ಶಾಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ವೇಳೆ ತಲೆ ತಿರುಗಿ ಬಿದ್ದ ವಿದ್ಯಾರ್ಥಿನಿಯರು, ಆಸ್ಪತ್ರೆಗೆ ದಾಖಲು - Vistara News

ಕರ್ನಾಟಕ

ಶಾಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ವೇಳೆ ತಲೆ ತಿರುಗಿ ಬಿದ್ದ ವಿದ್ಯಾರ್ಥಿನಿಯರು, ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿಯ ಶಾಲೆಯೊಂದರ ಆವರಣದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ವೇಳೆ ಮೂವರು ವಿದ್ಯಾರ್ಥಿನಿಯರು ತಲೆ ಸುತ್ತು ಬಂದು ಬಿದ್ದಿದ್ದಾರೆ.

VISTARANEWS.COM


on

prayer at school
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಇಲ್ಲಿನ ಲ್ಯಾಮಿಂಗ್ಟನ್‌ ಶಾಲೆಯ ಆವರಣದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವ ವೇಳೆ ವಿದ್ಯಾರ್ಥಿನಿಯರು ತಲೆತಿರುಗಿ ಬಿದ್ದ ಘಟನೆ ಶುಕ್ರವಾರ ನಡೆದಿದೆ.

೧೦ನೇ ತರಗತಿಯಲ್ಲಿ ಓದುತ್ತಿರುವ ಮೂರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಚಿಟಗುಪ್ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥರಾಗಿದ್ದ ಅವರು ಈಗ ಚೇತರಿಸಿಕೊಳ್ಳುತ್ತಿದ್ದು, ಈಗಲೂ ಆಸ್ಪತ್ರೆಯಲ್ಲೇ ಇದ್ದಾರೆ.

ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಗೆ ನಿಂತಿದ್ದಾಗ ಏಕಾಏಕಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಇವರು ಜ್ವರ ಹಾಗೂ ತಲೆ ಸುತ್ತು ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಅಸ್ವಸ್ಥತೆ, ಬೇರೇನೋ ಸಮಸ್ಯೆಗಳಿದ್ದರೆ ಕೆಲವೊಮ್ಮೆ ಕೆಲವು ಮಕ್ಕಳು ಸಾಮೂಹಿಕ ಪ್ರಾರ್ಥನೆ ವೇಳೆ ಕುಸಿದು ಬೀಳುವುದು ಇದೆ. ಆದರೆ, ಒಂದೇ ದಿನ ಮೂವರು ಒಮ್ಮೆಗೇ ಯಾಕೆ ಕುಸಿದುಬಿದ್ದರು ಎನ್ನುವುದು ಸ್ಪಷ್ಟವಾಗಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Medical Ethics : ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ; ಕೇಸ್​ ದಾಖಲಿಸಲು ಕೋರ್ಟ್​ ಸೂಚನೆ

Medical Ethics: ಬೆಂಗಳೂರಿನ ಜರಗನಹಳ್ಳಿಯಲ್ಲಿರುವ ಆಸ್ಪತ್ರೆಯಲ್ಲಿ ಈ ‘ಅಧಿಕ ಪ್ರಸಂಗ ನಡೆದಿದೆ. ಎದೆ ನೋವಿನ ತಪಾಸಣೆ ನಡೆಸಲು ಬಂದ ಯುವತಿಯ ಒಳಉಡುಪುಗಳ ಬಿಚ್ಚಿಸಿದ್ದ ಆರೋಪಿ ವೈದ್ಯ , ಹೃದಯ ಬಡಿತ ಪರೀಕ್ಷೆ ಮಾಡುವ ನೆಪದಲ್ಲಿ ಸ್ತನಗಳ ಮೇಲೆ ಕೈಯಾಡಿಸಿದ್ದ. ಕೊನೆಗೆ ಮುತ್ತು ನೀಡಿದ್ದ. ತಕ್ಷಣ ಯುವತಿ ದೂರು ದಾಖಲಿಸಿದ್ದರು.

