Site icon Vistara News

Ram Mandir: ರಾಮ ಮಂದಿರ ಸ್ಫೋಟದ ಬೆದರಿಕೆ! ದಾವೂದ್ ಇಬ್ರಾಹಿಂ ಸಹಚರನೆಂದು ಹೇಳಿಕೊಂಡಿದ್ದ ಯುವಕ ಅರೆಸ್ಟ್

Youth from bihar threatens to blow up ayodhya ram mandir

ಅಯೋಧ್ಯಾ: ಜನವರಿ 22, ಸೋಮವಾರ ಅಯೋಧ್ಯಾ ರಾಮ ಮಂದಿರ (Ayodhya Ram Mandir) ಉದ್ಘಾಟನೆ ನಡೆಯಲಿದ್ದು, ಅಂದೇ ಮಂದಿರವನ್ನು ಸ್ಫೋಟಿಸುವುದಾಗಿ (Blow Up Ayodhya Ram Temple) 21 ವರ್ಷದ ಯುವಕನೊಬ್ಬ ಪೊಲೀಸ್ ಠಾಣೆಗೆ ಕರೆ ಮಾಡಿ, ಬೆದರಿಕೆ ಹಾಕಿದ ಘಟನೆ ಬಿಹಾರದಲ್ಲಿ ನಡೆದಿದೆ. ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿರುವ ಬಿಹಾರ ಪೊಲೀಸ್ ಇಲಾಖೆಯ (Bihar Police) ಹಿರಿಯ ಅಧಿಕಾರಿಯು, ಬೆದರಿಕೆ ಹಾಕಿದ ಯುವಕನನ್ನು ಅರಾರಿಯಾ ಜಿಲ್ಲೆಯಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ(Araria District).

ಬಂಧಿತ ಯುವಕನನ್ನು ಇಂತೆಖಾಬ್ ಆಲಂ ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ಪಲಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಲುವಾ ಕಲಿಯಗಂಜ್‌ನಲ್ಲಿರುವ ತನ್ನ ಮನೆಯಿಂದಲೇ ಬಂಧಿತ ಯುವಕ ಪೊಲೀಸ್ ಠಾಣೆಗೆ ಕರೆ ಮಾಡಿ ಬೆಂದರಿಕೆ ಹಾಕಿದ್ದ ಎಂದು ಅರಾರಿಯಾದ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬಂಧಿತ ಯುವಕ ಜನವರಿ 19 ರಂದು ನಾಗರಿಕರು ತುರ್ತು ಸಹಾಯವನ್ನು ಪಡೆಯಬಹುದಾದ 112 ಸಂಖ್ಯೆಗೆ ಡಯಲ್ ಮಾಡಿದ್ದ. ಅವನು ತನ್ನನ್ನು ಛೋಟಾ ಶಕೀಲ್ ಮತ್ತು ತಾನು ದಾವೂದ್ ಇಬ್ರಾಹಿಂನ ಆಪ್ತ ಎಂದು ಹೇಳಿಕೊಂಡಿದ್ದಾನೆ ಎಂದು ಸಿಂಗ್ ತಿಳಿಸಿದ್ದಾರೆ.

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರವನ್ನು ಸ್ಫೋಟಿಸಲಾಗುವುದು ಎಂದು ದೂರವಾಣಿಯಲ್ಲಿ ತಿಳಿಸಿದ್ದಾನೆ. ಆತನ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆ ಇಲ್ಲ. ಆದರೆ, ಮಾನಸಿಕವಾಗಿ ಅಸ್ವಸ್ಥ ರೀತಿಯಲ್ಲಿ ಕಾಣುತ್ತಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಕರಣದ ಸೂಕ್ಷ್ಮತೆಯ ಹಿನ್ನೆಲೆಯಲ್ಲಿ ಪಲಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಬಂಧಿತ ಯುವಕನ ಮೊಬೈಲ್ ಅನ್ನು ಜಪ್ತಿ ಮಾಡಲಾಗಿದೆ. ದೂರವಾಣಿ ಕರೆ ಬಂದ ಕೂಡಲೇ ವಿವರವನ್ನು ಸೈಬರ್ ಸೆಲ್ ಜತೆ ಹಂಚಿಕೊಳ್ಳಲಾಯಿತು. ಕರೆ ಮಾಡಿದ ಫೋನ್ ನಂಬರ್ ಬಂಧಿತ ವ್ಯಕ್ತಿಯ ತಂದೆಯ ಹೆಸರಿನಲ್ಲಿದೆ ಎಂದು ಪೊಲೀಸ್ ತಿಳಿಸಿದ್ದಾರೆ.

