education Age limit for admission to Class 1, Private schools to introduce 1st level classEducation: 1ನೇ ತರಗತಿ ಸೇರಲು ವಯೋಮಿತಿ ನಿಗದಿ; ಫಸ್ಟ್‌ ಲೆವೆಲ್ ಕ್ಲಾಸ್ ಪರಿಚಯಕ್ಕೆ ಮುಂದಾದ ಖಾಸಗಿ ಶಾಲೆಗಳು! - Vistara News

ಕರ್ನಾಟಕ

Education: 1ನೇ ತರಗತಿ ಸೇರಲು ವಯೋಮಿತಿ ನಿಗದಿ; ಫಸ್ಟ್‌ ಲೆವೆಲ್ ಕ್ಲಾಸ್ ಪರಿಚಯಕ್ಕೆ ಮುಂದಾದ ಖಾಸಗಿ ಶಾಲೆಗಳು!

Education: 1ನೇ ತರಗತಿಗೆ ಮಕ್ಕಳನ್ನು ಸೇರಿಸಬೇಕಾದರೆ 6 ವರ್ಷ ತುಂಬಿರಬೇಕೆಂದು ಕೇಂದ್ರ ಸರ್ಕಾರವು ವಯೋಮಿತಿಯನ್ನು ಈ ಹಿಂದೆ ನಿಗದಿ ಪಡಿಸಿದೆ. ಆದರೆ ಶಾಲೆಯಲ್ಲಿ 6 ವರ್ಷಕ್ಕೆ 1 ದಿನ ಕಡಿಮೆ ಇದ್ದರೂ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಖಾಸಗಿ ಶಾಲೆಗಳು ಮಾಸ್ಟರ್‌ ಪ್ಲಾನ್‌ವೊಂದು ಮಾಡಿಕೊಂಡಿದೆ.

VISTARANEWS.COM


on

childern
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈಗಷ್ಟೇ 2021-22ನೇ ಶೈಕ್ಷಣಿಕ ಸಾಲು ಮುಕ್ತಾಯಗೊಂಡಿದ್ದು, 2023-24ನೇ ಶೈಕ್ಷಣಿಕ (Academic year) ಸಾಲಿಗೆ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ. ಈ ಮಧ್ಯೆ ಪೋಷಕರಿಗೆ ತಮ್ಮ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ವಯೋಮಿತಿ (Age Limit) ಅಡ್ಡಿ ಬರುತ್ತಿದ್ದು ಆತಂಕಕ್ಕೆ ಒಳಗಾಗಿದ್ದಾರೆ. ಪೋಷಕರ ಟೆನ್ಷನ್‌ ಫ್ರೀ ಮಾಡಲು ಖಾಸಗಿ ಶಾಲೆಗಳು (Private school) ಮಾಸ್ಟರ್‌ ಪ್ಲಾನ್‌ ಮಾಡಿದೆ.

ಅಂದಹಾಗೆ, ಈ ಹಿಂದೆ ಎಲ್‌ಕೆಜಿಗೆ ದಾಖಲಾತಿ ಹೊಂದಲು 3 ವರ್ಷ 5 ತಿಂಗಳು ಹಾಗೂ 1ನೇ ತರಗತಿಗೆ ಸೇರಿಸಲು 5 ವರ್ಷ, 5 ತಿಂಗಳು ಹಾಗೂ 5 ವರ್ಷ 10 ತಿಂಗಳು ವಯೋಮಿತಿ ಇತ್ತು. ಆದರೆ, ರಾಜ್ಯ ಸರ್ಕಾರವು ಈ ಆದೇಶವನ್ನು ಹಿಂಪಡೆದಿತ್ತು. ಆ ಬಳಿಕ ಎನ್‌ಇಪಿ ಅಡಿಯಲ್ಲಿ ಕೇಂದ್ರ ಸರ್ಕಾರವೂ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿಪಡಿಸಿತ್ತು. ಆ ಪ್ರಕಾರ ಶೈಕ್ಷಣಿಕ ವರ್ಷದ ಜೂನ್‌ 1ಕ್ಕೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಕಳೆದ 2022ರ ಜುಲೈನಲ್ಲಿ ಆದೇಶಿಸಿತ್ತು.

ಆರ್‌ಟಿಇ ಶಿಕ್ಷಣ ಕಾಯ್ದೆ (RTE Education Act), ಕಡ್ಡಾಯ ಶಿಕ್ಷಣ ನಿಯಮ 2012 ಅನ್ವಯ ಹೊಸ ವಯೋಮಿತಿಯನ್ನು ನಿಗದಿ ಮಾಡಿ ಸರ್ಕಾರ ಆದೇಶ (Order) ಹೊರಡಿಸಿತ್ತು. ಪ್ರಸಕ್ತ ಸಾಲಿನಿಂದ ಈ ಹೊಸ ನಿಯಮ ಜಾರಿಗೆ ಬರುತ್ತಿದ್ದು, ಇದುವೇ ಪೋಷಕರಿಗೆ ಕಗ್ಗಂಟಾಗಿ ಪರಿಣಮಿಸಿದೆ. 6 ವರ್ಷಕ್ಕೆ 1 ದಿನ ಕಡಿಮೆ ಇದ್ದರೂ ಮಕ್ಕಳಿಗೆ ಶಾಲೆಯಲ್ಲಿ ದಾಖಲಾತಿ ಸಿಗುವುದಿಲ್ಲ. ಇದರಿಂದಾಗಿ ಇಡೀ ಒಂದು ವರ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ಪೋಷಕರು ಅಸಮಾಧಾನ ಹೊರಹಾಕಿದ್ದಾರೆ.