VISTARANEWS.COM


on

Medical Ethics
Koo

ಬೆಂಗಳೂರು: ವೈದ್ಯಕೀಯ ನೈತಿಕತೆ (Medical Ethics) ಮರೆತು ತನ್ನ ಬಳಿಕ ಚಿಕಿತ್ಸೆಗಾಗಿ ಬಂದಿದ್ದ ಯುವತಿಗೆ ತಪಾಸಣೆ ನೆಪದಲ್ಲಿ ಬಟ್ಟೆ ಹಾಗೂ ಒಳಉಡುಪುಗಳನ್ನು ಬಿಚ್ಚಿಸಿ ಸ್ತನಗಳ ಮೇಲೆ ಮುತ್ತಿಟ್ಟ ವೈದ್ಯನ ಮೇಲೆ ಕೇಸ್​ ದಾಖಲಿಸುವಂತೆ ಹೈಕೋರ್ಟ್​ ಹೇಳಿದೆ. ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದು ಮಾಡುವಂತೆ ಆರೋಪಿ ವೈದ್ಯ ಸಲ್ಲಿಸಿದ್ದ ಅರ್ಜಿಯನ್ನು ರದ್ದು ಮಾಡಿದ ಕೋರ್ಟ್​, ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶಿಸಿದೆ. ಇದು ವೈದ್ಯಕೀಯ ನೈತಿಕತೆಯನ್ನು ಮರೆಯುವ ವೃತ್ತಿಪರರಿಗೆ ತಕ್ಕ ಪಾಠ ಎಂಬುದಾಗಿ ಕೋರ್ಟ್​​ ಅಭಿಪ್ರಾಯಪಟ್ಟಿದೆ.

ಬೆಂಗಳೂರಿನ ಜರಗನಹಳ್ಳಿಯಲ್ಲಿರುವ ಆಸ್ಪತ್ರೆಯಲ್ಲಿ ಈ ‘ಅಧಿಕ ಪ್ರಸಂಗ ನಡೆದಿದೆ. ಎದೆ ನೋವಿನ ತಪಾಸಣೆ ನಡೆಸಲು ಬಂದ ಯುವತಿಯ ಒಳಉಡುಪುಗಳ ಬಿಚ್ಚಿಸಿದ್ದ ಆರೋಪಿ ವೈದ್ಯ , ಹೃದಯ ಬಡಿತ ಪರೀಕ್ಷೆ ಮಾಡುವ ನೆಪದಲ್ಲಿ ಸ್ತನಗಳ ಮೇಲೆ ಕೈಯಾಡಿಸಿದ್ದ. ಕೊನೆಗೆ ಮುತ್ತು ನೀಡಿದ್ದ. ತಕ್ಷಣ ಯುವತಿ ದೂರು ದಾಖಲಿಸಿದ್ದರು. ಈ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಇದನ್ನು ರದ್ದು ಮಾಡುವಂತೆ ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್​ ಅರ್ಜಿ ವಜಾ ಮಾಡುವ ಮೂಲಕ ಆರೋಪಿಯ ಬಂಧನವಾಗಲಿದೆ.

ಕೋರ್ಟ್​ ಅಭಿಪ್ರಾಯವೇನು?

ವೈದ್ಯರು ತನ್ನ ವೃತ್ತಿ ನೈತಿಕತೆ ಹಾಗೂ ಜನರ ನಂಬಿಕೆ ದುರುಪಯೋಗಪಡಿಸಿಕೊಂಡರೆ ವೈದ್ಯ ಮತ್ತು ರೋಗಿಯ ನಡುವಿನ ಸಂಬಂಧಕ್ಕೆ ಅಪಚಾರವಾಗುತ್ತದೆ. ರೋಗಿಯ ದೇಹ ವೈದ್ಯಕೀಯ ತಪಾಸಣೆಗೆ ಸೀಮಿತ. ದುರುಪಯೋಗ ಸಲ್ಲ. ಪ್ರಕರಣದಲ್ಲಿ ಸ್ಪಷ್ಟವಾದ ಲೈಂಗಿಕ ಪ್ರಚೋದನೆ ಕಂಡುಬಂದಿರುವುದರಿಂದ ವೈದ್ಯರ ವಿರುದ್ಧ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲಾಗದು ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

