Site icon Vistara News

Ram Mandir: ರಾಮಲಲ್ಲಾ ಪ್ರತಿಷ್ಠಾಪನೆಗೆ ಸಾಕ್ಷಿಯಾದ ಕರ್ನಾಟಕದ ಯತಿವರ್ಯರು

Karnataka seers in Ayodhya

ಅಯೋಧ್ಯೆ: ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆಯನ್ನು ನೆರವೇರಿಸಲಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ದೇಶದ ಅನೇಕ ಯತಿವರ್ಯರು, ಗಣ್ಯರು ಸಾಕ್ಷಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಾಲ ರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಕರ್ನಾಟಕದಿಂದಲೂ ಯತಿವರ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಶ್ರೀರಾಮನ ದರ್ಶನ ಪಡೆದಿದ್ದಾರೆ.

ಅಯೋಧ್ಯೆಯ ಭವ್ಯ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸುತ್ತೂರು ಮಠದ ಶ್ರೀ ಶ್ರೀ ಶಿವರಾತ್ರಿ ದೇಶ ಕೇಂದ್ರ ಸ್ವಾಮೀಜಿಗಳು ಶ್ರೀ ಶ್ರೀ ಮಾಧಾರ ಚೆನ್ನಯ್ಯ ಸ್ವಾಮೀಜಿಗಳು ಮತ್ತು ಶ್ರೀ ಶ್ರೀ ನಿರಂಜನ ನಂದ ಪುರಿ ಸ್ವಾಮಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Ayodhya Ram Mandir: ಇಂದಿನ `ಮುಖ್ಯ ಯಜಮಾನ’ ಮೋದಿ; ಹಾಗೆಂದರೇನು?

ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ ಮೋದಿ

ವಿಶೇಷ ಹೆಲಿಕಾಪ್ಟರ್‌ನಲ್ಲಿ ರಾಮಮಂದಿರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಿಯ ಛತ್ರವನ್ನು ಹಿಡಿದುಕೊಂಡು ರಾಮಮಂದಿರ ಪ್ರವೇಶಿಸಿದರು. ಇದಾದ ಬಳಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡ ಅವರು, ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹಾಗೂ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್‌ದಾಸ್‌ ಅವರು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠೆ ನೆರವೇರಿಸಿದರು.

Karnataka seers in Ayodhya

ಇದರೊಂದಿಗೆ 2019ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ಐತಿಹಾಸಿಕ ತೀರ್ಪಿನಂತೆ ರಾಮಮಂದಿರವನ್ನು ನಿರ್ಮಿಸಿ, ಲೋಕಾರ್ಪಣೆ ಮಾಡಿದಂತಾಗಿದೆ. ಸಾವಿರಾರು ಜನರ ಹೋರಾಟ, ಪ್ರಾಣ ತ್ಯಾಗ ಹಾಗೂ ಸುದೀರ್ಘ ಕಾನೂನು ಹೋರಾಟದ ಬಳಿಕ ರಾಮಮಂದಿರದ ಕನಸು ಸಾಕಾರಗೊಂಡಿದೆ. ಈಗ ರಾಮಮಂದಿರ ನಿರ್ಮಾಣದ ಕನಸು ನನಸಾಗಿದ್ದು, ಮುಂದಿನ ದಿನಗಳಲ್ಲಿ ರಾಮರಾಜ್ಯದ ಕನಸು ಕೂಡ ನನಸಾಗಲಿದ ಎಂಬುದು ದೇಶದ ಜನರ ಆಶಯವಾಗಿದೆ.

ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನೆಯ ನೋಟ

ಮೋದಿ ಅವರಿಂದ ಧಾರ್ಮಿಕ ವಿಧಿವಿಧಾನ

ಇದನ್ನೂ ಓದಿ: Ram Mandir : “ತಪಸ್ವಿʼ ಮೋದಿಯಿಂದಾಗಿ ರಾಮ ಮರಳಿ ಬಂದಿದ್ದಾನೆ; ಮೋಹನ್​ ಭಾಗವತ್ ಶ್ಲಾಘನೆ​

ಭಾಗವಹಿಸಿದ ಇತರ ಗಣ್ಯರು ಯಾರ‍್ಯಾರು?

ಬಾಲಿವುಡ್‌ ನಟರಾಜ್‌ ಅಮಿತಾಭ್‌ ಬಚ್ಚನ್‌, ರಣಬೀರ್‌ ಕಪೂರ್‌, ಆಲಿಯಾ ಭಟ್‌, ಆಯುಷ್ಮಾನ್‌ ಖುರಾನ, ಸ್ಯಾಂಡಲ್‌ವುಡ್‌ ನಟ ರಿಷಬ್‌ ಶೆಟ್ಟಿ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌, ಮುಕೇಶ್‌ ಅಂಬಾನಿ ಕುಟುಂಬಸ್ಥರು, ಗಾಯಕರಾದ ಸೋನು ನಿಗಮ್‌ ಸೇರಿ ಸುಮಾರು 7 ಸಾವಿರಕ್ಕೂ ಅಧಿಕ ಗಣ್ಯರು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version