ಪ್ರಾಣ ಪ್ರತಿಷ್ಠಾಪನೆ ಸೇರಿ ನಾಳೆ ಅಯೋಧ್ಯೆಯಲ್ಲಿ ಏನೆಲ್ಲ ನಡೆಯಲಿದೆ?

ವ್ಯ ರಾಮಮಂದಿರದಲ್ಲಿ (Ram Mandir) ಸೋಮವಾರ (ಜನವರಿ 22) ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ (Pran Pratishtha) ನೆರವೇರಿಸಲಿದ್ದು, ಇದಕ್ಕಾಗಿ ಕೋಟ್ಯಂತರ ಜನ ಕಾತುರದಿಂದ ಕಾಯುತ್ತಿದ್ದಾರೆ. ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗಾಗಿ ಸಕಲ ಸಿದ್ಧತೆ, ಭದ್ರತೆ, ಗಣ್ಯರಿಗೆ ವಿಶೇಷ ಸೌಲಭ್ಯ ಸೇರಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ರಾಮಮಂದಿರದಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ಇಡೀ ದಿನದ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ.

ಬೆಳಗ್ಗೆ 6.30ರಿಂದಲೇ ಕಾರ್ಯಕ್ರಮ ಆರಂಭ

ರಾಮಮಂದಿರದಲ್ಲಿ ಬೆಳಗ್ಗೆ 6.30ರಿಂದಲೇ ಧಾರ್ಮಿಕ ವಿಧಿವಿಧಾನಗಳು ಶುರುವಾಗಲಿವೆ. ಬೆಳಗ್ಗೆ 6.30ಕ್ಕೆ ರಾಮಲಲ್ಲಾ ಮೂರ್ತಿಗೆ ಶೃಂಗಾರ ಅಥವಾ ಜಾಗರಣ ಆರತಿ ಬೆಳಗಲಾಗುತ್ತದೆ. ಇನ್ನು 7 ಗಂಟೆಯಿಂದಲೇ ರಾಮನ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ರಾಮಮಂದಿರ ಟ್ರಸ್ಟ್‌ ನೀಡಿರುವ ಪಾಸ್‌ಗಳ ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ಭಕ್ತರು ದೇವಾಲಯ ಪ್ರವೇಶಿಸಿ ಬೆಳಗ್ಗೆ 7 ಗಂಟೆಯಿಂದ 11.30ರವರೆಗೆ ರಾಮನ ದರ್ಶನ ಪಡೆಯಬಹುದಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಆರತಿ ನಡೆಯಲಿದೆ.

ಪ್ರಾಣ ಪ್ರತಿಷ್ಠೆ ಎಷ್ಟು ಗಂಟೆಗೆ?

ಮಧ್ಯಾಹ್ನ 12.20ರಿಂದ 12.45ರ ಅವಧಿಯಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಕೆಲವರು ಮಾತ್ರ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಿಸಲಿದ್ದಾರೆ. ಪ್ರಾಣಪ್ರತಿಷ್ಠಾಪನೆ ನೆರವೇರಿದ ಬಳಕ ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 7.30ಕ್ಕೆ ಸಂಧ್ಯಾರತಿಯೊಂದಿಗೆ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವು ಸಮಾರೋಪವಾಗಲಿದೆ.

ಪ್ರಾಣ ಪ್ರತಿಷ್ಠಾ ಎಂದರೇನು?

ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ.

ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.

ಈ ಸುದ್ದಿಯನ್ನೂ ಓದಿ: ‌Ram Mandir: ನಾವು ಭೂತದ ಪೂಜೆ ಮಾಡೋರು ದೆವ್ವದ ಬಳಿಗೇ ಹೋಗ್ತೇವೆ: ಬಿ.ಕೆ. ಹರಿಪ್ರಸಾದ್

Exit mobile version