ಖಾಸಗಿ ಶಾಲೆಗಳಿಂದ ಫಸ್ಟ್‌ ಲೆವೆಲ್‌ ಕ್ಲಾಸ್‌

ಈ ಹೊಸ ನಿಯಮ ಜಾರಿ ಬೆನ್ನಲ್ಲೇ ಇದೀಗ 6 ವರ್ಷದ ವಯೋಮಿತಿಯನ್ನು ಸರಿದೂಗಿಸಲು ಹೊಸ ಪ್ಲಾನ್‌ಗಳನ್ನು ಮಾಡಿಕೊಂಡಿವೆ. ಯುಕೆಜಿ ಬಳಿಕ ಫಸ್ಟ್‌ ಲೆವೆಲ್ ಕ್ಲಾಸ್ ಪರಿಚಯಕ್ಕೆ ಪ್ಲಾನ್ ಮಾಡಿವೆ. ಒಂದನೇ ತರಗತಿ ಹೋಗುವ ಮೊದಲು ಲೆವೆಲ್ ಒನ್ ಪರಿಚಯ ಮಾಡುತ್ತಿದೆ.

ಇದನ್ನೂ ಓದಿ: Operation Elephant: ಬಾಲಕಿಯ ಬಲಿ ಪಡೆದ, ಡಾಕ್ಟರ್‌ ಮೇಲೆ ಅಟ್ಯಾಕ್‌ ಮಾಡಿದ್ದ ಪುಂಡ ಕಾಡಾನೆ ಕೊನೆಗೂ ಸೆರೆ; ಹೇಗಿತ್ತು ಆಪರೇಷನ್‌ ಎಲಿಫೆಂಟ್‌?

ಇತ್ತ ಈ ರೀತಿಯ ತರಗತಿಗಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ ವಯೋಮಿತಿ ಕಡ್ಡಾಯದ ನಿಯಮವು ಖಾಸಗಿ ಶಾಲೆಗಳು ಹಣ ಲೂಟಿ ಮಾಡಲು ನಿಂತಿವೆ ಎಂದು ಆರೋಪಿಸಿದ್ದಾರೆ. ಒಂದನೇ ತರಗತಿ ಸೇರಲು ಆರು ವರ್ಷ ತುಂಬದೆ ಇದ್ದರೆ ಲೆವೆಲ್ ಒನ್ ಪರಿಚಯ ಮಾಡುತ್ತಿದೆ. ಇದು ಯಾವ ರೀತಿ ಎಂಬುದನ್ನು ಖಾಸಗಿ ಶಾಲೆಗಳೆ ಹೇಳಬೇಕೆಂದು ಕಿಡಿಕಾರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Heat Wave : ವಿಪರೀತ ತಾಪಮಾನವು ಜನರಿಗೆ ತಲೆ ಬಿಸಿ (highest temperature) ಮಾಡಿದೆ. ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ದಾಖಲೆಯಲ್ಲಿ ಉಷ್ಣಾಂಶ ಏರಿಕೆ ಆಗುತ್ತಿದೆ. ಮುಂದಿನ ಐದು ದಿನಗಳಿಗೆ ಹೀಟ್‌ ವೇವ್ಸ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೇಸಿಗೆಯ ಬೇಗೆ ಶುರುವಾಗಿದ್ದು, ಜನರು ಹನಿ ನೀರಿಗೂ (Karnataka Weather Forecast) ಹೆಣಗಾಡುತ್ತಿದ್ದಾರೆ. ಈ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆ ಆಗಿದೆ. ಇದರಿಂದಾಗಿ ಜನರು ಪರಿತಪಿಸುವಂತಾಗಿದೆ (bangalore temperature) ಈ ಬಗ್ಗೆ ಹವಾಮಾನ ಇಲಾಖೆ (bangalore weather) ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಗುರುವಾರ ಒಂದೇ ದಿನ ತಾಪಮಾನ ಏರಿಕೆ ಆಗಿದೆ.

