ವಿರುದ್ಧ ಎಫ್‌ಐಆರ್‌
ರಾಜಕಾಲುವೆ ಒತ್ತುವರಿ ಸಂಬಂಧ ಗುರುವಾರ ಮಹಿಳೆಯೊಬ್ಬರ ಜತೆಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಬಿಜೆಪಿ ಹಿರಿಯ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕೇಳಿಬಂದಿದೆ. ಮಹಿಳೆಯೊಬ್ಬರು ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಮನವಿ ನೀಡಲು ಗುರುವಾರ ಮದ್ಯಾಹ್ನ ಬಂದಿದ್ದರು. ಆಗ ಶಾಸಕರು ಆ ಮಹಿಳೆಗೆ ಆವಾಜ್‌ ಹಾಕಿದ ದೃಶ್ಯ ಕಂಡುಬಂದಿತ್ತು. ಮಹಿಳೆ ನೀಡಲು ಬಂದ ಮನವಿ ಪತ್ರವನ್ನು ಕಸಿದುಕೊಂಡು ಲಿಂಬಾವಳಿ ಕೂಗಾಡಿದ್ದರು. ʼನಿಂಗೆ ಮಾನ ಮರ್ಯಾದೆ ಇದೆಯೇ? ನಾಚಿಕೆ ಆಗಲ್ವಾ ನಿಂಗೆ?ʼ ಎಂದು ಆವಾಜ್‌ ಹಾಕಿ ನಂತರ ಮಹಿಳೆಯನ್ನು ಸ್ಟೇಷನ್‌ಗೆ ಕರೆದುಕೊಂಡು ಹೋಗಲು ಪೊಲೀಸರಿಗೆ ಹೇಳಿದ್ದರು. ಬಳಿಕ ಮಾಧ್ಯಮಗಳ ಜತೆಗೆ ಮಾತನಾಡುವಾಗ ಲಿಂಬಾವಳಿ ಆಡಿದ ಮಾತು ವಿವಾದವನ್ನು ಮತ್ತೂ ಹೆಚ್ಚಿಸಿದೆ.
ಹೆಚ್ಚಿನ ಓದಿಗಾಗಿ: ಒಬ್ಬರೇ ಅಲ್ಲ ಲಿಂಬಾವಳಿ, ದೇಶಾದ್ಯಂತ ಇದೆ ಇಂಥ ರಾಜಕಾರಣಿಗಳ ಹಾವಳಿ!

savistara logo

3. ಸವಿಸ್ತಾರ ಅಂಕಣ | ಗಡಿಗಳ ಎಲ್ಲೆ ಮೀರಿ ಮನ್ನಣೆ ಗಳಿಸಿದ್ದ ಸಾವರ್ಕರ್! ಅವರ ಪರ ಹೋರಾಡಿದ್ದ ಮಾರ್ಕ್ಸ್ ಮೊಮ್ಮಗ!
ಸ್ವಾತಂತ್ರ್ಯ ಹೋರಾಟಗಾರರನ್ನು ಅವರವರ ಬದ್ಧತೆ, ದೇಶಭಕ್ತಿ, ಪರಿಶ್ರಮ ಹಾಗೂ ತ್ಯಾಗಗಳಿಂದ ಗೌರವಿಸುವ ಬದಲಿಗೆ ಸಣ್ಣಪುಟ್ಟ ಲೋಪಗಳನ್ನು ಹಿಡಿದು ಹೀಯಾಳಿಸುವ ಪದ್ಧತಿ ಆರಂಭವಾಗಿದೆ. ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರರ ದೇಶಭಕ್ತಿಯನ್ನು ಪ್ರಶ್ನಿಸುವ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ಸ್ವಾತಂತ್ರ್ಯ ಹೋರಾಟಕ್ಕೆ ನೇರವಾಗಿ ಹಾಗೂ ಪರೋಕ್ಷವಾಗಿ ಸಾವರ್ಕರರ ಕೊಡುಗೆಯನ್ನು ತಿಳಿಸುವ ಸಂಗತಿಯ ಎರಡನೇ ಭಾಗ “ವಿಸ್ತಾರ ನ್ಯೂಸ್‌ʼ ಪ್ರಧಾನ ಸಂಪಾದಕ ಹಾಗೂ ಸಿಇಒ ಹರಿಪ್ರಕಾಶ್‌ ಕೋಣೆಮನೆ ಅವರ ಅಂಕಣ ʼಸವಿಸ್ತಾರʼದಲ್ಲಿ ಇಂದು ಮೂಡಿಬಂದಿದೆ. ಅಂಕಣ ಓದಲು ಇಲ್ಲಿ ಕ್ಲಿಕ್‌ ಮಾಡಿ.