ವೈದ್ಯರು ದೂರುದಾರರ ಬಳಿ ಆಕೆಯ ಶರ್ಟ್ ಮತ್ತು ಒಳ ಉಡುಪು ಬಿಚ್ಚುವಂತೆ ಹೇಳಿದ್ದಾರೆ. ಪರೀಕ್ಷೆ ಮಾಡುವುದನ್ನು ಬಿಟ್ಟು ಸ್ತನದ ಮೇಲೆ ಮುತ್ತು ನೀಡಿದ ಆರೋಪ ಎದುರಿಸುತ್ತಿದ್ದಾರೆ. ವೈದ್ಯರ ಈ ನಡತೆ ಐಪಿಸಿಯ ಸೆಕ್ಷನ್ 354ಎ(1)(i) ಅಡಿ ಅಪರಾಧವೆಂದು ಪರಿಗಣಿಸಲ್ಪಡುವ ಅಂಶಗಳಾಗಿರುತ್ತದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಹೇಳಿದ್ದಾರೆ.

ಏನಿದು ಪ್ರಕರಣ

ಸಂತ್ರಸ್ತೆ ಯುವತಿ ಎದೆನೋವಿನಿಂದ ಬಳಲುತ್ತಿದ್ದರು. ಅವರು ಜೆಪಿ ನಗರದ ಆಸ್ಪತ್ರೆಗೆ ಭೇಟಿ ನೀಡಿದ್ದರು. ಚಿಕಿತ್ಸೆ ನೀಡಿದ ನಂತರ ಇಸಿಜಿ ಮತ್ತು ಎದೆಯ ಎಕ್ಸ್-ರೇ ಪರೀಕ್ಷೆಗೆ ಒಳಗಾಗುವಂತೆ ವೈದ್ಯರು ಸೂಚಿಸಿದ್ದರು. ಅಲ್ಲದೆ, ವರದಿಗಳನ್ನು ವಾಟ್ಸಾಪ್‌ ನಲ್ಲಿ ಕಳುಹಿಸಲು ಹೇಳಿದ್ದರು. ವರದಿಗಳನ್ನು ನೋಡಿದ ವೈದ್ಯರು ಮಾರ್ಚ್ 21 ರಂದು ಮಧ್ಯಾಹ್ನ 2 ಗಂಟೆಗೆ ಜರಗನಹಳ್ಳಿಯಲ್ಲಿರುವ ತನ್ನ ಕ್ಲಿನಿಕ್‌ಗೆ ಭೇಟಿ ನೀಡುವಂತೆ ಹೇಳಿದ್ದರು.

ಅಂತೆಯೇ ಯುವತಿ ಕ್ಲಿನಿಕ್‌ಗೆ ಭೇಟಿ ನೀಡಿದಾಗ ವೈದ್ಯ ಮಾತ್ರ ಅಲ್ಲಿದ್ದರು. ತಪಾಸಣಾ ಕೋಣೆಗೆ ಕರೆದೊಯ್ದು ವೈದ್ಯರು ಮಲಗಲು ಹೇಳಿದ್ದರು. ಬಳಿಕ ಆಕೆಯ ಎದೆಯ ಮೇಲೆ ಸ್ಟೆತಸ್ಕೋಪ್ ಇಟ್ಟು ಹೃದಯ ಬಡಿತ ಪರೀಕ್ಷಿಸಲು ಪ್ರಾರಂಭಿಸಿದ್ದರು. ಮುಂದುವರಿದು ಆಕೆಯ ಬಳಿ ಶರ್ಟ್ ಮತ್ತು ಒಳ ಉಡುಪು ತೆಗೆಯಲು ಹೇಳಿದ್ದರು. ಐದು ನಿಮಿಷಗಳ ಪರೀಕ್ಷೆಯ ನಂತರ, ಕೈಗಳಿಂದ ಸ್ತನವನ್ನು ಸ್ಪರ್ಶಿಸಲು ಪ್ರಾರಂಭಿಸಿದ್ದರು. ಅಂತಿಮವಾಗಿ ಸ್ತನಕ್ಕೆ ಮುತ್ತಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಗಾಬರಿಗೊಂಡ ಆಕೆ ಕ್ಲಿನಿಕ್‌ನಿಂದ ಓಡಿಬಂದು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದರು. ಮರುದಿನ ಅವರು ಪುಟ್ಟೇನಹಳ್ಳಿ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ದಾಖಲಿಸಿದ್ದರು.