ರಾಜಧಾನಿ ಬೆಂಗಳೂರಲ್ಲಿ ಗರಿಷ್ಠ ತಾಪಮಾನವು 37.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಳೆದ 28 ವರ್ಷದಲ್ಲೇ ಗರಿಷ್ಠ ತಾಪಮಾನ ಇದಾಗಿದೆ. ಕಳೆದೊಂದು ವಾರದಿಂದ 36 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನವು ನಿನ್ನೆ ಗುರುವಾರ 37.8 ಡಿ.ಸೆಗೆ ಏರಿಕೆ ಆಗಿತ್ತು. 1996ರಲ್ಲಿ ಬೆಂಗಳೂರಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತು, ಇದೀಗ ಈ ದಾಖಲೆಯು ನಿನ್ನೆ ಉಡೀಸ್‌ ಆಗಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಬೆಂಗಳೂರು ಮಾತ್ರವಲ್ಲ ಕಲಬುರಗಿ, ಬಾಗಲಕೋಟೆ, ರಾಯಚೂರು, ಬಳ್ಳಾರಿ ಹಾಗೂ ವಿಜಯಪುರ, ಕೊಪ್ಪಳದಲ್ಲಿ ಅತ್ಯಾಧಿಕ ತಾಪಮಾನ ದಾಖಲಾಗಿದೆ. ಈ ಬಗ್ಗೆ ಗರಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಪಟ್ಟಿ ಬಿಡುಗಡೆ ಮಾಡಿದೆ.

ಜಿಲ್ಲೆಗರಿಷ್ಠ ತಾಪಮಾನದಿನ ಹಾಗೂ ವರ್ಷ
ಬೆಂಗಳೂರು37.3 ಡಿ.ಸೆ29th 1996
ಕಲಬುರಗಿ4331st 1996
ಬಾಗಲಕೋಟೆ41.631st 1996
ರಾಯಚೂರು44.627th 1992
ಬಳ್ಳಾರಿ4330th 1996
ಕೊಪ್ಪಳ40.224th 2019
ವಿಜಯಪುರ41.929, 30th 1996

ಇನ್ನೂ 5 ದಿನಗಳು ಸುಡುವ ಕೆಂಡ

ಬೇಸಿಗೆ ಆರಂಭವಾಗುವ ಮೊದಲೇ ಜನರು ಬೇಸಿಗೆಯ ಅನುಭವಿಸಿದ್ದರು. ಮಾರ್ಚ್‌ ಮುಗಿಯುವ ಮೊದಲೇ ಸೂರ್ಯ ದಿನೇದಿನೆ ಪ್ರಖರವಾಗುತ್ತಿದ್ದಾನೆ. ಎಲ್ಲ ರಾಜ್ಯಗಳಲ್ಲೂ ಬೇಸಿಗೆಯನ್ನು ಎದುರಿಸಲು, ಅಗತ್ಯ ಪರಿಹಾರ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಈ ಬೆನ್ನಲ್ಲೇ ಮುಂದಿನ ಐದು ದಿನಗಳು ಕೆಲವು ಕಡೆ 40 ರಿಂದ 50 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದು ಖಂಡಿತವಾಗಿಯೂ ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾದ ತಾಪಮಾನವಾಗಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ ಹೀಗಿದೆ..

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆಯು (Health Department) ಕೆಲವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಸಲಹೆಗಳನ್ನೂ ನೀಡಲಾಗಿದೆ. ಜತೆಗೆ ಮಾಲೀಕರು ಹಾಗೂ ಕೆಲಸಗಾರರಿಗೂ ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು (Health Tips) ಕೈಗೊಳ್ಳಲಾಗಿದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಇದನ್ನೂ ಓದಿ: Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಅಗ್ನಿ ಅವಘಡದ ಕುರಿತು ಎಚ್ಚರಿಕೆ ವಹಿಸಿ

ಬೇಸಿಗೆ ಸಮಯದಲ್ಲಿ ಅತಿಯಾದ ತಾಪಮಾನದಿಂದ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತೆಯನ್ನು ವಹಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್‌ ಎಲ್ಲಾ ಆಸ್ಪತ್ರೆಗಳಿಗೂ ಸೂಚನೆ ನೀಡಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ ಎಲ್ಲಾ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ, ಬೆಂಕಿ ನಂದಿಸುವ ಉಪಕರಣಗಳ ಲಭ್ಯತೆ ಇರಬೇಕು. ಅಗ್ನಿಶಾಮಕ ದಳದಿಂದ No Objection Certificate ಅನ್ನು ಹೊಂದಿರಬೇಕು. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡು ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಅಮಿತ್‌ ಶಾ ರೌಡಿ, ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ

Lok Sabha Election 2024: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗುಂಡಾ, ರೌಡಿಯಾಗಿದ್ದು, ಗುಜರಾತ್‌ನಲ್ಲಿ ನಡೆದಿದ್ದ ನರಮೇಧದ ರೂವಾರಿ ಎಂಬ ಆರೋಪವನ್ನು ಹೊತ್ತಿದ್ದಾರೆ. ಅವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದು, ಇಂತಹವರನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿಯಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಈಗಾಗಲೇ ರಾಹುಲ್ ಗಾಂಧಿ ಅವರು ಜೈಲು ಶಿಕ್ಷೆಯನ್ನು ಅನುಭವಿಸುವ ಹಂತಕ್ಕೆ ಬಂದಿದ್ದಾರೆ. ಇವರ ಡಿಎನ್ಎನಲ್ಲೇ ಇಂತಹ ವಿಚಾರಗಳು ಬಂದಿದೆ. ಇವರ ವಿರುದ್ಧ ದೂರು ನೀಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