4. ದಶಪಥದಲ್ಲಿ ₹800 ಕೋಟಿ ಭ್ರಷ್ಟಾಚಾರ: ಸಂಸದ ಪ್ರತಾಪ್‌ ಸಿಂಹ ವಿರುದ್ಧ ಜೆಡಿಎಸ್‌ ಶಾಸಕ ಆರೋಪ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣವೇ ನಡೆದಿದ್ದು, ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಗಡಿ ಜೆಡಿಎಸ್‍ ಶಾಸಕ ಎ. ಮಂಜುನಾಥ್ ಆಗ್ರಹಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಸಂಸದ ಪ್ರತಾಪ್ ಸಿಂಹ ಬಂದು ಫೋಸ್ ಕೊಡುತ್ತಿದ್ದರು. ರಸ್ತೆಯನ್ನು ನಾವೇ ಮಾಡಿರೋದು ಎಂದು ತಮ್ಮನ್ನು ತಾವೇ ಹೊಗಳಿಕೊಂಡರು. ನಾನು ಪ್ರತಾಪ್ ಸಿಂಹ ಅವರನ್ನು ಕೇಳಲು ಬಯಸುತ್ತೇನೆ, ನೀವು ಯಾರಿಗೆ ಬ್ರಾಂಡ್ ಅಂಬಾಸಿಡರ್ ಹೇಳಿ. ಹೆದ್ದಾರಿ ಮಾಡುವ ಸಂಸ್ಥೆಯವರಿಗೆ ರಾಯಭಾರಿಯೇ? ಎಂದು ಪ್ರಶ್ನಿಸಿದ್ದಾರೆ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ:
ನಿತಿನ್‌ ಗಡ್ಕರಿ ಅಂಗಳಕ್ಕೆ ದಶಪಥ ಫೈಟ್‌: ತಾವೂ ಭೇಟಿಯಾಗುವುದಾಗಿ ತಿಳಿಸಿದ ಸಚಿವ ಕೆ. ಗೋಪಾಲಯ್ಯ

5. ಮೂಲ ಸೌಕರ್ಯ ಸರಿಪಡಿಸದೆ ಇದ್ದರೆ ಬೆಂಗಳೂರಿನಿಂದ ವಲಸೆ: ಐಟಿ ಕಂಪನಿಗಳಿಂದ ಸರ್ಕಾರಕ್ಕೆ ಎಚ್ಚರಿಕೆ
ರಾಜಧಾನಿಯ ಮೂಲ ಸೌಕರ್ಯಗಳಿಗೆ ಸಂಬಂಧಿಸಿ ಹಿರಿಯ ಉದ್ಯಮಿ ಮೋಹನ್‌ ದಾಸ್‌ ಪೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೇ ದೂರು ನೀಡಿದ ಬೆನ್ನಿಗೇ ಇದೀಗ ಸರಕಾರಕ್ಕೆ ಇನ್ನೊಂದು ಶಾಕ್‌ ಎದುರಾಗಿದೆ. ಸಂಚಾರ ಸಮಸ್ಯೆ, ಮಳೆ ಹಾನಿಗಳಿಂದ ನೂರಾರು ತೊಂದರೆ ಅನುಭವಿಸುತ್ತಿರುವ ಬಗ್ಗೆ ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿನ ಕಂಪನಿಗಳ ಸಂಘ (ಒರ್ಕಾ-ORRCA) ಮುಖ್ಯಮಂತ್ರಿಗಳಿಗೆ ಸುದೀರ್ಘ ಪತ್ರ ಬರೆದಿದೆ. ಇಲ್ಲಿನ ಅವ್ಯವಸ್ಥೆಗಳನ್ನು ಆದಷ್ಟು ಬೇಗ ಪರಿಹರಿಸುವಂತೆ ಮನವಿ ಮಾಡಿರುವ ಧ್ವನಿಯಲ್ಲಿಯೇ, ಇಲ್ಲಿನ ಸಮಸ್ಯೆಗಳಿಂದ ನೊಂದು ಇಲ್ಲಿನ ಐಟಿ ಮತ್ತು ಬ್ಯಾಂಕಿಂಗ್‌ ಕಂಪನಿಗಳು ಹೊರ ರಾಜ್ಯಕ್ಕೆ ವಲಸೆ ಹೋಗುವ ಬಗ್ಗೆಯೂ ಯೋಚಿಸುತ್ತಿವೆ ಎಂದು ತಣ್ಣಗೆ ಎಚ್ಚರಿಕೆ ನೀಡಿದೆ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. ಹರ್ಷ ಹತ್ಯೆಗೆ ನಡೆದಿತ್ತು 15 ದಿನಗಳ ಸಂಚು: 750 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ NIA
ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಹತ್ಯೆಗೆ 15 ದಿನದಿಂದಲೂ ಸಂಚು ನಡೆಸಲಾಗಿತ್ತು ಎನ್ನುವುದೂ ಸೇರಿ ಅನೇಕ ಅಂಶಗಳನ್ನು 750ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ರೋಷನ್ ಭದ್ರಾವತಿಯಲ್ಲಿ ಮಾರಕಾಸ್ತ್ರಗಳನ್ನು ಖರೀದಿ ಮಾಡಿದ್ದ. ಬಂಧಿತ ಆರೋಪಿಗಳಲ್ಲಿ ಮೂವರನ್ನು ಹೊರತುಪಡಿಸಿ ಉಳಿದವರೆಲ್ಲ ಹಿಂದೆ ಹಲವಾರು ಕೇಸ್‌ಗಳಲ್ಲಿ ಭಾಗಿಯಾಗಿದ್ದ ಆರೋಪಿಗಳೇ ಎಂದು ಚಾರ್ಜ್ ಶೀಟ್​ನಲ್ಲಿ ಉಲ್ಲೇಖವಾಗಿದೆ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. ಮುರುಘಾಶ್ರೀ ಪ್ರಕರಣ| ಶ್ರೀಗಳಿಗೆ ಸೆ.5ರವರೆಗೆ ಜಾಮೀನಿಲ್ಲ, ಉಳಿದ 3 ಆರೋಪಿಗಳ ಬಂಧನಕ್ಕೆ ತಲಾಶ್‌
ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಇಲ್ಲಿನ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾಶರಣರ ಪರವಾಗಿ ಕೋರ್ಟ್‌ನಲ್ಲಿ ಜಾಮೀನು ಆರ್ಜಿ ಸಲ್ಲಿಸಲಾಗಿದೆ. ಶ್ರೀಗಳ ಪರವಾಗಿ ವಕೀಲ ಉಮೇಶ್‌ ಅವರು ಚಿತ್ರದುರ್ಗ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸುವ ಸಾಧ್ಯತೆ ಇಲ್ಲ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ. ಇದರ ಜತೆಗೆ, ಮುರುಘಾ ಶ್ರೀಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯದ ನಾನಾ ಕಡೆ ಪ್ರತಿಭಟನೆಗಳು ನಡೆದಿವೆ.

