Rain News | ರಾಮನಗರದಲ್ಲಿ ಮಳೆ ಅಬ್ಬರ: ಅರ್ಕಾವತಿ ನದಿ ರಭಸಕ್ಕೆ ಕೊಚ್ಚಿಹೋದ ಹರಿಸಂದ್ರ ಸೇತುವೆ - Vistara News

ಮಳೆ

Rain News | ರಾಮನಗರದಲ್ಲಿ ಮಳೆ ಅಬ್ಬರ: ಅರ್ಕಾವತಿ ನದಿ ರಭಸಕ್ಕೆ ಕೊಚ್ಚಿಹೋದ ಹರಿಸಂದ್ರ ಸೇತುವೆ

ರಾಮನಗರದಲ್ಲಿ ಮಳೆ (Rain News ) ಅವಾಂತರ ಹೆಚ್ಚಾಗಿದ್ದು , ಅರ್ಕಾವತಿ ನದಿಯ ರಭಸಕ್ಕೆ ಹರಿಸಂದ್ರ ಸೇತುವೆ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Rain News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಜಿಲ್ಲೆಯಲ್ಲಿ ಮಳೆಯ (Rain News) ಅವಾಂತರ ಹೆಚ್ಚಾಗಿದ್ದು, ಅರ್ಕಾವತಿ ನದಿಯ ರಭಸಕ್ಕೆ ಹರಿಸಂದ್ರ ಸೇತುವೆ ಗುರುವಾರ ಕೊಚ್ಚಿ ಹೋಗಿದೆ. ಇದರಿಂದಾಗಿ ರಾಮನಗರ ತಾಲೂಕಿನ ಸಂಗಬಸಪ್ಪನದೊಡ್ಡಿ-ಮಾದಾಪುರ ಹಾಗೂ ಹರಿಸಂದ್ರ ರಸ್ತೆ ಸಂಪರ್ಕ ಕಡಿತಗೊಂಡಿದೆ.

ದಶಪಥ ಹೆದ್ದಾರಿ ಮೈಸೂರು-ಬೆಂಗಳೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಜನರು ಸುಮಾರು 10ರಿಂದ 17 ಕಿ.ಮೀ ಸುತ್ತಿ ಬಳಸಿ ಶಾಲೆ, ಕೆಲಸಕ್ಕೆ ಹಾಗೂ ಹೆದ್ದಾರಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುಗ್ಗನಹಳ್ಳಿ ಸೇತುವೆ ಸಹ ಕುಸಿದಿತ್ತು ಎನ್ನಲಾಗಿದೆ. ಸುಗ್ಗನಹಳ್ಳಿಯಿಂದ ಕೇವಲ ಮೂರ್ನಾಲ್ಕು ಕಿ.ಮೀ ದೂರಲ್ಲಿ ಮತ್ತೊಂದು ಸೇತುವೆ ಕುಸಿದಿದೆ.

ಮಂಚನಬೆಲೆ ಜಲಾಶಯದಿಂದ ಅತಿ ಹೆಚ್ಚು ನೀರು ಹೊರಬಿಟ್ಟಿರುವ ಪರಿಣಾಮ ಅರ್ಕಾವತಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದಾಗಿ ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ.

ಇದನ್ನೂ ಓದಿ | Rain News| ಮಳೆಯಿಂದ ಸಾಂಕ್ರಾಮಿಕ ರೋಗಗಳ ಭೀತಿ, ಮುನ್ನೆಚ್ಚರಿಕೆ ವಹಿಸಲು ಆಸ್ಪತ್ರೆಗಳಿಗೆ ಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದು, ಯೆಲ್ಲೋ ಹಾಗೂ ಆರೆಂಜ್‌ ಆಲರ್ಟ್‌ ನೀಡಲಾಗಿದೆ. ಗಾಳಿ ವೇಗವು ಪ್ರತಿ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Coastal Weather: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22 ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆಯಿದೆ.

VISTARANEWS.COM


on

Karnataka weather Forecast
Koo

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ಗುಡುಗು ಸಹಿತ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ (Coastal Weather) ನಿರೀಕ್ಷೆಯಿದೆ.

ಹಲವೆಡೆ ಉತ್ತಮ ಮಳೆ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ಬೆಳಗ್ಗೆ ಮತ್ತು ಸಂಜೆ ಉತ್ತಮ ಮಳೆ ಸುರಿದಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣದಿಂದ ಕೂಡಿತ್ತು. ಮಂಗಳೂರಿನಲ್ಲಿ ಭಾನುವಾರ 32.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ಕಡಿಮೆ ಇತ್ತು. 24.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಉಷ್ಣಾಂಶ ಕಡಿಮೆ ಇತ್ತು.

ಉಡುಪಿಯಲ್ಲಿ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು, ಮಿಂಚು ಸಹಿತ ಭಾನುವಾರ ಬೆಳಗಿನಜಾವದವರೆಗೂ ನಿರಂತರ ಮಳೆ ಸುರಿದಿದೆ. ಇನ್ನು ಉಡುಪಿ, ಮಣಿಪಾಲ, ಮಲ್ಪೆ, ಬ್ರಹ್ಮಾವರ, ಕೋಟ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಕಾಪು, ಶಿರ್ವ, ಪಡುಬಿದ್ರಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಹಲವೆಡೆ ಗಾಳಿ-ಮಳೆಗೆ ಮನೆಗಳಿಗೆ ಹಾನಿ ಸಂಭವಿಸಿದೆ. ವಿದ್ಯುತ್‌ ಕಂಬ, ತಂತಿಗಳಿಗೆ ಹಾನಿ ಸಂಭವಿಸಿದೆ.