VISTARANEWS.COM


on

Lok Sabha Election 2024 Yathindra Siddaramaiah calls Amit Shah a goonda BJP says No maturity
Koo

ಚಾಮರಾಜನಗರ/ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಾಕ್ಸಮರಗಳು ಹೆಚ್ಚುತ್ತಿವೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಹನೂರಿನ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಒಬ್ಬ ಗೂಂಡಾ, ರೌಡಿ ಎಂದು ಕರೆದಿರುವುದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಯತೀಂದ್ರ ಅವರಿಗೆ ಇನ್ನೂ ಮೆಚ್ಯುರಿಟಿಯೇ ಇಲ್ಲ ಎಂದು ಕಿಡಿಕಾರಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗುಂಡಾ, ರೌಡಿಯಾಗಿದ್ದು, ಗುಜರಾತ್‌ನಲ್ಲಿ ನಡೆದಿದ್ದ ನರಮೇಧದ ರೂವಾರಿ ಎಂಬ ಆರೋಪವನ್ನು ಹೊತ್ತಿದ್ದಾರೆ. ಅವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದು, ಇಂತಹವರನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ ಎಂದು ಹನೂರಿನಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್‌ ಸಮಾವೇಶದಲ್ಲಿ ಯತೀಂದ್ರ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇದಕ್ಕೆ ಈಗ ರಾಜ್ಯ ಬಿಜೆಪಿ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯತೀಂದ್ರ ವಿರುದ್ಧ ದೂರು ಕೊಡುತ್ತೇವೆ: ಅಶೋಕ್

ಯತೀಂದ್ರ ಸಿದ್ದರಾಮಯ್ಯ ಅವರಿಗೆ ಇನ್ನೂ ಮೆಚ್ಯುರಿಟಿ, ಬುದ್ಧಿ ಇಲ್ಲ. ಯಾರ ಬಗ್ಗೆ ಮಾತಾಡಬೇಕು ಎಂಬ ಬಗ್ಗೆ ಗೊತ್ತಿಲ್ಲ, ಸ್ಥಾನಮಾನ ಇಲ್ಲದ ವ್ಯಕ್ತಿ. ಅಮಿತ್ ಶಾ ಈ ದೇಶದ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಕಾಂಗ್ರೆಸ್ ಹಿಂದಿನಿಂದಲೂ ಕೊಟ್ಟುಕೊಂಡು ಬರುತ್ತಿದೆ. ಸಿದ್ದರಾಮಯ್ಯ ಅವರ ಮಗ ಎಂಬ ಕಾರಣಕ್ಕೆ ಬಾಲಿಶ ಹೇಳಿಕೆ ನೀಡಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ಅವರು ಜೈಲು ಶಿಕ್ಷೆಯನ್ನು ಅನುಭವಿಸುವ ಹಂತಕ್ಕೆ ಬಂದಿದ್ದಾರೆ. ಇವರ ಡಿಎನ್ಎನಲ್ಲೇ ಇಂತಹ ವಿಚಾರಗಳು ಬಂದಿದೆ. ಇವರ ವಿರುದ್ಧ ದೂರು ನೀಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ಅಪ್ಪನ ಹೆಸರ ಮೇಲೆ ಅಧಿಕಾರಕ್ಕೆ ಬಂದವರು ಹೀಗೆ: ಸಿಟಿ ರವಿ

ಅಪ್ಪನ ಹೆಸರ ಮೇಲೆ ಅಧಿಕಾರಕ್ಕೆ ಬಂದವರು ಹೀಗೆಯೇ ಮಾತನಾಡುತ್ತಾರೆ. ಎಂದಾದರೂ ಪಕ್ಷದ ಕೆಲಸ ಮಾಡಿದ್ದಾರಾ? 1982ರಲ್ಲಿ ಅಮಿತ್ ಶಾ ಬೂತ್ ಅಧ್ಯಕ್ಷ ಆಗಿದ್ದರು. ಆಗ ಇವರಪ್ಪ ಎಂಎಲ್‌ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು‌ ಇವರು. ನಾವು ವಿದ್ಯಾರ್ಥಿಗಳಾಗಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಕೇಸ್‌ ಹಾಕಿದ್ದರು. ಹಾಗಾದರೆ ನಾನು ಗೂಂಡಾನಾ? ಅಪ್ಪನ ಹೆಸರು ಹೇಳಿಕೊಂಡು, ಅಧಿಕಾರ ಚಲಾಯಿಸುವವರಿಗೆ ಬಡವರ ಕಷ್ಟ ಕಾಣಿಸುತ್ತಾ? ಎಂದು ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಜತೆ ಚಾಟ್; ಭಾರತದ ಡಿಜಿಟಲ್ ಕ್ರಾಂತಿಗೆ ಬಿಲ್ ಗೇಟ್ಸ್ ಶ್ಲಾಘನೆ