Continue Reading

ಉಡುಪಿ

Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇತ್ತ ಆಕೆಯ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

Udupi News Self harming
ಬಾವಿಗಿಳಿದು ಮೃತದೇಹವನ್ನು ತೆರವು ಮಾಡಿದ ಅಗ್ನಿಶಾಮಕ ದಳ ಸಿಬ್ಬಂದಿ
Koo

ಉಡುಪಿ: ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಉಡುಪಿಯ (Udupi News) ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ನಡೆದಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡವರು.

ಮೋಸಿನಾ ತಂದೆಯ ನಿಧನದ ನಂತರ ಖಿನ್ನತೆಗೊಳಗಾಗಿದ್ದರು. ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದರು. ತಂದೆಯ ಕೊರಗಿನಲ್ಲೇ ಖಿನ್ನತೆಗೆ ಒಳಗಾದ ಮೋಸಿನಾ ಮನೆ ಬಳಿ ಇದ್ದ ಬಾವಿ ಹಾರಿ ಮೃತಪಟ್ಟಿದ್ದಾರೆ. ಸ್ಥಳೀಯರು ಇದನ್ನೂ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Udupi News Self Harming

ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹ ಬಾವಿಯಿಂದ ತೆರವು ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಪು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

ಜಾರ್ಖಂಡ್: ಅತ್ಯಾಚಾರ ಪ್ರಕರಣ ದೇಶದಲ್ಲಿ ಹೆಚ್ಚಾಗುತ್ತಿದೆ. ನಿತ್ಯ ಒಂದಿಲ್ಲೊಂದು ಕಡೆ ಅತ್ಯಾಚಾರ ಪ್ರಕರಣಗಳನ್ನು ನಾವು ಕೇಳಿರುತ್ತೇವೆ. ಕೆಲವೊಂದು ಪ್ರಕರಣಗಳು ಬೆಳಕಿಗೆ ಬರುತ್ತವೆ. ಇನ್ನು ಕೆಲವು ಹಾಗೆಯೇ ಮುಚ್ಚಿ ಹೋಗುತ್ತದೆ. ಅದರಲ್ಲೂ ಅಪರಿಚಿತರಿಂದ ಹುಡುಗಿಯರು ಅತ್ಯಾಚಾರಕ್ಕೆ (Rape Case ) ಒಳಗಾಗುವುದಕ್ಕಿಂತ ಹೆಚ್ಚು ತಮ್ಮವರಿಂದಲೇ ಅತ್ಯಾಚಾರಕ್ಕೆ ಬಲಿಯಾಗುತ್ತಿದ್ದಾರೆ. ಅಂತಹದೊಂದು ಘಟನೆ ಇದೀಗ ಜಾರ್ಖಂಡ್‌ನಲ್ಲಿ ನಡೆದಿದೆ.