8. Supreme Court | ಕೋರ್ಟ್‌ ಕಲಾಪಗಳಿಗೆ ಸಿಜೆಐ ಲಲಿತ್‌ ಶರವೇಗ, 4 ದಿನದಲ್ಲಿ 1,800 ಕೇಸ್‌ ವಿಲೇವಾರಿ!
ದೇಶದಲ್ಲಿ ನ್ಯಾಯದಾನ ನಿಧಾನ ಎಂಬ ಮಾತಿದೆ. ತಾಲೂಕು, ಜಿಲ್ಲೆ, ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌‌ (Supreme Court) ಮೆಟ್ಟಿಲೇರುವ ಪ್ರಕರಣಗಳ ವಿಲೇವಾರಿಗೆ ವರ್ಷಗಟ್ಟಲೆ ಬೇಕಾಗುತ್ತದೆ. ಆದರೆ, ಕೆಲವು ದಿನಗಳ ಹಿಂದಷ್ಟೇ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಿರುವ ಉದಯ್‌ ಉಮೇಶ್‌ ಲಲಿತ್‌ ಅವರು ಕೋರ್ಟ್‌ ಕಲಾಪಗಳಿಗೆ ಶರವೇಗ ನೀಡಿದ್ದಾರೆ. ನ್ಯಾಯಮೂರ್ತಿ ಯು.ಯು.ಲಲಿತ್‌ ಅವರು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡ ಮೊದಲ ನಾಲ್ಕು ದಿನಗಳಲ್ಲಿ (4 Working Days) 1,800 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಈ ಕುರಿತು ವಕೀಲರ ಜತೆ ನಡೆದ ಕಾರ್ಯಕ್ರಮವೊಂದರಲ್ಲಿ ಸಿಜೆಐ ಲಲಿತ್‌ ಅವರೇ ಮಾಹಿತಿ ನೀಡಿದ್ದಾರೆ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Ind vs Pak | ಅಗ್ರ ಕ್ರಮಾಂಕದ ಬ್ಯಾಟಿಂಗ್‌, ಡೆತ್ ಓವರ್‌ ಬೌಲಿಂಗ್‌ ಸುಧಾರಣೆಗೆ ಭಾರತ ತಂಡದ ಒತ್ತು
ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಸೆಪ್ಟೆಂಬರ್‌ ೪ರಂದು ನಡೆಯಲಿರುವ ‘ಸಂಡೆ ಫೈಟ್‌’ಗೆ ವೇದಿಕೆ ಸಜ್ಜುಗೊಂಡಿದ್ದು, ಭಾರತ ತಂಡದ ಮ್ಯಾನೇಜ್ಮೆಂಟ್‌ ಅಗತ್ಯ ಸುಧಾರಣೆಗಳ ಕಡೆಗೆ ಚಿತ್ತ ನೆಟ್ಟಿದೆ. ಪ್ರಮುಖವಾಗಿ ಆರಂಭಿಕ ಬ್ಯಾಟಿಂಗ್‌ ವೈಫಲ್ಯ ಹಾಗೂ ಡೆತ್ ಓವರ್ ಬೌಲಿಂಗ್‌ ಬಿಗುಗೊಳಿಸುವ ಕಡೆಗೆ ಗಮನ ಹರಿಸುತ್ತಿದೆ. ಗುಂಪು ಹಂತದ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕ್‌ ಎದುರು ಗೆಲುವು ಸಾಧಿಸಿರುವ ಹೊರತಾಗಿಯೂ ಕೆಲವೊಂದು ವೈಫಲ್ಯಗಳು ರಾರಾಜಿಸಿದ್ದವು. ಅವುಗಳನ್ನು ಸರಿಪಡಿಸಿಕೊಂಡು ಕಣಕ್ಕಿಳಿಯುವ ನಿಟ್ಟಿನಲ್ಲಿ ಕೋಚ್‌ ರಾಹುಲ್‌ ದ್ರಾವಿಡ್‌ ರೂಪುರೇಷೆಗಳನ್ನು ರೂಪಿಸಲಿದ್ದಾರೆ. ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Rishi Sunak | ಬ್ರಿಟನ್ ಪಿಎಂ ರೇಸಿನಲ್ಲಿ ರಿಷಿ ಸುನಕ್ ಹಿಂದೆ ಬಿದ್ದಿದ್ದೇಕೆ? ಇಲ್ಲಿವೆ 7 ಕಾರಣ
ಜಗತ್ತಿನ ಅತ್ಯಂತ ಹಳೆಯ ಪ್ರಜಾಪ್ರಭುತ್ವ ರಾಷ್ಟ್ರ ಬ್ರಿಟನ್‌ಗೆ ಹೊಸ ಸಾರಥಿ ಯಾರೆಂಬುದು ಸೋಮವಾರ ಸಾಯಂಕಾಲದ ಹೊತ್ತಿಗೆ ಗೊತ್ತಾಗಲಿದೆ. ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಾಯಕರನ್ನು ಆಯ್ಕೆ ಮಾಡುವ ಕನ್ಸರ್ವೇಟಿವ್ ಪಕ್ಷದ ಪ್ರಕ್ರಿಯೆಗಳು ಅಂತಿಮ ಘಟ್ಟಕ್ಕೆ ಬಂದಿವೆ. ಇದರ ಮಧ್ಯೆಯೇ, ಎಲ್ಲರಿಗೂ ಕಾಡುತ್ತಿರುವ ಪ್ರಶ್ನೆ ಏನೆಂದರೆ – ಮೊದಲಿನಿಂದಲೂ ಪಿಎಂ ರೇಸಿನಲ್ಲಿ ಮುಂದಿದ್ದ ರಿಷಿ ಸುನಕ್ ಇದ್ದಕ್ಕಿದ್ದಂತೆ ಹಿಂದೆ ಬಿದ್ದಿದ್ದೇಕೆ? ಈ ಕುರಿತು ಸಂಪೂರ್ಣ ವರದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕೋಡಿ

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Sallekhana: ಸಮಾಧಿಸೇನ ಮುನಿಗಳಿಗೆ 79 ವರ್ಷ ವಯಸ್ಸಾಗಿತ್ತು. ಮೇ 17ರಿಂದ ಅವರು ಆಹಾರ ತ್ಯಾಗ ಮಾಡಿದ್ದರು. ಆಶ್ರಮದ ಆವರಣದಲ್ಲಿಯೇ ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ ತಾಲೂಕು, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯ ಭಕ್ತರು ಆಶ್ರಮಕ್ಕೆ ಬಂದು ಮುನಿಗಳ ಅಂತಿಮ ದರ್ಶನ ಪಡೆದರು.

VISTARANEWS.COM


on

jain monk samadhi sena chikkodi sallekhana
Koo

ಚಿಕ್ಕೋಡಿ: ಜೈನಮುನಿಗಳಾದ (Jain Muni) ಬೆಳಗಾವಿ ಜಿಲ್ಲೆ ಚಿಕ್ಕೋಡಿ (Chikkodi news) ತಾಲೂಕಿನ ಕೋಥಳಿಯ ಸಮಾಧಿಸೇನ ಮುನಿಗಳು (Samadhisena Muni) ಜೈನ ಸಂಪ್ರದಾಯದಂತೆ (Jain tradition) ಯಮ ಸಲ್ಲೇಖನ ವ್ರತ (Sallekhana Vrata) ಸ್ವೀಕರಿಸಿ ಕೀರ್ತಿಶೇಷರಾಗಿದ್ದಾರೆ. ಇವರು ಕೋಥಳಿಯ ದೇಶಭೂಷಣ ಮನಿಗಳ ಜೈನ ಆಶ್ರಮದಲ್ಲಿ ಕಳೆದ ನಾಲ್ಕು ದಿನಗಳಿಂದ ಸಲ್ಲೇಖನ ವ್ರತ ನಿರತರಾಗಿದ್ದರು. ಸೋಮವಾರ ರಾತ್ರಿ ಅವರು ಜಿನೈಕ್ಯರಾಗಿದ್ದಾರೆ.

ಸಮಾಧಿಸೇನ ಮುನಿಗಳಿಗೆ 79 ವರ್ಷ ವಯಸ್ಸಾಗಿತ್ತು. ಮೇ 17ರಿಂದ ಅವರು ಆಹಾರ ತ್ಯಾಗ ಮಾಡಿದ್ದರು. ಆಶ್ರಮದ ಆವರಣದಲ್ಲಿಯೇ ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ ತಾಲೂಕು, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯ ಭಕ್ತರು ಆಶ್ರಮಕ್ಕೆ ಬಂದು ಮುನಿಗಳ ಅಂತಿಮ ದರ್ಶನ ಪಡೆದರು.