ಕೂಡಲೇ ಯತೀಂದ್ರ ಕ್ಷಮೆ ಯಾಚಿಸಲಿ: ಅಶ್ವಥ್ ನಾರಾಯಣ್

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ರಾಜಕೀಯದಲ್ಲಿ ಮಾತಿನ ಮೇಲೆ, ನಡವಳಿಕೆ ಮೇಲೆ ನಿಲ್ಲಬೇಕು. ಮಾತಿನಲ್ಲಿ ಲಕ್ಷ್ಮಣ ರೇಖೆ ಇರಬೇಕು. ಎಲ್ಲಿಯೂ ಎಲ್ಲೆ ಮೀರಿದ ಮಾತನಾಡಬಾರದು. ಯತೀಂದ್ರ ಅವರ ಇಂಥ ಕೀಳು ಮಟ್ಟದ ರಾಜಕೀಯ ಹೇಳಿಕೆಯನ್ನು ವಿರೋಧಿಸುತ್ತೇವೆ. ಅಲ್ಲದೆ, ನಮ್ಮ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ ಎಂದು ಕರೆದಿದ್ದಕ್ಕೆ ಯತೀಂದ್ರ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಚಿವ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.

ಗೌರವಯುತವಾಗಿ ಮಾತನಾಡುವುದನ್ನು ಕಲಿಯಲಿ: ಡಿವಿಎಸ್‌

ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಮಾತನಾಡಿ, ಬೈಗುಳದಿಂದ ರಾಜಕಾರಣ ಮಾಡುವುದಾದರೆ ಅನೇಕರು ರಾಜಕಾರಣವನ್ನು ಮಾಡಬಹುದಿತ್ತು. ಬೈಗುಳದಿಂದ ರಾಜಕಾರಣ ಮಾಡುವವರ ಸಾಲಿಗೆ ಯತೀಂದ್ರ ಸೇರಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಿ, ದೊಡ್ಡ ರಾಜಕಾರಣಿ ಆಗುತ್ತೇನೆ ಎಂದು ಭಾವಿಸಿದರೆ ಕೊನೇ ಮೊಳೆ ಆಗಲಿದೆ. ಅವರ ತಂದೆ ಮಂಡಿಸಿದ ಬಜೆಟ್ ಬಗ್ಗೆ ಮಾತಾಡಲಿ. ಅದು ಬಿಟ್ಟು ಬಿಜೆಪಿ, ಬಿಜೆಪಿ ನಾಯಕರ ಬಗ್ಗೆ ಮಾತನಾಡುವುದು ಸರಿಯಲ್ಲ. ಸಿದ್ದರಾಮಯ್ಯ ಅವರ ಮಗನಾಗಿ, ಗೌರವಯುತವಾಗಿ ಮಾತನಾಡುವುದನ್ನು ಕಲಿಯಲಿ ಎಂದು ಕಿವಿಮಾತು ಹೇಳಿದ್ದಾರೆ.

Continue Reading

ಚಿನ್ನದ ದರ

Gold Rate Today: ಆಕಾಶಕ್ಕೇ ಏರಿದ ಚಿನ್ನದ ಬೆಲೆ! ಇಂದಿನ ಧಾರಣೆ ಹೀಗಿದೆ ನೋಡಿ

Gold Rate Today: ಇಂದು 22 ಕ್ಯಾರಟ್‌ ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆಯಲ್ಲಿ (gold price today) ಕ್ರಮವಾಗಿ ₹130 ಮತ್ತು ₹142 ಹೆಚ್ಚಳವಾಗಿದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ನಿನ್ನೆಯಿಂದ ಏರಿಕೆ ಕಾಣುತ್ತಿದ್ದು , ಶುಕ್ರವಾರ ಭಾರಿ ಹೆಚ್ಚಳ ದಾಖಲಿಸಿದೆ. ಇಂದು 22 ಕ್ಯಾರಟ್‌ ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆಯಲ್ಲಿ (gold price today) ಕ್ರಮವಾಗಿ ₹130 ಮತ್ತು ₹142 ಹೆಚ್ಚಳವಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,300ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹50,400 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹63,000 ಮತ್ತು ₹6,30,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,873 ಆಗಿದ್ದರೆ, ಎಂಟು ಗ್ರಾಂ ಬೆಲೆ ₹54,984 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹68,730 ಮತ್ತು ₹6,87,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹75.90, ಎಂಟು ಗ್ರಾಂ ₹607.20 ಮತ್ತು 10 ಗ್ರಾಂ ₹759ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,590 ಮತ್ತು 1 ಕಿಲೋಗ್ರಾಂಗೆ ₹75,900 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ63,15068,880
ಮುಂಬಯಿ63,000 68,730
ಬೆಂಗಳೂರು63,000 68,730
ಚೆನ್ನೈ63,90069,710

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಧಾರಣೆಯಲ್ಲಿ ಮತ್ತೆ ಏರಿಕೆ ಆರಂಭ; ಇಂದು ಬೆಲೆ ಎಷ್ಟಾಗಿದೆ ಗಮನಿಸಿ