ಕೊಡಗಿನಲ್ಲಿ ಉತ್ತಮ ಮಳೆ

ಕೊಡಗಿನ ವಿವಿಧೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೇ 23ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

Heavy Rain: ಶಿರಾ ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, ನಗರದ ನಾನಾ ಕಡೆ ಮನೆ, ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹೊಸ ಬಸ್‌ ನಿಲ್ದಾಣದ ರಸ್ತೆ, ಬಾಲಾಜಿ ನಗರ ವೃತ್ತ ಸೇರಿದಂತೆ ವಿವಿಧ ಕಡೆ ತಗ್ಗು ಪ್ರದೇಶಗಳಿಗೆ ಹಾಗೂ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿ ಹಾನಿ ಸಂಭವಿಸಿದೆ. ಸ್ಥಳೀಯ 31ನೇ ವಾರ್ಡ್‌ ವ್ಯಾಪ್ತಿಯ ಶಿವಾಜಿನಗರ, ಜಾಜಿಕಟ್ಟೆ ಅಂಗಳ ಸೇರಿದಂತೆ ಸುತ್ತಮುತ್ತಲಿನ ತಗ್ಗು ಪ್ರದೇಶದಲ್ಲಿನ ಕೆಲ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.

VISTARANEWS.COM


on

Due to heavy rain in Shira water entered houses and shops
Koo

ಶಿರಾ: ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, (Heavy Rain) ನಗರದ ನಾನಾ ಕಡೆ ಮನೆ, ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ನಗರದ ಹೊಸ ಬಸ್‌ ನಿಲ್ದಾಣದ ರಸ್ತೆ, ಬಾಲಾಜಿ ನಗರ ವೃತ್ತ ಸೇರಿದಂತೆ ವಿವಿಧ ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಭಾನುವಾರ ಸಂಜೆಯಿಂದ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಇಲ್ಲಿನ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿ ಹಾನಿ ಸಂಭವಿಸಿದೆ ಚರಂಡಿಗಳಲ್ಲಿ ಮಳೆ ನೀರು ಸುಗಮವಾಗಿ ಹರಿದು ಹೋಗದ ಕಾರಣ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.

ಇದನ್ನೂ ಓದಿ: IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

ಇನ್ನು ಸ್ಥಳೀಯ 31ನೇ ವಾರ್ಡ್‌ ವ್ಯಾಪ್ತಿಯಲ್ಲಿ ಬರುವ ಶಿವಾಜಿನಗರ, ಜಾಜಿಕಟ್ಟೆ ಅಂಗಳ ಸೇರಿದಂತೆ ಸುತ್ತಮುತ್ತಲಿನ ತಗ್ಗು ಪ್ರದೇಶದಲ್ಲಿ ಕೆಲ ಮನೆಗಳಿಗೆ ಮಳೆ ನೀರು ನುಗ್ಗಿ, ಮನೆಯಲ್ಲಿನ ಆಹಾರ ಪದಾರ್ಥಗಳು, ವಿದ್ಯುತ್‌ ಉಪಕರಣಗಳು ಸೇರಿದಂತೆ ಇತರೆ ವಸ್ತುಗಳು ನೀರು ಪಾಲಾಗಿವೆ.

ಆಕಳು ಕರು ರಕ್ಷಣೆ

ಭಾರೀ ಮಳೆಗೆ ನಗರದ 18ನೇ ವಾರ್ಡ್‌ನ ದೊಡ್ಡಕೆರೆ ಅಂಗಳದ ಬಳಿ ಚರಂಡಿಯಲ್ಲಿ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ ಆಕಳ ಕರುವನ್ನು ಸ್ಥಳೀಯ ಯುವಕರು ರಕ್ಷಿಸಿ, ಚರಂಡಿಯಿಂದ ಹೊರ ತೆಗೆದಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಇದನ್ನೂ ಓದಿ: Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Continue Reading
Advertisement
Kangana Ranaut
ದೇಶ13 mins ago

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Job Alert
ಉದ್ಯೋಗ32 mins ago

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

belagavi farmer self harming
ಕ್ರೈಂ35 mins ago

Farmer Self Harming: ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

Health Benefits Of Tofu
ಆರೋಗ್ಯ37 mins ago

Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

2nd PUC Exam 2 Result tomorrow
ಶಿಕ್ಷಣ1 hour ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

Karnataka Weather Forecast
ಮಳೆ2 hours ago

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Tea Tips
ಆರೋಗ್ಯ2 hours ago

Tea Tips: ಹಾಲಿನ ಚಹಾ ಬದಲು ಬ್ಲ್ಯಾಕ್‌ ಟೀ ಕುಡಿಯಿರಿ!

Sambita Patra
ದೇಶ2 hours ago

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Anti Terrorism Day
ದೇಶ3 hours ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ3 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