ಗದಗ ಜಿಲ್ಲೆಯ ಗಜೇಂದ್ರ ಗಢದವರಾದ ಸಮಾಧಿಸೇನ ಮುನಿಗಳು ಗುಲಾಬಭೂಷಣ ಮುನಿಯವರ ಶಿಷ್ಯರಾಗಿದ್ದರು. ಸಂಸಾರಿಯಾಗಿದ್ದ ಅವರು 2004ರಲ್ಲಿ ಮನೆ ತೊರೆದು ತ್ಯಾಗಿಯಾಗಿ ದೀಕ್ಷೆ ಪಡೆದು ಜೈನ ಧರ್ಮದ ಪ್ರಸಾರ ಕಾರ್ಯದಲ್ಲಿ ತೊಡಗಿದ್ದರು. 2014ರಲ್ಲಿ ಮಹಾರಾಷ್ಟ್ರದ ಚಿಪರಿ ಆಶ್ರಮದ ಧರ್ಮಸೇನಾ ಮುನಿಗಳಿಂದ ಕ್ಷುಲ್ಲಕ ದೀಕ್ಷೆ ಪಡೆದಿದ್ದರು. 2021ರಲ್ಲಿ ಗುಲಾಬಭೂಷಣ ಮುನಿಗಳಿಂದ ಮುನಿ ದೀಕ್ಷೆ ಪಡೆದಿದ್ದ ರು. ಕೋಥಳಿಯ ಆಶ್ರಮದಲ್ಲಿ ದೇಶಭೂಷಣ ಮುನಿಗಳು ಸೇರಿ ಇದುವರೆಗೆ 40ಕ್ಕೂ ಅಧಿಕ ಜೈನಮುನಿಗಳು ಯಮ ಸಲ್ಲೇಖನ ವ್ರತ ಕೈಗೊಂಡು ದೇಹ ತ್ಯಾಗ ಮಾಡಿದ್ದಾರೆ.

ಸಲ್ಲೇಖನ ಎಂದರೇನು?

ಸಲ್ಲೇಖನ ಜೈನ ಧರ್ಮೀಯರ ಒಂದು ಕಠಿಣ ವ್ರತ. ಜೈನ ಧರ್ಮದ ಅನುಸಾರವಾಗಿ ಮೋಕ್ಷ ಅಥವಾ ಸದ್ಗತಿಗಾಗಿ ಧರ್ಮಪೂರ್ವಕವಾಗಿ ಆಹಾರಾದಿಗಳನ್ನು ತ್ಯಜಿಸಿ ಶರೀರ ತ್ಯಾಗ ಮಾಡುವ ವಿಧಿಗೆ ಸಲ್ಲೇಖನ ವ್ರತ ಎನ್ನಲಾಗುತ್ತದೆ. ಇದಕ್ಕೆ ಸಮಾಧಿ ಮರಣ ಎಂಬ ಹೆಸರೂ ಇದೆ. ಸಲ್ಲೇಖನ ವ್ರತವು ಮುನಿಗೆ ಶ್ರೇಷ್ಠವಾದುದು ಹಾಗೂ ಗೃಹಸ್ಥರಿಗೆ ಸಂಪೂರ್ಣ ಐಚ್ಛಿಕ ಕ್ರಿಯೆಯಾಗಿದೆ.

ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದ ಬೆಂಗಳೂರಿನ ಉದ್ಯಮಿಯ ಪತ್ನಿ, 11 ವರ್ಷದ ಮಗ!

ಬೆಂಗಳೂರು ಮೂಲದ ಉದ್ಯಮಿ ಮನೀಶ್‌ ಎಂಬುವವರ ಪತ್ನಿ ಸ್ವೀಟಿ (30) ಹಾಗೂ 11 ವರ್ಷದ ಮಗ ಹೃಧನ್ ಇತ್ತೀಚೆಗೆ ಜೈನ ಸನ್ಯಾಸ ದೀಕ್ಷೆ ಪಡೆದಿದ್ದಾರೆ. ತಾಯಿ-ಮಗನ ದೀಕ್ಷಾ ಸಮಾರಂಭವು ಗುಜರಾತ್‌ನ ಸೂರತ್‌ನಲ್ಲಿ ಜನವರಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆದಿದೆ. ಇವರಿಬ್ಬರೂ ಈಗ ಸೂರತ್‌ನಲ್ಲಿ ನೆಲೆಸಿದ್ದಾರೆ.

ಜೈನ ದೀಕ್ಷೆಯ ನಂತರ ತಾಯಿ ಸ್ವೀಟಿಗೆ ಭಾವಶುದ್ಧಿ ರೇಖಾ ಶ್ರೀ ಜಿ ಹಾಗೂ ಮಗ ಹೃದನ್‌ಗೆ ಹಿತಶಯ್ ರತನವಿಜಯ್ ಜಿ. ಎಂದು ಮರು ನಾಮಕರಣ ಮಾಡಲಾಗಿದೆ. ಇದೀಗ ತಾಯಿ-ಮಗ ದೀಕ್ಷೆ ಸ್ವೀಕಾರ ಮಾಡಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

ಸನ್ಯಾಸ ದೀಕ್ಷೆ ಸ್ವೀಕರಿಸುವಾಗ ಮಗನ ತಲೆಯನ್ನು ತಾಯಿ ನೇವರಿಸುತ್ತಾ ಭಾವುಕರಾಗಿದ್ದಾರೆ. ಪರಸ್ಪರ ಹಣೆಗೆ ಕುಂಕುಮ ಇಟ್ಟುಕೊಂಡು, ಅಕ್ಷತೆ ಹಾಕಿಕೊಂಡಿದ್ದು, ನಂತರ ಇಬ್ಬರೂ ಶ್ವೇತ ವಸ್ತ್ರಗಳಲ್ಲಿ ಕಾಣಿಸಿಕೊಂಡಿರುವುದು ವಿಡಿಯೊದಲ್ಲಿದೆ.