Continue Reading

ಬೆಂಗಳೂರು

Attempt To Murder : ಹಣದಾಸೆಗೆ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

Attempt To Murder : ಹಣದಾಸೆಗೆ ಇದ್ದು ವೃದ್ಧೆಯ ಕೊಲೆಗೆ ಭಾರೀ ಸ್ಕೆಚ್ ಹಾಕಿದ್ದ ಖತರ್ನಾಕ್ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Attempt to murder case
ಆರೋಪಿಗಳ ಬಂಧನ
Koo

ಬೆಂಗಳೂರು: ಹಣ ಅಂದರೆ ಹೆಣನೂ ಬಾಯಿಬಿಡುತ್ತೆ. ಹಣ- ಆಸ್ತಿ, ಚಿನ್ನಾಭರಣದ ವ್ಯಾಮೋಹದ ಮುಂದೆ ಯಾವ ಸಂಬಂಧಕ್ಕೂ ಕಿಂಚಿತ್ತು ಬೆಲೆ ಇಲ್ಲ. ಒಮ್ಮೊಮ್ಮೆ ನಾವೆಲ್ಲರೂ ನಾಗರೀಕ ಸಮಾಜದಲ್ಲಿ ಇದ್ದೀವಾ ಎನ್ನುವ ಅನುಮಾನ ಮೂಡುತ್ತದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಕ್ರೂರಿ ಮಗಳೊಬ್ಬಳು ತನ್ನ ಪತಿ ಜತೆ ಸೇರಿ ಹಣಕ್ಕಾಗಿ ಚಿಕ್ಕಮ್ಮನ ಜೀವವನ್ನೇ ತೆಗೆಯಲು (Attempt To Murder) ಮುಂದಾಗಿದ್ದಾಳೆ.

ಇಂತಹದೊಂದು ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಅಣ್ಣಮ್ಮ ಅವರ ಅಕ್ಕನ ಮಗಳು ಸುಚಿತ್ರ ಹಾಗೂ ಅಳಿಯ ಮುನಿರಾಜು ಎಂಬುವವರಿಂದ ಈ ಕೃತ್ಯ ನಡೆದಿದೆ. ಅಣ್ಣಮ್ಮ ಆರ್‌ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮಾಡಿಕೊಂಡಿದ್ದರು. ಮಕ್ಕಳಿಲ್ಲದಿದ್ದರೂ ಮನೆ ಮಾಡಿಕೊಂಡು ಸೆಟಲ್ ಆಗಿದ್ದರು. ಒಂದಷ್ಟು ಮನೆಗಳನ್ನು ಬಾಡಿಗೆ ಬಿಟ್ಟು ಬಂದ ಹಣದಲ್ಲಿ ಜೀವನ ಸಾಗಿಸುತ್ತಿದ್ದರು. ಬ್ಯಾಂಕ್ ವ್ಯವಹಾರ ತಿಳಿಯದ ಕಾರಣಕ್ಕೆ ಹಣ, ಬಂಗಾರವನ್ನೆಲ್ಲ ಮನೆಯಲ್ಲೇ ಇಡುತ್ತಿದ್ದರು.

ಅಣ್ಣಮ್ಮರ ಅಕ್ಕನ ಮಗಳು ಸುಚಿತ್ರ ಆಗಾಗ ಮನೆಗೆ ಬಂದು ಹೋಗುತ್ತಿದ್ದಳು. ಈ ವೇಳೆ ಚಿಕ್ಕಮ್ಮನ ಮನೆಯಲ್ಲಿದ್ದ ಹಣ ಹಾಗೂ ಚಿನ್ನಾಭರಣದ ಮೇಲೆ ಕಣ್ಣಿಟ್ಟಿದ್ದಳು. ಹೀಗಾಗಿ ಸುಚಿತ್ರ ತನ್ನ ಎರಡನೇ ಗಂಡ ಮುನಿರಾಜು ಜತೆ ಸೇರಿ ಕೊಲೆಗೆ ಪ್ಲಾನ್ ಮಾಡಿದ್ದಳು.

Attempt to murder case in bengaluru
ಪ್ರಾಣಾಪಾಯದಿಂದ ಪಾರಾದ ಅಣ್ಣಮ್ಮ

ಅಜ್ಜಿಯ ಜೀವ ಉಳಿಸಿದ್ದ ಮೊಮ್ಮಗ

ಈ ಹಿಂದೆಯೇ ಖತರ್ನಾಕ್‌ ದಂಪತಿ ಒಮ್ಮೆ ಮನೆಯಲ್ಲಿ ಅಣ್ಣಮ್ಮನ ಕೊಲೆಗೆ ಯತ್ನಿಸಿದ್ದರು. ಕಳೆದ ಕೆಲ ದಿನಗಳ ಹಿಂದೆ ಅಣ್ಣಮ್ಮ ಮಲಗಿದ್ದಾಗಲೇ ದಿಂಬಿನಿಂದ ಉಸಿರುಗಟ್ಟಿಸಿ ಸಾಯಿಸಲು ಮುಂದಾಗಿದ್ದರು. ಇನ್ನೇನು ಕೊಲ್ಲಬೇಕು ಎಂದಾಗ ಸುಚಿತ್ರಾಳ ಮಗ (15) ಅಜ್ಜಿ ಜಿರಳೆ ಬಂತು ಎಂದು ಕೂಗಿ ಎಚ್ಚರಿಸಿದ್ದ. ಹೀಗಾಗಿ ಮೊದಲ ಪ್ಲಾನ್‌ ಫ್ಲಾಪ್‌ ಆಗಿತ್ತು.