14 ವರ್ಷದ ಬಾಲಕಿಯನ್ನು ಆಕೆಯ ಅಪ್ರಾಪ್ತ ಗೆಳೆಯ ಮತ್ತು ಆತನ ಆರು ಮಂದಿ ಗೆಳೆಯರು ಸೇರಿ 2 ದಿನಗಳ ಕಾಲ ಅತ್ಯಾಚಾರ ಎಸಗಿ, ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ ಘಟನೆ ಜಾರ್ಖಂಡ್‌ನ ಧನ್ಬಾದ್ ಜಿಲ್ಲಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಗೆಳೆಯ ಇಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಭಾನುವಾರ ಸಂಜೆ ಅವಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ಆತ ಮತ್ತು ಆತನ ಸ್ನೇಹಿತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿದ್ದಾರೆ. ಮರುದಿನ ಸಂಜೆ ಆತನ ಗೆಳೆಯನ ಐದು ಮಂದಿ ಸ್ನೇಹಿತರು ಬಂದು ಮತ್ತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಈ ಲೈಂಗಿಕ ದೌರ್ಜನ್ಯದ ಕೃತ್ಯವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಬಾಲಕಿ ಸಹಾಯಕ್ಕಾಗಿ ಕಿರುಚಿದಾಗ ಆಕೆಯ ಕೂಗಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಧನ್ಸಾರ್ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು, ಮಾತ್ರವಲ್ಲ ಅವರಲ್ಲಿ ಒಬ್ಬ ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ. ಅಪರಾಧ ಸ್ಥಳದಲ್ಲಿದ್ದ ಆ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಆರೋಪಿಯ ಮನೆ ಮೇಲೆ ದಾಳಿ ಮಾಡಿದಾಗ ಅಲ್ಲಿ ಯಾರೂ ಇರಲಿಲ್ಲ. ಹಾಗೇ ಸಂತ್ರಸ್ತೆಯ ಕುಟುಂಬದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಧನ್ಸಾರ್ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮತ್ತು ಮಕ್ಕಳ ಕಲ್ಯಾಣ ಸಮಿತಿಯ ನಿರ್ದೇಶನದ ಮೇರೆಗೆ ಆಶ್ರಯ ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

Self Harming : ಮೈಸೂರಿನಲ್ಲಿ ನವ ವಿವಾಹಿತೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯದ್ದು ಆತ್ಮಹತ್ಯೆನಾ? ಕೊಲೆನಾ? ಎಂಬ ಶಂಕೆ ವ್ಯಕ್ತವಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Self Harming
Koo

ಮೈಸೂರು: ಮದುವೆಯಾದ ಆರೇ ತಿಂಗಳಿಗೆ ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ (Self Harming) ಪತ್ತೆಯಾಗಿದ್ದಾಳೆ. ಮೈಸೂರಿನ ಮಾನಸಿ ನಗರ ಬಿಎಸ್ಎನ್ಎಲ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಸೌಮ್ಯಾಶ್ರೀ (27) ಮೃತ ದುರ್ದೈವಿ.

ಆರು ತಿಂಗಳ ಹಿಂದೆ ಮೈಸೂರಿನ ಮಂಜುನಾಥ್ ಎಂಬುವರ ಜತೆ ಸೌಮ್ಯಾಶ್ರೀ ಮದುವೆಯಾಗಿದ್ದರು. ಸೌಮ್ಯಾಶ್ರೀ ತಂದೆ ಶ್ರೀಧರ್ ಬೆಂಗಳೂರಿನಿಂದ ಮೈಸೂರಿಗೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಮದುವೆ ಆದ ಕೆಲವೇ ದಿನಗಳಲ್ಲಿ ಸೌಮ್ಯಾಳ ನಡತೆ ಮೇಲೆ ಪತಿ ಮಂಜುನಾಥ್ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಈ ಕುರಿತು ಸೌಮ್ಯಾ ಹೆತ್ತವರಿಗೆ ಮಾಹಿತಿ ನೀಡಿದ್ದಳು. ಹೀಗಾಗಿ ಮಂಜುನಾಥ್ ಹಾಗೂ ಅವರ ಮನೆಯವರೆಲ್ಲ ಸೇರಿ ಸೌಮ್ಯಾಳನ್ನ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮಗಳ ಶವ ಕಂಡು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self Harming
ಸೌಮ್ಯಳ ಶವ ಕಂಡು ಪೋಷಕರ ಆಕ್ರಂದನ

ಸ್ಥಳಕ್ಕೆ ಮೈಸೂರಿನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

ಉಡುಪಿಯಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಉಡುಪಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿಯ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ನಡೆದಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡವರು.