ಕುಟುಂಬದ ಸಂಬಂಧಿ ವಿವೇಕ್‌ ಪ್ರತಿಕ್ರಿಯಿಸಿ, ಭಾವಶುದ್ಧಿ ರೇಖಾ ಶ್ರೀ ಜಿ ಅವರು ಗರ್ಭಿಣಿಯಾಗಿದ್ದಾಗಲೇ ಸನ್ಯಾಸಿಯಾಗಲು ಬಯಸಿದ್ದರು. ಅದೇ ಸಮಯದಲ್ಲಿ, ತನ್ನ ಮಗು ಕೂಡ ತನ್ನನ್ನು ಅನುಸರಿಸಿ ಜೈನ ಸನ್ಯಾಸಿಯಾಗಬೇಕೆಂದು ನಿರ್ಧರಿಸಿದ್ದರು. ನಂತರ ಮಗ ಕೂಡ ತಾಯಿ ಹಾದಿಯಲ್ಲೇ ನಡೆಯುವುದಾಗಿ ಹೇಳಿದ್ದ. ಭಾವಶುದ್ಧಿ ರೇಖಾ ಶ್ರೀ ಜಿ ಅವರ ಸಂಕಲ್ಪ ಕೇಳಿದ ನಂತರ ಅವರ ಪತಿ ಮನೀಶ್ ಕೂಡ ಬೆಂಬಲಿಸಿದರು. ಅವರು ದೀಕ್ಷೆ ಪಡೆದಿರುವುದು ಮನೀಶ್ ಮತ್ತು ಕುಟುಂಬದ ಇತರರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Akshay Kumar: ಜೈನ ಸನ್ಯಾಸಿಯ 180 ದಿನಗಳ ಉಪವಾಸ ಬ್ರೇಕ್‌ ಮಾಡಿದ ಅಕ್ಷಯ್ ಕುಮಾರ್!

ಈ ಹಿಂದೆ, ಗುಜರಾತ್‌ನ ಶ್ರೀಮಂತ ಜೈನ ದಂಪತಿ ಸುಮಾರು 200 ಕೋಟಿ ರೂ. ಆಸ್ತಿ ತ್ಯಜಿಸಿ ಸನ್ಯಾಸ ದೀಕ್ಷೆ ಪಡೆದಿದ್ದರು. ಭಾವೇಶ್ ಭಂಡಾರಿ ಮತ್ತು ಪತ್ನಿ ಫೆಬ್ರವರಿಯಲ್ಲಿ ಸನ್ಯಾಸ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಬ್ಬ ಮಗ ಮತ್ತು ಮಗಳಿದ್ದು, ಅವರು ಕೂಡ 2022ರಲ್ಲಿಯೇ ದೀಕ್ಷೆ ತೆಗೆದುಕೊಂಡಿದ್ದರು.

ಇದನ್ನೂ ಓದಿ: Srinidhi Shetty: ಕೋಲ ಸೇವೆ ಸಲ್ಲಿಸಿದ ಕೆಜಿಎಫ್‌ ಬೆಡಗಿ; ಶ್ರೀನಿಧಿ ಶೆಟ್ಟಿಗೆ ದೈವ ಅಭಯ ನೀಡಿದ್ದೇನು?

Continue Reading

ಕ್ರೈಂ

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Soldier death: ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ.

VISTARANEWS.COM


on

cisf soldier death raichur
Koo

ರಾಯಚೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂದೂಕು ಆಕಸ್ಮಿಕವಾಗಿ (Gun misfire) ಸಿಡಿದು ರಾಯಚೂರು (Raichur news) ಮೂಲದ ಯೋಧರೊಬ್ಬರು (Soldier death) ಸಾವಿಗೀಡಾಗಿದ್ದಾರೆ. ಮಾನ್ವಿ ತಾಲೂಕಿನ ಆರ್.ಜಿ ಕ್ಯಾಂಪ್‌ನ ಯೋಧ ರವಿಕಿರಣ್ (37) ಮೃತಪಟ್ಟವರು. ಚೆನ್ನೈ ಏರ್‌ಪೋರ್ಟ್ ಸಮೀಪದ ಕಲ್ಪಾಕ್ಕಂ ಬಳಿ ಈ ದುರ್ಘಟನೆ ನಡೆದಿದೆ.

ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ. ಇಂಡಿಯನ್ ಸ್ಮಾಲ್ ಆರ್ಮ್ಸ್ ಸಿಸ್ಟಮ್ ರೈಫಲ್‌ನ ಬುಲೆಟ್ ರವಿಕಿರಣ್ ಕುತ್ತಿಗೆಯ ಭಾಗಕ್ಕೆ ತಗುಲಿದೆ.

ಚೆನ್ನೈನಲ್ಲಿ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಾಗಿದೆ. ಇಂದು ಆರ್.ಜಿ ಕ್ಯಾಂಪ್‌ಗೆ ಯೋಧ ರವಿಕಿರಣ್‌ ಪಾರ್ಥಿವ ಶರೀರ ಬರಲಿದೆ.

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (missing case) ಘಟನೆ ದಾವಣೆಗೆರೆಯಲ್ಲಿ ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

Continue Reading

ಕ್ರೈಂ

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Missing case: ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ.