ಈ ಘಟನೆ ಬಳಿಕ ಸ್ವಲ್ಪ ಸಮಯ ಸುಮ್ಮನಿದ್ದ ಮುನಿರಾಜು ಹಾಗೂ ಸುಚಿತ್ರಾ, ಕಳೆದ ವಾರ ಮತ್ತೆ ಕೊಲೆಗೆ ಯತ್ನಿಸಿದ್ದರು. ರಾತ್ರಿ ನೆಪವೊಡ್ಡಿ ಗೊರಗುಂಟೆ ಪಾಳ್ಯದ ಸ್ಮಶಾನದ ಬಳಿ ಚಿಕ್ಕಮ್ಮಳನ್ನು ಕರೆಸಿಕೊಂಡಿದ್ದಳು. ಇತ್ತ ದೂರಿದಲ್ಲಿದ್ದ ಮುನಿರಾಜು, ಅಣ್ಣಮ್ಮ ಬರುತ್ತಿದ್ದಂತೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲು ಮುಂದಾಗಿದ್ದ. ಏಕಾಏಕಿ ದಾಳಿ ಮಾಡಿ ತೀವ್ರವಾಗಿ ಹಲ್ಲೆ ಮಾಡಿದ್ದ. ಅಳಿಯನ ಹಲ್ಲೆಯಿಂದ ಅಣ್ಣಮ್ಮ ಕುಸಿದು ಬಿದ್ದಿದ್ದರು. ಇತ್ತ ಮಗಳು ಸುಮಿತ್ರಾ ಚಿಕ್ಕಮ್ಮನ ಬಳಿ ಇದ್ದ ಚಿನ್ನಾಭರಣ ಹಾಗೂ ಹಣವನ್ನೆಲ್ಲ ಕಿತ್ತುಕೊಂಡು ಪತಿ ಜತೆಗೆ ಪರಾರಿ ಆಗಿದ್ದಳು.

ಚಿಕ್ಕಮ್ಮ ಸತ್ತಿದ್ದಾಳೆಂದು ಎಂದುಕೊಂಡ ಸುಚಿತ್ರಾ ಹಾಗೂ ಮುನಿರಾಜು ನೆಮ್ಮದಿಯಿಂದ ಧರ್ಮಸ್ಥಳಕ್ಕೆ ಹೋಗಿದ್ದರು. ಆದರೆ ಹಲ್ಲೆಗೊಳಾಗಿ ನರಳಾಡುತ್ತಿದ್ದ ಅಣ್ಣಮ್ಮ ಜೋರಾಗಿ ಕಿರುಚಾಡಿದ್ದಾರೆ. ಇದನ್ನೂ ಕಂಡ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಅದೃಷ್ಟವಶಾತ್‌ ಅಣ್ಣಮ್ಮ ಪ್ರಾಣಾಪಾಯದಿಂದ ಪಾರಾಗಿದ್ದರು.

ಇತ್ತ ಚಿಕ್ಕಮ್ಮ ಬದುಕಿರುವ ವಿಚಾರ ತಿಳಿದ ಈ ಖತರ್ನಾಕ್‌ ದಂಪತಿ ಮತ್ತೆ ಬೆಂಗಳೂರಿಗೆ ಬಂದಿದ್ದರು. ನಂತರ ಪೊಲೀಸರ ಕಣ್ತಪ್ಪಿಸಿ ಹಾಸನ, ಸಕೇಲಶಪುರದ ಸುತ್ತಮುತ್ತ ಸುತ್ತಾಡುತ್ತಿದ್ದರು. ತಾನೊಂದು ಬಗೆದರೆ ದೈವವೊಂದು ಬಗೆದಂತೆ ಎಂಬ ಮಾತಿನಂತೆ ಖತರ್ನಾಕ್‌ ದಂಪತಿ ಜೈಲುಪಾಲಾಗಿದ್ದಾರೆ. ಆರ್‌ಎಂಸಿ ಯಾರ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ, ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ:Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