ಮೋಸಿನಾ ತಂದೆಯ ನಿಧನದ ನಂತರ ಖಿನ್ನತೆಗೊಳಗಾಗಿದ್ದರು. ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದರು. ತಂದೆಯ ಕೊರಗಿನಲ್ಲೇ ಖಿನ್ನತೆಗೆ ಒಳಗಾದ ಮೋಸಿನಾ ಮನೆ ಬಳಿ ಇದ್ದ ಬಾವಿ ಹಾರಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹ ಬಾವಿಯಿಂದ ತೆರವು ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾಪು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

CM Award : 2023ರ ಸಿಎಂ ಪದಕಕ್ಕೆ ಡಿವೈಎಸ್​​ಪಿ ಇನಾಮ್ದಾರ್ ಹೆಸರನ್ನು ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿರುವುದು ಸರಿಯಲ್ಲ. ಕಳಂಕಿತರಿಗೆ ಸಿಎಂ ಪದಕ ನೀಡಿದರೆ ಪ್ರಾಮಾಣಿಕ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಿದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ

VISTARANEWS.COM


on

CM Award
Koo

ಬೆಂಗಳೂರು: ಚಿನ್ನ ಕಳ್ಳತನ ಪ್ರಕರಣದ ಆರೋಪ ಹೊತ್ತಿರುವ ಡಿವೈಎಸ್ಪಿ ಜಾವೀದ್​ ಇನಾಮ್ದಾರ್​ಗೆ ಮುಖ್ಯಮಂತ್ರಿಗಳ ಉತ್ತಮ ಸಾಧನೆ ಪ್ರಶಸ್ತಿ (CM Award) ನೀಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಸುರಪುರ ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಾವೀದ್ ಇನಾಮ್ದಾರ್ ವಿರುದ್ಧ ಚಿನ್ನ ಕಳ್ಳತನದ ಆರೋಪವಿದೆ. ಇಂಥವರಿಗೆ ಪ್ರಶಸ್ತಿ ಶಿಫಾರಸು ಮಾಡಿರುವುದು ಅಚ್ಚರಿಗೆ ಮೂಡಿಸಿದೆ ಎಂದು ಶಾಸಕ ಶರಣಗೌಡ ಕಂದಕೂರ ವಿರೋಧ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದಿದ್ದಾರೆ.

2023ರ ಸಿಎಂ ಪದಕಕ್ಕೆ ಡಿವೈಎಸ್​​ಪಿ ಇನಾಮ್ದಾರ್ ಹೆಸರನ್ನು ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿರುವುದು ಸರಿಯಲ್ಲ. ಕಳಂಕಿತರಿಗೆ ಸಿಎಂ ಪದಕ ನೀಡಿದರೆ ಪ್ರಾಮಾಣಿಕ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಿದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ

ಶಾಸಕ ಶರಣಗೌಡ ಕಂದಕೂರ ಪತ್ರದ ಸಾರ ಈ ಕೆಳಗೆ ಇದೆ

ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಉಪ ವಿಭಾಗದ ಉಪಾಧೀಕ್ಷರಾದ (ಡಿವೈಎಸ್‌ಪಿ) ಜಾವೀದ್​ ಇನಾಂದಾರ್​ ಇವರಿಗೆ 2023ನೇ ಸಾಲಿನ ಗೌರವಾನ್ವಿತ ಮುಖ್ಯಮಂತ್ರಿಗಳ ಪದಕಕ್ಕೆ ಈ ಭಾಗದ ಇಲಾಖೆಯ ಹಿರಿಯ ಅಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ. ಮಾನ್ಯ ಪೊಲೀಸ್ ಮಹಾ ನಿರ್ದೇಶಕರಿಗೆ (ಡೈರೆಕ್ಟರ್ ಜನರಲ್ ಆಫ್ ಪೊಲೀಸ್) ಕಳುಹಿಸಿದ್ದಾರೆ ಎಂಬ ಮಾಹಿತಿಗಳು ಬಂದಿವೆ. ಜಾವೀದ್​ ಇನಾಂದಾರ್​ ಅವರ ವಿರುದ್ಧ ಭ್ರಷ್ಟಾಚಾರದ ಸೇರಿದಂತೆ ಹಲವಾರು ಆರೋಪಗಳಿವೆ. ಸರ್ಕಾರವು ಬಡವರಿಗೆ ನೀಡುವ ಆಹಾರಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವಂತಹ ದಂಧೆಕೋರರ ಜೊತೆಗೆ ಶಾಮೀಲಾಗಿರುವ ಗಂಭೀರ ಆರೋಪಗಳಿವೆ. ಅವೆಲ್ಲವನ್ನೂ ಮರೆಮಾಚಿ ಪದಕಕ್ಕೆ ಶಿಫಾರಸು ಮಾಡಿದ್ದು ದುರದೃಷ್ಟಕರ ಎಂದು ಕಂದಕೂರ ಅವರು ಹೇಳಿದ್ದಾರೆ.