VISTARANEWS.COM


on

missing case davanagere
Koo

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (family missing Case) ಘಟನೆ ದಾವಣೆಗೆರೆಯಲ್ಲಿ (Davanagere crime news) ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

ಬೆಳಗಾವಿ: ರೈತರೊಬ್ಬರು ಮಾಡಿದ ಸಾಲ ಕಟ್ಟಲಿಲ್ಲ (farmer loan) ಎಂದು ಸಾಲ ನೀಡಿದ ಮಹಿಳೆ ಆ ರೈತನ ಪತ್ನಿ ಹಾಗೂ ಪುತ್ರನಿಗೆ ಅನ್ನ ನೀರು ಕೊಡದೆ ಗೃಹಬಂಧನದಲ್ಲಿಟ್ಟ, ಇದರಿಂದ ನೊಂದ ರೈತ ಆತ್ಮಹತ್ಯೆ (farmer suicide, farmer self harming) ಮಾಡಿಕೊಂಡ ಮನ ಕಲಕುವ ಘಟನೆ ಬೆಳಗಾವಿ (belagavi news) ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.

ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದೆ. ಭೀಕರ ಬರಕ್ಕೆ ಕೈಕೊಟ್ಟ ಬೆಳೆಗಳಿಂದಾಗಿ ಉಪಜೀವನಕ್ಕೆ ರೈತ ಸಾಲದ ಮೊರೆ ಹೋಗಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನದ ಶಿಕ್ಷೆಯನ್ನು ಸಾಲ ನೀಡಿದ ಮಹಿಳೆ ವಿಧಿಸಿದ್ದಳು. ಇದರಿಂದ ಮನನೊಂದ ರೈತ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಹೆಸರಿನ ವಿಕೃತ ಮಹಿಳೆಯಿಂದ ಈ ಕೃತ್ಯ ನಡೆದಿದೆ. ರಾಜು ಖೋತಗಿ ತಮ್ಮ ಜೀವನ ‌ನಿರ್ವಹಣೆಗೆ ಸಿದ್ದವ್ವ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ರೂ. ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ತುಂಬುತ್ತಿದ್ದರು. ಎರಡು ದಿನಗಳ ಹಿಂದೆ ಏಕಾಏಕಿ ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ಸಿದ್ದವ್ವ ತಾಕೀತು ಮಾಡಿದ್ದಾಳೆ. ರಾಜು ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದ್ದರು.

ಇದಕ್ಕೆ ಒಪ್ಪದೇ, ಸಾಲ ಮರಳಿಸುವವರೆಗೂ ಪುತ್ರ ಬಸವರಾಜ ಖೋತಗಿಯನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗುವಂತೆ ಸಿದ್ದವ್ವ ತಾಕೀತು ಮಾಡಿದ್ದಳು. ಎರಡು ದಿನವಾದರೂ ಪುತ್ರನನ್ನು ಬಿಡದಾಗ ಸಿದ್ದವ್ವಳ ಮನೆಗೆ ಕೇಳಲು ರಾಜು-ದುರ್ಗವ್ವ ಹೋಗಿದ್ದರು. ಈ ವೇಳೆ ಬಸವರಾಜ್‌ನನ್ನು ಬಿಟ್ಟು ರಾಜು ಖೋತಗಿ, ಪತ್ನಿ ದುರ್ಗವ್ವರನ್ನು ಮನೆಯಲ್ಲಿ ಕೂರಿಸಿ ಶಿಕ್ಷೆ ವಿಧಿಸಿದ್ದಾಳೆ. ಮೂವರನ್ನೂ ಹನಿ ನೀರು, ತುತ್ತು ಅನ್ನ ನೀಡದೇ 2 ದಿನ ಗೃಹಬಂಧನದಲ್ಲಿಟ್ಟಿದ್ದಾಳೆ.

ಇದರಿಂದ ಮನನೊಂದು ಮನೆಗೆ ಬಂದ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೂರು ನೀಡಲು ಹೋದರೆ, ಸಿದ್ದವ್ವಳ ಅನ್ಯಾಯದ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳದೇ ಸತಾಯಿಸಿದ್ದಾರೆ. ಬೆಳಗ್ಗೆಯಿಂದ ಠಾಣೆಯಲ್ಲಿ ಕೂರಿಸಿಕೊಂಡು ರಾತ್ರಿ ವೇಳೆ ದುರ್ಬಲ ಸೆಕ್ಷನ್‌ನಡಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಯಮಕನಮರಡಿ ಠಾಣೆ ಪೊಲೀಸರ ವಿರುದ್ಧ ಪತಿ ಕಳೆದುಕೊಂಡ ದುರ್ಗವ್ವ, ಪೋಷಕರು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

ಇದನ್ನೂ ಓದಿ: Self Harming: ಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Continue Reading

ಪ್ರಮುಖ ಸುದ್ದಿ

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Corona Virus: ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

VISTARANEWS.COM


on

corona virus wave in singapore
Koo

ಬೆಂಗಳೂರು: ಸಿಂಗಾಪುರದಲ್ಲಿ (Singapore) ಹೊಸ ಕೋವಿಡ್‌- 19 (Covid 19 wave) ಅಲೆ ಪತ್ತೆಯಾಗಿದೆ. ಒಂದೇ ವಾರದಲ್ಲಿ ಕೊರೊನಾ ವೈರಸ್‌ (Corona Virus) ಕೇಸುಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮತ್ತೆ ಮಾಸ್ಕ್‌ (Mask) ಧರಿಸಲು ಸಲಹೆ ನೀಡಲಾಗಿದೆ. ರಾಜ್ಯದಲ್ಲೂ ಆರೋಗ್ಯ ಇಲಾಖೆ (Health department) ಅಲರ್ಟ್‌ ಆಗಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದೆ.

ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

ಸಿಂಗಾಪುರದಿಂದ ಬೆಂಗಳೂರು ಹಾಗೂ ಮುಂಬಯಿಗೆ ಆಗಮಿಸುವ ವಿಮಾನಯಾನಿಗಳ ಸಂಖ್ಯೆ ಹೆಚ್ಚು ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಆಯ್ದ ಯಾನಿಗಳ ಆರೋಗ್ಯ ತಪಾಸಣೆ, ಮಾಸ್ಕ್‌ ಧಾರಣೆ ಸೇರಿದಂತೆ ಹಲವು ಕ್ರಮಗಳ ಬಗೆಗೆ ಚರ್ಚಿಸಲಾಗುತ್ತಿದೆ.

ಸಿಂಗಾಪುರದಲ್ಲಿ ಏನಾಗಿದೆ?

ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್, ಸಾರ್ವಜನಿಕ ತಾಣಗಳಲ್ಲಿ ಮುಖವಾಡಗಳನ್ನು ಧರಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ ನಿರ್ಬಂಧಗಳ ಕುರಿತು ಮಾತನಾಡಿದ ಸಚಿವ ಓಂಗ್, ಸದ್ಯಕ್ಕೆ ಯಾವುದೇ ರೀತಿಯ ಸಾಮಾಜಿಕ ನಿರ್ಬಂಧಗಳ ಯೋಚನೆಯಿಲ್ಲ ಎಂದಿದ್ದಾರೆ. ಏಕೆಂದರೆ ಸಿಂಗಾಪುರದಲ್ಲಿ ಕೋವಿಡ್ -19 ಅನ್ನು ಸ್ಥಳೀಯ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ.

ಕೋವಿಡ್‌ನ ಹೊಸ ಅಲೆಯ ಪಥವನ್ನು ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ಹೇಳಿದೆ. ಸಚಿವಾಲಯದ ಪ್ರಕಾರ, ಕೋವಿಡ್ -19 ಪ್ರಕರಣಗಳ ಅಂದಾಜು ಸಂಖ್ಯೆಯು ಹಿಂದಿನ ವಾರದಲ್ಲಿದ್ದ 13,700ರಿಂದ 25,900ಕ್ಕೆ ದ್ವಿಗುಣಗೊಂಡಿದೆ. ಅದೇ ಅವಧಿಯಲ್ಲಿ ಸರಾಸರಿ ದೈನಂದಿನ ಕೋವಿಡ್ -19 ಆಸ್ಪತ್ರೆಗೆ ದಾಖಲು ಕೇಸ್‌ಗಳು 181ರಿಂದ ಸರಿಸುಮಾರು 250ಕ್ಕೆ ಏರಿದೆ ಎಂದು ಸಚಿವಾಲಯ ವರದಿ ಮಾಡಿದೆ.

ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಸಂರಕ್ಷಿಸಲು, ಸಾರ್ವಜನಿಕ ಆಸ್ಪತ್ರೆಗಳಿಗೆ ತುರ್ತು-ಅಲ್ಲದ ಶಸ್ತ್ರಚಿಕಿತ್ಸೆಗಳನ್ನು ಕಡಿಮೆ ಮಾಡಲು ಮತ್ತು ಸೂಕ್ತವಾದ ರೋಗಿಗಳನ್ನು ಆರೈಕೆ ಸೌಲಭ್ಯಗಳಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. “ನಾವು ಅಲೆಯ ಆರಂಭಿಕ ಭಾಗದಲ್ಲಿದ್ದೇವೆ. ಪ್ರಮಾಣ ಸ್ಥಿರವಾಗಿ ಏರುತ್ತಿದೆ” ಎಂದು ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಹೇಳಿದ್ದಾರೆ.

ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ನವದೆಹಲಿ: ಕೊರೋನಾ ವೈರಸ್‌(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಪಡೆದಿರುವ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

BHU ಅಧ್ಯಯನ ವರದಿಯಲ್ಲಿ ಬಹಿರಂಗ

ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading
Advertisement
jain monk samadhi sena chikkodi sallekhana
ಚಿಕ್ಕೋಡಿ6 mins ago

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Viral Video
ವೈರಲ್ ನ್ಯೂಸ್13 mins ago

Viral Video: ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌; ವಿಡಿಯೋ ವೈರಲ್‌

Prashant Kishor
Lok Sabha Election 202419 mins ago

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Cannes 2024 Sonam Kapoor dubs this outfit the best at Cannes this year
ಬಾಲಿವುಡ್38 mins ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ56 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್1 hour ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್1 hour ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ1 hour ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ2 hours ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Star Kids with Sanskrit Names From Yami Gautam to Priyanka Chopra
ಬಾಲಿವುಡ್2 hours ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