ಚಿಕ್ಕಬಳ್ಳಾಪುರ‌: ಹೆತ್ತ ತಂದೆ-ತಾಯಿಯನ್ನೇ ವಯಸ್ಸಾಗುತ್ತಲೇ ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳಿದ್ದಾರೆ. ಇನ್ನು, ತಾಯಿ ಸಮಾನಳಾದ ಅತ್ತೆ ಮೇಲೆ ಸೊಸೆಯಂದಿರುವ ತೋರುವ ದರ್ಪ, ಹಲ್ಲೆಯ ಸುದ್ದಿಗಳಂತೂ ಆಗಾಗ ಕೇಳಿಸುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (Chikkaballapur District) ಮಹಿಳೆಯೊಬ್ಬರು 80 ವರ್ಷದ ಅತ್ತೆಯನ್ನು (Mother In Law) ಎಳೆದೊಯ್ದು, ತಿಪ್ಪೆಗೆ ಎಸೆಯುವ ಮೂಲಕ ಅಮಾನವೀಯತೆ ತೋರಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಿಪಲ್ಲಿ ಗ್ರಾಮದಲ್ಲಿ ಸೊಸೆಯು ಅತ್ತೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾಳೆ. 80 ವರ್ಷದ ವೆಂಕಟಲಕ್ಷ್ಮಮ್ಮ ಅವರು ಮನೆಯ ಎದುರು ಮಲಗಿದ್ದಾಗ ಲಕ್ಷ್ಮೀದೇವಮ್ಮ ಎಂಬ ಮಹಿಳೆಯು ಅವರನ್ನು ಎಳೆದಿದ್ದಾರೆ. ವೃದ್ಧೆ ಎಂಬುದನ್ನೂ ಲೆಕ್ಕಿಸದ ಸೊಸೆಯು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಸಿಲು ಎಂದು ನೆರಳಿನಲ್ಲಿ ಮಲಗಿದ್ದ ಅತ್ತೆಯ ಮೇಲೆ ಸೊಸೆ ತೋರಿದ ಕ್ರೌರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಳಿಯ ವಯಸ್ಸಿನಲ್ಲಿ ಎರಡು ಹೊತ್ತು ಊಟ ಸಿಕ್ಕರೆ ಸಾಕು ಎಂದು ಬಯಸುವ ಜೀವಕ್ಕೆ ಕಿರುಕುಳ ನೀಡಲು ಅವರು ಮಾಡಿದ ತಪ್ಪೇನು ಎಂಬುದು ತಿಳಿದುಬಂದಿಲ್ಲ. ವೆಂಕಟಲಕ್ಷ್ಮಮ್ಮ ಅವರನ್ನು ಎಳೆದು, ತಿಪ್ಪೆಗೆ ಎಸೆಯುವಾಗ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
shani louk photo hamas terrorists
ವಿದೇಶ11 mins ago

Shani Louk Photo: ಹಮಾಸ್‌ ಒತ್ತೆಯಾಳು ಇಸ್ರೇಲಿ ಮಹಿಳೆಯ ನಗ್ನ ದೇಹದ ಫೋಟೋಗೆ ಪ್ರಶಸ್ತಿ; ಆಕ್ರೋಶ; ಉಗ್ರನೇ ತೆಗೆದ ಫೋಟೋನಾ?

Rahul Gandhi And Sonia Gandhi
ದೇಶ12 mins ago

Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

Karimani Malika Ninalla play by violinist Aneesh Vidyashankar
ವೈರಲ್ ನ್ಯೂಸ್30 mins ago

Karimani Malika Ninalla: ʻಕರಿಮಣಿ ಮಾಲೀಕʼ ರೀಲ್ಸ್‌ಗೆ ಇನ್ನಷ್ಟು ಮೆರುಗು ನೀಡಿದ ವಯೋಲಿನ್‌ ವಾದಕ!

Karnataka Weather
ಮಳೆ40 mins ago

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Sanjiv Bhatt
ದೇಶ43 mins ago

Sanjiv Bhatt: ಡ್ರಗ್ಸ್‌ ಕೇಸ್;‌ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 20 ವರ್ಷ ಜೈಲು!

Kaptaan KL is keeping
ಕ್ರೀಡೆ44 mins ago

LSG vs PBKS: ಗೆಲುವಿನ ಖಾತೆ ತೆರೆದೀತೇ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ತಂಡ?

Lok Sabha Election 2024 Yathindra Siddaramaiah calls Amit Shah a goonda BJP says No maturity
Lok Sabha Election 202445 mins ago

Lok Sabha Election 2024: ಅಮಿತ್‌ ಶಾ ರೌಡಿ, ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ

Aadujeevitham box office
ಮಾಲಿವುಡ್1 hour ago

Aadujeevitham Box Office: ಮೊದಲ ದಿನವೇ ಒಳ್ಳೆಯ ಗಳಿಕೆ ಕಂಡ ‘ʻಆಡು ಜೀವಿತಂ’!

gold rate today
ಚಿನ್ನದ ದರ1 hour ago

Gold Rate Today: ಆಕಾಶಕ್ಕೇ ಏರಿದ ಚಿನ್ನದ ಬೆಲೆ! ಇಂದಿನ ಧಾರಣೆ ಹೀಗಿದೆ ನೋಡಿ

Attempt to murder case
ಬೆಂಗಳೂರು1 hour ago

Attempt To Murder : ಹಣದಾಸೆಗೆ ಚಿಕ್ಕಮ್ಮನ ಕೊಲ್ಲಲು ಮುಂದಾದ ಮಗಳು ಮತ್ತು ಅಳಿಯ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202423 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