ಇದನ್ನೂ ಓದಿ: BS Yediyurappa : ಲೈಂಗಿಕ ಕಿರುಕುಳ ಕೇಸ್; ಹೈಕೋರ್ಟ್​ನಲ್ಲಿ ಇಂದು ಯಡಿಯೂರಪ್ಪಗೆ ಜಾಮೀನು ಸಿಗದಿದ್ದರೆ ಬಂಧನ

ಜಾವೀದ್​ ಇನಾಂದಾರ್​ ಅವರು ಈ ಹಿಂದೆ (2021ರಲ್ಲಿ) ಬೆಳಗಾವಿ ಜಿಲ್ಲೆ ಗೋಕಾಕ ಉಪ ವಿಭಾಗದ ಪೊಲೀಸ್ ಉಪಾಧೀಕ್ಷರಾಗಿದ್ದ ಸಂದರ್ಭದಲ್ಲಿ, ಹುಕ್ಕೇರಿ ತಾಲೂಕಿನ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ನಡೆದಿದ್ದ 4.9 ಕೆ.ಜಿ. ಚಿನ್ನದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದವು. ಚಿನ್ನದ ಕಳ್ಳ ಸಾಗಣೆ ತಡೆಗಟ್ಟಬೇಕಾದ ಪೊಲೀಸ್ ಅಧಿಕಾರಿ ಕಳ್ಳರ ಜೊತೆ ಭಾಗಿಯಾಗಿ ಸುಮಾರು 4.9 ಕೆ.ಜಿಯಷ್ಟು ಚಿನ್ನ ಲಪಟಾಯಿಸಿದ್ದರು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು ತನಿಖೆ ಕೊನೆಗೊಂಡಿಲ್ಲ. ಅಂದಿನ ಗೋಕಾಕ್​ ಡಿವೈಎಸ್‌ಪಿಯಾಗಿದ್ದ ಜಾವೀದ್​ ಇನಾಂದಾರ್​ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು ಎಂದು ಕಂದಕೂರ ಅವರು ಪತ್ರದಲ್ಲಿ ಬರೆದಿದ್ದಾರೆ.

ಕಾಳಸಂತೆಯಲ್ಲಿ ಆಹಾರ ಧಾನ್ಯ ಮಾರಿದ ಶಹಾಪುರದ ಚಾಮನಾಳದ ಮಲ್ಲಿಕ್ ಎಂಬಾತನ ಜೊತೆ ಡಿವೈಎಸ್ಪಿ ಜಾವೀದ್​ ನಿಕಟ ಸಂಪರ್ಕ ಹೊಂದಿದ್ದಾರೆ. ಆರೋಪಿಗೆ ಖುದ್ದು ಡಿವೈಎಸ್‌ಪಿ ಜಾವೀದ್​ ಇನಾಂದಾರ್​​ ಸನ್ಮಾನ ಮಾಡಿ ಇಲಾಖೆಗೆ ಮಜುಗರ ತಂದಿದ್ದರು. ಅಕ್ಕಿ ಅಕ್ರಮ ಮಾರಾಟ ಪ್ರಕರಣದಲ್ಲಿ ಮಲ್ಲಿಕ್​ನನ್ನು ಪಾರು ಮಾಡಲು ಡಿವೈಎಸ್‌ಪಿ ಜಾವೀದ್​ ​ ಇನಾಂದಾರ್​ ಅವರು ಅಮಾಯಕ ವ್ಯಾಪಾರಿಗಳನ್ನು ಸಿಲುಕಿಸಿದ್ದರು. ಈ ಹಿಂದೆ ನಡೆದ ಅಧಿವೇಶನದಲ್ಲಿ ನಾನು ಇದನ್ನು ಸರ್ಕಾರದ ಗಮನಕ್ಕೆ ತಂದಿರುತ್ತೇನೆ ಎಂದು ಕಂದಕೂರ ಅವರ ಪತ್ರದಲ್ಲಿ ತಿಳಿಸಿದ್ದಾರೆ.

ಅವರ ಬಗ್ಗೆ ಹಿರಿಯ ಅಧಿಕಾರಿಗಳು ನೀಡಿರುವ ಶಿಫಾರಸು ಪತ್ರದಲ್ಲಿ ಎಫ್‌ಡಿಎ ಪರೀಕ್ಷೆಯಲ್ಲಿ ಬ್ಲೂಟೂತ್ ಆಕ್ರಮದ ಪ್ರಕರಣವನ್ನು ಜಾವೀದ್​ ಪತ್ತೆ ಹಚ್ಚಿದ್ದಾರೆ ಎಂದು ಬರೆಯಲಾಗಿದೆ. ವಾಸ್ತವದಲ್ಲಿ, ಕಲಬುರಗಿ ಹಿರಿಯ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಈ ಪ್ರಕರಣ ಬಯಲಾಗಿದೆ. ಇನ್ನೂ ಅನೇಕ ಪ್ರಕರಣಗಳನ್ನು ಬಗೆ ಹರಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿರುವ ಅಂಶಗಳು ಬಹುತೇಕ ಸತ್ಯಕ್ಕೆ ದೂರವಾಗಿದೆ. ಈ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸ್ಸು ಮಾಡುತ್ತಿರುವುದು ಪ್ರಾಮಾಣಿಕ ಅಧಿಕಾರಿಗಳನ್ನು ಕುಗ್ಗಿಸಿದಂತೆ ಎಂದು ಶಾಸಕರು ಹೇಳಿದ್ದಾರೆ.

Continue Reading
Advertisement
Euro Cup 2024
ಕ್ರೀಡೆ11 seconds ago

Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

Medical Ethics
ಪ್ರಮುಖ ಸುದ್ದಿ2 mins ago

Medical Ethics : ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ; ಕೇಸ್​ ದಾಖಲಿಸಲು ಕೋರ್ಟ್​ ಸೂಚನೆ

Giorgia Meloni
ವೈರಲ್ ನ್ಯೂಸ್10 mins ago

Giorgia Meloni: ಕೈ ಮುಗಿದು, ನಮಸ್ಕಾರ ಮಾಡಿ ಅತಿಥಿಗಳನ್ನು ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; ವೈರಲ್‌ ವಿಡಿಯೊ ಇಲ್ಲಿದೆ

Kannada Serials TRP seetha rama grow Ninagaagi serial full down
ಕಿರುತೆರೆ29 mins ago

Kannada Serials TRP: ಟ್ರ್ಯಾಕ್‌ಗೆ ಬಂದ ʻಸೀತಾ ರಾಮʼ ; ʻನಿನಗಾಗಿʼ ಧಾರಾವಾಹಿಗೆ ಕಡಿಮೆ ಟಿಆರ್‌ಪಿ

Udupi News Self harming
ಉಡುಪಿ38 mins ago

Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

Self Harming
ಮೈಸೂರು52 mins ago

Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

Italian Parliament
ವೈರಲ್ ನ್ಯೂಸ್58 mins ago

Italian Parliament: ಇಟಲಿ ಪಾರ್ಲಿಮೆಂಟ್‌ನಲ್ಲಿ ಸಂಸದರ ಮಾರಾಮಾರಿ! ವಿಡಿಯೊ ನೋಡಿ

Kotee Movie release today dolly dhananjay
ಸ್ಯಾಂಡಲ್ ವುಡ್1 hour ago

Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

T20 World Cup 2024
ಕ್ರೀಡೆ1 hour ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

Actor Darshan case comparision to serial troll
ಕಿರುತೆರೆ1 hour ago

Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ ದರ್ಶನ್​ ಕೊಲೆ ಕೇಸ್​​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